Tag: ಕೇರಳ. ಮಳೆ

  • ವಯನಾಡಿನಲ್ಲಿ ಮಳೆ – ಕಬಿನಿ ಜಲಾಶಯಕ್ಕೆ 13,000 ಕ್ಯೂಸೆಕ್ ಒಳಹರಿವು

    ವಯನಾಡಿನಲ್ಲಿ ಮಳೆ – ಕಬಿನಿ ಜಲಾಶಯಕ್ಕೆ 13,000 ಕ್ಯೂಸೆಕ್ ಒಳಹರಿವು

    ಮೈಸೂರು: ಕೇರಳದ (Kerala) ವಯನಾಡಿನಲ್ಲಿ (Wayanad) ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಕಬಿನಿ  ಜಲಾಶಯಕ್ಕೆ (Kabini Reservoir) 13,000 ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ.

    ಹೆಚ್.ಡಿ ಕೋಟೆ (H D Kote) ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯವಿದು. 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಸದ್ಯ 63.52 ಅಡಿ ನೀರು ಸಂಗ್ರಹವಿದೆ. 19.52 ಟಿಎಂಸಿ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದಲ್ಲಿ ಈಗ 8.72 ಟಿಎಂಸಿ ನೀರಿದೆ. ಇದನ್ನೂ ಓದಿ: ಗಾಜಾದಲ್ಲಿ ಕದನವಿರಾಮ ಘೋಷಿಸಲು ಅಮೆರಿಕ ಪ್ರಸ್ತಾವನೆಗೆ ಹಮಾಸ್ ಒಪ್ಪಿಗೆ

    ವರ್ಷಕ್ಕೆ 2 ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಈ ಕಬಿನಿ ಜಲಾಶಯ. ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗೆ ನೀರನ್ನು ಇದೇ ಜಲಾಶಯದಿಂದ ಪೊರೈಸಲಾಗುತ್ತದೆ. ಇದನ್ನೂ ಓದಿ: ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಭಾನುವಾರದಿಂದ ಮುಂಗಾರು ಮಳೆ (Mansoon Rain) ಅಬ್ಬರಿಸುತ್ತಿರುವ ಹಿನ್ನೆಲೆ ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಇತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಭಾನುವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ಡ್ಯಾಂ ಭರ್ತಿಯಾಗುತ್ತದೆ ಎಂಬ ಆಶಾ ಭಾವನೆ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಕಲಬುರಗಿ ಗುತ್ತಿಗೆದಾರನಿಗೆ ಸರ್ಕಾರದ ವರ್ಕ್ ಆರ್ಡರ್ ಕೊಡಿಸುವುದಾಗಿ ಆಮಿಷ – 1.21 ಕೋಟಿ ವಂಚನೆ ಆರೋಪ

    ಇದೀಗ ಕೆಆರ್‌ಎಸ್ ಡ್ಯಾಂಗೆ 2,053 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಂಗಳವಾರಕ್ಕೆ ನೀರಿನ ಪ್ರಮಾಣವು 5,000 ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 89.35 ಅಡಿ ನೀರು ಇದೆ. ಇನ್ನೂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 15.555 ಟಿಎಂಸಿ ನೀರಿದೆ. ಹೊರ ಹರಿವಿನ ಪ್ರಮಾಣ 347 ಕ್ಯೂಸೆಕ್ ಇದೆ.

  • ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ತಿರುವನಂತಪುರ: ಕೇರಳದ ಈಶಾನ್ಯ ಭಾಗದಲ್ಲಿ ಮುಂಗಾರಿನ ಚುರುಕುಗೊಂಡಿದ್ದು, ನವೆಂಬರ್ 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳದ ಆರು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಇಡುಕ್ಕಿ ಮತ್ತು ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

    ಭಾನುವಾರ ಕೂಡ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಎಂಬ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಮುಂದುವರಿದರೆ ಇಡುಕ್ಕಿ ಜಲಾಶಯದ ಚೆರುಥೋನಿ ಅಣೆಕಟ್ಟಿನ ಶೆಟರ್‌ಗಳನ್ನು ಶನಿವಾರ ಅಥವಾ ಭಾನುವಾರ ತೆರೆಯಲಾಗುವುದು ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

    ಇಡುಕ್ಕಿ ಅಣೆಕಟ್ಟಿನ ಕೆಳಭಾಗ ಮತ್ತು ಪೆರಿಯಾರ್ ನದಿಯ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಅಕ್ಟೋಬರ್ 1ರಿಂದ 12ರವರೆಗೂ ಕೇರಳದಲ್ಲಿ ಶೇಕಡಾ 86 ರಷ್ಟು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವೆಬ್ ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮದುವೆಗೆ ಆಗಮಿಸಿದ ಅತಿಥಿಗಳಿಗೆ ಊಟದ ಬಿಲ್ ಕೇಳಿದ ವಧು