Tag: ಕೊತ್ತನೂರು

  • ಬೆಂಗ್ಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ

    ಬೆಂಗ್ಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ

    ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೊತ್ತನೂರು (Kottanuru) ಬಳಿಯ ಬೈರತಿ ಬಂಡೆ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ.

    ದೊಡ್ಡಗುಬ್ಬಿಯ ಶ್ರೀಧರ್ ಎಂಬುವವರಿಗೆ ಸೇರಿದ್ದ ಅಪಾರ್ಟ್ಮೆಂಟ್ ಇದಾಗಿದೆ. ಶುಕ್ರವಾರ (ಅ.3) ಸಂಜೆ ಕಟ್ಟಡ ಕಾರ್ಮಿಕರು ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಲ್ಲಿ ಕ್ಲೀನ್ ಮಾಡುತ್ತಿದ್ದಾಗ ಅಸ್ಥಿಪಂಜರ ಪತ್ತೆಯಾಗಿದೆ. ಸುಮಾರು 6-8 ತಿಂಗಳ ಹಿಂದೆ ಮೃತಪಟ್ಟಿರಬಹುದು ಎನ್ನಲಾಗಿದ್ದು, ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಥಿತಿಯಲ್ಲಿದೆ. ಹೀಗಾಗಿ ಮೇಲ್ನೋಟಕ್ಕೆ 35 ರಿಂದ 40 ವರ್ಷದ ಗಂಡಸಿನ ಅಸ್ಥಿಪಂಜರವಿರಬಹುದು ಎಂದು ಅಂದಾಜಿಸಲಾಗಿದೆ.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್ ಭರ್ಜರಿ ಬರ್ತ್ಡೇ ಪಾರ್ಟಿ

    ಈ ಕುರಿತು ಅಪಾರ್ಟ್ಮೆಂಟ್‌ನ ಸೆಕ್ಯುರಿಟಿ ಗಾರ್ಡ್ ಕೊತ್ತನೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಸ್ಥಿಪಂಜರವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.

    ಕೆಲವು ತಿಂಗಳುಗಳಿಂದ ಅಪಾರ್ಟ್ಮೆಂಟ್‌ನಲ್ಲಿ ನಿರ್ಮಾಣ ಹಂತದ ಕೆಲಸ ನಿಂತು ಹೋಗಿತ್ತು. ಕಳೆದ ಎರಡು ತಿಂಗಳಿಂದ ಮತ್ತೆ ಕೆಲಸ ಆರಂಭವಾಗಿದೆ. ಈ ವೇಳೆ ಕ್ಲೀನ್ ಮಾಡುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಇನ್ನೂ ಬಾಡಿ ಮೇಲೆ ಚೀಲ ಹಾಗೂ ಮಣ್ಣನ್ನ ಹಾಕಿ ಮುಚ್ಚಲಾಗಿತ್ತು. ಮಣ್ಣು ಹಾಗೂ ಚೀಲ ತೆಗೆದು ನೋಡಿದಾಗ ಅಸ್ಥಿಪಂಜರ ಇರುವುದು ಗೊತ್ತಾಗಿದೆ.

    ಇನ್ನೂ ಸ್ಥಳಕ್ಕೆ ಸೋಕೋ ಮತ್ತು ಎಫ್‌ಎಸ್‌ಎಲ್ (FSL) ತಜ್ಞರು ಭೇಟಿ ನೀಡಿ, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೊತ್ತನೂರು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ (UDR) ದಾಖಲಾಗಿದೆ. ಮೃತ ವ್ಯಕ್ತಿಯ ಗುರುತು, ವಿಳಾಸ ಹಾಗೂ ಇತರ ಮಾಹಿತಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

  • ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

    ಬೆಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ (Bengaluru) ಕೊತ್ತನೂರಿನ ಕೆ.ನಾರಾಯಣಪುರದಲ್ಲಿ (K Narayanapura) ನಡೆದಿದೆ.

    ಸುನೀಲ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.7ರಂದು ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಶವಂತಪುರ ನಿವಾಸಿಯಾಗಿದ್ದ ಸುನೀಲ್‌ಗೆ ಡ್ರಗ್ಸ್ ಜೊತೆಗೆ ಹುಡುಗಿಯರ ಶೋಕಿ ಕೂಡ ಇತ್ತು. ತನ್ನ ಚಟಕ್ಕಾಗಿ ಮನೆಯಲ್ಲಿಯೇ ಚಿನ್ನ, ಹಣ ಕಳ್ಳತನ ಮಾಡುತ್ತಿದ್ದ. ಇದನ್ನು ಮನೆಯವರು ಪ್ರಶ್ನಿಸಿದರೇ ಸಾಯೋದಾಗಿ ಹೇಳುತ್ತಿದ್ದ. ಇದನ್ನೂ ಓದಿ: Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ

    ನಂತರ ಮನೆಬಿಟ್ಟು ಕೊತ್ತನೂರು ಪಿಜಿ ಸೇರಿದ್ದ ಸುನೀಲ್, ಗ್ಯಾರೇಜ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಮಾ.7ರಂದು ರಾತ್ರಿ ಮಾಲೀಕನಿಗೆ ಸಾಯೋದಾಗಿ ಮೆಸೆಜ್ ಮಾಡಿದ್ದ. ಬಳಿಕ ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

  • ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದರೋಡೆಕೋರರು

    ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದರೋಡೆಕೋರರು

    ಬೆಂಗಳೂರು: ದರೋಡೆಕೋರರು ಶಿಕ್ಷಕರೊಬ್ಬರ ಮನೆಗೆ ನುಗ್ಗಿ, ಮನೆಯಲ್ಲಿದ್ದವರ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ.

    ಸೋಮವಾರ ರಾತ್ರಿ 8.30ರ ಸುಮಾರಿಗೆ 8 ರಿಂದ 10 ಜನ ದುಷ್ಕರ್ಮಿಗಳ ತಂಡ ಕೊತ್ತನೂರಿನ ಶಬರಿ ನಗರದಲ್ಲಿರೋ ಶಿಕ್ಷಕಿ ಅನಿತಾ ಅವರ ಮನೆಗೆ ನುಗ್ಗಿ, ಮನೆಯಲ್ಲಿದ್ದ ಮೂರು ಜನರ ಕೈಕಾಲುಗಳನ್ನ ಕಟ್ಟಿ ಮಾರಕಾಸ್ತ್ರಗಳಿಂದ ಹೆದರಿಸಿದ್ದಾರೆ. ಬಳಿಕ ತಮ್ಮ ಬಳಿ ಇದ್ದ ಚೂಪಾದ ಆಯುಧಗಳಿಂದ ಲಾಕರ್ ತೆಗೆದು ಲಕ್ಷಾಂತರ ರೂಪಾಯಿ ಮೌಲ್ಯದ 110 ಗ್ರಾಂ ಚಿನ್ನಾಭರಣ ಮತ್ತು ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

    ಬಳಿಕ ವಿಷಯ ತಿಳಿದು ಕೊತ್ತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ, ಆರೋಪಿಗಳಲ್ಲಿ ಕೆಲವರು ಹಿಂದಿ ಭಾಷೆಯಲ್ಲಿ ಮಾತನಾಡ್ತಿದ್ರು ಅನ್ನೋದು ಗೊತ್ತಾಗಿದೆ. ಉತ್ತರಭಾರತ ಮೂಲದ ಕೆಲವರು ಈ ಕೃತ್ಯದಲ್ಲಿ ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದೆ.

    ಈ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಪರಪುರಷರನ್ನ ನೋಡಬಾರದೆಂದು ಪತಿಯಿಂದ ಹಲ್ಲೆ – ಕಣ್ಣನ್ನೇ ಕಳೆದುಕೊಂಡ ಪತ್ನಿ

    ಪರಪುರಷರನ್ನ ನೋಡಬಾರದೆಂದು ಪತಿಯಿಂದ ಹಲ್ಲೆ – ಕಣ್ಣನ್ನೇ ಕಳೆದುಕೊಂಡ ಪತ್ನಿ

    ಬೆಂಗಳೂರು: ಪರ ಪುರುಷರನ್ನ ನೋಡಬಾರದೆಂದು ಪತಿಯೊಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದು ಆಕೆ ಈಗ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಕೊತ್ತನೂರಿನ ನಾಗೇನಹಳ್ಳಿಯ ನಿವಾಸಿಯಾದ ಒಡಿಶಾ ಮೂಲದ ಮುನ್ನಾ ತನ್ನ ಹೆಂಡತಿ ರಾಧಾ ಮೇಲೆ ಅನುಮಾನಗೊಂಡು ಆಕೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆ ವೇಳೆ ಪತ್ನಿ ಕಣ್ಣಿಗೆ ಪೆಟ್ಟು ಬಿದ್ದಿದ್ದು, ಈಗ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ. ರಾಧಾ ಅವರನ್ನ ಸದ್ಯಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

    ಮುನ್ನಾ-ರಾಧಾ ದಂಪತಿ 15 ದಿನಗಳ ಹಿಂದಷ್ಟೆ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಶೋಭಾ ಡೆವಲಪರ್ಸ್ ಕಂಪೆನಿಯಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಇದನ್ನೂ ಓದಿ: ಪರಪುರುಷರು ನೋಡದೇ ಇರಲು ಸುಂದರಿ ಪತ್ನಿಯ ತಲೆಯನ್ನೇ ಬೋಳಿಸಿದ ಪತಿರಾಯ!

  • 5000 ರೂ.ಗೆ ಓಕೆ ಆಗಿತ್ತು, 10 ಸಾವಿರ ಕೇಳಿದ್ದಕ್ಕೆ ಕೊಂದೆ ಬಿಟ್ಟ!

    ಬೆಂಗಳೂರು: ನಗರದ ಕೊತ್ತನೂರಿನ ತಿಮ್ಮೇಗೌಡ ಲೇಔಟ್‍ನಲ್ಲಿ ವಿದೇಶಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧವಾರ ಮಧ್ಯರಾತ್ರಿ ಗಂಟೆಗೆ ನಡೆದಿದೆ.

    ಹಿಮಾಚಲ ಪ್ರದೇಶದ ಮೂಲದ ಇಶಾನ್ ಕೊಲೆಗೈದ ಆರೋಪಿಯಾಗಿದ್ದು, ನಕಾಯಕಿ ಪ್ಲೋರೆನ್ಸ್ (25) ಕೊಲೆಯಾದ ಉಗಾಂಡ ಮೂಲದ ಮಹಿಳೆ.

    ಏನಿದು ಪ್ರಕರಣ?: ನಕಾಯಕಿ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಪ್ಲೋರೆನ್ಸ್ ನಗರದ ತಿಮ್ಮೇಗೌಡ ಲೇಔಟ್‍ನಲ್ಲಿ ವನಜಮ್ಮ ಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಇಶಾನ್ ಕೂಡ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ.

    ಇಶಾನ್ ಬುಧವಾರ ರಾತ್ರಿ ನಕಾಯಕಿ ಪ್ಲೋರೆನ್ಸ್‍ಳನ್ನು 5000 ರೂ. ಒಪ್ಪಂದ ಮಾಡಿಕೊಂಡು ಎಂಜಿ ರೋಡ್‍ನಿಂದ ಪಿಕ್ ಮಾಡಿದ್ದಾನೆ. ಒಪ್ಪಂದಂತೆ ಇಬ್ರೂ ಪ್ಲೋರೆನ್ಸ್ ವಾಸವಿದ್ದ ಮನೆಗೆ ಬಂದಿದ್ದಾರೆ. ಈ ವೇಳೆಯಲ್ಲಿ ನಕಾಯಕಿ 10 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಇಶಾನ್ ಹಣ ಕೊಡದೇ ಇದ್ದಾಗ ಚಾಕುವಿನಿಂದ ಅವನ ಹಲ್ಲೆ ನಡೆಸಿದ್ದಾಳೆ. ಒಬ್ಬರ ಮೇಲೆ ಒಬ್ಬರು ಹಲ್ಲೆಗೆ ಪ್ರತಿ ಹಲ್ಲೆ ನಡೆಸುವಾಗ ಗಾಬರಿಗೊಂಡ ಇಶಾನ್ ಅದೇ ಚಾಕುವಿನಿಂದ ಪ್ಲೋರೆನ್ಸ್ ಳನ್ನು ಕೊಲೆ ಮಾಡಿದ್ದಾನೆ.

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಇಶಾನ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂತ್ರಜ್ಞರು ಮತ್ತು ಶ್ವಾನದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ತನಿಖೆಗೆ ತೆರಳಿದ್ದ ಇನ್ಸ್ ಪೆಕ್ಟರ್ ಅಂಜನ್ ಕುಮಾರ್ ಮೇಲೆ ಉಗಾಂಡ ಮೂಲದ ಜನರು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.