Tag: ಕೇಂದ್ರ ಬಜೆಟ್ 2023

  • ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ, ಬಿಜೆಪಿ ಬಿಡೋಕೆ ಸಿದ್ಧ – ಹೆಚ್. ವಿಶ್ವನಾಥ್

    ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ, ಬಿಜೆಪಿ ಬಿಡೋಕೆ ಸಿದ್ಧ – ಹೆಚ್. ವಿಶ್ವನಾಥ್

    ಮೈಸೂರು: ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ (Congress) ಇದೆ. ನಾನು ಹಿಡಿಯುವ ಧ್ವಜ ಕಾಲದ ಅನುಸಾರ ಬದಲಾಗಿರಬಹುದು. ಆದರೆ ನನ್ನ ತತ್ವಗಳು ಬದಲಾಗಿಲ್ಲ. ನಾನು ಬಿಜೆಪಿ (BJP) ಬಿಡಲು ಸಿದ್ಧವಾಗಿರೋದು ಸತ್ಯ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ (H Vishwanath) ಸ್ಪಷ್ಟಪಡಿಸಿದ್ದಾರೆ.

    ಮೈಸೂರಿನಲ್ಲಿಂದು (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಅಲ್ಲೇ ಪರೋಕ್ಷವಾಗಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

    ಬಿಜೆಪಿಯಿಂದ ಹಣ ಪಡೆದು ಬಿಜೆಪಿ ಸರ್ಕಾರ (BJP Government) ತಂದಿದ್ದರೇ ಇವತ್ತು ಹೀಗೆ ಸರ್ಕಾರದ ತಪ್ಪು ಹೇಳೋಕೆ ಧೈರ್ಯ ಬರುತ್ತಿತ್ತಾ? `I am Clean Man’. ನಾನು ಇಷ್ಟು ವರ್ಷ ರಾಜಕಾರಣದಲ್ಲಿದ್ದರೂ ಚಿಕ್ಕ ಮನೆಯಲ್ಲಿದ್ದೇನೆ. ಅಪ್ಪನ ಜಮೀನಲ್ಲೇ ದುಡಿದು ಮಕ್ಕಳನ್ನ ಸಾಕಿದ್ದೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಒಂದೇ ಕ್ಷೇತ್ರದ ಮೇಲೆ ಅಪ್ಪ-ಮಗನ ಕಣ್ಣು – ಧರ್ಮಸಂಕಟಕ್ಕೆ ಪರಿಹಾರ ಏನು?

    ಮೋದಿ ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗಿಲ್ಲ:
    ಇದೇ ವೇಳೆ ಕೇಂದ್ರ ಬಜೆಟ್ (Union Budget 2023) ಬಗ್ಗೆ ಹೆಚ್. ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಷರ, ಅನ್ನ, ಆರೋಗ್ಯವನ್ನು ಕೇಂದ್ರ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ. ವಿಮಾನ ನಿಲ್ದಾಣಕ್ಕಿಂತ ನಮಗೆ ಅಕ್ಷರ, ಅನ್ನ, ಆರೋಗ್ಯ ಬೇಕು. ಮೋದಿ (Narendra Modi) ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗಿಲ್ಲ. ದೇಶ ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿಯುತ್ತಿದೆ. ದೇಶಕ್ಕೆ ಮೂಲಭೂತವಾಗಿ ಏನೂ ಬೇಕಿದೆ ಎಂಬುದೇ ಕೇಂದ್ರ ಸರ್ಕಾರಕ್ಕೆ ಅರ್ಥವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಬಿಜೆಪಿ ಸರ್ಕಾರ ಬರೀ ಉಳ್ಳವರ ಪರ ಇದೆ. ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಇದೀಗ ಭದ್ರಾವತಿಯಲ್ಲಿರುವ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (Bhadravathi Iron and Steel Plant) ಲಾಭದಲ್ಲಿದ್ದರೂ ಮುಚ್ಚಲು ಸರ್ಕಾರ ಹೊರಟಿದೆ. ಆದರೂ ಮಾಜಿ ಸಿಎಂ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ? ಆ ಭಾಗದ ಸಂಸದರು ಶಾಸಕರು ಏಕೆ ಸುಮ್ಮನಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮನೆ ಬಾಗಿಲಿಗೆ ಶರ್ಟ್‌, ಪ್ಯಾಂಟ್‌ ಹೋಗುತ್ತೆ.. ರೈತರಿಗೆ ಗೊಬ್ಬರ ಯಾಕೆ ಹೋಗಲ್ಲ – ಹೆಚ್‌.ಆರ್‌.ರಂಗನಾಥ್‌ ಪ್ರಶ್ನೆ

    ಮೋದಿ ಅಮಿತ್ ಶಾ ಸೇರಿಕೊಂಡು ಕರ್ನಾಟಕದ ಎಲ್ಲಾ ಆಸ್ತಿಗಳನ್ನು ಒಂದೊಂದಾಗಿ ಗುಜರಾತ್‌ನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ಹಾಗಾಗಿ ಭದ್ರಾವತಿ ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ. ಮೋದಿ ಅಮಿತ್ ಶಾ ಬಂದಾಗ ಶಿವಮೊಗ್ಗದ ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

    ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

    ಬೆಂಗಳೂರು: ಕೇಂದ್ರದ ಬಜೆಟ್ (Union Budget) ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಲೇವಡಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ.54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ ಅಂತಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ಅಲ್ಲದೆ ಕರ್ನಾಟಕದ ಭದ್ರಾ ಮೇಲ್ದಂಡೆ (Karnataka Upper Bhadra Project) ಯೋಜನೆಗೆ ರೂ.5300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ. ಈ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವುದನ್ನೂ ಸ್ಪಷ್ಟಪಡಿಸಿಲ್ಲ.

    ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ಬಿ ಸ್ಕೀಮ್ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ. ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ ಅಂತಾ ಟೀಕಿಸಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

    ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

    ಬೆಂಗಳೂರು: ಈ ಸಾಲಿನ ಕೇಂದ್ರ ಬಜೆಟ್ (Union Budjet 2023) ನಲ್ಲಿ ರಾಜ್ಯದ ಬಯಲು ಸೀಮೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ಅನುದಾನ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು (MTB Nagaraju) ಧನ್ಯವಾದ ತಿಳಿಸಿದ್ದಾರೆ.

    ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಕೃಷಿ ಜಮೀನಿಗೆ ನೀರು ಒದಗಿಸುವ ಹಾಗೂ ಕುಡಿಯುವ ನೀರು ಪೂರೈಸುವ ಭದ್ರ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರದ ಈ ನೆರವಿನಿಂದ ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

    ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ಅನುದಾನ ಒದಗಿಸಿರುವುದು ದೂರದೃಷ್ಟಿಯ ಕ್ರಮ ಎಂದು ಅವರು ಬಣ್ಣಿಸಿದ್ದಾರೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ

    ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 48 ಲಕ್ಷ ಯುವಕರಿಗೆ ಶಿಷ್ಯವೇತನ

    48 ಲಕ್ಷ ಯುವಕರಿಗೆ ಶಿಷ್ಯವೇತನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

    Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

    ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು (Nursing College) ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.

    ಹೌದು. ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ (Education Department) ಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮಹಾಮಾರಿ ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್‍ನಲ್ಲಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಮುಂದಿನ 3 ವರ್ಷಗಳಲ್ಲಿ ಕೇಂದ್ರವು 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುವ 740 ಶಾಲೆಗಳಿಗೆ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ. ಮಕ್ಕಳು ಮತ್ತು ಯುವ ಸಮುದಾಯಕ್ಕಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

    ಸ್ಥಳೀಯ ಭೌಗೋಳಿಕತೆ, ಭಾಷೆಗಳಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆ ಮತ್ತು ಸಾಧನ-ಅಜ್ಞೇಯತಾವಾದಿ ಪ್ರವೇಶಕ್ಕೆ ಅನುಕೂಲವಾಗುವಂತೆ ಸ್ಥಾಪಿಸಲಾಗುವುದು. ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು ಎಂದು ಘೋಷಣೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

    ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

    ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

    ದಾವಣಗೆರೆ: ಕೇಂದ್ರದ ಬಜೆಟ್ (Union Budget 2023) ರಾಜ್ಯದಲ್ಲಿ ಮುಂದೆ ಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ಭದ್ರಾ (Upper Bhadra Project), ಮಹಾದಾಯಿ (Mahadayi), ಕೃಷ್ಣ ಏನೇ ಘೋಷಣೆ ಮಾಡಿದ್ರೂ ಮೊದಲೇ ಮಾಡಬೇಕಿತ್ತು. ಇಂದಿನ ಕಾರ್ಯಕ್ರಮ ಜಾರಿಗೆ ತರಲು ಮುಂದಿನ ಸರ್ಕಾರ ಬರಬೇಕು. ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರತ್ತೆ. ಜನರನ್ನು ತಾತ್ಕಾಲಿಕವಾಗಿ ಮೆಚ್ಚಿಸಲು ಘೋಷಣೆ ಇಡಬಹುದು ಎಂದು ತಿಳಿಸಿದರು.

    ಮನೆ ಬಿದ್ದಾಗ 5 ಲಕ್ಷ, ಕೋವಿಡ್ (Corona Virus) ನಲ್ಲಿ ಸಾವನ್ನಪ್ಪಿದಾಗ 1 ಲಕ್ಷ, ಕೋವಿಡ್ ವಾರಿಯರ್ಸ್ ಗೆ 30 ಲಕ್ಷ ಕೊಡ್ತಿವಿ ಅಂದಿದ್ರು, ಎಲ್ಲಿ ಕೊಟ್ಟರು. ಕೇಂದ್ರ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಇರತ್ತೆ. ರೈಲ್ವೆ ಯೋಜನೆ 20-30 ವರ್ಷಗಳ ಹಿಂದೆ ಘೋಷಣೆ ಆಗಿರುವುದು ಇನ್ನೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಕೇಂದ್ರ ಕಾರ್ಯಕ್ರಮ ಘೋಷಣೆ ಆಗಿದೆ ಉಳಿದಿದೆ. ತಕ್ಷಣ ಬೆಳಗ್ಗೆ ಜನರಿಗೆ ಅನುಕೂಲ ಆಗಲ್ಲ ಎಂದು ಹೇಳಿದರು.

    ಬಿಜೆಪಿ (BJP) ತಿರಸ್ಕಾರ ಮಾಡಿದ್ರೆ ಕರ್ನಾಟಕಕ್ಕೆ ಏನ್ ಕೊಡ್ತಾರೆ ಅನ್ನೋದು ಗೊತ್ತಿಲ್ಲ. ಚುನಾವಣೆ ಆದ್ಮೇಲೆ ಜನ ಮರೆತು ಹೋಗುತ್ತಾರೆ. ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ, ಹೆಚ್ಚಿನ ಮಹತ್ವ ಕೊಡಲ್ಲ. ರಾಷ್ಟ್ರೀಯ ಯೋಜನೆಗೆ ನಾವು ಅರ್ಜಿ ಕೊಟ್ಟಿದ್ದೆವು. ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ನುಡಿದರು.

    ಕರ್ನಾಟಕ ಬರಪೀಡಿತ ಎಂದು ಘೋಷಣೆಗೆ ಪ್ರತಿಕ್ರಿಯೆ ನೀಡಿದ ಹೆಚ್‍ಡಿಕೆ, ಈಗಲಾದರೂ ಕರ್ನಾಟಕ ಬರಪೀಡಿತ ಅನ್ನೋದು ಗೊತ್ತಾಗಿರೋದು ಖುಷಿ ವಿಚಾರ. ಕರ್ನಾಟಕ ಬರಪೀಡಿತ ಅಂತ ಘೋಷಣೆ ಮಾಡಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 25 ಎಂಪಿಗಳನ್ನು ಕೊಟ್ಟ ಕರುನಾಡಿಗೆ ಈ ಬಾರಿ ಬೆಲ್ಲನಾ.. ಬೇವಾ..?

    25 ಎಂಪಿಗಳನ್ನು ಕೊಟ್ಟ ಕರುನಾಡಿಗೆ ಈ ಬಾರಿ ಬೆಲ್ಲನಾ.. ಬೇವಾ..?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Union Budget 2023: ಕೇಂದ್ರ ಬಜೆಟ್ – ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ ಸಿಗಲಿದ್ಯಾ ಬಿಗ್ ಗಿಫ್ಟ್?

    Union Budget 2023: ಕೇಂದ್ರ ಬಜೆಟ್ – ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ ಸಿಗಲಿದ್ಯಾ ಬಿಗ್ ಗಿಫ್ಟ್?

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಎರಡನೇ ಅವಧಿಯ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ (Union Budget 2023) ಮೇಲೆ ಕರ್ನಾಟಕದ (Karnataka) ನಿರೀಕ್ಷೆಗಳು ಸಾಕಷ್ಟಿವೆ. ಏಕೆಂದರೆ ರಾಜ್ಯದಲ್ಲೂ ಬಿಜೆಪಿ ಸರ್ಕಾರವೇ ಇದೆ. ಮೇಲಾಗಿ ವಿಧಾನಸಭೆ ಚುನಾವಣೆ ನಡೆಯೋ ರಾಜ್ಯ ಕೂಡ ಆಗಿದೆ. ಹೀಗಾಗಿ ರಾಜ್ಯವೂ ಬಹಳಷ್ಟು ನಿರೀಕ್ಷೆ ಹೊಂದಿದೆ.

    ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ (GST) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ ಈ ಸಲದ ಬಜೆಟ್‌ನಲ್ಲಾದರೂ ಕರ್ನಾಟಕಕ್ಕೆ ಮೋದಿ ಬಿಗ್ ಗಿಫ್ಟ್ ನೀಡಬಹುದು ಎಂದು ಅಂದಾಜಿಸಲಾಗಿದೆ. ನಾಳೆಯ ಬಜೆಟ್‌ನಲ್ಲಿ ಕೇಂದ್ರಕ್ಕೆ ಏನೆಲ್ಲಾ ಸಿಗಬಹುದು ಅನ್ನೋದನ್ನು ನೋಡೋಣ. ಇದನ್ನೂ ಓದಿ: ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?

    ಸೆಂಟ್ರಲ್ ಬಜೆಟ್; ರಾಜ್ಯದ ನಿರೀಕ್ಷೆಗಳೇನು?
    ರಾಷ್ಟ್ರೀಯ ಯೋಜನೆಗಳಾಗಿ ಎತ್ತಿನಹೊಳೆ, ಮಹದಾಯಿ ಪ್ರಾಜೆಕ್ಟ್, 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೆಂಬಲ, ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗ ಸಿಗುವ ನಿರೀಕ್ಷೆ (ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ, ಹುಬ್ಬಳ್ಳಿ-ಅಂಕೋಲಾ ಸೇರಿ),

    ಬೆಂಗಳೂರು ಮೆಟ್ರೋ ವಿಸ್ತರಣೆಗೆ ಹಣಕಾಸಿನ ನೆರವು, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ, ಕರ್ನಾಟಕಕ್ಕೂ ಫಿನ್‌ಟೆಕ್ ಸಿಟಿ ಯೋಜನೆ ವಿಸ್ತರಣೆ (ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ನೀಡಲಾಗಿದೆ), ಸ್ಮಾರ್ಟ್ ಸಿಟಿಗಳ ಪಟ್ಟಿಗೆ ರಾಜ್ಯದ ಇನ್ನಷ್ಟು ನಗರ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k