Tag: ಕೇಂದ್ರ ಸಂಪುಟ

  • 6520 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಪ್ರಹ್ಲಾದ್‌ ಜೋಶಿ

    6520 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಪ್ರಹ್ಲಾದ್‌ ಜೋಶಿ

    – ಪ್ರಧಾನ ಮಂತ್ರಿ ಕಿಸಾನ್‌ ಸಂಪದ ಯೋಜನೆಗೆ 1920 ಕೋಟಿ ಹೆಚ್ಚುವರಿ ಹಣ
    – 100 ಆಹಾರ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಗೆ ಕೇಂದ್ರ ಒಪ್ಪಿಗೆ
    – 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕ ಸ್ಥಾಪನೆಗೆ 1,000 ಕೋಟಿ

    ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಂಪದ ಯೋಜನೆ (PMKSY) ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 15ನೇ ಹಣಕಾಸು ಆಯೋಗದಡಿ ಒಟ್ಟು 6,520 ಕೋಟಿ ರೂ. ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 15ನೇ ಹಣಕಾಸು ಆಯೋಗದಡಿ (2021-22 ರಿಂದ 2025-26) ನಡೆಯುತ್ತಿರುವ ಕೇಂದ್ರ ವಲಯದ ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆ (PMKSY) ಗಾಗಿ ಹೆಚ್ಚುವರಿ 1920 ಕೋಟಿ ಸೇರಿದಂತೆ ಒಟ್ಟು 6,520 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಾಯಿತೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

    ಆಹಾರ ಘಟಕಗಳಿಗೆ 1000 ಕೋಟಿ: ಕಿಸಾನ್‌ ಸಂಪದ ಯೋಜನೆ ಮೂಲಕ ಆಹಾರ ಸುರಕ್ಷತೆ, ಗುಣಮಟ್ಟ ಮತ್ತು ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮೌಲ್ಯವರ್ಧನ ಮೂಲಸೌಕರ್ಯ (ICCVAI) ಮತ್ತು 100 ಆಹಾರ ಪರೀಕ್ಷಾ ಪ್ರಯೋಗಾಲಯಗಳು ಹಾಗೂ 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕಗಳನ್ನು ಸ್ಥಾಪಿಸಲು 1000 ಕೋಟಿ ವೆಚ್ಚಕ್ಕೆ ಕೇಂದ್ರ ಅನುಮೋದನೆ ನೀಡಿದೆ.

    ICCVAI ಮತ್ತು FSQAI ಇವೆರೆಡೂ PMKSYಯ ಬೇಡಿಕೆ ಆಧಾರಿತ ಘಟಕ ಯೋಜನೆಗಳಾಗಿವೆ. ಹಾಗಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್‌ ಸಂಪದ ಮೂಲಕ ವಿವಿಧ ಯೋಜನೆ ಮಂಜೂರಾತಿಗೆ 920 ಕೋಟಿ ಒದಗಿಸಿದೆ. ಪ್ರಸ್ತಾವಿತ 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕಗಳನ್ನು ಅನುಷ್ಠಾನಗೊಳಿಸಲಾಗುವುದು. ಇದರಿಂದ ವರ್ಷಕ್ಕೆ 20ರಿಂದ 30 ಲಕ್ಷ ಮೆಟ್ರಿಕ್ ಟನ್‌ ಆಹಾರ ಸಂರಕ್ಷಣಾ ಸಾಮರ್ಥ್ಯದ ನಿರೀಕ್ಷೆಯಿದೆ ಎಂದಿದ್ದಾರೆ. ಇದನ್ನೂ ಓದಿ: ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

    ಖಾಸಗಿ ವಲಯದಡಿ ಪ್ರಸ್ತಾವಿತ 100 ಆಹಾರ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಯಿಂದ ಆಹಾರ ಮಾದರಿ ಪರೀಕ್ಷೆ ಸುಲಲಿತವಾಗಲಿದೆ. ಅಲ್ಲದೇ, ಸುಧಾರಿತ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಾರಣವಾಗುತ್ತದೆ. ಇದರಿಂದಾಗಿ ಆಹಾರ ಸುರಕ್ಷತೆ ಹಾಗೂ ಸುರಕ್ಷಿತ ಆಹಾರಗಳ ಪೂರೈಕೆಗೆ ಹೆಚ್ಚು ಹೆಚ್ಚು ನೆರವಾಗಲಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

  • 100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

    100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

    – ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಮಿತಿ ನೇಮಕ
    – ಮುಂಗಾರು ಅಶಧಿವೇಶನದಲ್ಲಿ 8 ಮಸೂದೆ ಮಂಡನೆ ಸಾಧ್ಯತೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ (Modi Cabinet) ಸಭೆಯಲ್ಲಿ 100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧರಿಸಲಾಗಿದೆ. ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ನೀಡಲು ‘ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ’ಗೆ (PM Dhan Dhaanya Krishi Yojana) ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

    ಪ್ರತಿ ರಾಜ್ಯದಿಂದ ಕನಿಷ್ಠ ಒಂದು ಜಿಲ್ಲೆ ನಿಗದಿಪಡಿಸಲಾಗಿದೆ. 11 ಸಚಿವಾಲಯಗಳ 36 ಯೋಜನೆಗಳನ್ನೊಳಗೊಂಡಿದ್ದು, ಈ ಯೋಜನೆಯ ಅವಧಿ ಆರು ವರ್ಷಗಳಾಗಿದ್ದು, ವಾರ್ಷಿಕ 24,000 ಕೋಟಿ ರೂ. ವೆಚ್ಚ ಒಳಗೊಂಡಿದೆ. ಈ ಯೋಜನೆಯಿಂದ 1.7 ಕೋಟಿ ರೈತರಿಗೆ (Farmers) ಅನುಕೂಲವಾಗಲಿದೆ. ಈ ಯೋಜನೆ ಬಗ್ಗೆ 2025-26ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಅಲ್ಲದೇ ನವೀಕರಿಸಬಹುದಾದ ಇಂಧನಕ್ಕೆ 27,000 ಸಾವಿರ ಕೋಟಿ ಮೀಸಲಿಟ್ಟಿದೆ.

    ಕೃಷಿ ಉತ್ಪಾದಕತೆ ಹೆಚ್ಚಳ, ಬೆಳೆಗಳಲ್ಲಿ ವೈವಿಧ್ಯ, ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಗೆ ಉತ್ತೇಜನ, ಪಂಚಾಯಿತಿ ಮತ್ತು ಬ್ಲಾಕ್ ಮಟ್ಟದಲ್ಲಿ ಕೊಯ್ಲಿನ ನಂತರದ ಸಂಗ್ರಹಣೆ ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳ ಸುಧಾರಣೆ, ದೀರ್ಘಾವಧಿ ಮತ್ತು ಅಲ್ಪಾವಧಿ ಸಾಲದ ಲಭ್ಯತೆ ಸುಗಮಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

    ಯೋಜನೆಯ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು. ಜಿಲ್ಲಾ ಧನ ಧಾನ್ಯ ಸಮಿತಿಯು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಯೋಜನೆಗೆ ಅಂತಿಮ ರೂಪ ನೀಡುತ್ತದೆ. ಈ ಸಮಿತಿಯಲ್ಲಿ ಪ್ರಗತಿಪರ ರೈತರು ಇರುತ್ತಾರೆ ಎಂದರು.

    ಮುಂಗಾರು ಅಶಧಿವೇಶನದಲ್ಲಿ 8 ಮಸೂದೆ ಮಂಡನೆಗೆ ತಯಾರಿ
    ಇನ್ನೂ ಇದೇ ಜುಲೈ 21ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ, ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, ರಾಷ್ಟ್ರೀಯ ಉದ್ದೀಪನ ಔಷಧ ವಿರೋಧಿ ತಿದ್ದುಪಡಿ ಮಸೂದೆ, ಮಣಿಪುರ ಸರಕು ಮತ್ತು ಸೇವಾ ತಿದ್ದುಪಡಿ ಮಸೂದೆ, ಜನ ವಿಶ್ವಾಸ ತಿದ್ದುಪಡಿ ಮಸೂದೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ತಿದ್ದುಪಡಿ ಮಸೂದೆ ಮತ್ತು ತೆರಿಗೆ ಕಾನೂನುಗಳ ತಿದ್ದುಪಡಿ ಮಸೂದೆಗಳು ಸೇರಿದಂತೆ ಒಟ್ಟು 8 ಮಸೂದೆಗಳು ಮಂಡನೆಯಾಗಲಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಇದರೊಂದಿಗೆ ಆದಾಯ ತೆರಿಗೆ ಮಸೂದೆಯನ್ನೂ (2025) ಸರ್ಕಾರ ಮಂಡಿಸುವ ಸಾಧ್ಯತೆಯಿದೆ. ಕಳೆದ ಅಧಿವೇಶನದಲ್ಲಿ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಅದನ್ನು ಕೆಳಮನೆಯ ಆಯ್ಕೆ ಸಮಿತಿಗೆ ಉಲ್ಲೇಖಿಸಲಾಗಿತ್ತು. ಸಮಿತಿಯು ಆ ಕುರಿತ ವರದಿಯನ್ನು ಬುಧವಾರ ಅಂಗೀಕರಿಸಿದ್ದು, ಅದು ಲೋಕಸಭೆಯಲ್ಲಿ ಸೋಮವಾರ ಮಂಡನೆಯಾಗುವ ನಿರೀಕ್ಷೆಯಿದೆ.

  • ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ

    ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ

    ನವದೆಹಲಿ: ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಕೇಂದ್ರ ಸಂಪುಟ (Union Cabinet) ಅನುಮೋದನೆ ನೀಡಿದೆ.

    ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಬೆಂಬಲ ನೀಡಲು, ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು 1.07 ಲಕ್ಷ ಕೋಟಿ ರೂ.ಗಳ ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಮಂಗಳವಾರ ಅನುಮೋದಿಸಿದೆ. ಇದನ್ನೂ ಓದಿ: ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

    ಎರಡು ವರ್ಷಗಳಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಪ್ರೋತ್ಸಾಹ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಲ್ಲದೆ, ಈ ಯೋಜನೆಯು ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುತ್ತದೆ. ಇದನ್ನೂ ಓದಿ: ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

    ಮೊದಲ ಬಾರಿಗೆ ಹೆಚ್ಚುವರಿಯಾಗಿ ಕೆಲಸ ಮಾಡುವ ಪ್ರತಿ ಉದ್ಯೋಗಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3,000 ರೂ.ಗಳವರೆಗೆ ಪ್ರೋತ್ಸಾಹ ಧನ ಹಾಗೂ 1 ಲಕ್ಷ ರೂ.ಗಳವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಪ್ರೋತ್ಸಾಹ ಧನ ಪಡೆಯುತ್ತಾರೆ.

    ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಉದ್ಯೋಗದಾತರಿಗೆ ನೀಡುವ ಪ್ರೋತ್ಸಾಹ ಧನವನ್ನು ಮೂರನೇ ಮತ್ತು ನಾಲ್ಕನೇ ವರ್ಷಗಳಿಗೂ ವಿಸ್ತರಿಸಲಾಗುವುದು.

  • 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    ನವದೆಹಲಿ: ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ (ಎನ್‌ಐಸಿಡಿಪಿ) ಅಡಿಯಲ್ಲಿ 28,500 ಕೋಟಿ ರೂ. ಹೂಡಿಕೆಯೊಂದಿಗೆ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ (Union Cabinet) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಸುಮಾರು 12 ಲಕ್ಷ ನೇರ ಉದ್ಯೋಗಗಳು ಮತ್ತು 20 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.

    ಭಾರತವು ‘ಪ್ಲಗ್-ಎನ್-ಪ್ಲೇ’ ಮತ್ತು ‘ವಾಕ್-ಟು-ವರ್ಕ್’ ಪರಿಕಲ್ಪನೆಗಳೊಂದಿಗೆ ವಿಶ್ವದರ್ಜೆಯ ಗ್ರೀನ್‌ಫೀಲ್ಡ್ ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು (Industrial Smart Cities) ನಿರ್ಮಿಸಲು ಸಜ್ಜಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಮಳೆ ಅವಾಂತರ – 15 ಸಾವು, 20 ಸಾವಿರ ಮಂದಿ ಸ್ಥಳಾಂತರ

    ಈ ಯೋಜನೆಗಳು ದೃಢವಾದ ಮತ್ತು ಸುಸ್ಥಿರ ಮೂಲಸೌಕರ್ಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ. ಹೂಡಿಕೆ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ ಎಂದು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

    ಬೇಡಿಕೆಗಿಂತ ಮುಂಚಿತವಾಗಿ ಸ್ಮಾರ್ಟ್ ಸಿಟಿಗಳನ್ನು ಅಭಿವೃದ್ಧಿಪಡಿಸಲಾಗುವುದು. ದೇಶೀಯ ಮತ್ತು ಅಂತಾರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸಲು ವಿನ್ಯಾಸಗೊಳಿಸಲಾದ ಆಧುನಿಕ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ‘ಪ್ಲಗ್-ಎನ್-ಪ್ಲೇ’ ಪರಿಕಲ್ಪನೆಯು ಅಗತ್ಯ ಮೂಲಸೌಕರ್ಯವು ಸುಲಭವಾಗಿ ಲಭ್ಯವಿರುತ್ತದೆ ಎಂದು ಸೂಚಿಸುತ್ತದೆ. ಇದು ವ್ಯವಹಾರಗಳಿಗೆ ತ್ವರಿತವಾಗಿ ಕಾರ್ಯಾಚರಣೆಗಳನ್ನು ಹೊಂದಿಸಲು ಸುಲಭವಾಗುತ್ತದೆ. ‘ವಾಕ್-ಟು-ವರ್ಕ್’ ಪರಿಕಲ್ಪನೆಯು ಕೆಲಸದ ಸ್ಥಳಗಳಿಗೆ ಸಮೀಪವಿರುವ ವಸತಿ ಪ್ರದೇಶಗಳನ್ನು ರೂಪಿಸುವುದನ್ನು ಒತ್ತಿ ಹೇಳುತ್ತದೆ. ಇದರಿಂದಾಗಿ ಪ್ರಯಾಣದ ಸಮಯವನ್ನು ಕಡಿಮೆಯಾಗುವುದಲ್ಲದೇ, ನಿವಾಸಿಗಳ ಜೀವನದ ಗುಣಮಟ್ಟ ಸುಧಾರಿಸುತ್ತದೆ. ಇದನ್ನೂ ಓದಿ: PMLA ಪ್ರಕರಣಗಳಲ್ಲೂ ಜಾಮೀನು ಒಂದು ನಿಯಮ, ಜೈಲು ಒಂದು ವಿನಾಯಿತಿ – ಸುಪ್ರೀಂಕೋರ್ಟ್

    ಎಲ್ಲೆಲ್ಲಿ ಸ್ಮಾರ್ಟ್‌ ಸಿಟಿ?
    * ಉತ್ತರಾಖಂಡದ ಖುರ್ಪಿಯಾ
    * ಪಂಜಾಬ್‌ನ ರಾಜಪುರ, ಪಟಿಯಾಲ
    * ಉತ್ತರ ಪ್ರದೇಶದ ಆಗ್ರಾವು ಸ್ವಚ್ಛ ಮತ್ತು ಪರಿಸರ ಸ್ನೇಹಿ ಕೈಗಾರಿಕಾ ಅಭಿವೃದ್ಧಿಯನ್ನು ಹೊಂದಿರುತ್ತದೆ
    * ಯುಪಿಯಲ್ಲಿ ಪ್ರಯಾಗ್ರಾಜ್
    * ಬಿಹಾರದ ಗಯಾ ಕೃಷಿ, ಜವಳಿ ಮತ್ತು ಇಂಜಿನಿಯರಿಂಗ್ ಮೇಲೆ ಕೇಂದ್ರೀಕರಿಸುತ್ತದೆ
    * ಮಹಾರಾಷ್ಟ್ರದ ಈಘಿ ಬಂದರು ಕೈಗಾರಿಕಾ ಪ್ರದೇಶ. ಬಂದರು ನೇತೃತ್ವದ ಕೈಗಾರಿಕೀಕರಣದತ್ತ ಗಮನ ಹರಿಸಲಾಗುವುದು
    * ಜೋಧಪುರ, ರಾಜಸ್ಥಾನದ ಪಾಲಿ.
    * ಆಂಧ್ರಪ್ರದೇಶದ ಕೋಪರ್ತಿ
    * ಆಂಧ್ರಪ್ರದೇಶದ ಓರ್ವಕಲ್
    * ತೆಲಂಗಾಣದ ಜಹೀರಾಬಾದ್
    * ಕೇರಳದ ಪಾಲಕ್ಕಾಡ್
    * ಜಮ್ಶೆಡ್‌ಪುರ-ಪುರುಲಿಯಾ-ಅಸನ್ಸೋಲ್

  • ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ.

    ನಾಳೆ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಭಾನುವಾರ (ಸೆ.17) ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

    ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಇದನ್ನೂ ಓದಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ

    ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ಮಲಾ ಸೀತಾರಾಮನ್ ಹೆಗಲಿಗೆ ದೇಶದ ರಕ್ಷಣೆಯ ಹೊಣೆ

    ನಿರ್ಮಲಾ ಸೀತಾರಾಮನ್ ಹೆಗಲಿಗೆ ದೇಶದ ರಕ್ಷಣೆಯ ಹೊಣೆ

    ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಇಲ್ಲಿಯವರೆಗೆ ವಾಣಿಜ್ಯ ಖಾತೆಯನ್ನು ನಿರ್ವಹಿಸುತ್ತಿದ್ದ ನಿರ್ಮಲಾ ಸೀತಾರಾಮನ್ ಅವರು ದೇಶದ ರಕ್ಷಣಾ ಸಚಿವೆಯಾಗಿ ನೇಮಕಗೊಂಡಿದ್ದಾರೆ.

    58 ವರ್ಷದ ನಿರ್ಮಲಾ ಸೀತಾರಾಮನ್ ಅವರು ಆಯ್ಕೆಯಾಗುವ ಮೂಲಕ ಪೂರ್ಣಾವಧಿಯಾಗಿ ರಕ್ಷಣಾ ಖಾತೆಯನ್ನು ಹೊಂದಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ರಕ್ಷಣೆಯ ಹೊಣೆ ಹೊತ್ತಿದ್ದರು. ಪ್ರಧಾನಿ ಹುದ್ದೆಯೊಂದಿಗೆ ಜೊತೆ 1982 ರವರೆಗೂ ಈ ಖಾತೆಯನ್ನು ನಿರ್ವಹಣೆ ಮಾಡಿದ್ದರು.

    ಇದನ್ನೂ ಓದಿ: ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?

    ವಾಣಿಜ್ಯ ಖಾತೆಯನ್ನು ನಿಭಾಯಿಸುತ್ತಿದ್ದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿದ್ದರು.

    ಅಧಿಕಾರಕ್ಕೆ ಏರಿದ ಮೋದಿ ಸರ್ಕಾರದಲ್ಲಿ ಆರಂಭದ ದಿನಗಳಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ರಕ್ಷಣೆಯ ಹೊಣೆ ಹೊತ್ತಿದ್ದರು. ಇದಾದ ಬಳಿಕ ಮನೋಹರ್ ಪರಿಕ್ಕರ್ ಈ ಖಾತೆ ಒಲಿದಿತ್ತು. ಗೋವಾ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಖಾತೆಗೆ 2017ರ ಮಾರ್ಚ್ ನಲ್ಲಿ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಈ ಖಾತೆಯನ್ನು ಮತ್ತೆ ಅರುಣ್ ಜೇಟ್ಲಿ ನೋಡಿಕೊಳ್ಳುತ್ತಿದ್ದರು.

    ರೈಲ್ವೇ ಸಚಿವಾಲಯನ್ನು ನೋಡಿಕೊಳ್ಳುತ್ತಿದ್ದ ಸುರೇಶ್ ಪ್ರಭು ಅವರಿಗೆ ವಾಣಿಜ್ಯ ಖಾತೆಯನ್ನು ನೀಡಲಾಗಿದೆ.

    `ಇಂದು ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಸಂಪುಟ ಪುನಾರಚನೆಯಾಗಿದ್ದು ಹೊಸ ಖಾತೆ ಹೆಗಲಿಗೇರಿಸಿಕೊಂಡ ಎಲ್ಲಾ ಸಚಿವರುಗಳಿಗೂ ಅಭಿನಂದನೆಗಳು. ಅವರ ಅನುಭವ ಮಂತ್ರಿ ಮಂಡಲದ ಗೌರವವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತರಾಮನ್, ಮುಕ್ತಲ್ ಅಬ್ಬಾಸ್ ನಖ್ವಿ ಹಾಗೂ ಪಿಯೂಷ್ ಗೋಯಲ್ ಅವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿಶೇಷ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

     

  • ಇನ್ನೊಂದು ವಾರದಲ್ಲಿ ಕೇಂದ್ರ ಸಚಿವಸಂಪುಟ ವಿಸ್ತರಣೆ ಸಾಧ್ಯತೆ- ಕರ್ನಾಟಕದ ಇಬ್ಬರು ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ?

    ಇನ್ನೊಂದು ವಾರದಲ್ಲಿ ಕೇಂದ್ರ ಸಚಿವಸಂಪುಟ ವಿಸ್ತರಣೆ ಸಾಧ್ಯತೆ- ಕರ್ನಾಟಕದ ಇಬ್ಬರು ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ?

    ನವದೆಹಲಿ: ಕೇಂದ್ರ ಸಚಿವ ಸಂಪುಟ ಇನ್ನೊಂದು ವಾರದೊಳಗೆ ಪುನಾರಚನೆಯಾಗುವ ಸಾಧ್ಯತೆ ಹೆಚ್ಚಿದೆ. 2019ರ ಲೋಕಸಭೆ ಚುನಾವಣೆ ಮತ್ತು ಮುಂಬರುವ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ನಡೆಯಲಿದೆ.

    ಮೊನ್ನೆಯಷ್ಟೇ ಎನ್‍ಡಿಎ ಸೇರಿದ ಜೆಡಿಯು ಮತ್ತು ಅಣ್ಣಾಡಿಎಂಕೆ ಪಕ್ಷಗಳ ತಲಾ ಇಬ್ಬರು ಸಂಸದರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ಮಾನ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ. ಶಿವಸೇನೆಯ ಒಬ್ಬರಿಗೆ ಮಂತ್ರಿಸ್ಥಾನ ನೀಡುವ ಮೂಲಕ ಅವರ ಕೋಪ ತಣ್ಣಗಾಗಿಸುವ ಪ್ರಯತ್ನ ಕೂಡ ನಡೆದಿದೆ. ಇನ್ನು ಕರ್ನಾಟಕದ ಇಬ್ಬರು ಸಂಸದರು ಮೋದಿ ಸಂಪುಟ ಸೇರುವ ನಿರೀಕ್ಷೆ ಇದೆ.

    ಯಡಿಯೂರಪ್ಪ ಆಪ್ತರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಶಿವಕುಮಾರ್ ಉದಾಸಿ, ಸುರೇಶ್ ಅಂಗಡಿ ಪೈಕಿ ಇಬ್ಬರಿಗೆ ಮಂತ್ರಿಗಿರಿಯ ಯೋಗವಿದೆ ಎನ್ನಲಾಗ್ತಿದೆ. ಕರಂದ್ಲಾಜೆ ಸೇರ್ಪಡೆ ಮೂಲಕ ಕರಾವಳಿ ಜಿಲ್ಲೆಗಳ ಮೇಲೆ ಮತ್ತಷ್ಟು ಹಿಡಿತ ಸಾಧಿಸಬಹುದು. ಶ್ರೀರಾಮುಲು ಮೂಲಕ ಎಸ್‍ಟಿ ಮತಗಳನ್ನು ಗಟ್ಟಿ ಮಾಡಿಕೊಳ್ಳಬಹುದು. ಶಿವಕುಮಾರ್ ಉದಾಸಿ ಅಥವಾ ಸುರೇಶ್ ಅಂಗಡಿ ಮೂಲಕ ಲಿಂಗಾಯತ ಮತಗಳ ಕ್ರೋಢೀಕರಣ ಮಾಡಬಹುದು ಎಂಬ ಲೆಕ್ಕಾಚಾರ ಮೋದಿ ಪಾಳಯದಲ್ಲಿ ನಡೆಯುತ್ತಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರ್ತಿವೆ.

    ಪುನಾರಚನೆ ವೇಳೆ ಕಲ್‍ರಾಜ್ ಮಿಶ್ರಾ ಸೇರಿದಂತೆ ಹಲವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ಈ ನಡುವೆ ರೈಲ್ವೆ ದುರಂತಗಳ ಬಳಿಕ ನೈತಿಕ ಹೊಣೆ ಹೊತ್ತು ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಹೆದ್ದಾರಿ ಸಾರಿಗೆ ಸಚಿವರಾಗಿರುವ ನಿತಿನ್ ಗಡ್ಕರಿಗೆ ರೈಲ್ವೆ ಖಾತೆಯ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ.