Tag: ಕೇಂದ್ರ ಸಚಿವ

  • ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

    ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

    – ಅಂದು ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ
    – ಮೋದಿ ಮಾತು ಕೇಳಿದ್ದರೆ ನಾನೇ ಸಿಎಂ ಆಗಿರುತ್ತಿದ್ದೆ
    – ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವರ ಮಾತು

    ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗಿಂದು ಅದ್ಧೂರಿ ಸ್ವಾಗತ ಕೋರಲಾಯಿತು. ಮಹಿಳಾ ಘಟದ ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತ ಕೋರಿದರು. ಅಲ್ಲದೇ ಜೆಡಿಎಸ್ ವತಿಯಿಂದ ಇಲ್ಲಿನ ಜೆಪಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ (Felicitation Ceremony) ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.

    ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ಡಿಕೆ, ಪಕ್ಷದ ಕಾರ್ಯಕರ್ತರ ದುಡಿಮೆಗೆ 2008 ರಿಂದ ಯಾವುದೇ ರೀತಿಯ ಪ್ರತಿಫಲ ಸಿಕ್ಕಿರಲಿಲ್ಲ. ಅಂತಹ ಸಮಯದಲ್ಲಿ ಪಕ್ಷವನ್ನ ಉಳಿಸಿದ ಬೆಳೆಸಿದ ಲಕ್ಷಾಂತರ ಕಾರ್ಯಕರ್ತರು ಈ ರಾಜ್ಯದಲ್ಲಿ ಇದ್ದೀರಿ. ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡ್ತೀನಿ. ಮೋದಿ (Narendra Modi) ಅವರು 2 ಬಾರಿ ಪ್ರಧಾನಿಯಾಗಿ ಉತ್ತಮವಾಗಿ ಕೆಲಸ ಮಾಡಿ, 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರ ಮಂತ್ರಿ ಮಂಡಲದಲ್ಲಿ ಕೇಂದ್ರದ ಮಂತ್ರಿ ಆಗಿದ್ದೇನೆ, ನನ್ನ ಪಾಲಿಗೆ ಬಂದಿರೋ ಈ ಮಂತ್ರಿ ಸ್ಥಾನವನ್ನ ಕರ್ನಾಟಕದ ಜನರಿಗೆ ಅರ್ಪಣೆ ಮಾಡ್ತೀನಿ ಎಂದು ಭಾವುಕರಾದರು.

    ಮೋದಿಗೆ ಧನ್ಯವಾದ: 2018ರ ದಿನವನ್ನ ನಾನು ನೆನಪು ಮಾಡಿಕೊಳ್ತೀನಿ. ಅವತ್ತು ಬಹುಮತ ಬಾರದೇ ಇದ್ದಾಗ ಕಾಂಗ್ರೆಸ್‌ನವರು ಬಂದರು. ಕಾಂಗ್ರೆಸ್‌ನ ದೆಹಲಿ ನಾಯಕರು ದೇವೇಗೌಡರ ಮನೆಗೆ ಬಂದು ಒತ್ತಾಯ ಹಾಕಿ ನನಗೆ ಬಲವಂತವಾಗಿ ಸಿಎಂ ಸ್ಥಾನ ಕೊಟ್ಟಿದ್ದರು. ಇವತ್ತು ನಾನು ದೆಹಲಿಯಿಂದ ಕನ್ನಡ ನಾಡಿನ ಮಣ್ಣಿಗೆ ಪಾದಾರ್ಪಣೆ ಮಾಡಿದ್ದೇನೆ. ಆವತ್ತು ನಾನು ಸಿಎಂ ಇದ್ದಾಗ ಇದೇ ಜಾಗದಲ್ಲಿ ಸನ್ಮಾನ ಮಾಡಿದ್ರಿ. ಅಂದು ಕಣ್ಣಲ್ಲಿ ನೀರು ಹಾಕಿದ್ದೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದಾಗ ನಮ್ಮನ್ನ ಯಾವ ರೀತಿ ನಡೆಸಿ ಕೊಂಡಿದ್ದರು ಅಂತ ಹೇಳಿದ್ದೆ. ವಿಷಕಂಠ ಆಗಿದ್ದೇ ಅಂತ ಹೇಳಿದ್ದೆ. ಆದರೆ ಇವತ್ತು ನಾನು ಅತ್ಯಂತ ಸಂತೋಷದಿಂದ ಯಾವುದೇ ಕಲ್ಮಷ ಇಟ್ಟುಕೊಳ್ಳದೇ ಪ್ರಾಮಾಣಿಕ ನನ್ನ ಮಾತು ಹೇಳ್ತಿದ್ದೇನೆ. ಮೊದಲಿಗೆ ಮೋದಿ ಅವರಿಗೆ ಕಾರ್ಯಕರ್ತ ಸಮ್ಮುಖದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

    ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ: ಕಾಂಗ್ರೆಸ್ ಜೊತೆ ರಾಜ್ಯದಲ್ಲಿ ಸರ್ಕಾರ ಮಾಡಿ ಏನ್ ಆಯ್ತು ಅಂತ ಜನರಿಗೆ ಗೊತ್ತಿದೆ. ಆವತ್ತು ಸಹ ಕಾಂಗ್ರೆಸ್ ನಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡೋಕೆ ಬಿಡಲಿಲ್ಲ. ಹೀಗಾಗಿ ನಾನು ಶಾಸಕರ ಜೊತೆ ಸೇರಿ ಮುಂದೆ ಹೆಜ್ಜೆ ಇಟ್ಟಿದ್ವಿ. ಆದಾಗ ಬಳಿಕ ನಮ್ಮ ಮತ್ತು ಬಿಜೆಪಿ ಶಾಸಕರು ಸರ್ಕಾರ ಮಾಡೋಣ ಅಂತ ಹೋದ್ವಿ. ನಾನು ಆವತ್ತು ಎಂ.ಪಿ ಪ್ರಕಾಶ್ ಅವರಿಗೆ ನೀವೇ ಆಗಿ ಅಂತ ಹೇಳಿದ್ದೇ. ನಾನು ಯಡಿಯೂರಪ್ಪಗೆ ಅಧಿಕಾರ ಕೊಡಬೇಕು ಅಂತ ಇದ್ದವನು ನಾನು, ಆದ್ರೆ ಅವರಿಗೆ ಅಧಿಕಾರ ಕೊಡಬಾರದು ಅಂತ ಕುತಂತ್ರ ನಡೆಯಿತು. ನಾನೂ ಸಹ ಆ ಕುತಂತ್ರಕ್ಕೆ ಬಲಿಯಾದೆ. ನಾನು ಪಕ್ಷ ಉಳಿಸಿಕೊಳ್ಳೋಕೆ 20 ತಿಂಗಳು ಕೆಲಸ ಮಾಡಿದೆ. ಅಂದು ಸಹ ನಾನು ಹಣದ ವ್ಯಾಮೋಹ ಬಲಿಯಾಗಿಲ್ಲ. ಲಾಟರಿ ನಿಷೇಧ ಮಾಡಿದೆ, ಸಾರಾಯಿ ನಿಷೇಧ ಮಾಡಿದೆ. ಪಕ್ಷ ಕಟ್ಟಬೇಕು ಅಂತ ಗ್ರಾಮ ವಾಸ್ತವ್ಯ ಮಾಡಿದೆ. ಹಣ ಮಾಡೋಕೆ ಇಷ್ಟಪಡೆಯಲಿಲ್ಲ ಎಂದು ಭಾವುಕರಾದರು.

    ಜೆಡಿಎಸ್‌ ನಾಶ ಮಾಡ್ತೀವಿ ಅಂದಿದ್ದರು: ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ತರೋಣ ಅಂತ ಪ್ರಯತ್ನ ಮಾಡಿದೆ, ನನ್ನ ಆರೋಗ್ಯ ಲೆಕ್ಕಿಸದೇ ಕೆಲಸ ಮಾಡಿದೆ. ನಾನು ಅದರಲ್ಲಿ ಯಶಸ್ವಿಯಾಗಲಿಲ್ಲ. ನಾನು ಹೋದ ಕಡೆ ಜನ ಸೇರುತ್ತಾರೆ. `ಪಂಚರತ್ನ’ ಯಾತ್ರೆಗೆ ಲಕ್ಷಾಂತರ ಜನ ಸೇರಿದ್ದರು. ವಿವಿಧ ಬಗೆಯ ಹಾರಗಳನ್ನ ಹಾಕಿದ್ರು, ಗಿನ್ನಿಸ್ ರೇಕಾರ್ಡ್ ಆಯ್ತು. ಇಷ್ಟೆಲ್ಲ ಶ್ರಮ ಹಾಕಿದರೂ 19 ಸೀಟ್‌ಗೆ ಇಳಿಯಿತು. ಜೆಡಿಎಸ್ ಮುಗಿದೇ ಹೋಯ್ತು. ಪಕ್ಷಕ್ಕೆ ಬನ್ನಿ ಅಂತ ಕಾಂಗ್ರೆಸ್ ಅವರು ಕರೆಯುತ್ತಿದ್ದರು, ಕ್ಷೇತ್ರದ ಕೆಲಸಕ್ಕೆ ಹೋದ್ರೆ ಹಣ ಕೊಡ್ತೀವಿ ಪಕ್ಷಕ್ಕೆ ಬನ್ನಿ ಅಂತ ಹಣ ಕೋಡೋಕೆ ಬಂದಿದ್ದರು. ಜೆಡಿಎಸ್ ನಾಶ ಮಾಡ್ತೀವಿ ಅಂತ ಹೋದ್ರು. ಇವತ್ತು ಎಲ್ಲಿಗೆ ಬಂದು ನಿಂತಿದೆ? 2018ರಲ್ಲಿ ರಾಜ್ಯದ ವಿಷಯಗಳ ಬಗ್ಗೆ ಮೋದಿ ಅವರಿಗೆ ಮಾತಾಡೋಕೆ ಹೋಗಿದ್ದೆ, ಆಗ ನಿನ್ನ ಕೆಲಸಕ್ಕೆ ಬೆಲೆ ಇಲ್ಲ. ನೀನು ರಾಜೀನಾಮೆ ಕೊಟ್ಟು ಬಾ, ನೀನೇ ಸಿಎಂ ಆಗು ಅಂತ ಮೋದಿ ಹೇಳಿದ್ದರು. ಆವತ್ತು ಮೋದಿ ಮಾತು ಕೇಳಿದ್ದರೆ ಕಾರ್ಯಕರ್ತರು ಇಷ್ಟು ಕಷ್ಟ ಪಡುತ್ತಿರಲಿಲ್ಲ. ಆ ಅವಕಾಶ ನಾನೇ ಕಳೆದುಕೊಂಡೆ ಎಂದು ಕಹಿ ಸತ್ಯಗಳನ್ನು ಕಾರ್ಯಕರ್ತರ ಮುಂದೆ ಬಿಟ್ಟಿಟ್ಟರು.

    ಈಗಲೂ ನಮ್ಮ ಜೊತೆಗೂಡಿ ಕೆಲಸ ಮಾಡು ಅಂತ ಮೋದಿ ಅವರು ಗೌರವ ಕೊಟ್ಟಿದ್ದಾರೆ. ಈ ಗೌರವ ಕಾರ್ಯಕರ್ತರಿಗೆ ಸೇರುತ್ತದೆ. ಇಲ್ಲದೇ ಹೋಗಿದ್ದರೆ ನಮ್ಮನ್ನ ಕೇಳೋರು ಯಾರು? ಕಾರ್ಯಕರ್ತರ ಪ್ರೀತಿಗೆ ಫಲ ಸಿಕ್ಕಿದೆ. ನಾವು ಗೆದ್ದಿರೋದು ಎರಡು ಸ್ಥಾನ. ಹಾಸನ ಜನರಿಗೆ ದೋಷ ಕೊಡೊಲ್ಲ, ಹಾಸನದ ಜನ ಕೊಟ್ಟಿರೋ ಶಕ್ತಿ ಕೊನೆ ಉಸಿರು ಇರೋ ವರೆಗೂ ಮರೆಯೊಲ್ಲ. ಕೆಲವು ರಾಜಕೀಯ ಆಯ್ತು. ಅದಕ್ಕೂ ಕಾಲ ಬರುತ್ತದೆ ಎಂದು ಹೇಳಿದರು.

    ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಮೃದ್ಧಿ ಮಂಜುನಾಥ್, ಸಂಸದ ಮಲ್ಲೇಶ್ ಬಾಬು, ವೈಎಸ್‌ವಿ ದತ್ತಾ ಸೇರಿ ಶಾಸಕರು, ಮಾಜಿ ಶಾಸಕರು, ಪಕ್ಷದ ನಾಯಕರು ಭಾಗಿ ಪಾಲ್ಗೊಂಡಿದ್ದರು.

  • ಕಾರು ಅಪಘಾತಕ್ಕೀಡಾಗಿ ಕೇಂದ್ರ ಸಚಿವರಿಗೆ ಗಾಯ, ಶಿಕ್ಷಕ ಸಾವು

    ಕಾರು ಅಪಘಾತಕ್ಕೀಡಾಗಿ ಕೇಂದ್ರ ಸಚಿವರಿಗೆ ಗಾಯ, ಶಿಕ್ಷಕ ಸಾವು

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ (Central Minister Pralhad Patel) ಅವರಿದ್ದ ಕಾರು ಅಪಘಾತಕ್ಕೀಡಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

    ಈ ಘಟನೆ ಇಂದು (ಮಂಗಳವಾರ) ನಡೆದಿದೆ. ಸಚಿವರು ನವೆಂಬರ್ 17ರಂದು ನಡೆಯಲಿರುವ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಂದ್ವಾರದಿಂದ ನರಸಿಂಗ್‍ಪುರ ಕಡೆ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

    ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ನಿರಂಜನ್ ಚಂದ್ರವನ್‍ಶಿ ಎಂದು ಗುರುತಿಸಲಾಗಿದೆ. ನಿರಂಜನ್ ಮಕ್ಕಳಾದ ನಿಖಿಲ್ ನಿರಂಜನ್ (7) ಮತ್ತು ಸಂಸ್ಕರ್ ನಿರಂಜನ್ (10) ಗಾಯಗೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ನಿರಂಜನ್ ತಮ್ಮ ಮಕ್ಕಳೊಂದಿಗೆ ಬೈಕ್‍ನಲ್ಲಿ ಮನೆಗೆ ಮರಳುತ್ತಿದ್ದರು. ಇದನ್ನೂ ಓದಿ: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಮನಸ್ಸೋ ಇಚ್ಛೆ 58 ಬಾರಿ ಇರಿದು ಕೊಂದ್ರು

    ಘಟನೆಯಲ್ಲಿ ನಿರಂಜನ್ ಎಂಬವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಇವರೆಲ್ಲರೂ ನಾಗ್ಪುರ ನಿವಾಸಿಗಳು. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಧೀರ್ ಜೈನ್ ತಿಳಿಸಿದ್ದಾರೆ.

    ಗಾಯಾಳುಗಳಲ್ಲಿ ಓರ್ವನ ತಲೆಗೆ ಏನು ಬಿದ್ದಿದೆ. ಇದರಲ್ಲಿ 10 ವóದ ಬಾಲಕನ ಸ್ಥಿತಿ ಗಂಭೀರವಾಗಿದೆ. ಜತಿನ್‍ಗೆ ಕೂಡ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ಕೂಡ ನಾಗ್ಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ 33 ವರ್ಷದ ನಿರಂಜನ್ ಚಂದ್ರವಂಶಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಿವಿಲ್ ಸರ್ಜನ್ ಡಾ ಎಂಕೆ ಸೋನಿಯಾ ಹೇಳಿದ್ದಾರೆ.

  • ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ನವದೆಹಲಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.

    ಸೋಶಿಯಲ್‌ ಮೀಡಿಯಾ ಬಳಕೆದಾರರೊಬ್ಬರು ಮೂಲ ವೀಡಿಯೋವನ್ನ ಪತ್ತೆ ಮಾಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವಾಸ್ತವಾಂಶ ಬಯಲಾದ ಬಳಿಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekha) ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ದೇಶದ ಐಟಿ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವೀಡಿಯೋ ಮತ್ತು ಇತರ ವಿಷಯಗಳನ್ನು ತೆಗೆದುಹಾಕುವಂತೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

    ಇದರೊಂದಿಗೆ ತಮ್ಮ ಪೋಸ್ಟ್‌ನಲ್ಲಿ, ಯಾವುದೇ ವೇದಿಕೆಯಲ್ಲಿ ತಪ್ಪು ಮಾಹಿತಿ ಪೋಸ್ಟ್‌ ಮಾಡಿದ್ರೆ, ಅದನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲದಿದ್ದರೇ ನೊಂದ ವ್ಯಕ್ತಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

    ನರೇಂದ್ರ ಮೋದಿಜೀ ಅವರ ಸರ್ಕಾರವೂ ಇಂಟರ್ನೆಟ್‌ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕೆ ಸುರಕ್ಷತೆ ಮತ್ತು ನಂಬಿಕೆ ಉಳಿಸಿಕೊಳ್ಳಲು ಬದ್ಧವಾಗಿದೆ. ಏಪ್ರಿಲ್, 2023 ರಲ್ಲಿ ಸೂಚಿಸಲಾದ ಐಟಿ ನಿಯಮಗಳ ಅಡಿಯಲ್ಲಿ – ಇದು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ. ಯಾವುದೇ ಬಳಕೆದಾರರು ಮತ್ತು ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ 36 ಗಂಟೆಗಳಲ್ಲಿ ತಪ್ಪು ಮಾಹಿತಿಗಳನ್ನು ತೆಗೆದುಹಾಕಬೇಕಾಗುತ್ತದೆ. ಇಲ್ಲದಿದ್ದಲ್ಲಿ ಇದು ಐಟಿ ನಿಯಮ 7ರ (IT rules Seven) ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಲಿದ್ದು, ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯಿಂದ ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿದ್ದಾರೆ. ಇಂತಹ ಹಾನಿಕಾರಕ ತಪ್ಪು ಮಾಹಿತಿಗಳನ್ನು ವೇದಿಕೆಗಳ ಮೂಲಕ ವ್ಯವಹರಿಸಬೇಕು ಎಂದೂ ಹೇಳಿದ್ದಾರೆ. ಇದನ್ನೂ ಓದಿ: Bigg Boss: ತನಿಷಾ, ವರ್ತೂರು ಸಮ್‌ಥಿಂಗ್‌ ಸಮ್‌ಥಿಂಗ್‌ ಬಗ್ಗೆ ಸುದೀಪ್‌ ರಿಯಾಕ್ಷನ್

    ಏನಿದು ವೈರಲ್‌ ವೀಡಿಯೋ ಸ್ಟೋರಿ?
    ರಶ್ಮಿಕಾ ಮಂದಣ್ಣ ಅವರದ್ದು ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯೋ ಅಥವಾ ನಕಲಿಯೋ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿದ್ದರು. ಕಿಡಿಗೇಡಿಗಳು ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾರ್ಫಿಂಗ್‌ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

  • ಪೋರ್ನ್‌ ವೀಡಿಯೋ ಕಾಲ್‌ ಮೂಲಕ ಕೇಂದ್ರ ಸಚಿವರ ಬ್ಲ್ಯಾಕ್‌ಮೇಲ್‌ಗೆ ಯತ್ನ – ಇಬ್ಬರು ಅರೆಸ್ಟ್‌

    ಪೋರ್ನ್‌ ವೀಡಿಯೋ ಕಾಲ್‌ ಮೂಲಕ ಕೇಂದ್ರ ಸಚಿವರ ಬ್ಲ್ಯಾಕ್‌ಮೇಲ್‌ಗೆ ಯತ್ನ – ಇಬ್ಬರು ಅರೆಸ್ಟ್‌

    ಜೈಪುರ: ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ವೀಡಿಯೋ ಪ್ಲೇ ಮಾಡುವ ಮೂಲಕ ಕೇಂದ್ರ ಸಚಿವರನ್ನ (Union Minister) ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ್ದ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನ ದೆಹಲಿ ಪೊಲೀಸರು (Delhi Police) ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ಪ್ಲೇ ಮಾಡಿ, ರೆಕಾರ್ಡ್‌ ಮಾಡಿಕೊಂಡ ಬಳಿಕ ಈ ವೀಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿಬಿಡುವುದಾಗಿ ಸಚಿವರಿಗೆ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಭರವಸೆ

    ಪೊಲೀಸರ ಮಾಹಿತಿ ಪ್ರಕಾರ, ಕಳೆದ ಜೂನ್‌ನಲ್ಲಿ ಸಚಿವರಿಗೆ ವಾಟ್ಸಪ್‌ನಲ್ಲಿ (WhatsApp) ವೀಡಿಯೋ ಕರೆ ಬಂದಿತ್ತು. ಅವರು ಕರೆ ಸ್ವೀಕರಿಸಿದ ತಕ್ಷಣ ಪೋರ್ನ್‌ ವೀಡಿಯೋ ಪ್ಲೇ ಆಗಲು ಪ್ರಾರಂಭವಾಯಿತು. ಅವರ ಮುಖವೂ ಅದರಲ್ಲಿ ಸೆರೆಯಾಗಿತ್ತು. ಬಳಿಕ ವೀಡಿಯೋ ಕರೆ ಸ್ಥಗಿತಗೊಳಿಸಿದ ವ್ಯಕ್ತಿ ಸಚಿವರಿಗೆ ಮತ್ತೆ ಕರೆ ಮಾಡಿ ವೀಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ದೆಹಲಿ ಮೆಟ್ರೋದಲ್ಲಿ 2 ಮದ್ಯದ ಬಾಟಲಿ ಕೊಂಡ್ಯೊಯಲು ಅಬಕಾರಿ ಇಲಾಖೆಯ ಆಕ್ಷೇಪ

    ಈ ಬಗ್ಗೆ ದೂರು ದಾಖಲಾದ ನಂತರ ಆರೋಪಿ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಆರೋಪಿಗಳನ್ನ ಜುಲೈನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಇನ್ನಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

    ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

    ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur) ಹೆಚ್ಚುತ್ತಿರುವ ಹಿಂಸಾಚಾರದ (Violence) ನಡುವೆ ಶುಕ್ರವಾರ ನಸುಕಿನ ವೇಳೆ ಇಂಫಾಲದಲ್ಲಿರುವ (Imphal) ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ (Rajkumar Ranjan Singh) ಅವರ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ (Fires) ಹಚ್ಚಿದ್ದಾರೆ.

    ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಸಿಂಗ್ ಅವರ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಸದ್ಯ ಘಟನೆ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ವಾರದ ಆರಂಭದಲ್ಲಿ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ನೆಮ್ಚಾ ಕಿಪ್ಗೆನ್ ಅವರ ಮನೆಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಇದರ ನಡುವೆ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಈ ಬಗ್ಗೆ ಅನೇಕ ಹಂತಗಳಲ್ಲಿ ಚರ್ಚೆ ನಡೆಸಲಾಗುತ್ತಿದ್ದು, ಹಿಂಸಾಚಾರದಲ್ಲಿ ತೊಡಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು

    ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಕಳೆದ ಒಂದು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಇದುವರೆಗೆ ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬುಧವಾರ ನಡೆದ ಹಿಂಸಾಚಾರದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ

  • ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ – ಪೊಲೀಸರಿಗೆ ಗಂಭೀರ ಗಾಯ

    ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ – ಪೊಲೀಸರಿಗೆ ಗಂಭೀರ ಗಾಯ

    ಪಾಟ್ನಾ: ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ (Ashwini Choubey) ಅವರ ಬೆಂಗಾವಲು ವಾಹನವು (Escort Vehicle) ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದ್ದು (Accident), ಹಲವಾರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪಲ್ಟಿಯಾದ (Overturn) ಬೆಂಗಾವಲು ವಾಹನವನ್ನು ಸಚಿವರು ಪರಿಶೀಲಿಸುತ್ತಿರುವ ವೀಡಿಯೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಅವರು, ಬಕ್ಸರ್‌ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಕೊರಂಸಾರೈ ಪೊಲೀಸ್ ಠಾಣೆಯ ಕಾರು ಕಾರ್ಕೇಡ್‌ನಲ್ಲಿನ ಮಥಿಲ-ನಾರಾಯಣಪುರ ರಸ್ತೆಯ ಸೇತುವೆಯ ಕಾಲುವೆಯಲ್ಲಿ ಬಿದ್ದು, ಅಪಘಾತಕ್ಕೀಡಾಗಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ವ್ಯಕ್ತಿಯ ದೇಹ 8 ಪೀಸ್ ಮಾಡಿ ವೀಡಿಯೋ ರೆಕಾರ್ಡ್ – ಪಾಕಿಸ್ತಾನಕ್ಕೆ ಶೇರ್

    ವರದಿಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿರುವುದರಿಂದ ಅವರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ನಿನ್ನ ಬ್ಯಾನರ್ ಇಲ್ಯಾಕೆ..?- ವಿಜಯನಗರ ವಿಧಾನಸಭೆ ಕ್ಷೇತ್ರದ ಕೈ ಆಕಾಂಕ್ಷಿಗಳ ಗಲಾಟೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಕೀಯ ತೊರೆಯಬೇಕೆಂದು ಯೋಚಿಸಿದ್ದೆ – ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ

    ರಾಜಕೀಯ ತೊರೆಯಬೇಕೆಂದು ಯೋಚಿಸಿದ್ದೆ – ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ

    ಮುಂಬೈ: ನನಗೆ ಆಗಾಗ್ಗೆ ರಾಜಕೀಯ ತೊರೆಯಬೇಕು ಅನ್ನಿಸುತ್ತದೆ. ಬಹಳಷ್ಟು ಬಾರಿ ಈ ಬಗ್ಗೆ ಯೋಚಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಮಹಾರಾಷ್ಟçದ ನಾಗ್ಪುರದಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರ ಗೌರವ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಆಗಾಗ ರಾಜಕೀಯ ತೊರೆಯಬೇಕು ಅನ್ನಿಸುತ್ತದೆ. ರಾಜಕೀಯ ತ್ಯಜಿಸುವ ಬಗ್ಗೆ ಬಹಳಷ್ಟು ಬಾರಿ ಯೋಚಿಸಿಯೂ ಇದ್ದೇನೆ. ಏಕೆಂದರೆ ರಾಜಕೀಯಕ್ಕಿಂತ ಜೀವನದಲ್ಲಿ ಹೆಚ್ಚಿನದ್ದನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜೀವ ಬೆದರಿಕೆ ಆತಂಕ ಹಂಚಿಕೊಂಡ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ಅಗ್ನಿಹೋತ್ರಿ

    ರಾಜಕೀಯವು ಸಾಮಾಜಿಕ ಬದಲಾವಣೆ ತರುವ ಅಸ್ತ್ರ ಎಂಬುದು ನನ್ನ ನಂಬಿಕೆ. ಆದರೆ ರಾಜಕೀಯಕ್ಕೆ ಬಂದ ಮೇಲೆ ಅಧಿಕಾರವನ್ನೇ ಹೆಚ್ಚಾಗಿ ಹುಡುಕುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 53ನೇ ವಯಸ್ಸಿನಲ್ಲಿ ಬೆತ್ತಲಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಜನ್ನಿಫರ್ ಲೊಪೇಜ್

    ರಾಜಕೀಯವು ಸಾಮಾಜಿಕ, ಆರ್ಥಿಕ ಸುಧಾರಣೆಯ ನಿಜವಾದ ಸಾಧನವಾಗಿದೆ. ಅದಕ್ಕಾಗಿಯೇ ನಾವು ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತೇವೆ. ಅಧಿಕಾರಕ್ಕೆ ಬಂದ ನಂತರ ರಾಜಕಾರಣಿಗಳು ಶಿಕ್ಷಣ, ಕಲೆ ಇತ್ಯಾದಿಗಳ ಅಭಿವೃದ್ಧಿಗೆ ಶ್ರಮಿಸಬೇಕು. ರಾಜಕೀಯ ಎಂಬ ಪದದ ಅರ್ಥವನ್ನು ಅರ್ಥ ಮಾಡಿಕೊಳ್ಳಬೇಕು. ಅದು ಸಮಾಜ, ದೇಶದ ಹಿತಕ್ಕಾಗಿಯೇ ಅಥವಾ ಸರ್ಕಾರದಲ್ಲಿ ಇರುವುವರ ಹಿತಕ್ಕಾಗಿಯೇ ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ 30-40 ವರ್ಷಗಳೂ ಬಿಜೆಪಿ ಯುಗವೇ; ಭಾರತವಾಗಲಿದೆ ವಿಶ್ವಗುರು – ಅಮಿತ್ ಶಾ

    ಮುಂದಿನ 30-40 ವರ್ಷಗಳೂ ಬಿಜೆಪಿ ಯುಗವೇ; ಭಾರತವಾಗಲಿದೆ ವಿಶ್ವಗುರು – ಅಮಿತ್ ಶಾ

    ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳೂ ಬಿಜೆಪಿ ಯುಗವಾಗಿರಲಿದ್ದು, ಭಾರತವು `ವಿಶ್ವಗುರು’ ಆಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

    ಇಂದು ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ವಂಶಪಾರಂಪರ್ಯ ರಾಜಕಾರಣ, ಜಾತೀಯತೆ ಹಾಗೂ ತುಷ್ಟೀಕರಣದ ರಾಜಕೀಯ ಮಹಾಪಾಪ. ಹಲವು ವರ್ಷಗಳಿಂದ ದೇಶ ಈ ಪಾಪವನ್ನು ಅನುಭವಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ರಕ್ತದಲ್ಲಿ ಕಾಂಗ್ರೆಸ್‌ ಇದೆ: JDS ತೊರೆದು ಕಾಂಗ್ರೆಸ್‌ ಸೇರಿದ ಹೆಚ್‌.ಆರ್.ಶ್ರೀನಾಥ್‌

    ಗೃಹ ಸಚಿವರ ಭಾಷಣದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪಕ್ಷವು ಕುಟುಂಬ ರಾಜಕಾರಣ, ಜಾತಿ ರಾಜಕಾರಣ ಹಾಗೂ ತುಷ್ಟೀಕರಣ ರಾಜಕೀಯವನ್ನು ಕೊನೆಗಾಣಿಸಲಿದೆ. ದೇಶದ ಮತ್ತು ಜನರ ಅಭಿವೃದ್ಧಿ, ಸಾಧನೆಗಳ ಮೂಲಕ ಪಕ್ಷವನ್ನು ಜನರು ಮಾತನಾಡುವಂತಾಗಬೇಕು ಎಂಬುದನ್ನು ಶಾ ಒತ್ತಿಹೇಳಿರುವುದಾಗಿ ವಿವರಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ ಸಲಿಂಗಕಾಮಿ ಸ್ನೇಹಿತನನ್ನು ಕೊಂದು ಚೀಲದಲ್ಲಿ ಸುತ್ತಿ ಎಸೆದ ಸ್ನೇಹಿತರು

    ಬಿಜೆಪಿ ಸರ್ಕಾರವು ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಕುಟುಂಬ ಆಡಳಿತವನ್ನು ಕೊನೆಗೊಳಿಸಲಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಒಡಿಶಾದಲ್ಲಿ ಮುಂದಿನ ದಿನಗಳಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದ್ದು, ದಕ್ಷಿಣ ಭಾರತದಲ್ಲಿ ಪ್ರಾಬಲ್ಯ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

    Live Tv

  • ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

    ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹವಾ ಇವತ್ತು ಬೆಂಗಳೂರಿನಲ್ಲಿ ಭರ್ಜರಿಯಾಗಿ ಇತ್ತು. ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗವಹಿಸಿದರು. ನೃಪತುಂಗ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಿಂಚಿನ ಸಂಚಾರ ಮಾಡಿದರು.

    ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟನೆಯನ್ನ ಅಮಿತ್ ಶಾ ಮಾಡಿದರು. ಇದರ ಜೊತೆಗೆ ವಿಶ್ವವಿದ್ಯಾಲಯದ ಲೋಗೋ ಅನಾವರಣ ಮಾಡಿದ ಶಾ, ವಿವಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದರು. ಸರ್ಕಾರಿ ಕಲಾ ಕಾಲೇಜು ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಗೆ ಆಗಮಿಸಿದ ಕೂಡಲೇ ವಿದ್ಯಾರ್ಥಿಗಳು ಅಮಿತ್ ಶಾರಿಗೆ ಜೈಕಾರದ ಸ್ವಾಗತ ಮಾಡಿದರು. ವಿದ್ಯಾರ್ಥಿಗಳಿಗೆ ಕೈಬೀಸಿ ಅಭಿಮಾನದಿಂದ ಅಮಿತ್ ಶಾ ವಿದ್ಯಾರ್ಥಿಗಳ ಸ್ವಾಗತ ಸ್ವೀಕಾರ ಮಾಡಿದರು.

    ನೃಪತುಂಗ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಭವ್ಯ ಭಾರತದ ಕನಸ್ಸನ್ನ ವಿದ್ಯಾರ್ಥಿಗಳ ಮುಂದೆ ಇಟ್ಟರು. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಆಗುವ ವೇಳೆಗೆ ಭಾರತ ವಿಶ್ವಗುರು ಆಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಕೆಲಸ ಮಾಡ್ತಿದ್ದಾರೆ ಅಂತ ತಿಳಿಸಿದ್ರು. ಯುವ ಸಮೂಹ ಸಣ್ಣ ಸಣ್ಣ ವಿಚಾರಗಳ ಮೂಲಕ ಸಂಕಲ್ಪ ಮಾಡಬೇಕು ಅಂತ ಕರೆ ನೀಡಿದರು. ಇದನ್ನೂ ಓದಿ: ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

    ಜಮ್ಮು-ಕಾಶ್ಮೀರದ 370 ರದ್ದು ಮಾಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡಿ ಪಾಕಿಸ್ತಾನಕ್ಕೆ ಪಾಠ ಕಲಿಸಿದ್ದು ಪ್ರಧಾನಿ ಮೋದಿ ಅವರು ಅಂತ ಮೋದಿ ಕಾರ್ಯ ಶ್ಲಾಘಿಸಿದರು. ದೇಶದಲ್ಲಿ ಮೆಡಿಕಲ್ ಕಾಲೇಜು, ಕೇಂದ್ರೀಯ ವಿವಿಗಳು, ಐಐಟಿಗಳನ್ನ ಹೊಸದಾಗಿ ದೇಶಾದ್ಯಂತ ಮೋದಿ ಅವರು ಸ್ಥಾಪನೆ ಮಾಡಿದ್ದಾರೆ ಅಂತ ತಿಳಿಸಿದರು. ಕರ್ನಾಟಕ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿರೋದಕ್ಕೆ ಅಭಿನಂದನೆ ಸಲ್ಲಿಸಿದರು. ನದಿ ಜೋಡಣೆ ಕೆಲಸ ಮೋದಿ ಅವರು ಮಾಡ್ತಿದ್ದಾರೆ. ಗಡಿ ವಿವಾದಗಳಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಅಂತ ತಿಳಿಸಿದರು.

    ಕಾರ್ಯಕ್ರಮದಲ್ಲಿ ಅಮಿತ್ ಶಾರಿಗೆ ಮೈಸೂರು ಪೇಟಾ ತೊಡಿಸಿ, ಸರಸ್ವತಿ ಪ್ರತಿಮೆ ನೀಡಿ ಸನ್ಮಾನಿಸಲಾಯ್ತು. ಇದೇ ಕಾರ್ಯಕ್ರಮದಲ್ಲಿ ಬಳ್ಳಾರಿಯ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಇ-ಬೀಟ್ ವ್ಯವಸ್ಥೆಗೆ ವಚ್ರ್ಯುಯಲ್ ಮೂಲಕ ಅಮಿತ್ ಶಾ ಚಾಲನೆ ಕೊಟ್ಟರು.

  • ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಉಕ್ರೇನ್ ಮೇಲೆ ರಷ್ಯಾ ಸೈನಿಕರು ದಾಳಿ ಮಾಡುತ್ತಿದ್ದು, ಅಲ್ಲಿ ಸಿಲುಕಿರುವ ಭಾರತೀಯರು ಆತಂಕ ಹೊರಹಾಕುತ್ತಿದ್ದಾರೆ. ಆದಷ್ಟು ಬೇಗ ನಮ್ಮನ್ನು ತಾಯ್ನಾಡಿಗೆ ಕರೆಸಿಕೊಳ್ಳಿ ಎಂದು ಕಣ್ಣೀರಾಕುತ್ತಿದ್ದಾರೆ.

    ಇತ್ತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರ, 4 ಕೇಂದ್ರ ಸಚಿವರನ್ನು ನಿಯೋಜಿಸಿ ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಕಳುಹಿಸಿದೆ. ಅದರಂತೆ ಸಚಿವರು ಈಗಾಗಲೇ ಅಲ್ಲಿಗೆ ತೆರಳಿದ್ದು, ಆ ದೇಶದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಿಕೊಡುವ ಜವಾಬ್ದಾರಿ ನೀಡಲಾಗಿದೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾದ ಬುಕಾರೆಸ್ಟ್ ತಲುಪಿದ್ದಾರೆ. ಬುಧವಾರ ಅಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಸಿಂಧಿಯಾ ಮಕ್ಕಳೊಂದಿಗೆ ನೆಲದ ಮೇಲೆ ಕುಳಿತು, ಚಿಂತೆ ಮಾಡಬೇಡಿ, ನಾನು ಎಲ್ಲರನ್ನು ಮನೆಗೆ ಕಳುಹಿಸುತ್ತೇನೆ ಎಂದು ಧೈರ್ಯ ಹೇಳಿದರು. ಇದನ್ನೂ ಓದಿ: ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಧಿಯಾ, ಇಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ದಾಳಿಯಿಂದ ತತ್ತರಿಸಿರುವ ಜನರಿಗೆ ಧೈರ್ಯ ತುಂಬಲಾಗಿದೆ. ಇವರನ್ನು ತಕ್ಷಣವೇ ಇಲ್ಲಿಂದ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಇತ್ತ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಹಂಗೇರಿಯಲ್ಲಿ, ಕಿರಣ್ ರಿಜಿಜು ಸ್ಲೋವಾಕಿಯಾದಲ್ಲಿ, ವಿಕೆ ಸಿಂಗ್ ಪೋಲೆಂಡ್‍ನಲ್ಲಿ ಭಾರತೀಯರ ತೆರವು ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್ ನೆರೆಯ ನಾಲ್ಕು ದೇಶಗಳಿಂದ ಮೂರು ದಿನಗಳಲ್ಲಿ ಸುಮಾರು 5000 ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ಪ್ಲ್ಯಾನ್ ಮಾಡಲಾಗುತ್ತಿದೆ. ಆಪರೇಷನ್ ಗಂಗಾ ಮಿಷನ್ ಗೆ ಸಿ 17 ವಿಮಾನ ಬಳಕೆ ಮಾಡಲಾಗುತ್ತಿದೆ. ಇಂದೇ ಎರಡು ದೇಶಗಳಿಗೆ ಸಿ 17 ವಿಮಾನ ತೆರಳು ಸಾಧ್ಯತೆ ಇದ್ದು, ಮುಂದಿನ 3-4 ದಿನಗಳಲ್ಲಿ ಬೃಹತ್ ಕಾರ್ಯಚರಣೆ ನಡೆಯಲಿದೆ. ಕಳೆದ ಆರು ದಿನಗಳಲ್ಲಿ ಕೇವಲ ಎರಡು ಸಾವಿರ ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದ್ದು, ನವೀನ್ ಸಾವಿನ ಬೆನ್ನಲೆ ತುರ್ತು ಕಾರ್ಯಚರಣೆಗೆ ವಿದೇಶಾಂಗ ಇಲಾಖೆ ಇಳಿದಿದೆ.