ನವದೆಹಲಿ: ಕಾಂಗ್ರೆಸ್‌ನಲ್ಲಿ ಈಗ ಮಾಯ ಮಂತ್ರದೇ ಚರ್ಚೆ. ಗಾಯಬ್ ಪೋಸ್ಟ್ ಪಾಕಿಸ್ತಾನದಲ್ಲಿ (Pakistan) ಫೇಮಸ್ ಆಗ್ತಿದ್ದಂತೆ ಇತ್ತ ಕಾಂಗ್ರೆಸ್ ವಿಲವಿಲ ಒದ್ದಾಡಿದೆ. ಇದೀಗ ಪೋಸ್ಟ್ ಡಿಲೀಟ್ ಮಾಡಿ, ಎಲ್ಲಾ ಬಾಯಿ ಮುಚ್ಕೊಂಡು ಇರಿ ಅಂತಾ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಖಡಕ್ ಎಚ್ಚರಿಕೆ ಕೊಟ್ಟಿದೆ.
ಪೆಹಲ್ಗಾಮ್ ದಾಳಿ (Pahalgam Terror Attck) ವಿಚಾರದಲ್ಲಿ ಮೋದಿ ಟೀಕಿಸುವ ಶರವೇಗದಲ್ಲಿ ಕಾಂಗ್ರೆಸ್ ಗಾಯಬ್ ಪೋಸ್ಟ್ ಹಾಕಿ ಈಗ ಗಾಯಬ್ ಗಾಯಬ್ ಅನ್ನುತ್ತಿದೆ. ಗಾಯಬ್ ಪೋಸ್ಟ್ ಬಳಸಿಕೊಂಡು ರಂಗಿನಾಟ ಆಡಿದ ಪಾಕಿಸ್ತಾನದ (Pakistan) ಕೇಕೆ ಕಾಂಗ್ರೆಸ್‌ಗೆ (Congress) ಹಿಂಬೆಂಕಿಯಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌ನ ಕೆಲ ನಾಯಕರ ಆಕ್ಷೇಪದಿಂದ ಗಾಯಬ್ ಪೋಸ್ಟ್ ಡಿಲೀಟ್ ಮಾಡಲಾಗಿದ್ದು, ಎಲ್ಲಾ ನಾಯಕರು ಸಹ ಗಾಯಬ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್ ಗಾಯಬ್ ಪೋಸ್ಟರ್ ಡಿಲೀಟ್ – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಕಾಂಗ್ರೆಸ್ ನಾಯಕರ ವಿವಾದಾತ್ಮಕ ಹೇಳಿಕೆಗಳು, ಪೋಸ್ಟ್‌ನಿಂದ ಎಐಸಿಸಿ ಹೈರಾಣಾಗಿದ್ದು, ಯಾವುದನ್ನ, ಯಾರನ್ನ ಸಮರ್ಥನೆ ಮಾಡ್ಕೋಬೇಕು ಅನ್ನೋದೇ ಅರ್ಥವಾಗದೇ ಹೋಗಿದೆ. ಪೆಹಲ್ಗಾಮ್ ವಿಚಾರದಲ್ಲಿ ಸ್ವಲ್ಪ ಎಚ್ಚರ ತಪ್ಪಿ ಮಾತನಾಡಿದ್ರೂ ಕಾಂಗ್ರೆಸ್‌ಗೆ ಕುತ್ತು ಎಂಬುದು ಗೊತ್ತಿದೆ. ಹಾಗಾಗಿ ಎಲ್ಲಾ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (K C Venugopal) ಬಹಿರಂಗ ಪತ್ರ ಬರೆದು ಎಚ್ಚರಿಕೆ ಕೊಟ್ಟಿದ್ದಾರೆ. ಪೆಹಲ್ಗಾಮ್ ವಿಚಾರದಲ್ಲಿ ಯಾರೂ ಅನಗತ್ಯ ಹೇಳಿಕೆ ಕೊಡಬಾರದು, ಕೊಟ್ಟರೆ ಶಿಸ್ತು ಕ್ರಮ ಎಂದು ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ವಿಷ ಕಾರುತ್ತಿದ್ದ ಅಫ್ರಿದಿ ಬಾಯಿ ಬಂದ್!
ಈ ನಡುವೆ ಎಐಸಿಸಿ ಸೂಚನೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸಹ ಎಚ್ಚೆತ್ತುಕೊಂಡಿದ್ದು, ಮಾಯ ಪೋಸ್ಟ್ ಡಿಲೀಟ್ ಮಾಡಿದೆ. ಅಲ್ಲದೇ ಕಾಂಗ್ರೆಸ್ ನಾಯಕರು ಸದ್ಯಕ್ಕೆ ಗಪ್ ಚುಪ್ ಆಗಿದ್ದಾರೆ. ಒಟ್ನಲ್ಲಿ ರಾಜಕೀಯ ರಣಮೇಳದಲ್ಲಿ ಮೋದಿ ಟಾರ್ಗೆಟ್ ಮಾಡಲು ಹೋದ ಗಾಯಬ್ ಪೋಸ್ಟ್ ಕಾಂಗ್ರೆಸ್‌ಗೆ ತಿರುಗುಬಾಣ ಆಗಿದ್ದು, ಇದೆಲ್ಲಾ ಬೇಕಿತ್ತಾ ಎಂಬ ಪ್ರಶ್ನೆಗಳಿಗೆ `ಕೈ’ ನಾಯಕರೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.
ಬೆಂಗಳೂರು: ಎಐಸಿಸಿ ಅಧ್ಯಕ್ಷರು (AICC President) ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತಮಾಡಿದ ಅವರು, ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ (KC Venugopal) ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೆ ಜವಾಬ್ದಾರರು ಎಂದಿದ್ದಾರೆ. ಇದನ್ನೂ ಓದಿ: ದಸರಾ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತೆ: ಕಮಿಷನರ್ ಸೀಮಾ ಲಾಟ್ಕರ್
ಮುಂದುವರಿದು, ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಯಾವ ಸಚಿವರು ಸಭೆ ಮಾಡ್ತಾರೆ? ಬಹಿರಂಗವಾಗಿ ಮಾತಾಡ್ತಾರೆ ಅವರಿಗೆ ಎಐಸಿಸಿಯಿಂದ ನೀವೆ ನೋಟಿಸ್ ನೀಡಿ. ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೆ ಸಚಿವ ಸ್ಥಾನದಿಂದ ವಜಾ ಮಾಡಿ. ಇವಿಷ್ಟು ನಿರ್ದೇಶನ ಎಐಸಿಸಿ ಅಧ್ಯಕ್ಷರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಬಂದಿದೆ. ಇದನ್ನ ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ. ನಿಮ್ಮ ಸಭೆ, ನಿಮ್ಮ ಮಾತು, ನಿಮ್ಮ ಜವಬ್ದಾರಿ. ಈ ವಿಚಾರದಲ್ಲಿ ಯಾವುದೂ ನನ್ನ ಕೈಯಲ್ಲಿ ಇಲ್ಲ ಎಂದು ನೇರವಾಗಿ ಸಿಎಂ ಹೇಳಿದ್ದಾರೆ.
ಇದಕ್ಕೂ ಮುನ್ನ ಸಂಪುಟ ಸಭೆ ಆರಂಭವಾಗುತ್ತಿದ್ದಂತೆ ಮೊದಲಿಗೆ ಸಚಿವರ ಸಭೆ ಬಗ್ಗೆ ಸಿಎಂ ಮಾತು ಆರಂಭಿಸಿದರು. ಈ ವೇಳೆ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಮಾತಿನ ಬಗ್ಗೆ ಅವರ ಮಗ ಶಾಸಕ ಪ್ರಕಾಶ್ ಕೋಳಿವಾಡ ಕ್ಷಮೆ ಕೇಳಿದರು. ಬಳಿಕ ಸಿಎಂ ಅದು ಮುಗಿದ ಅಧ್ಯಾಯ, ಆದ್ರೆ ಸಚಿವರು ನೀವೇ ಮಾತಾನಾಡಿದರೆ ಹೇಗೆ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಾವು ಎಲ್ಲಿಯೂ, ಯಾವತ್ತೂ ಸಿಎಂ ಪದವಿ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಪರಮೇಶ್ವರ್
ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಹಾದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೋಳಿ ಸ್ಪಷ್ಟನೆ ನೀಡಿದ್ದಾರೆ. ಇಲಾಖೆ ವಿಚಾರಕ್ಕೆ ಭೇಟಿ ಮಾಡಿದ್ದರು ಅದು ಮಾಧ್ಯಮಗಳಲ್ಲಿ ಹಾಗೆ ಸುದ್ದಿ ಆಗಿದೆ ಅಷ್ಟೆ. ಮೈಸೂರಲ್ಲಿ ಎಲ್ಲರನ್ನೂ ನಾನೇ ಊಟಕ್ಕೆ ಕರೆದೆ ಅದಕ್ಕೆ ಎಲ್ಲರೂ ಸೇರಿದ್ದೆವು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಏನೇ ಇರಲಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ಹರಿಯಾಣ ವಿಧಾನಸಭೆ ಚುನಾವಣೆಯಲ್ಲೂ ಆಪ್ (AAP) ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಬೇಡಿಕೆ ಇಟ್ಟಿದ್ದು, ಕಾಂಗ್ರೆಸ್ ನಾಯಕರು (Congress Leaders) ಈ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿ ಅಂತಿಮ ಮಾತುಕತೆ ನಡೆಯುವ ಸಾಧ್ಯತೆಗಳಿವೆ.
ಲೋಕಸಭೆ ಚುನಾವಣೆ ವೇಳೆ ಹರಿಯಾಣದಲ್ಲಿ (Haryana Polls) ಆಪ್, ಕಾಂಗ್ರೆಸ್ ಮೈತ್ರಿಗೆ ಗೆಲುವು ಸಿಗದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ಮತ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿಯೂ ಮತ ವಿಭಜನೆ ತಡೆಯಲು ಮೈತ್ರಿ ಮಾತುಕತೆ ನಡೆಯುತ್ತಿದೆ, ಎರಡು ಪಕ್ಷದಲ್ಲಿ ಓರ್ವ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಚಾರಗಳಿವೆ. ಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿಗೆ ಅಧಿಕಾರ ನೀಡದೇ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ನಿರ್ಧರಿಸಿದ್ದು ಇದಕ್ಕಾಗಿ ಸಾಕಷ್ಟು ತಯಾರಿ ಮಾಡುತ್ತಿದೆ. ಇದನ್ನೂ ಓದಿ: ʻಕೈʼ ಹಿಡಿಯುತ್ತಾರಾ ಕುಸ್ತಿಪಟು ವಿನೇಶ್, ಬಜರಂಗ್ ಪುನಿಯಾ – ತೀವ್ರ ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ಭೇಟಿ
ಎರಡು ದಿನಗಳ ಹಿಂದೆ ಹರಿಯಾಣ ಕಾಂಗ್ರೆಸ್‌ನ ಕೆಲವು ನಾಯಕರು ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದರು. ಈ ಸಭೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಒಟ್ಟಾಗಿ ಚುನಾವಣೆಗೆ ಸ್ಪರ್ಧಿಸುವ ಅಥವಾ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆಯೂ ಚರ್ಚಿಸಿದ್ದಾರೆ. ಪರಸ್ಪರ ಚರ್ಚೆಯ ನಂತರ ಈ ವಿಷಯದ ಬಗ್ಗೆ ಅಂತಿಮ ಅಭಿಪ್ರಾಯ ನೀಡುವಂತೆ ರಾಹುಲ್ ಗಾಂಧಿ ನಾಯಕರನ್ನು ಕೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ ಎಲ್ಲ ಉನ್ನತ ನಾಯಕರ ಜತೆ ಮಾತುಕತೆ ನಡೆಸಿದ ಬಳಿಕವಷ್ಟೇ ಕೆ.ಸಿ.ವೇಣುಗೋಪಾಲ್ ಹಾಗೂ ದೀಪಕ್ ಬಬಾರಿಯಾ ಮೈತ್ರಿಗೆ ಸೂತ್ರ ರೂಪಿಸುವಂತೆ ಹೇಳಲಾಗಿದೆ.
ಮಾಹಿತಿಯ ಪ್ರಕಾರ, ಆಮ್ ಆದ್ಮಿ ಪಕ್ಷವು ಹತ್ತು ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಬೇಡಿಕೆಯನ್ನು ಕಾಂಗ್ರೆಸ್ ನಾಯಕತ್ವದ ಮುಂದೆ ಇರಿಸಿದೆ. ಐದರಿಂದ ಏಳು ಸೀಟು ನೀಡಲು ಕಾಂಗ್ರೆಸ್ ಒಪ್ಪಿಗೆ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಎರಡು ಪಕ್ಷಗಳು ಸಮನ್ವಯ ಸಾಧಿಸುವ ಅನಿವಾರ್ಯತೆ ಎದುರಾಗಬಹುದು ಎನ್ನಲಾಗಿದೆ. ಇದನ್ನೂ ಓದಿ: 3,991 ಪುಟ, 231 ಸಾಕ್ಷಿ, 5 ವ್ಯಾಲ್ಯೂಂ – ದರ್ಶನ್ & ಗ್ಯಾಂಗ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (K.C.Venugopal) ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ. ಇದನ್ನೂ ಓದಿ: ಹೆಚ್‍ಡಿಕೆ ಅವರದ್ದು ಅವಕಾಶವಾದಿ ಮೈತ್ರಿ: ಎಂ.ಬಿ ಪಾಟೀಲ್
2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ. ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು. ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ. ಇದನ್ನೂ ಓದಿ: ವಿಜಯೇಂದ್ರ, ನಿಖಿಲ್ ನೇತೃತ್ವದಲ್ಲಿ ಅಶ್ವಮೇಧ ಯಾಗ: ಹೆಚ್‌ಡಿಕೆ
ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.
ರಾಜ್ಯಪಾಲರ ಬಳಕೆ ದುರದೃಷ್ಟಕರ
ದುರದೃಷ್ಟವಶಾತ್ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟಿಸ್ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು. ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು.
ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ
ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ? ಪ್ರಜ್ವಲ್ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂಥವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಟೆಂಡರ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ – ಪ್ರಹ್ಲಾದ್ ಜೋಶಿ ಆರೋಪ
ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ
ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ 135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ. ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (KN Rajanna) ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ (Shamanur Shivashankarappa) ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (K.C Venugopal) ಇಬ್ಬರಿಗೂ ಶಿಸ್ತು ಮೀರಿ ಮಾತನಾಡದಂತೆ ದೂರವಾಣಿ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸಂಸದ ರಾಘವೇಂದ್ರ ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದರು. ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ (Loksabha Election) ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ ಎದುರಿಸಬೇಕಾಗುತ್ತದೆ ಎಂದೂ ವಾರ್ನ್ ಮಾಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ
ಬೆಂಗಳೂರು: ಕೆಲ ಪ್ರಾದೇಶಿಕ ಪಕ್ಷಗಳು ಕಳೆದ ಚುನಾವಣೆಯಲ್ಲಿ ತನ್ನ ನಿಲುವು ಏನು ಎಂಬುದನ್ನು ಸಾಬೀತು ಮಾಡಿವೆ ಎಂದು ಹೇಳುವ ಮುಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ( K C Venugopal) ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ (BJP) ಜೊತೆ ಹೆಚ್‍ಡಿಕೆ (HD Kumaraswamy) ದೋಸ್ತಿ ಫಿಕ್ಸ್ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಜೆಡಿಎಸ್ ಅನ್ನು ಕಳೆದ ಚುನಾವಣೆಯಲ್ಲೆ ನೋಡಿದ್ದೇವೆ ಅವರು ಯಾವ ಫ್ಲಾಟ್ ಫಾರಂ ನಲ್ಲಿ ಇದ್ದಾರೆ ಎಂದು. ಸೆಕ್ಯುಲರಿಸಂ ಮೇಲೆ ನಂಬಿಕೆ ಇರುವ ಹಾಗೂ ಸರ್ವಾಧಿಕಾರ ವಿರೋಧಿಸುವ ಯಾವ ಪಕ್ಷವನ್ನಾದರೂ ನಾವು ಸ್ವಾಗತಿಸುತ್ತೇವೆ ಎಂದರು.
ಜೂನ್ 23 ರಂದು ಪಾಟ್ನಾದಲ್ಲಿ ಯಶಸ್ವಿ ಸಭೆ ನಡೆಸಿದ್ದೆವು. ಇದು ಅದರ ಮುಂದುವರಿದ ಭಾಗ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. 26 ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ. ಇಂದು ಸಂಜೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ನಾಯಕರಿಗೆ ಬೋಜನ ಕೂಟ ಏರ್ಪಡಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಾಕತ್ತಿದ್ದರೆ ಸಿದ್ದರಾಮಯ್ಯ ಒಂದು ಪಕ್ಷ ಕಟ್ಟಿ, 5 ಸ್ಥಾನ ಗೆದ್ದು ತೋರಿಸಲಿ – HDK ಬಹಿರಂಗ ಸವಾಲ್
ಕೇಂದ್ರ ಸರ್ಕಾರದ (Central Govt) ನಡೆಯ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ವೇದಿಕಯಲ್ಲಿ ಸೇರುತ್ತಿದ್ದೇವೆ. ಕೇಂದ್ರ ಸರ್ಕಾರದ ಸೇಡಿನ ನಡೆಗೆ ರಾಹುಲ್ ಗಾಂಧಿ ಅವರನ್ನ ಸಂಸತ್ ಸ್ಥಾನದಿಂದ ವಜಾ ಮಾಡಲಾಗಿದೆ. ಮಣಿಪುರದಲ್ಲಿ ಜನ ಸಾಮಾನ್ಯರು ಕಷ್ಟದಲ್ಲಿ ಸಿಲುಕಿದರು ಕೇಂದ್ರ ಗಮನ ಹರಿಸಲಿಲ್ಲ. ಈ ಸಭೆಯಲ್ಲಿ ಭವಿಷ್ಯದ ನಡೆಯ ಬಗ್ಗೆ ತೀರ್ಮಾನ ಮಾಡುತ್ತೇವೆ. ಲೋಕಸಭಾ ಚುನಾವಣೆಯ ತಂತ್ರಗಾರಿಕೆ ಬಗ್ಗೆಯು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ನವದೆಹಲಿ: ಬೆಂಗಳೂರಿನಲ್ಲಿ (Bengaluru) ಜುಲೈ 17-18 ರಂದು ನಿಗಧಿಯಾಗಿದ್ದ ವಿಪಕ್ಷಗಳ ಸಭೆಯನ್ನು (All Opposition Meeting) ಮತ್ತೆ ಮುಂದೂಡಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿಪಕ್ಷಗಳ ನಾಯಕರ ಸಭೆ ನಡೆಸಲಿದ್ದು ಶೀಘ್ರದಲ್ಲಿ ದಿನಾಂಕ ನಿಗಧಿ ಮಾಡಲಿದ್ದೇವೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಹೇಳಿದ್ದಾರೆ.
After a hugely successful All-Opposition meeting in Patna, we will be holding the next meeting in Bengaluru on 17 and 18 July, 2023.
We are steadfast in our unwavering resolve to defeat the fascist and undemocratic forces and present a bold vision to take the country forward.
ನವದೆಹಲಿಯಲ್ಲಿ (NewDelhi) ಮಾತನಾಡಿದ ಅವರು, ಜುಲೈ 20 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಈ ಅವಧಿಯೊಳಗೆ ನಾವು ಖಂಡಿತವಾಗಿ ವಿಪಕ್ಷಗಳ ನಾಯಕರ 2ನೇ ಸಭೆ ಕರೆಯುತ್ತೇವೆ. ದಿನಾಂಕ ಅಂತಿಮಗೊಳಿಸುವ ಬಗ್ಗೆ ಇತರೆ ನಾಯಕರೊಂದಿಗೆ ಚರ್ಚೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ- ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್
ಇತ್ತಿಚೆಗೆ ಪ್ರಧಾನಿ ನರೇಂದ್ರ ಮೋದಿ ಎನ್‌ಸಿಪಿ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು ಈಗ ಅವರ ಬೆಂಬಲವನ್ನೇ ಪಡೆದಿದ್ದಾರೆ. ನಾವು ನಾಟಕ ನೋಡುತ್ತಿದ್ದೇವೆ ಇದೆಲ್ಲ ED ಅಂತಹ ಏಜೆನ್ಸಿಗಳ ಪ್ರಾಯೋಜಿತ ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ 2ನೇ ಸಭೆ ನಡೆಸಲು ತಿರ್ಮಾನಿಸಲಾಗಿತ್ತು. ಅಲ್ಲಿ ಹವಾಮಾನ ಸೂಕ್ತವಾಗಿರದ ಹಿನ್ನಲೆ ಬೆಂಗಳೂರಿನಲ್ಲಿ ಜುಲೈ 17-18 ರಂದು ಸಭೆ ಸೇರಲು ನಿರ್ಧರಿಸಿದೆ ಎಂದು ಈ ಹಿಂದೆ ಶರದ್ ಪವಾರ್ ಹೇಳಿದ್ದರು. ಈಗ ಎರಡನೇ ಬಾರಿಗೆ ಸಭೆಯ ದಿನಾಂಕ ಮುಂದೂಡಿಕೆಯಾಗುತ್ತಿದೆ.
ನವದೆಹಲಿ: ಮುಂಬರುವ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳಿಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ (Bharat Jodo Yatra) ಬೆನ್ನಲ್ಲೇ ಹೊಸ ಅಭಿಯಾನ ಆರಂಭಿಸಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ (AICC) ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K C Venugopal) ‘ಹಾತ್ ಸೇ ಹಾತ್ ಜೋಡೋ’ (ಕೈಯಿಂದ ಕೈ ಜೋಡಿಸಿ) (Hath Se Hath Jodo Yatra) ಅಭಿಯಾನದ ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಯಾತ್ರೆಯ ಉದ್ದೇಶವನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆ ಜನರ ಮನೆಗಳನ್ನು ತಲುಪಲು ‘ಹಾತ್ ಸೇ ಹಾತ್ ಜೋಡೋ’ ಅಭಿಯಾನ ಆರಂಭಿಸಿದ್ದು ಜನವರಿ 26 ರಿಂದ ಇದು ಆರಂಭವಾಗಲಿದೆ ಎಂದರು. ಇದನ್ನೂ ಓದಿ: ಚುನಾವಣೆ ಸಂದರ್ಭದಲ್ಲಿ ED ನನ್ನನ್ನು ಬಂಧಿಸಲುಬಹುದು – ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಕೆಜಿಎಫ್ ಬಾಬು
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ‘ಹಾತ್ ಸೇ ಹಾತ್ ಜೋಡೋ’ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮೊದಲ ಹಂತದಲ್ಲಿ ಗ್ರಾಮ ಮತ್ತು ಬ್ಲಾಕ್ ಮಟ್ಟದಲ್ಲಿ, ಎರಡನೇ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಮತ್ತು ಮೂರನೇ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದೇ ವೇಳೆ ಬಿಜೆಪಿ (BJP) ಆಡಳಿತ ವೈಫಲ್ಯಗಳ ಬಗ್ಗೆ ಜಾರ್ಜ್‍ಶೀಟ್ ಸಿದ್ಧಪಡಿಸಿದ್ದು ಅವುಗಳನ್ನು ಜನರಿಗೆ ತಲುಪಿಸುತ್ತೇವೆ ಮತ್ತು ಕಾಂಗ್ರೆಸ್ ಉದ್ದೇಶಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಇದಕ್ಕೆ ಭಾರತ್ ಜೋಡೋದಂತೆ ಅಭೂತಪೂರ್ವ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ
Live Tv
[brid partner=56869869 player=32851 video=960834 autoplay=true]
ಶ್ರೀನಗರ: ಮಾಜಿ ಸಿಎಂ ಗುಲಾಂ ನಬಿ ಆಜಾದ್ (Ghulam Nabi Azad) ಅವರ ರಾಜೀನಾಮೆಯ ಬೆನ್ನಲ್ಲೇ ಪಕ್ಷಬಿಟ್ಟು ಹೋಗಿದ್ದ ಹಲವು ನಾಯಕರು ಭಾರತ್ ಜೋಡೋ ಯಾತ್ರೆ (Bharat Jodo Yatra) ಜಮ್ಮು ಮತ್ತು ಕಾಶ್ಮೀರ (Jammu And Kashmir) ಪ್ರವೇಶಿಸುವ ಮುನ್ನವೇ ಮತ್ತೆ ಪಕ್ಷ ಸೇರ್ಪಡೆಯಾಗಿದ್ದಾರೆ
ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮುಜಾಫರ್ ರ‍್ರೆ, ಬಲ್ವಾನ್ ಸಿಂಗ್, ಮೊಹಿಂದರ್ ಭಾರದ್ವಾಜ್, ಭೂಷಣ್ ಡೋಗ್ರಾ, ವಿನೋದ್ ಶರ್ಮಾ, ನರಿಂದರ್ ಶರ್ಮಾ, ನರೇಶ್ ಶರ್ಮಾ, ಅಂಬ್ರಿಶ್ ಮಗೋತ್ರಾ, ಸುಭಾಷ್ ಭಗತ್, ಬದ್ರಿ ನಾಥ್ ಶರ್ಮಾ, ವರುಣ್ ಮಗೋತ್ರ, ಅನುರಾಧ ಶರ್ಮಾ, ವಿಜಯ್ ತಾರ್ಗೋತ್ರ ಮತ್ತು ಚಂದರ್ ಪ್ರಭಾ ಶರ್ಮಾ ಸೇರಿದಂತೆ ಹಲವು ಹಿರಿಯ ನಾಯಕರು ಶುಕ್ರವಾರ ಪಕ್ಷಕ್ಕೆ ಮರಳಿದ್ದಾರೆ.
ಬಲ್ವಾನ್ ಸಿಂಗ್ ಮತ್ತು ತಾರಾ ಚಂದ್, ಗುಲಾಮ್ ನಬಿ ಆಜಾದ್ ಅವರ ನಿಷ್ಠಾವಂತರು. ಈ ಹಿಂದೆ ಕಾಂಗ್ರೆಸ್ ತೊರೆದು ಡೆಮಾಕ್ರಟಿಕ್ ಆಜಾದ್ ಪಾರ್ಟಿ (DAP) ಸೇರಿದ್ದರು. ಆದ್ರೆ ಪಕ್ಷವಿರೋಧಿ ಚಟುವಟಿಕೆಗಳಿಂದಾಗಿ ಆಜಾದ್ ಕೆಲವರನ್ನ ಡಿಎಪಿ ಯಿಂದ ಹೊರಹಾಕಿದ್ದರು. ಇದನ್ನೂ ಓದಿ: ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್
ಇಂದು ಹಲವಾರು ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal) ಸುದ್ದಿಗೋಷ್ಠಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್ (Congress) ಪಾಲಿಗೆ ಬಹುದೊಡ್ಡ ದಿನ ಎಂದು ಹರ್ಷಗೊಂಡಿದ್ದಾರೆ. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದು
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಎಐಸಿಸಿ ರಾಜ್ಯ ಉಸ್ತುವಾರಿ ರಜನಿ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
ಜೈಪುರ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು (Bharat Jodo Yatra) ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ಕಾಂಗ್ರೆಸ್ ನಾಯಕರು ಹರ್ಷಗೊಂಡಿದ್ದು, ಭಾರತ್ ಜೋಡೋ ಯಾತ್ರೆಯು ಜನಸಾಮಾನ್ಯರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಪ್ರತಿಪಾದಿಸಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.
नफ़रतों के शोर में मोहब्बत की किलकारियां गूंज रही है।
टूटती उम्मीदों के बीच भरोसे की कड़ियाँ जुड़ रही है।
ಈ ಕುರಿತು ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ದೇಶದ ಜನಸಾಮಾನ್ಯರ ಸಮಸ್ಯೆಗಳನ್ನು ಎತ್ತಿ ತೋರಿಸಿರುವುದು ಜೋಡೋ ಯಾತ್ರೆಯ ದೊಡ್ಡ ಸಾಧನೆ. ಅಲ್ಲದೇ ಗಾಂಧಿ ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬಿಜೆಪಿ (BJP) ಪ್ರಯತ್ನವನ್ನೂ ನಾಶಪಡಿಸಿದ್ದೇವೆ ಎಂದು ಬೀಗಿದ್ದಾರೆ. ಇದನ್ನೂ ಓದಿ: ರಸ್ತೆಗಿಳಿಯಲಿದೆ ಟೋಯಿಂಗ್ ವಾಹನಗಳು – BBMP ನಿರ್ಧಾರಕ್ಕೆ ವಾಹನ ಸವಾರರು ಗರಂ
भारत जोड़ो यात्रा ने 100 दिन पूरे कर लिए हैं।
सभी भारत यात्रियों और ख़ासतौर से श्री @RahulGandhi जी को बहुत-बहुत बधाई।
यात्रा को लाखों लोगों का समर्थन, सहयोग व विश्वास मिला है।
ಸೆಪ್ಟಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸೇರಿ 8 ರಾಜ್ಯಗಳಲ್ಲಿ ಸಂಚರಿಸಿದ್ದು, ಈಗ ರಾಜಸ್ಥಾನದಲ್ಲಿ ಸಂಚರಿಸುತ್ತಿದೆ.
आज #100DAYSOFYATRA के अवसर पर हिमाचल प्रदेश के मुख्यमंत्री श्री सुखविंदर सिंह सुक्खू, उपमुख्यमंत्री श्री मुकेश अग्निहोत्री, प्रदेशाध्यक्ष प्रतिभा सिंह जी व सभी विधायकों ने भारत जोड़ो यात्रा में राहुल गांधी जी के साथ कदम से कदम मिलाए। pic.twitter.com/6aLoED2Z2J
ಈಗಾಗಲೇ 2,800 ಕಿಮೀ ಕ್ರಮಿಸಿರುವ ರಾಹುಲ್‌ಗಾಂಧಿ ಹಾಗೂ ಬೆಂಬಲಿಗರು ವಿರೋಧಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 24 ರಂದು ಯಾತ್ರೆ ದೆಹಲಿ ಪ್ರವೇಶಿಸಲಿದ್ದು, 8 ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದೆ.
Live Tv
[brid partner=56869869 player=32851 video=960834 autoplay=true]