Tag: ಕೇಂದ್ರ ಸರ್ಕಾರ

  • Public Tv Explainer |‌ ಬಂದೇ ಬಿಡ್ತು ಭಾರತ್ ಟ್ಯಾಕ್ಸಿ; ಚಾಲಕರು ಖುಷ್‌, ಪ್ರಯಾಣಿಕರು ದಿಲ್‌ಖುಷ್‌ – ಏನಿದರ ಪ್ರಯೋಜನ?

    Public Tv Explainer |‌ ಬಂದೇ ಬಿಡ್ತು ಭಾರತ್ ಟ್ಯಾಕ್ಸಿ; ಚಾಲಕರು ಖುಷ್‌, ಪ್ರಯಾಣಿಕರು ದಿಲ್‌ಖುಷ್‌ – ಏನಿದರ ಪ್ರಯೋಜನ?

    ಕ್ಯಾಬ್ ಬುಕ್ ಮಾಡಿದ ಮೇಲೆ ಡ್ರೈವರ್ (Driver) ಫೋನ್ ಮಾಡಿ ಎಲ್ಲಿಗೆ ಹೋಗ್ಬೇಕು? ಅಂತ ಕೇಳ್ತಾರೆ.. ನಂತರ ರೈಡ್‌ ಕ್ಯಾನ್ಸಲ್‌ ಮಾಡ್ತಾರೆ.. ಈ ಅನುಭವ ನಿಮಗೂ ಆಗಿದ್ಯಾ..? ಪೀಕ್ ಅವರ್‌ನಲ್ಲಿ ಆಕಾಶಕ್ಕೆ ಮುಟ್ಟುವಷ್ಟು ಬೆಲೆ ಏರಿಕೆಯಾಗಿ ತೊಂದರೆ ಅನುಭವಿಸಿದ್ದೀರಾ..? ಇನ್ನೂ ಕಮಿಷನ್‌ ಜಾಸ್ತಿ ತಗೋತಾರೆ, ನಮಗೆ ಕಡಿಮೆ ಕೊಡ್ತಾರೆ ಅಂತಾ ಚಾಲಕರ ಸಮಸ್ಯೆ ಕೇಳಿದೀರಾ..? ಇದಕ್ಕೆಲ್ಲ ಶೀಘ್ರವೇ ಬ್ರೇಕ್‌ ಬೀಳುತ್ತಿದೆ. ಕೇಂದ್ರ ಸರ್ಕಾರ ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯಲು ಮುಂದಾಗಿದೆ. ಓಲಾ-ಊಬರ್‌ನಂತಹ ಖಾಸಗಿ ಕಂಪನಿಗಳ ಏಕಸ್ವಾಮ್ಯಕ್ಕೆ ಸವಾಲೊಡ್ಡಲು, ಚಾಲಕರು ಮತ್ತು ಪ್ರಯಾಣಿಕರಿಬ್ಬರಿಗೂ ಅನುಕೂಲವಾಗುವಂತಹ ವೇದಿಕೆ ತರುತ್ತಿದೆ.

    ಹೌದು. ಸಂಚಾರ ಸುಗಮವಾಗಿಸಲು ಹಾಗೂ ಪ್ರಯಾಣಿಕರ ಹೊರೆ ತಗ್ಗಿಸಲು ಕೇಂದ್ರ ಸರ್ಕಾರ ನವೀನ ಉಪಕ್ರಮ ಜಾರಿಗೊಳಿಸಲಿದೆ, ಅದುವೇ ಭಾರತ್‌ ಟ್ಯಾಕ್ಸಿ. ಭಾರತ್ ಟ್ಯಾಕ್ಸಿ (Bharat Taxi) ಸರ್ಕಾರಿ ಬೆಂಬಲಿತ ಉಪಕ್ರಮವಾಗಿದ್ದು, ಇದನ್ನ ಕೇಂದ್ರ ಸಹಕಾರ ಸಚಿವಾಲಯ ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗ (NeGD) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಟ್ಯಾಕ್ಸಿಗಳು ದೇಶದ ಮೊದಲ ಸಹಕಾರಿ ಟ್ಯಾಕ್ಸಿ ಆಗಿ ಕಾರ್ಯನಿರ್ವಹಿಸಲಿದೆ. ದೆಹಲಿಯಲ್ಲಿ ಇದರ ಪೈಲಟ್ ಹಂತವನ್ನು (ಪ್ರಾಥಮಿಕ ಹಂತ) ನವೆಂಬರ್‌ನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲು 650 ಟ್ಯಾಕ್ಸಿಗಳು ಪ್ರಾಯೋಗಿಕವಾಗಿ ರಸ್ತೆಗೆ ಇಳಿಯಲಿದೆ. ಡಿಸೆಂಬರ್‌ನಲ್ಲಿ ಸೇವೆಯನ್ನ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುವುದು ಎಂದು NeGD ಮೂಲಗಳು ತಿಳಿಸಿವೆ.

    ಈ ಯೋಜನೆಯು ಸರ್ಕಾರಿ ಸೇವೆಯನ್ನ ಸುಗಮಗೊಳಿಸುವುದರ ಜೊತೆಗೆ ಗಳಿಕೆಯ ಸಂಪೂರ್ಣ ಹಣ ಸಿಗುವಂತೆ ಮಾಡುತ್ತಾರೆ, ಒಂದರ್ಥದಲ್ಲಿ ಚಾಲಕರೇ ಮಾಲೀಕರಾಗಿರ್ತಾರೆ. ಹಾಗಾದ್ರೇ ಏನಿದು ಭಾರತ್‌ ಟ್ಯಾಕ್ಸಿ? ಇದರಿಂದ ಪ್ರಯಾಣಿಕರಿಗೆ, ಚಾಲಕರಿಗೆ ಆಗುವ ಲಾಭ ಏನು? ಖಾಸಗಿ ಕಂಪನಿಗಳ ಆ್ಯಪ್‌ಗಿಂತ ಇದು ಹೇಗೆ ಭಿನ್ನ? ಭಾರತ್‌ ಟ್ಯಾಕ್ಸಿ ಹಿಂದೆ ಇರುವ ಶಕ್ತಿ ಯಾವುದು ಎಂಬುದನ್ನು ತಿಳಿಯೋಣ ಬನ್ನಿ…

    ಭಾರತ್‌ ಟ್ಯಾಕ್ಸಿ ಸೇವೆ ಅನುಷ್ಠಾನಕ್ಕೆ ಕಾರಣ ಏನು?
    ಕಳೆದ ಕೆಲ ವರ್ಷಗಳಲ್ಲಿ ಆ್ಯಪ್ ಆಧರಿತ ಟ್ಯಾಕ್ಸಿ ಸೇವೆಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳ ಪ್ರವಾಹವೇ ಹರಿದುಬಂದಿದೆ. ವಾಹನದ ಸ್ವಚ್ಛತೆ, ಕೆಲವೊಮ್ಮೆ ಹಠಾತ್‌ ದರ ಹೆಚ್ಚಳ, ಬುಕಿಂಗ್‌ ಕ್ಯಾನ್ಸಲ್‌ನಂತಹ ಸಮಸ್ಯೆಗಳ ಬಗ್ಗೆ ಜನ ದೂರು ನೀಡುತ್ತಲೇ ಬರ್ತಿದ್ದಾರೆ. ಇದರೊಂದಿಗೆ ಟ್ಯಾಕ್ಸಿ ಮಾಲೀಕರು ಅಥವಾ ಚಾಲಕರು ತಮ್ಮ ಗಳಿಕೆಯ ಸುಮಾರು 25% ಹಣವನ್ನ ಕಮಿಷನ್‌ ರೂಪದಲ್ಲಿ ಕಂಪನಿಗಳಿಗೆ ಪಾವತಿಸಬೇಕಾಗಿದೆ. ಹಾಗಾಗಿ ಗ್ರಾಹಕರು ಮತ್ತು, ಟ್ಯಾಕ್ಸಿ ಮಾಲೀಕರು ಇಬ್ಬರಿಗೂ ಆಗುತ್ತಿರುವ ತೊಂದರೆ ತಪ್ಪಿಸಲು ಕೇಂದ್ರ ಸರ್ಕಾರ ಈ ಮಹತ್ವದ ಹೆಜ್ಜೆಯನ್ನಿಟ್ಟಿದೆ.

    ಚಾಲಕರಿಗೆ ಏನು ಲಾಭ?
    ಈಗಿನ‌ ಆ್ಯಪ್ ಆಧರಿತ ಟ್ಯಾಕ್ಸಿಗಳು ಕಮಿಷನ್ ಪಾವತಿ ಮಾಡಬೇಕಿರುವುದರಿಂದ ಸಹಜವಾಗಿ ಪ್ರಯಾಣಿಕರ ಮೇಲೆ ಹೆಚ್ಚು ಚಾರ್ಜ್ ಮಾಡಲೇಬೇಕಿದೆ. ಆದರೆ ಭಾರತ್ ಟ್ಯಾಕ್ಸಿ ಕೇಂದ್ರ ಸರ್ಕಾರದ್ದಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಮಿಷನ್‌ ಪಾವತಿಸಬೇಕಿಲ್ಲ. ಪ್ರತಿ ಟಿಪ್‌ನ ಸಂಪೂರ್ಣ ಗಳಿಕೆಯನ್ನು ತಾವೇ ಪಡೆಯುತ್ತಾರೆ. ಅಲ್ಲದೇ ಅವರಿಗೆ ಸರ್ಕಾರಿ ಬೋನಸ್, ಡಿವಿಡೆಂಟ್‌ಗಳು ಕೂಡ ಸಿಗುತ್ತವೆ ಎನ್ನಲಾಗುತ್ತಿದೆ. ಸಾಧಾರಣ ಮೊತ್ತ ಪಾವತಿಸಿ ಆ್ಯಪ್ ಖರೀದಿ ಮಾಡಿದ್ರೆ ಮುಗೀತು. ಇದು ಚಾಲಕರು, ಪ್ರಯಾಣಿಕರು ಇಬ್ಬರಿಗೂ ಖುಷಿ ಕೊಡಲಿದೆ. ಏಕೆಂದ್ರೆ ಭಾರತ್ ಟ್ಯಾಕ್ಸಿ ಖಾಸಗಿ ಕಂಪನಿಯಾಗಿ ಅಲ್ಲ, ಸಹಕಾರಿ ಉದ್ಯಮವಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ʻಸಹಕಾರ್ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್’ ನಿರ್ವಹಿಸುತ್ತದೆ. 2025ರ ನೂನ್‌ನಲ್ಲಿ ಈ ಉದ್ಯಮವನ್ನ 500 ಕೋಟಿ ಆರಂಭಿಕ ಬಂಡವಾಳದೊಂದಿಗೆ ಶುರು ಮಾಡಲಾಯಿತು.

    ಇವರು ಚಾಲಕರಲ್ಲ ʻಸಾರಥಿʼಗಳು
    ಭಾರತ್‌ ಟ್ಯಾಕ್ಸಿಗಳು ರಸ್ತೆಗಳ ಮೇಲೆ ಸಂಚಾರ ಮಾಡಲು ಪ್ರಾರಂಭಿಸಿದ ನಂತರ ಈ ಟ್ಯಾಕ್ಸಿ ಚಾಲಕರನ್ನ ʻಸಾರಥಿʼ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಈ ಉಪಕ್ರಮದ ಪ್ರಾಯೋಗಿಕ ಹಂತವು ನವೆಂಬರ್‌ 2025ರಲ್ಲಿ ದೆಹಲಿಯಿಂದ ಶುರುವಾಗಲಿದೆ. ಪ್ರಾಥಮಿಕವಾಗಿ 650 ಟ್ಯಾಕ್ಸಿಗಳು ರಸ್ತೆಗೆ ಇಳಿಯಲಿದ್ದು, ಬಳಿಕ ದೇಶಾದ್ಯಂತ ವಿಸ್ತರಣೆಯಾಗುತ್ತವೆ. ಈ ಮೊದಲ ಹಂತದಲ್ಲಿ ಸುಮಾರು 5,000 ಚಾಲಕರು (ಮಹಿಳೆಯರು ಸೇರಿದಂತೆ) ಸೇರುವ ನಿರೀಕ್ಷೆಯಿದೆ.

    2030ರ ವೇಳೆಗೆ ಭವಿಷ್ಯದ ಯೋಜನೆಗಳು ಹೇಗಿವೆ?
    2026ರ ವೇಳೆಗೆ ಎಲ್ಲಾ ಪ್ರಮುಖ ಮೆಟ್ರೋ ನಗರಗಳಲ್ಲಿ ಭಾರತ್‌ ಟ್ಯಾಕ್ಸಿ ಸೇವೆ ಪ್ರಾರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. 2030ರ ವೇಳೆಗೆ ಈ ವೇದಿಕೆಯು ಜಿಲ್ಲಾ ಕೇಂದ್ರಗಳು ಹಾಗೂ ಗ್ರಾಮೀಣ ಭಾಗಗಳಿಗೂ ಎಂಟ್ರೊ ಕೊಡಲಿವೆ. ಈ ಮೂಲಕ 2030ರ ವೇಳೆಗೆ 1 ಲಕ್ಷ ಚಾಲಕರನ್ನ ಒಳಗೊಳ್ಳುವ ನಿರೀಕ್ಷೆ ಇಟ್ಟುಕೊಂಡಿದೆ.

    ಡಿಜಿಟಲ್‌ ಏಕೀಕರಣ
    ಭಾರತ್‌ ಟ್ಯಾಕ್ಸಿ ವ್ಯವಸ್ಥೆಯಲ್ಲಿ ಯಾವುದೇ ದರ ಏರಿಕೆ ಇರುವುದಿಲ್ಲ. ಅಲ್ಲದೇ ಈ ಸೇವೆಯನ್ನ DG ಲಾಕರ್‌ ಮತ್ತು ಉಮಂಗ್‌ನಂತಹ ವೇದಿಕೆಗಳೊಂದಿಗೆ ಸಂಯೋಜಿಸಲಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲೇ ಇರಲಿದೆ.

    ola_ube

    ಭಾರತ್‌ ಟ್ಯಾಕ್ಸಿಯ ರೂಪುರೇಷೆ ಹೇಗೆ?
    ರಾಷ್ಟ್ರೀಯ ಇ-ಗವರ್ನೆನ್ಸ್ ಡಿವಿಷನ್ ಟ್ಯಾಕ್ಸಿ ಸೇವೆಗೆ ಅಗತ್ಯ ತಂತ್ರಾಂಶ ಹಾಗೂ ರೂಪುರೇಷೆಯನ್ನ ಅಭಿವೃದ್ಧಿಪಡಿಸಿದೆ. ಸಹಕಾರಿ ಸಂಸ್ಥೆಯಾದ ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್ ಅನ್ನು ಸಹಕಾರಿ ಮುಖಂಡರು ಮತ್ತು ಚಾಲಕ ಪ್ರತಿನಿಧಿಗಳನ್ನು ಒಳಗೊಂಡ ಮಂಡಳಿಯು ನಿರ್ವಹಿಸುತ್ತದೆ. ಅಮುಲ್‌ನ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ಅಧ್ಯಕ್ಷರಾಗಿದ್ದು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ರೋಹಿತ್ ಗುಪ್ತಾ ಉಪಾಧ್ಯಕ್ಷರಾಗಿದ್ದಾರೆ. ಈ ಉಪಕ್ರಮವು IFFCO, ಅಮುಲ್, ನಬಾರ್ಡ್ ಮತ್ತು NCDC ಸೇರಿದಂತೆ ಎಂಟು ಪ್ರಮುಖ ಸಹಕಾರಿ ಸಂಸ್ಥೆಗಳಿಂದ ಬೆಂಬಲಿತವಾಗಿದೆ.

    ಅಮಿತ್‌ ಶಾ ಹೇಳಿದ್ದೇನು?
    ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ, ಸಹಕಾರಿ ಕ್ಯಾಬ್‌ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಓಲಾ, ಉಬರ್‌ಗೆ ಹೋಲುವ ಟ್ಯಾಕ್ಸಿ ಸೇವೆ ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ತಿಳಿಸಿದ್ದರು. ಸಹಕಾರಿ ಟ್ಯಾಕ್ಸಿ ವೇದಿಕೆಯಿಂದ ಬರುವ ಲಾಭವು ಯಾವುದೇ ಶ್ರೀಮಂತ ವ್ಯಕ್ತಿಗೆ ಅಲ್ಲ, ಟ್ಯಾಕ್ಸಿ ಚಾಲಕರಿಗೇ ಹೋಗುತ್ತದೆ ಎಂದು ಅವರು ಹೇಳಿದ್ದರು. ಈಗ ಅದು ನಿಜವಾಗುತ್ತಿದೆ.

    ಕೇಂದ್ರ ಸರ್ಕಾರದ ಈ ನೂತನ ಸೇವೆಯನ್ನು ವಿವಿಧ ಚಾಲಕ ಸಂಘಟನೆಗಳು ಸ್ವಾಗತಿಸಿವೆ. ಕರ್ನಾಟಕ ಚಾಲಕ ಸಂಘಟನೆಗಳಿಂದಲೂ ಖುಷಿ ವ್ಯಕ್ತವಾಗಿದೆ. ಕೇಂದ್ರದ ಈ ಯೋಜನೆಗೆ ಬೃಹತ್ ಬೆಂಗಳೂರು ಟ್ಯಾಕ್ಸಿ ಡ್ರೈವರ್ ಯೂನಿಯನ್ ಸ್ವಾಗತಿಸಿದೆ. ಹಲವಾರು ಚಾಲಕರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ. ಕಡಿಮೆ ದರಕ್ಕೆ ಪ್ರಯಾಣಿಕರಿಗೆ ಸಿಗಲಿ, ಬೇಗ ಜಾರಿಯಾಗಲಿ. ಸರ್ಕಾರದ ವತಿಯಿಂದ ಟ್ಯಾಕ್ಸಿ ಓದಗಿಸಬೇಕೆಂಬುದು ಬಹುದಿನದ ಬೇಡಿಕೆಯಾಗಿದೆ, ಇದ್ರಿಂದ ಚಾಲಕರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

  • Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

    Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

    – ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಾರಿಗೆ ಸಚಿವ

    ನವದೆಹಲಿ/ಹೈದರಾಬಾದ್: ಆಂಧ್ರದ ಕರ್ನೂಲಿನಲ್ಲಿ (Karnool) ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಧನ ಘೋಷಿಸಿದೆ.

    ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!

    ಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಎಸಿ ಬಸ್ ಆಂಧ್ರದ ಕರ್ನೂಲ್ ಬಳಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಬಳಿಕವೂ ಡ್ರೈವರ್‌ ಬಸ್ ನಿಲ್ಲಿಸದೇ ಸವಾರನ ಸಮೇತ ಬೈಕ್ ಅನ್ನು ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ಈ ವೇಳೆ, ಬೈಕ್‌ನಲ್ಲಿದ್ದ ಪೆಟ್ರೋಲ್ ಚೆಲ್ಲಿ ಬಸ್ ಅಡಿ ಬೆಂಕಿ ಹೊತ್ತಿಕೊಂಡಿದೆ. ನಂತರ ಇಡೀ ಬಸ್‌ಗೆ ಬೆಂಕಿ ಹಬ್ಬಿದೆ. ಎಸಿ ಬಸ್ ಆಗಿದ್ದ ಕಾರಣ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ.

    ಮುಂಜಾನೆ 3 ಗಂಟೆ ಸುಮಾರಿನಲ್ಲಿ ದುರಂತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದರೂ ಕೂಡ ಸುಟ್ಟಗಾಯಗಳಿಂದಾಗಿ ಒದ್ದಾಡುತ್ತಿದ್ದಾರೆ. ದುರಂತಕ್ಕೆ ತೆಲಂಗಾಣ-ಆಂಧ್ರಪ್ರದೇಶ-ಕರ್ನಾಟಕದ ಮುಖ್ಯಮಂತ್ರಿಗಳು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

  • ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

    ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

    ನವದೆಹಲಿ: ರಾಜ್ಯದಲ್ಲಿ ಜಾತಿಗಣತಿ (Caste Census) ಹೊತ್ತಲ್ಲೇ ಮುಂದಿನ ವರ್ಷದ ಫೆಬ್ರವರಿಯಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಆದಾಯ ಸಮೀಕ್ಷೆ (NHIS) ಕಾರ್ಯ ಆರಂಭಿಸಲಿದೆ. ಇದೇ ಮೊದಲ ಬಾರಿಗೆ ಮನೆ ಮಂದಿಯ ಜೀವನ ಸ್ಥಿತಿ, ಆದಾಯ, ಖರ್ಚಿನ ಡೇಟಾ ಸಂಗ್ರಹಿಸಲಿದ್ದು, ದೇಶದ ಬಡತನ ಸ್ಥಿತಿಗತಿ ಬಗ್ಗೆ ತಿಳಿದು ಬರಲಿದೆ.

    ಕೇಂದ್ರ ಸರ್ಕಾರದ ಅಂಕಿ ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಅಂಕಿ ಅಂಶ ಕಚೇರಿ ವತಿಯಿಂದ ರಾಷ್ಟ್ರೀಯ ಗೃಹ ಆದಾಯ ಸಮೀಕ್ಷೆ (National Household Income Survey) ಪ್ರಾರಂಭಿಸಲು ನಿರ್ಧರಿಸಲಾಗಿದೆ.

    ಈ ಸಮೀಕ್ಷೆಯೂ ಮನೆಯ ಆದಾಯವನ್ನು ಅಳೆಯುವತ್ತ ಗಮನಹರಿಸಿದ ಮೊದಲ ಪ್ಯಾನ್-ಇಂಡಿಯಾ (Pan India) ಸಮೀಕ್ಷೆಯಾಗಿದ್ದು, ಭಾರತದ ಸಾಮಾಜಿಕ-ಆರ್ಥಿಕ ಅಂಕಿಅಂಶಗಳ ವ್ಯವಸ್ಥೆಯಲ್ಲಿ ದೀರ್ಘಕಾಲದ ದತ್ತಾಂಶ ಅಂತರವನ್ನು ತೋರುವ ಮಹತ್ವದ ಹೆಜ್ಜೆ ಇದಾಗಿದೆ.

    ರಾಷ್ಟ್ರೀಯ ಗೃಹ ಆದಾಯ ಸಮೀಕ್ಷೆ ಜನರ ಜೀವನ ಪರಿಸ್ಥಿತಿಗಳು ಮತ್ತು ಆದಾಯ ಮತ್ತು ವೆಚ್ಚದ ಮಾದರಿಗಳ ಮಾಹಿತಿಯನ್ನು ಒದಗಿಸುತ್ತದೆ. ಪ್ರಪಂಚದಾದ್ಯಂತದ ದೇಶಗಳಲ್ಲಿನ ಸಮುದಾಯಗಳಲ್ಲಿನ ಬಡತನ ಮತ್ತು ಕಷ್ಟಗಳನ್ನು ವಿಶ್ಲೇಷಿಸಲು ಈ ದತ್ತಾಂಶವನ್ನು ಬಳಸಲಾಗುತ್ತದೆ.   ಇದನ್ನೂ ಓದಿ:  ಟ್ರಂಪ್‌ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

     

    ಕೆನಡಾ, ಅಮೆರಿಕ ಬ್ರಿಟನ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳು ಮತ್ತು ಶ್ರೀಲಂಕಾ, ಬಾಂಗ್ಲಾದೇಶ, ಚೀನಾ ಮತ್ತು ಮಲೇಷ್ಯಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳು ಸೇರಿದಂತೆ ಅನೇಕ ದೇಶಗಳಲ್ಲಿ, ಮನೆಯ ಆದಾಯದ ಡೇಟಾವನ್ನು ಮನೆಯ ಸಮೀಕ್ಷೆಗಳ ಮೂಲಕ ಸಂಗ್ರಹಿಸಲಾಗುತ್ತದೆ.

    ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಅಂತರರಾಷ್ಟ್ರೀಯ ಹಣಕಾಸು ನಿಧಿಯ ಭಾರತದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಸುರ್ಜಿತ್ ಎಸ್. ಭಲ್ಲಾ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ತಜ್ಞರ ತಂಡವನ್ನು ರಚಿಸಲಾಗಿದೆ. ಇದನ್ನೂ ಓದಿ: ಕುಟುಂಬಕ್ಕಾಗಿ ಬೆಂಗಳೂರಿನ ಕಾರ್ಪೊರೇಟ್ ಕೆಲಸಕ್ಕೆ ಗುಡ್‌ಬೈ – ಈಗ ಉಬರ್ ಚಾಲಕ, ಹೆಚ್ಚು ಸಂಪಾದನೆ

    ಈ ಸಮಿತಿ ನೀಡಿದ ಪ್ರಶ್ನೆಗಳ ಆಧಾರದ ಮೇಲೆ ಕಳೆದ ಆಗಸ್ಟ್ 4–8 ರ ನಡುವೆ ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಆರು ವಲಯಗಳಲ್ಲಿ ಪ್ರಾಯೋಗಿಕವಾಗಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಯಲ್ಲಿ ಎರಡು ನಗರ ಮತ್ತು ಎರಡು ಗ್ರಾಮೀಣ ಪ್ರದೇಶಗಳನ್ನು ಆಯ್ಕೆ ಮಾಡಿ ಶ್ರೀಮಂತ ಮತ್ತು ಶ್ರೀಮಂತರಲ್ಲದ ಮಾಹಿತಿ ಸಂಗ್ರಹಿಸಿದೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ  ಅಧಿಕೃತ ಸಮೀಕ್ಷೆ ಆರಂಭವಾಗಲಿದೆ.

    ಸಮೀಕ್ಷೆಯಲ್ಲಿ ಏನು ಇರುತ್ತೆ?
    – ಈ ಸಮೀಕ್ಷೆಯಲ್ಲಿ ಮನೆ, ಕುಟುಂಬದ ಮುಖ್ಯಸ್ಥರ ಮಾಹಿತಿ, ಧರ್ಮ, ಜಾತಿ ಮಾಹಿತಿ
    – ಕುಟುಂಬಸ್ಥರ ಕೃಷಿ ಸೇರಿ ಇತರೆ ಆದಾಯ ಮೂಲ ಮತ್ತು ಖರ್ಚುಗಳ‌ ವಿವರ ಸಂಗ್ರಹ
    – ಕೃಷಿ ಜಮೀನು ಅಥವಾ ಇತರೆ ಭೂಮಿಯ ಮಾಲೀಕತ್ವ ಹಾಗೂ ಸಾಲ, ಸಾಲ ಪಡೆಯಲು ಕಾರಣ ಇತ್ಯಾದಿ ಮಾಹಿತಿ

  • ತೆರಿಗೆ ಪಾಲು| ಕರ್ನಾಟಕಕ್ಕೆ 3,705 ಕೋಟಿ, ಬಿಹಾರಕ್ಕೆ ಬಂಪರ್‌- ಯಾವ ರಾಜ್ಯಕ್ಕೆ ಎಷ್ಟು?

    ತೆರಿಗೆ ಪಾಲು| ಕರ್ನಾಟಕಕ್ಕೆ 3,705 ಕೋಟಿ, ಬಿಹಾರಕ್ಕೆ ಬಂಪರ್‌- ಯಾವ ರಾಜ್ಯಕ್ಕೆ ಎಷ್ಟು?

    ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ (Karnataka)  ರಾಜ್ಯಕ್ಕೆ ತೆರಿಗೆ ಪಾಲಿನ (Tax Devolution) ಕಂತಿನ ರೂಪದಲ್ಲಿ 3,705 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ ಮತ್ತು ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲ ಮಾಡಲು ಒಟ್ಟು 1,01,603 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

    ಇದು ಅಕ್ಟೋಬರ್ 10 ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ ಹಂಚಿಕೆ 81,735 ಕೋಟಿ ರೂ. ಜೊತೆಗೆ ಹೆಚ್ಚುವರಿಯಾಗಿದೆ ಎಂದು ಹೇಳಿದೆ. ಅತಿ ಹೆಚ್ಚು ಹಣ ಉತ್ತರ ಪ್ರದೇಶಕ್ಕೆ 18,227 ಕೋಟಿ ರೂ., ಚುನಾವಣೆ ನಡೆಯಲಿರುವ ಬಿಹಾರಕ್ಕೆ (Bihar) 10,219 ಕೋಟಿ ರೂ. ಹಂಚಿಕೆಯಾಗಿದೆ.  ಇದನ್ನೂ ಓದಿ:  57 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಅಸ್ತು

    ಯಾವ ರಾಜ್ಯಕ್ಕೆ ಎಷ್ಟು?
    ಬಿಹಾರ: 10,219 ಕೋಟಿ ರೂ.
    ಛತ್ತೀಸ್‌ಗಢ: 3,462 ಕೋಟಿ ರೂ.
    ಗೋವಾ: 392 ಕೋಟಿ ರೂ.
    ಗುಜರಾತ್: 3,534 ಕೋಟಿ ರೂ.
    ಹರಿಯಾಣ: 1,111 ಕೋಟಿ ರೂ.

    ಹಿಮಾಚಲ ಪ್ರದೇಶ: 843 ಕೋಟಿ ರೂ.
    ಜಾರ್ಖಂಡ್: 3,360 ಕೋಟಿ ರೂ.
    ಕರ್ನಾಟಕ: 3,705 ಕೋಟಿ ರೂ.
    ಕೇರಳ: 1,956 ಕೋಟಿ ರೂ.
    ಮಧ್ಯಪ್ರದೇಶ: 7,976 ಕೋಟಿ ರೂ.

    ಮಹಾರಾಷ್ಟ್ರ: 6,418 ಕೋಟಿ ರೂ.
    ಮಣಿಪುರ: 727 ಕೋಟಿ ರೂ.
    ಮೇಘಾಲಯ: 779 ಕೋಟಿ ರೂ.
    ಮಿಜೋರಾಂ: 508 ಕೋಟಿ ರೂ.
    ನಾಗಾಲ್ಯಾಂಡ್: 578 ಕೋಟಿ ರೂ. ಇದನ್ನೂ ಓದಿ:  RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    ಒಡಿಶಾ: 4,601 ಕೋಟಿ ರೂ.
    ಪಂಜಾಬ್: 1,836 ಕೋಟಿ ರೂ.
    ರಾಜಸ್ಥಾನ: 6,123 ಕೋಟಿ ರೂ.
    ಸಿಕ್ಕಿಂ: 394 ಕೋಟಿ ರೂ.
    ತಮಿಳುನಾಡು: 4,144 ಕೋಟಿ ರೂ.

    ತೆಲಂಗಾಣ: 2,136 ಕೋಟಿ ರೂ.
    ತ್ರಿಪುರ:719 ಕೋಟಿ ರೂ.
    ಉತ್ತರ ಪ್ರದೇಶ: 18,227 ಕೋಟಿ ರೂ.
    ಉತ್ತರಾಖಂಡ: 1,136 ಕೋಟಿ ರೂ.
    ಪಶ್ಚಿಮ ಬಂಗಾಳ: 7,644 ಕೋಟಿ ರೂ.

  • ಸುಂಕದ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಲಿ – ಎಂ.ಬಿ ಪಾಟೀಲ್ ಸಲಹೆ

    ಸುಂಕದ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಲಿ – ಎಂ.ಬಿ ಪಾಟೀಲ್ ಸಲಹೆ

    ಬೆಂಗಳೂರು: ಅಮೆರಿಕವು (America) ಭಾರತದ ಉತ್ಪನ್ನಗಳ ಮೇಲೆ ವಿಪರೀತ ಸುಂಕ ವಿಧಿಸುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈಗ ಅವರು ನಮ್ಮ ಔಷಧೋತ್ಪನ್ನಗಳ ಮೇಲೂ ವಿಪರೀತ ಸುಂಕ ಹೇರಿದ್ದಾರೆ. ಕೇಂದ್ರ ಸರ್ಕಾರವು (Central Govt) ಮಧ್ಯ ಪ್ರವೇಶಿಸಿ ಇದನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರು ಹೇಳಿದರು.

    ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚೀನಾ ಮತ್ತು ವಿಯೆಟ್ನಾಂ ಎರಡೂ ಉತ್ಪಾದನೆ ಹಾಗೂ ರಫ್ತಿನಲ್ಲಿ ನಮಗಿಂತ ಮುಂದಿವೆ. ಅವುಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಶೇ.30 ಮತ್ತು ಶೇ.19ರಷ್ಟು ಮಾತ್ರ ಸುಂಕ ಹೇರಿದ್ದಾರೆ. ಆದರೆ ಭಾರತದ ಉತ್ಪನ್ನಗಳ ಮೇಲೆ ಶೇ.50ರಷ್ಟು ಸುಂಕ ಹೇರಿದ್ದಾರೆ. ಇದರಿಂದ ನಮಗೆ ಹೊಡೆತ ಬೀಳುತ್ತಿರುವುದು ಸುಳ್ಳಲ್ಲ ಎಂದರು.ಇದನ್ನೂ ಓದಿ: ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಸಲ ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಬ್ ಕೀ ಬಾರ್ ಟ್ರಂಪ್ ಎಂದು ಅವರ ಪರ ನೇರವಾಗಿ ಪ್ರಚಾರ ಮಾಡಿದ್ದರು. ಆದರೆ ಆಗ ಜೋ ಬೈಡನ್ ಗೆದ್ದರು. ಅವರೇನೂ ಭಾರತದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಲಿಲ್ಲ. ಈ ಸಲ ಗೆದ್ದು ಬಂದ ಮೇಲೆ ಟ್ರಂಪ್ ಭಾರತದ ಮೇಲೆ ಅತಾರ್ಕಿಕವಾಗಿ ಸುಂಕ ವಿಧಿಸುತ್ತಿದ್ದು, ನಾವು ಅದರ ದುಷ್ಪರಿಣಾಮವನ್ನು ಎದುರಿಸಬೇಕಾಗಿ ಬಂದಿದೆ. ಎಚ್1-ಬಿ ವೀಸಾ ಮೇಲೆ ವರ್ಷಕ್ಕೆ ಒಂದು ಲಕ್ಷ ಡಾಲರ್ ಶುಲ್ಕ ವಿಧಿಸಿರುವುದು ಆಘಾತಕಾರಿಯಾಗಿದೆ. ಇಂತಹ ತೀರ್ಮಾನ ನಮ್ಮ ಐಟಿ ಸೇವೆಗಳು ಮತ್ತು ಎಫ್.ಡಿ.ಐ. ಮೇಲೆ ಕರಿನೆರಳನ್ನು ಸೃಷ್ಟಿಸುತ್ತಿದೆ. ಮೋದಿಯವರು ಇದನ್ನು ಬಗೆಹರಿಸಬೇಕು ಎಂದು ಪ್ರತಿಪಾದಿಸಿದರು.

    ಟ್ರಂಪ್ ಇದುವರೆಗೂ ನಮ್ಮ ಎಲೆಕ್ಟ್ರಾನಿಕ್ ಮತ್ತು ಫಾರ್ಮಾ ಉತ್ಪನ್ನಗಳಿಗೆ ಸುಂಕದಿಂದ ವಿನಾಯಿತಿ ನೀಡಿದ್ದರು. ಆದರೆ ಈಗ ಫಾರ್ಮಾ ಉತ್ಪನ್ನಗಳನ್ನೂ ಬಿಟ್ಟಿಲ್ಲ. ಇದು ಕೇವಲ ಕರ್ನಾಟಕದ ಮೇಲೆ ಮಾತ್ರವಲ್ಲ, ಇಡೀ ಭಾರತದ ಮೇಲೆ ಪರಿಣಾಮ ಉಂಟುಮಾಡುತ್ತಿದೆ. ಟ್ರಂಪ್ ಏನೇ ಮಾಡಲಿ, ನಾವು ದೇಶದ ಪರವಾಗಿದ್ದೇವೆ. ನಮ್ಮಲ್ಲಿ ಅಪಾರ ಪ್ರತಿಭೆ ಇದೆ ಎಂದು ಅಭಿಪ್ರಾಯಪಟ್ಟರು.

    ಸದ್ಯದಲ್ಲೇ ಎಂಎಸ್‌ಐಎಲ್ ಚಿಟ್ ಫಂಡ್:
    ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ವತಿಯಿಂದ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟು ಗುರಿಯುಳ್ಳ ಚಿಟ್ ಫಂಡ್ ವ್ಯವಹಾರವನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.

    ಎಂಎಸ್‌ಐಎಲ್ ಸದ್ಯಕ್ಕೆ ವಾರ್ಷಿಕವಾಗಿ ಕೇವಲ 500 ಕೋಟಿ ರೂ. ಮೊತ್ತದ ಚಿಟ್ ಫಂಡ್ ನಡೆಸುತ್ತಿದೆ. ಆದರೆ ಪಕ್ಕದ ಕೇರಳದಲ್ಲಿ ಅಲ್ಲಿನ ಸರ್ಕಾರವು ವರ್ಷಕ್ಕೆ 1 ಲಕ್ಷ ಕೋಟಿ ರೂ. ಮೊತ್ತದ ಚಿಟ್ ಫಂಡ್ ನಡೆಸುತ್ತಿದೆ. ಎಂಎಸ್‌ಐಎಲ್ ಉಪಕ್ರಮವು ಸಂಪೂರ್ಣವಾಗಿ ಡಿಜಿಟಲ್ ಸ್ವರೂಪದಲ್ಲಿ ಇರಲಿದೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ಉದ್ಘಾಟಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

  • ಸಿಂಧೂ ನದಿ ನೀರು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌

    ಸಿಂಧೂ ನದಿ ನೀರು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌

    – ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ತಪ್ಪಿಸುತ್ತೆ ಯೋಜನೆ

    ನವದೆಹಲಿ: ಸಿಂಧೂ ನದಿ (Indus River) ನೀರನ್ನು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2029ರ ಚುನಾವಣೆಗೂ ಮುನ್ನ ಯೋಜನೆ ಪೂರ್ಣಗೊಳಿಸಲು ಕೇಂದ್ರ ಮುಂದಾಗಿದೆ.

    ಕಳೆದ ಶುಕ್ರವಾರ ಕೇಂದ್ರದ ಹಿರಿಯ ಸಚಿವ ಸಭೆಯಲ್ಲಿ ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಮುಂದಿನ ವರ್ಷದಲ್ಲಿ ವಿಸ್ತೃತ ಯೋಜನಾ ವರದಿ ನೀಡಲು ಎಲ್ ಆ್ಯಂಡ್ ಟಿ ಕಂಪನಿಗೆ ಸೂಚನೆ ನೀಡಲಾಗಿದೆ.

    ಉತ್ತರ ರಾಜ್ಯಗಳ ನೀರಿನ ಬೇಡಿಕೆಗಳನ್ನು ಪೂರೈಸಲು ಭಾರತ ಸಿಂಧೂ ನದಿ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆಗಳನ್ನು ಮಾಡಲು ಸಜ್ಜಾಗಿದೆ. ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ ಕೇಂದ್ರ ಈ ಕಾರ್ಯತಂತ್ರ ರೂಪಿಸಿದೆ. ಇದನ್ನೂ ಓದಿ: ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

    ಉತ್ತರ ರಾಜ್ಯಗಳಿಗೆ ಸಿಂಧೂ ನದಿ ನೀರನ್ನು ತಲುಪಿಸುವ ಉದ್ದೇಶಿತ 113 ಕಿ.ಮೀ. ಕಾಲುವೆಯ ಕಾಮಗಾರಿ ಬಗ್ಗೆ ಸಭೆಯಲ್ಲಿ ಪರಿಶೀಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

    ಸಿಂಧೂ ನದಿ ನೀರು ಒಪ್ಪಂದವು 1960 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಆಗಿತ್ತು. ವಿಶ್ವಬ್ಯಾಂಕ್ ಹಸ್ತಕ್ಷೇಪದ ನಂತರ ಸಹಿ ಹಾಕಲಾದ ಒಂದು ಮಹತ್ವದ ನೀರು ಹಂಚಿಕೆ ಒಪ್ಪಂದ ಇದಾಗಿದೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಒಪ್ಪಂದವನ್ನು ಸ್ಥಗಿತಗೊಳಿಸಿತು. ‘ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ’ ಎಂದು ಸರ್ಕಾರ ಪ್ರತಿಪಾದಿಸಿತ್ತು.

    ಅಂದಿನಿಂದ ಸರ್ಕಾರವು ಭಾರತದ ಸಿಂಧೂ ನದಿ ನೀರಿನ ಪಾಲನ್ನು ಬಳಸಿಕೊಳ್ಳಲು ವಿವರವಾದ ಯೋಜನೆಯನ್ನು ರೂಪಿಸುತ್ತಿದೆ. ಅದಕ್ಕಾಗಿ, ಅಂತರ-ಜಲಾನಯನ ಸಿಂಧೂ ಜಲ ವರ್ಗಾವಣೆ ಯೋಜನೆಯಡಿಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಲಾಗಿದೆ. ಸರ್ಕಾರದ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

    14 ಕಿ.ಮೀ. ಸುರಂಗದ ನಿರ್ಮಾಣ ಮಾಡುವುದು ಈ ಯೋಜನೆಯ ಅತ್ಯಂತ ಸವಾಲಿನ ಸಂಗತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತಹ ಸುರಂಗಕ್ಕೆ ಪರ್ವತ ಬಂಡೆಗಳ ವಿವರವಾದ ಅಧ್ಯಯನದ ಅಗತ್ಯವಿದೆ. ಇದನ್ನೂ ಓದಿ: ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿದೆ: ಮೋದಿ

    ವೇಗ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುರಂಗ ಕೊರೆಯುವ ಯಂತ್ರಗಳು ಮತ್ತು ರಾಕ್ ಶೀಲ್ಡ್ ತಂತ್ರಜ್ಞಾನದ ಬಳಕೆಯನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಸುರಂಗವನ್ನು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಉಜ್ ಬಹುಪಯೋಗಿ ಯೋಜನೆಗೆ ಸಂಪರ್ಕಿಸಲಾಗುವುದು. ಇದು ರಾವಿಯ ಉಪನದಿಯಾದ ಉಜ್ ನದಿಯಿಂದ ಬಿಯಾಸ್ ಜಲಾನಯನ ಪ್ರದೇಶಕ್ಕೆ ನೀರನ್ನು ವರ್ಗಾಯಿಸಲು ಅನುವು ಮಾಡಿಕೊಡುತ್ತದೆ.

    ಈ ಸುರಂಗದ ಕಾಮಗಾರಿ ಪೂರ್ಣಗೊಳ್ಳುವುದರಿಂದ ರವಿ-ಬಿಯಾಸ್-ಸಟ್ಲೆಜ್ ವ್ಯವಸ್ಥೆಯನ್ನು ಸಿಂಧೂ ನದಿ ಜಲಾನಯನ ಪ್ರದೇಶಕ್ಕೆ ಸಂಪರ್ಕಿಸುತ್ತದೆ. ಇದರಿಂದಾಗಿ ಭಾರತವು ತನ್ನ ನೀರಿನ ಪಾಲಿನ ಬಳಕೆಯನ್ನು ಗರಿಷ್ಠಗೊಳಿಸಲು ಸಾಧ್ಯವಾಗುತ್ತದೆ. ಇದರ ನಿರ್ಮಾಣವು ಮೂರರಿಂದ ನಾಲ್ಕು ವರ್ಷಗಳನ್ನು ತೆಗೆದುಕೊಳ್ಳುತ್ತದೆ. 2028 ರ ವೇಳೆಗೆ ಸಿದ್ಧವಾಗಲಿದೆ ಎಂದು ಮೂಲಗಳು ಅಂದಾಜಿಸಿವೆ. ಅಂದಾಜು ವೆಚ್ಚ ಸುಮಾರು 4,000-5,000 ಕೋಟಿ ರೂ. ಆಗಬಹುದು ಎನ್ನಲಾಗಿದೆ.

    ಈ ಯೋಜನೆಯು ರಾಜಸ್ಥಾನದ ಶುಷ್ಕ ಪ್ರದೇಶಗಳಲ್ಲಿ ಇಂದಿರಾ ಗಾಂಧಿ ಕಾಲುವೆಗೆ ನೀರನ್ನು ತಿರುಗಿಸುವ ಮೂಲಕ ನೀರಾವರಿ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ದೆಹಲಿ ಮತ್ತು ಪಂಜಾಬ್‌ನಂತಹ ರಾಜ್ಯಗಳು ಸಹ ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತವೆ. ಚೆನಾಬ್ ನದಿಯನ್ನು ರವಿ-ಬಿಯಾಸ್-ಸಟ್ಲೆಜ್ ವ್ಯವಸ್ಥೆಗೆ ಸಂಪರ್ಕಿಸಲು ಕಾಲುವೆಯನ್ನು ನಿರ್ಮಿಸಲಾಗುವುದು. ಈ ರಾಜ್ಯಗಳ ಅಸ್ತಿತ್ವದಲ್ಲಿರುವ ಕಾಲುವೆ ವ್ಯವಸ್ಥೆಗಳಿಗೆ ಇದನ್ನು ಸಂಪರ್ಕಿಸಲಾಗುವುದು. ಇದರಿಂದ ನೀರು ನೇರವಾಗಿ ಇಂದಿರಾ ಗಾಂಧಿ ಕಾಲುವೆಯನ್ನು ತಲುಪಬಹುದು. ರಾಜಸ್ಥಾನದ ಶ್ರೀ ಗಂಗಾನಗರಕ್ಕೆ ನೀರನ್ನು ತಲುಪಿಸಬಹುದು.

    ಅಲ್ಲದೇ, ಈ ಯೋಜನೆಯು ದೆಹಲಿ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಕುಡಿಯುವ ನೀರಿನ ಲಭ್ಯತೆಯನ್ನು ಹೆಚ್ಚಿಸುತ್ತದೆ. ಈ ಯೋಜನೆಯು ಭಾರತದ ಪಾಲಿನ ಹೆಚ್ಚುವರಿ ನೀರನ್ನು ಪಾಕಿಸ್ತಾನಕ್ಕೆ ಹರಿಯುವುದನ್ನು ತಪ್ಪಿಸುತ್ತದೆ. ಹೀಗಾಗಿ, ದೇಶದ ನೀರಿನ ಭದ್ರತೆಯನ್ನು ಬಲಪಡಿಸುತ್ತದೆ. ಇದು ಹವಾಮಾನ ಬದಲಾವಣೆ ಮತ್ತು ಬದಲಾಗುತ್ತಿರುವ ಮಳೆಯ ಮಾದರಿಗಳ ಪರಿಣಾಮಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಸ್ತಿತ್ವದಲ್ಲಿರುವ 13 ಕಾಲುವೆ ವ್ಯವಸ್ಥೆಗಳನ್ನು ಬಲಪಡಿಸುತ್ತದೆ ಎನ್ನಲಾಗಿದೆ.

  • ʻವಕ್ಫ್ ತಿದ್ದುಪಡಿ ಕಾಯ್ದೆʼಯ ಕೆಲ ಅಂಶಗಳಿಗೆ ಸುಪ್ರೀಂ ತಡೆ; ಒಟ್ಟಾರೆ ಕಾಯ್ದೆ ಕಾನೂನು ಬದ್ಧವಾಗಿದೆ ಎಂದು ಆದೇಶ

    ʻವಕ್ಫ್ ತಿದ್ದುಪಡಿ ಕಾಯ್ದೆʼಯ ಕೆಲ ಅಂಶಗಳಿಗೆ ಸುಪ್ರೀಂ ತಡೆ; ಒಟ್ಟಾರೆ ಕಾಯ್ದೆ ಕಾನೂನು ಬದ್ಧವಾಗಿದೆ ಎಂದು ಆದೇಶ

    – ವಕ್ಫ್​ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ತಡೆ
    – ವಕ್ಫ್‌ ಮಂಡಳಿಯಲ್ಲಿ ಮುಸ್ಲಿಂ ಸಮುದಾಯದವರೇ ಬಹುಸಂಖ್ಯಾತರಿರಬೇಕು

    ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ (Supreme Court) ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್‌, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ.

    ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಆ ಅರ್ಜಿಗಳಲ್ಲಿ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Amendment Act) ಕೇಂದ್ರ ಸರ್ಕಾರ ತೀವ್ರ ವಿರೋಧದ ನಡುವೆಯೂ ಜಾರಿಗೊಳಿಸಿದೆ. ಹಾಗಾಗಿ, ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಆ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಕಾನೂನಿನ ಕೆಲವು ನಿಬಂಧನೆಗಳಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಇದ್ದ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.

    ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಾಲಿಸಿಟ‌ರ್ ಜನರಲ್‌ ತುಷಾರ್ ಮೆಹ್ತಾ ವಾದ ಮಂಡಿಸಿದ್ರೆ, ಮೂರು ವಿಚಾರಗಳಿಗೆ ಅರ್ಜಿದಾರರು ತಡೆಕೋರಿ ಸಲ್ಲಿಸಿದ್ದ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?

    ಯಾವುದೇ ಒಬ್ಬ ವ್ಯಕ್ತಿ ವಕ್ಫ್‌ ಮಂಡಳಿಯ (Waqf Board) ಸದಸ್ಯರಾಗಲು ಅಥವಾ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಕನಿಷ್ಠ 5 ವರ್ಷ‌ ಇಸ್ಲಾಂ ಧರ್ಮ ಅನುಸರಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

    ಮಧ್ಯಂತರ ಆದೇಶದಲ್ಲಿ ಯಾವುದಕ್ಕೆ ತಡೆ!?

    ತಕರಾರು-1
    ಜಿಲ್ಲಾಧಿಕಾರಿಗೆ ಅಥವಾ ಸರ್ಕಾರ ನಿಯೋಜಿಸಿದ ಅಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ನಿಬಂಧನೆ

    ಕೋರ್ಟ್ ಸಲಹೆ; ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆ ಉಲ್ಲಂಘಿಸುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದ ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆ ತಡೆಹಿಡಿಯಲಾಗಿದೆ. ನ್ಯಾಯಾಧೀಕರಣ ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರ ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ 3ನೇ ವ್ಯಕ್ತಿ ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ತಕರಾರು-2
    ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ, ಯಾವ ವ್ಯಕ್ತಿಯು ಕನಿಷ್ಟ 5 ವರ್ಷದಿಂದ ಇಸ್ಲಾಂ ಧರ್ಮ ಪಾಲಿಸುತ್ತಿದ್ದಾನೋ ಆ ವ್ಯಕ್ತಿ ಮಾತ್ರ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಅರ್ಹ ಎಂಬ ಷರತ್ತು

    ಕೋರ್ಟ್ ಸಲಹೆ: ಈ ಷರತ್ತಿಗೆ ಸದ್ಯಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಒಪ್ಪಿದೆ. ಈ ಷರತ್ತು ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

    ತಕರಾರು-3
    ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಕರಾರು

    ಕೋರ್ಟ್ ಸಲಹೆ: ಕೋರ್ಟ್ ಈ ನಿಬಂಧನೆಗೆ ತಡೆ ನೀಡಿಲ್ಲ. ಆದರೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ಕೋರ್ಟ್ ಹೇಳಿದೆ. ಕೇಂದ್ರ ವಕ್ಫ್ ಮಂಡಳಿಯಲ್ಲಿ 4 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು. ಸಾಧ್ಯವಾದಷ್ಟು ಮಟ್ಟಿಗೆ ಮಂಡಳಿಯ ಸಿಇಒ ಮುಸ್ಲಿಮರಾಗಿರಬೇಕು ಎಂದು ಅಭಿಪ್ರಾಯಪಟ್ಟಿದೆಯಲ್ಲದೇ ವಕ್ಫ್ ಕಾಯ್ದೆಯ ಸಿಂಧುತ್ವದ ಬಗ್ಗೆ ತನ್ನ ಆದೇಶವು ಅಂತಿಮ ಅಭಿಪ್ರಾಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ತಕರಾರು-4
    ಎಲ್ಲ ವಕ್ಫ್ ಆಸ್ತಿಗಳನ್ನು ಕಾಯ್ದೆಯಡಿ ನೋಂದಣಿ ಕಡ್ಡಾಯ ನಿಬಂಧನೆ

    ಕೋರ್ಟ್ ಸಲಹೆ: ಈ ನಿಬಂಧನೆಯಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ನಿಯಮ ಅಲ್ಲ ಎಂದು ಕೋರ್ಟ್ ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದರೂ, ಕೋರ್ಟ್ ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.

    ಅರ್ಜಿದಾರರು ಯಾರು?
    ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಾತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಇತರರು.

    ಕಾಯ್ದೆ ಬೆಂಬಲಿಸಿ ಸುಪ್ರೀಂಕೋರ್ಟ್‌ಗೆ ಹೋದವರು ಯಾರು?
    ಬಿಜೆಪಿ ಸರ್ಕಾರಗಳಿರುವ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳು. ಕೇರಳ ರಾಜ್ಯ ಸರ್ಕಾರ ಕೂಡ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು.

  • ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು (Online Gaming) ಕೇಂದ್ರ ಸರ್ಕಾರ (Central Govt) ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 (Dream11) ಬಿಸಿಸಿಐ (BCCI) ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ.

    ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸೆ.9ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಬೇರೆ ಹೊಸ ಪ್ರಾಯೋಜಕರ ಅವಶ್ಯತತೆಯಿದೆ.ಇದನ್ನೂ ಓದಿ: ಏನಿದು ಗೌರಿ ಹಬ್ಬ? ಆಚರಣೆ ಹೇಗೆ?

    18 ವರ್ಷಗಳ ಹಿಂದೆ ಆರಂಭವಾಗಿದ್ದ ಡ್ರೀಮ್11 ಸಂಸ್ಥೆ 2023ರ ಜುಲೈನಲ್ಲಿ ಬಿಸಿಸಿಐ ಪ್ರಾಯೋಜಕತ್ವವನ್ನು 3 ವರ್ಷದ ಅವಧಿಗೆ ಬರೋಬ್ಬರಿ 358 ಕೋಟಿ ರೂ.ಗೆ ಪಡೆದುಕೊಂಡಿತ್ತು. ಒಪ್ಪಂದದ ಅವಧಿ ಮುಂಬರುವ 2026ರ ಜುಲೈ ತಿಂಗಳವರೆಗೆ ಇದ್ದರೂ ಕೂಡ 1 ವರ್ಷಕ್ಕೂ ಮುಂಚೆ ಸಂಸ್ಥೆ ಪ್ರಾಯೋಜಕತ್ವವನ್ನು ತೊರೆದಿದೆ.

    ಇನ್ನೂ ಇದು ಕಾನೂನು ವಿಚಾರಕ್ಕೆ ಒಳಪಟ್ಟಿರುವುದರಿಂದ ಡ್ರೀಮ್11 ಸಂಸ್ಥೆ ಅವಧಿಗೂ ಮುನ್ನ ಪ್ರಾಯೋಜತ್ವವನ್ನು ತೊರೆದಿದ್ದರೂ ಕೂಡ ಬಿಸಿಸಿಐ ಯಾವುದೇ ದಂಡ ಪಾವತಿಸಿಕೊಳ್ಳುತ್ತಿಲ್ಲ. ಸಾಮಾನ್ಯವಾಗಿ ಯಾವುದೇ ಸಂಸ್ಥೆಯು ಅವಧಿಗೆ ಮುನ್ನ ಪ್ರಾಯೋಜಕತ್ವ ತೊರೆದರೆ ಭಾರೀ ದಂಡ ಪಾವತಿಸಬೇಕಾಗುತ್ತದೆ.

    ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಬಗ್ಗೆ ಮಾತನಾಡಿ, ಆನ್‌ಲೈನ್ ಗೇಮಿಂಗ್ ಮಸೂದೆಯ ನಂತರ ಬಿಸಿಸಿಐ ಮತ್ತು ಡ್ರೀಮ್11 ಪರಸ್ಪರ ಸಂಬಂಧವನ್ನು ಸ್ಥಗಿತಗೊಳಿಸುತ್ತಿದ್ದು, ಭವಿಷ್ಯದಲ್ಲಿ ಈ ರೀತಿಯ ಯಾವುದೇ  ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ, ಇದನ್ನೂ ಓದಿ: ಮೋದಕ ಅಷ್ಟೇ ಅಲ್ಲ ಈ ಸಿಹಿ ತಿಂಡಿಗಳೂ ವಿನಾಯಕನಿಗೆ ತುಂಬಾ ಇಷ್ಟ!

  • ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಬಿಜೆಪಿಯವರು ರಾಜಕೀಯ ಮಾಡೋದು ಬಿಟ್ಟು ಧೈರ್ಯವಿದ್ದರೆ ಕೇಂದ್ರ ಸರ್ಕಾರದಿಂದ (Central Govt) ಯೂರಿಯಾ ಕೊಡಿಸಲಿ ಎಂದು ಬಿಜೆಪಿ (BJP) ನಾಯಕರ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ ಯೂರಿಯಾ ಕೊರತೆ ಅಂತ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ಯೂರಿಯಾ ಸರಬರಾಜು ಆಗಿದೆ ಎಂದು ಹೇಳಿದ್ದೇನೆ. ಡಿಸಿ, ಸೆಕ್ರೆಟರಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಬಿಜೆಪಿಯವರಿಗೆ ಮಾತಡೋಕೆ ಬೇರೆ ವಿಷಯ ಇಲ್ಲ ಅದಕ್ಕೆ ಪ್ರತಿಭಟನೆ ಅಂತಿದ್ದಾರೆ. ಇವರಿಗೆ ಕೇಂದ್ರಕ್ಕೆ ಹೋಗಿ ಹೇಳೋ ಧಮ್ ಇಲ್ಲ. ನಾನು ಎಲ್ಲ ಎಂಪಿಗಳಿಗೆ ಹಾಗೂ ಕೇಂದ್ರ ಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂ ಅವರು ಕೂಡ ಪತ್ರ ಬರೆದಿದ್ದಾರೆ. ಇನ್ನೂ ಏನು ಮಾಡಬೇಕಂತೆ ವಿಜಯೇಂದ್ರ, ಅಶೋಕ್‌ಗೆ ತಿರುಗೇಟು ನೀಡಿದರು.ಇದನ್ನೂ ಓದಿ:ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಕೇಂದ್ರವೇ ನಮಗೆ ಯೂರಿಯಾ ಒದಗಿಸುತ್ತದೆ. ಹೀಗಾಗಿ ನಾವು ಇದರಲ್ಲಿ ರಾಜಕೀಯ ಮಾಡಲು ಹೋಗಿರಲಿಲ್ಲ. ಇವರು ರಾಜಕೀಯವಾಗಿ ಮಾತಾಡಿದ್ರೆ ನಾವೇನು ಮಾಡೋಕೆ ಆಗಲ್ಲ. ರಾಜ್ಯದ ಒಬ್ಬ ಮಂತ್ರಿಗಾದರೂ ಕೇಂದ್ರಕ್ಕೆ ಪತ್ರ ಬರೆಯುವ ಧಮ್ ಇದ್ಯಾ? ರಾಜ್ಯದ ರೈತರಿಗೆ ರಸಗೊಬ್ಬರ ಕೊಡುತ್ತಿದ್ದೇವೆ. ಕೊಪ್ಪಳದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆಗಳ ಮೇಲೆಯೂ ರಾಜಕಾರಣ ಮಾಡ್ತಿದ್ದಾರೆ. ಇದಕ್ಕೆ ಏನೂ ಮಾಡಲು ಆಗಲ್ಲ. ರೈತರ ಪರ ನಾವಿದ್ದೇವೆ. ಕೇಂದ್ರದಿಂದ ಬರಬೇಕಾದ ಬಾಕಿ ಯೂರಿಯಾ ಬರಲು ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಬಿಜೆಪಿಯವರಿಗೆ ಧಮ್ಮು, ತಾಕತ್ತಿದ್ರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತ ಕಿಡಿಕಾರಿದರು.

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಆಗ್ತಿದೆ ಎಂಬ ಬಿಜೆಪಿ ಅರೋಪಕ್ಕೆ ತಿರುಗೇಟು ಕೊಟ್ಟ ಅವರು, ಇಲ್ಲದೆ ಇರೋದನ್ನ ಹೇಳಿದ್ರೆ ನಾವು ಏನು ಮಾಡೋಕೆ ಆಗಲ್ಲ. ವಿಜಿಲೆನ್ಸ್ ಇದೆ, ಸಾವಿರಾರು ರೀಟೈಲ್ ಸೆಂಟರ್ ಇವೆ. ಇಂತಹದ್ದು ಕಂಡು ಬಂದ್ರೆ ಬ್ಲಾಕ್ ಲಿಸ್ಟ್ಗೆ ಸೇರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಎಂಟು ಮೆಟ್ರಿಕ್ ಟನ್ ಯೂರಿಯಾ ಕೊಟ್ಟಿದೆ. ಆರು ಮೆಟ್ರಿಕ್ ಟನ್ ಎಲ್ಲಿ ಹೋಯ್ತು ಎಂಬ ವಿಜಯೇಂದ್ರ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ವಿಜಯೇಂದ್ರಗೆ ಬುದ್ಧಿ ಇದ್ಯಾ? ಹಳೆಯ ಬ್ಯಾಲೆನ್ಸ್ ಯಾವುದು ಇದೆ ಅಂತ ವಿಜಯೇಂದ್ರಗೆ ಗೊತ್ತಿಲ್ಲ. ಪಾಪ ಅವರಿಗೆ ಅನುಭವದ ಕೊರತೆ ಇದೆ. ನಮ್ಮ ಅಶೋಕಣ್ಣನಿಗೆ ಎಲ್ಲಾ ಗೊತ್ತಿದೆ. ಅಧಿಕಾರ ಮಾಡಿದ ಅನುಭವ ಇದೆ. ಪಾಪ ಅವರಿಗೆ ಮಾತಾಡೋಕೆ ಬರಲ್ಲ. ಎಂಟೂವರೇ ಲಕ್ಷದಲ್ಲಿ ಆರು ಲಕ್ಷ ಯೂರಿಯಾ ಬಂದಿದೆ. ಇನ್ನೂ ಒಂದೂವರೇ ಲಕ್ಷ ಯೂರಿಯಾ ಬರಬೇಕಿದೆ. ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಮಾತಾಡಿದ್ದೇನೆ. ಇಲ್ಲಿ ಇರೋರಿಗೆ ಅದರ ಬಗ್ಗೆ ಗೊತ್ತಿಲ್ಲ. ಕೇಂದ್ರದ ಜೊತೆ ಮಾತನಾಡಿ ಬಾಕಿ ಇರುವ ಯೂರಿಯಾವನ್ನ ಕೊಡಿಸಲಿ ಎಂದು ವಿಜಯೇಂದ್ರಗೆ ಸವಾಲ್ ಹಾಕಿದರು.ಇದನ್ನೂ ಓದಿ: ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

  • ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ

    ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ

    – ಗೋವಾ ಮುಖ್ಯಮಂತ್ರಿ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ
    – ಪ್ರಧಾನಿ ಮೋದಿ, ಜಲಮಂತ್ರಿಗಳೊಂದಿಗೆ ಚರ್ಚೆ ಮಾಡ್ತೀನಿ ಎಂದ ಡಿಸಿಎಂ

    ಬೆಂಗಳೂರು: ಗೋವಾ ಸಿಎಂ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡು ಮಹದಾಯಿ (Mahadayi) ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಗೋವಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡಲ್ಲ ಎಂಬ ಗೋವಾ ಸಿಎಂ ಪ್ರಮೋದ್‌ ಸಾವಂತ್‌ (Pramod Sawant) ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾ ಆಗಿದೆ. ಟೆಂಡರ್ ಕೂಡ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು. ಇದರ ಮಧ್ಯೆ ಅರಣ್ಯ ಇಲಾಖೆ ಏನೋ ನೊಟೀಸ್‌ ಕೊಟ್ಟಿದೆ. ನಾವು ಅದಕ್ಕೆ ಎಲ್ಲಾ ಉತ್ತರ ಕೊಡ್ತೀವಿ. ಮಹದಾಯಿ ವಿಷಯದಲ್ಲಿ ನಮ್ ಕೆಲಸ ನಾವು ಪ್ರಾರಂಭ ಮಾಡ್ತೀವಿ ಅಂತ ಸ್ಪಷ್ಟನೆ ನೀಡಿದರು.

    ಇದು ನಮ್ಮ ರಾಜ್ಯದ ಸಂಸದರ ಸ್ವಾಭಿಮಾನದ‌‌ ಪ್ರಶ್ನೆ. ಈವರೆಗೂ ಸಂಸದರು ಬಾಯಿ ಮುಚ್ಚಿಕೊಂಡಿರೋದೇ ತಪ್ಪು. ಒಂದು ಎಂಪಿ ಸೀಟಿಗೋಸ್ಕರ ನಾವು ನಮ್ಮನ್ನ ಮಾರಿಕೊಳ್ಳೋಕೆ ಸಾಧ್ಯವಿಲ್ಲ. 28 ಸಂಸದರು, 12 ಜನ ರಾಜ್ಯಸಭೆ ಸದಸ್ಯರು ಈ ಬಗ್ಗೆ ಮಾತಾಡಬೇಕು. ನಾನು ದೆಹಲಿಗೆ ಹೋಗಿ ಸಂಸದರ ಜೊತೆ ಮಾತಾಡ್ತೀನಿ. ಪ್ರಧಾನಿ, ಜಲಶಕ್ತಿ ಮಂತ್ರಿಗಳಿಗೂ ಸಮಯ ‌ಕೇಳ್ತೀನಿ. ಇದರ ಬಗ್ಗೆ ಚರ್ಚೆ ಮಾಡ್ತೀನಿ ಅಂತ‌ ತಿಳಿಸಿದರು.

    ಮಹದಾಯಿ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಮತ್ತು ಅರಣ್ಯ ಸಚಿವರು ರಾಜಕೀಯ ಮಾಡ್ತಿಲ್ಲ. ಅವರು ಸಹ ಅಭಿವೃದ್ಧಿ ಆಗಬೇಕು ಅಂತ ಹೇಳಿದ್ದಾರೆ. ಗೋವಾ ಇದರಲ್ಲಿ ರಾಜಕೀಯ ಮಾಡ್ತಿದೆ. ನಾವು ಮಹದಾಯಿ ಕೆಲಸ ಪ್ರಾರಂಭ ಮಾಡೋಕೆ ಏನು ಬೇಕೋ ಅದನ್ನ ಮಾಡ್ತೀವಿ ಅಂತ ಗೋವಾ ಸಿಎಂ ವಿರುದ್ಧ ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದರು.