Tag: ಕೊಡಗು ಆಸ್ಪತ್ರೆ

  • ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ – 2 ದಶಕಗಳಿಂದ ಬಗೆಹರಿಯದ ಸಮಸ್ಯೆ!

    ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ – 2 ದಶಕಗಳಿಂದ ಬಗೆಹರಿಯದ ಸಮಸ್ಯೆ!

    ಮಡಿಕೇರಿ: ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ.

    ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ (Kodagu Hospital) ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಜ.3) ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಇದನ್ನೂ ಓದಿ: ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಧುಗಿರಿ ಡಿವೈಎಸ್ಪಿ ಬಂಧನ

    ಬಗೆಹರಿಯದ ಸಮಸ್ಯೆ:
    ಕಳೆದ 2 ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮಗಳು ಕಾಡಾನೆ ಹಾವಳಿಯಿಂದ ನಲುಗಿಹೋಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಒಂದೆಡೆ ಜೀವ, ಮತ್ತೊಂದೆಡೆ ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ ತಮ್ಮ ನೆಲೆಯನ್ನಾಗಿಸಿಕೊಂಡಿವೆ. ಇವುಗಳನ್ನು ಅರಣ್ಯಕ್ಕೆ ಅಟ್ಟುವ ಸಾಕಷ್ಟು ಪ್ರಯತ್ನಗಳನ್ನು ಅರಣ್ಯ ಇಲಾಖೆ ನಡೆಸಿದೆ. ಆದರೂ ಕಾಡಾನೆಗಳು ಮರಳಿ ತೋಟಕ್ಕೆ ದಾಂಗುಡಿ ಇಡುತ್ತಿವೆ.

    ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಭೇಟಿ:
    ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: Kodagu | ವಿರಾಜಪೇಟೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ – ಜನರಲ್ಲಿ ಢವ ಢವ!

    ಅಲ್ಲದೇ ಜೀವ ಮತ್ತು ಬೆಳೆಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಸರ್ಕಾರದ ಮೂಲಕ ನಡೆಯುತ್ತಿದೆ. ಕೊಡಗು, ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಅವುಗಳಿಗೆ ಪುನರ್ವಸತಿ ಒದಗಿಸಬೇಕಾಗಿದೆ. ಇದಕ್ಕೆ ಅಗತ್ಯ ಜಾಗ ಗುರುತಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈಗಾಗಲೇ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು 2-3 ವರ್ಷಗಳಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಸಂಕೇತ್‌ ಹೇಳಿದ್ದಾರೆ.  ಇದನ್ನೂ ಓದಿ: ಕಲಬುರಗಿ | ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಬೈರತಿ ಸುರೇಶ್‌ಗೆ ಮನವಿ

  • ಹವಾಮಾನ ವೈಪರೀತ್ಯ – ಕೊಡಗಿನಲ್ಲಿ ವೈರಲ್ ಫೀವರ್, ಒಂದೇ ದಿನ 200 ರಿಂದ 300 ಜನರಿಗೆ ಚಿಕಿತ್ಸೆ

    ಹವಾಮಾನ ವೈಪರೀತ್ಯ – ಕೊಡಗಿನಲ್ಲಿ ವೈರಲ್ ಫೀವರ್, ಒಂದೇ ದಿನ 200 ರಿಂದ 300 ಜನರಿಗೆ ಚಿಕಿತ್ಸೆ

    ಮಡಿಕೇರಿ: ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ವಾರಕ್ಕೆ ನೂರಾರು ಜನರು ಮಕ್ಕಳು ಸಾಮೂಹಿಕವಾಗಿ ಅನಾರೋಗ್ಯಕ್ಕೀಡಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಆಗೋಮ್ಮೆ ಈಗೊಮ್ಮೆ ಮಳೆ, ಬಿಸಿಲು, ಚಳಿಯ ವಾತಾವರಣ ಬರುತ್ತಿರುವುದರಿಂದ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಸುಮಾರು 200 ರಿಂದ 300 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

    ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ನಲುಗಿದ ಕೊಡಗಿನ ಜನರಿಗೆ ಈ ವರ್ಷ ಇಡಿ ಹವಾಮಾನ ವೈಪರೀತ್ಯದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಶೀತ, ಕೆಮ್ಮು, ವೈರಲ್ ಫೀವರ್, ರಿಕೆಟ್ಸಿಯಲ್ ಫೀವರ್ ಹರಡುತ್ತಿದೆ. ಅಲ್ಲದೇ ನಿರಂತರವಾಗಿ ಬಿಸಿಲಿನ ಉಷ್ಣಾಂಶ ಹಾಗೂ ಗಾಳಿ, ಚಳಿ ಹೆಚ್ಚಾಗಿರುವುದರಿಂದ ಆಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಉಸಿರಾಟದ ಸಮಸ್ಯೆ ಕಾಡುತ್ತಿದೆ. ಮಕ್ಕಳು, ಮಧ್ಯ ವಯಸ್ಕರು ವೃದ್ಧರು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ದಿಢೀರ್‌ ಮಳೆ, ಬಿಸಿಲು ಬರುತ್ತಿರುವುದರಿಂದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಂತು ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಇದೆ ಅನ್ನೋ ಅತಂಕವೂ ಎದುರಾಗಿದೆ.

    ಕೊಡಗು ಜಿಲ್ಲೆಯಲ್ಲಿ ವಾತಾವರಣದಲ್ಲಿ ವೈಪರೀತ್ಯ ಆಗುತ್ತಲೇ ಇದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದರೇ ಸಂಜೆ ವೇಳೆಗೆ ದಿಢೀರ್ ಮಳೆ ಸುರಿಯುತ್ತೆ. ಈ ರೀತಿಯ ಭಾರಿ ಮಳೆಯ ಜೊತೆಗೆ ನಗರದಲ್ಲಿ ತಾಪಮಾನದ ಕುಸಿತವು ಜನರ ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ನೆಗಡಿಯಿಂದ ಶುರುವಾಗಿ ನಂತರ ಗಂಟಲು ಕೆರೆತ, ಕೆಮ್ಮು, ಕಫಾ, ಜ್ವರದಿಂದ ಬಳಲುವ ಜನರು ಆಸ್ಪತ್ರೆ ಹಾಗೂ ಕ್ಲಿನಿಕ್ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಕಟ್ಟಡ ದುರಂತ ಸ್ಥಳಕ್ಕೆ ಭೇಟಿ ಕೊಟ್ಟ ಸಿಎಂ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಕೊಡಗು ಐದು ತಾಲೂಕಿನಲ್ಲಿ ದಿನವೊಂದಕ್ಕೆ 200 ರಿಂದ 300 ಜನರು ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಅಕ್ಟೋಬರ್ ತಿಂಗಳಲ್ಲೇ ಸುಮಾರು 600 ರಿಂದ 700 ಜನರು ಚಿಕಿತ್ಸೆ ಪಡೆದು ಹೋಗಿದ್ದಾರೆ. ಅಷ್ಟೇ ಅಲ್ಲದೇ ಜನವರಿಯಿಂದ ಇಲ್ಲಿಯ ವರೆಗೂ… ಡೇಗ್ಯೂ ಜ್ವರ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಅರೋಗ್ಯ ಇಲಾಖೆ ಜಾಗೃತಿ ಕಾರ್ಯವನ್ನು ಮಾಡಲಾಗುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್

  • ಕೊಡಗು ಆಸ್ಪತ್ರೆ ಅಭಿವೃದ್ಧಿಯಾಗ್ತಿದೆ, ಅಭಿಯಾನ ಮಾಡೋದ್ರಲ್ಲಿ ಅರ್ಥವಿಲ್ಲ: ಸಾರಾ ಮಹೇಶ್

    ಕೊಡಗು ಆಸ್ಪತ್ರೆ ಅಭಿವೃದ್ಧಿಯಾಗ್ತಿದೆ, ಅಭಿಯಾನ ಮಾಡೋದ್ರಲ್ಲಿ ಅರ್ಥವಿಲ್ಲ: ಸಾರಾ ಮಹೇಶ್

    ಮೈಸೂರು: ಕೊಡಗು ಆಸ್ಪತ್ರೆ ಅಭಿವೃದ್ಧಿ ಆಗುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಪ್ರಚಾರದ ಹುಚ್ಚು ಇದೆ. ಹೀಗಾಗಿ ಅವರಿಗೆ ಇಷ್ಟ ಬಂದ ಹಾಗೇ ಮಾತನಾಡುತ್ತಿದ್ದಾರೆ. ಸಿಎಂ ಈಗಾಗಲೇ ಕೊಡಗು ಜಿಲ್ಲಾಸ್ಪತ್ರೆ ಅಭಿವೃದ್ಧಿಗೆ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಕೊಡಗು ಆಸ್ಪತ್ರೆ ಅಭಿಯಾನಕ್ಕೆ ಕೈಜೋಡಿಸಿದ ಕಿಚ್ಚ ಸುದೀಪ್

    ಸದ್ಯ ಕೊಡಗು ಆಸ್ಪತ್ರೆ ಅಭಿವೃದ್ಧಿ ಆಗುತ್ತಿದೆ. ಈ ಹಂತದಲ್ಲಿ ಅಭಿಯಾನ ಮಾಡುತ್ತಿದ್ದಾರೆ. ಮುಂದೆ ಆಸ್ಪತ್ರೆ ಚೆನ್ನಾಗಿ ಆದರೆ ನಮ್ಮ ಒತ್ತಡದಿಂದಲೇ ಕೆಲಸ ಆಯಿತು ಎಂದು ಹೇಳಿಕೊಳ್ಳುತ್ತಾರೆ ಎಂದರು. ಇದನ್ನು ಓದಿ:ಸಿಎಂ ಬಳಿ ನಟಿ ರಶ್ಮಿಕಾ, ಹರ್ಷಿಕಾ ಮನವಿ

    ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಜಿ.ಡಿ ದೇವೇಗೌಡ ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿ, ವಿಶ್ವನಾಥ್ ಅವರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಅಂಗೀಕಾರ ಆದ ಮೇಲೆ ಬದಲಾವಣೆ ಬಗ್ಗೆ ಮಾತನಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಆಗುವವರೆಗೂ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚ

    ನಿಖಿಲ್ ಜೆಡಿಎಸ್ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ಇಲ್ಲ. ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ. ನಿಖಿಲ್ ಅವರನ್ನು ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ಕೆಲವರು ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.