Tag: ಕೊಪ್ಪಳ

  • ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ

    ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ

    ಕೊಪ್ಪಳ: ಬಜಾಜ್ ಗ್ರೂಪ್ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಕಂಪನಿ ಮೂಲಕ ಕೊಪ್ಪಳದಲ್ಲಿನ (Koppal) ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದನ್ನು ಸುಮಿಟೊಮೊ ಖಚಿತಪಡಿಸಿದೆ.

    ಈ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮಾಹಿತಿ ನೀಡಿದ್ದು, ಈ ಘಟಕವು 2028ರ ವೇಳೆಗೆ ಕಾರ್ಯಾರಂಭ ಮಾಡಲಿದೆ. ವಾರ್ಷಿಕ 3,50,000 ಟನ್‌ಗಳಷ್ಟು ಕಬ್ಬಿಣ, ಉಕ್ಕು ತಯಾರಿಸುವ ಸಾಮರ್ಥ್ಯ ಹೊಂದಿದೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಬಯೊಮಾಸ್ ಘಟಕವನ್ನು ಸ್ಥಾಪಿಸುವ ಬಗ್ಗೆಯೂ ಸುಮಿಟೊಮೊ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಚಿವರು ವಿವರಿಸಿದ್ದಾರೆ.ಇದನ್ನೂ ಓದಿ: Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

    ಬೆಂಗಳೂರಿನಲ್ಲಿ ತನ್ನ ಮೋಷನ್ ಕಂಟ್ರೋಲ್ ಮತ್ತು ವೇರಿಯೇಬಲ್ ಫ್ರಿಕ್ವೆನ್ಸಿ ಡ್ರೈವ್ಸ್ ಘಟಕ ಸ್ಥಾಪಿಸುವ ಸಂಬಂಧದ ಬಂಡವಾಳ ಹೂಡಿಕೆಯನ್ನು ಯಸ್ಕಾವಾ ಕಂಪನಿಯು ರಾಜ್ಯದ ನಿಯೋಗಕ್ಕೆ ಖಚಿತಪಡಿಸಿದೆ. ಇದು ಅತ್ಯಾಧುನಿಕ ತಯಾರಿಕಾ ತಂತ್ರಜ್ಞಾನದ ಕೇಂದ್ರವಾಗಿ ಬೆಳೆಯುವ ಮೂಲಕ ಕರ್ನಾಟಕದ ಸ್ಥಾನವನ್ನು ಬಲಪಡಿಸಲಿದೆ ಎಂದು ತಿಳಿಸಿದ್ದಾರೆ.

    ಪಾಲುದಾರಿಕೆಯಡಿ ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಎನ್‌ಜಿಇಎಫ್ ಕಾರ್ಖಾನೆ ಪುನ:ಶ್ಚೇತನದ ಸಾಧ್ಯತೆಗಳ ಕುರಿತು ಜಪಾನಿನ ಜೆಎಫ್‌ಇ ಷೋಜಿ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದ್ದು, ಕಾರ್ಖಾನೆಗೆ ಆಹ್ವಾನ ನೀಡಿದ್ದಾರೆ.

    ಬಂಡವಾಳ ಹೂಡಿಕೆ ಆಕರ್ಷಿಸಲು ಜಪಾನ್‌ಗೆ ಭೇಟಿ ನೀಡಿರುವ ರಾಜ್ಯ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಉನ್ನತಾಧಿಕಾರಿಗಳ ಜೊತೆ ಬುಧವಾರ (ಸೆ.10) ನಡೆದ ಸಭೆಯಲ್ಲಿ ಹುಬ್ಬಳ್ಳಿ ಎನ್‌ಜಿಇಎಫ್ ಪುನಶ್ಚೇತನದ ಪ್ರಸ್ತಾವ ಮುಂದಿಟ್ಟಿದ್ದಾರೆ. ವಿದ್ಯುತ್ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್‌ಇ ಮುಂಚೂಣಿಯಲ್ಲಿದೆ. ಹುಬ್ಬಳ್ಳಿಯಲ್ಲಿ ಇರುವ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ಯಮವಾಗಿರುವ ನ್ಯೂ ಗವರ್ನಮೆಂಟ್ ಎಲೆಕ್ಟ್ರಿಕಲ್ ಫ್ಯಾಕ್ಟರಿಯನ್ನು (ಎನ್‌ಜಿಇಎಫ್) ರಾಜ್ಯ ಸರ್ಕಾರದ ಪಾಲುದಾರಿಕೆಯಡಿ ಪುನಶ್ಚೇತನಗೊಳಿಸುವ ಸಂಬಂಧ ಪೂರ್ವಭಾವಿ ಮಾತುಕತೆ ನಡೆಸಲು ಕಂಪನಿಯ ಉನ್ನತಾಧಿಕಾರಿಗಳು ಹುಬ್ಬಳ್ಳಿಯ ಘಟಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಚಿವರ ಜೊತೆಗಿನ ಸಭೆಯಲ್ಲಿ ಕಂಪನಿಯ ಜೆಎಫ್‌ಇ ಷೋಜಿ ಕಂಪನಿಯ ಯಂತ್ರೋಪಕರಣಗಳ ವಿಭಾಗದ ಜನರಲ್ ಮ್ಯಾನೇಜರ್ ಹಿರೋಶಿ ಲಿಜಿಮಾ, ಎಲೆಕ್ಟ್ರಿಕಲ್ ಅಪ್ಲೈಯನ್ಸಸ್ ಸ್ಟೀಲ್ ಪ್ಲ್ಯಾನಿಂಗ್ ವಿಭಾಗದ ಮ್ಯಾನೇಜರ್ ಹಿಡೆಕಸು ಯೋಶಿಒಕೊ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ: ಪ್ರತಾಪ್ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಪ್ರದೀಪ್ ಈಶ್ವರ್

    ಜಪಾನ್ ಭೇಟಿಯ ಮೂರನೇ ದಿನ, ರಾಜ್ಯದ ನಿಯೋಗವು ಸುಮಿಟೊಮೊ, ಯಸ್ಕಾವಾ, ಜೆಎಫ್‌ಇ ಶೋಜಿ ಕಂಪನಿಗಳ ಉನ್ನತಾಧಿಕಾರಿಗಳ ಜೊತೆ ಮಾತುಕತೆ ನಡೆಸಿತು. ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ (ಬಿಇವಿ) ಮತ್ತು ವಿದ್ಯುತ್ ಚಾಲಿತ ವಾಹನಗಳ (ಇವಿ) ತಯಾರಿಕೆಯಲ್ಲಿ ಬಳಸಲಾಗುವ ಮೋಟರ್ ಕೋರ್ಸ್ ತಯಾರಿಸುವ 400 ಕೋಟಿ ರೂ. ವೆಚ್ಚದ ಯೋಜನೆಯು ಶೀಘ್ರದಲ್ಲಿಯೇ ಕಾರ್ಯಗತಗೊಳ್ಳಲಿದೆ ಎಂದು ಕಂಪನಿಯು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದೆ.

    ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಮತ್ತಿತರರು ಇದ್ದರು.ಇದನ್ನೂ ಓದಿ: ಐಫೋನ್‌ 17 ಬಿಡುಗಡೆ – ಯಾವ ದೇಶದಲ್ಲಿ ಎಷ್ಟು ದರ? ಕಡಿಮೆ ದರ ಎಲ್ಲಿ?

  • ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್‌ – ಬಿಜೆಪಿ ನಿಯೋಗದಿಂದ ಅಮಿತ್ ಶಾ ಭೇಟಿ

    ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್‌ – ಬಿಜೆಪಿ ನಿಯೋಗದಿಂದ ಅಮಿತ್ ಶಾ ಭೇಟಿ

    ಕೊಪ್ಪಳ: ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ (Delhi) ಅಂಗಳ ತಲುಪಿದೆ. ರಾಜ್ಯ ಬಿಜೆಪಿ (BJP) ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿ, ಮನವಿ ಮಾಡಿಕೊಂಡಿದ್ದಾರೆ.

    ಸೋಮವಾರ (ಸೆ.8) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ್ ಆರ್.ಅಶೋಕ್ ಸೇರಿದಂತೆ ಇತರರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಗವಿಸಿದ್ದಪ್ಪ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಗವಿಸಿದ್ದಪ್ಪ ಕೊಲೆ ಪ್ರಕರಣ ಎನ್‌ಐಎಗೆ ವಹಿಸಿ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    ಆ.3ರಂದು ಕೊಪ್ಪಳದ (Koppal) ವಾರ್ಡ್ ನಂಬರ್ 3ರ ಮಸೀದಿ ಮುಂಭಾಗದಲ್ಲಿ ಗವಿಸಿದ್ದಪ್ಪನ ಹತ್ಯೆ ನಡೆದಿತ್ತು. ಸಾಧಿಕ್ ಎನ್ನುವ ಯುವಕ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಈ ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸುವಂತೆ ಗವಿಸಿದ್ದಪ್ಪ ಪೋಷಕರು ಹಾಗೂ ಬಿಜೆಪಿ ನಾಯಕರು ಆಗ್ರಹಿಸಿದ್ದರು. ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೆವು, ಆಗ ರಾಜ್ಯಪಾಲರು ಕೊಪ್ಪಳ ಪೊಲೀಸರಿಂದ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು ಎಂದು ತಿಳಿಸಿದರು.

    ಸದ್ಯ ಗವಿಸಿದ್ದಪ್ಪ ಕೊಲೆ ಕೇಸ್‌ನ್ನು ಎನ್‌ಐಎ ತನಿಖೆಗೆ ವಹಿಸಿ ಎಂದು ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ

  • ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ

    ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ

    ಕೊಪ್ಪಳ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy) ಭರವಸೆ ನೀಡಿದ್ದಾರೆ.

    ಕೊಪ್ಪಳದ (Koppal) ಕುಕನೂರು ಪಟ್ಟಣಕ್ಕೆ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಲೆಮಾರಿ ಸಮುದಾಯದವರು (Nomadic Communities) ರಾಯರೆಡ್ಡಿ ಅವರನ್ನು ಭೇಟಿ ಮಾಡಿದರು.ಇದನ್ನೂ ಓದಿ: ಛತ್ತೀಸ್‌ಗಢ | ಬಲರಾಂಪುರದಲ್ಲಿ ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ

    ಈ ವೇಳೆ ಅಲೆಮಾರಿ ಸಮುದಾಯದವರು ಮಾತನಾಡಿ, 1% ಮೀಸಲಾತಿಗಾಗಿ ಅಲೆಮಾರಿ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದೇವೆ. ಜೊತೆಗೆ ಮೀಸಲಾತಿಗಾಗಿ ಬೆಂಗಳೂರಿಗೆ ಹೋಗುತ್ತೇವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಿಮಗೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ತಿಳಿಸಿದರು.

  • ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜೋಕಾಲಿ ಗಣೇಶ

    ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜೋಕಾಲಿ ಗಣೇಶ

    ಕೊಪ್ಪಳ: ಜಿಲ್ಲೆಯ ಕನಕಗಿರಿಯಲ್ಲಿ (Kanakagiri) ವಿಶೇಷ ಜೋಕಾಲಿ ಆಡುವ ಗಣೇಶನ ವಿಗ್ರಹವೊಂದು ಗಮನ ಸೆಳೆಯುತ್ತಿದೆ.ಇದನ್ನೂ ಓದಿ: ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಬಾತ್ರೂಮ್‌ನಲ್ಲಿ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖ

    ಹೌದು, ರಾಜ್ಯದೆಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಶೈಲಿ, ವಿವಿಧ ಆಕಾರ, ವಿವಿಧ ವೇಷಗಳಲ್ಲಿ ಗಣೇಶನ ವಿಗ್ರಹಗಳು ರಾರಾಜಿಸುತ್ತಿವೆ. ಅದರಂತೆ ಕೊಪ್ಪಳ (Koppal) ಜಿಲ್ಲೆಯ ಕನಕಗಿರಿಯಲ್ಲಿ ಜೋಕಾಲಿ ಆಡುತ್ತಿರುವ ಗಣೇಶ (Jokali Ganesha) ಮೂರ್ತಿಯೊಂದು ಗಮನ ಸೆಳೆಯುತ್ತಿದೆ.

    ಕನಕಗಿರಿಯ 13ನೇ ವಾರ್ಡ್‌ನಲ್ಲಿ ಜೋಕಾಲಿ ಆಡುವ ಶೈಲಿಯಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಗಣೇಶನ ಜೊತೆಗೆ ಮಕ್ಕಳು ಕೂಡ ಜೋಕಾಲಿ ಆಡಿ ಖುಷಿಪಡುತ್ತಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

     

  • ತುಂಗಭದ್ರ ತಟದಲ್ಲಿ ವಿಜೃಂಭಣೆಯಿಂದ ಜರುಗಿದ ಆರತಿ ಮಹೋತ್ಸವ

    ತುಂಗಭದ್ರ ತಟದಲ್ಲಿ ವಿಜೃಂಭಣೆಯಿಂದ ಜರುಗಿದ ಆರತಿ ಮಹೋತ್ಸವ

    – ಸಚಿವರು, ಸಂಸದರು, ಶಾಸಕರಿಂದ ತುಂಗಭದ್ರೆಗೆ ಬಾಗಿನ ಸಮರ್ಪಣೆ

    ಕೊಪ್ಪಳ: ಇಲ್ಲಿನ ಪೌರಾಣಿಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮೀಪದ ತುಂಗಭದ್ರ ನದಿ (Tungabhadra River) ತಟದಲ್ಲಿ ವಿರ್ಜಂಭಣೆಯಿಂದ ತುಂಗಾರತಿ (Tunga Aarti) ಮಹೋತ್ಸವ ನಡೆಯಿತು.

    ಇದೇ ಮೊದಲ ಬಾರಿಗೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದ ತುಂಗಭದ್ರ ನದಿತೀರದಲ್ಲಿ ತುಂಗಭದ್ರ ಆರತಿ ಮಹೋತ್ಸವ ನಡೆಯಿತು. ಗಂಗಾ ಆರತಿ ಮಹೋತ್ಸವದಲ್ಲಿ ಭಾಗಿಯಾಗಿದ್ದ 15 ಅರ್ಚಕರು ತುಂಗಭದ್ರಾ ಆರತಿ ಮಹೋತ್ಸವ ನಡೆಸಿಕೊಟ್ಟರು. ಮಹೋತ್ಸವ ಅಕ್ಷರಶಃ ವಾರಣಾಸಿಯ ಗಂಗಾರತಿ ನೆನಪಿಸುವಂತಿತ್ತು. ತುಂಗಭದ್ರಾ ಆರತಿಗಾಗಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ಶ್ರೀ ಕ್ಷೇತ್ರದ ವತಿಯಿಂದ ಸುಮಾರು ಎರಡು ಸಾವಿರ ಆರತಿಗಳನ್ನು ಭಕ್ತರಿಗೆ ಉಚಿತ ನೀಡಲಾಗಿತ್ತು. ಇದನ್ನೂ ಓದಿ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಸಾವು ಕೇಸ್:‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    ಮಹೋತ್ಸವದ ಪ್ರಯುಕ್ತ ಚಂಡಿಕಾ ಹೋಮ, ಭಕ್ತರಿಗೆ ವಿಶೇಷ ಅನ್ನ ಸಂತರ್ಪಣೆ, ಮಾಹಿಳೆಯರಿಂದ ವಿಶೇಷ ಕುಂಭ ಮೆರವಣಿಗೆ, ನದಿ ತೀರದಲ್ಲಿ ದೇವಸ್ಥಾನದ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮತ್ತು ಪೂಜೆ ಕಾರ್ಯಕ್ರಮ ನಡೆಯಿತು. ಈ ಮೊದಲು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಬಳಿಕ ನದಿ ತಟದ ವೇದಿಕೆಯಲ್ಲಿ ಹೊಸಪೇಟೆಯ ಅಂಜಲಿ ಕಲಾ ತಂಡದಿಂದ ಭರತನಾಟ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

    ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ಎಂಎಲ್ಸಿ ಹೇಮಲತಾ ನಾಯಕ ಹಾಗೂ ಇತರೆ ಜನಪ್ರತಿನಿಧಿಗಳು ತುಂಗಭದ್ರಾ ನದಿಗೆ ಬಾಗಿನ ಸಮರ್ಪಣೆ ಮಾಡಿದರು.

  • 5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ

    5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ

    ಕೊಪ್ಪಳ: ವಿಘ್ನನಿವಾರಕ, ಆದಿವಂದಿತ ಗಣೇಶನ ಹಬ್ಬ ಸಮೀಪಿಸುತ್ತಿದ್ದು, ಈ ಹಿನ್ನೆಲೆ ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.

    ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೈಕಿ ನಾಲ್ಕು ಸಾವಿರ ಮಕ್ಕಳು ಬೃಹತ್ ಆಕಾರದ ರೇಖಾ ಚಿತ್ರದ ಮೂಲಕ ಮೂಡಿಸಲಾದ ಗಣೇಶನ ಮೂರ್ತಿ ರೂಪಕದಲ್ಲಿ ಐದು ಸಾವಿರ ದೀಪಗಳನ್ನು ಬೆಳಗಿಸಿದ್ದಾರೆ.ಇದನ್ನೂ ಓದಿ: ಸ್ವತಃ ದೇವರೇ ಹೇಳಿದ್ರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತು

    ಈ ಮನಮೋಹಕ ದೃಶ್ಯವನ್ನು ಸುಮಾರು ಐನೂರು ಮೀಟರ್ ಎತ್ತರದಿಂದ ಡ್ರೋನ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾಗಿದೆ. ಅದರಲ್ಲೂ ಸಂಜೆಯ ಬಳಿಕ ಮಕ್ಕಳು, ಗಣೇಶನ ಆಕೃತಿಯ ಮೇಲೆ ದೀಪ ಹಚ್ಚಿರುವ ದೃಶ್ಯ ಹೆಚ್ಚು ಆಕರ್ಷಕವಾಗಿ ಸೆರೆ ಹಿಡಿಯಲಾಗಿದೆ.

    ಈ ಬಗ್ಗೆ ಮಾತನಾಡಿದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, 4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯ ರಚಿಸುವ ಮೂಲಕ ಗಣೇಶನ ಹಬ್ಬಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪೂರ್ವ, ಪ್ರಾಥಮಿಕ ಹಂತದಿಂದ ಎಂಟನೆಯ ತರಗತಿವರೆಗಿನ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಗಿದೆ.

    ಈ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿಯನ್ನು ಬೆಳೆಸುವುದರೊಂದಿಗೆ ಅವರಲ್ಲಿ ಅಂತರ್ಗತವಾಗಿರುವ ಕರಕುಶಲ ಸಾಮರ್ಥ್ಯ ಹಾಗೂ ಸೃಜನಶೀಲತೆಯನ್ನು ಅಭಿವ್ಯಕ್ತಗೊಳಿಸಲು ಈ ಕೆಲಸ ಮಾಡಿಸಲಾಗಿದೆ. ಶಾಲೆಯ ಕಲಾ ಮತ್ತು ಕರಕುಶಲ ವಿಭಾಗದ ಶಿಕ್ಷಕ ವಿನೋದ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯ ಮಾಡಲಾಗಿದೆ ಎಂದರು.ಇದನ್ನೂ ಓದಿ:

  • ಶ್ರಾವಣ ಕೊನೆ ಶನಿವಾರ – ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

    ಶ್ರಾವಣ ಕೊನೆ ಶನಿವಾರ – ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

    ಕೊಪ್ಪಳ: ಶ್ರಾವಣ ಕೊನೆಯ ಶನಿವಾರದ ಹಿನ್ನೆಲೆ ಹನುಮನ ಭಕ್ತರ ಸಾಗರವೇ ಅಂಜನಾದ್ರಿಗೆ (Anjanadri) ಹರಿದುಬಂದಿದೆ. ಈ ವೇಳೆ ದೇವಸ್ಥಾನದ ಆವರಣದಲ್ಲಿ ನೂಕುನಗ್ಗಲು ಉಂಟಾಗಿತ್ತು.

    ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕರಾಂಪೂರ ಸಮೀಪ ಇರುವ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದುಬಂದಿತ್ತು.ಇದನ್ನೂ ಓದಿ: ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ

    ಶ್ರಾವಣದ ಕೊನೆಯ ಶನಿವಾರ ಅಂಗವಾಗಿ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿ ದೇವರಿಗೆ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ, ಶ್ರೀರಾಮನಾಮ ಪಠಣ, ಹನುಮಾನ್ ಚಾಲಿಸ್ ಪಠಣ ಸೇರಿದಂತೆ ನಾನಾ ಧಾರ್ಮಿಕ ಪೂಜೆಗಳು ಜರುಗಿದವು. ಸ್ಥಳೀಯ ಭಕ್ತರು ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಗದಗ, ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಸೇರಿದಂತೆ ನಾನಾ ಜಿಲ್ಲೆ ಹಾಗೂ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

    ಸಂಚಾರ ದಟ್ಟಣೆ:
    ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಬೆಟ್ಟದ ಕೆಳಗಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಅಂಜನಾದ್ರಿ ಬೆಟ್ಟದ ಕೆಳಗಡೆಯ ಪಾರ್ಕಿಂಗ್ ಜಾಗ ಭರ್ತಿಯಾಗಿ ರಸ್ತೆಯ ಅಕ್ಕ ಪಕ್ಕದಲ್ಲಿಯೇ ಭಕ್ತರು ವಾಹನಗಳನ್ನು ಪಾರ್ಕಿಂಗ್ ಮಾಡಿಕೊಂಡು ದೇವರ ದರ್ಶನಕ್ಕೆ ಹೋಗಿದ್ದರು. ಹಾಗಾಗಿ ಗಂಗಾವತಿಯಿಂದ ಅಂಜನಾದ್ರಿ ಬೆಟ್ಟದ ಮಾರ್ಗವಾಗಿ ಹುಲಿಗಿಗೆ ಹೋಗುವ ವಾಹನಗಳ ಸಂಚಾರಕ್ಕೆ ಸಾಕಷ್ಟು ತೊಂದರೆ ಉಂಟಾಯಿತು. ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಭಕ್ತರು, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.ಇದನ್ನೂ ಓದಿ: ಮತ್ತೆ ಕಮ್‌ಬ್ಯಾಕ್ ಮಾಡ್ತಾರಾ ವಿರಾಟ್ ಕೊಹ್ಲಿ?

  • ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

    ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

    ಕೊಪ್ಪಳ: ಹಿಂದೂ- ಮುಸ್ಲಿಮರ (Hindu Muslims) ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ (Koppala Police Station) ಎಫ್‌ಐಆರ್‌ ದಾಖಲಾಗಿದೆ.

    ಅನ್ಯಕೋಮಿನ ಯುವಕನಿಂದ ಆಗಸ್ಟ್‌ 3 ರಂದು ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಆಗಿತ್ತು. ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್‌ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನ (Muslims Womens) ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರೋದಾಗಿ ಹೇಳಿದ್ದರು. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಈ ಹಿನ್ನೆಲೆ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್‌ ಕಲಾಂ ದೂರು ನೀಡಿದ್ದು ಯತ್ನಾಳ್‌ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನ ಕೀಳಾಗಿ, ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್

    ಅಬ್ದುಲ್ ರಜಾಕ್‌ಗೆ ಹಿಂಬರಹ
    ಇದೇ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ದೂರು ನೀಡಲು ಬೆಂಗಳೂರಿನ ಅಬ್ದುಲ್ ರಜಾಕ್ ಇಂದು ಕೊಪ್ಪಳಕ್ಕೆ ಬಂದಿದ್ದರು. ಜೊತೆಗೆ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಪೊಲೀಸರು, ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರು ಆಧರಿಸಿ, ಎಫ್ಐಆರ್ ಮಾಡಲಾಗಿದೆ. ಏನಾದರೂ ಹೇಳಿಕೆ ಇದ್ದರೇ ಅದೇ ಆರೋಪ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ‌ಇದನ್ನೂ ಓದಿ:  ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

  • ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

    ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

    ಕೊಪ್ಪಳ: ಶಾಲಾ ಆವರಣಕ್ಕೆ ಏಕಾಏಕಿ ನುಗ್ಗಿದ ನಾಯಿ (Dog), ವಿದ್ಯಾರ್ಥಿ ಹಾಗೂ ಶಿಕ್ಷಕನ ಮೇಲೆ ದಾಳಿ ಮಾಡಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

    ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ನಾಯಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿ ನಂತರ ಶಿಕ್ಷಕನ ಮೇಲೂ ದಾಳಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

    ನಾಯಿಯು ನಿನ್ನೆಯಿಂದ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದ್ದು, ಈಗಾಗಲೇ 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ. ಇದೀಗ ಗಾಯಾಳುಗಳನ್ನು ಸ್ಥಳೀಯ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

  • ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್,  ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    – ಇದೇ ವರ್ಷದಿಂದ ಡ್ಯಾಂ ಗೇಟ್ ಅಳವಡಿಕೆಗೆ ಚಿಂತನೆ

    ಕೊಪ್ಪಳ: ಕಳೆದ ವರ್ಷ ಕಿತ್ತು ಹೋಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಗೇಟ್ ಸೇರಿ ಒಟ್ಟು 8 ಕ್ರಸ್ಟ್‌ ಗೇಟ್ (Crest Gate) ನಿಷ್ಕ್ರಿಯಗೊಂಡಿದ್ದು, ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಹೇಳಿದರು.

    ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

    ತುಂಗಭದ್ರಾ ಜಲಾಶಯದ 11, 18, 20, 24, 27 ಮತ್ತು 28 ಕ್ರಸ್ಟ್ ಗೇಟ್ ಸಂಪೂರ್ಣವಾಗಿ ಜಾಮ್ ಆಗಿದ್ದು, ಮೇಲಕ್ಕೆ ಎತ್ತಲು ಆಗುತ್ತಿಲ್ಲ. ಈ ಎಲ್ಲಾ ಗೇಟ್‌ಗಳು ಅಲ್ಲಿ ಬೆಂಡ್ ಆಗಿದ್ದರಿಂದ ಚೈನ್ ಮೂಲಕ ಗೇಟ್ ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಜೊತೆಗೆ 4ನೇ ಕ್ರಸ್ಟ್‌ ಗೇಟ್ ಕೇವಲ 2 ಫೀಟ್ ಮಾತ್ರ ಮೇಲೆ ಎತ್ತಲು ಸಾಧ್ಯವಾಗುತ್ತಿದೆ. ಇದರಿಂದ ಜಲಾಶಯದ ಒಟ್ಟು 8 ಕ್ರಸ್ಟ್‌ ಗೇಟ್ ಗೆ ಚಲನೆ ಇಲ್ಲದಂತಾಗಿದೆ. ಈ ಕಾರಣಕ್ಕೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಲಾಶಯ ಒಟ್ಟು 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಡ್ಯಾಂ ಭರ್ತಿ ಮಾಡಿದರೆ ಮುಂದೆ ಸಾಕಷ್ಟು ಸವಾಲು ಎದುರಾಗುವ ಸಾಧ್ಯತೆ ಇದೆ. ಒಂದೊಮ್ಮೆ ಏಕಾಏಕಿ 1.50 ಲಕ್ಷ ಕ್ಯೂಸೆಕ್ ಒಳಹರಿವು ಹರಿದು ಬಂದರೆ, ಅದೇ ಪ್ರಮಾಣದ ನೀರನ್ನು ಎಲ್ಲ ಗೇಟ್ ಎತ್ತರಿಸುವ ಮೂಲಕ ನದಿಗೆ ಬಿಡ ಬೇಕಾಗುತ್ತದೆ. ಆದರೆ, ಸುಮಾರು 8 ಕ್ರಸ್ಟ್‌ ಗೇಟ್ ಗಳು ಸದ್ಯಕ್ಕೆ ಎತ್ತಲು ಸಾಧ್ಯವಿಲ್ಲದ ಸ್ಥಿತಿ ತಲುಪಿವೆ. ಹೀಗಾದಾಗ ಡ್ಯಾಂ ಭರ್ತಿ ಮಾಡುವುದು ಸರಿಯಲ್ಲ ಎಂಬ ತಜ್ಞರ ಸಲಹೆಯಂತೆ ಸಂಗ್ರಹ ಸಾಮರ್ಥ್ಯ ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ

    ಮೊದಲಿಗೆ ಎಲ್ಲಾ 33 ಕ್ರಸ್ಟ್‌ ಗೇಟ್ ನಿರ್ಮಾಣಕ್ಕೆ ಒಂದೇ ಟೆಂಡರ್ ಕರೆಯಲಾಗಿತ್ತು. ಆದರೆ ಯಾವುದೇ ಕಂಪನಿ ಟೆಂಡರ್‌ನಲ್ಲಿ ಭಾಗವಹಿಸಲಿಲ್ಲ. ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಎಲ್ಲ ಗೇಟ್ ಅಳವಡಿಕೆಗೆ ಕನಿಷ್ಠ 8 ತಿಂಗಳು ಸಮಯವನ್ನು ಕಂಪನಿ ಕೇಳಿದೆ. ರೈತರೊಂದಿಗೆ ಚರ್ಚೆ ಮಾಡಿ, ಈ ಬಾರಿ ಒಂದು ಬೆಳೆಯ ನಂತರ ಎಲ್ಲ ನೀರು ಹೊರಗೆ ಬಿಟ್ಟು ಗೇಟ್ ಅಳವಡಿಕೆ ಕೆಲಸ ಶುರು ಮಾಡಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ರೈತರೊಂದಿಗೆ ಚರ್ಚೆ ಮಾಡಿ ಕ್ರಮ ವಹಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಯೂರಿಯಾ ಕೊರತೆ ಸಂಪೂರ್ಣವಾಗಿ ನೀಗಿಸಲಾಗಿದೆ. ಸದ್ಯ ಯೂರಿಯಾ ಎಲ್ಲರಿಗೂ ಸಿಗುವಂತೆ ಮಾಡಿದ್ದೇವೆ. ಜೊತೆಗೆ ಸುಮಾರು 2,365 ಟನ್ ದಾಸ್ತಾನು ಉಳಿಸಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಯಾವುದೇ ತೊಂದರೆ ಆಗದಂತೆ ಯೂರಿಯಾ ಪೂರೈಕೆ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಕೊಪ್ಪಳದಲ್ಲಿ ಕೊಲೆಯಾದ ಗವಿಸಿದ್ಧಪ್ಪ ನಾಯಕ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಕೊಪ್ಪಳ ಪೊಲೀಸರು ಎಲ್ಲ ಆರೋಪಿ ಗಳನ್ನು ಬಂಧಿಸಿದ್ದಾರೆ. ಮೃತನ ತಾಯಿ ದೂರಿನ ಹಿನ್ನೆಲೆ ಘಟನೆಗೆ ಕಾರಣರಾದ ಬಾಲಕಿಯನ್ನು ವಿಚಾರಣೆ ಮಾಡಲಾಗಿದೆ. ‌ಸತ್ತ ಮನೆಯಲ್ಲಿ ರಾಜಕಾರಣ ಮಾಡುವುದು ಬಿಜೆಪಿಗೆ ಹೊಸದಲ್ಲ. ಸತ್ತ ಮನೆಯಲ್ಲಿ ರಾಜಕೀಯ ಮಾಡುವುದಕ್ಕಿಂತ ಸಾತ್ವನ ಹೇಳಬೇಕು. ಇದನ್ನು ಬಿಜೆಪಿ ಮುಖಂಡರು ಕಲಿಯಲಿ ಎಂದು ತಿರುಗೇಟು ನೀಡಿದರು.