Tag: ಕೊಯಮತ್ತೂರು

  • ತಮಿಳುನಾಡಿಗೆ ಅಮಿತ್ ಶಾ ಭೇಟಿ – ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಮಿತ್ ಶಾ

    ತಮಿಳುನಾಡಿಗೆ ಅಮಿತ್ ಶಾ ಭೇಟಿ – ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಮಿತ್ ಶಾ

    ಚೆನ್ನೈ: ಕೊಯಮತ್ತೂರಿನ (Coimbatore) ಪೀಲಮೇಡುವಿನಲ್ಲಿ ಹೊಸದಾಗಿ ನಿರ್ಮಿಸಲಾದ ಬಿಜೆಪಿ ಕಚೇರಿಯನ್ನು (BJP Office) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಉದ್ಘಾಟಿಸಿದರು.

    ಎರಡು ದಿನಗಳ ತಮಿಳುನಾಡು (Tamil Nadu) ಭೇಟಿಗಾಗಿ ಮಂಗಳವಾರ ರಾತ್ರಿ ಕೊಯಮತ್ತೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಹಾರಿಸಿ `ಅಮಿತ್ ಶಾ ಗೋ ಬ್ಯಾಕ್’ ಎಂದು ಘೋಷಣೆ ಕೂಗಿ ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಗುಡ್ ನ್ಯೂಸ್

    ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಬಳಿಕ, ಬಿಜೆಪಿ ಕಾರ್ಯಕರ್ತರೊಂದಿಗೆ ರಾಜ್ಯ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಇದನ್ನೂ ಓದಿ: ಮೇ ತಿಂಗಳಲ್ಲಿ ರಷ್ಯಾಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ?

    ಈಶ ಫೌಂಡೇಶನ್ ಆಯೋಜಿಸುತ್ತಿರುವ ಮಹಾ ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಇಂದು ರಾತ್ರಿ ಭಾಗವಹಿಸಲಿದ್ದಾರೆ.

  • Video Viral | ಹಸಿವಿನಿಂದ ಕಾರ್ಮಿಕರ ಮನೆಗೆ ನುಗ್ಗಿ ಅಕ್ಕಿ ತಿಂದ ಆನೆ

    Video Viral | ಹಸಿವಿನಿಂದ ಕಾರ್ಮಿಕರ ಮನೆಗೆ ನುಗ್ಗಿ ಅಕ್ಕಿ ತಿಂದ ಆನೆ

    ಚೆನ್ನೈ: ಕಾಡಂಚಿನ ಗ್ರಾಮಗಳಿಗೆ ಆನೆಗಳು (Wild Elephant) ನುಗ್ಗಿ ದಾಂಧಲೆ ಮಾಡುವುದು ಹೊಸದೇನಲ್ಲ. ಹಾಗೆಯೇ ವಲಸೆ ಕಾರ್ಮಿಕರು ನೆಲೆಸಿದ್ದ ಬಾಡಿಗೆ ಮನೆಗೆ ನುಗ್ಗಿದ ಗಂಡು ಕಾಡಾನೆಯೊಂದು ಆಹಾರ ಪದಾರ್ಥಗಳನ್ನ ತಿಂದು ಹೋದ ಘಟನೆ ತಮಿಳುನಾಡು ಕೊಯಮತ್ತೂರು (Coimbatore) ಜಿಲ್ಲೆಯ ತೆರುಕ್ಕುಪಾಳ್ಯಂನಲ್ಲಿ ನಡೆದಿದೆ.

    ಆನೆಯು ಮನೆಯತ್ತ ನುಗ್ಗಿ ಬರುತ್ತಿರುವುದನ್ನು ಗಮನಿಸಿರುವ ಕಾರ್ಮಿಕರು ಗ್ಯಾಸ್‌ ಸ್ಟೌ ಆಫ್‌ ಮಾಡಿದ್ದಾರೆ, ಭಯಭೀತರಾಗಿ ಮನೆಯ ಮೂಲೆಯಲ್ಲಿ ಅವಿತು ಕುಳಿತಿದ್ದಾರೆ. ಇದನ್ನೂ ಓದಿ: 5 ಗೋವುಗಳನ್ನು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯ ಸಿಕ್ಕಿದ್ರೂ ವಾಹನ ನಂಬರ್‌ ಇಲ್ವಂತೆ – ಕೈ ಚೆಲ್ಲಿದ ಪೊಲೀಸರು

    ಬಳಿಕ ಮನೆಯ ಬಾಗಿಲ ಬಳಿ ಬಂದ ಆನೆ ಸೊಂಡಿಲು ಚಾಚಿ ಅಕ್ಕಿ ಮೂಟೆಯನ್ನು ಎಳೆದುಕೊಂಡಿದೆ. ಗ್ಯಾಸ್‌ ಸಿಲಿಂಡರ್‌ ಸಮೇತ ಮಾಡಿದ್ದ ಅಡುಗೆಯನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದೆ. ಅಕ್ಕಿಯನ್ನೆಲ್ಲ ತಿಂದು ಮುಗಿಸಿದ ಬಳಿಕ ಸ್ಥಳ ಬಿಟ್ಟು ತೆರಳಿದೆ. ಇದನ್ನೂ ಓದಿ: ವಕ್ಫ್‌ ವಿರುದ್ಧ ಅನ್ನದಾತರ ಆಕ್ರೋಶ – ಇಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್‌

    ಈ ದೃಶ್ಯವನ್ನು ಕಾರ್ಮಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದ್ದು, ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಸರಣಿ ಅಪಘಾತ – ಕಾರು ಲಾರಿಯ ಕೆಳಗೆ ಸಿಲುಕಿದ್ರೂ ಪವಾಡ ರೀತಿಯಲ್ಲಿ ಚಾಲಕ ಪಾರು

  • ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ – ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

    ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ – ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

    ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದ (Anna University) ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ತಮಿಳುನಾಡು (Tamilnadu) ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಚಾಟಿಯಲ್ಲಿ ಹೊಡೆದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

    ಇಂದು (ಡಿ.27) ಕೊಯಮತ್ತೂರಿನ (Coimbatore) ನಿವಾಸದ ಮುಂದೆ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸರು ಮತ್ತು ರಾಜ್ಯ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ ಎಂದು ಪ್ರತಿಭಟನೆ ಮೂಲಕ ಖಂಡಿಸಿದ್ದಾರೆ.ಇದನ್ನೂ ಓದಿ: ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಅಬ್ದುಲ್ ರಹಮಾನ್ ಮಕ್ಕಿ ಸಾವು

    ಇದಕ್ಕೂ ಮುನ್ನ ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಜೊತೆಗೆ ಆರು ಬಾರಿ ಚಾಟಿ ಏಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಆರೋಪಿಸಿದ್ದರು.

    ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.ಇದನ್ನೂ ಓದಿ: ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

     

  • ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು

    ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು

    ಚೆನ್ನೈ: ತಮಿಳುನಾಡು ಬಿಜೆಪಿ (Tamil Nadu BJP) ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋತಿದ್ದಕ್ಕೆ ಡಿಎಂಕೆ (DMK) ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಅಣ್ಣಾಮಲೈ ಫೋಟೋ ವನ್ನು ಮೇಕೆ ಕತ್ತಿಗೆ ನೇತು ಹಾಕಿ ನಡು ರಸ್ತೆಗೆ ತಂದು ಒಂದೇ ಏಟಿಗೆ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಫುಲ್‌ ವೈರಲ್‌ ಆಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣ – ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

     

    ಬಿಜೆಪಿ ನಾಯಕ ಅಮರ್‌ ಪ್ರಸಾದ್‌ ರೆಡ್ಡಿ ಅವರು ಈ ವಿಡಿಯೋವನ್ನು ಅಪ್ಲೋಡ್‌ ಮಾಡಿ ಮುಖ್ಯಮಂತ್ರಿ ಸ್ಟಾಲಿನ್‌ ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಿಂದ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು?

    ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 1,18,068 ಮತಗಳ ಅಂತರದಿಂದ ಸೋತಿದ್ದರು. ಡಿಎಂಕೆ ಗಣಪತಿ ರಾಜ್‌ಕುಮಾರ್‌ ಅವರು 5,68,200 ಮತಗಳನ್ನು ಪಡೆದರೆ ಅಣ್ಣಾಮಲೈ 4,50,132 ಮತಗಳನ್ನು ಗಳಿಸಿದ್ದಾರೆ. ಎಐಡಿಎಂಕೆಯ ಸಿಂಗಯ್‌ ಜಿ ರಾಮಚಂದ್ರನ್‌ ಅವರು 2,36,490 ಮತಗಳು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.

     

  • 4 ನೇ ಮಹಡಿಯಿಂದ ಬಿದ್ದು ರಕ್ಷಿಸಲ್ಪಟ್ಟಿದ್ದ ಮಗುವಿನ ತಾಯಿ ಟೆಕ್ಕಿ ಆತ್ಮಹತ್ಯೆ!

    4 ನೇ ಮಹಡಿಯಿಂದ ಬಿದ್ದು ರಕ್ಷಿಸಲ್ಪಟ್ಟಿದ್ದ ಮಗುವಿನ ತಾಯಿ ಟೆಕ್ಕಿ ಆತ್ಮಹತ್ಯೆ!

    ಚೆನ್ನೈ: ಕೆಲದಿನಗಳ ಹಿಂದೆ ಪುಟ್ಟ ಕಂದಮ್ಮವೊಂದು ಅಪಾರ್ಟ್‌ ಮೆಂಟ್‌ನ ಬಾಲ್ಕನಿಯಿಂದ ಸನ್ ಶೇಡ್ ಮೇಲೆ ಬಿದ್ದಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ಇದೀಗ ಈ ಮಿರಾಕಲ್ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಹೌದು. ಆಕಸ್ಮಿಕವಾಗಿ ತನ್ನ ಕೈಯಿಂದ ಜಾರಿ ಮಗು ಅಪಾರ್ಟ್‌ ಮೆಂಟ್‌ ಬಾಲ್ಕನಿಯಲ್ಲಿ (Apartment Balcony) ಬಿದ್ದ ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ನಿಂದನೆ ವ್ಯಕ್ತವಾಗಿದ್ದರಿಂದ ಮನನೊಂದು ಟೆಕ್ಕಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರಿನ (Coimbatore) ಕಾರಮಡೈಯಲ್ಲಿರುವ ತವರು ಮನೆಯಲ್ಲಿ ಭಾನುವಾರ ರಮ್ಯಾ ಸಾವಿನ ದಾರಿ ಹಿಡಿದಿದ್ದಾರೆ.

    ರಮ್ಯಾ (Techie Ramya) ಚೆನ್ನೈನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ವೆಂಕಟೇಶ್ ಕೂಡ ಐಟಿ ಉದ್ಯೋಗಿ. ಎರಡು ವಾರಗಳ ಹಿಂದೆ ರಮ್ಯಾ ಮತ್ತು ಅವರ ಪತಿ ತಮ್ಮ ಮಗುವಿನೊಂದಿಗೆ ಕರಾಮಡೈನಲ್ಲಿರುವ ತಮ್ಮ ತವರು ಮನೆಗೆ ಬಂದಿದ್ದರು. ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ಭಾನುವಾರದಂದು ಪೋಷಕರು ಶುಭ ಸಮಾರಂಭದಲ್ಲಿ ಭಾಗವಹಿಸಲು ಮನೆಯಿಂದ ತೆರಳಿದ್ದರು. ಇತ್ತ ರಮ್ಯಾ ಮನೆಯಲ್ಲಿ ಒಬ್ಬಳೇ ಇದ್ದರು. ಇದೇ ಸಮಯವನ್ನು ನೋಡಿಕೊಂಡ ರಮ್ಯಾ ಆತ್ಮಹತ್ಯೆಯ ನಿರ್ಧಾರ ಮಾಡಿದರು. ಇನ್ನು ಸಮಾರಂಭ ಮುಗಿಸಿ ಹಿಂದಿರುಗಿದ ಪೋಷಕರಿಗೆ ಆಘಾತವೇ ಕಾದಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾರನ್ನು ಪೋಷಕರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

    ಅಂದು ನಡೆದಿದ್ದೇನು..?: ಏಪ್ರಿಲ್ 28 ರಂದು ರಮ್ಯಾ ಅವರ 7 ತಿಂಗಳ ಮಗು ಕೈಜಾರಿ 4ನೇ ಮಹಡಿಯಿಂದ ಮೊದಲ ಮಹಡಿಯ ಸನ್ ಶೇಡ್ ಮೇಲೆ ಬಿದ್ದಿತ್ತು. ಬಳಿಕ ಸ್ಥಳೀಯರು ಸೇರಿ ಮಗುವನ್ನು ರಕ್ಷಿಸಿದ್ದರು. ಇದಾದ ಬಳಿಕ ರಮ್ಯಾ ಸ್ಥಳೀಯರಿಂದ ಹಾಗೂ ಸಾಮಾಜಿಕ ಜಾಲದಲ್ಲಿ ಭಾರೀ ಟಿಕೆಗೆ ಒಳಗಾದರು.

    ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ತಾಯಿಯ ನಿರ್ಲಕ್ಷ್ಯವೇ ಕಾರಣ. ತಾಯಿ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ. ಹೀಗಾಗಿ ಈ ಘಟನೆ ನಡೆಯಲು ತಾಯಿಯೇ ನೇರ ಕಾರಣ ಎಂದೆಲ್ಲ ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಲಾಗಿತ್ತು. ಇದರಿಂದ ರಮ್ಯ ಮನೊಂದಿದ್ದರು. ಇಷ್ಟು ಮಾತ್ರವಲ್ಲದೇ ಕೆಲ ಸುದ್ದಿ ವಾಹಿನಿಗಳಿಗೆ ಬೈಟ್‌ ಕೊಟ್ಟಿದ್ದ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಕೂಡ ತಾಯಿಯ ವೈಫಲ್ಯವೇ ಈ ಘಟನೆಗೆ ಕಾರಣ ಎಂದು ಬಿಂಬಿಸುವಂತಹ ಹೇಳಿಕೆಗಳನ್ನು ನೀಡಿದ್ದರು. ಈ ಎಲ್ಲಾ ಅವಮಾನಗಳು, ಹೇಳಿಕೆಗಳು ರಮ್ಯಾ ಅವರನ್ನು ಖಿನ್ನತೆಗೆ ದೂಡಿತು. ಅಂತಿಮವಾಗಿ ಅವರ ಸಾವಿಗೆ ಕಾರಣವಾಯಿತು.

    ಪ್ರಕರಣ ಸಂಬಂಧ ಕರಮಡೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಶಸ್ತ್ರಚಿಕಿತ್ಸೆ ಬಳಿಕ ಈಶ ಯೋಗ ಕೇಂದ್ರಕ್ಕೆ ಮರಳಿದ ಸದ್ಗುರು – ಜನರಿಂದ ಭವ್ಯ ಸ್ವಾಗತ

    ಶಸ್ತ್ರಚಿಕಿತ್ಸೆ ಬಳಿಕ ಈಶ ಯೋಗ ಕೇಂದ್ರಕ್ಕೆ ಮರಳಿದ ಸದ್ಗುರು – ಜನರಿಂದ ಭವ್ಯ ಸ್ವಾಗತ

    ನವದೆಹಲಿ: ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಇಂದು (ಸೋಮವಾರ) ಈಶ ಯೋಗ ಕೇಂದ್ರಕ್ಕೆ ಮರಳಿದ ಸದ್ಗುರು ಅವರನ್ನು ಕೊಯಮತ್ತೂರು ನಗರದಲ್ಲಿ ಅವರ ಭಕ್ತರು ಸ್ವಾಗತಿಸಿದ್ದಾರೆ.

    ಕೊಯಮತ್ತೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಜನ ಭೇಟಿಯಾಗಿ ಶುಭಾಶಯ ಕೋರಿದ್ದಾರೆ. ಸದ್ಗುರು ಆಗಮನವನ್ನು ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಕೊಯಮತ್ತೂರಿನ ನಿವಾಸಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಈಶ ಕೇಂದ್ರಕ್ಕೆ ಹೋಗುವ ರಸ್ತೆಗಳಲ್ಲಿ ನಿಂತು ಅವರ ದರ್ಶನ ಪಡೆದಿದ್ದಾರೆ. ಇನ್ನೂ ಈಶ ಕೇಂದ್ರದಲ್ಲಿ ಆದಿವಾಸಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸಾಂಪ್ರದಾಯಿಕ ಸಂಗೀತ, ಸುಮಧುರ ಡ್ರಮ್ಸ್ ಮತ್ತು ಜಾನಪದ ಹಾಡುಗಳೊಂದಿಗೆ ಸದ್ಗುರುಗಳನ್ನು ಸ್ವಾಗತಿಸಿದರು. ಇದನ್ನೂ ಓದಿ: ಚುನಾವಣಾ ಖರ್ಚಿಗಾಗಿ ಹೆಚ್‌ಡಿಕೆಗೆ 500 ರೂ. ಹಣ ಕೊಟ್ಟ ಅಭಿಮಾನಿ

    ಸ್ಥಳೀಯ ಥಣಿಕಂಡಿ ಗ್ರಾಮದ ಆದಿವಾಸಿ ಮಹಿಳೆ, ವಿಜಯಾ ಎಂಬವರು ಮಾತನಾಡಿ, ಸದ್ಗುರುಗಳು ಯೋಗ ಸಾಧನೆ ಮೂಲಕ ನಮ್ಮ ಗ್ರಾಮವನ್ನು ಸಂತೋಷ ಮತ್ತು ಆರೋಗ್ಯದ ಗ್ರಾಮವನ್ನಾಗಿ ಪರಿವರ್ತಿಸಿದ್ದಾರೆ. ಅವರ ವೀಡಿಯೋಗಳನ್ನು ಕೇಳುತ್ತಾ, ನನ್ನ ಹಳ್ಳಿಯ ಯುವಕರು ಅಮಲು ಮತ್ತು ಆಲಸ್ಯದಿಂದ ದೂರ ಸರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಅವರ ಶಸ್ತ್ರಚಿಕಿತ್ಸೆಯ ಸುದ್ದಿ ಬಂದಾಗ, ನಾವು ತೀವ್ರ ಕಳವಳಗೊಂಡಿದ್ದೆವು. ಅವರು ಆರೋಗ್ಯವಾಗಿ ಮರಳಿರುವುದು ನಮಗೆ ಖುಷಿ ನೀಡಿದೆ ಎಂದಿದ್ದಾರೆ.

    ಮಾ.27 ರಂದು ನವದೆಹಲಿಯಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೆ ಅವರು ಒಳಗಾಗಿದ್ದರು. ಇದೀಗ ಸುರಕ್ಷಿತವಾಗಿ ಅವರು ಮರಳಿರುವುದು ಅವರ ಅನುಯಾಯಿಗಳಲ್ಲಿ ಸಂಭ್ರಮ ಉಂಟು ಮಾಡಿದೆ. ಜನ ಸ್ವಾಗತ ಕೋರಿರುವ ವೀಡಿಯೋವನ್ನು ಈಶ ಫೌಂಡೇಷನ್ ಹಾಗೂ ಅವರ ಅನುಯಾಯಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 41 ಕೋಟಿ ರೂ. ಆಸ್ತಿ ಘೋಷಿಸಿದ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್

  • ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ

    ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ

    ಲೋಕಸಭೆ (Lok Sabha) ಚುನಾವಣೆಗೆ ಇನ್ನೂ ಆರೇಳು ತಿಂಗಳು ಬಾಕಿ ಇರುವಾಗಲೇ ನಟ ಕಮಲ್ ಹಾಸನ್ , ಚುನಾವಣೆಯಲ್ಲಿ (Election) ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಈಗಿನಿಂದಲೂ ಆರಂಭಿಸಿದ್ದಾರಂತೆ.

    ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಮಲ್ ಹಾಸನ್ ಕೊಯಮತ್ತೂರು (Coimbatore) ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಡಿಮೆ ಅಂತರದ ಮತಗಳಿಂದ ಸೋಲು ಕಂಡಿದ್ದರು. ಈ ಕ್ಷೇತ್ರದ ನಾಡಿಮಿಡಿತ ಅರಿತವರು ಆಗಿದ್ದರಿಂದ ಇದೇ ಕ್ಷೇತ್ರದಲ್ಲೇ ಲೋಕಸಭಾ ಚುನಾವಣೆಯನ್ನು ಎದುರಿಸಲು ಅವರು ಸಜ್ಜಾಗಿದ್ದಾರಂತೆ.

     

    ಒಂದು ಕಡೆ ಚುನಾವಣೆ ಸಿದ್ಧತೆ ಮತ್ತೊಂದು ಕಡೆ ಹೊಸ ಸಿನಿಮಾದ ಚಿತ್ರೀಕರಣ. ಹೀಗೆ ಬಿಡುವಿಲ್ಲದಂತೆ ಕಮಲ್ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ತಮ್ಮದೇ ಆದ ತಂಡವೊಂದನ್ನು ಮಾಡಿಕೊಂಡು, ಚುನಾವಣಾ ಪೂರ್ವ ತಯಾರಿಯನ್ನೂ ಅವರು ಆರಂಭಿಸಿದ್ದಾರಂತೆ. ಹಲವು ಬಾರಿ ಈ ಕ್ಷೇತ್ರಕ್ಕೂ ಅವರು ಹೋಗಿ ಬಂದಿದ್ದಾರೆ ಎನ್ನುತ್ತಾರೆ ಕಮಲ್ ಆಪ್ತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಅವರ ತಾಯಿ ನಿಧನ

    ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಅವರ ತಾಯಿ ನಿಧನ

    ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa) ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿ, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ನಟ ಸತ್ಯರಾಜ್ (Sathyaraj) ಅವರ ತಾಯಿ ನಾಥಂಬಳ್ ಕಾಳಿಂಗರಾಯರ್ (Nanthabal) ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

    ನಿನ್ನೆ ಸಂಜೆ 4 ಗಂಟೆಯ ಹೊತ್ತಿಗೆ ನಾಥಂಬಳ್ ಅವರು ಕೊಯಮತ್ತೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ (Passed Away) ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇಂದು ಅವರ ಅಂತ್ಯ ಸಂಸ್ಕಾರ ಕೊಯಮತ್ತೂರಿನಲ್ಲೇ (Coimbatore) ನಡೆಯಲಿದೆ. ನಾಥಂಬಳ್ ಅವರಿಗೆ  ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನಿದ್ದಾನೆ.

    ತಾಯಿ ನಿಧನರಾದಾಗ ಸತ್ಯರಾಜ್ ಅವರು ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಶೂಟಿಂಗ್ ನಿಲ್ಲಿಸಿ ತೆರಳಿದ್ದಾರೆ. ಸತ್ಯರಾಜ್ ಅವರ ತಾಯಿಯ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಸತ್ಯರಾಜ್ ಬಹುಭಾಷಾ ನಟನಾಗಿದ್ದರಿಂದ ನಾನಾ ಚಿತ್ರರಂಗಗಳು ಶೋಕ ವ್ಯಕ್ತ ಪಡಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆ ಚುನಾವಣಾ ಕಣಕ್ಕೆ ನಟ ಕಮಲ್ ಹಾಸನ್

    ಲೋಕಸಭೆ ಚುನಾವಣಾ ಕಣಕ್ಕೆ ನಟ ಕಮಲ್ ಹಾಸನ್

    ಲೋಕಸಭೆ (Lok Sabha) ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದ್ದರೂ, ತಮಿಳು ನಾಡಿನ ನಾನಾ ಪಕ್ಷಗಳು  ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿವೆ. ಅಭ್ಯರ್ಥಿಗಳು, ಕ್ಷೇತ್ರ, ಹಿನ್ನೆಲೆಯಾಗಿ ಪ್ರಚಾರ ಹೀಗೆ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿವೆ. ಅಂತೆಯೇ ಈ ಬಾರಿ ಹೆಸರಾಂತ ನಟ ಕಮಲ್ ಹಾಸನ್ ಕೂಡ ಚುನಾವಣೆ ಕಣದಲ್ಲಿ ಇರಲಿದ್ದಾರೆ ಎಂದು ಹೇಳಾಗುತ್ತಿದೆ.

    ಚುನಾವಣೆ (Election) ಕಣಕ್ಕೆ ಇಳಿಯುವುದು ಕಮಲ್‍ (Kamal Haasan)ಗೆ ಹೊಸದಲ್ಲ. ಈಗಾಗಲೇ ಒಂದು ಬಾರಿ ಚುನಾವಣೆಯನ್ನು ಎದುರಿಸಿ ಸೋತಿದ್ದಾರೆ. ಈ ಬಾರಿ ಗೆದ್ದೇ ಗೆಲ್ಲುವ ವಿಶ್ವಾಸದಿಂದ ಕೊಯಮತ್ತೂರು ಕ್ಷೇತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಆ ಕ್ಷೇತ್ರದಲ್ಲಿ ಒಂದಷ್ಟು ಕೆಲಸವನ್ನೂ ಮಾಡುತ್ತಿದ್ದಾರಂತೆ. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್

    ಕಮಲ್ ಹಾಸನ್ ತಮ್ಮದೇ ಎಂ.ಎನ್.ಎಂ (M.N.M) ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಪಕ್ಷದ ರಾಜ್ಯಮಟ್ಟದ ಪ್ರಚಾರದ ಅಭಿಯಾನವನ್ನು ನಿನ್ನೆಯಿಂದ ಕೊಯಮತ್ತೂರು (Coimbatore) ದಕ್ಷಿಣ ಕ್ಷೇತ್ರದಿಂದ ಆರಂಭಿಸಿದ್ದಾರೆ. ವಿಧಾನಸಭೆಯ ಒಟ್ಟು 234 ಕ್ಷೇತ್ರಗಳಲ್ಲೂ ಪ್ರಚಾರ ಮತ್ತು ಕಾರ್ಯಕರ್ತರ ಕುಂದುಕೊರತೆಗಳನ್ನು ಈ ಅಭಿಯಾನ ಪಟ್ಟಿ ಮಾಡಲಿದೆ.

     

    ಕೊಯಮತ್ತೂರು ಕ್ಷೇತ್ರದಿಂದಲೇ ಕಮಲ್ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮನವಿಯಾಗಿದೆಯಂತೆ. ಹೀಗಾಗಿ ಕಮಲ್ ಅದೇ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

    ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

    ಚೆನ್ನೈ: ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕ (Coimbatore DIG) ವಿಜಯಕುಮಾರ್ (IPS) ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶುಕ್ರವಾರ ಬೆಳಗ್ಗೆ ಸುಮಾರು 6:15ರ ವೇಳೆಗೆ ವಿಜಯಕುಮಾರ್ ರೇಸ್ ಕೋರ್ಸ್ ಬಳಿಯ ರೆಡ್ ಫೀಲ್ಡ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಗನ್‌ಮ್ಯಾನ್‌ನಿಂದ ಪಿಸ್ತೂಲ್ ಅನ್ನು ಪಡೆದು ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಜಯಕುಮಾರ್ (Vijayakumar) ತೀವ್ರ ಖಿನ್ನತೆಗೆ ಒಳಗಾಗಿದ್ದರು ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರಿಗೆ ಕೌನ್ಸೆಲಿಂಗ್ ಕೂಡಾ ನಡೆಯುತ್ತಿತ್ತು ಹಾಗೂ ಕೆಲ ದಿನಗಳ ಹಿಂದಷ್ಟೇ ಅವರ ಕುಟುಂಬವನ್ನು ಚೆನ್ನೈಯಿಂದ ಕೊಯಮತ್ತೂರಿಗೆ ಕರೆತರಲಾಗಿತ್ತು. ಇದನ್ನೂ ಓದಿ: ನಿತ್ಯಾನಂದನ ಕೈಲಾಸ ದೇಶಕ್ಕೆ ನಟಿ ರಂಜಿತಾ ಪ್ರಧಾನಿ

    2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ಈ ವರ್ಷದ ಜನವರಿಯಲ್ಲಿ ಕೊಯಮತ್ತೂರು ವ್ಯಾಪ್ತಿಯ ಡಿಐಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಅವರು ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

    ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿ, ಅಧಿಕಾರಿ ವಿಜಯಕುಮಾರ್ ಅವರ ಅಕಾಲಿಕ ಮರಣದ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಗಿದೆ. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ನಿಧನ ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಪೊಲೀಸ್ ಪಡೆಯಲ್ಲಿರುವ ಸ್ನೇಹಿತರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶಿಸ್ತು ಕಾಪಾಡಲು ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಶಿಕ್ಷಕಿ – ಶಾಲೆಯಿಂದ ವಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]