Tag: ಕೇರಳ

  • ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ತಿರುವನಂತಪುರಂ: ಕೇರಳದ ಕೊಟ್ಟಾಯಂ (Kottayam) ನರ್ಸಿಂಗ್‌ ಕಾಲೇಜಿನಲ್ಲಿ ಭಯಾನಕ ರ‍್ಯಾಗಿಂಗ್ (Ragging) ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಬಂಧಿಸಿದ ಬೆನ್ನಲ್ಲೇ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ಹೊರಬಿದ್ದಿದೆ.

    ಐವರು ಹಿರಿಯ ವಿದ್ಯಾರ್ಥಿಗಳು ತಮ್ಮ ಮೂವರು ಜೂನಿಯರ್‌ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಚಿತ್ರಹಿಂಸೆ ನೀಡಿದ್ದಾರೆ? ಅನ್ನೋದನ್ನ ಈ ವೀಡಿಯೋ ಬಹಿರಂಗಪಡಿಸಿದೆ. ಕಿರಿಯ ವಿದ್ಯಾರ್ಥಿಯನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ಮಾಡೋದಕ್ಕೂ ಮುನ್ನವೇ ಇನ್ನೂ ಬೇರೆ ರೀತಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಾಲ್ಕು ಗಿನ್ನಿಸ್ ದಾಖಲೆಗೆ ತಯಾರಿ

    ಹೌದು. ಮೊದಲು ಮೂವರು ಕಿರಿಯರಲ್ಲಿ ಓರ್ವನನ್ನ ಹಾಸಿಗೆ ಮೇಲೆ ಮಲಗಿಸಿದ್ದಾರೆ. ಕೈಕಾಲುಗಳನ್ನ ಹಾಸಿಗೆ ತುದಿಗೆ ಕಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಆತನ ತೊಡೆಯ ಭಾಗಕ್ಕೆ ಕಂಪಾಸ್‌ನಿಂದ ಚುಚ್ಚಿದ್ದಾನೆ. ಸಂತ್ರಸ್ತ ವಿದ್ಯಾರ್ಥಿ (Medical Student) ಚೀರಾಡಿದರೂ ಬಿಡದೇ ಅತನ ಮೈಮೇಲೆ ಬಿಳಿ ಲೋಷನ್‌ ಸುರಿದಿದ್ದಾರೆ. ಬಳಿಕ ಮರ್ಮಾಂಗಕ್ಕೆ ಡಂಬಲ್ಸ್‌ಗಳನ್ನ ನೇತುಹಾಕಿ, ಎದೆಯ ಭಾಗಕ್ಕೆ ಬಟ್ಟೆ ಕ್ಲಿಪ್‌ಗಳನ್ನ ಕಚ್ಚಿಸಿದ್ದಾರೆ. ಬಳಿಕ ಕ್ಲಿಪ್‌ ಹಿಡಿದು ಎಳೆದಾಡಿದ್ದಾರೆ. ವಿದ್ಯಾರ್ಥಿ ಕೂಗಿಕೊಂಡರೂ ಬಿಡದೇ ಆತನನ್ನ ಟಾರ್ಚರ್‌ ಮಾಡಿ, ಕೇಕೆ ಹಾಕಿದ್ದಾರೆ.  ಇದನ್ನೂ ಓದಿ: ಫೆ.15ರಂದು ಅಶ್ವಿನಿ ವೈಷ್ಣವ್ ರಾಜ್ಯ ಭೇಟಿ – ಕೇಂದ್ರ ಬಜೆಟ್ ಕುರಿತು ಸಂವಾದ

    ಈ ಸಂಬಂಧ ಅದೇ ಕಾಲೇಜಿನ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿದ ಪೊಲೀಸರು ಹಿರಿಯ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ರಾಹುಲ್ ರಾಜ್ (22), ಜೀವಾ (18), ರಿಜಿಲ್ ಜಿತ್ (20) ಮತ್ತು ವಿವೇಕ್ (21)ರನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ.

    ಈ ನಡುವೆ ಮದ್ಯ ಖರೀದಿಸಲು ಕಿರಿಯ ವಿದ್ಯಾರ್ಥಿಗಳಿಂದ ಹಣ ಕೇಳಿದ್ದಾರೆ, ಅವರು ನಿರಾಕರಿಸಿದ್ದಕ್ಕಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ಮತ್ತೊಬ್ಬ ವಿದ್ಯಾರ್ಥಿ ತನ್ನ ತಂದೆಯೊಂದಿಗೆ ಹೇಳಿಕೊಂಡ ನಂತರ ವಿಷಯ ಗೊತ್ತಾಗಿದೆ. ಬಳಿಕ ದೂರು ದಾಖಲಿಸಲು ಮಗನಿಗೆ ಪ್ರೋತ್ಸಾಹ ನೀಡಿದ್ದಾರೆ. ಇದನ್ನೂ ಓದಿ: ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

  • ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಂಡು ಕೇಳರಿಯದಂತಹ ಭಯಾನಕ ರ‍್ಯಾಗಿಂಗ್ (Ragging) ನಡೆದಿದೆ.

    ಇಲ್ಲಿನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ (Government Nursing College) ವ್ಯಾಸಂಗ ಮಾಡುತ್ತಿದ್ದ ಮೂವರು ಕಿರಿಯ ವಿದ್ಯಾರ್ಥಿಗಳನ್ನು ಮೂರನೇ ವರ್ಷದ ಸೀನಿಯರ್‌ ವಿದ್ಯಾರ್ಥಿಗಳು ಬೆತ್ತಲೆ ಮಾಡಿ, ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ನೀಡಿದ್ದಾರೆ.

    ಕಂಪಾಸ್‌ನಿಂದ ಇರಿದು ಕ್ರೂರವಾಗಿ ಥಳಿಸಿ ಬಾಯಿಗೆ ಲೋಷನ್ ತುಂಬಿ ಅಮಾನುಷವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಉಚಿತ ಯೋಜನೆಗಳಿಂದ ಜನ ಕಷ್ಟಪಟ್ಟು ಕೆಲಸ ಮಾಡ್ತಿಲ್ಲ – ಸುಪ್ರೀಂ ಅಸಮಾಧಾನ

    ನವೆಂಬರ್‌ನಿಂದ ನಿರಂತರವಾಗಿ ನಮ್ಮ ಮೇಲೆ ರ‍್ಯಾಗಿಂಗ್ ನಡೆಯುತ್ತಿದೆ. ಮದ್ಯಪಾನಕ್ಕಾಗಿ ಹಣ ಕಸಿಯುತ್ತಿದ್ದರು. ಹಣ ನೀಡದ್ದಕ್ಕೆ ಹೊಡೆಯಲು ಆರಂಭಿಸಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ರ‍್ಯಾಗಿಂಗ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪೊಲೀಸರು ಆರೋಪಿ ವಿದ್ಯಾರ್ಥಿಗಳಾದ ಸ್ಯಾಮುಯೆಲ್ ಜಾನ್ಸನ್, ಎನ್ ಎಸ್ ಜೀವಾ, ಕೆಪಿ ರಾಹುಲ್ ರಾಜ್, ರಿಜಿಲ್ ಜಿತ್, ವಿವೇಕ್‌ನನ್ನು ಬಂಧಿಸಿದ್ದಾರೆ.

     

  • ರಾಮನಗರ | ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ರಾಮನಗರ | ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ರಾಮನಗರ: ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು (Nursing Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ (Harohalli) ತಾಲೂಕಿನ ಪ್ರತಿಷ್ಠಿತ ದಯಾನಂದ ಸಾಗರ್ ಕಾಲೇಜಿನಲ್ಲಿ ನಡೆದಿದೆ.

    ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇದನ್ನೂ ಓದಿ: USA vs China Tax War | ಅಮೆರಿಕದ ಕಲ್ಲಿದ್ದಲು, ಗ್ಯಾಸ್‌ ಮೇಲೆ ತೆರಿಗೆ ವಿಧಿಸಿದ ಚೀನಾ

    ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಾಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್‌ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

  • ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

    ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

    ತಿರುವನಂತಪುರಂ: ಅಂಗನವಾಡಿಯಲ್ಲಿ (Anganwadi) ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ (Biriyani & Chicken Fry) ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ.

    ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಶಂಕು ಎಂಬ ಮಗು ಮುಗ್ಧ ರೀತಿಯಲ್ಲಿ ತನ್ನ ಅಂಗನವಾಡಿಯಲ್ಲಿ ರುಚಿಕರ ಊಟ ಬೇಕು ಎಂದು ಕೇಳಿ ಕೊಂಡಿದ್ದಾನೆ. ಜ.30 ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋವನ್ನು ಹರಿಬಿಡಲಾಗಿತ್ತು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿರುವ ವೀಡಿಯೋ ಕೊನೆಗೆ ಸಚಿವರ ಗಮನಕ್ಕೆ ಬಂದಿದೆ.

    ಕೇರಳದಲ್ಲಿ ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಪೋಷಣೆಗೆ ಪೂರಕವಾಗಿ ಊಟ ನೀಡಲಾಗುತ್ತಿದೆ. ಮೊಟ್ಟೆ ಮತ್ತು ಹಾಲನ್ನು ಸಹ ಸರ್ಕಾರ ನೀಡುತ್ತಿದೆ. ಮಕ್ಕಳು ಪೌಷ್ಟಿಕ ಆಹಾರದಿಂದ ಆರೋಗ್ಯದ ಪ್ರಯೋಜನ ಪಡೆಯಲು ಸಹಕಾರಿಯಾಗಿದೆ.

  • ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

    ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

    ತಿರುವನಂತಪುರಂ: ಕೇರಳಕ್ಕೆ (Kerala) ಹೆಚ್ಚಿನ ಅನುದಾನ ಬೇಕಿದ್ದರೆ ಹಿಂದುಳಿದ ರಾಜ್ಯವೆಂದು ಘೋಷಿಸಲಿ ಎಂದು ಕೇಂದ್ರ ಸಚಿವ ಜಾರ್ಜ್‌ ಕುರಿಯನ್‌ (George Kurian) ಹೇಳಿದ್ದಾರೆ.

    2022ರ ಬಜೆಟ್‌ನಲ್ಲಿ (Budget 2025) ಕೇಂದ್ರ ಸರ್ಕಾರ ಕೇರಳ ರಾಜ್ಯವನ್ನು ಕಡೆಗಣಿಸಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕುರಿಯನ್‌, ಕೇರಳ ರಾಜ್ಯವು ಕೇಂದ್ರದಿಂದ ಹೆಚ್ಚಿನ ಅನುದಾನ ಬಯಸಿದ್ರೆ, ಹಿಂದುಳಿದ ರಾಜ್ಯ ಎಂದು ಘೋಸಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ

    ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದೆ ಬಿದ್ದ ರಾಜ್ಯಗಳಿಗೆ ಕೇಂದ್ರವು ವಿಶೇಷ ಹಣಕಾಸಿನ ಪ್ಯಾಕೇಜ್‌ಗಳನ್ನ ಹಂಚುತ್ತದೆ. ಹಾಗಾಗಿ ನೀವು ಕೇರಳ ಹಿಂದುಳಿದಿದೆ. ರಸ್ತೆಗಳು ಸರಿಯಿಲ್ಲ, ಉತ್ತಮ ಶಿಕ್ಷಣವಿಲ್ಲ, ಮೌಲ ಸೌಕರ್ಯಗಳಲ್ಲಿ ಹಿಂದುಳಿದಿದೆ ಎಂದು ನೀವು ಘೋಷಿಸಿದ್ರೆ, ಹಣಕಾಸು ಆಯೋಗ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಬಳಿಕ ಹೆಚ್ಚಿನ ಅನುದಾನ ಸಿಗಲಿದೆ ಎಂದು ಹೇಳಿದ್ದಾರೆ.

    ಸಚಿವರ ಈ ಹೇಳಿಕೆ ತೀವ್ರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಯು ಕೇರಳ ವಿರೋಧಿ ನಿಲುವನ್ನು ತೋರಿಸುತ್ತದೆ ಎಂದು ರಾಜ್ಯದ ಆಡಳಿತ ಪಕ್ಷದ ನಾಯಕರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ 8ನೇ ಬಜೆಟ್‌ ಭಾಷಣ ಮಂಡಿಸಿದ ಬಳಿಕ ಕೇರಳ ಸಿಎಂ ಇದು ನಿರಾಶಾದಾಯಕ ಬಜೆಟ್‌. ಕಳೆದ ಜುಲೈನಲ್ಲಿ ಭೂಕುಸಿತ ಸಂಭವಿಸಿದ ವಯನಾಡನ್ನು ಮತ್ತೆ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡಿದ್ದೆವು. ಆದ್ರೆ ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಕಡೆಗಣಿಸಿದೆ ಎಂದು ಅಸಮಾಧಾನ ಹೊರಹಾಕಿದ್ದರು.

    ವಯನಾಡ್‌ ಭೂಕುಸಿತಕ್ಕೆ ಸಂಬಂಧಿಸಿದಂತೆ ಅನುದಾನ ಹಾಗೂ 24,000 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‌ ಸಹ ನೀಡುವಂತೆ ಕೋರಿದ್ದೆವು. ವಿಝಿಂಜಂ ಬಂದರಿನ ರಾಷ್ಟ್ರೀಯ ಪ್ರಾಮುಖ್ಯತೆ ಪರಿಗಣಿಸಿ, ಅದಕ್ಕೂ ಬೆಂಬಲವನ್ನು ಕೋರಿದ್ದೆವು. ಇದ್ಯಾವುದನ್ನು ಸರ್ಕಾರ ಪರಿಗಣಿಸಿಲ್ಲ. ಕೇರಳ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಮುಂದಿದೆ. ಆದ್ರೆ ಕೆಲವು ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಆ ಕ್ಷೇತ್ರಗಳ ಉನ್ನತೀಕರಣಕ್ಕಾಗಿ ಅನುದಾನ ಕೇಳಿದರೂ ಕಡೆಗಣಿಸಲಾಗಿದೆ ಎಂದು ಅಕ್ಷೇಪಿಸಿದ್ದರು.

  • ಚರ್ಚ್‌ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ

    ಚರ್ಚ್‌ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ

    ತಿರುವನಂತಪುರಂ: ಚರ್ಚ್‌ ಪಾದ್ರಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಥಲಯೋಲಪರಂಬುವಿನ ವಾರಿಕಂಕುನ್ನುವಿನ ಪ್ರಸಾದಗಿರಿ ಚರ್ಚ್‌ನಲ್ಲಿ ನಡೆದಿದೆ.

    ಪವಿತ್ರ ಬಲಿದಾನದ ಸಮಯದಲ್ಲಿ ಪಾದ್ರಿಯ ಮೇಲೆ ಹಲ್ಲೆ ನಡೆಸಲಾಗಿದೆ. ಎರ್ನಾಕುಲಂ-ಅಂಗಮಾಲಿ ಆರ್ಚ್‌ಡಯೋಸಿಸ್‌ನಲ್ಲಿರುವ ಚರ್ಚ್‌ನಲ್ಲಿ ಭಿನ್ನಮತೀಯ ಪಾದ್ರಿಯ ನೇತೃತ್ವದ ಗುಂಪೊಂದು ಈ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಫಾದರ್ ಜಾನ್ ತೊಟ್ಟುಪುರಂ ಗಾಯಗೊಂಡಿದ್ದಾರೆ.

    ಘರ್ಷಣೆಯಲ್ಲಿ ಹಲವರು ಗಾಯಗೊಂಡರು. ಘಟನೆಯ ನಂತರ, ಥಲಯೋಲಪರಂಬು ಪೊಲೀಸರು ಚರ್ಚ್‌ಗೆ ಬೀಗ ಹಾಕಿದ್ದಾರೆ.

    ಏಕೀಕೃತ ಪವಿತ್ರ ಬಲಿಪೂಜೆಯ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚ್‌ನಲ್ಲಿ ಈ ಘರ್ಷಣೆ ಆಗಿದೆ. ಪ್ರಸಾದಗಿರಿ ಚರ್ಚ್‌ನ ಉಸ್ತುವಾರಿ ವಹಿಸಿರುವ ಪಾದ್ರಿ ಫಾದರ್ ಜಾನ್ ತೊಟ್ಟುಪುರಂ ಅವರು ಪವಿತ್ರ ಬಲಿಪೂಜೆಯನ್ನು ಸಲ್ಲಿಸುತ್ತಿದ್ದಾಗ ಗುಂಪೊಂದು ಗಲಾಟೆ ಮಾಡಿತ್ತು.

  • Kerala |  ಕೌಟುಂಬಿಕ ನ್ಯಾಯಾಲಯದಾಚೆ ವಿವಾದ ಇತ್ಯರ್ಥಕ್ಕೆ ‘ಸಾಮರಸ್ಯ ತಾಣ’

    Kerala | ಕೌಟುಂಬಿಕ ನ್ಯಾಯಾಲಯದಾಚೆ ವಿವಾದ ಇತ್ಯರ್ಥಕ್ಕೆ ‘ಸಾಮರಸ್ಯ ತಾಣ’

    ತಿರುವಂತನಪುರಂ: ಕೌಟುಂಬಿಕ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸುವುದನ್ನು ಪ್ರೋತ್ಸಾಹಿಸುವುದಕ್ಕಾಗಿ ಕೇರಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಾಮರಸ್ಯ ತಾಣ ಎಂಬ ವಿಶಿಷ್ಟ ಯೋಜನೆ ಪ್ರಾರಂಭಿಸಿದೆ.

    ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಕೆಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಎ ಮುಹಮ್ಮದ್ ಮುಸ್ತಾಕ್ ಅವರು ಯೋಜನೆ ಉದ್ಘಾಟಿಸಿದರು.ಇದನ್ನೂ ಓದಿ: ಸಿಎಂ ಪತ್ನಿಗೆ ಇಡಿ ನೋಟಿಸ್ ರಾಜಕೀಯ ಅನ್ನೋಕ್ಕಾಗಲ್ಲ, ಉತ್ತರ ಕೊಡಲಿ – ಸತೀಶ್ ಜಾರಕಿಹೊಳಿ

    ದುಬಾರಿ ಮತ್ತು ಸಮಯ ಹಿಡಿಯುವ ವ್ಯಾಜ್ಯಗಳನ್ನು ತಪ್ಪಿಸುವ ಮೂಲಕ ಹಾಗೂ ಕಕ್ಷಿದಾರರ ನಡುವೆ ಸೌಹಾರ್ದಯುತವಾಗಿ ವ್ಯಾಜ್ಯಗಳನ್ನು ಬಗೆಹರಿಸುವ ಮೂಲಕ ನ್ಯಾಯಾಲಯಗಳ ಮೇಲಿನ ಪ್ರಕರಣದ ಬಾಕಿಯ ಹೊರೆಯನ್ನು ‘ಸಾಮರಸ್ಯ ತಾಣ’ ತಗ್ಗಿಸುವ ನಿರೀಕ್ಷೆಯಿದೆ. ಈ ಯೋಜನೆ ಆಪ್ತಸಮಾಲೋಚನೆ, ಮಧ್ಯಸ್ಥಿಕೆ ಸೇವೆ, ಕಾನೂನು ಮಾರ್ಗದರ್ಶನ ಅಥವಾ ಕಾನೂನು ನೆರವು, ಭಾವನಾತ್ಮಕ ಬೆಂಬಲ ಹಾಗೂ ಕ್ಷೇಮ ಕಾರ್ಯಕ್ರಮಗಳನ್ನು ಉಚಿತವಾಗಿ ನೀಡುತ್ತದೆ. ದಾವೆದಾರರು ಯೋಜನೆಯಡಿ ಸೇವೆ ಪಡೆಯಲು ರಾಜ್ಯದ ಹದಿನಾಲ್ಕು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಒಂದನ್ನು ಸಂಪರ್ಕಿಸಬಹುದು.

    ವಿವಾಹ ಸಂಬಂಧಗಳಷ್ಟೇ ಅಲ್ಲದೆ, ಸಹಜೀವನದಂತಹ ಮದುವೆಯ ಸ್ವರೂಪದಲ್ಲಿನ ಸಂಬಂಧಗಳು ಸಹ ಸಾಮರಸ್ಯ ತಾಣದ ವ್ಯಾಪ್ತಿಗೆ ಬರುತ್ತವೆ. ಪ್ರಕ್ರಿಯೆಯಲ್ಲಿ ಹಂಚಿಕೊಳ್ಳಲಾಗುವ ಎಲ್ಲಾ ಚರ್ಚೆ, ದಾಖಲೆಗಳು ಮತ್ತು ಮಾಹಿತಿ ಕಟ್ಟುನಿಟ್ಟಾಗಿ ಗೌಪ್ಯವಾಗಿರುತ್ತದೆ. ಒಂದೊಮ್ಮೆ ಜಾರಿಗೊಳಿಸಬೇಕಾದ ನಿಯಮವನ್ನು ರಾಜಿ ಒಪ್ಪಂದ ಹೊಂದಿದ್ದರೆ, ಅಂತಹ ಪ್ರಕರಣವನ್ನು ಲೋಕ್ ಅದಾಲತ್ ಮುಂದೆ ಮಂಡಿಸಬಹುದು. ನಂತರ ಅದು ಒಪ್ಪಂದದ ನಿಯಮಗಳ ಆಧಾರದ ಮೇಲೆ ತೀರ್ಪು ನೀಡಲಿದೆ.

    ಈ ಪ್ರಕ್ರಿಯೆ ರಾಜಿ ಸಂಧಾನವನ್ನು ಔಪಚಾರಿಕವಾಗಿ ಗುರುತಿಸಲು ಮತ್ತು ಕಾನೂನುಬದ್ಧವಾಗಿ ಹಿಡಿದಿಡಲು ಅನುಮತಿಸುತ್ತದೆ. ಇದು ದೀರ್ಘಾವಧಿಯ ದಾವೆಯ ಅಗತ್ಯವಿಲ್ಲದೆಯೇ ರಾಜಿ ಸಂಧಾನ ಪಾಲನೆ ಖಚಿತಪಡಿಸಿಕೊಳ್ಳಲು ಪಕ್ಷಕಾರರಿಗೆ ತ್ವರಿತ ಮತ್ತು ಹೆಚ್ಚು ದಕ್ಕಬಹುದಾದ ಮಾರ್ಗ ಕಲ್ಪಿಸುತ್ತದೆ.ಇದನ್ನೂ ಓದಿ: ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

  • ಮಂಗಳೂರು ಆಸ್ಪತ್ರೆಯಲ್ಲಿ ಸಾವು – ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಪುನರ್ಜನ್ಮ!

    ಮಂಗಳೂರು ಆಸ್ಪತ್ರೆಯಲ್ಲಿ ಸಾವು – ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಪುನರ್ಜನ್ಮ!

    – ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದ ಮಂಗಳೂರು ಆಸ್ಪತ್ರೆ
    – ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದ ಕುಟುಂಬಸ್ಥರು

    ತಿರುವನಂತಪುರಂ: ಚಿಕಿತ್ಸೆ ಫಲಿಸದೇ ಮಂಗಳೂರು (Mangaluru) ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳ (Kerala) ಆಸ್ಪತ್ರೆಯ ಶವಾಗಾರದಲ್ಲಿ (Mortuary) ಪುನರ್ಜನ್ಮ ಸಿಕ್ಕಿದೆ.

    ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಳ್ಳುವುದಾಗಿ ಕುಟುಂಬಕ್ಕೆ ಆಸ್ಪತ್ರೆ ತಿಳಿಸಿತ್ತು. ಸೋಮವಾರ ಸಂಜೆಯ ವೇಳೆ ಪವಿತ್ರನ್‌ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಘೋಷಿಸಿತ್ತು. ಇದನ್ನೂ ಓದಿ: ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

    ಸೋಮವಾರ ಸಂಜೆ 6:30 ರ ಸುಮಾರಿಗೆ ಅವರ ಶವವನ್ನು ಅಂಬುಲೆನ್ಸ್‌ (Ambulance) ಮೂಲಕ ಕಣ್ಣೂರಿಗೆ ಕಳುಹಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ರಾತ್ರಿ ಶವವವನ್ನು ಕಣ್ಣೂರಿನ ಎಕೆಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿ ಮಂಗಳವಾರ ಊರಿಗೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲು ಕುಟುಂಬ ನಿರ್ಧರಿಸಿತ್ತು.

    ರಾತ್ರಿ 11:30ರ ಹೊತ್ತಿಗೆ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಾಗ ಪವಿತ್ರನ್‌ ಕೈ ಅಲುಗಾಡುವನ್ನು ಕರ್ತವ್ಯದಲ್ಲಿದ್ದ ಅಟೆಂಡೆಂಟ್ ಜಯನ್ ಗಮನಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಯ ವೈದ್ಯಕೀಯ ತಂಡವು ದೇಹ ಪರೀಕ್ಷಿಸಿ ಪವಿತ್ರನ್ ಜೀವಂತವಾಗಿರುವುದನ್ನು ಎಂದು ದೃಢಪಡಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣವೇ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಈಗ ಚಿಕಿತ್ಸೆಗೆ ಪವಿತ್ರನ್‌ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ಅಟೆಂಡೆಂಟ್ ಜಯನ್ ಪ್ರತಿಕ್ರಿಯಿಸಿ, ಅಂಬುಲೆನ್ಸ್‌ನಿಂದ ದೇಹವನ್ನು ಇಳಿಸಿದಾಗ ಕೈ ಸ್ವಲ್ಪ ಚಲಿಸಿದನ್ನು ನೋಡಿದೆ. ನನಗೆ ಅನುಮಾನ ಬಂದ ವಿಚಾರವನ್ನು ನನ್ನ ಸಹೋದ್ಯೋಗಿ ಜೊತೆ ಹೇಳಿದೆ. ನಂತರ ಅವರ ಹೃದಯದ ನಾಡಿ ಮಿಡಿತ ಪರೀಕ್ಷೆ ಮಾಡಿದಾಗ ಅವರು ಜೀವಂತ ಇರುವುದು ದೃಢವಾಯಿತು ಎಂದು ತಿಳಿಸಿದರು.

    ಈಗ ಮಂಗಳೂರಿನ ಖಾಸಗಿ ಆಸ್ಪತ್ರೆ ಮಾಡಿದ ಸಾವಿನ ದೃಢೀಕರಣದ ಬಗ್ಗೆ ಹಲವು ಪ್ರಶ್ನೆಗಳು ಸೃಷ್ಟಿಯಾಗಿದೆ. ಪವಿತ್ರನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಬೆನ್ನಲ್ಲೇ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

     

  • 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

    ತಿರುವನಂತಪುರಂ: ಕಳೆದ 5 ವರ್ಷಗಳಲ್ಲಿ 64 ಜನರಿಂದ ತಾನು ಲೈಂಗಿಕ ಶೋಷಣೆಕ್ಕೆ ಒಳಗಾಗಿರುವುದಾಗಿ ದಲಿತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ (Child Welfare Committee) ತಿಳಿಸಿದ್ದಾಳೆ.

    ಬಾಲಕಿ ಮೂಲತಃ ಕೇರಳದವಳಾಗಿದ್ದು (Kerala), ಮಹಿಳಾ ಸಮಕ್ಯ ಎಂಬ ಎನ್‌ಜಿಒ ಸದಸ್ಯರು ತಮ್ಮ ನಿತ್ಯದ ಕ್ಷೇತ್ರ ಭೇಟಿಯ ಭಾಗವಾಗಿ ಬಾಲಕಿಯ ಮನೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಳಿಕ ಅವರು ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಿದ್ದಾರೆ. ಸಮಿತಿ ನಡೆಸಿದ ಕೌನ್ಸೆಲಿಂಗ್ ವೇಳೆಯಲ್ಲಿ ತನ್ನ 5 ವರ್ಷಗಳ ಕಾಲ ಅನುಭವಿಸಿದ ಕಷ್ಟವನ್ನು ಬಹಿರಂಗಪಡಿಸಿದ್ದಾಳೆ.ಇದನ್ನೂ ಓದಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಮೇಲೆ ಫೈರಿಂಗ್‌!

    ಬಾಲಕಿಯೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಕೌನ್ಸೆಲಿಂಗ್ ಅವಧಿಯಲ್ಲಿ, ಆಕೆ 13 ವರ್ಷದವಳಿದ್ದಾಗ ಮೊದಲ ಬಾರಿ ನೆರೆಹೊರೆಯವರು ಆಕೆಯ ಮೇಲೆ ಲೈಂಗಿಕ ಶೋಷಣೆ ಎಸಗಿದರು. ಜೊತೆಗೆ ಆ ವ್ಯಕ್ತಿ ಆಕೆಯೊಂದಿಗೆ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡಿದ್ದ. ಅಲ್ಲಿಂದ ಪ್ರಾರಂಭವಾಗಿ ಕಳೆದ 5 ವರ್ಷಗಳಿಂದ ತನ್ನ ಮೇಲೆ 64 ಜನರು ಲೈಂಗಿಕ ಶೋಷಣೆ ಎಸಗಿದ್ದಾರೆ. ಪ್ರಕರಣ ಕೂಡ ದಾಖಲಾಗಿದೆ ಎಂದು ತಿಳಿಸಿದ್ದಾಳೆ.

    ಶಾಲಾ ಸಮಯದಲ್ಲಿ ಕ್ರೀಡೆಯಲ್ಲಿ ಸಕ್ರಿಯವಾದ್ದೆ. ಆಗ ಕ್ರೀಡಾ ತರಬೇತಿ ಅವಧಿಯಲ್ಲಿ ಲೈಂಗಿಕ ಶೋಷಣೆಕ್ಕೆ ಒಳಗಾಗಿದ್ದೇನೆ. ಜೊತೆಗೆ ಆ ಸಮಯದಲ್ಲಿ ತನ್ನದೇ ಆದ ಕೆಲವು ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿತ್ತು. ಇದೆಲ್ಲವು ಆಕೆಯಲ್ಲಿ ಭಯವನ್ನು ಹೆಚ್ಚಿಸಿದ್ದವು ಎಂದು ಬಹಿರಂಗಪಡಿಸಿದ್ದಾಳೆ.

    ಬಾಲಕಿ ನೀಡಿದ ಹೇಳಿಕೆ ಆಧಾರದ ಮೇಲೆ ಮಕ್ಕಳ ಕಲ್ಯಾಣ ಸಮಿತಿಯವರು ಪತ್ತನಂತಿಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈವರೆಗೂ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕಿಯ ವಿವರವಾದ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ಎನ್.ರಾಜೀವ್ ಮಾತನಾಡಿ, ಬಾಲಕಿ 8ನೇ ತರಗತಿಯಲ್ಲಿದ್ದಾಗಿನಿಂದ ಸುಮಾರು ಐದು ವರ್ಷಗಳ ಕಾಲ ಶೋಷಣೆಕ್ಕೊಳಗಾಗಿದ್ದಳು. ಅವಳು ಕ್ರೀಡೆಯಲ್ಲಿ ಸಕ್ರಿಯಳಾಗಿದ್ದಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯೂ ಆಕೆ ಲೈಂಗಿಕ ಶೋಷಣೆಕ್ಕೆ ಒಳಗಾಗಿದ್ದಳು. ಪ್ರಕರಣ ಗಂಭೀರವಾಗಿದ್ದು, ಸಮಿತಿಯು ಬಾಲಕಿಗೆ ಅಗತ್ಯ ಆರೈಕೆ ಮತ್ತು ರಕ್ಷಣೆ ನೀಡಲಿದೆ ಎಂದು ತಿಳಿಸಿದರು.ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

  • ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ಸೀಜ್

    ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ಸೀಜ್

    ಬೆಂಗಳೂರು: ನಕಲಿ ಸಿಗರೇಟ್ (Fake Cigarettes) ಸರಬರಾಜು ಮಾಡುತ್ತಿದ್ದ ಕೇರಳ ಗ್ಯಾಂಗ್‌ವೊಂದನ್ನು (Kerala Gang) ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ.

    ಪ್ರತಿಷ್ಟಿತ ಲೈಟ್ಸ್ ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡುತ್ತಿದ್ದ ಮೂರು ಲಕ್ಷ ಸಿಗರೇಟ್‌ಗಳನ್ನು ಸೀಜ್ ಮಾಡಲಾಗಿದೆ. ಬಾಂಗ್ಲಾದೇಶ ಮೂಲಕ ನಕಲಿ ಸಿಗರೇಟ್ಸ್ ತಂದು ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

    ನಿಶಾಂತ್, ಶಕೀಲ್, ಶಬ್ಬೀರ್ ಬಂಧಿತ ಆರೋಪಿಗಳು. ಕೇರಳ ಮೂಲದ ಬಂಧಿತ ಆರೋಪಿ ಶಕೀಲ್ ನಕಲಿ ಸಿಗರೇಟ್ ಜಾಲದ ಕಿಂಗ್ ಪಿನ್ ಆಗಿದ್ದ. ಆರೋಪಿಗಳ ವಿರುದ್ಧ ಕುಮಾರಸ್ವಾಮಿ ಲೇಔಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.‌ ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಉಡುಗೊರೆಯಾಗಿ ಕೊಟ್ಟಿದ್ದ ಕಾರು ಸೀಜ್