Tag: ಕೇಂದ್ರ ಸರಕಾರ

  • ಪದವಿ ಮುಗಿದವರಿಗೆ ಮಿಲ್ಟ್ರಿ ತರಬೇತಿ ಕೊಡಿ : ನಟಿ ಕಂಗನಾ ರಣಾವತ್ ಸಲಹೆ

    ಪದವಿ ಮುಗಿದವರಿಗೆ ಮಿಲ್ಟ್ರಿ ತರಬೇತಿ ಕೊಡಿ : ನಟಿ ಕಂಗನಾ ರಣಾವತ್ ಸಲಹೆ

    ಭಾರತ ಸರಕಾರಕ್ಕೆ (Central Government) ಮತ್ತು ಶಿಕ್ಷಣ ಇಲಾಖೆಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್. ಯಾವ ಶತ್ರು, ಯಾವಾಗ ದೇಶದ ಮೇಲೆ ಆಕ್ರಮಣ ಮಾಡುತ್ತಾನೋ ಗೊತ್ತಿಲ್ಲ. ದೇಶವನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ಪದವಿ ಮುಗಿಯುತ್ತಿದ್ದಂತೆಯೇ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಮಿಲ್ಟ್ರಿ  (Military)ತರಬೇತಿ ಕೊಡುವಂತೆ ಕಂಗನಾ ಸಲಹೆ ನೀಡಿದ್ದಾರೆ.

    ಕಂಗನಾ ಅವರ ಸಲಹೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಬ್ಬರ ಹೃದಯದಲ್ಲೂ ಇದು ದೇಶ ಭಕ್ತಿ ತುಂಬಲಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಕಂಗನಾ ಅವರ ದೇಶಭಕ್ತಿಯ ಬಗ್ಗೆ ಕೊಂಡಾಡಿದ್ದಾರೆ. ಈ ಸಲಹೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ರಿಯ್ಯಾಕ್ಟ್ ಮಾಡಿದ್ದಾರೆ.

    ಇದರ ಜೊತೆಗೆ ಕಂಗನಾ ರಣಾವತ್  (Kangana Ranaut)ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹದೇವ್ ಬೆಟ್ಟಿಂಗ್ ಆಪ್ ಮಾಲೀಕರ ಮದುವೆಯಲ್ಲಿ ಪಾಲ್ಗೊಂಡಿರುವ ಮತ್ತು ಆ ಆಪ್ ಗೆ ಪ್ರಮೋಟ್ ಮಾಡಿದವರ ವಿರುದ್ಧ ಇಡಿ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಕರೆಯುತ್ತಿದೆ. ಈ ಕುರಿತು ಕಂಗನಾ ಮಾತನಾಡಿದ್ದಾರೆ. ಈ ಬೆಟ್ಟಿಂಗ್ ಆಪ್ ನವರು ನನ್ನನ್ನೂ ಅದರ ಭಾಗವಾಗುವಂತೆ ಕೇಳಿದ್ದರು. ನಾನು ಹೋಗಲಿಲ್ಲ ಎಂದಿದ್ದಾರೆ ಕಂಗನಾ.

     

    ಖ್ಯಾತ ನಟ ರಣಬೀರ್ ಕಪೂರ್, ಹಾಸ್ಯ ನಿರೂಪಕ ಕಪಿಲ್ ಶರ್ಮಾ (Kapil Sharma) ಸೇರಿದಂತೆ ಬಿಟೌನ್‍ನ ಒಟ್ಟು 34 ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ (Notice) ಜಾರಿ ಮಾಡಿದ್ದು, ಮೊನ್ನೆಯಿಂದಲೇ ಹಲವರಿಗೆ ವಿಚಾರಣೆಗೆ ಕರೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಈ ಹಿಂದೆ ಷರತ್ತುಬದ್ಧ ರಿಲೀಫ್ (Relief) ದೊರೆತಿತ್ತು. ಸಾಗರೋತ್ತರ ಭಾರತೀಯ ಪ್ರಜೆ ಕಾರ್ಡ್ ರದ್ದುಗೊಳಿಸಿದ್ದ ಆದೇಶದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ಶುಕ್ರವಾರ ವಿಸ್ತರಿಸಿದೆ. ಹಾಗಾಗಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

    ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೇ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದೆ.  ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

    ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

     

    ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.

  • ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಸ್ಸಾಂನಲ್ಲಿ ಶಿವ ಪಾರ್ವತಿ ವೇಷ ಹಾಕಿಕೊಂಡು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿರಿಂಚಿ ಬೋರಾ ಅವರನ್ನು ಅಲ್ಲಿ ಪೊಲೀಸರು ಬಂಧಿಸಿದ್ದಾರೆ. ತೈಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳಿಗಾಗಿ ಈ ಬಿರಿಂಚಿ ತನ್ನ ಸ್ನೇಹಿತೆಗೆ ಪಾರ್ವತಿ ವೇಷ ಹಾಕಿಸಿ, ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಆ ಪ್ರತಿಭಟನೆಗೆ ಧಾರ್ಮಿಕ ಮುಖವಾಡ ಹಾಕಿ, ಬಂಧಿಸಲಾಗಿದೆ ಎನ್ನಲಾಗುತ್ತಿದೆ.

    ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿವೆ. ಬಡವರಿಗೆ ಅವುಗಳನ್ನು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರಕಾರದ ವಿರುದ್ಧ ನಾನು ಪ್ರತಿಭಟಿಸುತ್ತೇನೆ. ಆ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿರಿಂಚಿ ಪೋಸ್ಟ್ ಮಾಡಿದ್ದ. ಹಲವರು ಈ ಪ್ರತಿಭಟನೆಯಲ್ಲಿ ಭಾಗಿ ಕೂಡ ಆಗಿದ್ದರು. ಈ ಸಂದರ್ಭದಲ್ಲಿ ಪಾರ್ವತಿ ಮತ್ತು ಶಿವ ಜಗಳ ಮಾಡಿದಂತೆ ಅಣಕು ಪ್ರದರ್ಶನ ನಡೆಸಿದ್ದಾರೆ. ಇದೇ ಆ ಹುಡುಗನಿಗೆ ಮುಳುವಾಗಿದೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ

    ಶಿವ ಮತ್ತು ಪಾರ್ವತಿಯ ಜಗಳವನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ, ಬಿರಿಂಚಿ ಬೋರಾನನ್ನು ಬಂಧಿಸಲಾಗಿದೆ. ಈ ಕುರಿತಂತೆ ಅಸ್ಸಾಂನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಅದು ಕಲೆಯ ಮೂಲಕ ಅಭಿವ್ಯಕ್ತಿ. ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಗೆ ಉದ್ಯೋಗ ಸೃಸ್ಟಿಸುವಂತೆ ವಿನಂತಿಸಿ ನೇಣಿಗೆ ಶರಣಾದ ವಿದ್ಯಾರ್ಥಿ!

    ಸಿಎಂ ಗೆ ಉದ್ಯೋಗ ಸೃಸ್ಟಿಸುವಂತೆ ವಿನಂತಿಸಿ ನೇಣಿಗೆ ಶರಣಾದ ವಿದ್ಯಾರ್ಥಿ!

    ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜ್ಯದಲ್ಲಿ ವಿದ್ಯಾವಂತ ಯುವಕರಿಗೆ ಉದ್ಯೋಗ ಸೃಸ್ಟಿ ಮಾಡುವಂತೆ ವಿನಂತಿಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

    ದಾವಣಗೆರೆ ವಿಶ್ವವಿದ್ಯಾಲಯ ದಲ್ಲಿ ಎಂಎ ಓದುತ್ತಿದ್ದ ಚನ್ನಗಿರಿ ತಾಲೂಕಿನ ಹೊಸ ನಗರ ಗ್ರಾಮದ ನಿವಾಸಿಯಾದ ಅನಿಲ್.ಬಿ (22)ಎಂಬವನೇ ನೇಣಿಗೆ ಶರಣಾದ ವಿದ್ಯಾರ್ಥಿ.

    ಸರ್ಕಾಗಳು ಯುವಜನತೆಗೆ ಅನ್ಯಾಯ ಮಾಡುತ್ತಿವೆ. ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಇದರಿಂದ ಸರ್ಕಾರ ಯುವಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಮನನೊಂದು ನೇಣಿಗೆ ಶರಣಾಗುತ್ತೇನೆ ಎಂದು ವಿಡಿಯೋ ಹೇಳಿದ್ದಾನೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಜನಾಂಗಕ್ಕೆ ಉದ್ಯೋಗ ಸೃಸ್ಟಿ ಮಾಡುವಲ್ಲಿ ವಿಫಲವಾಗಿವೆ. ಇದರಿಂದ ವಿದ್ಯಾವಂತರು ಕೂಲಿ ಮಾಡುವಂತಾಗಿದೆ. ಈ ನನ್ನ ಪರಿಸ್ಥಿತಿ ನನ್ನಂತಹ ಬಡವರಿಗೆ ಮಾತ್ರ ಅರ್ಥವಾಗುತ್ತದೆ. ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸಿ ಎಂದು ಯುವಕ ಅನಿಲ್ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಈ ನನ್ನ ಸಾವಿನಿಂದಾದರೂ ಎಚ್ಚೆತ್ತು ಸರ್ಕಾರ ವಿದ್ಯಾವಂತರಿಗೆ ಉದ್ಯೋಗ ಸೃಸ್ಟಿಮಾಡಲಿ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಸವ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.