Tag: ಕೈಲಾಶ್ ವಿಜಯವರ್ಗಿಯ

  • ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ

    ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ

    ಭೋಪಾಲ್‌: ಭಾರತವನ್ನು (India) ಹೊಗಳುವ ಎಲ್ಲರನ್ನೂ ಸಹೋದರರಂತೆ ಕಾಣುತ್ತೇವೆ. ಆದರೆ ರಾಷ್ಟ್ರದ ವಿರುದ್ಧ ಮಾತನಾಡುವವರ ಪ್ರಾಣ ತೆಗೆಯಲು ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿಯ (BJP) ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯ (Kailash Vijayvargiya) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬಂಗ್ರೋಟ್‌ನಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಯಾರ ವಿರೋಧಿಗಳಲ್ಲ, ಭಾರತ್ ಮಾತಾ ಕೀ ಜೈ (Bharat Mata ki Jai ) ಎಂದು ಹೇಳುವವರೆಲ್ಲರೂ ನಮ್ಮ ಸಹೋದರರು ಮತ್ತು ಅವರಿಗಾಗಿ ನಾವು ನಮ್ಮ ಪ್ರಾಣವನ್ನು ಕೊಡುತ್ತೇವೆ. ಆದರೆ ಭಾರತ ಮಾತೆಯ ವಿರುದ್ಧ ಮಾತನಾಡಿದರೆ ಅವರ ಪ್ರಾಣ ತೆಗೆಯಲು ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 2-3 ಸ್ಥಾನ ಅಲ್ಪಸಂಖ್ಯಾತರಿಗೆ ನೀಡಿ – ಕಾಂಗ್ರೆಸ್‌ಗೆ ಮುಖಂಡರ ಬೇಡಿಕೆ

    ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಯಾವಾಗ ಬರಲಿದೆ ಎಂಬ ಪ್ರಶ್ನೆಗಳನ್ನು ಕೇಳಿ ಬಿಜೆಪಿಯನ್ನು ವ್ಯಂಗ್ಯವಾಡುತ್ತಿತ್ತು. ಭಗವಾನ್ ರಾಮ ಕಾಲ್ಪನಿಕ ವ್ಯಕ್ತಿ ಎಂದು ವಾದಿಸುವವರೆಲ್ಲರೂ ತಮ್ಮ ಪಾಪವನ್ನು ತೊಳೆಯಲು ಜನವರಿಯಲ್ಲಿ ಅಯೋಧ್ಯೆಗೆ ಹೋಗಬೇಕು ಎಂದು ತಿರುಗೇಟು ನೀಡಿದರು.

    ಕಾಶ್ಮೀರದಲ್ಲಿ ಶಾಂತಿ ನೆಲೆಸಿದ ವಿಚಾರವನ್ನು ಪ್ರಸ್ತಾಪಿಸಿದ ವಿಜಯವರ್ಗಿಯಾ, ಈ ಹಿಂದೆ ಪ್ರಕ್ಷುಬ್ಧ ಪ್ರದೇಶದಲ್ಲಿ ಇದ್ದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಈಗ ಅಲ್ಲಿನ ಪ್ರತಿಯೊಂದು ಮನೆಯ ಮೇಲೂ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವನ್ನು ಶ್ಲಾಘಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

    ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

    ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

    ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

    ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

    2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

  • ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರ ಭಕ್ಷಕರಾಗುತ್ತಾರೆ – ಬಿಜೆಪಿ ಶಾಸಕ

    ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರ ಭಕ್ಷಕರಾಗುತ್ತಾರೆ – ಬಿಜೆಪಿ ಶಾಸಕ

    ಭೋಪಾಲ್: ಮಾಂಸ ತಿನ್ನುವ ಮಕ್ಕಳು ಮುಂದೆ ನರ ಭಕ್ಷಕರಾಗಿ ಬೆಳೆಯಬಹುದು ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಅಲ್ಲಿನ ವಿರೋಧ ಪಕ್ಷದ ನಾಯಕರೂ ಆಗಿರುವ ಗೋಪಾಲ್ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಜೊತೆಗೆ ಮೊಟ್ಟೆಗಳನ್ನು ನೀಡುವ ಸರ್ಕಾರದ ಚಿಂತನೆಯನ್ನು ಬಿಜೆಪಿಯ ಹಲವು ನಾಯಕರು ಟೀಕಿಸಿದ್ದಾರೆ. ಪಕ್ಷದ ನಾಯಕ ಕೈಲಾಶ್ ವಿಜಯವರ್ಗಿಯ ಅವರು ಬುಧವಾರ ಈ ಕುರಿತು ವಿರೋಧ ವ್ಯಕ್ತಪಡಿಸಿದ ನಂತರ ಭಾರ್ಗವ ಅವರು ಈ ಹೇಳಿಕೆ ನೀಡಿದ್ದಾರೆ. ಮೊಟ್ಟೆ ನೀಡುವುದರಿಂದ ನಮ್ಮ ಧಾರ್ಮಿಕತೆಗೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದು ಟೀಕಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಭಾರ್ಗವ, ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೊಟ್ಟೆ ಮತ್ತು ಮಾಂಸ ತಿನ್ನುವಂತೆ ಮಕ್ಕಳನ್ನು ಒತ್ತಾಯಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ಈ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಬಹುದು, ಮಕ್ಕಳಿಗೆ ಮೊಟ್ಟೆಗಳನ್ನು ಕೊಡುತ್ತಾರೆ, ತಿನ್ನದವರಿಗೆ ಒತ್ತಾಯಿಸುತ್ತಾರೆ. ಮೊಟ್ಟೆಯನ್ನು ತಿನ್ನದವರಿಗೆ ಕೋಳಿ, ಮಟನ್ ಆಹಾರ ನೀಡುತ್ತಾರೆ. ನಮ್ಮ ಭಾರತೀಯ ಸಂಸ್ಕøತಿಯಲ್ಲಿ ಮಾಂಸಹಾರವನ್ನು ಅನುಮತಿಸುವುದಿಲ್ಲ. ಇದನ್ನು ಬಾಲ್ಯದಿಂದಲೇ ತಿಂದಿದ್ದರೆ ದೊಡ್ಡವರಾದ ಮೇಲೆ ನಾವು ನರಭಕ್ಷಕರಾಗುತ್ತಿದ್ದೆವೇನೋ ಗೊತ್ತಿಲ್ಲ. ಅಲ್ಲದೆ ನಮ್ಮ ಜಾತಿಯ ನಿಯಮದ ಪ್ರಕಾರ ಬೆಳ್ಳುಳ್ಳಿ ಹಾಗೂ ಈರುಳ್ಳಿ ತಿನ್ನುವುದನ್ನು ಸಹ ತ್ಯಜಿಸಿದ್ದೇನೆ ಎಂದು ಭಾರ್ಗವ ತಿಳಿಸಿದರು.

    ಅಂಗನವಾಡಿ ಮಕ್ಕಳಿಗೆ ಆಹಾರದ ಜೊತೆಗೆ ಮೊಟ್ಟೆಗಳನ್ನೂ ನೀಡುವ ಕುರಿತ ಆಲೋಚನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮಾರ್ತಿ ದೇವಿ ಮುಂದಿಟ್ಟಿದ್ದಾರೆ. ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ದೇವಿ ಹೇಳಿದ್ದಾರೆ.

    ಈ ಯೋಜನೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೊಟ್ಟೆ ನೀಡುವುದರಿಂದ ನಮ್ಮ ಧಾರ್ಮಿಕತೆಗೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದು ಶಾಸಕ ವಿಜಯವರ್ಗಿಯಾ ಟೀಕಿಸಿದರೆ, ರಾಮೇಶ್ವರ ಶರ್ಮಾ ಹಲವು ಮಕ್ಕಳು ಹಾಗೂ ಅವರ ತಾಯಂದಿರು ಮೊಟ್ಟೆಯನ್ನು ಇನ್ನೂ ಮುಟ್ಟಿಯೇ ಇಲ್ಲ ಎಂದು ತಿಳಿಸಿದ್ದಾರೆ.

    ಆದರೆ ಈ ಟೀಕೆಯನ್ನು ದೇವಿ ಅಲ್ಲಗಳೆದಿದ್ದು, ಬಿಜೆಪಿ ಪ್ರತಿಭಟನೆಗೆ ನಾವು ಹೆದರುವುದಿಲ್ಲ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿರುವ ಬ್ಲಾಕ್‍ಗಳಲ್ಲಿ ನಾವು ಮೊಟ್ಟೆ ವಿತರಿಸುತ್ತೇವೆ. ಮೊಟ್ಟೆಯಲ್ಲಿ ಅನೇಕ ಪೋಷಕಾಂಶಗಳಿವೆ. ನಾನು ಮೊಟ್ಟೆ ತಿನ್ನುವುದರಿಂದಲೇ ತುಂಬಾ ಆರೋಗ್ಯವಾಗಿದ್ದೇನೆ ಎಂದು ದೇವಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.