Tag: ಕೆ.ವಿ ಶಶಿಧರ್

  • ಹುಟ್ಟೂರು ಕಲ್ಲಹಳ್ಳಿಯಲ್ಲಿ ನೆರವೇರಿದ ʻಪಬ್ಲಿಕ್ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಅಂತ್ಯ ಸಂಸ್ಕಾರ

    ಹುಟ್ಟೂರು ಕಲ್ಲಹಳ್ಳಿಯಲ್ಲಿ ನೆರವೇರಿದ ʻಪಬ್ಲಿಕ್ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಅಂತ್ಯ ಸಂಸ್ಕಾರ

    ಶಿವಮೊಗ್ಗ: ಅನಾರೋಗ್ಯದಿಂದ ಮೃತಪಟ್ಟಿದ್ದ ‘ಪಬ್ಲಿಕ್ ಟಿವಿ’  (Public TV) ಶಿವಮೊಗ್ಗ (Shivamogga) ಜಿಲ್ಲಾ ವರದಿಗಾರ ಕೆ.ವಿ ಶಶಿಧರ್ (K.V Shashidhar) ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಹಾಸನದ ಅರಸೀಕೆರೆಯ ಎಸ್.ಕಲ್ಲಹಳ್ಳಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ನೆರವೇರಿದೆ.

    ಮೃತರ ಅಂತ್ಯಸಂಸ್ಕಾರದಲ್ಲಿ ʻಪಬ್ಲಿಕ್‌ ಟಿವಿʼ ಸಂಪಾದಕ ದಿವಾಕರ್‌, ಜಿಲ್ಲಾ ಸುದ್ದಿ ಸಂಯೋಜಕ ಮನೋಹರ್‌, ಹೆಚ್‌ಆರ್‌ ವಿಭಾಗದ ಶಂಕರ್‌ ಹಾಗೂ ಪೊಲಿಟಿಕಲ್‌ ಬ್ಯೂರೋ ಚೀಫ್‌ ರವೀಶ್‌ ಪಾಲ್ಗೊಂಡಿದ್ದರು. ಈ ವೇಳೆ ಶಶಿಧರ್ ಅವರ ತಂದೆಗೆ ದಿವಾಕರ್‌ ಅವರು ಸಾಂತ್ವನ ಹೇಳಿದ್ದಾರೆ.

    ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಅವರಿಗೆ 40 ವರ್ಷ ವಯಸ್ಸಾಗಿತ್ತು.

    ಮೃತರು ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ. ಶಶಿಧರ್ ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಪಬ್ಲಿಕ್ ಟಿವಿ ಬಳಗ ಶಶಿಧರ್ ನಿಧನಕ್ಕೆ ಸಂತಾಪ ಸೂಚಿಸಿದೆ.

  • ‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನಕ್ಕೆ ಬಿವೈವಿ ಸಂತಾಪ

    ‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನಕ್ಕೆ ಬಿವೈವಿ ಸಂತಾಪ

    ಶಿವಮೊಗ್ಗ: ಪಬ್ಲಿಕ್ ಟಿವಿಯ (Public TV) ಶಿವಮೊಗ್ಗ (Shivamogga) ಜಿಲ್ಲಾ ವರದಿಗಾರ ಕೆ.ವಿ ಶಶಿಧರ್ (K.V Shashidhar) ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಶಶಿಧರ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬರೆದುಕೊಂಡಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಧರ್ ಇಂದು (ಶನಿವಾರ) ಸಂಜೆ ಅಕಾಲಿಕ ನಿಧನ ಹೊಂದಿದ್ದಾರೆ. ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರಾಗಿದ್ದು, 40 ವರ್ಷ ವಯಸ್ಸಾಗಿತ್ತು.