Tag: ಕೊರೊನ

  • ಜನ ಗುಳೆ ಹೋಗುವುದನ್ನು ತಪ್ಪಿಸಲು ಅಧಿಕಾರಿಗಳಿಂದ ಹರಸಹಾಸ

    ಜನ ಗುಳೆ ಹೋಗುವುದನ್ನು ತಪ್ಪಿಸಲು ಅಧಿಕಾರಿಗಳಿಂದ ಹರಸಹಾಸ

    – ನರೇಗಾ ಯೋಜನೆ ಸದ್ಬಳಕೆಗೆ ಮುಂದಾದ ಅಧಿಕಾರಿಗಳು

    ಯಾದಗಿರಿ: ಜಿಲ್ಲೆಯ ಜನ ಬೆಂಗಳೂರು, ಮುಂಬೈ ಹಾಗೂ ಪುಣೆಗೆ ಗೂಳೆ ಹೋಗುವುದನ್ನು ತಪ್ಪಿಸಲು, ನರೇಗಾ ಯೋಜನೆ ಅಡಿ ಅವರ ಊರಲ್ಲೇ ಕೆಲಸ ನೀಡಲು ಜಿ.ಪಂ ಮುಂದಾಗಿದೆ.

    ಗ್ರಾಪಂಚಾಯ್ತಿ ವ್ಯಾಪ್ತಿಯಲ್ಲಿ ಉಳು ತೆಗೆವುದು, ಬಸಿಗೌಲಿ ಸ್ವಚ್ಛತೆ, ಬದು ನಿರ್ಮಾಣ ಹಾಗೂ ಕೃಷಿ ಹೊಂಡ ಕೆಲಸಗಳು ನಡೆಯುತ್ತಿವೆ. ಒಂದು ಕುಟುಂಬಕ್ಕೆ 100 ದಿನ ಕೆಲಸ ಕೊಟ್ಟಿದ್ದು, ಪ್ರತಿಯೊಬ್ಬರಿಗೆ ದಿನಕ್ಕೆ 289 ರೂಪಾಯಿ ಕೂಲಿ ಸಿಗುತ್ತದೆ. ಅಲ್ಲದೇ ಒಂದು ವಾರದ ನಂತರ ನೇರವಾಗಿ ಅವರ ಖಾತೆ ಹಣ ಜಮೆಯಾಗುತ್ತದೆ. ಇದನ್ನೂ ಓದಿ: ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    ವಲಸೆ ಹೋದಾಗ ಕಟ್ಟಡ ಕೆಲಸ ಮಾಡುವಾಗ ಅನಾಹುತಗಳು ಸಂಭವಿಸುತ್ತವೆ. ಹೀಗಾಗಿ ಇಲ್ಲೇ ನರೇಗಾದಲ್ಲಿ ಕೆಲಸ ಕೊಡಲಾಗಿದೆ. ಉತ್ತಮವಾಗಿ ಕೆಲಸವೂ ನಡೆಯುತ್ತಿದೆ. ಬಸ್, ರೈಲಿನಲ್ಲಿ ಮೂಲಕ ಗುಳೆ ಹೋಗುವ ಜನರನ್ನು, ತಡೆದು ಅವರಿಗೆ ಜಾಗೃತಿ ಮೂಡಿಸಿ, ಜಿಲ್ಲೆಯಲ್ಲಿಯೆ ದುಡಿಯುವಂತೆ ಮನವೊಲಿಸಲು ಮುಂದಾಗಿ ಕೆಲವನ್ನು ಕೊಡುತ್ತಿದ್ದಾರೆ.

  • ಸೋಂಕಿತರ ರಂಜನೆಗಾಗಿ ರಸಮಂಜರಿ-ಹಾಡಿಗೆ ತಲೆದೂಗಿದ ಸೋಂಕಿತರು

    ಸೋಂಕಿತರ ರಂಜನೆಗಾಗಿ ರಸಮಂಜರಿ-ಹಾಡಿಗೆ ತಲೆದೂಗಿದ ಸೋಂಕಿತರು

    ತುಮಕೂರು: ಕೋವಿಡ್ ಕೇರ್ ಸೆಂಟರಲ್ಲಿ ಸೋಂಕಿತರ ರಂಜನೆಗಾಗಿ ರಸಮಂಜರಿ ನಡೆಸಲಾಗಿದೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಕೇಂದ್ರದಲ್ಲಿ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ರಿಯಾಲಿಟಿ ಶೋ ಗಾಯಕ ಕಂಬದ ರಂಗಯ್ಯ ಗೊಂಬೆ ಹೇಳತೈತೆ ಹಾಡು ಸೇರಿದಂತೆ ಹಲವು ಹಾಡು ಹಾಡಿ ಸೋಂಕಿತರಿಗೆ ರಂಜಿಸಿದ್ದಾರೆ. ಅದೇ ರೀತಿ ಮಧುಗಿರಿ ಎಸಿ ಸೋಮಪ್ಪ ಕೂಡ ಹಳೆ ಸಿನೆಮಾ ಹಾಡನ್ನು ಹಾಡಿ ತಲೆದೂಗುವಂತೆ ಮಾಡಿದ್ದಾರೆ.

    ಕೋವಿಡ್ ಕೇರ್ ಸೆಂಟರಲ್ಲಿ 80 ಕ್ಕೂ ಹೆಚ್ಚು ಸೋಂಕಿತರಿದ್ದು ಎಲ್ಲರ ಮಾನಸಿಕ ಆರೋಗ್ಯ ವೃದ್ದಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಧುಗಿರಿ ತಾಲೂಕಿನಲ್ಲಿ 04 ಕೋವಿಡ್ ಕೇರ್ ಸೆಂಟರ್ ಇದ್ದು ತಾಲೂಕು ಆಡಳಿತ ಸೋಂಕಿತರ ಮಾನಸಿಕ ಆರೋಗ್ಯ ವೃದ್ಧಿಗಾಗಿ ಈ ರೀತಿಯ ಕಾರ್ಯ ಕ್ರಮ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

    ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

    ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.

  • ವ್ಯಾಕ್ಸಿನ್‍ಗಾಗಿ ಮುಗಿ ಬಿದ್ದ ಜನ- ಲಸಿಕಾ ಕೇಂದ್ರದಲ್ಲಿ ಜನ ಜಂಗುಳಿ

    ವ್ಯಾಕ್ಸಿನ್‍ಗಾಗಿ ಮುಗಿ ಬಿದ್ದ ಜನ- ಲಸಿಕಾ ಕೇಂದ್ರದಲ್ಲಿ ಜನ ಜಂಗುಳಿ

    ಮಂಗಳೂರು: ಜಿಲ್ಲೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ವ್ಯಾಕ್ಸಿನ್‍ಗಾಗಿ ಪುಂಜಾಲಕಟ್ಟೆ ಲಸಿಕಾ ಕೇಂದ್ರದಲ್ಲಿ ಜನ ಮುಗಿ ಬಿದ್ದ ದೃಶ್ಯ ಕಂಡುಬಂದಿದೆ. ಇದನ್ನೂ ಓದಿ: ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯಕ್ಕೆ ಅಸಲಿ ಕಾರಣವೇನು ಗೊತ್ತಾ?

    ರಾಜ್ಯದಲ್ಲೇ ನಿನ್ನೆ ಎರಡನೇ ಅತೀ ಹೆಚ್ಚು ವ್ಯಾಕ್ಸಿನೇಷನ್ ಆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ವ್ಯಾಕ್ಸಿನ್‍ಗಾಗಿ ಜನ ಮುಗಿ ಬೀಳುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಬೇಡಿಕೆ ಹೆಚ್ಚಾಗಿದೆ. ಬೆಳ್ತಂಗಡಿಯ ಪುಂಜಾಲಕಟ್ಟೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಜನ ವ್ಯಾಕ್ಸಿನ್‍ಗಾಗಿ ಇಂದು ಮುಗಿ ಬಿದ್ದಿದ್ದರು. ಇಂದು ಕೋವ್ಯಾಕ್ಸಿನ್ ಎರಡನೇ ಡೋಸ್ ನೀಡಲಾಗುತ್ತಿದ್ದು, ಆದರೆ ಜನ ಮೊದಲನೇ ಡೋಸ್ ಸಿಗುತ್ತೆ ಎಂದು ಎಲ್ಲಾ ಕಡೆಗಳಲ್ಲಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಇಂದಿನಿಂದ ಎಲ್ಲಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮುಕ್ತವಾಗಿ ನೀಡುತ್ತಿದ್ದು, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಶೀಲ್ಡ್‍ನ್ನು ಮೊದಲನೇ ಡೋಸ್ ನೀಡಲಾಗುತ್ತಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ

    ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,44,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

    ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.

  • ಫೋಟೋ ಮೇಲೆ ಹಾಲು ಸುರಿಬೇಡಿ, ಹಸಿದವರಿಗೆ ನೀಡಿ- ಸೋನು ಸೂದ್

    ಫೋಟೋ ಮೇಲೆ ಹಾಲು ಸುರಿಬೇಡಿ, ಹಸಿದವರಿಗೆ ನೀಡಿ- ಸೋನು ಸೂದ್

    ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

    ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ ಅಭಿಷೇಕ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೇ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿರುವ ಸೋನು ಸೂದ್, ಹಾಲನ್ನು ಹಾಳು ಮಾಡಬೇಡಿ ಅಗತ್ಯ ಇರುವವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.

    ಸೋನು ಸೂದ್ ಬಳಿ ಕಷ್ಟ ಹೇಳಿಕೊಂಡರೆ ಅದಕ್ಕೆ ಖಂಡಿತ ಪರಿಹಾರ ಸಿಗುತ್ತದೆ ಎಂಬ ಭರವಸೆ ಜನರಲ್ಲಿ ಮೂಡಿದೆ. ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ಅವರನ್ನು ಜನರು ದೇವರ ರೀತಿ ನೋಡುತ್ತಾರೆ. ತಮಗೆ ಜನಿಸಿದ ಮಕ್ಕಳಿಗೆ ಸೋನು ಸೂದ್ ಎಂದು ಹೆಸರಿಟ್ಟು, ಸೋನು ಅವರಿಗೆ ದೇವಸ್ಥಾನ, ಹಾಲಿನ ಅಭಿಷೇಕ ಹೀಗೆ ಹಲವು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿದವರೂ ಇದ್ದಾರೆ.

  • ಚಿಕಿತ್ಸೆ ಪಡೆಯುತ್ತಿರುವಾಗಲೇ ಗುಣಲಕ್ಷಣಗಳಿಲ್ಲದೆ ಬ್ಲಾಕ್ ಫಂಗಸ್ ಪತ್ತೆ

    ಚಿಕಿತ್ಸೆ ಪಡೆಯುತ್ತಿರುವಾಗಲೇ ಗುಣಲಕ್ಷಣಗಳಿಲ್ಲದೆ ಬ್ಲಾಕ್ ಫಂಗಸ್ ಪತ್ತೆ

    ಚಿಕ್ಕಮಗಳೂರು: ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಕೊರೊನಾ ರೋಗಿಗೆ ಬ್ಲಾಕ್ ಫಂಗಸ್‍ಗೆ ಒಳಗಾಗಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ನಡೆದಿದೆ.

    ಕಡೂರು ತಾಲೂಕಿನ ಹಳ್ಳಿಯೊಂದರ ತಮ್ಮಯ್ಯ (45) ಅವರಿಗೆ ಕಳೆದ ನಾಲ್ಕೈದು ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಕಡೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಬ್ಲಾಕ್ ಫಂಗಸ್ ಇರುವುದು ಪತ್ತೆಯಾಗಿದೆ.

    ಸೋಂಕಿತ ತಮ್ಮಯ್ಯಗೆ ಬ್ಲಾಕ್ ಫಂಗಸ್‍ನ ಯಾವುದೇ ಗುಣಲಕ್ಷಣಗಳಿಲ್ಲ, ಆರೋಗ್ಯವಾಗಿದ್ದಾರೆ.  ಕೊರೊನಾ ಸೋಂಕಿನ ಲಕ್ಷಣಗಳಿದ್ದವು. ಆದರೆ, ಸಿಟಿ ಸ್ಕ್ಯಾನ್‍ನಲ್ಲಿ ಅವರಿಗೆ ಬ್ಲಾಕ್ ಫಂಗಸ್ ಇರೋದು ಖಚಿತವಾಗಿದೆ.

    ಚಿಕ್ಕಮಗಳೂರಿನಿಂದ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾದಿಂದ ಗುಣಮುಖರಾದವರಿಗೆ ಬ್ಲಾಕ್ ಫಂಗಸ್ ಕಾಡಲಿದೆ ಎಂಬ ಸುದ್ದಿಯ ಮಧ್ಯೆ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಬ್ಲಾಕ್ ಫಂಗಸ್ ಪತ್ತೆಯಾಗಿರುವುದು ಆತಂಕ ಹುಟ್ಟಿಸಿದೆ. ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾದ ಮೊದಲ ಕೇಸ್ ಇದಾಗಿದೆ.

  • ಸ್ವಂತ ಖರ್ಚಿನಲ್ಲಿ ಊರಿನ ಜನರಿಗೆ ಮಾಸ್ಕ್, ಸ್ಯಾನಿಟೈಸರ್ ಉಚಿತವಾಗಿ ನೀಡಿದ ಯುವಕರು

    ಸ್ವಂತ ಖರ್ಚಿನಲ್ಲಿ ಊರಿನ ಜನರಿಗೆ ಮಾಸ್ಕ್, ಸ್ಯಾನಿಟೈಸರ್ ಉಚಿತವಾಗಿ ನೀಡಿದ ಯುವಕರು

    ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚಿಗೆ ಗ್ರಾಮೀಣ ಭಾಗದಲ್ಲಿ ಕೊರೊನ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗ್ರಾಮೀಣ ಭಾಗದ ಯುವಕರು ಜಿಲ್ಲಾಡಳಿತ ಮಾಡುವ ಕೆಲಸವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿ ಮಾದರಿಯಾಗಿದ್ದಾರೆ.

    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮುದೂನುರು ಗ್ರಾಮದ ಯುವಕ ಕೃಷ್ಣಾರೆಡ್ಡಿ ಮತ್ತು ಆತನ ಸ್ನೇಹಿತರು ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಮುದೂನುರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 4 ಗ್ರಾಮಗಳು ಬರುತ್ತಿವೆ. ಇತ್ತೀಚಿಗೆ ಈ ಭಾಗದಲ್ಲಿ ಪಾಸಿಟಿವ್ ಸಂಖ್ಯೆ ಜಾಸ್ತಿ ಬರುತ್ತಿವೆ. ಹೀಗಾಗಿ ಈ ಯುವಕರು ತಮ್ಮ ಸ್ವಂತ ಖರ್ಚಿನಲ್ಲಿ ಸಾವಿರಾರು ಮಾಸ್ಕ್ ಮತ್ತು ಸ್ಯಾನಿಟೈಸರ್ ಖರೀದಿ ಮಾಡಿದ್ದಾರೆ. ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಉಚಿತವಾಗಿ ನೀಡುವ ಮೂಲಕವಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಜೊತೆಗೆ ತಾವೇ ಸ್ವತಃ ಮನೆಗೆ ತೆರಳಿ ಕೊರೊನ ಜಾಗೃತಿ ಮೂಡಿಸುತ್ತಿದ್ದಾರೆ. ಯುವಕರೆಲ್ಲರೂ ಕೊರೊನ ಟೆಸ್ಟ್ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದ ಬಳಿಕವೇ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಗ್ರಾಮದ ಎಲ್ಲಾ ಮನೆಗಳಿಗೆ ತೆರಳುವ ಯುವಕರು ಪ್ರತಿ ಮನೆಯಲ್ಲಿನ ಎಲ್ಲಾ ಸದಸ್ಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಿ ಕೊರೊನ ಬಗ್ಗೆ ತಿಳಿ ಹೇಳುತ್ತಿದ್ದಾರೆ.

    ಕೃಷಿ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆ, ಜಮೀನಿನಲ್ಲಿ ಕೆಲಸ ಮಾಡುವ ಕೂಲಿಕಾರರಿಗೂ ಕೂಡ ಉಚಿತ ಸ್ಯಾನಿಟೈಸರ್ ನೀಡುತ್ತಿದ್ದಾರೆ. ಒಂದು ಗ್ರಾಮ ಪಂಚಾಯತಿ ಮಾಡಬೇಕಿದ್ದ ಕಾರ್ಯವನ್ನು ಯುವಕರ ತಂಡವೊಂದು ಯಾವುದೇ ಫಲಾಪೇಕ್ಷ ಇಲ್ಲದೆ ಮಾಡುತ್ತಿರುವುದು ಜನರ ಮೆಚ್ಚುಗೆ ಕಾರಣವಾಗಿದೆ.

  • ಯಾರೋ ಸತ್ತರೆ ಸರ್ಕಾರ ರಜೆ ಕೊಡುತ್ತಿತ್ತು, ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ: ಜಿಮ್ ರವಿ

    ಯಾರೋ ಸತ್ತರೆ ಸರ್ಕಾರ ರಜೆ ಕೊಡುತ್ತಿತ್ತು, ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ: ಜಿಮ್ ರವಿ

    ಬೆಂಗಳೂರು: ಕೊರೊನ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಲೆಬ್ರಿಟಿಗಳು ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ತಮ್ಮವರನ್ನ ಕಳೆದುಕೊಂಡು ಅನೇಕರು ಕಷ್ಟ ಪಡುತ್ತಿದ್ದಾರೆ. ನಟ ಜಿಮ್ ರವಿ ತನ್ನ ಸ್ನೇಹಿತರೊಬ್ಬರು ನಿಧಿನರಾಗಿದ್ದರು. ಈ ವೇಳೆ ರುದ್ರಭೂಮಿಗೆಯಲ್ಲಿ ರವಿ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

    ಮೃತರ ಅಂತ್ಯಕ್ರಿಯೆಗಾಗಿ ಕುಟುಂಬದವರು ಸಾಲುಗಟ್ಟಿ ನಿಂತಿರುವ ದೃಶ್ಯ ನೋಡಿದರೆ ಮನ ಕಲಕುತ್ತದೆ. ವೀಡಿಯೋದಲ್ಲಿ ರವಿ ಅವರು ಸ್ಮಶಾನದ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ನೂರಾರು ಶವಗಳನ್ನು ಸುಡುತ್ತಿರುವ ದೃಶ್ಯ ಭೀಕರತೆಯನ್ನು ಕಣ್ಣಿಗೆ ಕಟ್ಟುತ್ತದೆ.

    ಸಾವಿರಾರು ಜನರು ಸಾಯುತ್ತಿದ್ದಾರೆ ನೋಡಿ. ಇವತ್ತು ನನ್ನ ಸ್ನೇಹಿತರು ತೀರಿಕೊಂಡರು. ಅವರ ಅಂತ್ಯಕ್ರೀಯೆಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ತುಂಬಾ ದುಃಖವಾಗುತ್ತದೆ. ಎಲ್ಲರೂ ಮನೆಯಲ್ಲಿಯೇ ಇರಿ. ಆಗ ನಮಗೆ ಒಳ್ಳೆಯದಾಗುತ್ತದೆ. ತಂದೆ-ತಾಯಿಯನ್ನು ನೀವು ಕಾಪಾಡಿಕೊಳ್ಳಬಹುದು. ಇವತ್ತು ಬೆಂಗಳೂರಿನ ಪರಿಸ್ಥಿತಿ ಹೀಗಾಗಿದೆ. ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಸಾಮಾಜಿ ಅಂತರವನ್ನು ಕಾಪಾಡಿಕೊಳ್ಳಿ ಎಂದಿದ್ದಾರೆ.

    ಇಲ್ಲಿ ಸಾಲು ಸಾಲು ಶವಗಳು ಬರುತ್ತಿವೆ. ಎಲ್ಲರೂ ನಿಮ್ಮ ಕ್ಷೇಮವನ್ನು ಕಾಪಾಡಿಕೊಳ್ಳಿ. ಮಾಸ್ಕ್ ಸ್ಯಾನಿಟೈಸರ್ ಉಪಯೋಗಿಸಿ, ಉಡಾಫೆ ಮಾತುಬೇಡ. ಸರ್ಕಾರ ಯಾರೋ ಸತ್ತರು ಎಂದು ರಜೆ ಕೊಡುತ್ತಿತ್ತು. ಆದರೆ ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ. ಯೋಚನೆ ಮಾಡಿ ನಮ್ಮ ಪ್ರಾಣ ನಮ್ಮ ಕೈಯಲ್ಲಿದೆ ಎಂದು ಜಿಮ್ ರವಿ ಎಚ್ಚರಿಕೆಯನ್ನು ಹೇಳಿದ್ದಾರೆ.

    ಚಿತ್ರರಂಗದ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಕೊರೊನಾ ಕುರಿತಾಗಿ ಹಲವರು ಜಾಗೃತಿ ಮೂಡಿಸುವ ಸಂದೇಶವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

  • ಚರ್ಚೆ ಸಾಕು, ಉಚಿತ ಲಸಿಕೆ ಕೊಡಿ- ರಾಹುಲ್ ಗಾಂಧಿ

    ಚರ್ಚೆ ಸಾಕು, ಉಚಿತ ಲಸಿಕೆ ಕೊಡಿ- ರಾಹುಲ್ ಗಾಂಧಿ

    ನವದೆಹಲಿ: ದೇಶದ ಜನರಿಗೆ ಉಚಿತ ಲಸಿಕೆಯನ್ನು ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

    ಚರ್ಚೆ ಬಹಳ ಆಗೋಗಿದೆ. ದೇಶದ ಜನರಿಗೆ ಉಚಿತವಾಗಿ ಲಸಿಕೆ ಸಿಗಬೇಕು ಅಷ್ಟೇ… ಬಾತ್ ಖತಂ. ಭಾರತವನ್ನು ಬಿಜೆಪಿ ವ್ಯವಸ್ಥೆಗೆ ಬಲಿಯಾಗಿಸಬೇಡಿ ಎಂದು ಟ್ವೀಟ್ ಮಾಡುವ ಮೂಲಕವಾಗಿ ಉಚಿತ ವ್ಯಾಕ್ಸಿನ್ ನೀಡಲು ಒತ್ತಾಯಿಸಿದ್ದಾರೆ.

    ಕೊರೊನ ಸೋಂಕು ನಿಂಯತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಗಾಗ ಕೆಂದ್ರ ಸರ್ಕಾರದ ವಿರುದ್ಧವಾಗಿ ಟ್ವೀಟ್ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಸಂದರ್ಭದಲ್ಲಿ ಜನರ ಬಗ್ಗೆ ಮಾತನಾಡುವುದು ಅವಶ್ಯಕವಾಗಿದೆ. ಕಠೀಣ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ನಾಯಕರ ಅವಶ್ಯಕತೆ ಇದೆ. ಕಾಂಗ್ರೆಸ್‍ನ ಎಲ್ಲಾ ಸದಸ್ಯರು ರಾಜಕೀಯ ಕೆಲಸವನ್ನು ಬಿಟ್ಟು ಜನರಿಗೆ ನೆರವನ್ನು ಒದಗಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ನಿನ್ನೆ ಮನವಿ ಮಾಡಿದ್ದರು.

    ಮಹಾರಾಷ್ಟ್ರ, ಗುಜರಾತ್, ಒಡಿಶಾ ಮತ್ತು ರಾಜಸ್ಥಾನಗಳು ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಹೇಳಿವೆ ಹೀಗಾಗಿ ಭಾರತವು ಉಚಿತ ಲಸಿಕೆಯನ್ನು ನೀಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

  • ಕೊರೊನಾ ವೈರಸ್ ಭೀತಿ – ಹಾಸನದಲ್ಲಿ ಓರ್ವ ಆಸ್ಪತ್ರೆಗೆ ದಾಖಲು

    ಕೊರೊನಾ ವೈರಸ್ ಭೀತಿ – ಹಾಸನದಲ್ಲಿ ಓರ್ವ ಆಸ್ಪತ್ರೆಗೆ ದಾಖಲು

    ಹಾಸನ: ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಇತ್ತೀಚೆಗಷ್ಟೇ ಫ್ರಾನ್ಸ್ ನಿಂದ ಹಾಸನಕ್ಕೆ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು ವೈದ್ಯರು ತೀವ್ರ ತಪಾಸಣೆ ನಡೆಸಿದ್ದಾರೆ.

    ಹಾಸನ ಹಿಮ್ಸ್ ನಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಫ್ರಾನ್ಸ್ ಗೆ ಪ್ರವಾಸಕ್ಕೆ ಹೋಗಿದ್ದ ಯುವಕ ಕೆಲ ದಿನಗಳ ಹಿಂದೆ ಹಾಸನಕ್ಕೆ ಮರಳಿದ್ದ. ಆತನಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು.

    ಈ ಹಿನ್ನೆಲೆಯಲ್ಲಿ ಹಾಸನದ ಹಿಮ್ಸ್ ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಸನದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತಪಾಸಣಾ ಕೇಂದ್ರ ತೆರೆದಿರುವ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯ ವೈದ್ಯಕೀಯ ನೆರವು ಮುಂದುವರಿಸಿದೆ.