Tag: ಕೊಪ್ಪ

  • ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

    ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

    – ಪ್ರೀತಿ ನಿರಾಕರಿಸಿದ್ದಕ್ಕೆ ದುಷ್ಕೃತ್ಯ ಶಂಕೆ, ಓರ್ವ ಯುವಕ ವಶಕ್ಕೆ

    ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.

    ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಿಂದ ಬಸರೀಕಟ್ಟೆ ಗ್ರಾಮಕ್ಕೆ ಹೋಗಿ ಬರುತ್ತಿದ್ದರು. ಮಂಗಳವಾರ (ಅ.28) ಅದೇ ರೀತಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಾಲ್ಕೈದು ಯುವಕರ ಗುಂಪು ದಾರಿಯಲ್ಲಿ ಕಾಯುತ್ತಾ ನಿಂತಿದ್ದರು. ಶಿಕ್ಷಕಿ ಬರುತ್ತಿದ್ದಂತೆ ಅವರ ಮೇಲೆ ಎರಗಿ ದೌರ್ಜನ್ಯ ಎಸಗಿದ್ದು, ಬಳಿಕ ಅಡಿಕೆ ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಕಿರುಚಿಕೊಳ್ಳುತ್ತಿದಂತೆ ಬಾಯಿಗೆ ಮಣ್ಣು ಹಾಕಿ ವಿಕೃತಿ ಮೆರೆದಿದ್ದಾರೆ. ಆದರೂ ಶಿಕ್ಷಕಿ ಕಿರುಚಿದ ಶಬ್ದ ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಬಂದಿದ್ದಾರೆ. ಜನರು ಬರುತ್ತಿದ್ದಂತೆ ಆರೋಪಿಗಳು ಕಬ್ಬಿಣ ರಾಡ್‌ನಿಂದ ಶಿಕ್ಷಕಿ ತಲೆಗೆ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಇದನ್ನೂ ಓದಿ: ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಅದೃಷ್ಟಾವಶಾತ್ ಸಾವಿನಿಂದ ಪಾರಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಕೂಡಲೇ ಶಿಕ್ಷಕಿಯನ್ನು ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ತನಿಖೆ ಕೈಗೆತ್ತಿಕೊಂಡ ಪೊಲೀಸರು ಸದ್ಯ ಬಾಳೆಹೊನ್ನೂರು ಮೂಲದ ಭವಿತ್ (24) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಯುವತಿ ಪ್ರೀತಿ ನಿರಾಕರಿಸಿ, ಎರಡು ತಿಂಗಳಿನಿಂದ ಆತನ ಮೊಬೈಲ್ ನಂಬರ್‌ನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ದುಷ್ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ: ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್‌

  • ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ (Koppa) ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.

    ಮೃತನನ್ನ 17 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್‌ ಗ್ರಾಮದ ನಿವಾಸಿ. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

     

    ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

    ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಓದಿನ ಒತ್ತಡ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ತಮ್ಮೂರಿನ ರಸ್ತೆಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

    ತಮ್ಮೂರಿನ ರಸ್ತೆಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

    ಚಿಕ್ಕಮಗಳೂರು: ತಮ್ಮ ಊರಿನ ರಸ್ತೆ ಮಳೆಯಿಂದಾಗಿ ತುಂಬಾ ಹಾಳಾಗಿದೆ. ಓಡಾಡಲು ಆಗುತ್ತಿಲ್ಲ. ಮಳೆಗಾಲದಲ್ಲಿ ನಮ್ಮ ಕಷ್ಟ ಹೇಳತೀರದು ಎಂದು 8ನೇ ತರಗತಿ ವಿದ್ಯಾರ್ಥಿನಿ ಪ್ರಧಾನಿ ಮೋದಿಗೆ (PM Modi) ಪತ್ರ ಬರೆದಿದ್ದಾಳೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ ಕೊಪ್ಪ (Koppa) ತಾಲೂಕಿನ ಮಲಗಾರು ಶಾಲೆಯಲ್ಲಿ ಓದುತ್ತಿರುವ ಲೋಕನಾಥಪುರ ಗ್ರಾಮದ 8ನೇ ತರಗತಿ ವಿದ್ಯಾರ್ಥಿನಿ ಸಿಂಧೂರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾಳೆ.ಇದನ್ನೂ ಓದಿ: ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ

    ಪತ್ರದಲ್ಲಿ, ನಮ್ಮ ಊರಿನಿಂದ ಶಾಲೆಗೆ 3-4 ಕಿ.ಮೀ ಇದೆ. ಆದರೆ, ರಸ್ತೆಯಲ್ಲಿನ ಗುಂಡಿ ಹಾಗೂ ಕೆಸರಿನಿಂದ ಶಾಲೆಗೆ ಹೋಗೋದಕ್ಕೆ ಆಗುತ್ತಿಲ್ಲ. ಮಳೆಗಾಲದಲ್ಲಿ ಮತ್ತಷ್ಟು ಸಮಸ್ಯೆಯಾಗುತ್ತದೆ. ವಾರದಲ್ಲಿ 2-3 ದಿನ ಶಾಲೆಗೆ ಹೋಗೋದಕ್ಕೂ ಆಗುವುದಿಲ್ಲ. ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ಸೇರಿದಂತೆ ಯಾವುದೇ ವಾಹನಗಳು ನಮ್ಮ ಹಳ್ಳಿಗೆ ಬರಲು ಆಗುವುದಿಲ್ಲ. ಈ ಬಗ್ಗೆ ಸ್ಥಳೀಯ ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲ. ಸ್ಥಳೀಯ ಆಡಳಿತ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮನಸ್ಸು ಮಾಡುತ್ತಿಲ್ಲ. ಅತಿ ಹೆಚ್ಚು ಮಳೆ ಬೀಳುವ ನಮ್ಮ ಭಾಗದಲ್ಲಿ ಮಳೆಗಾಲದ ಮೂರ್ನಾಲ್ಕು ತಿಂಗಳು ಭಾರೀ ಕಷ್ಟವಾಗುತ್ತಿದೆ. ಮಕ್ಕಳು-ಮಹಿಳೆಯರು ಓಡಾಡಲು ಹರಸಾಹಸಪಡಬೇಕಾಗಿದೆ. ಹಾಗಾಗಿ, ನಮ್ಮ ಊರಿನ ರಸ್ತೆ ಬಗ್ಗೆ ಗಮನ ಹರಿಸಿ ರಸ್ತೆ ದುರಸ್ತಿಗೆ ಸಹಕರಿಸಬೇಕಾಗಿ ಪತ್ರ ಬರೆದು ಮೋದಿ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾಳೆ.

    ನಾವು ಪ್ರತಿಯೊಂದಕ್ಕೂ ಇದೇ ರಸ್ತೆ ಅವಲಂಬಿಸಿದ್ದೇವೆ, ಬೇರೆ ರಸ್ತೆ ಇಲ್ಲ. ಮಹಿಳೆಯರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ರಸ್ತೆ ದುರಸ್ತಿ ಮಾಡಿಸಿಕೊಡಬೇಕೆಂದು ಕನ್ನಡ-ಇಂಗ್ಲಿಷ್ ಎರಡರಲ್ಲೂ ಪತ್ರ ಬರೆದು ವಿದ್ಯಾರ್ಥಿನಿ ಮನವಿ ಮಾಡಿಕೊಂಡಿದ್ದಾಳೆ.ಇದನ್ನೂ ಓದಿ: ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ

  • Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

    ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ – 9 ಕಾರ್ಮಿಕರು ನಾಪತ್ತೆ

    ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ

  • ಮಲೆನಾಡಲ್ಲಿ ಮಳೆ ನಿಂತ್ರೂ ನಿಲ್ಲದ ಅವಾಂತರ – 80 ವರ್ಷದ ಹಳೇ ಶಾಲಾ ಕಟ್ಟಡ ಕುಸಿತ

    ಮಲೆನಾಡಲ್ಲಿ ಮಳೆ ನಿಂತ್ರೂ ನಿಲ್ಲದ ಅವಾಂತರ – 80 ವರ್ಷದ ಹಳೇ ಶಾಲಾ ಕಟ್ಟಡ ಕುಸಿತ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, 80 ವರ್ಷದ ಹಳೆಯ ಶಾಲಾ ಕಟ್ಟಡವೊಂದು ಕುಸಿದಿದೆ.

    ಮಲೆನಾಡು ಭಾಗದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಧಾರಾಕಾರ ಮಳೆಯಾಗಿದ್ದು, ಇದೀಗ ಕೊಂಚ ಬಿಡುವು ನೀಡಿದೆ. ಆದರೆ ಮಳೆಯಿಂದಾಗುತ್ತಿರುವ ಅವಾಂತರಗಳು ನಿಲ್ಲುತ್ತಿಲ್ಲ. ಗುರುವಾರ ಬೀಸಿದ ಭಾರೀ ಗಾಳಿಯಿಂದಾಗಿ ಕೊಪ್ಪ (Koppa) ತಾಲೂಕಿನ ಶಾನುವಳ್ಳಿ ಗ್ರಾಮದ 80 ವರ್ಷಕ್ಕೂ ಹೆಚ್ಚು ಹಳೆಯದಾದ ಸರ್ಕಾರಿ ಶಾಲೆಯ ಕಟ್ಟಡ ಕುಸಿದಿದೆ.ಇದನ್ನೂ ಓದಿ: ದಿನ ಭವಿಷ್ಯ: 30-05-2025

    ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದ ಕಾರಣ ಕಳೆದ ಕೆಲ ವರ್ಷಗಳಿಂದ ಹಿಂದೆಯೇ ಇದನ್ನು ಮುಚ್ಚಲಾಗಿತ್ತು. ಮಳೆಯ ಅಬ್ಬರಕ್ಕೆ ನಲುಗಿ ಏಕಾಏಕಿ ಕುಸಿದು ಬಿದ್ದಿದೆ. ಅಧಿಕಾರಿಗಳು ಕ್ರಮವಹಿಸಿ ಶಾಲೆಯನ್ನು ಬೇರೆಡೆ ವರ್ಗಾಯಿಸಿರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

    ಮಲೆನಾಡು ಭಾಗದಲ್ಲಿ ಬುಧವಾರ (ಮೇ 28) ಮಧ್ಯಾಹ್ನದಿಂದ ಮಳೆ ಪ್ರಮಾಣ ಬಹುತೇಕ ಇಳಿಮುಖವಾಗಿದೆ. ಆದರೆ, ಬೀಸುತ್ತಿರುವ ಗಾಳಿಯಿಂದ ಅಲ್ಲಲ್ಲೇ ಸಣ್ಣ-ಪುಟ್ಟ ಅನಾಹುತಗಳು ಸಂಭವಿಸುತ್ತಿವೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 30-05-2025

  • ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ – ಮಂಡ್ಯದಲ್ಲಿ ಮುಸ್ಲಿಮರಿಂದ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ

    ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ – ಮಂಡ್ಯದಲ್ಲಿ ಮುಸ್ಲಿಮರಿಂದ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ

    ಮಂಡ್ಯ: ಪಾಪಿ ಪಾಕಿಸ್ತಾನ (Pakistan) ಸರ್ವನಾಶವಾಗಲಿ ಎಂದು ಮಂಡ್ಯ (Mandya) ಜಿಲ್ಲೆಯ ಮದ್ದೂರಿನ ಕೊಪ್ಪದಲ್ಲಿ ಪಾಕಿಸ್ತಾನದ ವಿರುದ್ಧ ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ.

    ಎಂಎಲ್‌ಸಿ ವಿವೇಕಾನಂದ ನೇತೃತ್ವದಲ್ಲಿ ಕೊಪ್ಪದಲ್ಲಿ ಮುಸ್ಲಿಮರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹಿಂದೂಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಮುರ್ದಾಬಾದ್, ಪಾಕಿಸ್ತಾನ ಸರ್ವನಾಶವಾಗಲಿ ಎಂದು ಘೋಷಣೆ ಕೂಗಿದರು. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ

    ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ. ನಾವೆಲ್ಲಾ ಹುಟ್ಟಿ ಬೆಳೆದಿರುವುದು ಭಾರತದಲ್ಲಿ. ಭಯೋತ್ಪಾದನೆ ಬೆಂಬಲಿಸುವ ಪಾಕ್‌ಗೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸುತ್ತಾರೆ. ಮೋದಿಯವರ ನಡೆಯನ್ನ ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡ್ಬೋದು: ಜಮೀರ್

  • ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಕೊಪ್ಪ (Koppa) ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ.

    ಮೃತನನ್ನ ವಿಘ್ನೇಶ್ (18) ಎಂದು ಗುರುತಿಸಲಾಗಿದೆ. ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಒದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ಕೇಸ್‌ – ಸಮರ್ಥಿಸಿಕೊಂಡ ಪ್ರಮೋದ್‌ ಮಧ್ವರಾಜ್‌ ಮೇಲೆ ಸುಮೋಟೊ ಕೇಸ್‌

    ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಗ ಆತ್ಮಹತ್ಯೆಗೆ ಶರಣಾಗಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಮಳೆಗೆ ಬೈಕ್ ಮೇಲೆ ಬಿದ್ದ ಮರ – ಮೂರು ವರ್ಷದ ಮಗು ಸಾವು

  • ಕಾಫಿನಾಡಲ್ಲಿ ಮಂಗನ ಕಾಯಿಲೆಗೆ ವೃದ್ಧೆ ಬಲಿ – ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಕಾಫಿನಾಡಲ್ಲಿ ಮಂಗನ ಕಾಯಿಲೆಗೆ ವೃದ್ಧೆ ಬಲಿ – ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮಂಗನ ಕಾಯಿಲೆಗೆ (KFD) ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

    ಕೊಪ್ಪ (Koppa) ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ (68) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನಾ ಮಣಿಪಾಲದ (Manipal) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ರತ್ನಾ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ

    ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ರೋಗ ಹೆಚ್ಚುತ್ತಿದೆ. ಕೊಪ್ಪ, ಎನ್‌ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣ ಹೆಚ್ಚುತ್ತಿದ್ದು, 11 ಕೆಎಫ್‌ಡಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮಂಡ್ಯದಲ್ಲಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ : ಮಾಗಡಿ ಬಾಲಕೃಷ್ಣ

  • ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

    ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

    ಚಿಕ್ಕಮಗಳೂರು: ರಸ್ತೆ ದುರಸ್ತಿ (Road Repair) ಮಾಡಿಸಿದ್ದು ಪಟ್ಟಣ ಪಂಚಾಯತ್‌ನ (Panchayat) ಹಣದಲ್ಲಿ. ಆದರೆ, ಬ್ಯಾನರ್ ಹಾಕಿಸಿಕೊಂಡಿದ್ದು ಶಾಸಕರು. ಇಂತಹದ್ದೊಂದು ನಗೆಪಾಟಲಿನ ಘಟನೆಗೆ ಜಿಲ್ಲೆಯ ಕೊಪ್ಪ (Koppa) ಪಟ್ಟಣ ಸಾಕ್ಷಿಯಾಗಿದೆ.

    ಕೊಪ್ಪ ಪಟ್ಟಣದಲ್ಲಿ ರಸ್ತೆ ಸಾಕಷ್ಟು ಹಾಳಾಗಿತ್ತು. ಆದರೆ, ಶಾಸಕರು ರಸ್ತೆ ದುರಸ್ತಿಯನ್ನು ಮಾಡಿಸಿರಲಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣ ಪಂಚಾಯತ್ ರಸ್ತೆಗೆ ಪ್ಯಾಚ್ ಹಾಕಿಸಿ ದುರಸ್ತಿ ಮಾಡಿಸಿತ್ತು. ಆದರೆ, ರಸ್ತೆಗೆ ಪ್ಯಾಚ್ ಹಾಕಿಸಿ ಸಾರ್ವಜನಿಕರಿಗೆ ಓಡಾಡಲು ಅನುವು ಮಾಡಿಕೊಟ್ಟರೆಂದು ಬ್ಯಾನರ್ ಹಾಕಿಸಿಕೊಂಡಿದ್ದು ಮಾತ್ರ ಶಾಸಕ ಟಿ.ಡಿ.ರಾಜೇಗೌಡ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

    ಕೊಪ್ಪ ಪಟ್ಟಣದ ಮುಖ್ಯ ರಸ್ತೆ ಸಂಪೂರ್ಣ ಅಯೋಮಯವಾಗಿತ್ತು. ಟಿ.ಡಿ.ರಾಜೇಗೌಡ (TD Rajegowda) 2018ರಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ಶಾಸಕರು ರಸ್ತೆ ದುರಸ್ತಿ ಮಾಡಿಸಿದ್ದರು. ಆದರೆ, ದುರಸ್ತಿ ಮಾಡಿದ ಗುತ್ತಿಗೆದಾರನಿಗೆ ಯಾವುದೇ ಬಿಲ್ ಪಾವತಿ ಮಾಡಿರುವುದಿಲ್ಲ. 2023ರಲ್ಲಿ ಪಟ್ಟಣ ಪಂಚಾಯತ್ ಜನರ ತೆರಿಗೆ ಹಣದಲ್ಲಿ ಬಿಲ್ ಪಾವತಿ ಮಾಡಲಾಗಿದೆ. ಅದಾದ ನಂತರವೂ 2-3 ಬಾರಿ ರಸ್ತೆಗೆ ಪ್ಯಾಚ್ ಕೆಲಸ ಮಾಡಲಾಗಿದೆ. ಆದರೆ, ಶಾಸಕರ ನಿಧಿಯಿಂದ ಈವರೆಗೂ ಯಾವುದೇ ಅನುದಾನ ನೀಡಿಲ್ಲ ಎಂದು ಪಟ್ಟಣ ಪಂಚಾಯತ್ ಸದಸ್ಯರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 2ನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧಾರ

    ಪಟ್ಟಣ ಪಂಚಾಯತ್ ರಸ್ತೆ ದುರಸ್ತಿ ಮಾಡಿಸಿದ ಕೆಲಸಕ್ಕೆ ಶಾಸಕರು ಬ್ಯಾನರ್ ಹಾಕಿಸಿಕೊಳ್ಳುವುದು ಎಷ್ಟು ಸರಿ ಎಂದು ಕೊಪ್ಪ ಪಟ್ಟಣ ಪಂಚಾಯತ್ ಸದಸ್ಯರು ಶಾಸಕರನ್ನು ಪ್ರಶ್ನಿಸಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಶಾಸಕರು ಬ್ಯಾನರ್ ಹಾಕಿಸಿಕೊಂಡಿರುವುದನ್ನು ಕಂಡ ಕೊಪ್ಪ ನಿವಾಸಿಗಳು ಶಾಸಕರನ್ನು ಕಂಡು ನಗುತ್ತಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ದಲಿತಾಸ್ತ್ರ ಹೂಡಲು ಮುಂದಾಯ್ತಾ I.N.D.I.A- ಖರ್ಗೆ ಪ್ರಧಾನಿ ಅಭ್ಯರ್ಥಿ?

  • ಡಿಶ್ ರಿಪೇರಿ ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟು

    ಡಿಶ್ ರಿಪೇರಿ ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟು

    ಚಿಕ್ಕಮಗಳೂರು: ಮಹಿಳೆಯರಿಗೆ (Woman) ನಂಬರ್ (Mobile Number) ಕೊಟ್ಟು ಕಾಲ್ ಮಾಡುವಂತೆ ಪೀಡಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ (Koppa) ತಾಲೂಕಿನಲ್ಲಿ ನಡೆದಿದೆ.

    ಕೊಪ್ಪ ತಾಲೂಕಿನ ಜಯಪುರ (Jayapura) ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಶೀರ್ ಎಂಬಾತ ಮಹಿಳೆಯರಿಗೆ ಮೊಬೈಲ್ ನಂಬರ್ ಕೊಟ್ಟು ಕಾಲ್ ಮಾಡುವಂತೆ ಟಾರ್ಚರ್ ನೀಡುತ್ತಿದ್ದ. ಅದೇ ರೀತಿ ಕಟ್ಟೆಮನೆ ಗ್ರಾಮದ ರಮೇಶ್ ಎಂಬವರ ಪತ್ನಿಗೆ ಬಶೀರ್ ನಂಬರ್ ನೀಡಿದ್ದು, ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ತನ್ನ ಹೆಂಡತಿಗೆ ಮೊಬೈಲ್ ನಂಬರ್ ನೀಡಿದ ಹಿನ್ನೆಲೆ ರಮೇಶ್ ಆತನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    ಬಶೀರ್ ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ. ಪತ್ನಿಗೆ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ ಈತನಿಗೆ ರಮೇಶ್ ಹಾಗೂ ಸ್ಥಳೀಯರು ಧರ್ಮದೇಟು ನೀಡಿ ರಿಪೇರಿ ಮಾಡಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತವರು ಮನೆ ಸೇರಿದ್ದ ಪತ್ನಿಯನ್ನು ಚುಚ್ಚಿ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]