Tag: ಕೆ.ಸುಧಾಕರ್

  • ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    – ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಎಂದ ಸಂಸದ

    ನವದೆಹಲಿ: ಬ್ರಿಟಿಷರು‌ (British) ಇದ್ದಾಗಲೂ ಗಣೇಶ ಮೆರವಣಿಗೆಗೆ (Ganesha Procession) ಸ್ವಾತಂತ್ರ‍್ಯ ಇತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ ಎಂದು ಸಂಸದ ಡಾ.ಕೆ ಸುಧಾಕರ್ (K Sudhakar) ಕಿಡಿಕಾರಿದ್ದಾರೆ.

    ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ (Stone Pelting) ವಿಚಾರವಾಗಿ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟಿಷ್ ಕಾಲದಲ್ಲಿ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು. ಇಂದು ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ವಿರ್ಸಜನೆಗೆ ಅನುಮತಿ ಕಷ್ಟವಾಗಿದೆ. ಒಂದು ಕೋಮಿಗೆ ಮಾತ್ರ ಎಲ್ಲದಕ್ಕೂ ಪರವಾನಿಗೆ ನೀಡಿದೆ. ಬಹುಸಂಖ್ಯಾತ ಹಿಂದೂಗಳನ್ನು ಟಾರ್ಗೆಟ್ ಮಾಡಿದೆ. ಹಿಂದೂಗಳ ಹಬ್ಬ ಮಾಡಿದರೆ ನೂರು ಪ್ರಶ್ನೆ ಕೇಳುತ್ತಾರೆ, ಅನುಮತಿ ಕೊಡಲ್ಲ. ಶಾಂತಿಯುತ ಮೆರವಣಿಗೆ ಮಾಡಿದರೂ ಗಲಭೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಸ್ವಾತಂತ್ರ‍್ಯ ಹೋರಾಟದಲ್ಲಿ ಹಿಂದೂಗಳ ನಡುವೆ ಸಮನ್ವಯ ಬರಲು ಗಣೇಶ ಹಬ್ಬ ಕಾರಣ. ಹಿಂದೂಗಳ ಒಗ್ಗಟ್ಟಿನ ಪ್ರತೀಕ ಈ ಹಬ್ಬವಾಗಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ. ಹಿಂದೂಗಳ ಧಾರ್ಮಿಕ ಭಾವನೆಗೆ ಗೌರವ ಕೊಡುತ್ತಿಲ್ಲ. ನನ್ನ ಕ್ಷೇತ್ರದಲ್ಲೂ ಒಂದು ಸ್ಪೀಕರ್ ಹಾಕಿಕೊಳ್ಳಲು ಎಸ್ಪಿ ಅನುಮತಿ ಬೇಕು. ಕಾಂಗ್ರೆಸ್‌ಗೆ ಹಿಂದೂಗಳು ಮತ ಹಾಕಿಲ್ವ? ಇಂತಹ ಪರಿಸ್ಥಿತಿ ಯಾವ ಕಾಲದಲ್ಲೂ ನೋಡಿಲ್ಲ. ವರ್ಷಕ್ಕೊಂದು ಆಗುವ ಹಬ್ಬಕ್ಕೆ ಅನುಮತಿ ಬೇಕಾ? ಸ್ಪೀಕರ್ ಹಾಕಬೇಡಿ ಎಂದು ಬಿಜೆಪಿ ನಾಯಕರು ಹೇಳಿದ್ರಾ? ಕೋಮು ಗಲಭೆ ಹುಟ್ಟುಹಾಕಿದ್ದು ಕಾಂಗ್ರೆಸ್ ಸರ್ಕಾರ. ಮುಸ್ಲಿಮರನ್ನ 100% ಓಲೈಕೆ ಮಾಡಿದ್ದೀರಿ, ಇನ್ನೇಷ್ಟು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಭಾರತ ಜಿಂದಾಬಾದ್ ಅಂತಾರೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಅಂದಿದ್ದರು. ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಇದೆ. ಇಂತಹ ಹೇಳಿಕೆಗಳನ್ನು ದೇಶದ್ರೋಹಿಗಳು ಎಂದು ಕರೆಯಬೇಕು. ಬಹುಸಂಖ್ಯಾತ ಹಿಂದೂಗಳ ಮೇಲೆ ಗದಾಪ್ರಹಾರ ಮಾಡುತ್ತಿದ್ದಾರೆ. ಸರ್ಕಾರ ಇದಕ್ಕೆ ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಸರ್ಕಾರದ ಬೆಂಬಲದಿಂದ ಕಾನೂನಿನ ಭಯ ಇಲ್ಲದೇ ವರ್ತಿಸುತ್ತಿದ್ದಾರೆ. ಇಂತಹವರನ್ನು ಕಾಂಗ್ರೆಸ್ ನಾಯಕರು ಬ್ರದರ್ಸ್ ಅಂತಾರೆ. ಸಂವಿಧಾನ ಬರೀ ಬಾಯಿಮಾತಲ್ಲಿ ಇದೆ, ಕಾರ್ಯದಲ್ಲಿಲ್ಲ. ಬಹುಸಂಖ್ಯಾತ ಹಿಂದೂಗಳ ಭಾವನೆ, ಆಚಾರ ವಿಚಾರಗಳಿಗೆ ಧಕ್ಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

    ಇನ್ನು ಉಪರಾಷ್ಟ್ರಪತಿ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ನೂರಕ್ಕೆ ನೂರು ವಿಶ್ವಾಸ ಇದೆ. ಸಿಪಿ ರಾಧಾಕೃಷ್ಣನ್ ಅವರಿಗೆ ಅಪಾರ ಅನುಭವ ಇದೆ, ಪಕ್ಷದ ಆದರ್ಶ ಮೈಗೂಡಿಸಿಕೊಂಡಿದ್ದಾರೆ. ಎಲ್ಲ ಸಂಸದರೂ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ದೊಡ್ಡ ಅಂತರದಲ್ಲಿ ಸಿಪಿ ರಾಧಾಕೃಷ್ಣನ್ ಗೆಲವು ಸಾಧಿಸಲಿದ್ದಾರೆ. ಈ ದೇಶಕ್ಕೆ ಸಜ್ಜನ ಸರಳ ವ್ಯಕ್ತಿತ್ವದ, ಅಪಾರ ಅನುಭವ ಹೊಂದಿರುವ ವ್ಯಕ್ತಿ ಉಪರಾಷ್ಟ್ರಪತಿಯಾಗಲಿದ್ದಾರೆ ಎಂದರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ

  • ಸಂಸದ ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಕೇಸ್‌ – ಮೃತ ಬಾಬು ಮನೆಗೆ ಪ್ರದೀಪ್‌ ಈಶ್ವರ್‌ ಭೇಟಿ

    ಸಂಸದ ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಕೇಸ್‌ – ಮೃತ ಬಾಬು ಮನೆಗೆ ಪ್ರದೀಪ್‌ ಈಶ್ವರ್‌ ಭೇಟಿ

    – ಮೃತ ವ್ಯಕ್ತಿ ಕುಟುಂಬಸ್ಥರಿಗೆ ಕಾಂಗ್ರೆಸ್‌ ಶಾಸಕ ಸಾಂತ್ವನ

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದರ ನಡುವೆ ಭಾನುವಾರ ಮೃತ ಬಾಬು ನಿವಾಸಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮಕ್ಕೆ ಭೇಟಿ ನೀಡಿ ಮೃತ ಬಾಬು ಪತ್ನಿ ಶಿಲ್ಪಾ ಹಾಗೂ ತಾಯಿ ಕಾಳಮ್ಮ ಸೇರಿದಂತೆ ಸಹೋದರ ಲೋಕೇಶ್‌ಗೆ ಧೈರ್ಯ ಹೇಳಿದರು. ಈ ವೇಳೆ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರದೀಪ್ ಈಶ್ವರ್, ಸಂಸದ ಸುಧಾಕರ್‌ಗೆ ಸವಾಲು ಹಾಕಿದರು. ಇದನ್ನೂ ಓದಿ: ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

    ಮೃತ ಬಾಬು ಪತ್ನಿ ಶಿಲ್ಪಾಗೆ ಸರ್ಕಾರಿ ಕೆಲಸ ಕೊಡಿಸುವಂತೆ ಸಂಬಂಧಿಕರು ಪ್ರದೀಪ್‌ ಈಶ್ವರ್‌ಗೆ ಬೇಡಿಕೆ ಇಟ್ಟಿದ್ದು, ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು. ತಾಯಿ ಕಾಳಮ್ಮಗೆ ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಕಚೇರಿಯೊಂದರಲ್ಲಿ ಕೆಲಸ ಕೊಡಿಸುವ ಭರವಸೆ ಕೊಟ್ಟರು. ಸಹೋದರ ಲೋಕೇಶ್‌ಗೂ ಹೃದಯ ಸಂಬಂಧಿ ಸಮಸ್ಯೆ ಇದೆ ಅಂತ ತಿಳಿದು ಅವರ ಆರೋಗ್ಯಕ್ಕಾಗಿ ಸಹಾಯ ಹಾಗೂ ಕೆಲಸ ಕೊಡಿಸುವುದಾಗಿ ಹೇಳಿದರು. ಸರ್ಕಾರದಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದಡಿ ಬರುವ 8 ಲಕ್ಷ ರೂಪಾಯಿ ಪರಿಹಾರವನ್ನ ಅದಷ್ಟು ಬೇಗ ಕೊಡಿಸುತ್ತೇನೆ. ವೈಯುಕ್ತಿಕವಾಗಿ ಅರ್ಥಿಕವಾಗಿಯೂ ಸಹ ಕುಟುಂಬದ ಜೊತೆ ನಿಲ್ಲುವುದಾಗಿ ತಿಳಿಸಿದರು.

    ಎಫ್‌ಐಆರ್‌ನಲ್ಲಿ ಸಂಸದ ಸುಧಾಕರ್ ಹೆಸರು ಸೇರ್ಪಡೆಗೆ ಬಿಜೆಪಿ ನಾಯಕರ ಅಕ್ಷೇಪಕ್ಕೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ. ಗೌರಿಬಿದನೂರಿಗೆ ಬಂದು ಸುದ್ದಿಗೋಷ್ಟಿ ಮಾಡುವ ಬದಲು ಬಾಬು ಮನೆಗೆ ಬಂದು ಕಣ್ಣೀರು ಒರೆಸಬಹುದಿತ್ತಲ್ಲ? ಸಂಸದ ಸುಧಾಕರ್ ಅವರೇ, ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ಲ ಅಂದ್ರೆ ನಿಮ್ಮದೇ ಕೇಂದ್ರ ಸರ್ಕಾರ ಇದೆಯಲ್ಲ. ಸಿಬಿಐ ತನಿಖೆ ಮಾಡಿಸಿ ಆರೋಪದಿಂದ ಮುಕ್ತರಾಗಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

    ಮಗನ ನೆನೆದು ಕುಟುಂಬಸ್ಥರು ಶಾಸಕರ ಎದುರು ಕಣ್ಣೀರಿಟ್ಟರು. ಬಿಜೆಪಿಯವರು ಆರೋಪ ಮಾಡಿದಂತೆ ನಾವು ಯಾರು ಕೂಡ ಒತ್ತಡದಿಂದ ದೂರು ದಾಖಲಿಸಿಲ್ಲ. ನಮ್ಮ ಮಗ ಬರೆದಿರುವ ಡೆತ್‌ನೋಟ್ ಆಧಾರದ ಮೇಲೆಯೇ ದೂರು ನೀಡಿದ್ದೇವೆ. ರಾಜಕಾರಣಕ್ಕೂ ನಮಗೂ ಸಂಬಂಧ ಇಲ್ಲ ಎಂದು ಮೃತ ಬಾಬು ತಾಯಿ ಕಾಳಮ್ಮ ಸ್ಪಷ್ಟಪಡಿಸಿದ್ದಾರೆ.

  • ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

    ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ.

    ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. A1 ಸಂಸದ ಡಾ.ಕೆ.ಸುಧಾಕರ್, a2 ನಾಗೇಶ, a3 ಮಂಜುನಾಥ್. ಬಿಎನ್‌ಎಸ್ 2023 ( u/s 108, 352. 351(2), (3)(5) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ಆಗಿದೆ.

  • 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಸಿಎಇ ಅವರ ಕಾರು ಚಾಲಕ ಬಾಬು ಆತ್ಮಹತ್ಯೆ (Suicide) ಮಾಡಿಕೊಳ್ಳುವ ಮುನ್ನ ಡೆತ್‌ನೋಟ್‌ (Death Note) ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು.

    ಜಿಲ್ಲಾ ಪಂಚಾಯತ್‌ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್‌ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನ ಸರ್ಕಾರಿ ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ಡಾ ಕೆ ಸುಧಾಕರ್ (K Sudhakar) ಕಾರಣ ಎಂದು ಉಲ್ಲೇಖಿಸಿದ್ದಾರೆ.

    ಘಟನೆ ಸಂಬಂಧ ತನಿಖೆಗಿಳಿದ ಪೊಲೀಸರು ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು ಇತ್ತ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ಡೆತ್‌ ನೋಟ್‌ನಲ್ಲಿ ಏನಿದೆ?
    ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ. ಮೊದಲ ಪುಟದ ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ ಕೆ ಸುಧಾಕರ್, ನಾಗೇಶ್, ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್‌ಡಿ ಮಂಜುನಾಥ್ ಹೆಸರನ್ನ ಬರೆಯಲಾಗಿದೆ. ಸುಧಾಕರ್‌ಗೆ ಹೇಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಾಗೇಶ್ 25 ಲಕ್ಷ ರೂ. ಹಣ ಪಡೆದು ಪಡೆದುಕೊಂಡಿದ್ದಾನೆ. ಆದರೆ ನನಗೆ ಕೆಲಸವೂ ಸಿಕ್ಕಿಲ್ಲ. ಹಣವು ಸಿಕ್ಕಿಲ್ಲ ಎಂದು ಬರೆಯಲಾಗಿದೆ.

    ಈ ಪತ್ರದ ಫೋಟೋವನ್ನು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದಾರೆ. ಈ ಡೆತ್‌ ನೋಟ್‌ ನೋಡಿ ಅವರು ಕಚೇರಿ ಬಳಿ ಆಗಮಿಸುವಷ್ಟರಲ್ಲೇ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

     

    ಸಂಬಂಧಿಕರ ಗೋಳಾಟ
    ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತನ ಪತ್ನಿ ಶಿಲ್ಪಾ ಹಾಗೂ ಸಹೋದರ ಲೋಕೇಶ್ ಸೇರಿದಂತೆ ತಾಯಿ ಕಾಳಮ್ಮ ಆಕ್ರಂದನ ಮುಗಿಲುಮುಟ್ಟಿದೆ. ಸಭೆಯಿದೆ ಎಂದು ಹೇಳಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟ್ಟಿದ್ದರು. ಆದರೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು. ಅಣ್ಣ ಸರ್ಕಾರಿ ಕೆಲಸಕ್ಕೆ ಹಣ ನೀಡಿದ್ದು ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖವಾದ ವಿಚಾರದ ಬಗ್ಗೆ ನಮಗೇನು ಸರಿಯಾಗಿ ತಿಳಿದಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪ್ರತಿಭಟನೆ
    ಘಟನೆ ನಡೆದ ಬೆನ್ನಲ್ಲೇ ಸಕ್ರೀಯವಾಗಿರುವ ಕಾಂಗ್ರೆಸ್ ಮುಖಂಡರು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಮಾಯಕನ ಸಾವಿಗೆ ಕಾರಣರಾವಾಗಿರುವ ಸಂಸದ ಸುಧಾಕರ್ ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ನಾಗೇಶ್ ಹಾಗೂ ಮಂಜುನಾಥ್ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಸುಧಾಕರ್ (K.Sudhakar) ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ (Chikkaballapur) ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡಲ್ಲ; ಕರ್ನಾಟಕದ ಮತಗಳ್ಳತನಕ್ಕೆ ಸಾಕ್ಷಿ ಇದೆ – ಪ್ರಿಯಾಂಕ್ ಖರ್ಗೆ

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ. ಅವುಗಳಲ್ಲಿ ಸಂಸದ ಸುಧಾಕರ್ ಮೇಲೆ ಆರೋಪ ಮಾಡಿದ್ದಾರೆ. ಎಂಪಿ ಅವರ ಅನುಯಾಯಿ ನಾಗೇಶ್, ಮಂಜುನಾಥ್ ಕಾರಣ ಅಂತ ಪತ್ರ ಬರೆದಿದ್ದಾರೆ. ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

    ಇದು ಗಂಭೀರ ಆರೋಪ. ಕೆಲಸ ಕೊಡಿಸೋದಾಗಿ ಹಣ ಪಡೆದಿದ್ದಾರೆ. ಇದು ಸಂಪೂರ್ಣ ತನಿಖೆ ಆಗಬೇಕು. ಕಾನೂನು ರೀತಿ ಕ್ರಮ ತೆಗೆದುಕೊಳ್ತೀವಿ. ಡೆತ್‌ನೋಟ್‌ನಲ್ಲಿ ಎಂಪಿ ಸುಧಾಕರ್ ಅವರ ಹೆಸರು ಇದೆ. ತನಿಖೆ ಆಗಲಿ. ಅವರ ಕುಟುಂಬದವರು ಏನು ಹೇಳುತ್ತಾರೆ ಅದೆಲ್ಲದರ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗುತ್ತದೆ. ಚಾಲಕ ಬಾಬು ಎಸ್‌ಸಿ ಸಮುದಾಯಕ್ಕೆ ಸೇರಿದ ಯುವಕ. ಸಮಗ್ರ ತನಿಖೆ ಆಗುತ್ತದೆ. ರಾಜಕೀಯ ಒತ್ತಡ ಇಲ್ಲದೆ ತನಿಖೆ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು – ಪ್ರಿಯಾಂಕ್ ಖರ್ಗೆ

  • ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ (K. Sudhakar) ಹೆಸರನ್ನು ಡೆತ್‌ನೋಟ್‌ನಲ್ಲಿ (Death Note) ಉಲ್ಲೇಖಿಸಿ ಕಾರು ಚಾಲಕರೊಬ್ಬರು (Car Driver) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ.

    ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

  • ಪಿಎಲ್‍ಡಿ ಬ್ಯಾಂಕ್ ಚುನಾವಣೆ – ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ

    ಪಿಎಲ್‍ಡಿ ಬ್ಯಾಂಕ್ ಚುನಾವಣೆ – ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ

    – ಪ್ರದೀಪ್ ಈಶ್ವರ್, ಎಂ.ಸಿ ಸುಧಾಕರ್, ಮಾಜಿ ಶಾಸಕ ಬಚ್ಚೇಗೌಡ ವಿರುದ್ಧ ವಾಗ್ದಾಳಿ

    ಚಿಕ್ಕಬಳ್ಳಾಪುರ: ಸಂಸದ ಡಾ.ಕೆ ಸುಧಾಕರ್ ಹಾಗೂ ಸಚಿವ ಎಂ.ಸಿ ಸುಧಾಕರ್ ಸೇರಿದಂತೆ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನಡುವೆ ಪ್ರತಿಷ್ಠೆಯಾಗಿ ತೀವ್ರ ಕೂತೂಹಲ ಮೂಡಿಸಿದ್ದ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ (PLD Bank Election) ಸಂಸದ ಸುಧಾಕರ್ (K Sudhakar) ಬೆಂಬಲಿಗರು ಭರ್ಜರಿ ಜಯಭೇರಿ ಬಾರಿಸಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕು ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿನ 13 ನಿದೇರ್ಶಕರ ಸ್ಥಾನಗಳ ಪೈಕಿ 5 ಕ್ಷೇತ್ರಗಳಿಗೆ ಅವಿರೋಧವಾಗಿ ಆಯ್ಕೆಯಾಗಿತ್ತು. ಅದರಲ್ಲಿ ಸಂಸದ ಸುಧಾಕರ್ ಬೆಂಬಲಿತರೇ ಆಯ್ಕೆಯಾಗಿದ್ರು. ಒಬ್ರು ಕಾಂಗ್ರೆಸ್ ಬೆಂಬಲಿಸಿದ್ರು. ಇನ್ನೂ ಉಳಿದ 7 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನ್ಯಾಯಾಲಯದ ತಡೆಯಾಜ್ಞೆ ಮೇರೆಗೆ ನಂದಿ ಕ್ಷೇತ್ರದ ಫಲಿತಾಂಶ ತಡೆಹಿಡಿಯಲಾಗಿದೆ. ಉಳಿದ 6 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿ ಆರು ಕ್ಷೇತ್ರಗಳಲ್ಲೂ ಸಂಸದ ಸುಧಾಕರ್ ಬೆಂಬಲಿತರೇ ಗೆದ್ದು ಬೀಗಿದ್ದಾರೆ. ಹೀಗಾಗಿ ಫಲಿತಾಂಶದ ನಂತರ ಸಂಸದ ಸುಧಾಕರ್ ಪಿಎಲ್‍ಡಿ ಬ್ಯಾಂಕ್ ವರೆಗೂ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಾತನಾಡಿದ ಸಂಸದ ಸುಧಾಕರ್, ಇದೊಂದು ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದಾರೆ. ಎನ್‍ಡಿಯ ಮೈತ್ರಿ ಕೂಟದಿಂದ ರೈತರ ಅಭಿವೃದ್ಧಿ ಅಂತ ರೈತರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎಂದರು.

    ರಾಜ್ಯ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ವಾಗ್ದಾಳಿ:
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನ ಭ್ರಮನಿರಸನಗೊಂಡಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ನಾನು ಮಾಡಿದ ಕೆಲಸಗಳಿಗೆ ಫೈಂಟ್ ಬಳಿಯುವ ಕೆಲಸ ಮಾಡಿ ಉದ್ಗಾಟನೆ ಮಾಡೋದು ಬಿಟ್ಟು ಹೊಸ ಕೆಲಸ ಮಾಡುತ್ತಿಲ್ಲ. ರೈತರು ಎಲ್ಲಿ ಹೋದರೂ ಪ್ರೈಸ್ ಟ್ಯಾಗ್ ಇಟ್ಟಿದ್ದಾರೆ. ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯುತ್ ಲೋಡ್ ಶೆಡ್ಡಿಂಗ್ ಆರಂಭಿಸಿದ್ದಾರೆ, ಕರ್ನಾಟಕ ಕಾಂಗ್ರೆಸ್ ಆಡಳಿತದಿಂದ ಬೇಸತ್ತಿದ್ದಾರೆ. ಅದರ ಫಲಿತಾಂಶವೇ ಇಂದಿನ ಚುನಾವಣೆಯ ಜಯ ಎಂದು ಬಣ್ಣಿಸಿದರು.

    ಪ್ರದೀಪ್ ಈಶ್ವರ್-ಮಾಜಿ ಶಾಸಕ ಕೆಪಿ ಬಚ್ಚೇಗೌಡ ವಿರುದ್ದ ವಾಗ್ದಾಳಿ.
    ಇನ್ನೂ ಚುನಾವಣೆಯಲ್ಲಿ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರು ಅಧಿಕೃತವಾಗಿ ಸೇರ್ಕೊಂಡು ತಂಡ ಮಾಡಿಕೊಂಡು ಫೀಲ್ಡ್‌ಗೆ ಇಳಿದ್ರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಧಿಕೃತವಾಗಿ ರಾತ್ರೋರಾತ್ರಿ ತಂಡ ಮಾಡ್ಕೊಂಡು ನನ್ನ ಸೋಲಿಗೆ ಕಾರಣರಾದರು. ಆದ್ರೆ ಈಗ ಅವರು ಹಾಗೆ ಗಟ್ಟಿಯಾಗಿರಲಿ ಆಗ ಜನ ನಮಗೆ ಒಳ್ಳೆ ರೀತಿಯಲ್ಲಿ ಆರ್ಶೀವಾದ ಮಾಡ್ತಾರೆ. ಬಚ್ಚೇಗೌಡರೇ ಎಲ್ಲರಿಗಿಂತ ಅತಿಯಾದ ಸಂತೋಷ ನಿಮ್ಮ ತಂದೆಯವರಾದ ದಿವಂಗತ ಕೆ.ಬಿ ಪಿಳ್ಳಪ್ಪನವರು ಪಟ್ಟಿರ್ತಾರೆ. ಕೆ.ಬಿ ಪಿಳ್ಳಪ್ಪನವರು ಸದಾ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದವರು. ಆದ್ರೆ ನೀವು ಕಾಂಗ್ರೆಸ್ ಜೊತೆ ಕೈ ಜೋಡಿಸಿ ನನ್ನ ಸೋಲಿಸುವ ಪಾಪದ ಕೆಲಸ ಮಾಡಿದ್ರೀ ಅಂತ ಆಕ್ರೋಶ ಹೊರ ಹಾಕಿದ್ರು.

    ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ವಾಗ್ದಾಳಿ:
    ಮಹಾಭಾರತದಲ್ಲಿ ಧರ್ಮದಿಂದ ಯುದ್ಧ ಗೆಲ್ಲುವಂತೆ ಶ್ರೀಕೃಷ್ಣಪರಮಾತ್ಮ ಹೇಳಿದ್ರು. ಸೂರ್ಯ ಮುಳುಗಿದ ಮೇಲೆ ಯುದ್ದ ಮಾಡಬೇಡಿ ಅಂದಿದ್ರು. ಆದ್ರೆ ನೀವು ರಾತ್ರಿ ಆದ ಮೇಲೆ ನಮ್ಮ ಅಭ್ಯರ್ಥಿ ಅಪಹರಿಸಿ ನಿಮ್ಮ ಅಭ್ಯರ್ಥಿ ನಾಮಿನೇಷನ್ ವಾಪಾಸ್ ಪಡೆದ್ರಿ ಇಂತಹ ರಾಜಕಾರಣ ಮಾಡಬೇಕಾ..? ಜಿಲ್ಲಾ ಉಸ್ತುವಾರಿ ಸಚಿವರು ಅವರ ಮನೆಗೆ ಹೋಗಿ ಆಸೆ ಆಮಿಷಗಳನ್ನ ಬೆದರಿಕೆ ಕೊಟ್ಟು ಕರ್ಕೊಂಡ್ರಲ್ಲ. ಚಿಕ್ಕಬಳ್ಳಾಪುರ ಅಷ್ಟು ಸುಲಭ ಅಲ್ಲ ಏನೋ ಅನ್ಕೊಬಿಟ್ಟಿದ್ರಾ ಸುಧಾಕರ್? ನಿಮ್ಮತ್ರ ಯಾರೋ ಕೆಲ ಭಟ್ಟಂಗಿಗಳು ನನ್ನತ್ರ ಲಾಭ ತಗೊಂಡು ನಿನ್ನತ್ರ ಬಂದವರಲ್ಲ, ಅವ್ರಿಂದ ರಾಜಕಾರಣ ಆಗಲ್ಲ, ಅವರು ಲಾಭ ಮಾಡಿಕೊಳ್ಳೋಕೆ ಬಂದಿರೋ ದಲ್ಲಾಳಿಗಳು, ಪೊಲೀಸರು ಅಧಿಕಾರಿಗಳ ಮಧ್ಯೆ ಲಾಭ ಮಾಡಿಕೊಳ್ಳೋಕೆ ಬಂದಿರೋವರು ಅಂತ ಆಕ್ರೋಶ ಹೊರಹಾಕಿದರು.

  • ವಿಜಯೇಂದ್ರ ಬಗ್ಗೆ ಮಾತನಾಡಿದ್ರೆ ನಾವ್ ಸುಮ್ನೆ ಇರಲ್ಲ – ಸುಧಾಕರ್ ವಿರುದ್ಧ ಸಿಡಿದ ಬಿವೈವಿ ಬೆಂಬಲಿಗರು

    ವಿಜಯೇಂದ್ರ ಬಗ್ಗೆ ಮಾತನಾಡಿದ್ರೆ ನಾವ್ ಸುಮ್ನೆ ಇರಲ್ಲ – ಸುಧಾಕರ್ ವಿರುದ್ಧ ಸಿಡಿದ ಬಿವೈವಿ ಬೆಂಬಲಿಗರು

    ಚಿಕ್ಕಬಳ್ಳಾಪುರ: ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಚಾರದಲ್ಲಿ ಸಂಸದ ಸುಧಾಕರ್ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಬಿ.ವೈ ವಿಜಯೇಂದ್ರ ಬೆಂಬಲಿಗರು ಈಗ ಸಂಸದ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿಯ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು, ಸಂಸದ ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ. ವಿಜಯೇಂದ್ರ ಬಗ್ಗೆ ಮಾತನಾಡಿದ್ರೆ ನಾವ್ ಸುಮ್ನೆ ಇರಲ್ಲ ಅಂತ ಎಚ್ಚರಿಕೆ ಕೊಟ್ಟಿದ್ದಾರೆ.

    ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ ಸಂದೀಪ್ ರೆಡ್ಡಿ:
    ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಚಾರ ರಾಜ್ಯಮಟ್ಟದಲ್ಲಿ ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರ ಬೆನ್ನಲ್ಲೇ ಸಂದೀಪ್ ರೆಡ್ಡಿ ನಿನ್ನೆಯಷ್ಟೇ ಸಂಸದ ಸುಧಾಕರ್ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಸುಧಾಕರ್ ಇಲ್ಲದ ಕಾರಣ ಸುಖಾಸುಮ್ಮನೆ ವಾಪಾಸ್ಸಾಗಿದ್ದರು.

    ಇಂದು ಅಮಾವಾಸ್ಯೆ ಪೂಜೆ ಅಂಗವಾಗಿ ಚಿಕ್ಕಬಳ್ಳಾಪುರದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳು ಆಗಮಿಸಿದ್ದರು. ಈ ವೇಳೆ ಪೂಜೆಯಲ್ಲಿ ನೂತನ ಆಧ್ಯಕ್ಷ ಸಂದೀಪ್ ರೆಡ್ಡಿ ಭಾಗಿಯಾಗಿ ಶ್ರೀಗಳ ಆರ್ಶೀವಾದ ಪಡೆದರು. ಇದೇ ವೇಳೆ ಮಾತನಾಡಿದ ಸಂದೀಪ್ ರೆಡ್ಡಿ ಎಲ್ಲ ಭಿನ್ನಾಭಿಪ್ರಾಯಗಳನ್ನ ಮರೆತು ಭಿನ್ನರ ಜೊತೆ ಮಾತುಕತೆ ಮಾಡಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.

    ಭಿನ್ನಮತ ಶಮನಕ್ಕೆ ಹೈಕಮಾಂಡ್‌ಗೆ ಮನವಿ:
    ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಚಾರ ಚಿಕ್ಕಬಳ್ಳಾಪುರ ಬಿಜೆಪಿ ಪಾಳಯ ಸೇರಿ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿದೆ. ಸಂಸದ ಸುಧಾಕರ್ ರನ್ನ ಕಡೆಗಣಿಸಿ ಬಿ.ವೈ ವಿಜಯೇಂದ್ರ ಸಂದೀಪ್ ರೆಡ್ಡಿ ನೇಮಕ ಮಾಡಿದ್ದಾರೆ ಅಂತ ಸಂಸದ ಸುಧಾಕರ್ ಆಕ್ರೋಶದ ಬೆನ್ನಲ್ಲೇ ಅವರ ಬೆಂಬಲಿಗರು ಬಿ.ವೈ ವಿಜಯೇಂದ್ರ ವಿರುದ್ಧ ಕೆಂಡಕಾರಿದ್ರು.

    ಎರಡು ಬಣದವರು ನಾವಾ ನೀವಾ ಅಂತ ಟಾಕ್ ವಾರ್ ಶುರು ಮಾಡಿದ್ದಾರೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಪಕ್ಷದಲ್ಲಿ ಗೊಂದಲವೋ ಗೊಂದಲ ಎಂಬಂತಾಗಿದೆ, ಇದ್ರಿಂದ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ಸ್ಫರ್ಧಿಸಿದ್ದ ಪರಾಜಿತ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಗೊಂದಲದಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಬಿಜೆಪಿ ಹಿರಿಯ ನಾಯಕರು ತಕ್ಷಣ ಭಿನ್ನಮತ, ಗೊಂದಲಗಳನ್ನ ಬಗೆಹರಿಸಬೇಕು, ಇಲ್ಲವಾದ್ರೆ ಸಮಸ್ಯೆ ಉಲ್ಬಣವಾಗುತ್ತದೆ ಎಂದು ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡಿದ್ರು.

  • ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಾರ್ಟಿ ಶುದ್ಧವಾಗಲಿ – ಸುಧಾಕರ್‌ ವಿರುದ್ಧ ಎಸ್‌.ಆರ್‌ ವಿಶ್ವನಾಥ್‌ ಕೆಂಡ

    ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಾರ್ಟಿ ಶುದ್ಧವಾಗಲಿ – ಸುಧಾಕರ್‌ ವಿರುದ್ಧ ಎಸ್‌.ಆರ್‌ ವಿಶ್ವನಾಥ್‌ ಕೆಂಡ

    – ಕಾಂಗ್ರೆಸ್‌ ಪರ ಕೆಲಸ ಮಾಡಿಲ್ಲ ಅಂತ ಪ್ರಮಾಣ ಮಾಡಿ; ಸವಾಲ್‌

    ಬೆಂಗಳೂರು: ರಾಜ್ಯ ಬಿಜೆಪಿಯ (BJP) ಆತಂಕರಿಕ ಕಲಹ ಈಗ ಬೀದಿ ರಂಪವಾಗಿದೆ. ಬಿ.ವೈ ವಿಜಯೇಂದ್ರ ನಾಯಕತ್ವದ ವಿರುದ್ಧ ಆಕ್ರೋಶ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಜಿಲ್ಲಾಧ್ಯಕ್ಷರ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಬಿಜೆಪಿ ಮನೆಯ ಚಿತ್ರಣವೇ ಬದಲಾಗಿದೆ. ಬಿಜೆಪಿ ಬಂಡಾಯದ ಬೆಂಕಿಗೆ ಏಕಪಕ್ಷೀಯವಾಗಿ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದು ತುಪ್ಪ ಸುರಿದಂತಾಗಿದೆ. ಈ ನಡುವೆ ಸಂಸದ ಡಾ.ಕೆ ಸುಧಾಕರ್‌ ಕೂಡ ತಿರುಗಿಬಿದ್ದಿದ್ದಾರೆ. ಈ ಬೆನ್ನಲ್ಲೇ ಶಾಸಕ ಎಸ್‌.ಆರ್‌ ವಿಶ್ವನಾಥ್‌ (SR Vishwanath) ತಿರುಗೇಟು ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಧಾಕರ್ ರಾಜ್ಯಾಧ್ಯಕ್ಷರ ಬಗ್ಗೆ ಹಗುರ ಮಾತಾಡಿರೋದು ನನಗೆ ಹಿಡಿಸಲಿಲ್ಲ. ಈ ಹಿಂದೆಯೂ ನನ್ನ ಬಗ್ಗೆ ಅವರು ಮಾತನಾಡಿದ್ದಾರೆ. ನಾನೇನು ದಡ್ಡ ಅಲ್ಲ, ನನಗೂ ಅರ್ಥ ಆಗುತ್ತೆ. ಅವರಿಂದ ಸರ್ಕಾರ ರಚನೆ ಆಗಿರಬಹುದು, ಆದ್ರೆ 17 ಜನರಲ್ಲಿ ಕೊನೆಯದಾಗಿ ಬಂದವರು ಸುಧಾಕರ್‌. ಅವರ ಮೇಲೆ ವಿಧಾನಸೌಧದಲ್ಲಿ ಹಲ್ಲೆ ನಡೆದಾಗ ನಾನೇ ಹೋಗಿ ಬಚಾವ್‌ ಮಾಡಿದೆ ಎಂದು ಹೇಳಿದ್ದಾರೆ.

    ಸುಧಾಕರ್ (K Sudhakar) ಕೋವಿಡ್ ನಿರ್ವಹಿಸಿದ್ರು, ಸಮರ್ಥ ಸಚಿವ ಆಗಿದ್ದವರು. ಸಮರ್ಥ ಸಚಿವ ಅನಿಸಿಕೊಂಡ ಮೇಲೆ ಚಿಕ್ಕಬಳ್ಳಾಪುರ ಯಾಕೆ ಸೋತ್ರಿ? ಚಿಕ್ಕಬಳ್ಳಾಪುರದಲ್ಲಿ ಒಳ್ಳೇ ಕೆಲಸ ನೀವು ಮಾಡಿದ್ರೆ ಜನ ಯಾಕೆ ನಿಮ್ಮನ್ನ ಸೋಲಿಸ್ತಿದ್ರು? ಎಂಪಿ ಸ್ಥಾನದ ಟಿಕೆಟ್ ಸಿಗಲ್ಲ ಅಂತಾದಾಗ ಏನೇನು ಮಾತಾಡಿದ್ರಿ? ಕಾಂಗ್ರೆಸ್‌ನವರ ಜೊತೆ ಆಗ ನೀವು ಮಾತಾಡಲಿಲ್ಲವಾ? ಆಗ ನಿಮಗೆ ಪಕ್ಷ ನಿಷ್ಠೆ ಇತ್ತಾ? ನೀವು ಕಾಂಗ್ರೆಸ್‌ ಜೊತೆಗೆ ಮಾತಾಡಲಿಲ್ಲ ಅಂದ್ರೆ ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡ್ತೀನಿ ಅಂತ ಸುಧಾಕರ್‌ಗೆ ಸವಾಲ್‌ ಹಾಕಿದ್ದಾರೆ.

    ಇನ್ನೂ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರ ಕುರಿತು ಮಾತನಾಡಿದ ಶಾಸಕರು, ಜಿಲ್ಲೆಗೆ ತಲಾ ಮೂರು ಹೆಸರು ಕಳಿಸಲಾಗಿತ್ತು. ಈ ಪೈಕಿ ಸಂದೀಪ್ ರೆಡ್ಡಿ ಆಯ್ಕೆ ಆಗಿದ್ದಾರೆ. ಅವರು ನಿನ್ನ ಬಂಧುವೂ ಅಲ್ಲ, ನನ್ನ ಸಂಬಂಧಿಯೂ ಅಲ್ಲ. ಏನ್ ತೀರ್ಮಾನ ತಗೋತೀರಿ, ಪಕ್ಷ ಬಿಡ್ತೀರಾ? ನಿನಗೆ ತಾಕತ್ತಿದ್ದರೆ ಪಕ್ಷ ಬಿಟ್ಟು ಚುನಾವಣೆಗೆ ಬಾ.. ನಮ್ಮ ಬಗ್ಗೆ, ಯಲಹಂಕ ಕಾರ್ಯಕರ್ತರ ಬಗ್ಗೆ ಗೌರವ ಇಟ್ಕೊಂಡು ಮಾತಾಡು… ಅದನ್ನು ಬಿಟ್ಟು ನಮ್ಮ ಕ್ಷೇತ್ರದಲ್ಲಿ ಮುಖಂಡರನ್ನ ಎತ್ತಿ ಕಟ್ಟೋ ಕೆಲಸ ಮಾಡಬೇಡ ಅಂತ ಸುಧಾಕರ್ ವಿರುದ್ಧ ಏಕವಚನದಲ್ಲಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

    ಪಕ್ಷದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ವರಿಷ್ಠರ ಬಳಿ ಮಾತಾಡಬೇಕು. 40 ವರ್ಷದಿಂದ ಪಕ್ಷದಲ್ಲಿದ್ದವರು ನಾವು, ನಾವೇ ಸುಮ್ನಿದೀವಿ. ಬಾಗೇಪಲ್ಲಿ, ಹೊಸಕೋಟೆ, ದೇವನಹಳ್ಳಿಯಲ್ಲಿ ನೀನು ಕಾಂಗ್ರೆಸ್‌ಪರ ಕೆಲಸಮಾಡಿದ್ದೀಯ. ಬಿಜೆಪಿ ಪಕ್ಷ ತಾಯಿ ಇದ್ದ ಹಾಗೆ. ಇದ್ದರೆ ಪಕ್ಷದಲ್ಲಿ ಇರು, ಇಲ್ಲ ಹೋಗು. ಕಾಂಗ್ರೆಸ್‌ಗೆ ಹೋದ್ರೇ ಸ್ಥಾನಮಾನ ಸಿಕ್ಕಿಬಿಡುತ್ತಾ? ನಿಮ್ಮ ದುರಹಂಕಾರದಿಂದ ಪಕ್ಷ ಅಧಿಕಾರಕ್ಕೆ ಬರದಂತೆ ಮಾಡಿದ್ದು ನೀವು ಎಂದು ಲೇವಡಿ ಮಾಡಿದ್ದಾರೆ.

    ಮುಂದುರಿದು… ಬೇಕಿದ್ದರೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಾನು ಗೆಲ್ಲಿಸಿ ತೋರಿಸ್ತೀನಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ನೀನು ಗೆದ್ದಿದ್ದು ಸುಧಾಕರ್ ಹೆಸರಿಂದಲ್ಲ. ಮೋದಿ ಹೆಸರಿಂದ, ಅದಕ್ಕೆ ಜೆಡಿಎಸ್ ಬೆಂಬಲ ಕೊಡ್ತು. ನೀನು ಕಾಂಗ್ರೆಸ್‌ನಲ್ಲಿದ್ದಾಗ ನಾವು ಗೆಲ್ಲಲಿಲ್ವಾ ಅಲ್ಲಿ? ಇನ್ನೊಂದು ಚಕಾರ ಎತ್ತಬಾರದು ನೀನು.. ನನ್ನ ತಂಟೆಗೆ ಬರಬೇಡ. ಹೋಗುವ ಹಾಗಿದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಕ್ಷ ಶುದ್ಧವಾಗಲಿ, ಹೋಗೋರೆಲ್ಲ ಹೋಗಲಿ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಇದೇ ವೇಳೆ‌ ಶಾಸಕ ಯತ್ನಾಳ್‌ಗೂ ಟಾಂಗ್‌ ಕೊಟ್ಟರು. ನೀವು ಹಿರಿಯರು, ಯಾಕೆ ಹೀಗೆಲ್ಲ ಮಾತಾಡ್ತೀರಿ? ನಿಮ್ಮ ಹಿಂದೆ ಯಾರಿದ್ದಾರೆ? ಬನ್ನಿಮಾತಾಡೋಣ, ವೈಯಕ್ತಿಕ ಹೇಳಿಕೆ ಎಲ್ಲ ಬೇಡ. ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ರೆ ಮಾಡ್ಕಳಿ, ಆದ್ರೆ ಬಹಿರಂಗ ಎಲ್ಲ ಯಾಕೆ ಮಾತಾಡ್ತೀರಿ? ಬಿಜೆಪಿಗೆ ಬರೋದು ಬಂದಿದ್ದೀರಿ, ವಾಪಸ್ ಹೋಗೋ ಯೋಚನೆ ಬೇಡ. ಪಕ್ಷ ಬಿಟ್ ಹೋದವರು ಯಾರೂ ಸಕ್ಸಸ್ ಆಗಿಲ್ಲ ಇದು ನಿಮಗೂ ಅನ್ವಯ, ಸುಧಾಕರ್‌ಗೂ ಅನ್ವಯ ಎಂದು ನುಡಿದಿದ್ದಾರೆ.

  • ಸಚಿವನಾಗಿದ್ದಾಗ ಮಾಡಬಾರದ್ದು ಮಾಡಿದ್ದೀಯಾ, ನಿನ್ನ ಬಂಡವಾಳ ಬಯಲು ಮಾಡ್ತೀನಿ – ಸುಧಾಕರ್‌ಗೆ ರೇಣುಕಾಚಾರ್ಯ ಟಾಂಗ್

    ಸಚಿವನಾಗಿದ್ದಾಗ ಮಾಡಬಾರದ್ದು ಮಾಡಿದ್ದೀಯಾ, ನಿನ್ನ ಬಂಡವಾಳ ಬಯಲು ಮಾಡ್ತೀನಿ – ಸುಧಾಕರ್‌ಗೆ ರೇಣುಕಾಚಾರ್ಯ ಟಾಂಗ್

    • ಸುಧಾಕರ್‌ದು ಐರನ್‌ ಲೆಗ್‌!
    • ಯತ್ನಾಳ್‌ ಹಿಂದೂನೇ ಅಲ್ಲ

    ದಾವಣಗೆರೆ: ನೀನು ಸಚಿವನಾಗಿದ್ದಾಗ ಮಾಡಬಾರದ್ದು ಮಾಡಿದ್ದೀಯಾ, ನಿನ್ನ ಬಂಡವಾಳ ಬಯಲು ಮಾಡ್ತೀನಿ ಎಂದು ಸಂಸದ ಸುಧಾಕರ್ (K.Sudhakar) ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ (M.P. Renukacharya) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ದಾವಣಗೆರೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷರ ವಿಜಯೇಂದ್ರ (B.Y Vijayendra) ವಿರುದ್ಧ ಮಾತಾಡಿದ್ದ ಡಾ.ಸುಧಾಕರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ನೀನು ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದು, ಸ್ಥಾನ ಕೊಡದಿದ್ದಕ್ಕೆ ಮುಂಬೈಗೆ ಹೋಗಿ ಬಂದೆ. ಬಿಜೆಪಿಗೆ ಬಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡೂ ಖಾತೆ ಬೇಕು ಎಂದು ಮುನಿಸಿಕೊಂಡು ಮನೆಯಲ್ಲಿ ಕೂತಿದ್ದೆ. ನಿನ್ನ ಥರ್ಡ್ ಕ್ಲಾಸ್ ರಾಜಕಾರಣ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

    ಸಚಿವನಾಗಿದ್ದಾಗ ಶಾಸಕರ ಕರೆ ಸ್ವೀಕಾರ ಮಾಡುತ್ತಿರಲ್ಲ. ನಾನು ಜಗಳ ಮಾಡಿ ಹೊನ್ನಾಳಿಗೆ 200 ಬೆಡ್ ಆಸ್ಪತ್ರೆ ತಂದೆ. ಯಡಿಯೂರಪ್ಪ ಅವರು ದಾವಣಗೆರೆಗೆ ಜಯದೇವ ಆಸ್ಪತ್ರೆ ಶಾಖೆ ಮಂಜೂರು ಮಾಡಿದ್ದರು. ಅದನ್ನ ರದ್ದು ಮಾಡಿದ್ದು ನೀನು. ಸಚಿವನಾಗಿದ್ದಾಗ ನೀನು ಮಾಡಬಾರದ್ದು ಮಾಡಿದ್ದೀಯಾ ನಿನ್ನ ಬಂಡವಾಳ ಬಯಲು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸುಧಾಕರ್ ಪಕ್ಷಕ್ಕೆ ಒಂದು ಐರನ್ ಲೇಗ್. ಇಂತಹ ವ್ಯಕ್ತಿಯಿಂದಲೇ ನಾವುಗಳು ಸೋತಿದ್ದು. ಇವರು ನಡೆದುಕೊಂಡ ರೀತಿಯಿಂದ ಬಿಜೆಪಿ ವಿಧಾನ ಸಭೆಯಲ್ಲಿ ಸೋತಿದೆ. ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಹುಷಾರ್ ಎಂದು ಎಚ್ಚರಿಸಿದ್ದಾರೆ.

    ಇನ್ನೂ ಯತ್ನಾಳ್ (Basangouda Patil Yatnal) ಅವರು ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಉಗುಳಿದ್ದು ಅವರ ಮೇಲೆ ಬೀಳುತ್ತದೆ. ಜೆಡಿಎಸ್‍ಗೆ ಯಾಕೆ ಹೋಗಿದ್ದೆ? ಟಿಪ್ಪು ಖಡ್ಗ ಹಿಡಿದು ಡ್ಯಾನ್ಸ್ ಮಾಡಿದ್ದೆ. ಎಲ್ಲರಿಗೂ ಬಿರಿಯಾನಿ ತಿನ್ನಿಸಿದ್ದೆ. ನೀವು ಹಿಂದೂನೇ ಅಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.