Tag: ಕೇರಳಾ

  • ಕೇರಳದಿಂದಲೇ ದಕ್ಷಿಣ ಕನ್ನಡಕ್ಕೆ ಕೊರೊನಾ ಕಂಟಕ

    ಕೇರಳದಿಂದಲೇ ದಕ್ಷಿಣ ಕನ್ನಡಕ್ಕೆ ಕೊರೊನಾ ಕಂಟಕ

    ಮಂಗಳೂರು: ದೇವರು ನಾಡು ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕಂಟಕ ಶುರುವಾಗಿದೆ. ಜಿಲ್ಲೆಯಲ್ಲಿ ಹೆಚ್ಚು ತೀವ್ರತೆ ಪಡೆದುಕೊಂಡ ಕಿಲ್ಲರ್ ಕೊರೊನಾ ಇಂದು ರಾಜ್ಯದಲ್ಲೇ ಹೆಚ್ಚು ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಜನರಲ್ಲಿ ನಡುಕ ಉಂಟು ಮಾಡಿದೆ.

    ದೇಶದಲ್ಲಿ ಪ್ರತಿದಿನ ಪತ್ತೆಯಾಗುವ ಅರ್ಧದಷ್ಟು ಸೋಂಕು ಕೇರಳದಲ್ಲೇ ವರದಿಯಾಗುತ್ತಿವೆ. ಹೀಗಾಗಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ದ.ಕ.ಜಿಲ್ಲೆಯ ಜನರಲ್ಲಿ ನಡುಕ ಶುರುವಾಗಿದೆ. ಇಂದು ಒಂದೇ ದಿನ 438 ಜನರಲ್ಲಿ ಕೊರೊನಾ ಸೊಂಕು ಪತ್ತೆಯಾಗುವ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಸೋಂಕು ಪತ್ತೆಯಾದ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ ಇಂದು 6 ಮಂದಿ ಬಲಿಯಾದರೆ. ಕೇವಲ 311 ಮಂದಿ ಕೊರೊನಾದಿಂದ ಗುಣಮುಖರಾಗುವ ಮೂಲಕ ಜಿಲ್ಲೆಯ ಪಾಸಿಟಿವ್ ರೇಟ್ 4.57%ಕಂಡಿದೆ.

    ಕೊರೊನಾ ನಿಯಂತ್ರಣಕ್ಕೆ ಪಣತೊಟ್ಟಿರುವ ಜಿಲ್ಲಾಡಳಿತ ಹೊಸ ರೂಲ್ಸ್ ಜಾರಿಮಾಡಿದೆ. ಕೊರೋನಾ ಸೊಂಕು ಪತ್ತೆಯಾದ ವ್ಯಕ್ತಿಯ ಸಂಪರ್ಕದಲ್ಲಿರುವ ಸುಮಾರು 50ಮಂದಿಯನ್ನ ಟೆಸ್ಟ್ಗೆ ಒಳಪಡಿಸುತ್ತಿದೆ.ನಗರ ಭಾಗದ ಅಪಾರ್ಟ್‍ಮೆಂಟ್ ನಿವಾಸಿಗಳಲ್ಲಿ ಸೋಂಕು ಕಂಡುಬಂದರೆ. ಪ್ಲ್ಯಾಟ್‍ನ ಮೇಲಿನ ಮಹಡಿ ಮತ್ತು ಕೆಳ ಮಹಡಿಯ ಎಲ್ಲರ ಕೊರೊನಾ ಟೆಸ್ಟ್ ಮಾಡಲಾಗುತ್ತದೆ. ಒಂದೇ ಕಡೆಯಲ್ಲಿ ಎರಡಕ್ಕಿಂತ ಹೆಚ್ಚು ಜನ ಪಾಸಿಟಿವ್ ಆದರೆ ಅಲ್ಲಿ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡುತ್ತೆ. ದಿನನಿತ್ಯ ನಗರದಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಿರುವ ಜಿಲ್ಲಾಡಳಿತ ಕೇರಳ ನಂಬರ್ ಪ್ಲೇಟ್ ಇರುವ ವಾಹನಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಿನಲ್ಲಿ ವಿಕೇಂಡ್ ಕರ್ಫ್ಯೂ ಜಾರಿ ಮಾಡಿ ಕೊರೋನಾ ಕಟ್ಟಿಹಾಕಲು ಮುಂದಾದ ಜಿಲ್ಲಾಡಳಿತಕ್ಕೆ ವಿಕೇಂಡ್ ನಲ್ಲೇ ಹೆಚ್ಚು ಸೊಂಕು ಪತ್ತೆಯಾಗಿ ಅಚ್ಚರಿ ಮೂಡಿಸಿದೆ.

  • ಕೂದಲು ನೇರ ಮಾಡಲು ತಲೆ ಕೂದಲಿಗೆ ಬೆಂಕಿ ಇಟ್ಟು ಪ್ರಾಣ ಬಿಟ್ಟ

    ಕೂದಲು ನೇರ ಮಾಡಲು ತಲೆ ಕೂದಲಿಗೆ ಬೆಂಕಿ ಇಟ್ಟು ಪ್ರಾಣ ಬಿಟ್ಟ

    ತಿರುವನಂತಪುರಂ: ಬಾಲಕನೊಬ್ಬ ಸಾಮಾಜಿಕ ಜಾಲತಾಣದಲ್ಲಿನ ವೀಡಿಯೋವನ್ನು ನೋಡಿ ಪ್ರಭಾವಿತನಾಗಿ ಕೂದಲು ನೇರ ಮಾಡಲು ಸೀಮೆ ಎಣ್ಣೆ ಸುರಿದು ತಲೆಕೂದಲಿಗೆ ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಶಿವನಾರಾಯಣ್ (12) ಮೃತ ಬಾಲಕ. ಬಾಲಕ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವನ್ನು ನೋಡಿ ತಾನು ಹಾಗೇ ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಈತ ಮೂಲತಃ ವೆಂಗನೂರಿನವನು ಎಂದು ತಿಳಿದು ಬಂದಿದೆ.

    7ನೇ ತರಗತಿ ಓದುತ್ತಿದ್ದ ಶಿವನಾರಾಯಣ್ ತಲೆಕೂದಲಿಗೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿಕೊಂಡು ಕೂದಲು ನೇರ ಮಾಡುವ ವೀಡಿಯೋವನ್ನು ನೋಡಿದ್ದಾನೆ. ತಾನೂ ಹಾಗೇ ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಬೆಂಕಿ ದೇಹಕ್ಕೆ ತಗುಲಿದೆ. ಮನೆಯಲ್ಲಿ ಅಜ್ಜಿ ಮಾತ್ರ ಇರುವುದರಿಂದ ಪ್ರಾಣ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ನೆರೆಹೊರೆಯವರು ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವನಾರಾಯಣ್ ಪ್ರಾಣಬಿಟ್ಟಿದ್ದಾನೆ.

  • ಬಿಜೆಪಿ ಟಿಕೆಟ್ ನಿರಾಕರಿಸಿದ ಎಂಬಿಎ ಪದವೀಧರ

    ಬಿಜೆಪಿ ಟಿಕೆಟ್ ನಿರಾಕರಿಸಿದ ಎಂಬಿಎ ಪದವೀಧರ

    ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಬಂದಿರುವ ಟಿಕೆಟ್‍ನ್ನು ಯುವಕ ನಿರಾಕರಿಸಿದ್ದಾನೆ.

    ಮಣಿಕುಟ್ಟನ್‍ಪಣಿಯಣ್ (31) ಎಂಬಿಎ ಪದವೀಧರನಿಗೆ ಬಿಜೆಪಿ ಕಡೆಯಿಂದ ಟಿಕೆಟ್ ಕೊಟ್ಟಿದ್ದು, ಇದನ್ನು ಯುವಕ ನಿರಾಕರಿಸಿದ್ದಾನೆ. ಯುವಕ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವ ಮೂಲಕವಾಗಿ ಹೈಕಮಾಂಡ್‍ಗೆ ಶಾಕ್ ನೀಡಿದ್ದಾನೆ.

    ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಸಮುದಾಯಕ್ಕೆ ಮೀಸಲಾಗಿದ್ದ ಮನಂತವಾಡಿ ಕ್ಷೇತ್ರದಿಂದ ಮಣಿಕುಟ್ಟನ್‍ಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಮಣಿಕುಟ್ಟನ್ ಕೇರಳದ ಪಣಿಯಾ ಬುಡಕಟ್ಟು ಸಮುದಾಯದಲ್ಲಿ ಎಂಬಿಎ ಪದವಿಗಳಿಸಿದ ಮೊದಲ ವ್ಯಕ್ತಿ ಎಂದು ಬಿಜೆಪಿ ಹೇಳಿತ್ತು. ಆದರೆ ಅಭ್ಯರ್ಥಿ ಪಟ್ಟಿಯಲ್ಲಿರುವ ಮಣಿಕುಟ್ಟನ್ ಟಿಕೆಟ್ ನಿರಾಕರಿಸಿದ್ದಾನೆ.

    ಕೇಂದ್ರದ ನಾಯಕರು ನನ್ನನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಆದರೆ ನಾನು ಒಂದು ಉದ್ಯೋಗ ಪಡೆದು, ನನ್ನ ಕುಟುಂಬದೊಂದಿಗೆ ಇರಲು ಬಯಸುತ್ತೇನೆ. ಬಿಜೆಪಿ ನನಗೆ ನೀಡಿರುವ ಅವಕಾಶವನ್ನು ನಾನು ಸಂತೋಷದಿಂದ ನಿರಾಕರಿಸುತ್ತೇನೆ ಎಂದು ಮಣಿಕುಟ್ಟನ್ ಹೇಳಿದ್ದಾನೆ.

    ನಾನು ಸಾಮಾನ್ಯ ಪ್ರಜೆಯಾಗಿದ್ದು, ನನಗೆ ಟಿಕೆಟ್ ಘೋಷಣೆ ಮಾಡಿರುವುದು ಅಚ್ಚರಿಯಾಗಿದೆ. ನನಗೆ ಬಿಜೆಪಿ ಅಭ್ಯರ್ಥಿಯಾಗುವುದು ಇಷ್ಟವಿಲ್ಲ. ಆದರೆ ನಮ್ಮ ಸಮುದಾಯದಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ತುಂಬಾ ಸಂತೋಷವಾಗಿದೆ. ಈಗಾಗಲೇ ನಾಯಕರಿಗೆ ಫೋನ್ ಮೂಲಕ ಈ ಕುರಿತಾಗಿ ಹೇಳಿದ್ದೇನೆ ಎಂದು ಯುವಕ ಸ್ಪಷ್ಟಪಡಿಸಿದ್ದಾರೆ.

  • ಮೈ ಆಟೋಗ್ರಾಫ್ ಸಿನಿಮಾದ ಲತಿಕಾ ಮನೆಗೆ ಭೇಟಿಕೊಟ್ಟ ಸುದೀಪ್

    ಮೈ ಆಟೋಗ್ರಾಫ್ ಸಿನಿಮಾದ ಲತಿಕಾ ಮನೆಗೆ ಭೇಟಿಕೊಟ್ಟ ಸುದೀಪ್

    ಬೆಂಗಳೂರು: ಕಿಚ್ಚ ಸುದೀಪ್ ಮೈ ಆಟೋಗ್ರಾಫ್ ಸಿನಿಮಾದಲ್ಲಿರುವ ಕೇರಳದ ಲತಿಕಾ ಮನೆಗೆ ಭೇಟಿ ನೀಡಿ ತಮ್ಮ ಅಂದಿನ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ವಿಡೀಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಸಿನಿಮಾ ಚಿತ್ರೀಕರಣಕ್ಕೆ ಕೇರಳಕ್ಕೆ ಹೋಗಿರುವ ಸುದೀಪ್ ಶೂಟಿಂಗ್‍ನ ಬಿಡುವಿನ ವೇಳೆಯಲ್ಲಿ 15 ವರ್ಷದ ಹಿಂದಿನ ನೆನಪಿನ ಮನೆಗೆ ಭೇಟಿಕೊಟ್ಟಿದ್ದಾರೆ. ಆಟೋಗ್ರಾಫ್ ಸಿನಿಮಾದ ಚಿತ್ರೀಕರಣದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸುಮಾರು 15 ವರ್ಷಗಳ ಹಿಂದಿನ ಕಥೆಯನ್ನು ಮೆಲುಕು ಹಾಕಿದ್ದಾರೆ.

    ಆಟೋಗ್ರಾಫ್ ನನ್ ಲಕ್ಕಿ ಚಾಮ್ ಸಿನಿಮಾ. 15 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬರುತ್ತಿದ್ದೇನೆ. ಈ ಮನೆಯಲ್ಲಿ ಮರೆಯಲಾರದ ತುಂಬಾ ನೆನಪುಗಳಿವೆ ಎನ್ನುತ್ತಾ ಪ್ರತಿಯೊಂದು ದೃಶ್ಯ ತೆಗೆದಿರುವ ಸ್ಥಳವನ್ನು ಒಂದೊಂದಾಗಿ ಪರಿಚಯ ಮಾಡಿಸುತ್ತಾ ಮನೆಯ ಒಳಗೆ ಓಡಾಡಿದ್ದಾರೆ. ಕೆಲವಷ್ಟು ನೆನಪುಗಳನ್ನು ಯಾವತ್ತು ಮರೆಯಲು ಸಾಧ್ಯವಿಲ್ಲ. ಅವುಗಳಲ್ಲಿ ಮೈ ಆಟೋಗ್ರಾಫ್ ಸಿನಿಮಾ ಕೂಡ ಒಂದಾಗಿದೆ ಎಂದು ಈ ವಿಡಿಯೋ ತುಣುಕಿನಲ್ಲಿ ಹೇಳಿದ್ದಾರೆ. ಈ ವಿಡಿಯೋಗೆ ಸವಿಸವಿ ನೆನಪು ಎಂಬ ಹಾಡನ್ನು ಹಾಕಿಕೊಂಡಿದ್ದಾರೆ. ಆಟೊಗ್ರಾಫ್ ಸಿನಿಮಾದ ಸವಿ ಸವಿಯಾದ ನೆನಪುಗಳನ್ನು ಹಂಚಿಕೊಂಡಿರುವ ಸುದೀಪ್ ಅವರ ಇನ್‍ಸ್ಟಾಗ್ರಾಮ್ ಖಾತೆಯಲ್ಲಿರುವ ವಿಡಿಯೋ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಸುದೀಪ್ ಅವರು ಮೈ ಆಟೋಗ್ರಾಫ್ ಸಿನಿಮಾ ತೆರೆಕಂಡು 15 ವರ್ಷಗಳು ಕಳೆದಿವೆ. ಆದರೆ ಸುದೀಪ್ 15 ವರ್ಷದ ಹಿಂದಿನ ನೆನಪನ್ನು ಮತ್ತು ಅಂದಿನ ದಿನಗಳನ್ನು ಮೆಲುಕು ಹಾಕಿ ಹಿಂದಿನ ದಿನವನ್ನು ನೆನೆದು ಖುಷಿಯಾಗಿದ್ದಾರೆ.

    ಕಿಚ್ಚ ಸುದೀಪ್ ಸದ್ಯ ಅನುಪ್ ಭಂಡಾರಿ ಅವರ ನಿರ್ದೇಶನದ ಫ್ಯಾಂಟಮ್ ಸಿನಿಮಾದಲ್ಲಿ ಶೂಟಿಂಗ್‍ನಲ್ಲಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ ಸಿನಿಮಾದ ಕೊನೆಯ ಹಂತದ ಚಿತ್ರೀಕರಣವನ್ನು ಕೇರಳದಲ್ಲಿ ಮಾಡುತ್ತಿದೆ.

     

    View this post on Instagram

     

    A post shared by KicchaSudeepa (@kichchasudeepa)

  • ತಂದೆ, ಚಿಕ್ಕಪ್ಪ ಸೇರಿ ಮಗಳ ಪತಿಯನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು!

    ತಂದೆ, ಚಿಕ್ಕಪ್ಪ ಸೇರಿ ಮಗಳ ಪತಿಯನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು!

    – ಮಗಳ ಮದುವೆಗೆ ವಿರೋಧ

    ತಿರುವನಂಪುರಂ: ಅಪ್ಪ ಮತ್ತು ಚಿಕ್ಕಪ್ಪ ಸೇರಿ ಮಗಳ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಕೇರಳದ ಪಾಲಕ್ಕಾಡ್‍ನಲ್ಲಿ ನಡೆದಿದೆ.

    ಮೃತನನ್ನು ಅನೀಶ್(27) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕ ಪತ್ನಿಯ ಅಪ್ಪ ಮತ್ತು ಚಿಕ್ಕಪ್ಪನಿಂದ ಹಲ್ಲೆ ಗೊಳಗಾಗಿ ಸಾವನ್ನಪ್ಪಿದ್ದಾನೆ.

    ಅನೀಶ್‍ನನ್ನು ಪತ್ನಿ ತಂದೆ ಹಾಗೂ ಚಿಕ್ಕಪ್ಪ ಸೇರಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅನೀಶ್‍ನನ್ನು ಕೊಂದ ಆರೋಪದ ಮೇಲೆ, ಅನೀಶ್‍ನ ಪತ್ನಿಯ ತಂದೆ ಪ್ರಭುಕುಮಾರ್ ಮತ್ತು ಚಿಕ್ಕಪ್ಪ ಸುರೇಶ್‍ನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅನೀಶ್ ಮದುವೆಯಾಗಿರುವ ಹುಡುಗಿ ಶ್ರೀಮಂತ ಕುಟುಂಬಕ್ಕೆ ಸೇರಿದವಳು. ಇಬ್ಬರೂ ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು. ಆದರೆ ಹುಡುಗಿಯ ಪೋಷಕರು ಅವಳ ಮದುವೆಯನ್ನು ನಿರಂತರವಾಗಿ ವಿರೋಧಿಸುತ್ತಿದ್ದರು. ಈ ಕಾರಣದಿಂದಾಗಿ ಕಳೆದ ಹಲವು ದಿನಗಳಿಂದ ವಿವಾದ ನಡೆಯುತ್ತಿತ್ತು. ನಂತರ ಪೊಲೀಸರು ಬಂದು ಹುಡುಗಿಯ ಪೋಷಕರನ್ನು ಒಪ್ಪಿಸಿದ್ದರು. ಆದರೆ ಒಂದು ದಿನ ಅನೀಶ್ ಮನೆಯ ಹಿಂದೆ ಒಬ್ಬನೇ ಇದ್ದ ವೇಳೆ ಬಂದ ಪತ್ನಿಯ ಅಪ್ಪ ಮತ್ತು ಚಿಕ್ಕಪ್ಪ ಅಳಿಯನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

    ಘಟನೆಯಿಂದ ಗಾಯಗೊಂಡಿದ್ದ ಅನೀಶ್‍ನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅನೀಶ್ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈಗಾಗಲೇ ಅನೀಶ್ ಪತ್ನಿಯ ಚಿಕ್ಕಪ್ಪ ಮತ್ತು ಅಪ್ಪನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಕುರಿತಾಗಿ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

  • ಕೇರಳ ಪ್ರವಾಹ ಪರಿಹಾರ ನಿಧಿಗೆ ಕಾಂಗ್ರೆಸ್ ಶಾಸಕ ಹಾಗೂ ಸಂಸದರಿಂದ ಒಂದು ತಿಂಗಳ ಸಂಬಳ ದೇಣಿಗೆ

    ಕೇರಳ ಪ್ರವಾಹ ಪರಿಹಾರ ನಿಧಿಗೆ ಕಾಂಗ್ರೆಸ್ ಶಾಸಕ ಹಾಗೂ ಸಂಸದರಿಂದ ಒಂದು ತಿಂಗಳ ಸಂಬಳ ದೇಣಿಗೆ

    ನವದೆಹಲಿ: ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಒಂದು ತಿಂಗಳ ವೇತನವನ್ನು ಕೇರಳ ಪ್ರವಾಹ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.

    ಕಂಡು ಕೇಳರಿಯದ ಪ್ರವಾಹದಿಂದಾಗಿ ಕೇರಳ ತತ್ತರಿಸಿ ಹೋಗಿದ್ದು, ಬಹುತೇಕ ನಿವಾಸಿಗಳು ಸಂತ್ರಸ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಪ್ರವಾಹ ಪರಿಹಾರ ನಿಧಿಗೆ ದೇಣಿಗೆ ನೀಡಲು ಕಾಂಗ್ರೆಸ್ ಮುಂದಾಗಿದ್ದು, ತನ್ನೆಲ್ಲಾ ಶಾಸಕರು ಹಾಗೂ ಸಂಸದರ ಒಂದು ತಿಂಗಳ ವೇತನವನ್ನು ಪರಿಹಾರವಾಗಿ ನೀಡುವಂತೆ ಖುದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿದ್ದಾರೆ.

    ಕೇರಳ ಪ್ರವಾಹ ಕುರಿತು ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಾಮಾನ್ಯ ಸಭೆಯಲ್ಲಿ ಪಕ್ಷದ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿ ನಾಯಕರುಗಳು, ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಶಾಸಕಾಂಗ ನಾಯಕರುಗಳೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಈ ವೇಳೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿಯವರು, ಕೇಂದ್ರ ಸರ್ಕಾರ ಕೂಡಲೇ ಕೇರಳ ರಾಜ್ಯವನ್ನು ‘ರಾಷ್ಟ್ರೀಯ ವಿಪತ್ತು ರಾಜ್ಯ’ವೆಂದು ಘೋಷಿಸಲು ಆಗ್ರಹಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜಿವಾಲಾ, ಕೇರಳದ ಪ್ರವಾಹದಿಂದಾಗಿ ಇಲ್ಲಿಯವರೆಗೂ 180 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಸುಮಾರು 3 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಕೇರಳಕ್ಕೆ ಅಗತ್ಯ ನೆರವು ನೀಡಲು ಮುಂದಾಗಬೇಕು. ಮೋದಿ ಸರ್ಕಾರವು ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಧೋರಣೆಯನ್ನು ಮಾಡದೇ, ಕೇರಳ, ಕರ್ನಾಟಕ ಹಾಗೂ ಮತ್ತಿತರ ಪ್ರವಾಹ ಪೀಡಿತ ರಾಜ್ಯಗಳಿಗೆ ಅಗತ್ಯ ನೆರವು ನೀಡುವಂತೆ ಒತ್ತಾಯಿಸಿದ್ದಾರೆ.

    ಎಐಸಿಸಿ ಮೂಲಕ ಕೇರಳ ರಾಜ್ಯಕ್ಕೆ ಪರಿಹಾರ ನೀಡುವ ಸಲುವಾಗಿ ಎಲ್ಲಾ ಲೋಕಸಭೆ, ರಾಜ್ಯಸಭೆ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರುಗಳ ಒಂದು ತಿಂಗಳ ವೇತನ ನೀಡುವಂತೆ ಸೂಚಿಸಲಾಗಿದ್ದು, ಪಂಜಾಬ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಗಳು ಈಗಾಗಲೇ ಈಗಾಗಲೇ 10 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆಮಾಡಿದೆ ಎಂದು ತಿಳಿಸಿದ್ದಾರೆ.

    ಕೇರಳ ಹೊರತು ಪಡಿಸಿ ಕರ್ನಾಟಕದ ಕೆಲವು ಭಾಗಗಳಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ಕುರಿತು ಬೇಕಾಗುವ ಅಗತ್ಯ ನೆರವುಗಳನ್ನು ನೀಡಲು ರಾಜ್ಯ ನಾಯಕರುಗಳಿಗೆ ಸೂಚನೆ ನೀಡಲಾಗಿದೆ. ಕೇರಳ ರಾಜ್ಯಕ್ಕೆ ಪರಿಹಾರ ಸಾಮಾಗ್ರಿಗಳನ್ನು ಸಾಗಿಸುವ ಸಲುವಾಗಿ ಪಾಂಡಿಚೇರಿ ಹೊರತು ಪಡಿಸಿ ಕರ್ನಾಟಕ ಹಾಗೂ ತಮಿನಾಡು ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ವಿಶೇಷ ಪರಿಹಾರ ಸಮಿತಿಯನ್ನು ರಚಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv