Tag: ಕೆ-ಸೆಟ್‌

  • ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೇ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

    ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    ವಸ್ತ್ರಸಂಹಿತೆ ಕಡ್ಡಾಯ:
    ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಿರಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ

    ಇದರಂತೆ, ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಜೊತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

    ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ: ಯಶ್‌ಪಾಲ್ ಸುವರ್ಣ

    ನಿಷೇಧಿತ ವಸ್ತುಗಳ ಪಟ್ಟಿ:
    ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪಣ ತೊಟ್ಟಿರುವ ಪರೀಕ್ಷಾ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್‌ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮೆಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜೊತೆಗೆ ಟೋಪಿ/ಮಾಸ್ಕ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಜ.6 ರಂದು ಎಕೆಬಿಎಂಎಸ್ ಮಹಿಳಾ ಸಮಾವೇಶ: ನಿರ್ಮಲಾ ಸೀತಾರಾಮನ್ ಉದ್ಘಾಟನೆ

  • ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ನಡೆಸುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ.

    ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆ.31ರಿಂದ ಬೆಂಗಳೂರು-ಶಿವಮೊಗ್ಗ ವಿಮಾನಯಾನ ಸೇವೆಗೆ ವಿದ್ಯುಕ್ತ ಚಾಲನೆ

    ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆ ದಿನ. ನವೆಂಬರ್ 5 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

    ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ. ಇದನ್ನೂ ಓದಿ: ಎರಡೂ ಕಡೆ ಬಾಗಿಲು ಇರುವ ಬಸ್ ಇದ್ದಂತೆ ನಮ್ಮ ಪಕ್ಷ: ಸಂತೋಷ್ ಲಾಡ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]