ಕೊತ್ತಲವಾಡಿ (Kottavaldi) ಸಿನಿಮಾ ನಿರ್ಮಾಣ ಮಾಡುವ ಮೂಲಕ ಗಾಂಧಿನಗರಕ್ಕೆ ಪಾದಾರ್ಪಣೆ ಮಾಡಿದ್ದ ಯಶ್ (Yash) ತಾಯಿ ನಿರ್ಮಾಪಕಿ ಪುಷ್ಪ ಅರುಣ್‌ಕುಮಾರ್ (Pushpa Arunkumar) ಮತ್ತೊಂದು ಸಿನಿಮಾವನ್ನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ತಮ್ಮ ಮೊದಲ ಸಿನಿಮಾ ಕೊತ್ತಲವಾಡಿ ಕಳೆದ ಆಗಸ್ಟ್‌ನಲ್ಲಿ ತೆರೆಕಂಡಿತ್ತು. ಬಳಿಕ ಅನುಷ್ಕಾ ಶೆಟ್ಟಿ (Anushka Shetty) ನಟನೆಯ ಘಾಟಿ ತೆಲುಗು ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದ್ದರು.
ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್ ತಮ್ಮ ಕೊತ್ತಲವಾಡಿ ಸಿನಿಮಾ ರಿಲೀಸ್ ವೇಳೆ ಹಲವಾರು ಸಮಸ್ಯೆಗಳನ್ನ ಎದುರಿಸಿದ್ದರು. ಅಂದು ಎದುರಿಸಿದ ಸಮಸ್ಯೆಗಳೇ ಅವರು ಸಿನಿಮಾ ವಿತರಣೆ ಮಾಡಲು ಮುಂದಾಗುವಂತೆ ಮಾಡಿತ್ತು. ಇದೀಗ ಆ ಸಿನಿಮಾ ಹೇಳಿಕೊಳ್ಳುವ ಮಟ್ಟಿಗೆ ಯಶಸ್ಸು ಕಾಣದಿದ್ದರೂ ಛಲಬಿಡದೇ ಮತ್ತೊಂದು ಸಿನಿಮಾವನ್ನ ಅನೌನ್ಸ್ ಮಾಡಿದ್ದಾರೆ. ಅಂದಹಾಗೆ ಕೊತ್ತಲವಾಡಿ ಸಿನಿಮಾದ ನಿರ್ದೇಶಕರಾದ ಶ್ರೀರಾಜ್ ಜೊತೆ ಚಿತ್ರವನ್ನ ಮಾಡುವುದಾಗಿ ಮಾಹಿತಿ ಹೊರಬಿದ್ದಿದೆ. ಇದನ್ನೂಓದಿ: ವಿಯೆಟ್ನಾಂ ಬೀದಿಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಿವೇದಿತಾ –ರೀಲ್ಸ್ ರಾಣಿ ಕಂಬನಿಗೆ ಕಾರಣವೇನು?
ವಿಜಯ ದಶಮಿಯ ಹಬ್ಬದ ಶುಭ ದಿನದಂದು ಶುಭ ಸುದ್ದಿಯನ್ನ ಕೊಟ್ಟಿದ್ದಾರೆ ಯಶ್ ತಾಯಿ. ಮೊದಲ ಸಿನಿಮಾಗಿಂತಲೂ ವಿಭಿನ್ನವಾದ ಕಥೆಯನ್ನ ಈ ಬಾರಿ ನಿರ್ಮಾಣ ಮಾಡಲಿದ್ದಾರಂತೆ ಪುಷ್ಪಮ್ಮ. ಈ ಸಿನಿಮಾದ ಟೈಟಲ್ ಏನು? ಸಿನಿಮಾದ ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಬಗ್ಗೆ ಮಾಹಿತಿಯನ್ನ ಸದ್ಯದಲ್ಲೇ ಹಂಚಿಕೊಳ್ಳಲಿದ್ದಾರಂತೆ. ಇದನ್ನೂ ಓದಿ: ಕಾಂತಾರ ದೃಶ್ಯ ವೈಭೋಗ ಕಣ್ತುಂಬಿಕೊಂಡ ಪ್ರೇಕ್ಷಕರು ಹೇಳಿದ್ದೇನು?
ನಿರ್ಮಾಪಕಿ ಹಾಗೂ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ಇದೇ ಆಗಷ್ಟ್ 1ಕ್ಕೆ ತೆರೆಗೆ ಬರುತ್ತಿದೆ. ಈ ಸಿನಿಮಾದ ಟ್ರೈಲರ್ ಇಂದು ರಿಲೀಸ್ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ.
ಈ ಹಿಂದೆ ಯಶ್ ಅವರಿಗೆ ಸಿನಿಮಾ ತೋರಿಸಿದ್ದೀರಾ..? ಕೊತ್ತಲವಾಡಿ ಸಿನಿಮಾಗೆ ಯಶ್ ಸಪೋರ್ಟ್ ಮಾಡಲಿಲ್ಲವಾ ಎಂಬಿತ್ಯಾದಿ ಪ್ರಶ್ನೆಗಳಿಗೆ ಖಡಕ್ ಆಗಿಯೇ ಉತ್ತರಿಸಿದ್ದ ಪುಷ್ಪಲತಾ ಇಂದು ಮತ್ತಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ.
“ಯಶ್‌ಗೆ ಹೇಳದೇ ಏನು ಮಾಡಿಲ್ಲ ಅವನಿಗೂ ಗೊತ್ತು. ಯಶ್ 25ವರ್ಷ ಆದ್ಮೇಲೆ ರಾಕಿಂಗ್ ಸ್ಟಾರ್ ಅಂತಾ ಗೊತ್ತಾಗಿದ್ದು ನಿಮಗೆ. ಅದರ ಹಿಂದೆ ಅವನು ಪಟ್ಟ ಶ್ರಮ ಎಷ್ಟಿದೆ ಅಂತಾ ನಮಗೆ ಗೊತ್ತು. ಅವನೇ ಸಿನಿಮಾ ಪ್ರೊಡಕ್ಷನ್ ಮಾಡಲು ನಮಗೆ ಸ್ಫೂರ್ತಿ. ಮನೇಲಿರೋ ಬಾಸ್ (ಯಶ್) ಸಿನಿಮಾ ಮಾಡೋಕೆ ಸ್ಪೂರ್ತಿ” ಎಂದಿದ್ದಾರೆ. ಇನ್ನೂ ಮುಂದುವರೆದು “ಸಿನಿಮಾ ಜನಕ್ಕೆ ಇಷ್ಟ ಆಗಲಿ ಗೆಲ್ಲಲಿ ಆಗ ಅವನು ಖುಷಿ ಪಡ್ತಾನೆ, ಅವನು ಬಂದು ಸಿನಿಮಾ ನೋಡ್ತಾನೆ” ಎಂದಿದ್ದಾರೆ.
ಕೊತ್ತಲವಾಡಿ ಒಂದು ಹಳ್ಳಿಯಲ್ಲಿ ನಡೆಯುವ ಸಿನಿಮಾ. ಹಿಂದೆ ನನ್ನ ಮಗ ಯಶ್ ಕಿರಾತಕ ಸಿನಿಮಾ ಮಾಡಿದ್ದನ್ನ ಈಗಲೂ ನಮ್ಮೂರಿನ ಜನ ನೆನದುಕೊಳ್ತಾರೆ. ಆ ಬಗ್ಗೆ ಈಗಲೂ ಮಾತಾಡಿಕೊಳ್ತಾರೆ. ಹಾಗೆ ಈ ಕೊತ್ತಲವಾಡಿ ಸಿನಿಮಾ ಕೂಡಾ ಇಷ್ಟವಾಗಲಿದೆ ಎಂದಿದ್ದಾರೆ. ಈ ಸಿನಿಮಾದ ನಂತರ ನಟ ಶರಣ್ ಅವರಿಗೆ ಸಿನಿಮಾ ನಿರ್ಮಾಣ ಮಾಡಲು ಯೋಜನೆ ಹಾಕಿಕೊಂಡಿರುವ ಮಾಹಿತಿ ಹಂಚಿಕೊಂಡಿದ್ದಾರೆ.
ಕೊತ್ತಲವಾಡಿ ಸಿನಿಮಾದಲ್ಲಿ ಯಶ್ ಸರ್ಪ್ರೈಸ್ ಎಂಟ್ರಿಕೊಟ್ಟಿದ್ದಾರೆ. ಹೌದು, ಸಿನಿಮಾದಲ್ಲಿ ನಾಯಕಿ ಕಾವ್ಯ ಶೈವ ರಾಕಿಂಗ್‌ಸ್ಟಾರ್ ಯಶ್ ಅವರ ಅಪ್ಪಟ ಅಭಿಮಾನಿಯಾಗಿರುತ್ತಾರೆ. ಹೀಗಾಗಿ ಸಿನಿಮಾದಲ್ಲಿ ಯಶ್ ಅವ್ರ ಸಿನಿಮಾದ ದೃಶ್ಯ ಬಳಸಿಕೊಳ್ಳಲಾಗಿದೆ. ಇದು ನಿರ್ದೇಶಕ ಪ್ಲ್ಯಾನ್ ಎಂದು ಹೇಳಿದ್ದಾರೆ.
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) 5 ಹುಲಿಗಳ ಸಾವಿನ ಬಳಿಕ ಇದೀಗ ಜಿಲ್ಲೆಯ ಕೊತ್ತಲವಾಡಿ (Kothalavadi) ಸಮೀಪದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದ್ದು, ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ (Chamarajanagar) ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದ್ದು, ಅದರ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಶವ ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಬಿ.ಆರ್.ಟಿ ಅರಣ್ಯಾಧಿಕಾರಿಗಳಾದ ಸಿಸಿಎಫ್ ಹಿರಾಲಾಲ್, ಡಿಸಿಎಫ್ ಶ್ರೀಪತಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ
ಇದೀಗ ಅರಣ್ಯಾಧಿಕಾರಿಗಳು ಪ್ರಕರಣದ ಪತ್ತೆಗಾಗಿ ಬಂಡೀಪುರದಿಂದ ಶ್ವಾನ ದ್ರೋಣನನ್ನು ಕರೆತಂದಿದ್ದಾರೆ. ಜೊತೆಗೆ ಮೆಟಲ್ ಡಿಟೆಕ್ಟರ್ ಮೂಲಕವು ಪರಿಶೀಲನೆ ನಡೆಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಕೊತ್ತಲವಾಡಿ ಸಮೀಪದಲ್ಲಿ ಮೂರು ಹುಲಿಗಳು ಸಾವನ್ನಪ್ಪಿದ್ದವು. ಆಗ ಅಧಿಕಾರಿಗಳು ಸ್ವಾಭಾವಿಕವಾಗಿ ಸಾವನ್ನಪ್ಪಿರುವುದಾಗಿ ಮಾಹಿತಿ ಕೊಟ್ಟಿದ್ದರು. ಇದೀಗ ಗಣಿ ತ್ಯಾಜ್ಯದ ಮೇಲೆ ಚಿರತೆ ಸಾವನ್ನಪ್ಪಿದ್ದು, 2-3 ದಿನದ ಹಿಂದೆಯೇ ಮೃತಪಟ್ಟಿರುವುದಾಗಿ ಅನುಮಾನ ಉಂಟಾಗಿದೆ. ಸದ್ಯ ಅಧಿಕಾರಿಗಳು ಚಿರತೆ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಿಂದಿನಿಂದಲೂ ಕೂಡ ಈ ಭಾಗದಲ್ಲಿ ಚಿರತೆ ಓಡಾಟ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arunkumar) ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಸಿನಿಮಾದ ಟೀಸರ್ ಪ್ರೇಕ್ಷಕ ವಲಯದಿಂದ ಭರಪೂರ ಮೆಚ್ಚುಗೆ ಪಡೆದುಕೊಂಡಿದೆ. ಇದೀಗ ಚಿತ್ರತಂಡ ಕೊತ್ತಲವಾಡಿ ಟೈಟಲ್ ಟ್ರ್ಯಾಕ್ (Kothalavadi Title Track) ಅನಾವರಣ ಮಾಡಿದೆ.
ಪುಷ್ಪ ಅರುಣ್ ಕುಮಾರ್ ತಮ್ಮದೇ PA ಪ್ರೊಡಕ್ಷನ್ (PA Productions) ನಡಿ ಕೊತ್ತಲವಾಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಯುವ ಪ್ರತಿಭೆ ಶ್ರೀರಾಜ್ ಆಕ್ಷನ್ ಕಟ್ ಹೇಳಿದ್ದು, ಪೃಥ್ವಿ ಅಂಬರ್ (Pruthvi Ambaar) ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್
ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಇದನ್ನೂ ಓದಿ: ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ (Yash) ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arunkumar) ತಮ್ಮದೇ ಪಿಎ ಪ್ರೊಡಕ್ಷನ್ಸ್ ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ (Kothalavadi) ಎಂಬ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.
ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ಕೊತ್ತಲವಾಡಿ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ (Pruthvi Ambaar) ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ (Kavya Shaiva) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ ಮಾಡಿದ ಯಶ್
ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವ್ವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕೊತ್ತಲವಾಡಿ ಟೀಸರ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ: ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ
ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ (Yash) ಕೂಡ ಒಬ್ಬರು. ಅವರ ತಾಯಿ ತಮ್ಮದೇ ಪಿಎ ಪ್ರೊಡಕ್ಷನ್ಸ್ ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ‘ಕೊತ್ತಲವಾಡಿ’ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಯಶ್ ಪೋಷಕರು ಪುಷ್ಪ ಅರುಣ್ ಕುಮಾರ್ (Pushpa Arun Kumar), ಅರುಣ್ ಕುಮಾರ್, ನಟ ಪೃಥ್ವಿ ಅಂಬರ್, ನಟಿ ಕಾವ್ಯ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಭಾಗಿಯಾಗಿದ್ದರು. ನಟ ಶರಣ್ ಅತಿಥಿಯಾಗಿ ಆಗಮಿಸಿ ಟೀಸರ್ ಅನಾವರಣ ಮಾಡಿ ಶುಭಾಶಯ ಕೋರಿದರು. ಇದನ್ನೂ ಓದಿ:‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್
ಟೀಸರ್ ರಿಲೀಸ್ ಮಾಡಿದ ಶರಣ್ ಮಾತನಾಡಿ, ಒಂದು ಹೊಸ ಶುರುವಾತಿನ ವೈಬ್ ಇಲ್ಲಿ ಕಾಣಿಸುತ್ತಿದೆ. ನಮ್ಮ ಯಶಸ್ಸಿನ ಗುಟ್ಟಿಗೆ ಈ ಒಗ್ಗಟ್ಟೇ ಸಾಕ್ಷಿ. ಈ ಚಿತ್ರಕ್ಕೆ ಕೆಲಸ ಮಾಡಿರುವವರ ಮುಖದಲ್ಲಿ ಕುತೂಹಲ, ಪಾಸಿಟಿವ್ ಎನರ್ಜಿ, ಭಕ್ತಿ, ಆತ್ಮೀಯತೆ, ಪ್ರೀತಿ ಇದೆ. ಇಷ್ಟು ಸಾಕು ಒಂದು ಯಶಸ್ಸಿಗೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಿದ್ದಕ್ಕೆ ಅಮ್ಮನಿಗೆ ಧನ್ಯವಾದ. ಇಷ್ಟು ವರ್ಷದ ಕನಸು ಲೋಕಾರ್ಪಣೆ ಮಾಡುತ್ತಿರುವ ಖುಷಿ ಚಿತ್ರತಂಡದ ಮುಖದಲ್ಲಿ ಕಾಣಿಸುತ್ತದೆ. ಇಡೀ ತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.
ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಮಾತನಾಡಿ, ನಮ್ಮ ಕೆಲಸ ನೋಡಿ ಮಾತನಾಡಬೇಕು. ನಾವು ಮಾತನಾಡಬಾರದು. ಈ ಸಿನಿಮಾನಾ ನಾವು ನೋಡಲ್ಲ. ಯಶ್ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ಲ ಅಂದರೆ ಮಾಡಬೇಡಿ. ಎಲ್ಲ ನಿಮಗೆ ಕೊಡುತ್ತೇವೆ. ಆರ್ಟಿಸ್ಟ್ ಯಾರು ಬೇಕು. ಎಲ್ಲಾ ಸೆಲೆಕ್ಷನ್ ಅವರೇ ಮಾಡಿದ್ದಾರೆ. ನಮ್ಮ ಬ್ಯಾನರ್ ಯಾವುದು? ಎಲ್ಲವನ್ನೂ ಯಶ್‌ಗೆ ಉತ್ತರ ಕೊಡಬೇಕು. ಯಶ್‌ನಿಂದ ನಾವು ಏನು ಕಲಿತಿದ್ದೇವೆ ಎಂದರೆ ಸಿನಿಮಾ ಏನು ಕೇಳುತ್ತದೆಯೋ ಅದು ಕೊಡಬೇಕು. ಸಿನಿಮಾಗೆ ಮೋಸ ಮಾಡಬಾರದು ಎನ್ನುವುದು. 10 ರೂಪಾಯಿ ಜಾಸ್ತಿಯಾಗಲಿ. ಕ್ವಾಲಿಟಿ ಕೊಡಬೇಕು. ಕಥೆ ಮಾತನಾಡಬೇಕು. ಅದೇ ರೀತಿ ನೀವು ಮಾಡುತ್ತೇವೆ ಎಂದರೆ ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆ. ಆಡಿಯನ್ಸ್ ರಿಸಲ್ಟ್ಗೆ ನಾವು ಕಾಯುತ್ತೇವೆ ಎಂದು ಹೇಳಿದರು.
ನಟ ಪೃಥ್ವಿ ಅಂಬರ್ (Pruthvi Ambaar) ಮಾತನಾಡಿ, ರಾಜು ಸರ್ ನನಗೆ ಮೊದಲಿನಿಂದ ಪರಿಚಯ. ನನಗೆ ಅವರು ಹೇಳಿರುವ ಎರಡನೇ ಕಥೆ. ಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್ ಫುಲ್ ಸ್ಟ್ರಾಂಗ್ ಕ್ಯಾರೆಕ್ಟರ್ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್ ಯಾರು ಎಂದು ಗೊತ್ತಿರಲಿಲ್ಲ. ಪ್ರೊಡಕ್ಷನ್ ಹೌಸ್ ಮೀಟ್ ಮಾಡೋಣಾ ಎಂದು ರಾಜು ಸರ್ ಹೇಳುತ್ತಿದ್ದರು. ಪುಷ್ಪ ಮೇಡಂ ಹಾಸನದ ಮನೆಗೆ ಹೋದೆವು. ಮೀಟಿಂಗ್ ಮುಗಿಸಿ ಹೊರಟ ಬಳಿಕ ಮೇಡಂ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಮೇಡಂ ಬ್ರ‍್ಯಾಗ್ರೌಂಡ್ ಇಲ್ಲದವರ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನು ಬೇಕೋ ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ನಿರ್ದೇಶಕ ಶ್ರೀರಾಜ್ ಮಾತನಾಡಿ, ನನಗೆ ಮೊದಲ ಬಾರಿಗೆ ಅವಕಾಶ ಕೊಟ್ಟಿರುವುದಕ್ಕೆ ಅಪ್ಪಾಜಿ-ಅಮ್ಮನಿಗೆ ಧನ್ಯವಾದ. ಅಮ್ಮನಿಗೆ ಕಥೆ ಜಡ್ಟ್ ಮೆಂಟ್ ಚೆನ್ನಾಗಿ ಮಾತನಾಡುತ್ತಾರೆ. ಆಗ ನಾನು ಕಥೆ ಹೇಳಿದೆ ಅವರು ಇದು ವರ್ಕ್ ಆಗಲ್ಲ ಎಂದರು. ನಾನು ಸಿನಿಮಾ ಮಾಡುವುದು ನನಗೆ ನಿನಗೆ ಮಾತ್ರ ಗೊತ್ತಿರಬೇಕು. ಯಾರಿಗೂ ಗೊತ್ತಾಗಬಾರದು ಎಂದು ಹೇಳಿದರು. `ಕೊತ್ತಲವಾಡಿ’ ಒನ್ ಲೈನ್ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅದಕ್ಕೆ ಓಂಕಾರ ಹಾಕಿದರು. ಕಥೆ ಬರೆಯೋದಿಕ್ಕೆ ಎಂಟು ತಿಂಗಳು ಟೈಮ್ ತೆಗೆದುಕೊಂಡೆ. ಕಥೆ ಪೂರ್ತಿಯಾದಾಗ ಬಾ ಎಂದಿದ್ದರು. ಅಮ್ಮನಿಗೆ ಪೂರ್ತಿಯಾಗಿ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅಲ್ಲಿಂದ ಈ ಜರ್ನಿ ಶುರುವಾಯ್ತು ಎಂದರು.
‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ, ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಟೀಸರ್ ಹೈಲೆಟ್.
ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಎ ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.
ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.