Tag: ಕೊರೊನಾ ಚಿಕಿತ್ಸೆ

  • ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ

    ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ

    ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ. ಈ ಹಿಂದೆ ಹೊರಡಿಸಿದ್ದ ಆದೇಶವನ್ನ ಸರ್ಕಾರವನ್ನು ಮರು ಅನುಷ್ಠಾನ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಪ್ರತಿ ಖಾಸಗಿ ಆಸ್ಪತ್ರೆ ಶೇ.50ರಷ್ಟು ಬೆಡ್ ಗಳನ್ನ ಸೋಂಕಿತರಿಗೆ ಮೀಸಲಿಡಬೇಕೆಂದು ಸೂಚಿಸಿತ್ತು.

    ಜನರಲ್ ವಾರ್ಡ್‍ಗೆ 5,200 ರೂಪಾಯಿ, ಆಕ್ಸಿಜನ್ ವ್ಯವಸ್ಥೆಯುಳ್ಳ ವಾರ್ಡ್‍ಗೆ ನಿತ್ಯ 7 ಸಾವಿರ ರೂಪಾಯಿ, ಐಸಿಯು ವಾರ್ಡ್‍ಗೆ 8,500 ರೂ. ಮತ್ತು ಐಸಿಯು ಜೊತೆಗೆ ವೆಂಟಿಲೇಟರ್ ಉಳ್ಳ ವಾರ್ಡ್‍ಗೆ 10 ಸಾವಿರ ನಿಗದಿ ಮಾಡಲಾಗಿದೆ.

    ಉಳಿದಂತೆ ನಗದು ಹಾಗೂ ವಿಮಾ ಯೋಜನೆ ಹೊಂದಿರುವವರಿಗೆ ಜನರಲ್ ವಾರ್ಡ್‍ಗೆ ದಿನಕ್ಕೆ 10 ಸಾವಿರ ರೂಪಾಯಿ, ಆಕ್ಸಿಜನ್ ವ್ಯವಸ್ಥೆಯುಳ್ಳ ವಾರ್ಡ್‍ಗೆ 12 ಸಾವಿರ ರೂ., ಐಸಿಯು ವಾರ್ಡ್‍ಗೆ 15,000 ರೂಪಾಯಿ, ಐಸಿಯು ಮತ್ತು ವೆಂಟಿಲೇಟರ್ ಹೊಂದಿರುವ ವಾರ್ಡ್‍ಗೆ 25,000 ರೂಪಾಯಿ ಫಿಕ್ಸ್ ಮಾಡಲಾಗಿದೆ.

  • ‘ಕೊರೊನಾ ಬಗ್ಗೆ ಭಯ ಬೇಡ, ಎಚ್ಚರ ಇರಲಿ’

    ‘ಕೊರೊನಾ ಬಗ್ಗೆ ಭಯ ಬೇಡ, ಎಚ್ಚರ ಇರಲಿ’

    -ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ: ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಮಾತ್ರವಲ್ಲದೇ ಜನ ನಾಯಕರಿಗೂ ಕೊರೊನಾ ಸೋಂಕು ದೃಢಪಟ್ಟಿರುವುದು ಜಿಲ್ಲೆಯಲ್ಲಿ ಹೆಚ್ಚಿನ ಭೀತಿ ಮೂಡಿಸಿದೆ.

    ಕೊರೊನಾ ಬಗ್ಗೆ ಭಯ ಬೇಡ ಎಚ್ಚರ ಇರಲಿ ಎಂದು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

    ನನಗೆ ಕೆಲ ದಿನಗಳಿಂದ ತೀವ್ರ ಜ್ವರ ಬಂದಿತ್ತು. ಹೀಗಾಗಿ ನಾನು ಸ್ವ-ಇಚ್ಛೆಯಿಂದ ಮಂಗಳೂರಿನಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದೆ. ಅದರಲ್ಲಿ ನನಗೆ ಕೊರೊನಾ ಸೋಂಕು ಇರುವುದು ದೃಢಪಟ್ಟು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಂದೇ ದಿನದಲ್ಲಿ ಚೇತರಿಸಿಕೊಂಡಿದ್ದೇನೆ. ಹೀಗಾಗಿ ಜನ ಕೊರೊನಾ ಸೋಂಕಿನ ಬಗ್ಗೆ ಭಯಪಡದೇ ಎಚ್ಚರಿಕೆಯಿಂದ ಇದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಬೇಕು ಆಸ್ಪತ್ರೆಯಿಂದಲೇ ಜನರಿಗೆ ವಿಡಿಯೋ ಮಾಡಿ ಮನವಿ ಮಾಡಿದ್ದಾರೆ.

  • ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಿ- ಪಿಎಂಗೆ ಸಂಸದ ಚಂದ್ರಶೇಖರ್ ಪತ್ರ

    ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಿ- ಪಿಎಂಗೆ ಸಂಸದ ಚಂದ್ರಶೇಖರ್ ಪತ್ರ

    – ಪತ್ರದಲ್ಲಿ ಕರ್ನಾಟಕ ಮಾದರಿಯ ಉಲ್ಲೇಖ

    ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಬಡ ವರ್ಗದ ಜನರು ಮತ್ತು ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಉಚಿತ ಚಿಕಿತ್ಸೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.

    ಈ ಸಂಬಂಧ ಪತ್ರ ಬರೆದಿರುವ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಸ್ವತಃ ಹಣ ಖರ್ಚು ಮಾಡಿ ಚಿಕಿತ್ಸೆಗೆ ಪಡೆದುಕೊಳ್ಳಲು ಸಾಧ್ಯವಿಲ್ಲ. ಈ ಹಿನ್ನೆಲೆ ಕೇಂದ್ರ ಸರ್ಕಾರ ಬಿಪಿಎಲ್ ಪಡಿತರ ಕಾರ್ಡು ಹೊಂದಿದ ಕುಟುಂಬಗಳಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸುವಂತೆ ಮನವಿ ಮಾಡಿದ್ದಾರೆ.

    ಪತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಅವರು ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸಲಹೆ ನೀಡಿದ್ದೆ. ಕರ್ನಾಟಕ ಸರ್ಕಾರ ತಮ್ಮ ಸಲಹೆಯನ್ನು ಒಪ್ಪಿ ಉಚಿತ ಚಿಕಿತ್ಸೆ ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಂಡು ದೇಶಾದ್ಯಂತ ಬಡವರಿಗೆ ಉಚಿತವಾಗಿ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

    ಕರ್ನಾಟಕ ಸರ್ಕಾರ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲೆಂದು ‘ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್’ ರಚಿಸಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಜಿ.ಸಿ. ಚಂದ್ರಶೇಖರ್, ಇದೇ ರೀತಿ ದೇಶವ್ಯಾಪ್ತಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.

  • ಉದ್ಯಾನ ನಗರಿನಲ್ಲಿ ಕೊರೊನಾ ರಣಕೇಕೆ- ದ್ವಿಶತಕದತ್ತ ಹೆಜ್ಜೆ

    ಉದ್ಯಾನ ನಗರಿನಲ್ಲಿ ಕೊರೊನಾ ರಣಕೇಕೆ- ದ್ವಿಶತಕದತ್ತ ಹೆಜ್ಜೆ

    ಬೆಂಗಳೂರು: ಮಹಾಮಾರಿ ಕೊರೊನಾ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಹೆಚ್ಚಿಸಿದ್ದು, ಇಂದು ಬರೋಬ್ಬರಿ ಇಂದು 196 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1272ಕ್ಕೇರಿದೆ.

    ನಗರದಲ್ಲಿ ಸಮುದಾಯಕ್ಕೆ ಕೊರೊನಾ ಹರಡಿದೆಯೇ ಎಂಬ ಅನುಮಾನ ಮೂಡಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 64ಕ್ಕೆ ತಲುಪಿದೆ. ನಗರದಲ್ಲಿ 31 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ರಾಜ್ಯದಲ್ಲಿ ಒಂದು ಒಟ್ಟು ಐವರು ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 77 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಾವನ್ನಪ್ಪಿದವರ ವಿವರ:
    ರೋಗಿ ಸಂಖ್ಯೆ 6,553, 53 ವರ್ಷದ ಮಹಿಳೆ. ಬೆಂಗಳೂರು ನಗರ ನಿವಾಸಿಯಾಗಿದ್ದು, ವಿಷಮ ಶೀತ ಜ್ವರದಿಂದ ಬಳಲುತ್ತಿದ್ದರು. ಜ್ವರ, ನೆಗಡಿ ಮತ್ತು ಕೆಮ್ಮಿನಿಂದ ಬಳುತ್ತಿದ್ದ ಮಹಿಳೆ ಜೂನ್ 10 ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಜೂನ್ 20 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

    ರೋಗಿ ಸಂಖ್ಯೆ 8872, 62 ವರ್ಷದ ಪುರುಷ. ವಿಷಮ ಶೀತ ಜ್ವರದಿಂದ ಬಳುತ್ತಿದ್ದ ವ್ಯಕ್ತಿ, ಮಧುಮೇಹ ಸಮಸ್ಯೆಯಿಂದ ಜೂನ್ 16 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

    ರೋಗಿ ಸಂಖ್ಯೆ 8880, 55 ವರ್ಷದ ಪುರುಷ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ನ್ಯುಮೋನಿಯಾ, ಬೊಜ್ಜು ಹಾಗೂ ದೀರ್ಘ ಕಾಲದಿಂದ ಮದ್ಯ ವ್ಯಸನಿಯಾಗಿದ್ದರು. ಜೂನ್ 18 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್ 20 ರಂದು ಸಾವನ್ನಪ್ಪಿದ್ದರು.

    ರೋಗಿ ಸಂಖ್ಯೆ 9149, 70 ವರ್ಷದ ವೃದ್ಧ, ಕಂಟೈನ್‍ಮೆಂಟ್ ಝೋನ್ ಸಂಪರ್ಕ ಹೊಂದಿದ್ದ ಈ ವ್ಯಕ್ತಿ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಜೂನ್ 18 ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಸಾವನ್ನಪಿದ್ದರು.

    ರೋಗಿ ಸಂಖ್ಯೆ 9150, 46 ವರ್ಷದ ಪುರುಷ. ದೇಹದಲ್ಲಿ ರೋಗ ನಿರೋಧ ಶಕ್ತಿ ದೌರ್ಬಲ್ಯದಿಂದ ಬಳಲುತ್ತಿದ್ದ ಇವರು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಜೂನ್ 17 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜೂನ್ 18 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಇವರಿಗೆ ಸೋಂಕು ಹರಡಿದ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಪತ್ತೆ ಮಾಡುತ್ತಿದ್ದಾರೆ.

    ಇತ್ತ ಬೆಂಗಳೂರಿನಲ್ಲಿ ಕೋವಿಡ್ ಸಂಖ್ಯೆಗಳ ಹೆಚ್ಚಳದಿಂದ ಎಚ್ಚೆತ್ತಿರುವ ಆರೋಗ್ಯ ಇಲಾಖೆ, ಸೋಂಕು ಪೀಡಿತ ಪ್ರದೇಶಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲು ಮುಂದಾಗಿದೆ. ಆಟೋ ಚಾಲಕರು. ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಹೈ-ರಿಸ್ಕ್ ಹೊಂದಿರುವ ಜನರಿಗೆ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ದಿನದಲ್ಲಿ 100ಕ್ಕೂ ಹೆಚ್ಚು ಮಂದಿಯೊಂದಿಗೆ ಸಂಪರ್ಕ ಕಲ್ಪಿಸುವ ವ್ಯಕ್ತಿಗಳಿಗೆ ರ್ಯಾಂಡಮ್ ಟೆಸ್ಟ್ ಮಾಡಲು ಯೋಜಿಸಲಾಗಿದೆ.