Tag: ಕೇಂದ್ರಿಯ ವಿಶ್ವವಿದ್ಯಾಲಯ

  • ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ

    ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ

    ಕಲಬುರಗಿ: ಜಿಲ್ಲೆಯಲ್ಲಿರುವ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.

    ದೆಹಲಿ ಮೂಲದ ವಿದ್ಯಾರ್ಥಿನಿಗೆ ಸ್ಥಳೀಯ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಯ ಮೆಸ್‍ನಲ್ಲಿ ಊಟ ಮಾಡುವ ವೇಳೆ 2 ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ. ಕೆಲದಿನಗಳ ಹಿಂದೆಯೂ ವಿದ್ಯಾರ್ಥಿಗಳ ಗುಂಪು ಕ್ಯಾಂಪಸ್‍ನಲ್ಲಿ ಪೂಜೆ ವಿಚಾರಕ್ಕೆ ದೊಡ್ಡ ಮಾರಾಮಾರಿಯೇ ಆಗಿತ್ತು. ಆ ಬಳಿಕ ಇದೀಗ ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    ಈ ಹಿಂದಿನ ಘಟನೆಯಿಂದ ವಿವಿ ಅಧಿಕಾರಿಗಳು ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಮತ್ತೊಂದು ಘಟನೆ ನಡೆದಿದೆ. ಇದರಿಂದ ಕರ್ನಾಟಕದ ಏಕೈಕ ಕೇಂದ್ರಿಯ ವಿಶ್ವವಿದ್ಯಾಲಯ ಜೆಎನ್‍ಯು ಯುನಿವರ್ಸಿಟಿ ಆಗುವತ್ತ ಮುಖ ಮಾಡಿದ್ಯಾ ಎಂಬ ಆತಂಕ ಕಾಡುತ್ತಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ ಎನ್ಐಎ

    Live Tv
    [brid partner=56869869 player=32851 video=960834 autoplay=true]