Tag: ಕೊಪ್ಪಳ

  • ಕೊಪ್ಪಳ | ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

    ಕೊಪ್ಪಳ | ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

    ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು (Kuknoor) ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹಿಳೆ ತನ್ನಿಬ್ಬರು ಮಕ್ಕಳಿಗೆ ಮೊದಲು ನೇಣು ಹಾಕಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

    ಲಕ್ಷ್ಮವ್ವ ಗಂಡ ಹಾಗೂ ಅತ್ತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಕಳೆದ 2016 ರಲ್ಲಿ ಲಕ್ಷ್ಮವ್ವ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಡೆತ್ ನೋಟ್ ಪತ್ತೆ?
    ಮೃತ ಮಹಿಳೆಯ ಕೈ ಬಳೆಯಲ್ಲಿ ಚೀಟಿಯೊಂದು ಪತ್ತೆಯಾಗಿದ್ದು, ಸಾವಿಗೆ ಕಾರಣ ಬರೆದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.

    ಮೃತ ಮಹಿಳೆ ಕೂಲಿ ಕೆಲಸ ಮಾಡುತ್ತಿದ್ದು, ಆಕೆಯ ಪತಿ ಕಟ್ಟಡ ಕಾರ್ಮಿಕನಾಗಿದ್ದಾನೆ. ಲಕ್ಷ್ಮವ್ವರ ಗಂಡ ಮೂಲತಃ ಕೊಪ್ಪಳ ತಾಲೂಕು ಕರ್ಕಿಹಳ್ಳಿ ಗ್ರಾಮದವರಾಗಿದ್ದು, ಪತ್ನಿ ಮನೆಯಲ್ಲೇ ಬಂದು ವಾಸವಾಗಿದ್ದ. ನಮ್ಮಲ್ಲಿ ಯಾವುದೇ ಜಗಳ ಇರಲಿಲ್ಲ. ಯಾವುದೇ ತೊಂದರೆ ಇರಲಿಲ್ಲ ಎಂದು ಪತಿ ಹನುಮಂತಪ್ಪ ಪ್ರತಿಕ್ರಿಯಿಸಿದ್ದಾರೆ.

    ಘಟನಾ ಸ್ಥಳಕ್ಕೆ ಕೊಪ್ಪಳ (Koppal) ಎಸ್ ಡಾ.ರಾಮ್ ಎಲ್ ಅರಸಿದ್ದಿ ಭೇಟಿ ನೀಡಿ, ಪರಿಶೀಲನೆ‌ ನಡೆಸಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ದಂಡ ಕಟ್ಟುತ್ತೇನೆ ಎಂದಿದ್ದಕ್ಕೆ ಒಪ್ಪದ ಪೊಲೀಸರು – ಸವಾರ, ಟ್ರಾಫಿಕ್ ಪೊಲೀಸರ ನಡುವೆ ವಾಗ್ವಾದ

  • ಕೊಪ್ಪಳ | ಮಳೆಗೆ ಲಕ್ಷಾಂತರ ಮೌಲ್ಯದ ಭತ್ತ ನಾಶ – ಆತ್ಮಹತ್ಯೆಗೆ ಯತ್ನಸಿದ ರೈತ

    ಕೊಪ್ಪಳ | ಮಳೆಗೆ ಲಕ್ಷಾಂತರ ಮೌಲ್ಯದ ಭತ್ತ ನಾಶ – ಆತ್ಮಹತ್ಯೆಗೆ ಯತ್ನಸಿದ ರೈತ

    ಕೊಪ್ಪಳ: ಧಾರಾಕಾರ ಮಳೆಯಿಂದಾಗಿ ಭತ್ತದ ಬೆಳೆ ನಾಶವಾದ ಹಿನ್ನೆಲೆ ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ನಡೆದಿದೆ.

    ಕೊಪ್ಪಳ (Koppal) ತಾಲೂಕಿನ ಬಸಾಪುರ (Basapur) ಗ್ರಾಮದ ರೈತ ಲಕ್ಷ್ಮಣ ರಾಜರಾಮಪೇಟೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಇದನ್ನೂ ಓದಿ:ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ

    ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಸರ್ವೇ ನಂ. 24 ಮತ್ತು 25ರಲ್ಲಿ ಒಟ್ಟು 8 ಎಕರೆಯಲ್ಲಿ ಭತ್ತ ಬೆಳೆಯಲು ರೈತ ಲಕ್ಷಂತರ ರೂ. ಖರ್ಚು ಮಾಡಿದ್ದಾರೆ. ಜೊತೆಗೆ ರೈತ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದಾನೆ. ಈ ನಡುವೆ ಸತತ ಮಳೆಯಿಂದ ಭತ್ತ ನೆಲಕಚ್ಚಿದ್ದು, ಕಟಾವು ಮಾಡುವುದು ಕಷ್ಟ ಸಾಧ್ಯವಾಗಿದೆ. ಇದರಿಂದ ನೊಂದ ರೈತ ಲಕ್ಷ್ಮಣ ಅವರು ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದಾರೆ. ವಿಷಯ ತಿಳಿದ ಪಕ್ಕದ ಜಮೀನಿನವರು ರೈತನಿಗೆ ಬುದ್ಧಿವಾದ ಹೇಳಿ, ಅವಘಡ ತಪ್ಪಿಸಿದ್ದಾರೆ.

    ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ತಾಲೂಕಿನಲ್ಲಿ ಭತ್ತ ಬೆಳೆದ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ, ತೆನೆ ಬಂದ ವೇಳೆ ಮಳೆಯಾಗಿದ್ದರಿಂದ ಭತ್ತದ ಬೆಳೆ ಕಟಾವು ಮಾಡಲು ಸಮಸ್ಯೆಯಾಗಿದೆ. ನಾಲ್ಕೈದು ದಿನದಿಂದ ಗಾಳಿ ಸಹಿತ ಮಳೆ ಸುರಿದು, ಭತ್ತದ ಬೆಳೆ ನೆಲಕಚ್ಚಿದೆ. ಕೆಲವೆಡೆ ಅರ್ಧದಷ್ಟು ನೆಲ ಕಚ್ಚಿದ್ದರೆ ಮತ್ತಷ್ಟು ಕಡೆ ಸಂಪೂರ್ಣ ಬೆಳೆ ನೆಲಕ್ಕುರುಳಿದೆ. ತಾಲೂಕಾದ್ಯಂತ ಭತ್ತದ ಬೆಳೆ ನೆಲಕಚ್ಚಿದ್ದು, ರೈತರು ಸಮಸ್ಯೆ ಎದುರಿಸುವಂತಾಗಿದೆ. ದೀಪಾವಳಿ ನಂತರ ಭತ್ತದ ಬೆಳೆ ಕಟಾವು ಮಾಡಬೇಕು ಎಂದುಕೊಂಡಿದ್ದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

    ಸತತ ಮಳೆಯಾದ ಹಿನ್ನೆಲೆ ಕೊಪ್ಪಳ ತಾಲೂಕಿನ ಹಿಟ್ನಾಳ, ಹುಲಿಗಿ, ಅಗಳಕೇರಾ, ಬಂಡಿ ಹರ್ಲಾಪುರ, ಬಸಾಪುರ, ರಾಜರಾಮಪೇಟೆ, ಮಹ್ಮದ್ ನಗರ, ನಾರಾಯಣ ಪೇಟೆ, ಅಯೋಧ್ಯ ಗ್ರಾಮದಲ್ಲಿ ಸುಮಾರು ನೂರಕ್ಕೂ ಅಧಿಕ ರೈತರ ಜಮೀನಿನಲ್ಲಿ ಭತ್ತ ನೆಲಕಚ್ಚಿದೆ.ಇದನ್ನೂ ಓದಿ: Kurnool Bus Fire | ದುರಂತಕ್ಕೀಡಾದ ಖಾಸಗಿ ಬಸ್ ಮೇಲಿದೆ 23 ಸಾವಿರಕ್ಕೂ ಹೆಚ್ಚು ದಂಡ

     

  • RSS ವಾರ್ ಮಧ್ಯೆ ರಾಜ್ಯದಲ್ಲಿ ಸಂಚಲನ ಮೂಡಿಸಿದ ಲೆಟರ್ ವಾರ್

    RSS ವಾರ್ ಮಧ್ಯೆ ರಾಜ್ಯದಲ್ಲಿ ಸಂಚಲನ ಮೂಡಿಸಿದ ಲೆಟರ್ ವಾರ್

    ಕೊಪ್ಪಳ: ಆರ್‌ಎಸ್‌ಎಸ್  (RSS) ವಾರ್ ಮಧ್ಯೆ ಇದೀಗ ರಾಜ್ಯದಲ್ಲಿ ಲೆಟರ್ ವಾರ್ (Letter War) ಸಂಚಲನ ಮೂಡಿಸಿದೆ.

    ರಾಜ್ಯದಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಸಿಡಿದೆದ್ದಿದ್ದಾರೆ. ಪ್ರತಿದಿನ ಸುಮಾರು 100ರಿಂದ 150 ಟ್ರಕ್ ಮರಳು ಹಾಗೂ ಜಲ್ಲಿ ಕೊಪ್ಪಳ ಜಿಲ್ಲೆಯಿಂದ ಗದಗ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ ಹಾಗೂ ಬೆಂಗಳೂರು ನಗರಗಳಿಗೆ ಅನಧಿಕೃತವಾಗಿ ಸಾಗಣೆ ಆಗುತ್ತಿದ್ದು, ರಾಜ್ಯದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಿದೆ. ಇದರಲ್ಲಿ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ತಕ್ಷಣವೇ ವರ್ಗಾವಣೆ ಮಾಡಬೇಕು ಅಂತಲೂ ಕೋರಿದ್ದರು.ಇದನ್ನೂ ಓದಿ: ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ

    ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿ ಮಧ್ಯಪ್ರವೇಶಿಸಿದೆ. ಕೊಪ್ಪಳ ಗಣಿ ಇಲಾಖೆಯ ಹಿರಿಯ ಅಧಿಕಾರಿಗೆ ಮುಖ್ಯಮಂತ್ರಿಗಳ ಆಫೀಸ್‌ನಿಂದ ಕರೆ ಹೋಗಿದೆ. ಕೊಪ್ಪಳದ ಗಣಿ & ಭೂವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಲತಾಗೆ ಕರೆ ಮಾಡಿದ್ದು, ರಾಯರೆಡ್ಡಿ ಆರೋಪದ ಬಗ್ಗೆ ಸಿಎಂ ಕಚೇರಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಳಿಕ ಅಲರ್ಟ್ ಆದ ಹಿರಿಯ ಅಧಿಕಾರಿ ಪುಷ್ಪಲತಾ, ಗಣಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

    ಸಭೆ ಬೆನ್ನಲ್ಲೇ ರಾಯರೆಡ್ಡಿ ಪತ್ರಕ್ಕೆ ಕೌಂಟರ್ ಆಗಿ ಅಧಿಕಾರಿಗಳ ಪತ್ರ ವೈರಲ್ ಆಗಿದೆ. ಕುಕನೂರು ಬೈಪಾಸ್ ರಸ್ತೆಗೆ ಬಳಸುತ್ತಿರುವ ಮರ‍್ರಂ ಖನಿಜಕ್ಕೆ ಸರ್ಕಾರಕ್ಕೆ ರಾಜಧನ ಪಾವತಿಸುವಂತೆ ಸೂಚಿಸಿರುವುದು ಭ್ರಷ್ಟಾಚಾರವೇ ಅಂತ ಪ್ರಶ್ನೆ ಮಾಡಿದ್ದಾರೆ. ತಮ್ಮ ಹಾಗೂ ಬೆಂಬಲಿಗರು ಕೈಗೊಳ್ಳುವ ಕಾಮಗಾರಿಗೆ ಸಾಥ್ ನೀಡಿಲ್ಲ ಅಂತ ಈ ರೀತಿ ಆರೋಪಿಸಲಾಗುತ್ತಿದೆ ಎಂದು ಪತ್ರದಲ್ಲಿ ದೂರಲಾಗಿದೆ.ಇದನ್ನೂ ಓದಿ: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ – ರಮೇಶ್ ಕತ್ತಿ ವಿರುದ್ಧ ರಾಯಚೂರಲ್ಲಿ FIR

  • ಕೊಪ್ಪಳದ ಲಾಡ್ಜ್‌ನಲ್ಲಿ ನೇಣು ಬಿಗಿದು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ

    ಕೊಪ್ಪಳದ ಲಾಡ್ಜ್‌ನಲ್ಲಿ ನೇಣು ಬಿಗಿದು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ

    ಕೊಪ್ಪಳ: ಜಿಲ್ಲೆಯ ಲಾಡ್ಜ್‌ವೊಂದರಲ್ಲಿ ಹಾಸ್ಟೆಲ್ ವಾರ್ಡನ್ (Hostel Warden) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತರನ್ನು ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39) ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಇದನ್ನೂ ಓದಿ: ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಭಾನುವಾರ (ಅ.20) ಕೊಪ್ಪಳದ ಲಾಡ್ಜ್ವೊಂದಕ್ಕೆ ಹಾಮೇಶ್ ಬಂದಿದ್ದರು. ಈ ವೇಳೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರಗೆ ರವಾನಿಸಲಾಗಿದೆ.ಇದನ್ನೂ ಓದಿ: ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

  • ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ

    ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ

    ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ ಹಾಗೂ ಅನೇಕ ವರ್ಷದಿಂದ ಇಲ್ಲೇ ಬೀಡುಬಿಟ್ಟ ಅಧಿಕಾರಿಗಳನ್ನು ವರ್ಗಾಯಿಸಿ ಕ್ರಮಕೈಗೊಳ್ಳಲು ಬಸವರಾಜ ರಾಯರೆಡ್ಡಿ (Basavaraj Rayareddy) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ.

    ತುಂಗಭದ್ರಾ ನದಿ, ಹಿರೇಹಳ್ಳದಲ್ಲಿ ಮರಳು ಅಕ್ರಮ ಅವ್ಯಾಹತವಾಗಿದೆ. ನಿಯಂತ್ರಣ ಅಸಾಧ್ಯ ಎಂಬಂತಾಗಿದೆ. ಹಿರೇಹಳ್ಳದಲ್ಲಿನ ಅಕ್ರಮ ಕುರಿತು ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಎಚ್ಚೆತ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಬೂದಗುಂಪಾ, ಕೆರೆಹಳ್ಳಿ, ಬಂಡಿ ಹರ್ಲಾಪುರ ಭಾಗದಲ್ಲಿ ಅಕ್ರಮ ಗ್ರಾನೈಟ್ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ದಾಖಲಾದ ದೂರು ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    ಇನ್ನೂ ಕುಕನೂರು ತಾಲೂಕಿನ ತಳಕಲ್ ಗ್ರಾಮದ 9.4 ಎಕರೆ ಬೆಣ್ಣಿಕೆರೆಯಲ್ಲಿ ಹೂಳು ತೆರವು ಮಾಡಲಾಗಿದೆ. ಇದರಲ್ಲಿ ಮೊದಲು ಹೂಳು ಮಾರಾಟ ಮಾಡಿ, ರಾಜಧನ ಪಾವತಿಗೆ ಸೂಚಿಸಲಾಗಿದೆ. ಬಳಿಕ ಆದೇಶ ಮಾರ್ಪಡಿಸಿ ಹೂಳನ್ನು ಮಾರಾಟ ಮಾಡದಂತೆ ಆದೇಶಿಸಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತನಿಖೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಕೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.

    ಹಲವು ವರ್ಷದಿಂದ ಬೀಡು ಬಿಟ್ಟ ಅಧಿಕಾರಿಗಳು:
    ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕಿರಿಯ ಅಭಿಯಂತರ ನವೀನ್ ಕುಮಾರ್ (12 ವರ್ಷ), ಅಧೀಕ್ಷಕ ಮಲ್ಲಿಕಾರ್ಜುನ (9 ವರ್ಷ), ಪ್ರಥಮ ದರ್ಜೆ ಸಹಾಯಕ ಹರೀಶ ಬಿ.ಜಿ. (18 ವರ್ಷ), ಪ್ರಥಮ ದರ್ಜೆ ಸಹಾಯಕಿ ತ್ರಿವೇಣಿ ಬಸವರಾಜ (9 ವರ್ಷ), ದ್ವಿತಿಯ ದರ್ಜೆ ಸಹಾಯಕಿ ಸುಕನ್ಯಾ ಹೊಸಮನಿ (5 ವರ್ಷ), ಭೂ ವಿಜ್ಞಾನಿಗಳಾದ ಸನಿತ್ ಸಿ. (3 ವರ್ಷ), ನಾಗರಾಜ ಈ. (2 ವರ್ಷ), ಕಿರಿಯ ಅಭಿಯಂತರರಾದ ಸಂಪ್ರಿತಾ ಹಿರೇಮಠ 3 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೂ ಭ್ರಷ್ಟಾಚಾರಕ್ಕೆ ಸಹಕಾರ ನೀಡುತ್ತಿದ್ದಾರೆಂದು ದೂರುಗಳು ಸಲ್ಲಿಕೆಯಾಗಿವೆ. ಇನ್ನು ಕಳೆದ ಐದು ತಿಂಗಳ ಹಿಂದೆ ಹಿರಿಯ ಭೂವಿಜ್ಞಾನಿಯಾಗಿ ಬಂದಿರುವ ಪುಷ್ಪಲತಾ ಕವಲೂರು ಅವರು ನಿಯಮಾವಳಿ ಪಾಲಿಸಿದ ಕಾರಣ ಕ್ರಮಕ್ಕೆ ಪತ್ರ ಬರೆಯಲಾಗಿದೆ.

    ಕಾರ್ಯಪಡೆ ರಚನೆಗೆ ಆಗ್ರಹ:
    ಗಣಿಗಾರಿಕೆ ಅಕ್ರಮ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಿಎಂಗೆ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ 85 ಕಿ.ಮೀ. ತುಂಗಭದ್ರಾ ನದಿ ಹರಿಯುತ್ತಿದ್ದು, ಅಪಾರ ಮರಳು ಗಣಿ ಇದೆ. ನಿತ್ಯ 100&150 ಟ್ರಿಪ್ ಮರಳು, ಜಲ್ಲಿ ನೆರೆ ಜಿಲ್ಲೆಗಳಿಗೆ ಅನಧಿಕೃತವಾಗಿ ಸಾಗುತ್ತಿವೆ. ಇದರಿಂದ ಸರ್ಕಾರಕ್ಕೆ ಅಪಾರ ರಾಜಧನ ನಷ್ಟವಾಗುತ್ತಿದೆ. ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದೂರು ಸಲ್ಲಿಕೆಯಾಗಿವೆ. 200ಕ್ಕೂ ಹೆಚ್ಚು ಜನ ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

  • ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

    ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

    ಬೆಂಗಳೂರು: ಪವನ ವಿದ್ಯುತ್‌ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿರುವ ದೈತ್ಯಾಕಾರದ ಬ್ಲೇಡ್‌ಗಳು ಮತ್ತು ಗೋಪುರಗಳ ಉತ್ಪಾದನೆಗೆ ಹೆಸರಾಗಿರುವ ಐನಾಕ್ಸ್‌ವಿಂಡ್‌ (Inox Wind) ಕಂಪನಿಯು ಕೊಪ್ಪಳ (Koppala) ಜಿಲ್ಲೆಯ ಕುಷ್ಟಗಿ (Kustgai) ತಾಲ್ಲೂಕಿನ ಕ್ಯಾದಿಗುಪ್ಪ ಕೈಗಾರಿಕಾ ಪ್ರದೇಶದಲ್ಲಿ 400 ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ (MB Patil) ಬುಧವಾರ ತಿಳಿಸಿದ್ದಾರೆ.

    ಖನಿಜ ಭವನದಲ್ಲಿ ಕಂಪನಿಯ ಕಾರ್ಪೊರೇಟ್ ತಂತ್ರಗಾರಿಕೆ ವಿಭಾಗದ ಅಧ್ಯಕ್ಷ ಸಂತೋಷ್‌ ಖೈರ್ನಾರ್‌ ಜೊತೆ ಇಂದು ಮಾತುಕತೆ ನಡೆಸಿದರು.

    ಬಳಿಕ ಮಾಹಿತಿ ನೀಡಿದ ಸಚಿವರು, ಐನಾಕ್ಸ್‌ವಿಂಡ್‌ ಕಂಪನಿಯ ಮಾಲೀಕರಾಗಿರುವ ದೇವಾಂಶ್‌ ಜೈನ್‌ ಅವರು ತಮ್ಮ ಕಂಪನಿಗೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆಯೇ 70 ಎಕರೆ ಭೂಮಿ ಬೇಕು. ಅತ್ಯುತ್ತಮ ಮತ್ತು ವಿಶಾಲ ರಸ್ತೆಗಳು ಇಲ್ಲದ ಕಡೆ ಭೂಮಿ ಒದಗಿಸಿದರೆ ಬೃಹದಾಕಾರದ ಬ್ಲೇಡುಗಳು ಮತ್ತು ಗೋಪುರಗಳನ್ನು ಸಾಗಿಸಲು ಸಾಧ್ಯವಾಗುವುದಿಲ್ಲ ಎಂದು ನನಗೆ ಪತ್ರ ಬರೆದು ಕೋರಿದ್ದರು ಎಂದಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ನಡೆಯಲಿದೆ 2030ರ ಕಾಮನ್‌ವೆಲ್ತ್‌ ಗೇಮ್ಸ್‌

    ಮೊದಲಿಗೆ ವಿಜಯಪುರ ಜಿಲ್ಲೆಯಲ್ಲಿ ಈ ಕಂಪನಿ ಬಂಡವಾಳ ಹೂಡಿಕೆಗೆ ಒಲವು ತೋರಿತ್ತು. ಆದರೆ ಅಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೈಗಾರಿಕಾ ಪ್ರದೇಶವಿಲ್ಲ. ಕಂಪನಿಯು ಎರಡು ಹಂತಗಳಲ್ಲಿ ಒಟ್ಟು 400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ತೀರ್ಮಾನಿಸಿದೆ. ಕುಷ್ಟಗಿ ತಾಲೂಕಿನಲ್ಲಿ ಈಗಾಗಲೇ ಇದ್ದ ಕೆಐಎಡಿಬಿ ಭೂಮಿಯನ್ನೇ ಈಗ ಕೊಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

    ಐನಾಕ್ಸ್‌ವಿಂಡ್‌ ಕಂಪನಿಯು ಮೊದಲನೆಯ ಹಂತದಲ್ಲಿ 300 ಕೋಟಿ ರೂ. ಹೂಡಲಿದ್ದು ಬ್ಲೇಡುಗಳನ್ನು ತಯಾರಿಸಲಿದೆ. ಎರಡನೆಯ ಹಂತದಲ್ಲಿ 100 ಕೋಟಿ ರೂ. ಹೂಡಿಕೆಯೊಂದಿಗೆ ಗೋಪುರಗಳನ್ನು ಉತ್ಪಾದಿಸಲಿದೆ. ಈ ಯೋಜನೆಯಿಂದ ನೇರವಾಗಿ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಬೇಕಾಗುವ ಬಾನೆತ್ತರದ ಕಂಬಗಳನ್ನೂ ತಯಾರಿಸಲಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಹೊಸ ಕೈಗಾರಿಕಾ ನೀತಿಯ ಅನ್ವಯ ಕೊಡುವ ಎಲ್ಲ ಸೌಲಭ್ಯಗಳನ್ನೂ ಐನಾಕ್ಸ್‌ವಿಂಡ್‌ ಕಂಪನಿಗೂ ಕೊಡಲಾಗುವುದು. ಇದರಿಂದಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೂ ಒಳ್ಳೆಯದಾಗಲಿದ್ದು, ಪ್ರಾದೇಶಿಕ ಅಸಮಾನತೆ ನಿವಾರಣೆಯತ್ತ ಒಂದು ದೊಡ್ಡ ಹೆಜ್ಜೆಯಾಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.

    ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ಬಕುಮಾರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

  • ಕೊಪ್ಪಳ | KPCC ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್

    ಕೊಪ್ಪಳ | KPCC ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್

    ಕೊಪ್ಪಳ: ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್‌ಐನ್ನು ಅಮಾನತು ಮಾಡಿ ಕೊಪ್ಪಳ (Koppal) ಎಸ್ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ.

    ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ಗುರುರಾಜ್‌ನ್ನು ಅಮಾನತು ಮಾಡಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಗಾಳೆಪ್ಪ ಎಂಬುವವರ ಮೇಲೆ ಪಿಎಸ್‌ಐ ಗುರುರಾಜ್ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಪಿಎಸ್‌ಐ ವಿರುದ್ಧ ದಲಿತ ಸಮುದಾಯದ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜೊತೆಗೆ ಹಲ್ಲೆ ಮಾಡಿದ್ದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಇದನ್ನೂ ಓದಿ: ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್

    ಪ್ರತಿಭಟನೆಗೆ ಮಣಿದ ಎಸ್ಪಿ ರಾಮ್ ಅರಸಿದ್ದಿ ಅವರು ಪಿಎಸ್‌ಐ ಗುರುರಾಜ್‌ನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

  • ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್

    ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್

    ಕೊಪ್ಪಳ: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ. ಇದು ನನ್ನ ಅಭಿಲಾಷೆ ಎಂದು ರಾಮನಗರ ‘ಕೈ’ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಮತ್ತೆ ಪುನರುಚ್ಚರಿಸಿದ್ದಾರೆ.

    ಈ ಕುರಿತು ಕೊಪ್ಪಳದಲ್ಲಿ (Koppal) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ನಾನು ಇದಕ್ಕೆ ಬದ್ಧ. ಕಾಂಗ್ರೆಸ್ (Congress) ಶಿಸ್ತಿನ ಪಕ್ಷ. ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ನಾನು ನನ್ನ ಅನಿಸಿಕೆ, ಆಸೆ, ಅಭಿಲಾಷೆಯನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧವಾಗಿದ್ದೇನೆ. ನಾನು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಅಂತಾ ಹಿಂದೆನೂ ಹೇಳಿದ್ದೆ, ಈಗಲೂ ಹೇಳುತ್ತೇನೆ ಎಂದು ನುಡಿದರು. ಇದನ್ನೂ ಓದಿ: ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

  • ಸಿಎಂ ಕಾರ್ಯಕ್ರಮಕ್ಕಾಗಿ ರಾಯಚೂರಿನಿಂದ ಕೊಪ್ಪಳಕ್ಕೆ 200 ಬಸ್ – ಇತ್ತ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ

    ಸಿಎಂ ಕಾರ್ಯಕ್ರಮಕ್ಕಾಗಿ ರಾಯಚೂರಿನಿಂದ ಕೊಪ್ಪಳಕ್ಕೆ 200 ಬಸ್ – ಇತ್ತ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ

    ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕಾರ್ಯಕ್ರಮಕ್ಕಾಗಿ ರಾಯಚೂರಿನಿಂದ (Raichuru) ಕೊಪ್ಪಳಕ್ಕೆ (Koppal) 200 ಬಸ್ಸುಗಳು ತೆರಳಿವೆ. ಈ ಹಿನ್ನೆಲೆ ರಾಯಚೂರಿನಲ್ಲಿ ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿತ್ತು.

    ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮವಿದ್ದ ಹಿನ್ನೆಲೆ ರಾಯಚೂರಿನ ಒಟ್ಟು 662 ಬಸ್ಸುಗಳ ಪೈಕಿ 200 ಬಸ್ಸುಗಳನ್ನು ಕೊಪ್ಪಳಕ್ಕೆ ಕಳುಹಿಸಲಾಗಿದೆ. ಹೀಗಾಗಿ ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಬಸ್ಸುಗಳ ಕೊರತೆಯಿಂದಾಗಿ ಗಂಟೆಗೊಂದು ಬಸ್ಸುಗಳು ಬರುತ್ತಿದ್ದು, ಜನದಟ್ಟಣೆ ಹೆಚ್ಚಾಗಿ ಪ್ರಯಾಣಿಕರಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಇದರಿಂದ ಬೇಸತ್ತ ಪ್ರಯಾಣಿಕರು ಸಾರಿಗೆ ಇಲಾಖೆಗೆ ಶಾಪ ಹಾಕುತ್ತಿದ್ದಾರೆ.

    ಇನ್ನೂ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಬರುತ್ತಿರುವ ಪ್ರಯಾಣಿಕರು ಬೆಳಗ್ಗೆಯಿಂದಲೂ ಪರದಾಟ ನಡೆಸಿದ್ದಾರೆ.ಇದನ್ನೂ ಓದಿ: ಚಿಕ್ಕಮಗಳೂರು | ಒಂದೂವರೆ ವರ್ಷದಿಂದ ರೈತರಿಗೆ ಕಾಟ ಕೊಡ್ತಿದ್ದ ಪುಂಡಾನೆ ಸೆರೆ

  • ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿದ್ದರಾಮಯ್ಯ

    ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿದ್ದರಾಮಯ್ಯ

    ಕೊಪ್ಪಳ: ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ (koppal) ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ಕಿಮ್ಸ್ ಬೋಧಕ ಆಸ್ಪತ್ರೆ, ಆಸ್ಪತ್ರೆ ಆವರಣದಲ್ಲಿ ನಂದಿನಿ ಪಾರ್ಲರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ, ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಬಳಿಕ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶ ಉದ್ಘಾಟಿಸಿದರು.ಇದನ್ನೂ ಓದಿ: ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

    ಕೊಪ್ಪಳ ತಾಲೂಕಿನ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಸೇರಿದಂತೆ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಬರೀ ಭ್ರಾಂತಿ ಅಷ್ಟೇ. ಸಮಾಜ ನಿರ್ಮಾಣ, ಸರ್ವರ ಅಭಿವೃದ್ಧಿಗೆ ಸಮೀಕ್ಷೆ ಮಾಡುತ್ತಿದ್ದೇವೆ. ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ಸಮೀಕ್ಷೆ ವಿರೋಧಿಸುವವರು ಸಮಾಜದ ವಿರೋಧಿಗಳಿಗೆ ಸಮ. ಯೋಜನೆ ರೂಪಿಸಲು ಅಂಕಿ ಅಂಶಗಳು ಬೇಕು. ಸಮೀಕ್ಷೆ ಬೇಡ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೇಂದ್ರ ನಡೆಸುವ ಜಾತಿಗಣತಿ ವಿರೋಧಿಸುತ್ತಾರಾ? ಬದಲಾವಣೆ ಬೇಡದವರು ಬೇಡ ಎನ್ನುತ್ತಾರೆಂದು ಸಮರ್ಥಿಸಿಕೊಂಡರು.

    ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ನನ್ನ ನಿಲುವು ಏನು ಇಲ್ಲ. ಕೆಲ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ. ಇದರಲ್ಲಿ ನಮ್ಮದೇನಿಲ್ಲ ಎಂದರು. ಈ ವೇಳೆ ಕಿವಿಯಲ್ಲಿ ಮಾಹಿತಿ ನೀಡಲು ಬಂದ ಸಚಿವ ತಂಗಡಗಿಗೆ ಸಿದ್ದು ಗದರಿದರು.

    ಗ್ಯಾರಂಟಿ ಯೋಜನೆ ಕೆಲ ತಿಂಗಳು ಬಂದ್ ಆಗಿವೆ ಎಂಬ ಪ್ರಶ್ನೆಗೆ ನಿಮಗೆ ಯಾರು ಹೇಳಿದ್ದು? ಎಂದು ಗರಂ ಆದರು. ಇನ್ನೂ ಇದೇ ವೇಳೆ ಸಾವಿನ ಸಿರಪ್ ಬಗ್ಗೆ ಮಾತನಾಡಿ, ಬೇರೆ ರಾಜ್ಯದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಹಿನ್ನೆಲೆ ರಾಜ್ಯದಲ್ಲಿ ಅಲರ್ಟ್ ಆಗಲು ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದರು.

    ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಭಾಗಿಯಾಗಿದ್ದರು ಮತ್ತು ಸಚಿವ ಶರಣಪ್ರಕಾಶ್ ಪಾಟೀಲ್, ಜಮೀರ್ ಅಹಮ್ಮದ್, ಶಿವರಾಜ ತಂಗಡಗಿ, ಗ್ಯಾರಂಟಿ ಸ್ಕೀಂ ಅಧ್ಯಕ್ಷ ಹೆಚ್‌ಎಂ ರೇವಣ್ಣ, ಕೆಕೆಆರ್‌ಡಿಬಿ ಅಧ್ಯಕ್ಷ ಅಜೇಯಸಿಂಗ್ ಸೇರಿ ಶಾಸಕ ರಾಘವೇಂದ್ರ ಹಿಟ್ನಾಳ್ ಸಾಥ್ ನೀಡಿದರು.ಇದನ್ನೂ ಓದಿ: ಮಧ್ಯಪ್ರದೇಶ ಸಿರಪ್ ದುರಂತ; ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ: ದಿನೇಶ್ ಗುಂಡೂರಾವ್