Tag: ಕೊಯ್ನಾ ಜಲಾಶಯ

  • ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

    ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

    ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ಮಳೆ ಅಬ್ಬರದಿಂದ ಕೊಯ್ನಾ (Koyna) ಜಲಾಶಯ ಸಂಪೂರ್ಣ ಭರ್ತಿ ಆಗಿದ್ದು ಕೃಷ್ಣಾ ನದಿ (Krishna River) ತೀರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ.

    ಭರ್ತಿಯಾದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಈಗಾಗಲೇ 13 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದ್ದು ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ನದಿ ತೀರದಲ್ಲಿ ಪ್ರವಾಹ ಆತಂಕ ಹೆಚ್ಚಾಗಿದೆ. ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲೂ ಭಾರೀ ಪ್ರಮಾಣದ ಏರಿಕೆಯಾಗಿದೆ. ಇದನ್ನೂ ಓದಿ : ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ – ಮಹಿಳೆ ಸಾವು

    ಕೃಷ್ಣಾ ನದಿಗೆ 1 ಲಕ್ಷ 13 ಸಾವಿರ ಕ್ಯುಸೆಕ್ ಒಳ ಹರಿವು ಇದೆ. ಎರಡನೇ ಬಾರಿ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲೂಕುಗಳ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಜೋರಾಗಿದೆ. ಇದನ್ನೂ ಓದಿ : ದರ್ಶನ್‌ ವಿಶೇಷ ಆತಿಥ್ಯಕ್ಕೆ ಪ್ರಭಾವಿ ಸಚಿವರ ಆದೇಶ?

  • ಕೊಯ್ನಾ ಡ್ಯಾಂನಿಂದ  21 ಸಾವಿರ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಬಿಡುಗಡೆ – ಚಿಕ್ಕೋಡಿ, ಬಾಗಲಕೋಟೆಯಲ್ಲಿ ಪ್ರವಾಹ ಭೀತಿ

    ಕೊಯ್ನಾ ಡ್ಯಾಂನಿಂದ 21 ಸಾವಿರ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಬಿಡುಗಡೆ – ಚಿಕ್ಕೋಡಿ, ಬಾಗಲಕೋಟೆಯಲ್ಲಿ ಪ್ರವಾಹ ಭೀತಿ

    ಚಿಕ್ಕೋಡಿ/ ಬಾಗಲಕೋಟೆ: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ರಣಮಳೆ ಸುರಿಯುತ್ತಿರುವ ಕಾರಣ ಅಧಿಕೃತವಾಗಿ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ (Koyna Dam) ಕೃಷ್ಣ ನದಿಗೆ (Krishna River) 21 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

    ನೀರು ಬಿಡುಗಡೆ ಮಾಡಿದ ಪರಿಣಾಮ ಚಿಕ್ಕೋಡಿ (Chikkodi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಮತ್ತೊಮ್ಮೆ ಪ್ರವಾಹದ (Flood) ಭೀತಿ ಎದುರಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

    ಸದ್ಯಕ್ಕೆ ಕೃಷ್ಣಾ ನದಿಯಲ್ಲಿ 2.05 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಅಪಾಯದ ಮಟ್ಟವನ್ನು ಮೀರಿ ನದಿ ಹರಿಯುತ್ತಿದೆ. ಈಗಾಗಲೇ ಕೆಲವು ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಜಲಾವೃತವಾಗಿದ್ದು ನದಿ ದಂಡೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

    ಕೊಯ್ನಾ ಜಲಾಶಯ 105 ಟಿಎಂಸಿ ಸಾಮರ್ಥ್ಯದ ಡ್ಯಾಮ್ ಇದಾಗಿದ್ದು ಕಳೆದ 15 ದಿನಗಳ ನಿರಂತರ ಮಳೆಯಿಂದ ಪ್ರತಿಶತ 80ರಷ್ಟು ತುಂಬಿದರಿಂದ ಇವತ್ತು ಅಧಿಕೃತವಾಗಿ ಕೃಷ್ಣಾ ನದಿಗೆ 21ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ನಾಳೆಯೂ ಕೂಡ ಆ ಭಾಗದಲ್ಲಿ ಮಳೆ ಮುಂದವರೆದರೆ ಮತ್ತಷ್ಟು ನೀರು ನದಿಗೆ ಬಿಡುಗಡೆಯಾಗಲಿದೆ.

     

  • ಕೊಯ್ನಾ ಜಲಾಶಯದಿಂದ  40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

    ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

    ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

    ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಬೆಳಗಾವಿ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ

    ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 104 ಟಿಎಂಸಿಗಳಷ್ಟು ಭರ್ತಿಯಾಗಿದೆ. ಸದ್ಯ ಕೊಯ್ನಾ ಜಲಾಶಯದ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅದರ ಜೊತೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲೂ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.  ಇದನ್ನೂ ಓದಿ: ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್

  • ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ

    ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ

    ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.

    ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, ವಾರಣಾ-140ಮಿ.ಮೀ, ಕಾಳಮ್ಮವಾಡಿ-75ಮಿ.ಮೀ ಮತ್ತು ರಾಧಾನಗರಿಯಲ್ಲಿ -58ಮಿ.ಮೀ ಮಳೆಯಾಗಿರುವ ವರದಿಯಾಗಿದೆ.

    ಪಶ್ಚಿಮ ಘಟಗಳಲ್ಲಿ ಸತತ ಮಳೆಯಿಂದಾಗಿ ಕೊಯ್ನಾ ಜಲಾಶಯವು ಈಗಾಗಲೆ 86 ಟಿಎಂಸಿ ಭರ್ತಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಇರುವ ಕೊಯ್ನಾ ಜಲಾಶಯ ಇದಾಗಿದ್ದು, ಕೊಯ್ನಾ ಜಲಾಶಯದಲ್ಲಿ ಭೂ ಕಂಪನವಾದ ಹಿನ್ನೆಲೆ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದ್ದು ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಕೃಷ್ಣ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.

    ಸದ್ಯ ಕೃಷ್ಣಾ ನದಿಗೆ 96 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಿಂದ ಇಂದು ಬಿಟ್ಟಿರುವ ನೀರು ಕರ್ನಾಟಕ ರಾಜ್ಯದ ಕೃಷ್ಣಾ ನದಿಗೆ ಮೂರ್ನಾಲ್ಕು ದಿನಗಳ ಬಳಿಕ ಸೇರಿಕೊಳ್ಳಲಿದೆ. ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಂದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಲಿದೆ.