Tag: ಕೇಂದ್ರ ಸರ್ಕಾರ

  • 16ನೇ ಜನಗಣತಿಗೆ ಅಧಿಸೂಚನೆ ಪ್ರಕಟ – 2026ರಲ್ಲಿ ಮೊದಲ, 2027ರ ಮಾರ್ಚ್‌ನಿಂದ 2ನೇ ಹಂತದ ಗಣತಿ

    16ನೇ ಜನಗಣತಿಗೆ ಅಧಿಸೂಚನೆ ಪ್ರಕಟ – 2026ರಲ್ಲಿ ಮೊದಲ, 2027ರ ಮಾರ್ಚ್‌ನಿಂದ 2ನೇ ಹಂತದ ಗಣತಿ

    -16 ಭಾಷೆಗಳಲ್ಲಿ ಡಿಜಿಟಲ್ ರೂಪದಲ್ಲಿ ಗಣತಿ

    ನವದೆಹಲಿ: 16ನೇ ಜನಗಣತಿಗಾಗಿ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 2026ರಲ್ಲಿ ಮೊದಲ ಹಾಗೂ 2027ರಲ್ಲಿ ಎರಡನೇ ಹಂತದಲ್ಲಿ ಗಣತಿ ನಡೆಸಲಾಗುತ್ತದೆ.

    ಅಧಿಸೂಚನೆಯ ಪ್ರಕಾರ, ಜನಗಣತಿ (Census) ಹಾಗೂ ಜಾತಿಗಣತಿ (Caste Census) 2026ರ ಅ.1ರಿಂದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಿಮದಿಂದ ಆವೃತವಾದ ಪ್ರದೇಶಗಳಲ್ಲಿ ಪ್ರಾರಂಭವಾಗುತ್ತದೆ. ಉಳಿದ ಭಾಗಗಳಲ್ಲಿ ಈ ಪ್ರಕ್ರಿಯೆಯು 2027ರ ಮಾರ್ಚ್ 1ರಿಂದ ಪ್ರಾರಂಭವಾಗುತ್ತದೆ.ಇದನ್ನೂ ಓದಿ: ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ಗೌರವ

    ಅಧಿಸೂಚನೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು, ಭಾನುವಾರ (ಜೂ.15) ಜನಗಣತಿ ನಡೆಸುವ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಪ್ರಧಾನ ಕಾರ್ಯದರ್ಶಿ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಮತ್ತು ಇತರ ಅಧಿಕಾರಿಗಳು ಭಾಗಿಯಾಗಿದ್ದರು.

    ಈ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ. ಇದಕ್ಕಾಗಿ ಮೊಬೈಲ್ ಅಪ್ಲಿಕೇಶನ್‌ಗಳನ್ನು ಸಿದ್ಧಪಡಿಸಲಾಗುವುದು ಮತ್ತು ಜನಗಣತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಅದರಲ್ಲಿ ಸಂಗ್ರಹಿಸಲಾಗುವುದು. ಅಪ್ಲಿಕೇಶನ್‌ಗಳು 16 ಭಾಷೆಗಳಲ್ಲಿ ಲಭ್ಯವಿರುತ್ತವೆ. 16ನೇ ಜನಗಣತಿಯಲ್ಲಿ ಮೊದಲ ಬಾರಿಗೆ ಜಾತಿಗಣತಿಯನ್ನು ಸೇರಿಸಲಾಗಿದೆ. 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು, 1.3 ಲಕ್ಷ ಜನಗಣತಿ ಅಧಿಕಾರಿಗಳು ಆಧುನಿಕ ಮೊಬೈಲ್ ಮತ್ತು ಡಿಜಿಟಲ್ ಉಪಕರಣಗಳೊಂದಿಗೆ ಜನಗಣತಿ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಜನಗಣತಿ ಎರಡು ಹಂತಗಳಲ್ಲಿ ನಡೆಯಲಿದ್ದು, ಸದ್ಯ ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ನಡೆಯುತ್ತಿದೆ. ಈ ಮೂಲಕ ವಸತಿ ಪರಿಸ್ಥಿತಿಗಳು, ಮನೆಯ ಆಸ್ತಿಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸಲಾಗುತ್ತದೆ. ಅದಾದ ಬಳಿಕ ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ, ಮನೆಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ಹಾಗೂ ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

    ಈ ಜನಗಣತಿಯು ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ‍್ಯದ ನಂತರದ 8ನೇ ಜನಗಣತಿಯಾಗಲಿದೆ. ಈ ಬಾರಿ ಜನಗಣತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಡಿಜಿಟಲ್ ರೂಪದಲ್ಲಿ ಮಾಡಲಾಗುವುದು. ನಾಗರಿಕರಿಗೆ ಸ್ವಯಂ-ಗಣತಿ ಸೌಲಭ್ಯವೂ ಲಭ್ಯವಿರುತ್ತದೆ. ದತ್ತಾಂಶ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಗ್ರಹಣೆ, ಪ್ರಸರಣ ಸಮಯದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೊನೆಯ ಜನಗಣತಿಯನ್ನು 2011ರಲ್ಲಿ ನಡೆಸಲಾಗಿತ್ತು ಮತ್ತು ಈ ಜನಗಣತಿಯನ್ನು 16 ವರ್ಷಗಳ ಅಂತರದ ನಂತರ ನಡೆಸಲಾಗುತ್ತಿದೆ.ಇದನ್ನೂ ಓದಿ: ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

  • 16ನೇ ಜನಗಣತಿಗೆ ಇಂದು ಕೇಂದ್ರದಿಂದ ಅಧಿಕೃತ ಅಧಿಸೂಚನೆ ಸಾಧ್ಯತೆ

    16ನೇ ಜನಗಣತಿಗೆ ಇಂದು ಕೇಂದ್ರದಿಂದ ಅಧಿಕೃತ ಅಧಿಸೂಚನೆ ಸಾಧ್ಯತೆ

    ನವದೆಹಲಿ: ದೇಶದಲ್ಲಿ ಜನಗಣತಿ (Census) ನಡೆಸುವ ವಿಚಾರವಾಗಿ ಇಂದು ಕೇಂದ್ರ ಸರ್ಕಾರ (Central Government) ಅಧಿಕೃತ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾನುವಾರ (ಜೂ.15) ಸಭೆ ನಡೆದಿತ್ತು. ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆ ನಡೆದ ಹಿನ್ನೆಲೆ ಇಂದು ಅಧಿಕೃತ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ.ಇದನ್ನೂ ಓದಿ: ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

    ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿಗಣತಿ (Caste Census) ಸೇರಿಸಲಾಗಿದ್ದು, ಈ ಬಾರಿ 34 ಲಕ್ಷ ಗಣತಿದಾರರು, ಮೇಲ್ವಿಚಾರಕರು ಮತ್ತು ಜನಗಣತಿ ಕಾರ್ಯಕರ್ತರು ಸೇರಿ ಸುಮಾರು 1.3 ಲಕ್ಷ ಜನರಿದ್ದಾರೆ. ಜೊತೆಗೆ ಜನಗಣತಿ ವೇಳೆ ಅತ್ಯಾಧುನಿಕ ಮೊಬೈಲ್ ಡಿಜಿಟಲ್ ಗ್ಯಾಜೆಟ್‌ಗಳನ್ನು ಬಳಸಲಿದ್ದಾರೆ.

    ಸದ್ಯ ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ನಡೆಯುತ್ತಿದೆ. ಈ ಮೂಲಕ ವಸತಿ ಪರಿಸ್ಥಿತಿಗಳು, ಮನೆಯ ಆಸ್ತಿಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸಲಾಗುತ್ತದೆ. ಅದಾದ ಬಳಿಕ ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ, ಮನೆಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ಹಾಗೂ ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.ಇದನ್ನೂ ಓದಿ:ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

  • ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

    ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರವೇ (Central Govt) ಜನಗಣತಿ ಮತ್ತು ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರದಿಂದ ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ (jDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿರೋಧ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರದ (State Government) ಹೊಸ ಜಾತಿಗಣತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಮಾಡಬೇಕಾದರೆ ರಾಜ್ಯ ಸರ್ಕಾರ ಯಾಕೆ ಜಾತಿಗಣತಿ ಮಾಡಬೇಕು. ತಮ್ಮ ಲಾಭಕ್ಕಾಗಿ ಸರ್ಕಾರ ಜಾತಿಗಣತಿ ಮಾಡಲು ಮುಂದಾಗಿದೆ. ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಿದ ಮೇಲೆ ಹಳೆ ಜಾತಿಗಣತಿ ಬೇಡ ಎಂದು ಸಿಎಂ, ಡಿಸಿಎಂ ನಿರ್ಧಾರ ಮಾಡಿದ್ದಾರೆ. 160-185 ಕೋಟಿ ರೂ. ಖರ್ಚು ಮಾಡಿದ್ದಾರೆ. ಮೊದಲು ಜಾತಿಗಣತಿ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು. ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರದಿಂದ ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದರು.ಇದನ್ನೂ ಓದಿ: ಏರ್‌ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಈಗಾಗಲೇ 180 ಕೋಟಿ ರೂ. ಖರ್ಚು ಮಾಡಿದ್ದೀರಾ. ಮತ್ತೆ ಜಾತಿಗಣತಿ ಮಾಡಿದರೆ ಮತ್ತೆ ಜನರ ತೆರಿಗೆ ಹಣ ಖರ್ಚು ಆಗುತ್ತದೆ. ಎಷ್ಟೇ ಹಣ ಖರ್ಚು ಮಾಡಿದರೂ ನೀವು ಸರಿಯಾಗಿ ಜಾತಿಗಣತಿ ಮಾಡುವುದಿಲ್ಲ. ನಿಮ್ಮ ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಘೋಷಣೆ ಮಾಡಿದ್ದೀರಾ. ಕೆಲವು ಸಮುದಾಯಗಳನ್ನ ಮೇಲೆ ಎತ್ತೋದು, ಕೆಲವು ಜಾತಿಗಳನ್ನು ಕೆಳಗೆ ತುಳಿಯೋ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಜಾತಿಗಣತಿ ಮಾಡೋದು ಬೇಡ ಎಂದು ಆಗ್ರಹಿಸಿದರು.

    ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ ಎಂದಿದ್ದಾರೆ. ಆದರೆ ಇಲ್ಲಿ ರಾಜಕೀಯ ಅಜೆಂಡಾ ಮುಂದೆ ಇಟ್ಟುಕೊಂಡು ಇದನ್ನ ಮಾಡುತ್ತಿದ್ದಾರೆ. ನಿಮ್ಮ ನಿಮ್ಮ ರಾಜಕೀಯ ಭವಿಷ್ಯ ಕಟ್ಟೋಕೆ ಈ ಜಾತಿಗಣತಿ ಮಾಡ್ತಿದ್ದೀರಾ. ಕೆಲವು ಜಾತಿ ಜಾಸ್ತಿ ತೋರಿಸೋದು, ಕೆಲವು ಕಡಿಮೆ ತೋರಿಸುವ ಕೆಲಸ ಮಾಡುತ್ತೀರಾ. ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ ಎಂದು ಆರೋಪಿಸಿದರು.

    ಜಾತಿಗಣತಿ ಬಗ್ಗೆ ವಿಪಕ್ಷ ವಿರೋಧಕ್ಕೆ ಡಿಕೆಶಿ ಹೇಳಿಕೆಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, 1971ರಲ್ಲಿ ಜಾತಿಗಣತಿ ಆಗಿದೆ. ಈಗ ಮತ್ತೆ ಜನಗಣತಿ ಮಾಡೋಕೆ ಕೇಂದ್ರ ಮುಂದಾಗಿದೆ. ಕಾಂತರಾಜು ವರದಿ ಬಗ್ಗೆ ಎಷ್ಟು ಜನಕ್ಕೆ ವಿಶ್ವಾಸ ಇದೆ ಎಂದು ಡಿಕೆಶಿವಕುಮಾರ್ ಹೇಳಬೇಕು. ಇವರು ಮಾಡಿದ ಜಾತಿಗಣತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ, ಕಾಂಗ್ರೆಸ್ ಹೈಕಮಾಂಡ್‌ಗೆ ವಿಶ್ವಾಸ ಇಲ್ಲ. ರಾಹುಲ್ ಗಾಂಧಿ ಜಾತಿಗಣತಿ ಕೈಬಿಡಿ ಎಂದಿದ್ದರು. ಅದಕ್ಕೆ ಇವರು ಹೊಸ ಜಾತಿಗಣತಿ ಮಾಡಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಮೇಲೆ ರಾಜ್ಯ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

    ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

    ನವದೆಹಲಿ: ದೇಶದಲ್ಲಿ ಏರ್ ಕಂಡೀಷನ್ (Air-Conditioners) ಯಂತ್ರಗಳಿಗೆ ಹೊಸ ನಿಯಮವನ್ನು ಜಾರಿ ಮಾಡಲು ಕೇಂದ್ರ ಸರ್ಕಾರ (Union Government) ಮುಂದಾಗಿದೆ.

    ಇನ್ನು ಮುಂದೆ ಹೊಸ ಹವಾನಿಯಂತ್ರಣ ಯಂತ್ರಗಳ (AC) ಕನಿಷ್ಠ ತಾಪಮಾನ 16 ಅಥವಾ 18 ಡಿಗ್ರಿಗಳ ಬದಲಿಗೆ 20 ಡಿಗ್ರಿ ಸೆಲ್ಸಿಯಸ್ ಮತ್ತು ಪ್ರಸ್ತುತ ಗರಿಷ್ಠ ಇರುವ 30 ಡಿಗ್ರಿಗಳ ಬದಲಿಗೆ ಗರಿಷ್ಠ 28 ಡಿಗ್ರಿಯೊಂದಿಗೆ ಬರಲಿದೆ.

    ಈ ಆದೇಶ ಜಾರಿಗೆ ಬಂದ ನಂತರ ಮೂರು ವರ್ಷಗಳಲ್ಲಿ 18,000-20,000 ಕೋಟಿ ರೂ. ಉಳಿತಾಯವಾಗಬಹುದು ಎಂದು ಅಂದಾಜಿಸಲಾಗಿದೆ.

    ಪ್ರಸ್ತುತ ಎಸಿ ಕನಿಷ್ಠ ತಾಪಮಾನವು 18°C ​​(ಕೆಲವು ಸಂದರ್ಭಗಳಲ್ಲಿ 16°C) ವರೆಗೆ ಹೋದರೆ ಗರಿಷ್ಠ 30°C ವರೆಗೆ ಏರಿಸಬಹುದಾಗಿದೆ. ಸರ್ಕಾರದ ಈ ಆದೇಶ ಜಾರಿಯಾದರೆ ಎಸಿ ತಾಪಮಾನ 20°C – 28°C ಗೆ ನಿರ್ಬಂಧಿಸುತ್ತದೆ. ಇದರರ್ಥ ಬಳಕೆದಾರರು ತಮ್ಮ ಎಸಿ ತಾಪಮಾನವನ್ನು 20°C ಗಿಂತ ಕಡಿಮೆ ಮತ್ತು 30°C ಗಿಂತ ಹೆಚ್ಚು ಹೊಂದಿಸಲು ಸಾಧ್ಯವಾಗುವುದಿಲ್ಲ. ಇದನ್ನೂ ಓದಿ: ಶೀಘ್ರದಲ್ಲೇ ಜಾರಿಗೆ ಬರಲಿದೆ ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ

    ಕೇಂದ್ರ ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್‌ ಮಾತನಾಡಿ, ಇದೊಂದು ವಿಶಿಷ್ಟ ಪ್ರಯೋಗವಾಗಿದ್ದು, ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಮತ್ತು ವಿದ್ಯುತ್ ಬಿಲ್‌ಗಳಲ್ಲಿನ ಏರಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

    ಈ ನಿಯಮ ಜಾರಿಯಾದ ನಂತರ ಗೃಹಬಳಕೆಯಿಂದ ಹಿಡಿದು ವಾಣಿಜ್ಯ ಸಂಸ್ಥೆಗಳಾದ ಕಚೇರಿ ಬ್ಲಾಕ್‌ಗಳು, ಮಾಲ್‌, ಹೋಟೆಲ್‌ ಮತ್ತು ಚಲನಚಿತ್ರ ಮಂದಿರಗಳ ಸೇರಿದಂತೆ ವಿವಿಧ ವಲಯಗಳಲ್ಲಿ ಬಳಸುವ ಎಸಿಗಳಿಗೆ ಅನ್ವಯವಾಗುತ್ತದೆ.

    ಈಗಾಗಲೇ ಈ ಪ್ರಯೋಗ ಇಟಲಿ ಮತ್ತು ಜಪಾನ್‌ನಲ್ಲಿ ಜಾರಿಯಾಗಿದೆ. ರೋಮ್ ಸಾರ್ವಜನಿಕ ಕಟ್ಟಡಗಳಿಗೆ ಕನಿಷ್ಠ ತಾಪಮಾನವನ್ನು 23 ಡಿಗ್ರಿ ಸೆಲ್ಸಿಯಸ್‌ಗೆ ನಿಗದಿಪಡಿಸಿದರೆ, ಜಪಾನ್ 27 ಡಿಗ್ರಿ ಸೆಲ್ಸಿಯಸ್‌ ಫಿಕ್ಸ್‌ ಮಾಡಲಾಗಿದೆ.

    ಪ್ರತಿ 1 ಡಿಗ್ರಿ ಸೆಲ್ಸಿಯಸ್ ಹೆಚ್ಚಳವು ವಿದ್ಯುತ್ ಬಳಕೆಯನ್ನು 6% ರಷ್ಟು ಕಡಿಮೆ ಮಾಡುತ್ತದೆ. 6 ಕೋಟಿ ನಗರ ಮನೆಗಳು ಮತ್ತು 12 ಲಕ್ಷ ವಾಣಿಜ್ಯ ಸಂಸ್ಥೆಗಳು ತಮ್ಮ ಎಸಿ ಸೆಟ್ಟಿಂಗ್ ಅನ್ನು 22 ರಿಂದ 24 ಡಿಗ್ರಿ ಸೆಲ್ಸಿಯಸ್ ನಡುವೆ ಇಟ್ಟುಕೊಂಡರೆ ವಾರ್ಷಿಕವಾಗಿ 12-15 ಬಿಲಿಯನ್ ಯೂನಿಟ್ ವಿದ್ಯುತ್ ಉಳಿಸುತ್ತದೆ ಮತ್ತು 4-5 ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸುವ ಅಗತ್ಯವನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲದೇ ಇಂಗಾಲದ ಹೊರಸೂಸುವಿಕೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.

  • ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

    ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

    ನವದೆಹಲಿ: ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ (Housing Quota) ದಿವ್ಯಾಂಗರಿಗೆ 4% ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರ ʻಸಬ್ ಕಾ ಸಾಥ್, ಸಬ್ ಕಾ ವಿಕಾಸ್ʼ ಉದ್ದೇಶಕ್ಕೆ ಪೂರಕವಾಗುವಂತೆ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಪ್ರವೇಶ ಭಾರತ ಅಭಿಯಾನದಡಿಯಲ್ಲಿ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ

    ಇನ್ಮುಂದೆ ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗುವುದು, ಇದು ಸಾರ್ವಜನಿಕ ಸೇವೆಗಳಲ್ಲಿ ಸಮಾನತೆ, ಘನತೆ ಮತ್ತು ಪ್ರವೇಶದತ್ತ ಗಣನೀಯ ಹೆಜ್ಜೆಯಾಗಿದೆ ಎಂದು ಖಟ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಅಂಗವಿಕಲ ವ್ಯಕ್ತಿಗಳ ಹಕ್ಕುಗಳ (RPWD) ಕಾಯ್ದೆ, 2016 ರ ಅಡಿಯಲ್ಲಿ, ಎಸ್ಟೇಟ್ ನಿರ್ದೇಶನಾಲಯವು ಅಂಗವಿಕಲರಿಗೆ ಕೇಂದ್ರ ಸರ್ಕಾರಿ ನಿವಾಸಗಳಿಗೆ ಸಮಂಜಸವಾದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸಿದೆ. ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ

  • ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    – ಪಾಕ್, ಬಾಂಗ್ಲಾ ಗಡಿಯಲ್ಲಿ ಪ್ರಾದೇಶಿಕ ಕಚೇರಿ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದ್ದಂತೆ ಇದೀಗ ಭಾರತದ ಗಡಿ ಭದ್ರತಾ ಪಡೆಗೆ (BSF) ಇನ್ನುಷ್ಟು ಬಲ ಬಂದಿದ್ದು, 16 ಹೊಸ ಬೆಟಾಲಿಯನ್‌ಗಳು (battalions) ಸೇರ್ಪಡೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

    ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗುತ್ತಿದ್ದು, ಬಿಎಸ್‌ಎಫ್‌ಗೆ 16 ಹೊಸ ಬೆಟಾಲಿಯನ್‌ಗಳು ಮತ್ತು ಭಾರತ ಪಾಕ್ ಮತ್ತು ಭಾರತ ಬಾಂಗ್ಲಾ ಗಡಿಯಲ್ಲಿ ಒಂದೊಂದರಂತೆ ಎರಡು ಹೊಸ ಪ್ರಾದೇಶಿಕ ಪ್ರಧಾನ ಕಚೇರಿಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿದೆ. ಜೊತೆಗೆ ಬೆಟಾಲಿಯನ್‌ಗಳಲ್ಲಿ ಸುಮಾರು 17,000 ಹೊಸ ಸೈನಿಕರನ್ನು ನೇಮಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು 2020-21ರಲ್ಲಿ ಬಿಎಸ್‌ಎಫ್ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.ಇದನ್ನೂ ಓದಿ: 30 ನಿಮಿಷ ಲೈಟ್ ಆಫ್ – ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್

    ಈ ಕುರಿತು ಭದ್ರತಾ ಪಡೆ ಮಾಹಿತಿ ನೀಡಿದ್ದು, ಪ್ರಸ್ತುತ ಈ ಅರೆಸೇನಾಪಡೆಯು 193 ಬೆಟಾಲಿಯನ್‌ಗಳನ್ನು ಹೊಂದಿದ್ದು, ಒಂದು ಬೆಟಾಲಿಯನ್ 1,000 ಮಂದಿಗೂ ಹೆಚ್ಚು ಯೋಧರನ್ನು ಒಳಗೊಂಡಿದೆ. ಕೇಂದ್ರ ಸರ್ಕಾರ (Central Government) ಅನುಮೋದನೆ ನೀಡುತ್ತಿದ್ದಂತೆ ಬಿಎಸ್‌ಎಫ್ ಮಹಿಳಾ ಹಾಗೂ ಪುರುಷ ಸಿಬ್ಬಂದಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದೆ.

    ಕಳೆದ ವರ್ಷ ಬಾಂಗ್ಲಾದೇಶದಲ್ಲಿ (Bangladesh) ಶೇಖ್ ಹಸೀನಾ ಸರ್ಕಾರದ ಪತನ ಹಾಗೂ ಏ.22ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭದ್ರತಾ ದೃಷ್ಟಿಯಿಂದ ಬಿಎಸ್‌ಎಫ್‌ಗೆ ಬಲ ಹೆಚ್ಚಿಸುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆ ಸೇರಿದಂತೆ ಕೆಲವು ಅಂತಿಮ ಅನುಮೋದನೆಗಳು ಬಾಕಿಯಿದ್ದು, ಶೀಘ್ರದಲ್ಲೇ ಮಂಜೂರಾಗುವ ನಿರೀಕ್ಷೆಯಿದೆ.

    ಜಮ್ಮು ಮತ್ತು ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಲು ಜಮ್ಮುವಿನಲ್ಲಿ ಒಂದು ವಲಯ ಹಾಗೂ ಬಾಂಗ್ಲಾದೇಶ ಗಡಿಯ ಉತ್ತಮ ಕಣ್ಗಾವಲುಗಾಗಿ ಎರಡನೇ ವಲಯ ಮಿಜೋರಾಂನಲ್ಲಿ ಸ್ಥಾಪನೆಯಾಗಲಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಇಸ್ಲಾಂ ಇರುವವರೆಗೂ ಭಯೋತ್ಪಾದನೆ ಜೀವಂತ: ತಸ್ಲಿಮಾ ನಸ್ರೀನ್‌

  • ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ

    ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ

    – ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ; ಶಾಸಕ

    ರಾಮನಗರ: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಮಾಗಡಿ ಶಾಸಕ ಹೆಚ್‌.ಸಿ ಬಾಲಕಷ್ಣ (HC Balakrishna) ಹೇಳಿದ್ದಾರೆ.

    ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆಗೆ ಸಹಮತ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಫೆಲ್ಯೂರ್ ಆಗಿದೆ. ಹಾಗಾಗಿ ಅಮಾಯಕರು ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯದಿಂದ ತಲಾ 1 ಲಕ್ಷ ಪರಿಹಾರ

    ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಇದಕ್ಕೆ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ದೂರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    ಕೇಂದ್ರ ಗೃಹ ಮಂತ್ರಿಗಳು ಈಗ ಆ ಜಾಗಕ್ಕೆ ಹೋದ್ರೆ ಸತ್ತವರು ಬದುಕಿ ಬರೋಲ್ಲ. ಘಟನೆ ನಡೆಯದ ಹಾಗೆ ತಡೆಯುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಮುಗಿದ ಮೇಲೆ ಸಾಂತ್ವನ ಎಲ್ಲರೂ ಹೇಳುತ್ತಾರೆ‌. ಘಟನೆ ನಡೆಯುವ ಮುನ್ನವೇ ಮಿಲಿಟರಿ ನಿಯೋಜನೆ ಮಾಡಬೇಕಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಹೇಗೆ ಕಾರ್ಯ ನಿರ್ವಹಣೆಯ ಮಾಡಬೇಕೆಂದು ಕೇಂದ್ರಕ್ಕೆ ಗೊತ್ತಿರಲಿಲ್ವಾ? ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

  • Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ

    Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ (ಏ.24) ಸರ್ವಪಕ್ಷಗಳ ಸಭೆ ಕರೆದಿದೆ.

    ಗುರುವಾರ (ಏ.24) ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್‌ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಇಂದಿನ ಸಭೆಯಲ್ಲಿ ಪಾಕ್‌ ಉಗ್ರರನ್ನು ಮಟ್ಟಹಾಕಲು, ಪಾಕ್‌ ಸಂಬಂಧ ಕಡಿದುಕೊಳ್ಳುವ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ವಿವರಿಸಲಿದ್ದಾರೆ.

    ಇಂದಿನ ಸಭೆಯಲ್ಲಿ ಆಗಿದ್ದೇನು?
    ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

    ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

    ಪ್ರಮುಖ ನಿರ್ಣಯಗಳು
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ.

    ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

  • 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    – 1960ರ ಸಿಂಧೂ ನದಿ ಒಪ್ಪಂದ ರದ್ದು
    – ಮೂರು ಗಂಟೆ ಹೈವೋಲ್ಟೇಜ್‌ ಸಭೆ ಬಳಿಕ ಭಾರತ ಪ್ರತೀಕಾರದ ನಿರ್ಧಾರ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ.

    ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

    ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah), ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

    ಪ್ರಮುಖ ನಿರ್ಣಯಗಳು
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ.

    ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

    ಸರ್ವಪಕ್ಷ ಸಭೆಗೆ ಕರೆ
    ಜೊತೆಗೆ ಗುರುವಾರ (ಏ.24) ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.

  • ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

    ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

    – ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂಕೋರ್ಟ್
    – ಮೇ 5ಕ್ಕೆ ಮುಂದಿನ ವಿಚಾರಣೆ

    ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಗೆ (Waqf Amendment Act) ಪೂರ್ಣ ಪ್ರಮಾಣ ತಡೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ (Supreme Court) ಮುಂದಿನ ಆದೇಶದವರೆಗೂ ವಕ್ಫ್ ಮಂಡಳಿಗಳಿಗೆ ಮುಸ್ಲಿಂ (Muslim), ಮುಸ್ಲಿಂಮೇತರ ಸದಸ್ಯರ ನೇಮಕ ಮಾಡದಂತೆ ಮತ್ತು ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

    ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ನಡೆಸಿತು. ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಒಂದು ವಾರದೊಳಗೆ ಸಲ್ಲಿಸಬೇಕೆಂದು ಕೋರ್ಟ್ ಸೂಚಿಸಿದೆ. ಅರ್ಜಿದಾರರಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಪರಿಶೀಲಿಸಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು

    ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಸರ್ಕಾರವು ಜನರಿಗೆ ಜವಾಬ್ದಾರವಾಗಿದೆ. ಕೆಲವು ಪ್ರಕರಣಗಳಲ್ಲಿ ಸಂಪೂರ್ಣ ಹಳ್ಳಿಗಳನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಜನರು ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಲಕ್ಷಾಂತರ ಜನರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಶಾಸನವನ್ನು ತರಲಾಗಿದೆ. ಒಂದರ ನಂತರ ಒಂದರಂತೆ ಲೆಕ್ಕವಿಲ್ಲದಷ್ಟು ಪ್ಲಾಟ್‌ಗಳನ್ನು ವಕ್ಫ್ ಎಂದು ಘೋಷಿಸಲಾಗುತ್ತಿದೆ. ಈ ವಿಷಯವು ಗಮನಾರ್ಹ ಸಾರ್ವಜನಿಕ ಪರಿಣಾಮಗಳನ್ನು ಬೀರುತ್ತದೆ ಎಂದು ತಿಳಿಸಿದರು.

    ಈ ಕಾರಣಕ್ಕೆ ಯಾವುದೇ ಮಧ್ಯಂತರ ನಿರ್ಧಾರಕ್ಕೆ ಕೋರ್ಟ್ ಬರಬಾರದು. ಕೋರ್ಟ್ ಆತುರದ ಮಧ್ಯಂತರ ಆದೇಶ ಹೊರಡಿಸಬಾರದು. ಮಧ್ಯಂತರ ತಡೆ ನೀಡುವುದು ಅತ್ಯಂತ ಕಠಿಣ ಹೆಜ್ಜೆಯಾಗಲಿದೆ. ಈ ವಿಷಯಕ್ಕೆ ಆಳವಾದ ಚರ್ಚೆಯ ಅಗತ್ಯವಿದೆ. ಈ ವಿಚಾರವನ್ನು ಆತುರದಿಂದ ನಿರ್ಧರಿಸಲು ಸಾಧ್ಯವಿಲ್ಲ. ಈ ಬಗ್ಗೆ ಹೆಚ್ಚಿನ ದಾಖಲೆ ಕೇಂದ್ರ ಸರಕಾರ ಸಲ್ಲಿಸಲಿದೆ. ಪ್ರಾಥಮಿಕ ಪ್ರತಿಕ್ರಿಯೆಯನ್ನು ಸಲ್ಲಿಸಲು ಒಂದು ವಾರದ ಸಮಯ ಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿ ನೂತನ ರಾಷ್ಟ್ರಾಧ್ಯಕರ ಆಯ್ಕೆ ಪ್ರಕ್ರಿಯೆ ಚುರುಕು – ಶೀಘ್ರದಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲೂ ಅಧ್ಯಕ್ಷರ ಬದಲಾವಣೆ?

     

    ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮ್‌ ಅಥವಾ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಹೇಳಿತು. ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ 7 ದಿನಗಳ ಕಾಲಾವಕಾಶ ನೀಡಿತು, ಅರ್ಜಿದಾರರು 5 ದಿನಗಳಲ್ಲಿ ಕೇಂದ್ರದ ಉತ್ತರಕ್ಕೆ ಮರು ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ಹೇಳಿತು.

    ಇದೇ ವೇಳೆ ಇಷ್ಟು ಅರ್ಜಿಗಳನ್ನು ನಿಭಾಯಿಸುವುದು ಅಸಾಧ್ಯ. ಕೇವಲ 5 ಅರ್ಜಿಗಳನ್ನು ಮಾತ್ರ ಆಲಿಸಲಾಗುವುದು. ಯಾವ ಐದು ಅರ್ಜಿಗಳನ್ನು ವಿಚಾರಣೆ ನಡೆಸಬೇಕು ಎಂಬುದನ್ನು ನೀವೇ ಆಯ್ಕೆ ಮಾಡಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಬಳಿಕ ಮುಂದಿನ ವಿಚಾರಣೆಯವರೆಗೆ ‘ವಕ್ಫ್ ಬೈ ಡೀಡ್’ ಮತ್ತು ‘ಬಳಕೆದಾರರಿಂದ ವಕ್ಫ್’ ಅನ್ನು ಡಿನೋಟಿಫೈ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಪರ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು.