Tag: ಕೆ.ಬಿ ಶಿವಕುಮಾರ್

  • ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

    ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

    ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

    ಶಿವಮೊಗ್ಗ ರಂಗಾಯಣ ಮತ್ತು ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ `ರಂಗಾಮೃತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ವರ್ಷವಿಡೀ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನೆನಪಿಸಿಕೊಳ್ಳಬೇಕು. ಅದು ರಾಷ್ಟ್ರೀಯತೆ ಸ್ಪೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದು ಸ್ಫೂರ್ತಿದಾಯ ನುಡಿಗಳನ್ನು ಆಡಿದರು.ಇದನ್ನೂ ಓದಿ:ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್

    ಕಳೆದ 75 ವರ್ಷಗಳಲ್ಲಿ ದೇಶ ಮಾಡಿರುವ ಸಾಧನೆ, ಪ್ರಗತಿಗಳ ಬಗ್ಗೆ ನೆನಪಿಸುವಂತಹ ಕಾರ್ಯಕ್ರಮ ಇದಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಬದುಕು, ತ್ಯಾಗಗಳು ಯುವ ಜನರಿಗೆ ಸ್ಪೂರ್ತಿಯಾಗಬೇಕಿದೆ. ಪ್ರತಿಯೊಬ್ಬರೂ ಅವರ ಜವಾಬ್ದಾರಿಯನ್ನು ಅರಿತುಕೊಂಡು ಕಾರ್ಯ ನಿರ್ವಹಿಸುವುದೇ ದೇಶವನ್ನು ಕಟ್ಟುವ ಕಾರ್ಯ. ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರ ಪಾಲುದಾರಿಕೆ ಅಗತ್ಯ. ಎಲ್ಲರೂ ತಮ್ಮ ಪಾಲಿನ ಕಾರ್ಯ ನಿರ್ವಹಿಸಿದರೆ ದೇಶ ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರಲು ಸಾಧ್ಯವಿದೆ ಎಂದರು.

    ಕೋವಿಡ್ 19 ನಡುವೆಯೇ ಬದುಕನ್ನು ಕಟ್ಟಿಕೊಳ್ಳಲು ನಾವು ಕಲಿಯುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುತ್ತಾ, ಕನಿಷ್ಟ ಶಿಸ್ತನ್ನು ಪಾಲಿಸಿದರೆ ಕೊರೊನಾ 3ನೇ ಅಲೆ ಎದುರಿಸಿ ಬದುಕಲು ಸಾಧ್ಯವಿದೆ ಎಂದರು.ಇದನ್ನೂ ಓದಿ:ಬೈ ಎಲೆಕ್ಷನ್‍ನಲ್ಲಿ ಸೋತ್ರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

    ಕಾರ್ಯಕ್ರಮದ ಅಂಗವಾಗಿ ನಡೆದ ರಂಗಾಯಣ ಕಲಾವಿದರ ದೇಶಭಕ್ತಿ ಸಂಗೀತ, ಈಸೂರು ಶೂರರು ಮತ್ತು ವಿದುರಾಶ್ವಥದಲ್ಲಿ ಸ್ವಾತಂತ್ರ್ಯದ ಬೆಳಕು ಎಂಬ ಎರಡು ಕಿರುನಾಟಕ ಪ್ರದರ್ಶನ, ಸಹಚೇತನ ನಾಟ್ಯಾಲಯ ಕಲಾವಿದರಿಂದ ದೇಶಭಕ್ತಿ ಗೀತೆಗಳ ನೃತ್ಯ ಪ್ರದರ್ಶನ ಮತ್ತು ನಟಮಿತ್ರರು ತೀರ್ಥಹಳ್ಳಿ ಕಲಾವಿದರಿಂದ ಮೂಕಾಭಿನಯ ಮೆಚ್ಚುಗೆಗೆ ಪಾತ್ರವಾದವು.ಇದನ್ನೂ ಓದಿ:ಸರ್ಕಾರದಿಂದ ಆದೇಶ ಹೊರಡಿಸಿ ಪುಣ್ಯ ಕಟ್ಟಿಕೊಳ್ಳಿ- ಮಾಜಿ ಸ್ಪೀಕರ್ ವಿರುದ್ಧ ಪೊಲೀಸರ ಆಕ್ರೋಶ

  • ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    – ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ
    – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

    ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

    ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್‌ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಜನತಾದಳದ ಸಿಎಂ – ಎಚ್‍ಡಿ ಕುಮಾರಸ್ವಾಮಿ

  • ಶಿವಮೊಗ್ಗ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

    ಶಿವಮೊಗ್ಗ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

    ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

    ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು. ಟೆಲಿಕಾಂ ಮತ್ತು ಇಂಟರ್ ನನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗಳ ವಾಹನ ಸಂಚಾರಕ್ಕೆ ಅವಕಾಶವಿದೆ.

    ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ. ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ವ್ಯಾಪಾರ ವಹಿವಾಟು ನಡೆಸಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅವಕಾಶವಿದೆ. ತಳ್ಳುವ ಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು. ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕೊಂಡೊಯ್ಯಬಹುದು. ಎಲ್ಲಾ ರೀತಿಯ ಸಾಮಾಗ್ರಿಗಳ ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿದೆ. ಇದನ್ನೂ ಓದಿ: ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಟ 5 ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನಗೂ ಸಿಎಂ ಆಗುವ ಅವಕಾಶ ಸಿಗಬಹುದು: ತನ್ವೀರ್ ಸೇಠ್

  • ಶಿವಮೊಗ್ಗದಲ್ಲಿ ಕೊರೊನಾ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡ ರಚನೆ

    ಶಿವಮೊಗ್ಗದಲ್ಲಿ ಕೊರೊನಾ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡ ರಚನೆ

    ಶಿವಮೊಗ್ಗ: ಕೊರೊನಾ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಮೇಲುಸ್ತುವಾರಿ ನೋಡಿಕೊಳ್ಳಲು ಜಿಲ್ಲೆಯಲ್ಲಿ 24 ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾ ಸರ್ವೇಕ್ಷಣಾ ತಂಡವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ರಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ತಂಡದ ಸದಸ್ಯರ ಜವಾಬ್ದಾರಿ ಬಗ್ಗೆ ಮಾಹಿತಿಯನ್ನು ನೀಡಿದರು.

    ಇದೇ ರೀತಿಯ ಸಮಿತಿಯನ್ನು ತಾಲೂಕು ಮಟ್ಟದಲ್ಲಿ ಸಹ ರಚಿಸಬೇಕು. ಪ್ರತಿ ದಿನ ಸಮಿತಿ ಸಭೆ ನಡೆಸಿ ವರದಿಯನ್ನು ಜಿಲ್ಲಾ ಸಮಿತಿಗೆ ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರ್ ಗಳನ್ನು ತಾಲೂಕು ಮಟ್ಟದ ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ ಎಂದರು.

    ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್‍ಮೆಂಟ್ ವಲಯದಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆಯನ್ನು ತೀವ್ರಗೊಳಿಸಬೇಕು. ರೋಗ ಲಕ್ಷಣವಿಲ್ಲದ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಮಾರ್ಗಸೂಚಿ ಪ್ರಕಾರ ಸೌಲಭ್ಯಗಳು ಲಭ್ಯವಿದ್ದರೆ ಮನೆಯಲ್ಲಿಯೇ ಐಸೋಲೇಷನ್‍ಗೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳ ಆರೋಗ್ಯದ ಮೇಲೆ ಪ್ರತಿದಿನ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದರು.

    ಪ್ರಸ್ತುತ ಲಭ್ಯವಿರುವ ಬೆಡ್‍ಗಳು, ಮುಂದಿನ ಮೂರು ದಿನಗಳಲ್ಲಿ ಲಭ್ಯವಾಗುವ ಬೆಡ್‍ಗಳು, ಆಕ್ಸಿಜನ್, ವೆಂಟಿಲೇಟರ್ ಗಳ ಬಗ್ಗೆ ಪ್ರತಿದಿನ ಮಾಹಿತಿಯನ್ನು ಒದಗಿಸಬೇಕು. ಬೆಡ್‍ಗಳನ್ನು ಒದಗಿಸುವುದರಲ್ಲಿ ಗೊಂದಲಕ್ಕೆ ಅವಕಾಶ ಮಾಡಬಾರದು. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ವಿವರಗಳನ್ನು ಪರಿಶೀಲಿಸಿ ಶನಿವಾರದ ಒಳಗಾಗಿ ಮಾಹಿತಿ ನೀಡಬೇಕು ಎಂದರು.

    ಶಿಕಾರಿಪುರದ ವಸತಿ ಶಾಲೆಯಲ್ಲಿ 250 ಬೆಡ್‍ಗಳು ಹಾಗೂ ದೇವರ ನರಸೀಪುರ ವಸತಿ ಶಾಲೆಯಲ್ಲಿ 50 ಬೆಡ್‍ಗಳನ್ನು ಸಜ್ಜುಗೊಳಿಸಲಾಗಿದ್ದು, ಕೊರೊನಾ ಕೇರ್ ಸೆಂಟರ್ ಕಾರ್ಯಾರಂಭ ಮಾಡಬಹುದಾಗಿದೆ ಎಂದರು.

    ಕೊರೊನಾ ಕೇರ್ ಸೆಂಟರ್ ಗೆ ದಾಖಲಾಗುವವರು ಮನೆಯಿಂದಲೇ ಬೆಡ್‍ಶೀಟ್, ಟವೆಲ್, ಟೂತ್‍ಪೇಸ್ಟ್, ಬ್ರಷ್, ಸಾಬೂನು ಇತ್ಯಾದಿ ಅಗತ್ಯ ವಸ್ತುಗಳನ್ನು ತರಲು ಸೂಚಿಸಬೇಕು. ಮನೆಯಿಂದ ಹಣ್ಣುಹಂಪಲುಗಳನ್ನು ಮಾತ್ರ ತರಿಸಲು ಅವಕಾಶವಿದೆ. ಇತರ ಆಹಾರ ಪದಾರ್ಥ ಮನೆಯಿಂದ ಒದಗಿಸಲು ಅವಕಾಶ ಇರುವುದಿಲ್ಲ. ಕೋವಿಡ್ ವಾರ್ಡ್ ಗಳಲ್ಲಿ ವಿಡಿಯೋ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಲಾಗಿದ್ದು, ವಿಡಿಯೋ ಚಿತ್ರೀಕರಣ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಬಿ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು.

  • ಕೊರೊನಾ ಕಂಟಕ – ಶಿವಮೊಗ್ಗದ ಕಂಟೈನ್ಮೆಂಟ್ ವಲಯದಲ್ಲಿ ತೀವ್ರ ಕಟ್ಟೆಚ್ಚರ

    ಕೊರೊನಾ ಕಂಟಕ – ಶಿವಮೊಗ್ಗದ ಕಂಟೈನ್ಮೆಂಟ್ ವಲಯದಲ್ಲಿ ತೀವ್ರ ಕಟ್ಟೆಚ್ಚರ

    ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಐದು ಕಂಟೈನ್ಮೆಂಟ್ ವಲಯಗಳನ್ನು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಯಾರೂ ಮನೆಯಿಂದ ಹೊರ ಬಾರದಂತೆ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಕೆ.ಬಿ ಶಿವಕುಮಾರ್ ಅವರು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಪಾಸಿಟಿವ್ ಪ್ರಕರಣಗಳು ಕಂಡು ಬಂದಿರುವ ಕಂಟೈನ್ಮೆಂಟ್ ಪ್ರದೇಶದಿಂದ ಮೆಡಿಕಲ್ ಎಮರ್ಜೆನ್ಸಿ ಪ್ರಕರಣಗಳನ್ನು ಮಾತ್ರ ಹೊರಗೆ ಬಿಡಬೇಕು. ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ತಕ್ಷಣ ಕಂಟೈನ್ಮೆಂಟ್ ಪ್ರದೇಶ ಗುರುತಿಸಿ ಬಂದೋಬಸ್ತು ಏರ್ಪಡಿಸಬೇಕು. ಕಂಟೈನ್ಮೆಂಟ್ ಪ್ರದೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ 2 ಆಶಾ ಕಾರ್ಯಕರ್ತೆಯರು, 2 ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾವುದೇ ಸರ್ಕಾರಿ ಅಧಿಕಾರಿಗಳು ಅಡ್ಡಾಡಬಾರದು. ಅದೇ ರೀತಿ ಕ್ವಾರಂಟೈನ್ ಕೇಂದ್ರಗಳ ಒಳಗೆ ನಿಗದಿಪಡಿಸಿರುವ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.

    ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರತಿದಿನ ಆರೋಗ್ಯ ಸಮೀಕ್ಷೆ ನಡೆಸಬೇಕು. ರೋಗ ಲಕ್ಷಣಗಳು ಕಂಡು ಬಂದವರ ಗಂಟಲು ದ್ರವವನ್ನು ಸಂಗ್ರಹಿಸಿ ಕಳುಹಿಸಬೇಕು ಎಂದರು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲು ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ತಂಡವನ್ನು ರಚಿಸಲಾಗಿದ್ದು, ಈ ತಂಡಕ್ಕೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಸಮರ್ಪಕ ಮಾಹಿತಿಯನ್ನು ತಕ್ಷಣ ಒದಗಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿದ ತಕ್ಷಣ ಅವರ ಗಂಟಲು ದ್ರವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಬೇಕು. 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿರುವವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಹೇಳಿದರು.

    ಇನ್ನು ಜನರು ಹೆಚ್ಚು ಸೇರುವ ಸ್ಥಳಗಳನ್ನು ಈಗಾಗಲೇ ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದ್ದು, ಅಂತಹ ಕಡೆಗಳಲ್ಲಿ ಪ್ರತಿದಿನ ರಾತ್ರಿ ಕಡ್ಡಾಯವಾಗಿ ಸೋಂಕು ನಾಶಕ ಸಿಂಪಡಣೆ ಮಾಡಬೇಕು ಎಂದರು. ಗುರುವಾರ ಒಂದೇ ದಿನ ಶಿಮ್ಸ್ ಪ್ರಯೋಗಾಲಯದಲ್ಲಿ 781 ಗಂಟಲ ದ್ರವ ಸ್ಯಾಂಪಲ್ ಫಲಿತಾಂಶ ಬಂದಿದ್ದು, ಪ್ರಯೋಗಾಲಯದ ಸಿಬ್ಬಂದಿಗೆ ಜಿಲ್ಲಾಧಿಕಾರಿ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಶಿವಮೊಗ್ಗದಲ್ಲಿ ಇಂದು 6 ಮಂದಿಗೆ ಕೊರೊನಾ – 30ಕ್ಕೇರಿದ ಸೋಂಕಿತರ ಸಂಖ್ಯೆ

    ಶಿವಮೊಗ್ಗದಲ್ಲಿ ಇಂದು 6 ಮಂದಿಗೆ ಕೊರೊನಾ – 30ಕ್ಕೇರಿದ ಸೋಂಕಿತರ ಸಂಖ್ಯೆ

    – ಒಂದೇ ಕುಟುಂಬದ 5 ಮಂದಿಗೆ ಸೋಂಕು ದೃಢ
    – ಸೊರಬದ ಓರ್ವ ಮಹಿಳೆಗೂ ತಗುಲಿದ ಕೊರೊನಾ

    ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 6 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

    ಇಂದು ಹೊಸದಾಗಿ ಕೊರೊನಾ ಪ್ರಕರಣ ಪತ್ತೆಯಾಗಿರುವ 6 ಮಂದಿಯಲ್ಲಿ ಶಿವಮೊಗ್ಗದ ತುಂಗಾನಗರದ 3 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಕುಟುಂಬ ಮೇ 15ರಂದು ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಬೇರೆ ಬೇರೆ ವಾಹನಗಳ ಮೂಲಕ ಆಗಮಿಸಿದ್ದರು. ಆದರೆ ತಮಿಳುನಾಡಿನಿಂದ ಬಂದಿದ್ದಾರೆ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಈ ಕುಟುಂಬದ ಎಲ್ಲಾ ಸದಸ್ಯರನ್ನು ಜಿಲ್ಲಾಡಳಿತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ಇವರಲ್ಲಿ ಮೂರು ವರ್ಷದ ಇಬ್ಬರು ಮಕ್ಕಳು ಹಾಗೂ ವಯಸ್ಸಾದ ವೃದ್ಧರು ಇದ್ದ ಕಾರಣ ಹೋಂ ಕ್ವಾರಂಟೈನ್ ಮಾಡಲಾಗಿತ್ತು.

    ಇಂದು ಈ 5 ಮಂದಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ 5 ಮಂದಿ ಸೋಂಕಿರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಅಲ್ಲದೇ ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 4 ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

    ಸೊರಬ ಮೂಲದ 60 ವರ್ಷದ ಮಹಿಳೆಯೊಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಮಹಿಳೆಗೂ ಸಹ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಡಳಿತ ಇಂದು ಕೊರೊನಾ ಸೋಂಕು ಪತ್ತೆಯಾದ ತುಂಗಾನಗರ ಹಾಗೂ ಸೊರಬದ ಹಳೆಪೇಟೆಯನ್ನು ಕಂಟೈನ್‍ಮೆಂಟ್ ಝೋನ್ ಎಂದು ಘೋಷಿಸಿ ಸೀಲ್‍ಡೌನ್ ಮಾಡಿದೆ. ಅಲ್ಲದೇ ಈ ಬಡಾವಣೆಯ ಸುತ್ತಮುತ್ತಲಿನ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

    ಸೋಂಕಿತರ ವಿವರ:
    ರೋಗಿ-1498: ಶಿವಮೊಗ್ಗದ 60 ವರ್ಷದ ಮಹಿಳೆ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.
    ರೋಗಿ-1499: ಶಿವಮೊಗ್ಗದ 21 ವರ್ಷದ ಯುವತಿ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.
    ರೋಗಿ-1500: ಶಿವಮೊಗ್ಗದ 3 ವರ್ಷದ ಬಾಲಕ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.
    ರೋಗಿ-1501: ಶಿವಮೊಗ್ಗದ 3 ವರ್ಷದ ಬಾಲಕಿ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.
    ರೋಗಿ-1502: ಶಿವಮೊಗ್ಗದ 56 ವರ್ಷದ ಪುರುಷ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.
    ರೋಗಿ-1503: ಶಿವಮೊಗ್ಗದ 52 ವರ್ಷದ ಪುರುಷ. ತಮಿಳುನಾಡಿಗೆ ಪ್ರಯಾಣಿಸಿದ ಹಿನ್ನೆಲೆ.

  • ಮಲೆನಾಡಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ – 9ಕ್ಕೆ ಏರಿದ ಸೋಂಕಿತರ ಸಂಖ್ಯೆ

    ಮಲೆನಾಡಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ – 9ಕ್ಕೆ ಏರಿದ ಸೋಂಕಿತರ ಸಂಖ್ಯೆ

    – ಮುಂಬೈನಿಂದ ತೀರ್ಥಹಳ್ಳಿಗೆ ಬಂದಿದ್ದ ವ್ಯಕ್ತಿಗೆ ಸೋಂಕು

    ಶಿವಮೊಗ್ಗ: ಮಲೆನಾಡಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಕೊರೊನಾ ವೈರಸ್ ಹಾವಳಿ ಕಾಣಿಸಿಕೊಂಡ ಆರಂಭದ ದಿನದಿಂದಲೂ ಜಿಲ್ಲೆಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ. ಹೀಗಾಗಿ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಜಿಲ್ಲೆಗೆ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲೆಯ ಜನರಿಗೆ ತಲೆ ನೋವಾಗಿ ಪರಿಣಮಿಸಿದೆ.

    ಕಳೆದ ಐದು ದಿನದ ಹಿಂದೆ ಗುಜರಾತ್‍ನ ಅಹಮದಾಬಾದ್‍ನಿಂದ ಜಿಲ್ಲೆಗೆ ಆಗಮಿಸಿದ್ದ 8 ಮಂದಿ ತಬ್ಲಿಘಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಇಂದು ಮುಂಬೈನಿಂದ ತೀರ್ಥಹಳ್ಳಿ ತಾಲೂಕಿನ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಹಾಸ್ಟೆಲ್‍ವೊಂದರಲ್ಲಿ ಕ್ವಾರಂಟೈನ್‍ಗೆ ಇಡಲಾಗಿತ್ತು. ಆದರೆ ಗುರುವಾರ ರಾತ್ರಿ ವ್ಯಕ್ತಿಗೆ ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಪರಿಣಾಮ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಯಿತು. ಈ ವೇಳೆ ಅವರಿಗೆ ಕೊರೊನಾ ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಸೋಂಕಿತ ವ್ಯಕ್ತಿ ಅವರ ಕುಟುಂಬಸ್ಥರ ಜೊತೆ ಹಾಗೂ ಹಲವು ಮಂದಿ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಹೀಗಾಗಿ ಸಂಪರ್ಕದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಅಲ್ಲದೇ ಮುಂಬೈನಿಂದ ಬಂದ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲು ಪೊಲೀಸರು ಹಾಗೂ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಒಟ್ಟಾರೆ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಇಲ್ಲವಾಗಿದ್ದ ಜಿಲ್ಲೆಯಲ್ಲಿ ಹೊರಗಿನಿಂದ ಬಂದವರಿಂದ ಸೋಂಕು ಪತ್ತೆಯಾಗಿದೆ.

  • ಅಂಗವಿಕಲರ ಪ್ರಮಾಣ ಪತ್ರ ವಿತರಣೆ ವಿಳಂಬ ಸಲ್ಲದು: ಕೆ.ಬಿ ಶಿವಕುಮಾರ್

    ಅಂಗವಿಕಲರ ಪ್ರಮಾಣ ಪತ್ರ ವಿತರಣೆ ವಿಳಂಬ ಸಲ್ಲದು: ಕೆ.ಬಿ ಶಿವಕುಮಾರ್

    ಶಿವಮೊಗ್ಗ: ಜಿಲ್ಲೆಯಲ್ಲಿ ಅಂಗವಿಕಲರ ಪ್ರಮಾಣ ಪತ್ರ ವಿತರಣೆಯನ್ನು ತ್ವರಿತಗೊಳಿಸಿ ನಿಗದಿತ ಅವಧಿಯ ಒಳಗಾಗಿ ಅರ್ಹರಿಗೆ ಪ್ರಮಾಣ ಪತ್ರ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ಕುಂದುಕೊರತೆಗಳ ನಿವಾರಣಾ ಸಭೆಯಲ್ಲಿ ಮಾತನಾಡಿದ ಡಿಸಿ, ಅಂಗವಿಕಲರು ಯುಡಿಡಿಐ ಪ್ರಮಾಣ ಪತ್ರ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಜಿಲ್ಲೆಯಲ್ಲಿ 11 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, 964 ಕಾರ್ಡ್‍ಗಳನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸಹ ಕಾರ್ಡ್ ಸಿದ್ಧಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ಕಾರ್ಡ್ ವಿತರಣೆಯನ್ನು ತ್ವರಿತಗೊಳಿಸಬೇಕು. ಪರಿಶೀಲನೆಗೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ನಿಗದಿತ ಸಮಯದ ಒಳಗಾಗಿ ವಿಲೇವಾರಿ ಮಾಡಬೇಕು. ಪ್ರತಿ ವಾರ ಈ ಕುರಿತಾಗಿ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಡಿ.ಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಪ್ರಸ್ತುತ ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿ ಮಾತ್ರ ಶ್ರವಣ ದೋಷ ಇರುವವರಿಗೆ ಆಡಿಯೊ ಮೆಟ್ರಿಕ್ ಇವಾಲ್ಯುವೇಶನ್ ಮಾಡಲು ತಜ್ಞರು ಲಭ್ಯರಿದ್ದು, ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಈ ಸೌಲಭ್ಯ ಕಲ್ಪಿಸಬೇಕು. ವಾರಕ್ಕೆ ಒಮ್ಮೆಯಾದರೂ ಈ ಸೌಲಭ್ಯ ತಾಲೂಕು ಆಸ್ಪತ್ರೆಗಳಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದೇ ರೀತಿ ಬೇರೆ ಬೇರೆ ರೀತಿಯ ಅಂಗವಿಕಲತೆ ಪರಿಶೀಲನೆಗೆ ತಜ್ಞರು ಕನಿಷ್ಟ ತಿಂಗಳಿಗೆ ಒಮ್ಮೆ ನಿಗದಿತ ದಿನಾಂಕದಂದು ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ ಲಭ್ಯವಿರಬೇಕು ಎಂದು ಹೇಳಿದರು.

    ಸ್ಥಳೀಯ ಸಂಸ್ಥೆಗಳು ಅಂಗವಿಕಲರಿಗಾಗಿ ಲಭ್ಯವಿರುವ ಶೇ. 5ರಷ್ಟು ಅನುದಾನವನ್ನು ಕೇವಲ ತ್ರಿಚಕ್ರ ವಾಹನ ಒದಗಿಸಲು ಮಾತ್ರ ಬಳಸಿಕೊಳ್ಳದೇ, ಎಲ್ಲಾ ರೀತಿಯ ಅಂಗವಿಕಲರಿಗೂ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಶೇ. 5ರಷ್ಟು ಅನುದಾನವನ್ನು ಯಾವ ರೀತಿಯಲ್ಲಿ ಬಳಸಿಕೊಂಡಿವೆ ಎಂಬ ಬಗ್ಗೆ ಮಾಹಿತಿಯನ್ನು ಪಡೆಯಬೇಕು. ವಿವಿಧ ವಸತಿ ಯೋಜನೆಯಡಿ ಅಂಗವಿಕಲರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

    ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ‍್ಯಾಂಪ್‌, ಗಾಲಿ ಕುರ್ಚಿ, ಅಂಗವಿಕಲ ಸ್ನೇಹಿ ಶೌಚಾಲಯ ಸೇರಿದಂತೆ ಯಾವ್ಯಾವ ಸೌಲಭ್ಯಗಳಿವೆ ಎಂಬ ಬಗ್ಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.