Tag: ಕೇಂದ್ರ ಆರೋಗ್ಯ ಸಚಿವಾಲಯ

  • ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

    ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

    – ಹೆಚ್ಚು ಕೊಬ್ಬು, ಹೆಚ್ಚು ಸಕ್ಕರೆ, ಎಣ್ಣೆ ಅಂಶವುಳ್ಳ ಪದಾರ್ಥಗಳ ಬಗ್ಗೆ ಜಾಗೃತಿ
    – ಫುಡ್ ಕೌಂಟರ್ ಪಕ್ಕದಲ್ಲೇ ವಾರ್ನಿಂಗ್ ಬೋರ್ಡ್, ದುಷ್ಪರಿಣಾಮಗಳ ಎಚ್ಚರಿಕೆ

    ನವದೆಹಲಿ: ಆರೋಗ್ಯಕ್ಕೆ ಹಾನಿಯುಂಟು ಮಾಡುವ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು (Union Health Ministry) ಇನ್ಮುಂದೆ ಸಮೋಸ (Samosa), ಜಿಲೇಬಿ (Jalebi) ಸೇರಿದಂತೆ ಇನ್ನಿತರೆ ತಿನಿಸುಗಳಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ಎಚ್ಚರಿಕೆ ನೀಡಲು ಮುಂದಾಗಿದೆ.

    ಕೇಂದ್ರ ಆರೋಗ್ಯ ಸಚಿವಾಲಯದ ಆದೇಶದ ಹಿನ್ನೆಲೆ ನಾಗ್ಪುರದ AIIMS (Nagpur AIIMS) ಸಂಸ್ಥೆಯ ತಜ್ಞರು ಭಾರತೀಯ ತಿಂಡಿಗಳ ಬಗ್ಗೆ ಅಧ್ಯಯನ ನಡೆಸಿದೆ. ಈ ವರದಿಯಲ್ಲಿ ಎಣ್ಣೆ ಮತ್ತು ಸಕ್ಕರೆ ಬಳಸಿ ತಯಾರಿಸುವ ತಿಂಡಿಗಳಲ್ಲಿ ಕೊಬ್ಬು ಮತ್ತು ಸಕ್ಕರೆಯ ಅಂಶ ಹೆಚ್ಚಾಗಿರುತ್ತದೆ. ಹೀಗಾಗಿ ಸಮೋಸ ಮತ್ತು ಜಿಲೇಬಿ ಪದೇ ಪದೇ ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕ. ಇದು ಹಲವು ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ತಿಳಿಸಿದೆ.ಇದನ್ನೂ ಓದಿ: ಇಹಲೋಕ ತ್ಯಜಿಸಿದ ʻಅಭಿನಯ ಸರಸ್ವತಿʼ – ಕನ್ನಡದ ಮೊದಲ ಮಹಿಳಾ ಸೂಪರ್ ಸ್ಟಾರ್‌ನ ಸಿನಿ ಪಯಣ ಹೇಗಿತ್ತು?

    ಈ ರೀತಿಯ ತಿನಿಸುಗಳನ್ನು ಅತೀ ಹೆಚ್ಚಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ. ಈಗಾಗಲೇ ಭಾರತದ ನಗರಗಳ 100 ಜನರ ಪೈಕಿ 5 ಜನರ ತೂಕ ಅತಿಯಾಗಿ ಹೆಚ್ಚಾಳವಾಗಿದೆ. ಇದರಿಂದ ಸಕ್ಕರೆ ಕಾಯಿಲೆ ಮತ್ತು ಹೃದಯ ಸಂಬಂಧಿ ಕಾಯಿಲೆಯನ್ನು ಹೆಚ್ಚಿಸುತ್ತದೆ. ಅಂದರೆ ತಿನ್ನಲೇಬಾರದು ಅಂತಿಲ್ಲ, ಆದರೆ ಇತಿಮಿತಿಯಲ್ಲಿ ಸೇವನೆ ಮಾಡಬೇಕು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಇಂತಹ ತಿನಿಸುಗಳನ್ನು ಪ್ರತಿನಿತ್ಯ ಸೇವನೆ ಮಾಡೋದ್ರಿಂದ ಆರೋಗ್ಯದಲ್ಲಿ ಸಮಸ್ಯೆ ಕಂಡುಬರುತ್ತದೆ. ಹೀಗಾಗಿ ಜಂಕ್ ಫುಡ್ ಕಡಿಮೆ ಮಾಡಿಕೊಂಡರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದೆ. ಹೀಗಾಗಿ ಸದ್ಯ ನಾಗ್ಪುರದಲ್ಲಿ ಜಂಕ್ ಫುಡ್ ತಿನ್ನೋದು ಆರೋಗ್ಯಕ್ಕೆ ಹಾನಿಕಾರಕ ಎಂಬ ಬೋರ್ಡ್ ಹಾಕುವ ಅಭಿಯಾನ ಶುರು ಮಾಡಲಾಗಿದೆ. ಜನಪ್ರಿಯ ಆಹಾರ ಮಳಿಗೆಗಳ ಪಕ್ಕದಲ್ಲಿ ಎಚ್ಚರಿಕೆ ಪೋಸ್ಟರ್‌ಗಳನ್ನು ಹಾಕಲಾಗಿದ್ದು, ಸಕ್ಕರೆ, ಕೊಬ್ಬಿನ ಬಗ್ಗೆ ಸ್ಪಷ್ಟ ಮಾಹಿತಿ ಹಾಗೂ ಪದೇ ಪದೇ ಸೇವನೆಯಿಂದ ದೀರ್ಘಕಾಲೀನ ಆರೋಗ್ಯ ಅಪಾಯಗಳನ್ನು ವಿವರಿಸುವ ಸಂದೇಶಗಳ ಉಲ್ಲೇಖಿಸಲಾಗಿದೆ.

    ಈ ಕ್ರಮಕ್ಕೆ ಕಾರಣವೇನು?
    ಭಾರತದಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗ ಸಮಸ್ಯೆ ತೀವ್ರವಾಗಿವೆ. ಹೀಗಾಗಿ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿದ್ದು, ಕರಿದ ಮತ್ತು ಸಕ್ಕರೆಯುಕ್ತ ತಿಂಡಿಗಳ ಸೇವನೆಯಿಂದ ಈ ಕಾಯಿಲೆಗಳಿಗೆ ಪ್ರಮುಖ ಕಾರಣ ಎಂದು ತಿಳಿಸಿದೆ.

    ಇದು ನಿಷೇಧವಲ್ಲ, ಆದರೆ ಮಿತವಾಗಿ ಸೇವಿಸಲು ಸೂಚಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ನಗರಗಳಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲು ಚಿಂತಿಸಿದ್ದು, ಸಿಗರೇಟ್ ಮೇಲೆ ಇರುವ ಹಾಗೆಯೇ ತಿನಿಸುಗಳ ಮೇಲೆಯೂ ದುಷ್ಪರಿಣಾಮಗಳ ಎಚ್ಚರಿಕೆ ನೀಡಲು ಮುಂದಾಗಿದೆ.ಇದನ್ನೂ ಓದಿ: ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ಜೀವನ ನಡೆಸಿ ನಮ್ಮನ್ನಗಲಿ ಹೊರಟಿದೆ – ಕಲಾ ಸರಸ್ವತಿಗೆ ಕಿಚ್ಚನ ನಮನ

  • ಹೆಚ್ಚುತ್ತಿರುವ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ- ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟ

    ಹೆಚ್ಚುತ್ತಿರುವ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ- ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟ

    ನವದೆಹಲಿ: ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹೆಚ್ಚುತ್ತಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಆರೋಗ್ಯ ಸಚಿವಾಲಯದಿಂದ (Union Health Ministry)ಮಾರ್ಗಸೂಚಿಯನ್ನು ಪ್ರಕಟಣೆ ಮಾಡಲಾಗಿದೆ.

    ಕೊಲ್ಕತ್ತಾದಲ್ಲಿ (Kolkata) ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಇದೀಗ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಕೇಂದ್ರದ ಅಧೀನದಲ್ಲಿರುವ ಸಂಸ್ಥೆಗಳಿಗೆ ಈ ಮಾರ್ಗಸೂಚಿ ಅನ್ವಯಿಸುತ್ತದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವ್ಹೀಲಿಂಗ್ ಪುಂಡರ ವಿರುದ್ಧ ಪೊಲೀಸರ ಸೈಲೆಂಟ್ ಸಮರ

    ಮಾರ್ಗಸೂಚಿಯಲ್ಲಿ ಏನಿದೆ?
    ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತೆಗೆದುಕೊಳ್ಳಬಹುದಾದ ಕ್ರಮಗಳ ಫಲಕ ಅಳವಡಿಸಬೇಕು. ಆಸ್ಪತ್ರೆಗಳಲ್ಲಿ ಕಾನೂನು ಕ್ರಮಗಳ ಕುರಿತು ಫಲಕ ಹಾಕಬೇಕು. ಇದನ್ನೂ ಓದಿ: ದರ್ಶನ್‌ಗೆ ಸಂಕಷ್ಟ ತಂದೊಡ್ಡುತ್ತಾ ಹೈದರಾಬಾದ್‌ ಎಫ್‌ಎಸ್‌ಎಲ್‌ ವರದಿ?

    ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಗುಣಮಟ್ಟದ ಸಿಸಿಟಿವಿ ಕ್ಯಾಮರ ಅಳವಡಿಸಬೇಕು. ಸಿಸಿಟಿವಿ ಕಂಟ್ರೋಲ್ ರೂಂ ಸ್ಥಾಪಿಸಬೇಕು. ದಿನದ 24 ಗಂಟೆಗಳು ಮಾನಿಟರ್ ಮಾಡಬೇಕು. ಇದನ್ನೂ ಓದಿ: ದರ್ಶನ್‌ಗೆ ಸಂಕಷ್ಟ ತಂದೊಡ್ಡುತ್ತಾ ಹೈದರಾಬಾದ್‌ ಎಫ್‌ಎಸ್‌ಎಲ್‌ ವರದಿ?

    ಸೂಕ್ತ ತರಬೇತಿ ಹೊಂದಿದ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು. ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಐಡಿಕಾರ್ಡ್ ತಪಾಸಣೆ ಮಾಡಬೇಕು. ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು. ಇದನ್ನೂ ಓದಿ: ಮಹಿಳೆ ನೇಣಿಗೆ ಶರಣು – ವರದಕ್ಷಿಣೆ ಕಿರುಕುಳ ಆರೋಪ

    ರೋಗಿಯ ಜೊತೆ ಒಬ್ಬರು ಅಥವಾ ಇಬ್ಬರಿಗೆ ಇರಲು ಅವಕಾಶ ಇರಬೇಕು. ಅಣಕು ಪ್ರದರ್ಶನದ ಮೂಲಕ ಆಗಾಗ ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಬೇಕು. ಇದನ್ನೂ ಓದಿ:  ಮಂತ್ರಾಲಯದಲ್ಲಿ ಭಾರೀ ಮಳೆ – ಮಠದ ಪ್ರಾಂಗಣದಲ್ಲೇ ಮಲಗಿದ ಭಕ್ತರು

    ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು. ರಾತ್ರಿ ಪಾಳಿಯಲ್ಲಿ ಮಹಿಳಾ ಸಿಬ್ಬಂದಿಗೆ ಅಗತ್ಯ ರಕ್ಷಣೆ ನೀಡಬೇಕು ಎಂಬ ಅಂಶಗಳನ್ನು ಒಳಗೊಂಡು ಪ್ರಕಟಣೆಯಲ್ಲಿದೆ.ಇದನ್ನೂ ಓದಿ: ಮಂತ್ರಾಲಯದಲ್ಲಿ ಭಾರೀ ಮಳೆ – ಮಠದ ಪ್ರಾಂಗಣದಲ್ಲೇ ಮಲಗಿದ ಭಕ್ತರ

  • ಮಾರ್ಚ್‌ ಅಂತ್ಯದ ವೇಳೆಗೆ H3N2 ಸೋಂಕು ಪ್ರಕರಣ ಕಡಿಮೆಯಾಗುತ್ತೆ – ಆರೋಗ್ಯ ಸಚಿವಾಲಯ

    ಮಾರ್ಚ್‌ ಅಂತ್ಯದ ವೇಳೆಗೆ H3N2 ಸೋಂಕು ಪ್ರಕರಣ ಕಡಿಮೆಯಾಗುತ್ತೆ – ಆರೋಗ್ಯ ಸಚಿವಾಲಯ

    ನವದೆಹಲಿ: ಕೊರೊನಾ ವೈರಸ್‌ ನಂತರ ದೇಶದಲ್ಲಿ ಮತ್ತೆ ಭೀತಿ ಹುಟ್ಟಿಸಿರುವ ಹೆಚ್‌3ಎನ್‌2 (H3N2) ವೈರಸ್‌ ಮಾರ್ಚ್‌ ಅಂತ್ಯದ ವೇಳೆಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Union Health Ministry) ತಿಳಿಸಿದೆ.

    ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (IDSP) ನೆಟ್‌ವರ್ಕ್‌ ಮೂಲಕ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್‌3ಎನ್‌2 ವೈರಸ್‌ ಪರಿಸ್ಥಿತಿಯನ್ನು ಅವಲೋಕಿಸಿ ಈ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

    ದೇಶದಲ್ಲಿ ಹೆಚ್‌3ಎನ್‌2 ವೈರಸ್‌ಗೆ ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವುದರಿಂದ ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿದೆ. 15 ವರ್ಷದ ಕೆಳಗಿನ ಮಕ್ಕಳು ಮತ್ತು 65 ವರ್ಷ ದಾಟಿದ ವೃದ್ಧರಿಗೆ ಈ ಸೋಂಕು ಸುಲಭವಾಗಿ ತಗುಲಬಹುದು. ಹೀಗಾಗಿ ಈ ವಯೋಮಾನದವರೆಲ್ಲ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

    ಕರ್ನಾಟಕದ ಹಾಸನದಲ್ಲಿ 82 ವರ್ಷದ ವ್ಯಕ್ತಿಯೊಬ್ಬರು ಹೆಚ್3ಎನ್2ನಿಂದ ಮೃತಪಟ್ಟಿದ್ದು, ದೇಶದಲ್ಲೇ ಈ ಸೋಂಕಿಗೆ ಬಲಿಯಾದ ಮೊದಲ ವ್ಯಕ್ತಿಯಾಗಿದ್ದಾರೆ. ಹಿರೇಗೌಡ ಅವರನ್ನು ಫೆಬ್ರವರಿ 24 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 1 ರಂದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಮಧುಮೇಹಿ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: H3N2ಗೆ ದೇಶದಲ್ಲಿ ಇಬ್ಬರು ಬಲಿ – ಕರ್ನಾಟಕ, ಹರಿಯಾಣದಲ್ಲಿ ಒಂದೊಂದು ಸಾವು

    ಹೆಚ್3ಎನ್2 ಸೋಂಕಿನ ರೋಗ ಲಕ್ಷಣಗಳು: ಮೈ ಕೈ ನೋವು, ತೀವ್ರಶೀತ, ಜ್ವರ ಮತ್ತು ಕೆಮ್ಮು, ಉಸಿರಾಟದ ಸಮಸ್ಯೆ ಕಾಡಬಹುದು, ಜ್ವರ, ಕೆಮ್ಮು ಕಾಣಿಸಿಕೊಂಡ ಎರಡು ಮೂರು ದಿನಗಳ ಬಳಿಕ ಕಡಿಮೆಯಾಗಲಿದೆ. ಕೆಮ್ಮು ಮತ್ತು ಕಫ ಎರಡು ವಾರಗಳವರೆಗೂ ಇರಲಿದೆ.

    ಈ ವೈರಾಣು ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅಗತ್ಯ ಎಂದು ತಜ್ಞರು ತಿಳಿಸಿದ್ದಾರೆ.

  • ಮಂಕಿಪಾಕ್ಸ್ ಭೀತಿ – ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

    ಮಂಕಿಪಾಕ್ಸ್ ಭೀತಿ – ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

    ನವದೆಹಲಿ: ದೇಶದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಸೋಂಕಿನ ಭೀತಿಯಿಂದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಿಸಿದೆ. ವಿದೇಶಗಳಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದೆ.

    ಈ ಕುರಿತು ಆರೋಗ್ಯ ಸಚಿವಾಲಯ ತುರ್ತು ಅದೇಶ ಹೊರಡಿಸಿದ್ದು, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳಂತೆ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಇದರಿಂದ ಮಂಕಿಪಾಕ್ಸ್ ಹರಡುವುದನ್ನು ತಡೆಗಟ್ಟಬಹುದು ಎಂದು ಹೇಳಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಜೋರಾಯ್ತು ಕುರ್ಚಿ ಕದನ – ಸಿಎಂ ಪಟ್ಟಕ್ಕಾಗಿ ಸಮುದಾಯದ ಬೆಂಬಲ ಕೋರಿದ ಡಿಕೆ

    ದುಬೈನಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆಯಷ್ಟೇ `ಮಂಕಿಪಾಕ್ಸ್’ ತಗುಲಿರುವುದು ಪತ್ತೆಯಾಗಿತ್ತು. ಇದು ದೇಶದಲ್ಲಿ ಪತ್ತೆಯಾದ 2ನೇ ಪ್ರಕರಣವಾಗಿತ್ತು. ಇದಕ್ಕೂ ಮುನ್ನ ಕೇರಳದ ಕೊಲ್ಲಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.

    31 ವರ್ಷದ ವ್ಯಕ್ತಿಯೊಬ್ಬರು ಜುಲೈ 13ರಂದು ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಾಗಿತ್ತು. ವ್ಯಕ್ತಿಗೆ ರೋಗ ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಅಮಾನತು

    ಈ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆಯೊಂದಿಗೆ ಕೇಂದ್ರದ ವಿಶೇಷ ತಂಡವು ಪರಿಸ್ಥಿತಿ ಅವಲೋಕಿಸಿತ್ತು. ಬಳಿಕ ಮಂಕಿಪಾಕ್ಸ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಪ್ರಕರಣ ಪತ್ತೆಯಾದಲ್ಲಿ, ಅದನ್ನು ತಡೆಯಲು ರಾಜ್ಯಗಳಿಗೆ ಎಲ್ಲ ರೀತಿಯ ಸಹಕಾರಗಳನ್ನು ನೀಡಲಾಗುತ್ತದೆ. ಮಂಕಿಪಾಕ್ಸ್ ಅಷ್ಟೇನೂ ಗಂಭೀರವಾದ ಕಾಯಿಲೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು ಧೈರ್ಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • 12-14 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರವಾಗಿಲ್ಲ – ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

    12-14 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರವಾಗಿಲ್ಲ – ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

    ನವದೆಹಲಿ: 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯದಿಂದ ಯಾವುದೇ ತೀರ್ಮಾನವಾಗಿಲ್ಲ ಎಂದು ಅಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

    ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಿಂದ 12ರಿಂದ 14 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎನ್‌ಟಿಎಜಿಐ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಆರೋಗ್ಯ ಸಚಿವಾಲಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?

    15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಡಿ.25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅದರಂತೆ ಈ ವಯಸ್ಸಿನ ಮಕ್ಕಳಿಗೆ ಜ.3ರಿಂದ ದೇಶಾದ್ಯಂತ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲಾಯಿತು.

    15-18 ವಯಸ್ಸಿನ ಸುಮಾರು 3.5 ಕೋಟಿ ಮಕ್ಕಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಭಾನುವಾರ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ ಅವರು ಭಾನುವಾರ ಟ್ವೀಟ್ ಮಾಡಿ ತಿಳಿಸಿದ್ದರು. 12 ವರ್ಷ ವಯಸ್ಸು ಮೇಲ್ಪಟ್ಟ ಮಕ್ಕಳಿಗೆ ಕೋವ್ಯಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾಸ್ ಜೈಕೋವ್-ಡಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಅನುಮೋದಿಸಿದೆ. ಅದರಂತೆ 15-18 ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ನೀಡಲಾಗುತ್ತಿದೆ. ಇದನ್ನೂ ಓದಿ: ಜನ ಸ್ವ-ಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು: ಸುಧಾಕರ್

  • ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

    ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

    ನವದೆಹಲಿ : ಕೊರೊನಾ ವೈರಸ್ ಮೂರನೇ ಅಲೆ ಇಲ್ಲ ಅಂತ ಸಂತಸ ಪಡುವ ಹೊತ್ತಿನಲ್ಲಿಯೇ ಆಫ್ರಿಕಾದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

    ಕೊರೊನಾ ಎರಡನೇ ಅಲೆಯ ನಂತರ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ವ್ಯಾಕ್ಸಿನ್ ಪಡೆದ ನಂತರ ಕೊರೊನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಇಳಿಕೆ ಕಂಡಿತು. ಇದೀಗ ಜನರಲ್ಲಿ ಕೋವಿಡ್ ಆತಂಕ ಮತ್ತೆ ಮನೆಮಾಡಿದೆ. ಅತ್ಯಂತ ಅಪಾಯಕಾರಿ ಕೋವಿಡ್ ವೈರಸ್‍ನ ರೂಪಾಂತರ ತಳಿ ಪತ್ತೆ ಆಗಿದ್ದು, ಈ ಕುರಿತಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೂ ಪತ್ರ ಬರೆದಿದೆ.  ಇದನ್ನೂ ಓದಿ: ಮಂಜು ಪಾವಗಡ ಜೊತೆ ಶುಭಾ ಮತ್ತೊಮ್ಮೆ ಟ್ರಿಪ್

    `ಹಲವು ರೂಪಾಂತರಗಳನ್ನು ಹೊಂದಿರುವ ಕೋವಿಡ್ ವೈರಸ್‍ನ ಹೊಸ ತಳಿ ದಕ್ಷಿಣ ಆಫ್ರಿಕಾ, ಬೋಟ್ಸಾವಾನ, ಹಾಂಕಾಂಗ್‍ನಲ್ಲಿ ಪತ್ತೆ ಆಗಿದೆ. ಅಂತಾರಾಷ್ಟ್ರೀಯ ಪ್ರಯಾಣಕ್ಕೆ ವೀಸಾ ಸಡಿಲಿಕೆಯಿಂದ ಈ ರೂಪಾಂತರ ತಳಿ ಆ ದೇಶಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಈ ಹೈ ರಿಸ್ಕ್ ರಾಷ್ಟ್ರಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ತೀವ್ರ ತಪಾಸಣೆಗೆ ಒಳಪಡಿಸಬೇಕು. ಕೋವಿಡ್ ಲಸಿಕೆಯ ವಿತರಣೆಯನ್ನು ತೀವ್ರಗೊಳಿಸಬೇಕು’ ಎಂದು ಆರೋಗ್ಯ ಸಚಿವಾಲಯ ಸೂಚಿಸಿದೆ.

    ಹೊಸ ರೂಪಾಂತರ ತಳಿಯಿಂದಾಗಿ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ವೈರಸ್ ಪ್ರಮಾಣ 10 ಪಟ್ಟು ಏರಿಕೆ ಆಗಿದ್ದು, ದಕ್ಷಿಣ ಆಫ್ರಿಕಾ, ಬೋಟ್ಸಾವಾನಾ, ಜಿಂಬಾಬ್ವೆ, ನಮಿಬೀಯಾದಿಂದ ಬರುವ ವಿಮಾನಗಳಿಗೆ ಬ್ರಿಟನ್ ನಿಷೇಧ ಹೇರಿದೆ. ಇದನ್ನೂ ಓದಿ:  ಇಂದಿನಿಂದ 3 ದಿನ ಚಂಡಮಾರುತ ಮಳೆ – ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ

  • ರಾಜ್ಯಗಳಿಗೆ 25 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ – ಕೇಂದ್ರ ಸರ್ಕಾರ

    ರಾಜ್ಯಗಳಿಗೆ 25 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ – ಕೇಂದ್ರ ಸರ್ಕಾರ

    ನವದೆಹಲಿ: ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈವರೆಗೆ 25,06,41,440 ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಇಂದಿನವರೆಗೂ ನೀಡಲಾದ ಲಸಿಕೆ ಹಾಗೂ ವ್ಯರ್ಥವಾದ ಲಸಿಕೆ ಸೇರಿಸಿದಂತೆ 23,74,21,808 ಲಸಿಕೆಗಳನ್ನು ಬಳಸಲಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇನ್ನೂ 1,33,68,727 ಕೋವಿಡ್ ಲಸಿಕೆ ಪ್ರಮಾಣಗಳು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲಭ್ಯವಿದೆ. ಅಲ್ಲದೆ 3 ಲಕ್ಷಕ್ಕೂ ಹೆಚ್ಚು(3,81,750) ಲಸಿಕೆ ಪ್ರಮಾಣವನ್ನು ರವಾನಿಸಲಾಗುತ್ತಿದ್ದು, ಮುಂದಿನ ಮೂರು ದಿನಗಳ ಒಳಗೆ ರಾಜ್ಯಗಳು ಲಸಿಕೆಗಳನ್ನು ಸ್ವೀಕರಿಸಲಿದೆ. ಇದನ್ನು ಓದಿ: ಕೊರೊನಾಗೆ ಹೆದರಿ ಊರು ಬಿಟ್ಟು ಗುಡಿಸಲಲ್ಲಿ ಕುಟುಂಬ ಜೀವನ

    ವ್ಯಾಕ್ಸಿನೇಷನ್ ಡ್ರೈವ್‍ನ ಮೂರನೇ ಹಂತವನ್ನು ಈಗಾಗಲೇ ಮೇ 1ರಿಂದ ಆರಂಭಿಸಲಾಗಿದೆ. ಜೂನ್21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರದಿಂದಲೇ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಪ್ರಕಟಿಸಿದ್ದಾರೆ.

  • ದೇಶದಲ್ಲಿ ಸೋಂಕಿತರ ಸಂಖ್ಯೆ 4.10 ಲಕ್ಷಕ್ಕೆ ಏರಿಕೆ – 24 ಗಂಟೆಯಲ್ಲಿ 15,413 ಮಂದಿಗೆ ಕೊರೊನಾ

    ದೇಶದಲ್ಲಿ ಸೋಂಕಿತರ ಸಂಖ್ಯೆ 4.10 ಲಕ್ಷಕ್ಕೆ ಏರಿಕೆ – 24 ಗಂಟೆಯಲ್ಲಿ 15,413 ಮಂದಿಗೆ ಕೊರೊನಾ

    ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ತನ್ನ ಅಟ್ಟಹಾಸವನ್ನು ಮುಂದರಿಸಿದೆ. ಕಳೆದ 24 ಗಂಟೆಗಳಲ್ಲಿ 15,413 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

    24 ಗಂಟೆಯಲ್ಲಿ 15 ಸಾವಿರಕ್ಕೂ ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,10,461ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 306 ಜನರು ಸಾವನ್ನಪ್ಪಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 13,254ಕ್ಕೆ ಏರಿಕೆಯಾಗಿದೆ. ಅದರಲ್ಲೂ ಜೂನ್ ತಿಂಗಳಲ್ಲೇ 2 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

    4,10,461 ಪೈಕಿ 2,27,755 ಲಕ್ಷ ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ 1,69,451 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಈವರೆಗೂ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ 56,746 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಯಾಗಿದೆ.

  • 24 ಗಂಟೆಗಳಲ್ಲಿ 549 ಮಂದಿಗೆ ಸೋಂಕು, 17 ಜನ ಸಾವು

    24 ಗಂಟೆಗಳಲ್ಲಿ 549 ಮಂದಿಗೆ ಸೋಂಕು, 17 ಜನ ಸಾವು

    – ಪಿಪಿಇ ಲಭ್ಯತೆಯ ಬಗ್ಗೆ ಭಯಪಡುವ ಅಗತ್ಯವಿಲ್ಲ

    ನವದೆಹಲಿ: ಕೋವಿಡ್-19 ಚಿಕಿತ್ಸೆ ನೀಡಲು ಅಗತ್ಯವಿರುವ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಲಭ್ಯತೆಯ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಆದರೆ ಇವುಗಳನ್ನು ಸರಿಯಾಗಿ ಬಳಸಬೇಕು ಎಂದು ಒತ್ತಿ ಹೇಳಿದೆ.

    ದೆಹಲಿಯಲ್ಲಿ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್, ಕಳೆದ 24 ಗಂಟೆಗಳಲ್ಲಿ 549 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಷ್ಟೇ ಅಲ್ಲದೆ 17 ಜನರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 166ಕ್ಕೆ ಏರಿಕೆ ಕಂಡಿದೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 5734 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 473 ಜನರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದರು.

    ಹರ್ಯಾಣದ ಕರ್ನಾಲ್‍ನಲ್ಲಿ ‘ಅಡಾಪ್ಟ್ ಎ ಫ್ಯಾಮಿಲಿ’ ಅಭಿಯಾನದಡಿ 13,000 ನಿರ್ಗತಿಕ ಕುಟುಂಬಗಳಿಗೆ 64 ಲಕ್ಷ ರೂ.ಗಳ ಸಹಾಯ ನೀಡಲಾಗುತ್ತಿದೆ. ಪಿಪಿಇ (ವೈಯಕ್ತಿಕ ರಕ್ಷಣಾ ಸಲಕರಣೆ), ಮಾಸ್ಕ್ ಮತ್ತು ವೆಂಟಿಲೇಟರ್ ಗಳ ಸರಬರಾಜು ಈಗ ಪ್ರಾರಂಭವಾಗಿದೆ. ಭಾರತದಲ್ಲಿ 20 ದೇಶೀಯ ತಯಾರಕರನ್ನು ಪಿಪಿಇಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ. 1.7 ಕೋಟಿ ಪಿಪಿಇಗಳಿಗೆ ಆದೇಶಗಳನ್ನು ನೀಡಲಾಗಿದೆ ಮತ್ತು ಸರಬರಾಜು ಪ್ರಾರಂಭವಾಗಿದೆ. 49,000 ವೆಂಟಿಲೇಟರ್ ಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

    ರೈಲ್ವೆ ಇಲಾಖೆ 2,500ಕ್ಕೂ ಹೆಚ್ಚು ವೈದ್ಯರನ್ನು ಮತ್ತು 35,000 ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿದೆ. ಅವರ 586 ಆರೋಗ್ಯ ಘಟಕಗಳು, 45 ಉಪ ವಿಭಾಗೀಯ ಆಸ್ಪತ್ರೆಗಳು, 56 ವಿಭಾಗೀಯ ಆಸ್ಪತ್ರೆಗಳು, 8 ಉತ್ಪಾದನಾ ಘಟಕ ಆಸ್ಪತ್ರೆಗಳು ಮತ್ತು 16 ವಲಯ ಆಸ್ಪತ್ರೆಗಳು ತಮ್ಮ ಮಹತ್ವದ ಸೌಲಭ್ಯಗಳೊಂದಿಗೆ ಕೋವಿಡ್-19 ವಿರುದ್ಧ ಹೋರಾಡಲು ಸಿದ್ಧವಾಗಿದೆ ಎಂದು ಲಾವ್ ಅಗರ್‍ವಾಲ್ ಮಾಹಿತಿ ನೀಡಿದ್ದಾರೆ.

    80,000 ಪ್ರತ್ಯೇಕ ಹಾಸಿಗೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ 5,000 ಬೋಗಿಗಳನ್ನು ಪ್ರತ್ಯೇಕ ಘಟಕಗಳಾಗಿ ಪರಿವರ್ತಿಸುತ್ತಿದೆ. ಅದರಲ್ಲಿ 3,250 ಅನ್ನು ಬೆಡ್‍ಗಳಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದರು.

    ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಅಧಿಕಾರಿ ಮಾತನಾಡಿ, ಈವರೆಗೆ 1,30,000 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 5,734 ಮಾದರಿಗಳಲ್ಲಿ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರ ಸಂಖ್ಯೆ ಕಳೆದ 1ರಿಂದ 1.5 ತಿಂಗಳುಗಳಲ್ಲಿ ಶೇ.3ರಿಂದ 5ರ ನಡುವೆ ಇದೆ. ಇದು ಗಣನೀಯವಾಗಿ ಹೆಚ್ಚಿಲ್ಲ ಎಂದು ತಿಳಿಸುತ್ತದೆ. ಬುಧವಾರ ನಾವು 13,143 ಮಾದರಿಗಳನ್ನು ಪರೀಕ್ಷಿಸಿದ್ದೇವೆ ಎಂದು ತಿಳಿಸಿದರು.

  • ಹಣ ನೀಡಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡ್ರೆ ಅಪರಾಧ!

    ಹಣ ನೀಡಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡ್ರೆ ಅಪರಾಧ!

    ನವದೆಹಲಿ: ಇನ್ನು ಮುಂದೆ ಹಣ ಪಾವತಿಸಿದ ಬಳಿಕವೇ ಮೃತ ದೇಹವನ್ನು ನೀಡುತ್ತೇವೆ ಅಥವಾ ರೋಗಿಯನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಆಸ್ಪತ್ರೆಯವರು ಪಟ್ಟು ಹಿಡಿದರೆ ಅದು ಅಪರಾಧವಾಗುತ್ತದೆ.

    ಹೌದು. ಆಸ್ಪತ್ರೆಗಳು ಹಣಕ್ಕಾಗಿ ರೋಗಿಯ ಕುಟುಂಬದ ಸದಸ್ಯರಿಗೆ ಪೀಡಿಸುತ್ತಿವೆ ಎನ್ನುವ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೋಗಿಗಳ ಹಕ್ಕುಗಳಿಗೆ ಸಂಬಂಧಿಸಿದಂತೆ ಕರಡು ನೀತಿಯನ್ನು ಬಿಡುಗಡೆ ಮಾಡಿದೆ.

    ಕರಡು ನೀತಿಯ ಅನ್ವಯ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಅಥವಾ ಮೃತ ಕುಟುಂಬದವರು ಹಣ ಪಾವತಿ ಮಾಡಲಿಲ್ಲವೆಂದು ಅವರನ್ನು ಆಸ್ಪತ್ರೆಯಲ್ಲಿ ಒತ್ತೆಯಾಳುಗಳಂತೆ ಅಲ್ಲಿಯೇ ಇಟ್ಟುಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ 28 ಪುಟಗಳಿರುವ ಕರಡು ನೀತಿಯನ್ನು ತಯಾರಿಸಿದ್ದು, ಆರೋಗ್ಯ ಸಚಿವಾಲಯ ವೆಬ್‍ಸೈಟ್‍ನಲ್ಲಿ ಕರಡು ನೀತಿಯನ್ನು ಪ್ರಕಟಿಸಿದೆ. ಸಾರ್ವಜನಿಕರು ಈ ಕರಡನ್ನು ಓದಿ ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಸಾರ್ವಜನಿಕರಿಂದ ಅಭಿಪ್ರಾಯ, ಸಲಹೆಗಳನ್ನು ಪಡೆದ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ನೀತಿಯನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶನ ನೀಡಲಿದೆ.

    ಕರಡಿನಲ್ಲಿ ಏನಿದೆ?
    ರೋಗಿಗೆ ಯಾವುದೇ ರೀತಿಯ ಕುಂದು-ಕೊರತೆಯಾಗಿದ್ದರೆ ಅಥವಾ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ 15 ದಿನಗಳ ಒಳಗಾಗಿ ಲಿಖಿತ ದೂರು ನೀಡಬಹುದು. ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಇರುವ ಪ್ರತಿಯನ್ನು (ಕೇಸ್ ಪೆಪರ್ ಗಳನ್ನು) ರೋಗಿಯ ಸಂಬಂಧಿಕರಿಗೆ 24 ಗಂಟೆಯ ಒಳಗಾಗಿ ನೀಡಬೇಕು. ಜೊತೆಗೆ ಆಸ್ಪತ್ರೆಯಿಂದ ಮನೆಗೆ ಮರಳಿದ 72 ಗಂಟೆಯ ಒಳಗಾಗಿ ಮಾಹಿತಿ ಪತ್ರ ನೀಡಬೇಕು.

    ರೋಗಿಗಳ ವೈಯಕ್ತಿಕ ಜೀವನಕ್ಕೆ ದಕ್ಕೆ ತರುವಂತಹ ಯಾವುದೇ ಮಾಹಿತಿಯನ್ನು ವೈದ್ಯರು ನೀಡಬಾರದು. ಹಣ ಪಾವತಿಸುವಾಗ ರೋಗಿಯ ಕುಟುಂಬದವರು ವಿವರವಾದ ಬಿಲ್ ಕೇಳಿದರೆ ನೀಡಬೇಕು. ಚಿಕಿತ್ಸೆಗೆ ಸಂಬಂಧಿಸಿದಂತೆ ಪಾವತಿ ಮಾಡಿದ ಹಣದ ಮಾಹಿತಿಯನ್ನ ಕೇಳಿದಾಗ ಯಾವುದೇ ರೀತಿಯ ಶುಲ್ಕ ಪಡೆಯದೆ ಮಾಹಿತಿ ನೀಡಬೇಕು.

    ಆಸ್ಪತ್ರೆಯ ಒಂದು ಭಾಗದಲ್ಲಿ ಸೌಲಭ್ಯಗಳಿಗೆ ನಿಗದಿಯಾದ ಬೆಲೆಯ ಪಟ್ಟಿಯನ್ನು ಹಾಕಬೇಕು. ಅಷ್ಟೇ ಅಲ್ಲದೇ ಯಾವ ಚಿಕಿತ್ಸೆಗೆ ಎಷ್ಟು ಶುಲ್ಕ ಎನ್ನುವ ವಿವರ ಇರುವ ಕರಪತ್ರ ಗಳನ್ನು ನೀಡಬೇಕು. ಈ ಮಾಹಿತಿಗಳು ಇಂಗ್ಲಿಷ್ ಅಥವಾ ಆಯಾ ಪ್ರಾದೇಶಿಕ ಭಾಷೆಯಲ್ಲಿ ರೋಗಿಗಳಿಗೆ ಅರ್ಥವಾಗುವಂತೆ ಇರಬೇಕು. ಲಿಂಗ, ಜಾತಿ, ಭಾಷೆ ಸೇರಿದಂತೆ ಯಾವುದೇ ತಾರತಮ್ಯವಿಲ್ಲದೆ ಚಿಕಿತ್ಸೆ ನೀಡಬೇಕು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಎಚ್‍ಐವಿ ರೋಗಿಯನ್ನು ಕಡೆಗಣಿಸುವಂತಿಲ್ಲ.

    ಹೊಸ ಆರೋಗ್ಯ ನೀತಿಯನ್ನು ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: PatientCharterforcomments

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv