ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ ‘ಕೈಮರ’ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನವೆಂಬರ್ 12, ಪ್ರಿಯಾಂಕ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ಕೈಮರ” ಚಿತ್ರತಂಡ ಪ್ರಿಯಾಂಕ ಉಪೇಂದ್ರ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬ ಶುಭಾಶಯ ತಿಳಿಸಿದೆ.
ವಿ.ಮತ್ತಿಯಳಗನ್ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್, ಮತ್ತಿಯಳಗನ್ ಮುಂತಾದವರು ನಟಿಸುತ್ತಿದ್ದಾರೆ. ಇದೊಂದು ಅಪರೂಪದ ತಾರಾಗಣವಾಗಿದ್ದು, ಅನುಭವಿ ಕಲಾವಿದರನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು. ಅಷ್ಟೂ ಕಲಾವಿದರಿಗೂ ವಿಶೇಷ ಪಾತ್ರವನ್ನು ನೀಡಿದ್ದು ವಿಶೇಷ. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ
‘ಕೈಮರ’ ಚಿತ್ರದ ಕಥೆಯನ್ನು ಪಿ. ವಿಮಲ್ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ.
Live Tv
[brid partner=56869869 player=32851 video=960834 autoplay=true]
ಗೌತಮ್ ವಿಮಲ್ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ (Priyanka Upendra), ಪ್ರಿಯಮಾಣಿ ಹಾಗೂ ಛಾಯಾಸಿಂಗ್ (Chhayasingh) ನಟನೆ. ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ ” ಕೈಮರ” (Kaimara) ಚಿತ್ರದ ಮುಹೂರ್ತ (Muhurta) ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.
ವಿಜಯ ದಶಮಿ ಶುಭದಿನದಂದು “ಕೈಮರ” ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ ಮಗ ಗೌತಮ್ ವಿಮಲ್ (Gautam Vimal) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತಿಯಳಗನ್ ಅವರು ನಿರ್ಮಾಣದೊಂದಿಗೆ ನಟನೆಯನ್ನು ಮಾಡುತ್ತಿದ್ದಾರೆ. ನಾನು ಈ ಹಿಂದೆ ಸಾಕಷ್ಟು ಹಾರಾರ್ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. “ಕೈಮರ” ಚಿತ್ರದಲ್ಲಿ ನಾನು ಈ ತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರಿಯಾಮಣಿ, ಛಾಯಾಸಿಂಗ್ ಅವರೊಟ್ಟಿಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ “ಕೆ.ಜಿ.ಎಫ್”, “ಕಾಂತಾರ ” ದಂತಹ ಡಿಫರೆಂಟ್ ಜಾನರ್ ನ ಚಿತ್ರಗಳು ಜನರ ಮೆಚ್ಚುಗೆ ಪಡೆಯುತ್ತಿದೆ. ನಮ್ಮ “ಕೈಮರ” ಚಿತ್ರದ ಕಥೆ ಸಹ ಡಿಫರೆಂಟ್ ಆಗಿದ್ದು, ನೋಡುಗರ ಮನ ಗೆಲ್ಲುವ ವಿಶ್ವಾಸವಿದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ತಿಳಿಸಿದರು.
ಇದೊಂದು ಹಾರಾರ್ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ ಸಹ. ಕಳೆದ ಮೂರುವರ್ಷಗಳಿಂದ “ಕೈಮರ” ಕುರಿತಾದ ಕೆಲಸಗಳು ನಡೆಯುತ್ತಿದ್ದವು. ಕೊರೋನ ಕಾರಣದಿಂದ ಚಿತ್ರೀಕರಣ ಆರಂಭವಾಗುವು ಸ್ವಲ್ಪ ತಡವಾಯಿತು. ಈಗ ದಸರಾದ ಶುಭದಿನದಲ್ಲಿ ಮುಹೂರ್ತ ನಡೆದಿದೆ. ಅಕ್ಟೋಬರ್ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶನ ಗೌತಮ್ ವಿಮಲ್. ಇದನ್ನೂ ಓದಿ:ರೂಪೇಶ್‌ಗೆ ಕೊನೆಯುಸಿರು ಇರುವವರೆಗೂ ಪ್ರೀತಿ ಮಾಡುತ್ತೀನಿ ಎಂದ ಸಾನ್ಯ
“ಕೈಮರ” ಚಿತ್ರ ಮಾಮೂಲಿ ಚಿತ್ರಗಳಿಗಿಂತ ಸ್ವಲ್ಪ ಭಿನ್ನವಾಗಿರಲಿದೆ. ನಿರ್ದೇಶಕ ಗೌತಮ್ ಈ ಚಿತ್ರ ಉತ್ತಮವಾಗಿ ಬರಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಪಿ. ವಿಮಲ್ ಕಥೆ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ. ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನಾನು ಹಾಗೂ ವಿನಯ್ ಗೌಡ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ. ಇದೇ ಹತ್ತನೇ ತಾರೀಖಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ. “ಕೈಮರ” 2023 ರ ಉತ್ತಮ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದು ನಿರ್ಮಾಪಕ ಹಾಗೂ ನಟ ವಿ.ಮತ್ತಿಯಳಗನ್ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]