Tag: ಕೆ ಜೆ ಜಾರ್ಜ್

  • ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

    ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಸಲು ಶ್ರಮಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ನುಡಿದರು.

    ಶಿವಾಜಿನಗರದ (Shivajinagara) ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ಸ್ಮರಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

    ಧಾರ್ಮಿಕ ಸಹಿಷ್ಣತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ. ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು. ಇದನ್ನೂ ಓದಿ: ದಸರಾ ಉದ್ಘಾಟನೆ ವಿಚಾರ ಕೋರ್ಟ್‌ನಲ್ಲೇ ತೀರ್ಮಾನ ಆಗಲಿ: ಸಿಎಂ ತಿರುಗೇಟು

    ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

    ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪೀಟರ್ ಮಚಾಡೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.

  • ಸ್ಮಾರ್ಟ್ ಮೀಟರ್ ಹಗರಣ ಆರೋಪ – ಕೋರ್ಟ್ ತೀರ್ಪಿಗೆ ನಾನು ಬದ್ಧ: ಸಚಿವ ಜಾರ್ಜ್

    ಸ್ಮಾರ್ಟ್ ಮೀಟರ್ ಹಗರಣ ಆರೋಪ – ಕೋರ್ಟ್ ತೀರ್ಪಿಗೆ ನಾನು ಬದ್ಧ: ಸಚಿವ ಜಾರ್ಜ್

    ಬೆಂಗಳೂರು: ಸ್ಮಾರ್ಟ್ ಮೀಟರ್ (Smart Meter) ವಿಚಾರದಲ್ಲಿ ಕೋರ್ಟ್ ಕೊಡೋ ತೀರ್ಪಿಗೆ ನಾನು ಬದ್ಧನಾಗಿರುತ್ತೇನೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K J George) ಸ್ಪಷ್ಟಪಡಿಸಿದ್ದಾರೆ.

    ಸ್ಮಾರ್ಟ್ ಮೀಟಿಂಗ್ ಹಗರಣ ಆರೋಪದಲ್ಲಿ ಸಚಿವ ಜಾರ್ಜ್ ಮೇಲೆ ಎಫ್‌ಐಆರ್‌ಗೆ ಕೋರ್ಟ್ ಸೂಚನೆ ಕೊಟ್ಟಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋರ್ಟ್ ಎಫ್‌ಐಆರ್ ಹಾಕಿ ಅಂತ ಹೇಳಿರೋ ಆರ್ಡರ್ ಇದ್ದರೆ ಕೊಡಿ. ಜನಪ್ರತಿನಿಧಿಗಳ ಕೋರ್ಟ್ ಆದೇಶ ಮಾಡಿರೋದು ನಾನು ನೋಡಿಲ್ಲ. ಆದೇಶ ಪ್ರತಿ ಇದ್ದರೆ ಕೊಡಿ ನಾನು ಪ್ರತಿಕ್ರಿಯೆ ಕೊಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ದರ್ಶನ್‌ ಜಾಮೀನು ಭವಿಷ್ಯ; ವಾದ-ಪ್ರತಿವಾದ ಮುಕ್ತಾಯ – ಒಂದು ವಾರದಲ್ಲಿ ಸುಪ್ರೀಂ ಆದೇಶ

    ಸ್ಮಾರ್ಟ್ ಮೀಟರ್ ಕುರಿತು ಅಶ್ವಥ್ ನಾರಾಯಣ ಮತ್ತು ಬಿಜೆಪಿಯವರು ಈ ಕೇಸ್ ಹಾಕಿದ್ದಾರೆ. ಹೈಕೋರ್ಟ್, ರಾಜ್ಯಪಾಲರು, ಜನಪ್ರತಿನಿಧಿಗಳ ಕೋರ್ಟ್ ಎಲ್ಲಾ ಕಡೆ ಅವರು ದೂರು ಕೊಟ್ಟಿದ್ದಾರೆ. ಕೋರ್ಟ್ ಏನಾದ್ರು ನನಗೆ ವಿವರಣೆ ಕೇಳಿದ್ರೆ ಕೊಡ್ತೀನಿ. ಸ್ಮಾರ್ಟ್ ಮೀಟರ್ ವಿಚಾರ ನಾವು ಕಾನೂನು ಪ್ರಕಾರವಾಗಿ ಮಾಡಿದ್ದೇವೆ. ಅಕ್ರಮದ ದಾಖಲೆ ಇದ್ದರೆ ಕೋರ್ಟ್ಗೆ ಅವರು ಕೊಡಲಿ. ಕೋರ್ಟ್ ಕೊಡುವ ತೀರ್ಪಿಗೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದಾರೆ.

  • ಇಡೀ ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

    ಇಡೀ ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

    ಬೆಂಗಳೂರು: ಇಡೀ ದೇಶದ ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಇದನ್ನ ನಮ್ಮ ನಾಯಕ ರಾಹುಲ್ ಗಾಂಧಿ ಮಾತಾಡಿದ್ದು, ಕೇಂದ್ರ ಚುನಾವಣಾ ಆಯೋಗ (Election Commission) ಗಮನ ಹರಿಸಬೇಕು ಎಂದು ಸಚಿವ ಕೆ.ಜೆ. ಜಾರ್ಜ್ (K.J. George) ಒತ್ತಾಯಿಸಿದ್ದಾರೆ.

    ಕರ್ನಾಟಕದ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಅನ್ನೋ ರಾಹುಲ್ ಗಾಂಧಿ (Rahul Gandhi) ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಕರ್ನಾಟಕ (Karanataka) ಮಾತ್ರವಲ್ಲ, ಇಡೀ ದೇಶದಲ್ಲಿ ‌ನಡೆಯುತ್ತಿರೋ ಅಕ್ರಮದ ಬಗ್ಗೆ ಮಾತಾಡಿದ್ದಾರೆ. ಇಡೀ ರಾಷ್ಟ್ರದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ. ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ

    ಈಗ ಬಿಹಾರದಲ್ಲಿ ಚುನಾವಣೆ (Bihar Election) ಆಗ್ತಿದೆ. ಅಲ್ಲೂ ಕೂಡಾ ಇದೇ ಆಗ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಮಾತಾಡಿದ್ದಾರೆ. ಇದರ ಬಗ್ಗೆ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

  • ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ: ಕೆ.ಜೆ.ಜಾರ್ಜ್

    ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ: ಕೆ.ಜೆ.ಜಾರ್ಜ್

    ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ 7 ಗಂಟೆ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ (K J George) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇದೆ. ಸದ್ಯ ಕರ್ನಾಟಕದಲ್ಲಿ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗುತ್ತಿದೆ. 7 ಗಂಟೆ ವಿದ್ಯುತ್ ನಿರಂತರವಾಗಿ ಕೊಡಲು ಆಗದೇ ಹೋದರೂ ಒಮ್ಮೆ 4 ಗಂಟೆ, ಮತ್ತೊಮ್ಮೆ 3 ಗಂಟೆ ವಿದ್ಯುತ್ ಕೊಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್‌ ಬೋರ್ಡ್‌

    ವಿದ್ಯುತ್ ಬೇಡಿಕೆ ಹಿನ್ನಲೆಯಲ್ಲಿ ಈ ಬಾರಿ 56 ಸಬ್‌ಸ್ಟೇಷನ್ ಪ್ರಾರಂಭ ಮಾಡಿದ್ದೇವೆ. ಮುಂದಿನ ವರ್ಷ 100 ಸಬ್‌ಸ್ಟೇಷನ್ ಪ್ರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ರಾಯಚೂರು, ಕಲಬುರಗಿ ಭಾಗದಲ್ಲಿ ಬೆಳಗ್ಗೆ ಹೊತ್ತು ವಿದ್ಯುತ್ ಕೊಡಲು ನಮಗೆ ಸಮಸ್ಯೆ ಇಲ್ಲ. ಬೆಳಗ್ಗೆ ಮತ್ತು ಸಂಜೆ ನಮಗೆ ಸಮಸ್ಯೆ ಇದೆ. ಇದಕ್ಕಾಗಿ ಕರೆಂಟ್ ಪಂಪ್ ಸ್ಟೋರೇಜ್ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ. ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಕೂಡಾ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

  • ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್‌ ಬಿಲ್‌ ಬಾಕಿ!

    ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್‌ ಬಿಲ್‌ ಬಾಕಿ!

    ಬೆಂಗಳೂರು: ರಾಜ್ಯದ ಜನ ವಿದ್ಯುತ್ ಬಿಲ್ (Electricity Bill) ಕಟ್ಟದೇ ಇದ್ರೆ ಪವರ್ ಕಟ್ ಅಥವಾ ಫಟಾಫಟ್ ಅಂತಾ ವಸೂಲಿ ಮಾಡುವ ಇಂಧನ ಇಲಾಖೆ ಸರ್ಕಾರಿ ಕಚೇರಿಗಳಿಗೆ ಮಾತ್ರ ಭರ್ಜರಿ ವಿನಾಯಿತಿ ನೀಡಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

    ಒಂದು ತಿಂಗಳು ಜನಸಾಮಾನ್ಯರು ವಿದ್ಯುತ್ ಬಿಲ್ ಕಟ್ಟೋದು ಹೆಚ್ಚು ಕಮ್ಮಿ ಆದ್ರೂ ಪವರ್‌ಕಟ್ (Power Cut) ಮಾಡ್ತಾರೆ.. ಇಲ್ಲ ದಂಡ ಹಾಕಿ ಕರೆಂಟ್ ಬಿಲ್ ವಸೂಲಿ ಮಾಡ್ತಾರೆ. ಆದ್ರಿಲ್ಲಿ ಸರ್ಕಾರಿ ಇಲಾಖೆ & ಕಚೇರಿಗಳಿಗೆ ಇಂಧನ ಇಲಾಖೆ ಭಾರೀ ವಿನಾಯ್ತಿ ಕೊಟ್ಟಂತೆ ಕಾಣ್ತಿದೆ. ಯಾಕಂದ್ರೆ ಬಹುತೇಕ ಸರ್ಕಾರಿ ಇಲಾಖೆಗಳು (Government Departments) ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿವೆ. ಅದು ಒಂದಲ್ಲ.. ಎರಡಲ್ಲ, ಬರೋಬ್ಬರಿ 8 ಸಾವಿರ ಕೋಟಿಯಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ.

    ಹೌದು, ಸರ್ಕಾರಿ ಇಲಾಖೆಗಳು ಬರೋಬ್ಬರಿ 8 ಸಾವಿರ ಕೋಟಿಯಷ್ಟು ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡಿದೆ. ಅಚ್ಚರಿಯಾದ್ರೂ ಇದು ಸತ್ಯ. ಇಂಧನ ಇಲಾಖೆಯೇ ಈ ಡೇಟಾವನ್ನು ನೀಡಿದೆ. ಹಾಗಿದ್ರೇ ಯಾವ್ಯಾವ ಸರ್ಕಾರಿ ಇಲಾಖೆ ಎಷ್ಟೆಷ್ಟು ಬಾಕಿ ಬಿಲ್ ಉಳಿಸಿಕೊಂಡಿದೆ ಅಂತ ನೋಡೋದಾದ್ರೆ…

    ಯಾವ್ಯಾವ ಇಲಾಖೆಯಿಂದ ಎಷ್ಟೆಷ್ಟು ಬಾಕಿ?
    * ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ – 4,106 ಕೋಟಿ ರೂ.
    * ನಗರಾಭಿವೃದ್ಧಿ ಇಲಾಖೆ – 2,313 ಕೋಟಿ ರೂ.
    * ನೀರಾವರಿ ಇಲಾಖೆ – 1,085 ಕೋಟಿ ರೂ.
    * ವಾಣಿಜ್ಯ & ಕೈಗಾರಿಕಾ ಇಲಾಖೆ – 353 ಕೋಟಿ ರೂ.
    * ಸಣ್ಣ ನೀರಾವರಿ ಇಲಾಖೆ – 126 ಕೋಟಿ ರೂ.
    * ಆರೋಗ್ಯ ಇಲಾಖೆ – 33 ಕೋಟಿ ರೂ.
    * ಇತರೆ 30 ಸರ್ಕಾರಿ ಇಲಾಖೆಗಳು – 90 ಕೋಟಿ ರೂ.
    * ಒಟ್ಟು ಹಣ ಬಾಕಿ – 8,169 ಕೋಟಿ ರೂ.

    ಹಣದ ಕೊರತೆ ನೆಪವೊಡ್ಡಿ ಬಿಲ್ ಪಾವತಿಸದ ಇಲಾಖೆಗಳು:
    ಇನ್ನೂ ಸರ್ಕಾರಿ ಇಲಾಖೆಗಳಿಗೆ ಕರೆಂಟ್ ಬಿಲ್ ಕಟ್ಟುವಂತೆ ಇಂಧನ ಇಲಾಖೆ ಸೂಚಿಸಿದೆ. ಆದ್ರೆ ಕೆಲ ಇಲಾಖೆಗಳು ದುಡ್ಡಿನ ಕೊರತೆ ನೆಪವೊಡ್ಡಿ ಕಟ್ಟಿಲ್ಲ. ಹೀಗಾಗಿ ಇಂಧನ ಇಲಾಖೆಗೆ 8 ಸಾವಿರ ಕೋಟಿಯಷ್ಟು ಬೊಕ್ಕಸಕ್ಕೆ ನಷ್ಟವಾಗಿದೆ. ಪ್ರತಿ ವರ್ಷವೂ ನಷ್ಟದ ನೆಪವೊಡ್ಡಿ ಜನರಿಗೆ ದರ ಏರಿಕೆಯ ಬಿಸಿಯನ್ನು ಇಲಾಖೆ ನೀಡುತ್ತೆ. ಆದ್ರೆ ಬಿಲ್ ಪಾವತಿ ಮಾಡದ ಸರ್ಕಾರಿ ಇಲಾಖೆಗಳ ಬಳಿ ಮಾತ್ರ ಬಿಲ್ ಕಲೆಕ್ಟ್ ಮಾಡೋಕೆ ಇನ್ನೂ ಮೀನಮೇಷ ಎಣಿಸುತ್ತಿದೆ.

    ರಾಜ್ಯದಲ್ಲಿ ಈ ಬಾರಿಯ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗಲ್ಲ. ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಅಲ್ಲದೇ, ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸ್ತೇವೆ. ಕೆಲ ಜಿಲ್ಲೆಗಳಲ್ಲಿ ಟ್ರಾನ್ಸ್ಮಿಷನ್ ಕೆಪಾಸಿಟಿ ಓವರ್ ಲೋಡ್‌ನಿಂದ ಸಮಸ್ಯೆ ಆಗುತ್ತಿದೆ. ಇದು ಪವರ್ ಕಟ್ ಅಲ್ಲ ಎಂದಿದ್ದಾರೆ. ಪ್ರಸ್ತುತ 18,500 ಮೆಗಾವ್ಯಾಟ್ ವಿದ್ಯುತ್‌ಗೆ ಡಿಮ್ಯಾಂಡ್ ಇದೆ. ಯುಪಿ, ಪಂಜಾಬ್ ಸೇರಿದಂತೆ ಬೇರೆ ರಾಜ್ಯಗಳ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ವಿದ್ಯುತ್ ಖರೀದಿ ಮಾಡುತ್ತೇವೆ ಎಂದು ಜಾರ್ಜ್ ಹೇಳಿದ್ದಾರೆ.

  • ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್‌

    ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್‌

    ಚಿಕ್ಕಮಗಳೂರು: ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣಕ್ಕೆ ಮುಂದಾದ ಸಚಿವ ಕೆ.ಜೆ.ಜಾರ್ಜ್‌ (K.J.George) ಅವರಿಗೆ ವಿರೋಧದ ಬಿಸಿ ತಟ್ಟಿದೆ.

    ಚಿಕ್ಕಮಗಳೂರು (Chikkamagaluru) ನಗರದ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಜಾರ್ಜ್ ಭಾಷಣ ಮಾಡತೊಡಗಿದರು.

    ಈ ವೇಳೆ ಒಕ್ಕಲಿಗ ಸಮಾಜದ ಯುವಕರು ಮಧ್ಯೆ ಪ್ರವೇಶಿಸಿ, ಇದು ರಾಜಕೀಯ ವೇದಿಕೆಯಲ್ಲ. ರಾಜಕೀಯ ಮಾತಾಡುವುದಾದರೆ ಕೆಳಗಿಳಿಯುವಂತೆ ಒತ್ತಾಯಿಸಿದರು. ಈ ಸಮಯದಲ್ಲಿ ಯುವಕರು ಮತ್ತು ಜಾರ್ಜ್‌ ಮಧ್ಯೆ ಸ್ವಲ್ಪ ವಾಗ್ವಾದ ನಡೆಯಿತು.

    ಇದೇ ವೇಳೆ ರಾಜಕೀಯ ಮಾಡಬೇಡಿ, ನನಗೂ ರಾಜಕೀಯ ಬರುತ್ತೆ ಎಂದು ಸಚಿವರು ಸಿಟ್ಟಾಗಿದ್ದಾರೆ. ಬಳಿಕ ಶ್ರೀಗಳ (Nirmalanandanatha Swamiji) ಪ್ರವೇಶದಿಂದಾಗಿ, ಯುವಕರು ಸುಮ್ಮನಾಗಿದ್ದಾರೆ. ಇದರಿಂದ ವಾತಾವರಣ ತಿಳಿಯಾಗಿದೆ. ಬಳಿಕ ತಮ್ಮ ಮಾತಿಗೆ ಸಭೆಯಲ್ಲೇ ಸಚಿವರು ಕ್ಷಮೆಯಾಚಿಸಿದರು.

  • ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್

    ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್

    ಚಾಮರಾಜನಗರ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ (K.J.George) ಭರವಸೆ ನೀಡಿದರು.

    ಚಾಮರಾಜನಗರದಲ್ಲಿ (Chamarajanagara) ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿರುವ ವರೆಗೂ, ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ಯು.ಟಿ.ಪಿ ಕಾಲುವೆ ಒಡೆದು 1 ತಿಂಗಳಾದ್ರೂ ದುರಸ್ತಿ ಮಾಡದ ಅಧಿಕಾರಿಗಳು- ಕಂಗಾಲಾದ ರೈತರು

    ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. ವಿದ್ಯುತ್ ಕಳ್ಳತನ ತಪ್ಪಿಸಲು ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇದರಿಂದ ರೈತರಿಗೆ ಅನುಕೂಲ. ಯಾರೋ ವಿದ್ಯುತ್ ಕಳ್ಳತನ ಮಾಡಿ ರೈತರ ಮೇಲೆ ಹಾಕುತ್ತಿದ್ದರು. ಆಧಾರ್ ಲಿಂಕ್‌ನಿಂದ ಅದೆಲ್ಲಾ ತಪ್ಪಲಿದೆ. ನಮ್ಮ ಇಲಾಖೆಗೂ ಲೆಕ್ಕ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

    ಕೃಷಿ ಪಂಪ್‌ಸೆಟ್ ಅಕ್ರಮ ಸಕ್ರಮದ ಅಡಿ 4 ಲಕ್ಷ ಅರ್ಜಿ ಬಾಕಿ ಇದ್ದವು. ಈಗ ಅದೆಲ್ಲಾ ಕಡಿಮೆಯಾಗಿದೆ. ವಿದ್ಯುತ್ ಲೈನ್‌ನಿಂದ 500 ಮೀಟರ್ ಒಳಗೆ ಇರುವ ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ಕ್ರಮ ವಹಿಸಲಾಗುವುದು. 500 ಮೀಟರ್ ಆಚೆ ಇರುವ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್ ‘ಬಿ ಸೋಲಾರ್ ಯೋಜನೆ ಜಾರಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಡಿ.9 ರಿಂದ ಚಳಿಗಾಲದ ಅಧಿವೇಶನ

    ಪಂಪ್‌ಸೆಟ್ ಮೋಟಾರ್, ಮೀಟರ್ ಎಲ್ಲವನ್ನು ಇಲಾಖೆಯಿಂದಲೇ ಕೊಡ್ತೀವಿ. 80% ಸಬ್ಸಿಡಿ ಕೊಡ್ತೀವಿ ಎಂದು ರೈತರಿಗೆ ಸಚಿವರು ಭರವಸೆ ನೀಡಿದರು.

  • ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್‌ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

    ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್‌ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

    ಮಡಿಕೇರಿ: ರಾಜ್ಯ ಸರ್ಕಾರದ ಇಂಧನ ಸಚಿವರಾಗಿರುವ ಕೆ.ಜೆ ಜಾರ್ಜ್ (KJ George) ಅವರ ಪುತ್ರ ರಾಣಾ ಜಾರ್ಜ್ ಅವರು ಹೆಚ್.ಡಿ ಕೋಟೆ ಬಳಿಯ ಗ್ರಾಮಗಳ ಅರಣ್ಯದೊಳಗೆ ಕೃಷಿ ಸಂಬಂಧಿತ ತೋಟ ಹಾಗೂ ಜಮೀನು ಹೊಂದಿದ್ದಾರೆ. ಆದರೆ, ಅರಣ್ಯದೊಳಗಿರುವ ಜಮೀನಿಗೆ ಹೋಗದಂತೆ ರಾಜ್ಯ ಸರ್ಕಾರ ತಡೆ ನೀಡಿತ್ತು. ಈ ಸಂಬಂಧ ಪ್ರಕರಣ ಕೈಗೆತ್ತಿಕೊಂಡ ಹೈಕೋರ್ಟ್‌ (Karnataka Highcourt) ವಿಚಾರಣೆ ಬಳಿಕ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವರು, ಕೋರ್ಟ್‌ ತೀರ್ಮಾನ ಏನೇ ಬಂದರೂ ಎಲ್ಲರೂ ತಲೆಬಾಗಬೇಕು ಎಂದಿದ್ದಾರೆ.

    ಸರ್ಕಾರದ ವಿರುದ್ಧ ತಮ್ಮ ಮಗ ಹೋಗಿದ್ದಾರೆ. ಎಂದು ಯಾಕೆ ಹೇಳುತ್ತೀರಿ ಅವರು ತಮ್ಮ ಹಕ್ಕನ್ನು ಕೋರ್ಟ್‌ನಲ್ಲಿ‌ ಕೇಳಿದ್ದಾರೆ. ‌ನಾನು ಮಂತ್ರಿಯಾಗಿ ಪ್ರಭಾವ ಬೀರಿ ಅದಕ್ಕೆ ಅನುಮತಿ ನೀಡಿದ್ರೆ ಮಾದ್ಯಮಗಳಲ್ಲೇ ಅಧಿಕಾರ ದುರುಪಯೋಗ ಮಾಡಿದ್ದೀರಿ ಎಂದು ಹೇಳುತ್ತಿದ್ದರು. ತಮ್ಮ ಮಗ ರಾಣಾ ಜಾರ್ಜ್‌ (Rana George) ಅವರು ತಮ್ಮ ಹಕ್ಕನ್ನು ಕಾನೂನು ರೀತಿಯಲ್ಲಿ ಕೋರ್ಟ್‌ಗೆ ಹೋಗಿ ಕೇಳಿದ್ದಾರೆ. ಕೋರ್ಟ್‌ನಲ್ಲಿ ಈ ಪ್ರಕರಣ ಇರುವಾಗ ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ. ತೀರ್ಪು ಏನೇ ಬಂದರೂ ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ. ಇದ‌ನ್ನೂ ಓದಿ: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ? – ಗುರುತು ಪತ್ತೆಗೆ ಪೊಲೀಸರ ಹರಸಾಹಸ

    ಏನಿದು ಪ್ರಕರಣ..?
    ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ಬಳಿಯ ಶಂಭುಗೌಡನಹಳ್ಳಿ, ಲಕ್ಕಸೋಗೆ ಗ್ರಾಮಗಳಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ ಜಮೀನು ಹೊಂದಿದ್ದಾರೆ. ಈ ಜಮೀನಿಗೆ ಹೋಗಬೇಕೆಂದರೆ ಹೆಚ್.ಡಿ ಕೋಟೆಯ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಜಮೀನಿಗೆ ಹೋಗಬೇಕು. ಆದರೆ, ರಾಜ್ಯ ಸರ್ಕಾರದಿಂದ ಅರಣ್ಯದೊಳಗೆ ಜಮೀನಿಗೆ ಹೋಗಲು ಹಾದಿ ಬಳಕೆ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕುಪಿತಗೊಂಡ ರಾಣಾ ಜಾರ್ಜ್ ಸರ್ಕಾರದ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಅರಣ್ಯದಲ್ಲಿ ಜಮೀನನ್ನು ಹೊಂದಿದವರು ತಮ್ಮ ಜಮೀನಿಗೆ ಹೋಗಲು ಅವಕಾಶ ನೀಡಬೇಕು. ರಾತ್ರಿ ಹಾಗೂ ಹಗಲಿನ ಸಮಯದಲ್ಲಿ ಅನಿರ್ಬಂಧಿವಾಗಿ ಸಂಚರಿಸಲು ಅನುಮತಿ ಅಗತ್ಯವಿದೆ. ಅನುಮತಿ ನೀಡುವಂತೆ ಅರಣ್ಯಾಧಿಕಾರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಇದ‌ನ್ನೂ ಓದಿ: BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್‌ ಚುಪ್‌- ಅಷ್ಟಕ್ಕೂ ಆಗಿದ್ದೇನು?

    ಈ ವೇಳೆ ರಾಣಾ ಜಾರ್ಜ್‌ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರು, ಅಭಯಾರಣ್ಯದ ವ್ಯಾಪ್ತಿಯಲ್ಲಿ ಜಮೀನು ಹೊಂದಿರುವವರಿಗೆ ಸಂಚರಿಸಲು ವಿನಾಯಿತಿ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 27(1)(ಸಿ) ಅಡಿ ವಿನಾಯಿತಿ ಇದೆ. ಆದರೆ, ಅರಣ್ಯ ಇಲಾಖೆ ಅರ್ಜಿದಾರರ ವಿರುದ್ಧ ಕಾನೂನುಬಾಹಿರ ಆದೇಶ ಹೊರಡಿಸಿದೆ. ಇದು ಸಂವಿಧಾನದ 19 (1)(ಡಿ) ವಿಧಿಗೆ ವ್ಯತಿರಿಕ್ತವಾಗಿದೆ. ಮುಕ್ತಸಂಚಾರಕ್ಕೆ ಅಡ್ಡಿ ಮಾಡಿರುವ ಅರಣ್ಯ ಇಲಾಖೆಯ ಈ ನಿರ್ಬಂಧವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಇದ‌ನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ದೂರು – ನಡ್ಡಾ, ಖರ್ಗೆಯಿಂದ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

    ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ಪೀಠ ರಾಣಾ ಜಾರ್ಜ್ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದೆ. ನಂತರ ಅರಣ್ಯ ಇಲಾಖೆಯ ನಿಯಮಾವಳಿಯಲ್ಲಿ ಜಮೀನಿಗೆ ಹೋಗಲು ಅವಕಾಶ ನೀಡಬೇಕು ಎಂಬ ಬಗ್ಗೆ ಉಲ್ಲೇಖವಿದ್ದರೂ, ನಿರ್ಬಂಧ ವಿಧಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ನ.29ಕ್ಕೆ ಮುಂದೂಡಿಕೆ ಮಾಡಿದ್ದಾರೆ.

  • ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

    ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

    – 10% ಬದಲು 10 ಯೂನಿಟ್‌ ಹೆಚ್ಚುವರಿ ವಿದ್ಯುತ್‌ ನೀಡಲು ಸಂಪುಟ ನಿರ್ಧಾರ

    ಬೆಂಗಳೂರು: ಗೃಹಜ್ಯೋತಿ (Gruha Jyothi) ನಿಯಮದಲ್ಲಿ ಬದಲಾವಣೆ ಮಾಡಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್‌ ನೀಡುವ ಮಾನದಂಡವನ್ನು 10 ಯೂನಿಟ್‌ ಆಗಿ ಬದಲಾಯಿಸಲು ಸಂಪುಟ ಸಮ್ಮತಿ ನೀಡಿದೆ.

    ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ (K.J.George), ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತಾ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಫೆಬ್ರವರಿ16 ರಂದು ರಾಜ್ಯ ಬಜೆಟ್

    ಮುಂದಿ‌ನ ತಿಂಗಳ ಬಿಲ್‌ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ.

    ಉದಾಹರಣೆ: 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10% ಅಂದರೆ ಕೇವಲ 2 ಯೂನಿಟ್ ‌ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ. ಇದನ್ನೂ ಓದಿ: ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ

  • ಇಂಧನ ಸಚಿವ ಕೆ.ಜೆ ಜಾರ್ಜ್ ಚಿಕ್ಕಮಗಳೂರು ಕಚೇರಿಯಲ್ಲಿ ಕಳ್ಳತನ

    ಇಂಧನ ಸಚಿವ ಕೆ.ಜೆ ಜಾರ್ಜ್ ಚಿಕ್ಕಮಗಳೂರು ಕಚೇರಿಯಲ್ಲಿ ಕಳ್ಳತನ

    ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ (K J George) ಅವರ ಕಚೇರಿಯಲ್ಲಿ ಕಳ್ಳತನವಾಗಿರುವ ಘಟನೆ ನಗರದ ಕಚೇರಿಯಲ್ಲಿ ನಡೆದಿದೆ.

    ಕೆ.ಜೆ ಜಾರ್ಜ್ ಅವರ ಖಾಸಗಿ ಆಪ್ತ ಸಹಾಯಕ ಮೋಗಣ್ಣ ಅವರ ಬಳಿ ಇದ್ದ ಫೈಲ್‍ಗಳು, 15 ಸಾವಿರ ಹಣ ಹಾಗೂ ಅವರ ಖಾಸಗಿ ದಾಖಲೆಗಳು ಕಳ್ಳತನವಾಗಿವೆ. ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ನಗರದ ಪ್ರವಾಸಿ ಮಂದಿರದಲ್ಲೇ ಒಂದು ಕೊಠಡಿಯನ್ನು ಕಚೇರಿ ಮಾಡಿಕೊಂಡಿದ್ದಾರೆ.

    ಸರ್ಕಾರದಿಂದ ಕೊಟ್ಟಿರುವ ಆಪ್ತ ಸಹಾಯಕರ ಜೊತೆ ಸಚಿವ ಜಾರ್ಜ್ ಅವರು ಇಟ್ಟುಕೊಂಡಿರುವ ಇಬ್ಬರು ಆಪ್ತ ಸಹಾಯಕರು ಅದೇ ಕಚೇರಿಯಲ್ಲಿ ಇದ್ದಾರೆ. ಎರಡು ದಿನದ ಹಿಂದೆ ಕಚೇರಿಯಲ್ಲಿ ಬ್ಯಾಗ್ ಇಟ್ಟು ಹೊರಗಡೆ ಹೋಗಿ ಬರುವಷ್ಟರಲ್ಲಿ ಬ್ಯಾಗ್ ನಾಪತ್ತೆಯಾಗಿದೆ. ಪ್ರವಾಸಿ ಮಂದಿರದಲ್ಲಿ ಸಿಸಿ ಕ್ಯಾಮೆರಾಗಳು ಇಲ್ಲದ ಕಾರಣ ಕದ್ದವರು ಯಾರೆಂದು ಕೂಡ ಸ್ಪಷ್ಟವಿಲ್ಲದಂತಾಗಿದೆ. ಇದನ್ನೂ ಓದಿ: ಸಿಂಗಾಪುರಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿದ ಹೆಚ್‌ಡಿಕೆ

    ದಾಖಲೆ ಹಾಗೂ ಹಣ ಕಳುವಾದ ಹಿನ್ನೆಲೆ ಮೊಗಣ್ಣ ಚಿಕ್ಕಮಗಳೂರು ನಗರದ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆದರೆ ಸಿಸಿ ಕ್ಯಾಮೆರಾಗಳು ಇಲ್ಲದ ಕಾರಣ ಪೊಲೀಸರಿಗೂ ತನಿಖೆ ಕಷ್ಟವಾಗಿದೆ. ನಿತ್ಯ ನೂರಾರು ಜನ ಓಡಾಡುವ ಜಾಗ, ಬಂದು ಹೋಗುವ ಜಾಗ. ಯಾರ ಮೇಲೆ ಅನುಮಾನ ಪಡುವುದು, ಯಾರನ್ನ ವಿಚಾರಣೆ ಮಾಡುವುದು ಅನ್ನೋದು ಪೊಲೀಸರಿಗೂ ತಲೆನೋವು ತರಿಸಿದೆ.