Tag: ಕೇಂದ್ರ ಸಚಿವರು

  • ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

    ಕಲಬುರಗಿ: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao Gold Smuggling Case) ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎಂಬುದು ಶುದ್ಧ ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanprakash Patil) ಬಾಂಬ್‌ ಸಿಡಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರನ್ಯಾ ಭಾಗಿಯಾಗಿರುವ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತವೆ. ಹಾಗಾಗಿ, ಬಹುಶಃ ತಪ್ಪು ಅಂದಾಜಿನಿಂದ ಹಾಗೆ ಹೇಳಿರಬಹುದು ಎಂದರು.

    ವಿಮಾನ ನಿಲ್ದಾಣಗಳಲ್ಲಿ ಶಿಷ್ಟಾಚಾರದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿ ಬರುತ್ತದೆ. ಹೀಗಾಗಿ ನಮ್ಮ ಸರ್ಕಾರದ ಯಾವುದೇ ಸಚಿವರು ಭಾಗಿಯಾಗಿರುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

    ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:
    ಮುಂದಿನ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಐಸಿಸಿ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು. ಅದಕ್ಕಾಗಿ ಅವರ ಸಮಯ ಕೇಳಲಾಗಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

    ಇನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಇಬ್ಬರ ಸಾವಿನ ಪ್ರಕರಣ ಕುರಿತು ಪ್ರಸ್ತಾಪಿಸಿದ ಅವರು, ಇದುವರೆಗೆ ಜಿಮ್ಸ್ ನಲ್ಲಿ ಇಂತಹ ಪ್ರಕರಣ ನಡೆದಿಲ್ಲ. ಮಾಧ್ಯಮಗಳ ಮೂಲಕ ತಮಗೆ ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಣ್ಣ ತಪ್ಪಾಗಿದ್ದರೂ ಸಹಿಸುವುದಿಲ್ಲ. ಈ ಬಗ್ಗೆ‌ ತನಿಖೆ ನಡೆಸಲಾಗುವುದು ಎಂದು ಖಾತ್ರಿಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು? 

  • ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

    ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದೆ. ಇಂದು 36 ಹೊಸಬರು ಸೇರಿ 43 ಮಂದಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ ನಾಲ್ವರು ಸಂಸದರು ಸೇರಿದ್ದಾರೆ. ನೂತನ ಸಚಿವರಿಗೆ ಖಾತೆಯನ್ನು ಸಹ ಹಂಚಿಕೆ ಮಾಡಲಾಗಿದೆ.

    ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ್ ಖೂಬಾ, ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಾಲ್ವರು ಸಚಿವರಾಗುವುದರೊಂದಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಚಿವರ ಸಂಖ್ಯೆ ಆರಕ್ಕೇರಿದೆ.

    ಹೊಸದಾಗಿ ಸೃಷ್ಟಿಯಾಗಿರುವ ಸಹಕಾರ ಖಾತೆಯನ್ನು ಅಮಿತ್ ಶಾ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

    ಯಾರಿಗೆ ಯಾವ ಖಾತೆ?
    ಪ್ರಧಾನಿ ನರೇಂದ್ರ ಮೋದಿ- ವಿಜ್ಞಾನ ಮತ್ತು ತಂತ್ರಜ್ಞಾನ
    ಅಮಿತ್ ಶಾ – ಗೃಹ ಖಾತೆಯ ಜೊತೆಗೆ ಸಹಕಾರ
    ಜ್ಯೋತಿರಾದಿತ್ಯ ಸಿಂಧಿಯಾ- ನಾಗರಿಕ ವಿಮಾನಯಾನ
    ಹರ್ದೀಪ್ ಪುರಿ – ವಸತಿ, ನಗರಾಭಿವೃದ್ಧಿ ಜೊತೆಗೆ ಹೆಚ್ಚುವರಿಯಾ ಇಂಧನ
    ಧರ್ಮೇಂದ್ರ ಪ್ರಧಾನ್ – ಶಿಕ್ಷಣ
    ಪಿಯುಷ್ ಗೋಯಲ್ – ವಾಣಿಜ್ಯ ಜೊತೆಗೆ ಹೆಚ್ಚುವರಿಯಾಗಿ ಜವಳಿ
    ಶೋಭಾ ಕರಂದ್ಲಾಜೆ – ಕೃಷಿ ಮತ್ತು ರೈತರ ಕಲ್ಯಾಣ ಖಾತೆ(ರಾಜ್ಯ ಖಾತೆ)
    ನಾರಾಯಣ ಸ್ವಾಮಿ- ಸಾಮಾಜಿಕ ನ್ಯಾಯ ಮತ್ತು ಸಬಲಿಕರಣ
    ರಾಜೀವ್ ಚಂದ್ರಶೇಖರ್ – ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ(ರಾಜ್ಯ ಖಾತೆ)
    ಭಗವಂತ ಖುಬಾ – ರಾಸಾಯನಿಕ ಮತ್ತು ರಸಗೊಬ್ಬರ(ರಾಜ್ಯ ಖಾತೆ)
    ಸರ್ಬಾನಂದ ಸೋನೊವಾಲ್- ಬಂದರುಗಳು, ಹಡಗು ಮತ್ತು ಜಲ ಮಾರ್ಗಗಳು ಜೊತೆಗೆ ಆಯುಷ್
    ನಿರ್ಮಲಾ ಸೀತಾರಾಮನ್- ಹಣಕಾಸು
    ಪ್ರಹ್ಲಾದ್ ಜೋಷಿ- ಸಂಸದೀಯ ವ್ಯವಹಾರಗಳ ಖಾತೆ

  • ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ, ಕೇಂದ್ರ ಸಚಿವರ ಭೇಟಿ: ಬಿಎಸ್‍ವೈ

    ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ, ಕೇಂದ್ರ ಸಚಿವರ ಭೇಟಿ: ಬಿಎಸ್‍ವೈ

    ನವದೆಹಲಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

    ದೆಹಲಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನ-1 ‘ಕಾವೇರಿ’ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಲಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಯೋಜನೆಗೆ ಅನುದಾನ ಮತ್ತು ಒಪ್ಪಿಗೆ ಪಡೆಯಲಿದ್ದೇವೆ ಎಂದರು.

    ಇದಕ್ಕೂ ಮುನ್ನ ಕರ್ನಾಟಕ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ಎರಡು ತಳ ಮಹಡಿಗಳೂ, ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡಂತೆ ಒಟ್ಟು ಒಂಭತ್ತು ಮಹಡಿಗಳ ಈ ಕಟ್ಟಡವನ್ನು ನಿರ್ಮಾಣಕ್ಕೆ ಬಾಲಾಜಿ ಕೃಪಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್‍ಗೆ ನೀಡಿದೆ. ಮುಂದಿನ 24 ತಿಂಗಳಲ್ಲಿ ಕಟ್ಟಡದ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

  • ‘ಲಕ್ಷ್ಮಣ ಸವದಿ ಮುಂದಿನ ಸಿಎಂ’ – ಡಿಸಿಎಂ ಬೆಂಬಲಿಗರಿಂದ ಪೋಸ್ಟ್

    ‘ಲಕ್ಷ್ಮಣ ಸವದಿ ಮುಂದಿನ ಸಿಎಂ’ – ಡಿಸಿಎಂ ಬೆಂಬಲಿಗರಿಂದ ಪೋಸ್ಟ್

    – ಕೇಂದ್ರ ನಾಯಕರ ಭೇಟಿ ಮಾಡಿದ ಸವದಿ
    – ಸವದಿಗೆ ಶಾಕ್ ಕೊಡ್ತಾರಾ ಬಿಎಸ್‍ವೈ?

    ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ ನಡೆಸುತ್ತಿದ್ದಾರೆ.

    ಈಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗಿದ್ದು, ಈಗ ಬಿಜೆಪಿಯಲ್ಲಿ ಒಳಾಂಗಣ ರಾಜಕೀಯ ನಡೆಯುತ್ತಿದೆಯಾ ಎಂಬ ಅನುಮಾನಗಳು ಮೂಡಿವೆ. ಲಕ್ಷ್ಮಣ ಸವದಿಯವರು ದೆಹಲಿಗೆ ಹೋಗಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ನಂತರ ಈ ಪೋಸ್ಟ್ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಲವಾರು ಅನುಮಾನಗಳು ಮೂಡಿವೆ.

    ಈಗ ಈ ಸೂಚನೆ ತಿಳಿದೇ ಸಿಎಂ ಯಡಿಯೂರಪ್ಪನವರು ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಗಳನ್ನು ನೀಡಿದ್ದು, ಈ ಮೂಲಕ ಯಡಿಯೂರಪ್ಪ ಉತ್ತರ ಕರ್ನಾಟಕದ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವ ಮೆಗಾ ಪ್ಲಾನ್ ಮಾಡಿದ್ದು, ಮುಂದಿನ ತಿಂಗಳು ಸಂಪುಟವನ್ನು ವಿಸ್ತರಣೆ ಮಾಡಿ ಸಿಎಂ ಆಗುವ ಕನಸು ಕಂಡಿರುವ ಸವದಿಗೆ ಶಾಕ್ ಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಮುಂದಿನ ಸಿಎಂ ಲಕ್ಷ್ಮಣ್ ಸವದಿ ಎಂದು ಅಭಿಮಾನಿಗಳ ಅಭಿಯಾನ ವಿಚಾರದ ಬಗ್ಗೆ ಮಾತನಾಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನನಗೆ ಅದರ ಬಗ್ಗೆ ಗೊತ್ತಿಲ್ಲ. ಆದರ ಆಗಲಿ ಪಾಪ ನಸೀಬ್ ಇದ್ರೆ ಲಕ್ಷ್ಮಣ್ ಸವದಿ ಸಿಎಂ ಆಗಲಿ ಎಂದು ಹೇಳಿದ್ದಾರೆ. ಜೊತೆಗೆ ಸಂಪುಟದಿಂದ ಲಕ್ಷ್ಮಣ್ ಸವದಿಗೆ ಕೊಕ್ ಕೊಟ್ಟು ರಮೇಶ್ ಜಾರಕಿಹೊಳಿಯವರನ್ನು ಯಡಿಯೂರಪ್ಪ ಡಿಸಿಎಂ ಮಾಡುತ್ತಾರೆ ಎಂಬ ವಿಚಾರಗಳು ಕೇಳಿಬರುತ್ತಿವೆ.

  • ಸಿಎಂ ಒಪ್ಪಿಗೆ ಪಡೆದೇ ಕೇಂದ್ರ ಸಚಿವರ ಭೇಟಿಗೆ ಬಂದಿದ್ದೇನೆ, ರಾಜಕೀಯ ಚಟುವಟಿಕೆ ನಡೆಸಿಲ್ಲ: ಸಚಿವ ಲಕ್ಷ್ಮಣ ಸವದಿ

    ಸಿಎಂ ಒಪ್ಪಿಗೆ ಪಡೆದೇ ಕೇಂದ್ರ ಸಚಿವರ ಭೇಟಿಗೆ ಬಂದಿದ್ದೇನೆ, ರಾಜಕೀಯ ಚಟುವಟಿಕೆ ನಡೆಸಿಲ್ಲ: ಸಚಿವ ಲಕ್ಷ್ಮಣ ಸವದಿ

    ನವದೆಹಲಿ: ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಸಿಎಂ ಬಿಎಸ್‍ವೈ ಅನುಮತಿ ಪಡೆದೇ ದೆಹಲಿಗೆ ಆಗಮಿಸಿದ್ದೇನೆ. ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಿಲ್ಲ. ಹಿರಿಯ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

    ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ನಾನು ರಾಜ್ಯಪಾಲರ ಭೇಟಿಗೆ ದೆಹಲಿಗೆ ಆಗಮಿಸಿದ್ದು ನಿಜ. ರಾಜ್ಯಪಾಲರ ಆರೋಗ್ಯ ವಿಚಾರಿಸಲು ಅವರನ್ನು ಭೇಟಿ ಮಾಡಿದ್ದೆ. ಇತ್ತೀಚೆಗೆ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆದಿತ್ತು. ಹೀಗಾಗಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದು ಹೊರತು ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದರು.

    ರಾಜ್ಯಪಾಲರ ಜೊತೆಗಿನ ಅರ್ಧ ಗಂಟೆಯ ಮಾತುಕತೆಯಲ್ಲಿ ಸಹಕಾರಿ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವು. ಅವರು ಸಹಕಾರಿ ಕ್ಷೇತ್ರದಿಂದ ಹಿನ್ನೆಲೆಯವರಾದ ಕಾರಣ ಪ್ರಸ್ತುತ ಸಹಕಾರಿ ಬೆಳವಣಿಗಗಳ ಬಗ್ಗೆ ಮಾತನಾಡಿದ್ದೇವು ಎಂದು ಹೇಳಿದರು.

    ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡ್ಕೇರ್ ಭೇಟಿಗೆ ಸಮಯ ಕೋರಿದೆ. ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳನ್ನು ತರುವ ಬಗ್ಗೆ ಮಾತುಕತೆ ನಡೆಸಬೇಕಿದೆ. ಹೀಗಾಗಿ ಇಬ್ಬರು ಸಚಿವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚೆ ಮಾಡುತ್ತೇನೆ. ನಾನು ಸಿಎಂ ಒಪ್ಪಿಗೆ ಪಡೆದೇ ದೆಹಲಿಗೆ ಬಂದಿದ್ದು, ಇದಕ್ಕೆ ರೆಕ್ಕೆ ಕಟ್ಟುವ ಅವಶ್ಯಕತೆ ಇಲ್ಲ ಎಂದು ಸವದಿ ಹೇಳಿದರು.

    ಸಂಪುಟ ವಿಸ್ತರಣೆ, ಪುನಾರಚನೆ ವಿಚಾರದಲ್ಲಿ ಸಿಎಂಗೆ ಪರಮಾಧಿಕಾರ ಇದೆ. ಅವರು ಸಂಪುಟ ಪುನಾರಚನೆ, ವಿಸ್ತರಣೆ ಏನಾದರೂ ಮಾಡಲಿ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

    ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾಗಿದ್ದು, ಮುಖ್ಯಮಂತ್ರಿಯಾಗಿ ಲಕ್ಷ್ಮಣ ಸವದಿ ಬದಲಾಗಲಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದವು. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ದೆಹಲಿಯಲ್ಲಿ ಸ್ಪಷ್ಟನೆ ನೀಡಿದರು.

  • ಬಿಜೆಪಿ ನಾಯಕರಿಗೆ, ಕೇಂದ್ರ ಸಚಿವರು, ರಾಜ್ಯ ಸಚಿವರಿಗೆ ಕೊರೊನಾ ಭಯ!

    ಬಿಜೆಪಿ ನಾಯಕರಿಗೆ, ಕೇಂದ್ರ ಸಚಿವರು, ರಾಜ್ಯ ಸಚಿವರಿಗೆ ಕೊರೊನಾ ಭಯ!

    ಬೆಂಗಳೂರು: ಕೊರೊನಾಗೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಕೊರೊನಾ ಸೋಂಕಿನಿಂದ ಎಚ್ಚರ ವಹಿಸಲು ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಕೈಗೊಂಡಿದೆ. ಸಭೆ, ಸಮಾರಂಭಗಳನ್ನ ರದ್ದುಪಡಿಸಲು ಸೂಚನೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವರು, ರಾಜ್ಯ ಸಚಿವರು, ಬಿಜೆಪಿ ನಾಯಕರು ಕೊರೊನಾಗೆ ಬೆಚ್ಚಿದ್ದು, ತಮ್ಮ ತಮ್ಮ ಕಾರುಗಳಲ್ಲಿ ಸ್ಯಾನಿಟೈಸರ್ ಇಡುವುದು ಕಡ್ಡಾಯ ಮಾಡಿದ್ದಾರೆ.

    ಅಂದಹಾಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಇತ್ತು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಗೆ ಕೇಂದ್ರ ಸಚಿವರಾದ ಡಿವಿಎಸ್, ಪ್ರಹ್ಲಾದ್ ಜೋಶಿ ಬಂದಿದ್ರು. ಕೋರ್ ಕಮಿಟಿ ಸದಸ್ಯರಾಗಿರುವ ಸಿಎಂ ಯಡಿಯೂರಪ್ಪ ಸೇರಿದಂತೆ ಅವರ ಕ್ಯಾಬಿನೆಟ್‍ನ ಕೆಲವು ಸಚಿವರು ಸಭೆಯಲ್ಲಿ ಭಾಗವಹಿಸಿದ್ರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೂ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ಬಿಜೆಪಿ ಕಚೇರಿ ಮುಂಭಾಗ ಸಭೆ ಮುಗಿಯುವ ತನಕ ರಸ್ತೆ ಬಂದ್ ಮಾಡಲಾಗಿತ್ತು. ಈ ನಡುವೆ ಕೇಂದ್ರ ಸಚಿವರ ಕಾರು, ರಾಜ್ಯ ಸಚಿವರ ಕಾರು, ಬಿಜೆಪಿ ರಾಜ್ಯಾಧ್ಯಕ್ಷರ ಕಾರಿನಲ್ಲಿ ಸ್ಯಾನಿಟೈಸರ್ ಅನ್ನು ಕಡ್ಡಾಯವಾಗಿ ಇಡಲಾಗಿತ್ತು. ಕಾರು ಹತ್ತುವ ಮುನ್ನ ಸಚಿವರುಗಳು ಸ್ಯಾನಿಟೈಸರ್ ಬಳಸುತ್ತಿದ್ದು ಸಾಮಾನ್ಯವಾಗಿತ್ತು.

    ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಕೊರೊನಾ ಸೋಂಕಿನ ಕ್ರಮಗಳ ಬಗ್ಗೆ ಚರ್ಚಿಸಲಾಯ್ತು. ಬಿಜೆಪಿ ಕಾರ್ಯಕರ್ತರನ್ನ ಬಳಸಿಕೊಂಡು ಜಾಗೃತಿ ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಅಂತಾ ಕೋರ್ ಕಮಿಟಿ ಸದಸ್ಯ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಕೋರ್ ಕಮಿಟಿ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಕೊರೊನಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಬಗ್ಗೆ ಸಮಾಧಾನ ವ್ಯಕ್ತಪಡಿಸಿದೆ ಎಂದರು.

    ಕೊರೊನಾ ಬಗ್ಗೆ ಎಲ್ಲಾ ಹಂತದ ಕಾರ್ಯಕರ್ತರರಿಂದ ಜಾಗೃತಿಗೆ ಸೂಚನೆ ಕೊಟ್ಟಿದ್ದೇವೆ. ದೊಡ್ಡ ದೊಡ್ಡ ಸಭೆಗಳು ನಡೆಸಬಾರದು ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

  • ನಮ್ಮ ಮುಂದಿನ ಗುರಿ ಪಿಓಕೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

    ನಮ್ಮ ಮುಂದಿನ ಗುರಿ ಪಿಓಕೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

    ನವದೆಹಲಿ: ನಮ್ಮ ಮುಂದಿನ ಗುರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan-occupied Kashmir -PoK) ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಡಕ್ ಸಂದೇಶ ರವಾನಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದಿಟ್ಟತನ ತೋರಿತು. ಅದರಂತೆ ಮುಂದಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಮತ್ತೆ ಭಾರತದ ಸುಪರ್ದಿಗೆ ತರುವ ಅಜೆಂಡಾ ಹೊಂದಿದ್ದೇವೆ. ಈ ನಿರ್ಧಾರ ನಮ್ಮ ಪಕ್ಷದ ತೀರ್ಮಾನ ಮಾತ್ರವಲ್ಲ, 1994ರಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವೇಳೆ ಲೋಕಸಭೆಯಲ್ಲಿ ಇದು ಸರ್ವಾನುಮತದಿಂದ ಅಂಗೀಕಾರವಾಗಿತ್ತು ಎಂದು ತಿಳಿಸಿದರು.

    ಕೇಂದ್ರ ಸಚಿವರು ಪಿಓಕೆ ಬಗ್ಗೆ ಮಾತನಾಡಿದ್ದು ಇದೇ ಮೊದಲೇನಲ್ಲ. ಕಳೆದ ತಿಂಗಳು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಜಿತೇಂದ್ರ ಸಿಂಗ್ ಅವರು, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಜನರು ಪಿಓಕೆ ಭಾರತದೊಂದಿಗೆ ಸಂಯೋಜನೆಗೊಳ್ಳಬೇಕು ಅಂತ ಪ್ರಾರ್ಥಿಸಬೇಕು. ದೇಶದಲ್ಲಿ ಪಿಒಕೆ ಏಕೀಕರಣಗೊಳ್ಳುವುದನ್ನು ನಾವು ನೋಡಬೇಕು. ಮುಜಫರಾಬಾದ್‍ಗೆ ಹೋಗುವ ಜನರು ಅಡೆತಡೆಯಿಲ್ಲದೆ ಓಡಾಡುವಂತಾಗಲಿ ಎಂದು ಹೇಳಿದ್ದರು.

    ಇದೇ ವಿಚಾರವಾಗಿ ಮಾತನಾಡಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತ ಮತ್ತು ಪಾಕ್ ಮಧ್ಯೆ ಮಾತುಕತೆ ನಡೆಯುವುದಾದರೆ ಅದು ಕೇವಲ ಪಾಕ್ ಆಕ್ರಮಿತ ಕಾಶ್ಮೀರದ (ಪಿಓಕೆ) ಬಗ್ಗೆ ಮಾತ್ರ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದು ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ. ಈ ನಿರ್ಧಾರ ತಪ್ಪು ಅಂತ ಪಾಕಿಸ್ತಾನವು ವಿಶ್ವಸಂಸ್ಥೆಗೆ ದೂರು ನೀಡಿದೆ. ಭಯೋತ್ಪಾದನೆ ನಿಲ್ಲಿಸಿದರೆ ಮಾತ್ರ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದರು.

  • ಕೇಂದ್ರದ ಇಬ್ಬರು ಸಚಿವರಿಂದ ಡಿಕೆಶಿ ಬಚಾವ್?

    ಕೇಂದ್ರದ ಇಬ್ಬರು ಸಚಿವರಿಂದ ಡಿಕೆಶಿ ಬಚಾವ್?

    ಬೆಂಗಳೂರು: ಇಡಿ ಅಧಿಕಾರಿಗಳಿಂದ ಶುಕ್ರವಾರ ಹೇಗೋ ಡಿಕೆ ಶಿವಕುಮಾರ್ ಅವರು ಬಚಾವ್ ಆಗಿದ್ದು, ಟ್ರಬಲ್ ಶೂಟರ್ ನೆರವಿಗೆ ಕಾಂಗ್ರೆಸ್ ನಾಯಕರು ಯಾರು ಬರಲಿಲ್ಲ. ಆದರೆ ಇಬ್ಬರು ನಾಯಕರಿಂದಾಗಿ ಮಾಜಿ ಸಚಿವರು ಬಚಾವ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಹೌದು. ಡಿ.ಕೆ ಶಿವಕುಮಾರ್ ಅವರನ್ನು ಬಂಧನದ ಸಂಕಷ್ಟದಿಂದ ಕೇಂದ್ರದ ಇಬ್ಬರು ಸಚಿವರುಗಳು ಪಾರು ಮಾಡಿದ್ದಾರೆ. ಆ ಇಬ್ಬರು ಸಚಿವರು ಡಿ.ಕೆ ಶಿವಕುಮಾರ್ ಜೊತೆ ವ್ಯಾವಹಾರಿಕ ಕಾರಣಗಳಿಂದಾಗಿ ಆಪ್ತ ಸಂಬಂಧ ಹೊಂದಿದ್ದಾರೆ ಎನ್ನಲಾಗುತ್ತಿದೆ.

    ತಮಗೆ ಇಡಿ ಸಂಕಷ್ಟ ಎದುರಾಗುತ್ತಿದ್ದಂತೆ ಡಿಕೆಶಿ ಆ ಇಬ್ಬರು ಕೇಂದ್ರ ಸಚಿವರ ಮೊರೆ ಹೋಗಿದ್ದಾರೆ. ಆ ಪವರ್ ಫುಲ್ ಸಚಿವರುಗಳೊಂದಿಗಿನ ವ್ಯಾವಹಾರಿಕ ಸಂಬಂಧವೇ ಡಿಕೆಶಿಯವರನ್ನು ಬಂಧನದ ಭೀತಿಯಿಂದ ಪಾರು ಮಾಡಿದೆ ಎಂಬ ಮಾತುಗಳು ದೆಹಲಿ ಮಟ್ಟದಲ್ಲಿ ಕೇಳಿ ಬರುತ್ತಿವೆ. ಆದರೆ  ಆ ಇಬ್ಬರು ಕೇಂದ್ರ ಸಚಿವರ ಹೆಸರು ತಿಳಿದುಬಂದಿಲ್ಲ.

    ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ರಾಜ್ಯ ಕಾಂಗ್ರೆಸ್ ನಾಯಕರು ಈ ಹಿಂದೆಯೂ ನನ್ನ ಬೆಂಬಲಕ್ಕೆ ಬಂದಿರಲಿಲ್ಲ. ನನ್ನ ಮೇಲೆ ಐಟಿ ರೇಡ್ ಆದಾಗ ನಮ್ಮ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದು ಹೇಳಿ ರಾಜ್ಯ ನಾಯಕರಿಗೆ ಟಾಂಗ್ ನೀಡಿದ್ದರು.

    ಡಿಕೆ ಶಿವಕುಮಾರ್ ಅವರಿಂದ ಈ ಹೇಳಿಕೆ ಪ್ರಕಟವಾದ ಕೂಡಲೇ ಡಿಕೆಶಿ ಪರವಾಗಿ ಮಾತನಾಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದರು. ಅಲ್ಲದೆ ನಿನ್ನೆ ಮಧ್ಯಾಹ್ನ 1:10ಕ್ಕೆ ಸಿದ್ದರಾಮಯ್ಯ ಟ್ವೀಟ್ ಮಾಡಿ ಕೇಂದ್ರ ಸರ್ಕಾರ ಸಿಬಿಐ, ಇಡಿ ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕೇ ಹೊರತು ಹೀಗೆ ಅಧಿಕಾರ ದುರ್ಬಳಕೆ ಮೂಲಕ ಅಲ್ಲ ಎಂದು ಟೀಕಿಸಿದ್ದಾರೆ. ಆದರೆ ಟ್ವೀಟ್ ನಲ್ಲಿ ಎಲ್ಲಿಯೂ ಡಿಕೆ ಶಿವಕುಮಾರ್ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ.

    ಗುರುವಾರ ರಾತ್ರಿ ಡಿಕೆಶಿ ನಿವಾಸಕ್ಕೆ ಮಾಜಿ ಸಂಸದ ಶಿವರಾಮೇಗೌಡ ಆಗಮಿಸಿದ್ದರು. ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ನಾರಾಯಣ ಗೌಡ ಭೇಟಿ ನೀಡಿ ಮಾತನಾಡಿದ್ದರು. ಆದರೆ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಪ್ರಮುಖ ನಾಯಕರು ಡಿಕೆ ಶಿವಕುಮಾರ್ ನಿವಾಸಕ್ಕೆ ಬಂದಿರಲಿಲ್ಲ.

  • ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬಿಎಸ್‍ವೈ

    ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬಿಎಸ್‍ವೈ

    – ಸಂಪುಟ ರಚನೆ ಮತ್ತೆ ಮುಂದೂಡಿಕೆ

    ನವದೆಹಲಿ: ಸಂಪುಟ ರಚನೆ ಸಂಬಂಧ ಬಿಜೆಪಿ ಹೈಕಮಾಂಡ್ ಭೇಟಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ದೆಹಲಿಗೆ ತೆರಳಿ, ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಆಸ್ಪತ್ರೆ ನೀಡಬೇಕು. ಕೃಷ್ಣಾ, ಮಹಾದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಬೇಕು, ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ನಿತಿನ್ ಗಡ್ಕರಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಸಂಸತ್‍ನಲ್ಲಿ ಭೇಟಿಯಾದರು. ನರೇಂದ್ರ ಸಿಂಗ್ ತೋಮರ್ ಅವರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ನೋಂದಣಿ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸುವಂತೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿ 2019-20ರ ಅನುದಾನ ಬಿಡುಗಡೆ ಹಾಗೂ ರಾಜ್ಯ ಸರ್ಕಾರವು 2015-16, 2016-17 ಮತ್ತು 2019-20ರಲ್ಲಿ ಪಾವತಿಸಿರುವ ಮುಂಗಡ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಶಿವಮೊಗ್ಗ ನಗರಕ್ಕೆ ರಿಂಗ್ ರೋಡ್, ಬೆಳಗಾವಿ, ಚಿಕ್ಕಮಗಳೂರು ಸೇರಿ ರಾಜ್ಯದ ಹಲವೆಡೆ ಹೆದ್ದಾರಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರು ಮನವಿ ಸಲ್ಲಿಸಿದ್ದಾರೆ. ಜೊತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸೌಜನ್ಯಯುತ ಭೇಟಿ ಮಾಡಿದ್ದಾರೆ.

    ದೆಹಲಿಯಲ್ಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು ರಾಜ್ಯ ಸಂಸದರ ಜೊತೆ ಸಭೆ ನಡೆಸಿದ್ದರು. ದೆಹಲಿ ಕರ್ನಾಟಕ ಭವನದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಚರ್ಚೆ ನಡೆಸಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ ಸೇರಿದಂತೆ ರಾಜ್ಯ ಬಿಜೆಪಿಯ ಎಲ್ಲಾ ಸಂಸದರು ಹಾಜರಾಗಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್‍ನಿಂದ ಡಿ.ಕೆ.ಸುರೇಶ್, ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ, ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.

    ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಮತ್ತು ಸಂಸತ್‍ನಲ್ಲಿ ಒಗ್ಗಟ್ಟಾಗಿ ಇರಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಸಭೆಯಲ್ಲಿ ಕೃಷ್ಣಾ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಒಗ್ಗಟ್ಟಿನಿಂದ ಧ್ವನಿ ಎತ್ತಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು.

    ಸಂಪುಟ ರಚನೆ ಸಂಬಂಧ ಸಾಕಷ್ಟು ನಿರೀಕ್ಷೆ ಹೊತ್ತು ದೆಹಲಿಗೆ ತೆರಲಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಇಂದು ನಿರಾಸೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾದರೂ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಯಲಿಲ್ಲ. ಲೋಕಸಭೆ ಕಲಾಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ಯುಸಿ ಆಗಿದ್ದ ಹಿನ್ನೆಲೆ ಬುಧವಾರ ಚರ್ಚೆ ನಡೆಸೋಣ ಎಂದು ಕಾರ್ಯಧ್ಯಕ್ಷ ಜೆ.ಪಿ ನಡ್ಡ ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಿ.ಎಸ್.ಯಡಿಯೂರಪ್ಪನವರು ಇಂದು ಬೆಳಗ್ಗೆ ಸಂಸತ್‍ನಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ರಚನೆ ಸಂಬಂಧ ಪ್ರಸ್ತಾವಣೆ ಸಲ್ಲಿಸಿದರು. ಆದರೆ ಕಾಶ್ಮೀರ ವಿಚಾರ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಾಕಷ್ಟು ಬ್ಯುಸಿಯಾಗಿದ್ದಾರೆ. ಇಂದು ಸಭೆ ನಡೆಸಿದರು ಅದು ಪೂರ್ಣವಾಗದು ಎಂದು ನಡ್ಡಾ ಅಭಿಪ್ರಾಯ ವ್ಯಕ್ತಪಡಿಸಿದರು. ಹೀಗಾಗಿ ಇಂದಿನ ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸಿ ನಾಳೆಗೆ ಅಮಿತ್ ಶಾ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳೊಣ ಎಂದು ನಡ್ಡ ಭರವಸೆ ನೀಡಿದ್ದಾರಂತೆ. ಹಾಗಾಗಿ ಸಂಪುಟ ರಚನೆ ಕನಸು ಕಂಡಿದ್ದ ಬಿಎಸ್‍ವೈ ಅವರು ಇನ್ನೊಂದು ದಿನ ಕಾಯಬೇಕಿದೆ.

  • ಸಂಸತ್ ಕಲಾಪಕ್ಕೆ ಗೈರಾದವರ ವಿರುದ್ಧ ಮೋದಿ ಕೆಂಡಾಮಂಡಲ, ಪಟ್ಟಿ ನೀಡುವಂತೆ ಸೂಚನೆ

    ಸಂಸತ್ ಕಲಾಪಕ್ಕೆ ಗೈರಾದವರ ವಿರುದ್ಧ ಮೋದಿ ಕೆಂಡಾಮಂಡಲ, ಪಟ್ಟಿ ನೀಡುವಂತೆ ಸೂಚನೆ

    ನವದೆಹಲಿ: ಸಂಸತ್ ಕಲಾಪಕ್ಕೆ ಗೈರಾದ ಸಚಿವರು ಹಾಗೂ ಸಂಸದ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಸಂಸತ್ ಕಲಾಪಕ್ಕೆ ಗೈರಾದವರ ಪಟ್ಟಿಯನ್ನು ಸಂಜೆಯೊಳಗೆ ನೀಡುವಂತೆ ಸೂಚಿಸಿದ್ದಾರೆ.

    ಬಿಜೆಪಿ ಸಂಸದೀಯ ಪಕ್ಷದ ವಾರದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸಂಸತ್‍ಗೆ ಹಾಜರಾಗಿಯೂ ಕಲಾಪಕ್ಕೆ ಗೈರಾದವರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸೂಚಿಸಿದ್ದಾರೆ.

    ಪ್ರಧಾನಿ ಮೋದಿ ಅವರು ಈ ಹಿಂದೆಯೇ ತಮ್ಮ ಸಂಸದರಿಗೆ ಈ ಕುರಿತು ಸಲಹೆ ನೀಡಿದ್ದರು. ಇದೀಗ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿಯೂ ಸಹ ಎಚ್ಚರಿಕೆ ನೀಡಿದ್ದು, ರಾಜಕಾರಣವನ್ನು ಮೀರಿ ಕೆಲಸ ಮಾಡುವ ಕುರಿತು ಸಲಹೆ ನೀಡಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

    ನೀರಿನ ಸಮಸ್ಯೆ ಒತ್ತು ನೀಡಿ, ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ. ನಿಮ್ಮ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜನರೊಂದಿಗೆ ಸಂಪರ್ಕ ಬೆಳೆಸಿಕೊಳ್ಳಿ, ಪ್ರತಿ ದಿನ ನಿಮ್ಮ ಕಚೇರಿಯಲ್ಲಿ ಕುಳಿತು ಅಧಿಕಾರಿಗಳೊಂದಿಗೆ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಎಂದು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

    ಸಂಸದರು ಕಡ್ಡಾಯವಾಗಿ ನಿಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಕೆಲವು ವಿಶಿಷ್ಟ ಕೆಲಸಗಳನ್ನು ಮಾಡಬೇಕು. ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ ಎಂದು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕುಟುಕಿದ್ದಾರೆ.

    ಕ್ಷಯ ಮತ್ತು ಕುಷ್ಠರೋಗವನ್ನು ತಡೆಗಟ್ಟಲು ಮಿಷನ್ ಮೋಡ್‍ನಲ್ಲಿ ಸಂಸದರು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ಈ ಹಿಂದೆಯೂ ಸಹ ಪ್ರಧಾನಿ ಮೋದಿ ಅವರು ಸಂಸತ್ ಕಲಾಪಕ್ಕೆ ಗೈರಾಗುವ ಸಂಸದರನ್ನು ತರಾಟೆ ತೆಗೆದುಕೊಂಡಿದ್ದರು. ಆದರೂ ಸಂಸದರು ಕಲಾಪಕ್ಕೆ ಗೈರಾಗಿದ್ದಾರೆ. ಹೀಗಾಗಿ ಮೋದಿ ಗೈರಾದವರ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

    ಇತ್ತೀಚೆಗೆ ಅಧಿಕಾರಿ ಮೇಲೆ ಬ್ಯಾಟ್‍ನಿಂದ ಹಲ್ಲೆ ಮಾಡಿದ್ದ ಶಾಸಕ ಆಕಾಶ್ ವಿಜಯ್‍ವರ್ಗಿಯಾ ಅವರ ಗೂಂಡಾ ವರ್ತನೆಯನ್ನು ಉದಾಹರಣೆಯಾಗಿ ನೀಡಿ ತರಾಟೆಗೆ ತೆಗೆದುಕೊಂಡಿದ್ದರು. ಇದು ಯಾವ ರೀತಿಯ ವರ್ತನೆ, ಭಾಷೆಯ ಬಳಕೆ ಎಂಥಹದ್ದು, ಜನಪ್ರತಿನಿಧಿಗಳಾದವರು ಹೇಗಿರಬೇಕು ಎಂದು ಸಂಸದರಿಗೆ ಮೋದಿ ಕ್ಲಾಸ್ ತೆಗೆದುಕೊಂಡಿದ್ದರು. ಇಂತಹವರನ್ನು ಯಾವುದೇ ಮುಲಾಜಿಲ್ಲದೆ, ಯಾವ ನಾಯಕರ ಮಗನೆಂದೂ ನೋಡದೆ ಪಕ್ಷದಿಂದ ಹೊರಗೆ ಹಾಕಿ ಎಂದು ಗುಡುಗಿದ್ದರು.