Tag: ಕೊಡಗು ಅರಣ್ಯ

  • ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಆನೆ ಮಾನವನ ಸಂಘರ್ಷಕ್ಕೆ ಮೀತಿಯೇ ಇಲ್ಲದಂತೆ ಆಗಿದೆ. ಆನೆಗಳ ಚಲನವಲನದ ಬಗ್ಗೆ ಎಚ್ಚರಿಕೆ ನೀಡಲು ಎಐ ಆಧಾರಿತ ಸೈರನ್ (AI Siren) ವ್ಯವಸ್ಥೆ ರೂಪಿಸಲಾಗಿದೆ.

    ಕೊಡಗು ಜಿಲ್ಲೆಯಲ್ಲಿ ದಿನ ಬೆಳಗಾದ್ರೆ ಸಾಕು ವನ್ಯಜೀವಿ (WildLife) ಕಾಡಾನೆಗಳ ಉಪಟಳ ಹೆಚ್ಚಾಗಿರುತ್ತದೆ. ಹೀಗಾಗಿ ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಕ್ರಮಕ್ಕೆ ಖಾಸಗಿ ಕಂಪನಿಯೊಂದು ಹಣಕಾಸು ಒದಗಿಸಿದ್ದು, ಸರ್ಕಾರೇತರ ಸಂಸ್ಥೆಯಿಂದ ಸೈರನ್ ವ್ಯವಸ್ಥೆ ಅಳವಡಿಸಲಾಗಿದೆ. ಕೊಡಗಿನ ವಿರಾಜಪೇಟೆಯಾದ್ಯಂತ (Virajapete) ವನ್ಯಜೀವಿಗಳ ಚಲನೆಯ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆಯನ್ನ ಸ್ನೇಹ ಸಂಸ್ಥೆ ಪ್ರಾಯೋಗಿಕವಾಗಿ ಆರಂಭಿಸಿದೆ.

    ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಬಡಗ, ಬನಂಗಾಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಘರ್ಷ ವಲಯಗಳಲ್ಲಿ 12 ಅಂತಹ ಸೈರನ್‌ಗಳನ್ನ ಸ್ಥಾಪಿಸುವ ಎನ್‌ಜಿಓ ಕೆಲಸ ಮಾಡಿದೆ. ಈ ಯೋಜನೆ ಪ್ರಸ್ತುತ ಪ್ರಾಯೋಗಿಕ ಹಂತದಲ್ಲಿದ್ದರೂ, ಸ್ವಯಂಚಾಲಿತ ಎಚ್ಚರಿಕೆ ವ್ಯವಸ್ಥೆಗಳನ್ನ ಪರಿಚಯಿಸುವ ಮೂಲಕ ಸ್ನೇಹ ಸಂಸ್ಥೆ ಕೆಲಸ ಮಾಡ್ತಿದೆ.

    ಈಗಾಗಲೇ ಈ ಗ್ರಾಮದಲ್ಲಿ ಆನೆ ಕಂದಕ ಸೋಲಾರ್ ವಿದ್ಯುತ್ ತಂತಿಬೇಲಿ ಅಳವಡಿಕೆ ಮಾಡಿದ್ರು ಕಾಡಾನೆಗಳ ಉಪಟಳ ಕಡಿಮೆ ಆಗಿರಲಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರು ಮನೆಯಿಂದ ಹೋರ ಬರಲು ಹಿಂದೆಟ್ಟು ಹಾಕುತ್ತಿದ್ರು. ಆದರೀಗ ಎಐ ಆಧಾರಿತ ಸೈರನ್ ಅಳವಡಿಕೆ ಮಾಡಿರುವುದರಿಂದ ಕಾಡಂಚಿನ ಜನರು ಓಡಾಟ ನಡೆಸುತ್ತಿದ್ದಾರೆ.

    ಎಐ ಸೈರನ್‌ ಹೇಗೆ ಕೆಲಸ ಮಾಡುತ್ತೆ?
    ಇನ್ನೂ ಎಐ ಆಧಾರಿತ ವ್ಯವಸ್ಥೆಯ ಮೂಲಕ, ಆನೆಯ ಚಲನೆಯನ್ನು ಪತ್ತೆಹಚ್ಚಲಾಗುತ್ತದೆ. ಅಲ್ಲದೇ, ಆನೆಯಿದ್ದ ಸ್ಥಳವನ್ನಾಧರಿಸಿ, ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ನಿವಾಸಿಗಳನ್ನ ಎಚ್ಚರಿಸಲು ಸೈರನ್ ಮೊಳಗುತ್ತದೆ. ಹೀಗಾಗಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರು, ಶಾಲಾ ಕಾಲೇಜು ಮಕ್ಕಳು ಯಾವುದೇ ಭಯ ಇಲ್ಲದೇ ಹೆಜ್ಜೆ ಹಾಕುತ್ತಿದ್ದಾರೆ. ನಿತ್ಯ ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡುಗಳು ಕಂಡು ಬರುತ್ತಿದ್ದ ಹಿನ್ನೆಲೆಯಲ್ಲಿ ಶಾಲೆಗಳಿಗೆ ತಮ್ಮ ಮಕ್ಕಳನ್ನ ಕಳಿಸಲು ಪೋಷಕರು ಹಿಂದೆಟ್ಟು ಹಾಕುತ್ತಿದ್ರು. ಇದೀಗ ಆನೆಗಳ ಚಲನವಲನದ ಬಗ್ಗೆ ಎಚ್ಚರಿಕೆ ನೀಡಲು ಎಐ ಆಧಾರಿತ ಸೈರನ್ ವ್ಯವಸ್ಥೆ ರೂಪಿಸಿರುವ ಹಿನ್ನಲೆಯಲ್ಲಿ ಕಳೆದ ಕೆಲ ದಿನಗಳಿಂದ ಸರ್ಕಾರಿ ಶಾಲೆಗಳತ್ತ ಮಕ್ಕಳು ಹೆಜ್ಜೆ ಹಾಕುತ್ತಿದ್ದಾರೆ.

    ಒಟ್ಟಿನಲ್ಲಿ ಆಧಾರಿತ ವ್ಯವಸ್ಥೆಯ ಮೂಲಕ, ಆನೆಯ ಚಲನೆಯನ್ನು ಪತ್ತೆಹಚ್ಚಲಾಗುತ್ತಿದೆ. ಆನೆಯಿದ್ದ ಸ್ಥಳವನ್ನ ಆಧರಿಸಿ, ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ನಿವಾಸಿಗಳನ್ನು ಎಚ್ಚರಿಸಲು ಸೈರನ್ ಮೊಳಗಲಿದೆ.

  • ಹುಲಿ ದಾಳಿಗೆ ಹಸು ಸಹಿತ ಹೊಟ್ಟೆಯಲ್ಲಿದ್ದ ಕರು ಬಲಿ – ಮುಂದುವರಿದ ವ್ಯಾಘ್ರನ ಅಟ್ಟಹಾಸ

    ಹುಲಿ ದಾಳಿಗೆ ಹಸು ಸಹಿತ ಹೊಟ್ಟೆಯಲ್ಲಿದ್ದ ಕರು ಬಲಿ – ಮುಂದುವರಿದ ವ್ಯಾಘ್ರನ ಅಟ್ಟಹಾಸ

    ಮಡಿಕೇರಿ: ಹುಲಿ ದಾಳಿಗೆ (Tiger Attack) ಬೀಡಾಡಿ ಗಬ್ಬದ ಹಸು ಹಾಗೂ ಹೊಟ್ಟೆಯೊಳಗಿದ್ದ ಕರುವೂ ಬಲಿಯಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajapet) ತಾಲ್ಲೂಕಿನ ಮಾಲ್ದಾರೆ ಸಮೀಪದ ಬಾಣಂಗಾಲದಲ್ಲಿ ನಡೆದಿದೆ.

    ಮಾಲ್ದಾರೆ ಗ್ರಾಪಂ ವ್ಯಾಪ್ತಿಯ ಬಾಡಗ ಬಾಣಂಗಾಲದ ಗುಡ್ಡಂಡ ಕಿಟ್ಟು ಎಂಬುವವರ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಗಬ್ಬದ ಬೀಡಾಡಿ ಹಸು ಹುಲಿ ದಾಳಿಗೆ ಸಾವನಪ್ಪಿದೆ. ಕಾರ್ಮಿಕರು ಕೆಲಸಕ್ಕೆ ತೆರಳಿದ ಸಂದರ್ಭ ಕಾಫಿ ತೋಟದ ಒಳಗೆ ಹಸುವಿನ ಕಳೇಬರ ಕಂಡುಬಂದಿದೆ. ಹಸುವಿನ (Cow) ಮೃತದೇಹದ ಅರ್ಧ ಭಾಗ ಹುಲಿಗೆ ಆಹಾರವಾಗಿದ್ದು, ಹೊಟ್ಟೆಯೊಳಗೆ ಇದ ಕರು ಹೊರಬಂದು ಸತ್ತು ಬಿದ್ದಿದೆ. ಸ್ಥಳಕ್ಕೆ ತಿತಿಮತಿ ವಲಯ ಚೆನ್ನಂಗಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ ಮತ್ತು ಆರ್‌ಆರ್‌ಟಿ ತಂಡದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಬಾಡಗ ಬಾಣಂಗಾಲದಲ್ಲಿ ಬೀಡಾಡಿ ಹಸುವಿನ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆ ಹಿಡಿಯುವ ಸಲುವಾಗಿ ವೀರಾಜಪೇಟೆ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಹಾಗೂ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಅವರ ನಿರ್ದೇಶನದ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಶಶಿ ನೇತೃತ್ವದಲ್ಲಿ ಸ್ಥಳದಲ್ಲಿ ಹುಲಿಯ ಚಲನವಲನಗಳನ್ನು ಕಂಡುಹಿಡಿಯಲು ಕೂಂಬಿಂಗ್ ನಡೆಸಲಾಗುತ್ತಿದೆ. ಹುಲಿಯ ಚಲನವಲನ ಪತ್ತೆಯಾದಲ್ಲಿ ಮೇಲಾಧಿಕಾರಿಗಳ ಆದೇಶದ ಮೇರೆಗೆ ಸ್ಥಳದಲ್ಲಿ ಬೋನು ಅಳವಡಿಸಿ ಹುಲಿ ಸೆರೆಗೆ ಮುಂದಾಗುವುದಾಗಿ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

    ಮುಂದುವರಿದ ವ್ಯಾಘ್ರನ ಅಟ್ಟಹಾಸ:
    ಕಳೆದ ಎರಡು ದಿನಗಳ ಹಿಂದೆ ಶ್ರೀಮಂಗಲದಲ್ಲಿ ಹುಲಿ ದಾಳಿಗೆ ಹಸು ಬಲಿಯಾದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಾಲ್ದಾರೆ ಗ್ರಾಪಂ ವ್ಯಾಪ್ತಿಯಲ್ಲಿ ಹುಲಿ ದಾಳಿ ನಡೆದಿರುವುದು ಸಾರ್ವಜನಿಕರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಕಾಡಾನೆ ಹಾವಳಿಯಿಂದ ತತ್ತರಿಸಿರುವ ಮಾಲ್ದಾರೆ ವ್ಯಾಪ್ತಿಯ ಕೃಷಿಕರು ಹಾಗೂ ಕಾರ್ಮಿಕರು ಇದೀಗ ಹುಲಿಯ ದಾಳಿಗೆ ಹೆದರಿ ಕೆಲಸಕ್ಕೆ ತೆರಳದೇ ಇರುವುದು ಕಂಡುಬರುತ್ತಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

    ಕಳೆದ ಎರಡು ವರ್ಷಗಳ ಹಿಂದೆಯೂ ಹುಲಿ ದಾಳಿಗೆ ಜನ ತತ್ತರಿಸಿದ್ದರು. ಜಾನುವಾರುಗಳನ್ನು ಕೊಲ್ಲುತ್ತಿದ್ದ ಹುಲಿಗಳು ಮನುಷ್ಯರನ್ನು ಕೊಂದಿದ್ದವು. ಆ ಬಳಿಕ ಹರಸಾಹಸ ಪಟ್ಟು ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಇದನ್ನೂ ಓದಿ: ಸಲ್ಮಾನ್‌ ಖಾನ್‌ಗೆ ಮತ್ತೆ ಬೆದರಿಕೆ – ಬಿಷ್ಣೋಯ್‌ ಜೊತೆಗಿನ ದ್ವೇಷ ಕೊನೆಗೊಳಿಸಲು 5 ಕೋಟಿಗೆ ಬೇಡಿಕೆ