ಬೆಂಗಳೂರು: ವಿಧಾನಪರಿಷತ್‍ನ (Vidhanaparishad) 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಶಾಸಕ ಕೆಟಿ ಶ್ರೀಕಂಠೇಗೌಡ (KT Srikantegowda) ಆಯ್ಕೆಯಾಗಿದ್ದಾರೆ.
ಮೂರು ಬಾರಿ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಗೌಡರ ಪರಿಷತ್ ನ ಸದಸ್ಯ ಅವಧಿ ಇತ್ತೀಚೆಗೆ ಅಂತ್ಯಗೊಂಡಿತ್ತು. ಉತ್ತಮ ಸಂಸದೀಯಪಟುವಾಗಿದ್ದ ಅವರು, ದಕ್ಷಿಣ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಜಾತ್ಯಾತೀತ ಜನಾತದಳದ ಹಿರಿಯ ನಾಯಕಾಗಿದ್ದ ಗೌಡರು ವಾಗ್ಮಿಯಾಗಿದ್ದರು.
ಪರಿಷತ್‍ನಲ್ಲಿ ಪ್ರತಿಪಕ್ಷದ ಉಪನಾಯಕ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪರಿಷತ್‍ನಲ್ಲಿ ಅವರ ನಡವಳಿಕೆ, ಸಾಧನೆ, ಭಾಗವಹಿಸುವಿಕೆ, ಜನಪರಕಾಳಜಿಯನ್ನು ಪರಿಗಣಿಸಿ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳವಾರ ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀಕಂಠೇಗೌಡರಿಗೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಬಂದಿದ್ದೇ ಕುಮಾರಸ್ವಾಮಿ. ಆ ಫೋಟೋಗಳನ್ನು ಕೂಡ ವೈರಲ್ ಮಾಡಲಿ ಎಂದು ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಆಗ್ರಹಿಸಿದ್ದಾರೆ.
ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿನಿಂತಿರುವ ಫೋಟೋ ವೈರಲ್ ವಿಚಾರ ಜೆಡಿಎಸ್ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಂಎಲ್‍ಸಿ, ಎಲ್ಲಾ ಫೋಟೋಗಳನ್ನು ವೈರಲ್ ಮಾಡುವಂತೆ ಒತ್ತಾಯಿಸಿದ್ದಾರೆ. ಅಂಬರೀಶ್ ಒಳ್ಳೆಯ ನಟ, ಅವರಿಗೆ ಎಲ್ಲರೂ ಗೌರವ ಕೊಡುತ್ತೇವೆ. ಕುಮಾರಸ್ವಾಮಿ ಅವರು ಸಹ ಗೌರವ ಕೊಡುತ್ತಿದ್ದರು. ಅದನ್ನು ಹೀಗೆ ಫೋಟೋ ವೈರಲ್ ಮಾಡೋದು ಸರಿಯಲ್ಲ ಎಮದು ಕಿಡಿಕಾರಿದರು.
ಅಂಬರೀಶ್‍ಗೆ ಜೆಡಿಎಸ್ ರಾಜಕೀಯ ಮರುಜೀವ ಕೊಟ್ಟಿದೆ. ಅವರನ್ನು ಸಂಸದರನ್ನಾಗಿ ಮಾಡಿದ ಫೋಟೋವನ್ನು ಕೂಡ ವೈರಲ್ ಮಾಡಲಿ. ಆ ದಿನಗಳಲ್ಲಿ ಕುಮಾರಸ್ವಾಮಿ ಅವರನ್ನು ಹೇಗೆ ನೋಡುತ್ತಿದ್ದರು ಅನ್ನೋದನ್ನು ವೈರಲ್ ಮಾಡಲಿ. ಅಂಬರೀಶ್ ಅವರ ಪಾರ್ಥಿವ ಶರೀರವನ್ನು ತಂದಿದ್ದೆ ಕುಮಾರಸ್ವಾಮಿ, ಆಗ ಸುಮಲತಾ ಬೇಡಾ ಅಂತ ಹೇಳಿದ್ರು. ಈ ಫೋಟೋವನ್ನು ಸಹ ವೈರಲ್ ಮಾಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್
ಅಮಾವಾಸ್ಯೆ-ಹುಣ್ಣಿಮೆಗೆ ಬರುವ ಸಂಸದೆ ಸುಮಲತಾ. ಕೊರೋನಾ ಕಾಲದಲ್ಲೂ ಸಂಸದೆ ಕೆಲಸ ಮಾಡಲ್ಲ. ನಾಲ್ಕು ತಿಂಗಳಲ್ಲಿ ಬಂದಿದ್ದೆ ನಾಲ್ಕು ದಿನ. ಈ ನಾಲ್ಕು ದಿನದಲ್ಲಿ ಇದ್ದಿದ್ದೇ ಒಂದೊಂದು ಗಂಟೆ. ಚುನಾವಣೆಯಲ್ಲಿ ಮಂಡ್ಯದಲ್ಲೇ ಇರ್ತೀನಿ ಅಂತಾ ಹೇಳಿದ್ರು. ಗೆದ್ದಾಗಿನಿಂದ ಇಲ್ಲಿಯವರೆಗೆ ಎಷ್ಟು ದಿನ ಉಳಿದುಕೊಂಡಿದ್ದಾರೆ. ಒಂದು ರಾತ್ರಿ-ಬೆಳಗ್ಗೆಯೂ ಇಲ್ಲಿಯೂ ಮಂಡ್ಯದಲ್ಲಿ ಇಲ್ಲ ಎಂದು ಕೆಟಿಎಸ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್
ಫೋಟೋ ವೈರಲ್:
ನಟ ಅಂಬರೀಶ್ ಮುಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಸದೆ ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ವಿವಿಧ ಬರಹಗಳಡಿ ಈ ಫೋಟೋ ಶೇರ್ ಮಾಡಲಾಗಿದೆ. ಇದನ್ನೂ ಓದಿ:ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಫೋಟೋ ವೈರಲ್ ಮಾಡುವ ಮೂಲಕ ಸುಮಲತಾ ಬೆಂಬಲಿಗರು ದಳಪತಿಗಳಿಗೆ ಟಕ್ಕರ್ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು
ಚಾಮರಾಜನಗರ: ಮಾಜಿ ಸಚಿವ ಜಿ.ಟಿ.ದೇವೇಗೌಡ ತಮಗಾದ ನೋವನ್ನು ತೋಡಿಕೊಂಡಿದ್ದಾರೆ ಅಷ್ಟೇ. ಪಕ್ಷದ ವರಿಷ್ಠರು ಶೀಘ್ರದಲ್ಲೇ ಅವರೊಡನೆ ಮಾತುಕತೆ ನಡೆಸಿ ಎಲ್ಲವನ್ನೂ ಸರಿಪಡಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಾಕಷ್ಟು ಮಂದಿ ಶಾಸಕರಿಗೆ ನೋವು, ಭಿನ್ನಾಭಿಪ್ರಾಯಗಳಿರುತ್ತವೆ ಅವಕಾಶ ಸಿಕ್ಕಾಗ ಹೊರಹಾಕುತ್ತಾರೆ. ಇದು ಜೆಡಿಎಸ್ ನಲ್ಲಿರುವ ಆಂತರಿಕ ಪ್ರಜಾಪ್ರಭುತ್ವಕ್ಕೆ ಸಾಕ್ಷಿ ಎಂದು ಜಿಟಿಡಿ ನಡೆಯನ್ನು ಸಮರ್ಥಿಸಿಕೊಂಡರು.
ಅನರ್ಹ ಶಾಸಕರ ಪರಿಸ್ಥಿತಿ ಎಲ್ಲರಿಗೂ ಅರ್ಥವಾಗಿದೆ. ಹಾಗಾಗಿ ಯಾವುದೇ ಶಾಸಕರೂ ಪಕ್ಷ ಬಿಡುವ ಮನಸ್ಸು ಮಾಡುವುದಿಲ್ಲ ಎಂದು ಶ್ರೀಕಂಠೇಗೌಡ ಹೇಳಿದರು. ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಪದೇ ಪದೇ ಅಘಾತವಾಗುತ್ತಿದೆ. ಐಎಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಅವಕಾಶವಿರುವಾಗ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ತಾರತಮ್ಯವೇಕೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಮಂಡ್ಯ: ನಟಿ ಸುಮಲತಾ ಗೌಡ್ತಿ ಅಲ್ಲ ಎಂಬ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಅವರ ಹೇಳಿಕೆ ಸದ್ಯ ಅಂಬರೀಶ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಜೆಡಿಎಸ್ ಪಕ್ಷದ ವಿರುದ್ಧ ಅಂಬಿ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.
ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ ಈಗಾಗಲೇ ಮಂಡ್ಯದಲ್ಲಿ ಅಂಬಿ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಅಲ್ಲದೆ ಕಳೆದ ಎರಡು ದಿನಗಳಿಂದ ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ ಅಂಬಿ ಅಭಿಮಾನಿಗಳು ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಕೂಡ ಮಾಡಿದ್ದಾರೆ. ಈ ಪ್ರತಿಭಟನೆ ಹಾಗೂ ಗಲಾಟೆಗಳ ಬೆನ್ನಲ್ಲೇ ಮಂಡ್ಯದಲ್ಲಿ ಅಂಬರೀಶ್ ಅವರ ಅಭಿಮಾನಿಯೋರ್ವ ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ 5 ನಿಮಿಷ 27 ಸೆಕೆಂಡ್ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋದಲ್ಲಿ ನಾನು ಕೂಡ ಜೆಡಿಎಸ್ ಕಾರ್ಯಕರ್ತ ಎನ್ನುತ್ತ ಕೆ.ಟಿ.ಶ್ರೀಕಂಠೇಗೌಡ, ಎಲ್.ಆರ್ ಶಿವರಾಮೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಂಬರೀಶಣ್ಣ ಕರ್ನಾಟಕದ ಜನರ ಮನಸ್ಸಿನಲ್ಲಿದ್ದಾರೆ. ಅವರು ಇಂದು ನಮ್ಮ ಮಧ್ಯೆ ಇಲ್ಲ ಎಂದು ಅವರ ಕುಟುಂಬದ ಬಗ್ಗೆ ಮಾತನಾಡುತ್ತೀರಾ? ಮಂಡ್ಯ ಕ್ಷೇತ್ರದ ಸಂಸದರಾಗಿ ನಿಮಗೆ ನಾಚಿಯಾಗಬೇಕು ಎಂದಿದ್ದಾರೆ.
ಅಲ್ಲದೆ ಅಂಬರೀಶ್ ಅವರ ಬಗ್ಗೆ ಮಾತನಾಡುತ್ತೀರಲ್ಲ, ನೀವು ಮಂಡ್ಯ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಅಷ್ಟೇ ಅಲ್ಲದೆ ಅನಿತಾ ಕುಮಾರಸ್ವಾಮಿ, ನಿಖಿಲ್, ಪ್ರಜ್ವಲ್ ಸೇರಿದಂತೆ ದೇವೇಗೌಡರ ಕುಟುಂಬದವರ ವಿರುದ್ಧ ಹರಿಹಾಯ್ದಿರುವ ಅಂಬಿ ಅಭಿಮಾನಿ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಡ್ಯ: ‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ’ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹಿರಿಯ ನಟನ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೆ ಖಂಡಿಸಿ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಹರಿಹಾಯ್ದಿದಿದ್ದು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಶ್ರೀಕಂಠೇಗೌಡ ಮನೆಗೆ ಮುತ್ತಿಗೆ ಹಾಕುವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ
ಶ್ರೀಕಂಠೇಗೌಡ ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರ ಬಂದೋಬಸ್ತ್ ನೀಡಲಾಗಿದೆ. ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಕೆ.ಟಿ.ಶ್ರೀಕಂಠೇಗೌಡ ಮನೆಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ಮಾಡಿದ್ದಾರೆ. ಇತ್ತ ಶ್ರೀಕಂಠೇಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಕಾಲಲ್ಲಿ ತುಳಿದು, ಚಿತ್ರಕ್ಕೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಬದುಕಿದ್ದಾಗ ರಾಜಕಾರಣ ನನಗೆ ಸಾಕು. ನನ್ನ ಮನೆಗೆ ರಾಜಕಾರಣ ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದರು. ಈ ಹಿಂದೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾರನ್ನು ಕಣಕ್ಕಿಳಿಸಿ ಅವರ ಕೆಲಸ ನೋಡಿ ಆಗಿದೆ. ಎಷ್ಟರ ಮಟ್ಟಕ್ಕೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತು ಎಂದು ವ್ಯಂಗ್ಯವಾಡಿದ್ದರು. ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದರು.
ಮಂಡ್ಯ: ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದಾರೆ.
ಸುಮಲತಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎನ್ನುವ ರೀತಿ ಪರೋಕ್ಷವಾಗಿ ಟೀಕಿಸಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರು ಬದುಕಿದ್ದಾಗ ರಾಜಕಾರಣ ನನಗೆ ಸಾಕು. ನನ್ನ ಮನೆಗೆ ರಾಜಕಾರಣ ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದರು. ಈ ಹಿಂದೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾರನ್ನು ಕಣಕ್ಕಿಳಿಸಿ ಅವರ ಕೆಲಸ ನೋಡಿ ಆಗಿದೆ. ಎಷ್ಟರ ಮಟ್ಟಕ್ಕೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತು ಎಂದು ವ್ಯಂಗ್ಯವಾಡಿದ್ದಾರೆ.
ಅಂಬರೀಶ್ ಅವರು ಕಡೆ ದಿನಗಳಲ್ಲಿ ಮಂಡ್ಯದಿಂದ ಏಕೆ ಚುನಾವಣೆಗೆ ನಿಲ್ಲಲಿಲ್ಲ? ಜನ ಸೋಲಿಸ್ತಾರೆ ಅಂತ ಅಂಬಿಗೆ ಚೆನ್ನಾಗಿಯೇ ಗೊತ್ತಿತ್ತು. ಅದಕ್ಕೆ ಅಂಬಿ ಕ್ಷೇತ್ರಕ್ಕೆ ಬರಲಿಲ್ಲ. ನಾವು ರಮ್ಯಾರಿಂದ ಪಾಠ ಕಲಿತಿದ್ದೇವೆ. ರಾಜಕಾರಣ ಹುಡುಗಾಟ ಅಲ್ಲ. ಜನರ ನೋವಿಗೆ ಸ್ಪಂದಿಸೋರು ನಮಗೆ ಬೇಕು. ಜನಪ್ರತಿನಿಧಿಗಳ ಆಯ್ಕೆ ವಿಚಾರದಲ್ಲಿ ಮಂಡ್ಯ ಜನ ಸಾಕಷ್ಟು ನೋವು ಉಂಡಿದ್ದಾರೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಎಲ್ಲೋ ಕೂತು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ ಎನ್ನುವವರನ್ನ ಮಂಡ್ಯ ಜನ ಗೆಲ್ಲಿಸಲ್ಲ. ದೇವೇಗೌಡರ ಕುಟುಂಬ ಸೇವೆಯಿಂದ ಮಂಡ್ಯ ಬೆಳೆದು ಬಂದಿದೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸುವಲ್ಲಿ ಅರ್ಥವಿದೆ. ನಿಖಿಲ್ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರಾಜಕಾರಣ ಮಾಡಿದ್ದಾರೆ. ಆದ್ರೆ ಸುಮಲತಾ ಗೆದ್ದ ಮೇಲೆ ಅವರನ್ನ ಎಲ್ಲಿ ಹುಡುಕಲು ಸಾಧ್ಯ. ಮಂಡ್ಯ ಕ್ಷೇತ್ರ ಕಾಂಗ್ರೆಸ್ಸಿಗೆ ಹೋಗುತ್ತೋ, ಜೆಡಿಎಸ್‍ಗೆ ಸಿಗುತ್ತೋ ನನಗೆ ಗೊತ್ತಿಲ್ಲ ಎಂದು ಹೇಳಿದರು.