Tag: ಕೊರೊನಾ ಮಾರ್ಗಸೂಚಿ

  • ಸ್ಪೆಷಲ್ ಮಾಸ್ಕ್ ರಿಲೀಸ್ – ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು: ಆರ್.ಅಶೋಕ್

    ಸ್ಪೆಷಲ್ ಮಾಸ್ಕ್ ರಿಲೀಸ್ – ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು: ಆರ್.ಅಶೋಕ್

    ಬೆಳಗಾವಿ: ಬಾರ್ ಹಾಗೂ ಪಬ್‌ಗಳಲ್ಲಿ (Bar And Pub) ಕುಳಿತು ಡ್ರಿಂಕ್ಸ್ (Drinks) ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್‌ಗಳನ್ನು (Speical Mask) ಬಿಡುಗಡೆ ಮಾಡಲಾಗಿದೆ. ಮಾಲೀಕರು ಅಥವಾ ನಿರ್ವಾಹಕರು ಆ ಮಾಸ್ಕ್‌ಗಳನ್ನು ಪಡೆದು ಬರುವ ಗ್ರಾಹಕರಿಗೆ ನೀಡಬೇಕು. ಇದರಿಂದ ಅವರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ (R Ashoka) ತಿಳಿಸಿದ್ದಾರೆ.

    ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧದ ಕುರಿತು ಮಾತನಾಡಿದ ಸಚಿವರು, ಬಾರ್, ಪಬ್‌ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ. ಬರುವ ಗ್ರಾಹಕರಿಗೆ ಆ ಮಾಸ್ಕ್ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗೋದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: 74 ದಿನದ ಸಿಜೆಐ ಅವಧಿಯಲ್ಲಿ ಯುಯು ಲಲಿತ್‌ಗಿದ್ರು 40+ ಸಿಬ್ಬಂದಿ

    ಜನರ ಪ್ರಾಣ ಉಳಿದರೆ ಎಲ್ಲಾ ಸಿಗುತ್ತದೆ. ಜನರ ಪ್ರಾಣಕ್ಕೇ ಕಂಟಕ ಬಂದ್ರೆ ಏನು ಸಿಗುತ್ತದೆ? ನಿಮಗ್ಯಾರಿಗೋ ಬಾರ್ ವ್ಯಾಪಾರ ಆಗಬೇಕು ಅಂತಾ ಜನರ ಪ್ರಾಣ ತೆಗೆಯೋದು ಒಳ್ಳೆಯದಲ್ಲ. ನಾನು ಅವರಲ್ಲಿ ವಿನಂತಿ ಮಾಡ್ತೀನಿ, ದಯಮಾಡಿ ಸಹಕಾರ ನೀಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ – ಫೈಜರ್ ಲಸಿಕೆ ನೀಡಲು ನಿರ್ಧಾರ

    ಕೋವಿಡ್ (Covid 19) ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಕೋವಿಡ್ ಯೂನಿಟ್ಸ್, ಆಕ್ಸಿಜನ್ ಪ್ಲಾಂಟ್, ಐಸಿಯು (ICU) ಘಟಕ ಸೇರಿದಂತೆ ಎಲ್ಲ ಸೌಲಭ್ಯಗಳ ಪರಿಶೀಲನೆ ನಡೆಸಲಾಗಿದೆ. ಅಂತೆಯೇ ರಾಜ್ಯದ ಎಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಬೇಕು. ಎಲ್ಲಿಯೂ ಸಹ ಆಕ್ಸಿಜನ್, ಅಂಬುಲೆನ್ಸ್ ಹಾಗೂ ಔಷಧಗಳ ಕೊರತೆ ಆಗಬಾರದು ಎಂದು ಸಲಹೆ ನೀಡಿದ್ದಾರೆ.

    ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಮಾತನಾಡಿ, ಏನೋ ಮಾಡಲು ಹೋಗಿ, ಇನ್ನೇನೋ ಆಗೋದು ಬೇಡ. ಎಲ್ಲರೂ ಜಾಗ್ರತೆಯಿಂದ ಇದ್ದು, ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ಬೆಂಗಳೂರು: ಚೀನಾದಲ್ಲಿ ಡೆಡ್ಲಿ ಕೊರೊನಾ (Corona Virus) ರೂಪಾಂತರಿಯ ಅಬ್ಬರ ಜೋರಾಗಿದ್ದು ಚೀನಾ ಅಕ್ಷರಶಃ ನಲುಗಿ ಹೋಗಿದೆ. ಈಗಾಗಲೇ ಭಾರತದಲ್ಲೂ (India) ಚೀನಾದ ಬಿಎಫ್.7 ಉಪತಳಿ (BF7 Variant) ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ (Government Of Karnataka) ಹಲವು ಕ್ರಮಗಳನ್ನ ಜಾರಿಗೊಳಿಸಿದೆ.

    ಮುಂದಿನ 3 ತಿಂಗಳು ಅಲರ್ಟ್ ಆಗಿರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳನ್ನ ಎಚ್ಚರಿಸಿದ್ದು, ನಮ್ಮ ರಾಜ್ಯವೂ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಕರಿನೆರಳು ಆವರಿಸಿದೆ. ಪ್ರತಿ ವಾರವೂ ಕೊರೊನಾ ಮಾರ್ಗಸೂಚಿಗಳ (Covid Guidelines) ಅವಲೋಕನ ಮಾಡಿಕೊಳ್ಳಲಾಗುತ್ತಿದ್ದು, ಕೊಂಚ ಕೇಸ್ ಏರಿಕೆಯಾದ್ರೂ ಮುಂದಿನ 90 ದಿನಗಳಿಗೆ ನಿಯಮಗಳು ನಿರ್ಣಾಯಕವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಧಾರ್ಮಿಕ ಕಾರ್ಯಕ್ರಮಗಳ ಮೇಲೂ ನಿಗಾ: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಕ್ರಮಗಳು ಏನೇನು ಬರಲಿವೆ?: ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ (Sankranti Festival) ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಫೈನ್ – 2 ದಿನಗಳಲ್ಲಿ 1.5 ಕೋಟಿ ರೂ. ಸಂಗ್ರಹ

    ಕೋವಿಡ್ ಫೈನ್ – 2 ದಿನಗಳಲ್ಲಿ 1.5 ಕೋಟಿ ರೂ. ಸಂಗ್ರಹ

    ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ದೆಹಲಿಯ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೆ ತರುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ.

    ಪೂರ್ವ ಹಾಗೂ ಉತ್ತರ ದೆಹಲಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಜನರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಡಿಸೆಂಬರ್ 22 ಹಾಗೂ 23 ರಂದು ಕೇವಲ ಎರಡು ದಿನಗಳಲ್ಲಿ ಜನರಿಂದ 1.5 ಕೋಟಿ ರೂ. ಫೈನ್ ಅನ್ನು ಸಂಗ್ರಹ ಮಾಡಲಾಗಿದೆ. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ವಂಚಿಸಿದ್ದ ನೇಪಾಳಿ ಪ್ರಜೆಗಳ ಬಂಧನ

    ಕೇವಲ ಎರಡು ದಿನಗಳಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರದAತಹ ನಿಯಮಗಳನ್ನು ಪಾಲಿಸದ ಒಟ್ಟು 7,778 ಜನರ ಮೇಲೆ ಕ್ರಮ ಕೈಗೊಂಡು 1.5 ಕೋಟಿ ರೂ. ದಂಡವನ್ನು ಸಂಗ್ರಹ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಇದರೊಂದಿಗೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಘಿಸಿದ 163 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಮಂತ ಬೇಡ, ಕಷ್ಟದಲ್ಲಿರುವವನ ಜೊತೆ ಡೇಟಿಂಗ್ ಮಾಡಲು ಇಷ್ಟ: ಹರ್ನಾಜ್ ಸಂಧು

  • ನೈಟ್ ಕರ್ಫ್ಯೂ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸಿಲ್ಲ: ಅಶೋಕ್

    ನೈಟ್ ಕರ್ಫ್ಯೂ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸಿಲ್ಲ: ಅಶೋಕ್

    ಬೆಂಗಳೂರು: ನೈಟ್ ಕರ್ಫ್ಯೂ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಓಮಿಕ್ರಾನ್ ತಡೆಗೆ ನೈಟ್ ಕರ್ಫ್ಯೂ ಹೇರುವುದರ ಬಗ್ಗೆ ಯಾವುದೇ ಚಿಂತನೆಯನ್ನು ನಡೆಸಿಲ್ಲ. ಬದಲಿಗೆ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

    ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸುವುದರ ಕುರಿತು ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಓಮಿಕ್ರಾನ್ ಆತಂಕದಿಂದಾಗಿ ಕ್ರಿಸ್ ಮಸ್ ಹಾಗೂ ಹೊಸವರ್ಷಕ್ಕೆ ನಿರ್ಬಂಧ ಅಗತ್ಯವಾಗಿದೆ. ಓಮಿಕ್ರಾನ್ ಬೇರೆ ಬೇರೆ ದೇಶದಲ್ಲಿ ಹೆಚ್ಚು ಹರಡುತ್ತಿದ್ದು, ಇಂದು ಬೆಂಗಳೂರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯನ್ನು ಪಡೆಯಲಾಗಿದೆ. ಹೊಸವರ್ಷ ಆಚರಣೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

    ಈಗಾಗಲೇ ಸಭೆ ಸಮಾರಂಭಗಳಿಗೆ 500 ಜನರು ಸೇರಬಹುದು ಎಂದು ಹೇಳಲಾಗಿದೆ. ಆದರೆ ಕ್ರಿಸ್‌ಮಸ್ ಸಂದರ್ಭದಲ್ಲಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುವವರ ಸಂಖ್ಯೆ ಹೆಚ್ಚಿರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ನಾಳೆಯೊಳಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಹೊಸವರ್ಷ ಆಚರಣೆ ಸಂದರ್ಭದಲ್ಲಿ ಸ್ಟ್ರೀಟ್ ಸಂಭ್ರಮದ ಬಗ್ಗೆ ಮಾತನಾಡಿದ ಅವರು, ಸ್ಟ್ರೀಟ್ ಸಂಭ್ರಮದ ಬಗ್ಗೆ ಹೆಚ್ಚು ಭಯವಿದೆ. ಈ ಸಂದರ್ಭದಲ್ಲಿ ತಬ್ಬಿಕೊಂಡು ಮುದ್ದಾಡುವ ಸಂಭ್ರಮ ಜೋರಾಗಿರುತ್ತದೆ. ಇದರಿಂದಾಗಿ ಕೊರೊನಾ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಸ್ಟ್ರೀಟ್ ಸಂಭ್ರಮಕ್ಕೆ ಬ್ರೇಕ್ ಹಾಕುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುವುದು ಎಂದರು. ದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

    ಎಂಜಿ ರೋಡ್, ಬ್ರಿಗೇಡ್ ರೋಡ್ ಸಂಭ್ರಮಕ್ಕೆ ನಿರ್ಬಂಧ ಹಾಕುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿಬಂಧನೆಯನ್ನು ತರುತ್ತೇವೆ. ಅದಕ್ಕೆ ಕಡಿವಾಣ ಹಾಕಬೇಕಾ ಅಥವಾ ನಿಬಂಧನೆ ಹೇರಬೇಕಾ ಎನ್ನುವುದರ ಕುರಿತು ಚರ್ಚೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದರು.

  • ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ತಿರುವನಂತಪುರಂ: ಸುಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ.

    ಕೊರೊನಾ 2ನೇ ಅಲೆ ಮಧ್ಯೆ ತಿಂಗಳ ಪೂಜೆಯನ್ನು ನೆರವೇರಿಸಲು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ದೇವಸ್ಥಾನವನ್ನು ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್‌ ದೇವಸ್ವಂ ಮಂಡಳಿ ತಿಳಿಸಿದೆ.

    ಕೊರೊನಾ ಹೊಸ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಸರ್ಟಿಫಿಕೇಟ್ ಅಥವಾ 48 ಗಂಟೆಗಳೊಳಗೆ ಟೆಸ್ಟ್ ಮಾಡಿಸಿದ ಕೋವಿಡ್-19 ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಅಲ್ಲದೆ ಆನ್‍ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

    ಕೇರಳ ಪೊಲೀಸರು ಹಾಗೂ ದೇವಸ್ವಂ ಮಂಡಳಿ ಕಳೆದ ವರ್ಷ ಹೊಸ ಆನ್‍ಲೈನ್ ಪೋರ್ಟಲ್ ಲಾಂಚ್ ಮಾಡಿದ್ದು, ಇದರ ಮೂಲಕವೇ ವಚ್ರ್ಯೂಲ್ ಕ್ಯೂ, ಪ್ರಸಾದ, ಪೂಜೆ, ವಾಸ್ತವ್ಯ, ಕಾಣಿಕೆ ಬುಕ್ ಮಾಡಬೇಕು. ಈ ಮೂಲಕ ಗಲಾಟೆ ಮುಕ್ತ ದರ್ಶನಕ್ಕೆ ದೇವಸ್ಥಾನ ಮಂಡಳಿ ವ್ಯವಸ್ಥೆ ಕಲ್ಪಿಸಿದೆ. ರಿಜಿಸ್ಟ್ರೇಶನ್ ಮಾಡಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯವಾಗಿದೆ.

  • ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

    ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

    ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ.

    ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಚರ್ಚೆ ನಡೆಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿ ಸರಿಯಾಗಿ ತಿಳಿಸಿದರು. ಅಗತ್ಯ ವಸ್ತುಗಳ ಅಂಗಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಆದರೆ ವ್ಯಾಪಾರಿಗಳು ಮಾತ್ರ ನಾವು ಮೊದಲೇ ಕಳೆದ ವರ್ಷದ ನಷ್ಟದಿಂದಲೇ ಹೊರಬಂದಿಲ್ಲ. ಅಂಥದ್ರಲ್ಲಿ ಏಕಾಏಕಿ ಬಂದು ಅಂಗಡಿ ಬಂದ್ ಮಾಡಿಸಿದ್ದು ಸರಿಯಲ್ಲ. ಮದುವೆಗಾಗಿ ಬಟ್ಟೆ ಖರೀದಿಗೆ ಜನ ಬರುತಿದ್ದು, ಸರ್ಕಾರದ ನಿಮಯದಂತೆ ನಾವು ನಡೆದುಕೊಳ್ಳುತ್ತೇವೆ, ಸಾಮಾಜಿಕ ಅಂತರ ಕಾಯ್ದುಕೊಂಡು ಅಂಗಡಿ ನಡೆಸುತ್ತೇವೆ ಎಂದು ಡಿಸಿಗೆ ಮನವಿ ಮಾಡಿಕೊಂಡರು.

  • ಕೊರೊನಾ ವಾರಿಯರ್ಸ್‍ಗೆ ಗೌರವ- ಡಾ.ಮಂಜುನಾಥ್‍ರಿಂದ ಮೈಸೂರು ದಸರಾ ಉದ್ಘಾಟನೆ

    ಕೊರೊನಾ ವಾರಿಯರ್ಸ್‍ಗೆ ಗೌರವ- ಡಾ.ಮಂಜುನಾಥ್‍ರಿಂದ ಮೈಸೂರು ದಸರಾ ಉದ್ಘಾಟನೆ

    ಮೈಸೂರು: ದಸರಾ-2020 ಉದ್ಘಾಟಕರ ಆಯ್ಕೆ ಅಂತಿಮವಾಗಿದ್ದು, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಕೊರೊನಾ ವಾರಿಯರ್ ಹಿನ್ನೆಲೆ ಡಾ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಡಾ.ಮಂಜುನಾಥ್ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ.

    ಅಲ್ಲದೆ ಮರಗಮ್ಮ (ಪೌರಕಾರ್ಮಿಕರು), ಡಾ.ನವೀನ್ (ಆರೋಗ್ಯ ಇಲಾಖೆ ವೈದ್ಯಾಧಿಕಾರಿ), ರುಕ್ಮಿಣಿ (ಸ್ಟಾಫ್ ನರ್ಸ್), ನೂರ್ ಜಾನ್ (ಆಶಾ ಕಾರ್ಯಕರ್ತೆ), ಕುಮಾರ್ (ಮೈಸೂರು ನಗರ ಪೊಲೀಸ್ ಪೇದೆ) ಹಾಗೂ ಅಯೂಬ್ ಅಹಮದ್ (ಸಾಮಾಜಿಕ ಕಾರ್ಯಕರ್ತ) ಇವರುಗಳಿಗೆ ಸನ್ಮಾನ ಮಾಡಲಾಗುತ್ತಿದೆ.

    ಟಕ್ನಿಕಲ್ ಕಮಿಟಿ ವರದಿಯಂತೆ ದಸರಾ ಆಚರಣೆ ಮಾಡಲಾಗುವುದು. ಟೆಕ್ನಿಕಲ್ ಕಮಿಟಿ ನೀಡಿರುವ ವರದಿಯಂತೆ ದಸರಾ ಸಿದ್ಧತೆ ಮಾಡಿಕೊಳ್ಳುತ್ತೇವೆ. ಉದ್ಘಾಟನಾ ಕಾರ್ಯಕ್ರಮಕ್ಕೆ 200, ಜಂಬೂಸವಾರಿಗೆ 300 ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 50 ಮಂದಿಗೆ ಅವಕಾಶ ನೀಡಲಾಗಿದೆ. ನಾವು ಸಹ ಇಷ್ಟೇ ಜನಕ್ಕೆ ಅವಕಾಶ ಮಾಡಿಕೊಡುತ್ತೇವೆ. ಟೆಕ್ನಿಕಲ್ ಕಮಿಟಿ ಸಲಹೆ ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮದವರು 350 ಮಂದಿ ಇದ್ದಾರೆ. ಇದರಲ್ಲಿ 50 ಜನರಿಗೆ ಮಾತ್ರ ಅವಕಾಶ ಮಾಡಿಕೊಡುತ್ತೇವೆ. ಜನಪ್ರತಿನಿಧಿಗಳು 50 ಜನರ ಇದ್ದಾರೆ. ಈ ಸಂಖ್ಯೆಯನ್ನು ಸಹ 25ಕ್ಕೆ ಇಳಿಸುತ್ತೇವೆ. ಪೊಲೀಸರು 100 ಮಂದಿ ಇದ್ದಾರೆ ಇದನ್ನು ಸಹ ಅರ್ಧಕ್ಕೆ ಇಳಿಸುತ್ತೇವೆ. ಬೆಟ್ಟದಲ್ಲಿ ಸಹ 200 ಮಂದಿಯೊಳಗೆ ಕಾರ್ಯಕ್ರಮ ಮಾಡುತ್ತೇವೆ. ನಗರದಲ್ಲಿ ಎಲ್ಲಿಯೂ ಪಾರ್ಕಿಂಗ್ ವ್ಯವಸ್ಥೆ ಇರುವುದಿಲ್ಲ. ಜನ ಗುಂಪು ಸೇರಬಾರದು. ಎಲ್ಲಿಯೂ ಬಹಿರಂಗವಾಗಿ ಕಾರ್ಯಕ್ರಮ ನಡೆಸಬಾರದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

    ಈ ಬಾರಿಯ ದಸರಾಗೆ ಒಂದು ರೂಪಾಯಿಯನ್ನು ಖರ್ಚು ಮಾಡಿಲ್ಲ. ಇನ್ನೂ ದಸರಾ ಬಜೆಟ್ ಬಗ್ಗೆ ಪ್ಲಾನಿಂಗ್ ಆಗಿಲ್ಲ. ಟೆಕ್ನಿಕಲ್ ಕಮಿಟಿ ವರದಿ ಕೊಟ್ಟಿದೆ. ಅದರ ಸೂಚನೆಯಂತೆ ಕಾರ್ಯಕ್ರಮ ರೂಪಿಸುತ್ತೇವೆ. ಕಾರ್ಯಕ್ರಮಗಳಿಗೆ ಎಷ್ಟು ಹಣ ಬೇಕು ಎಂಬುದನ್ನು ಈಗ ತೀರ್ಮಾನ ಮಾಡುತ್ತೇವೆ. ಕಳೆದ ಬಾರಿ ದಸರಾದ ಹಣ ಬಾಕಿ ಇದೆ. ಸರ್ಕಾರಕ್ಕೆ ಹಣಕಾಸು ಇಲಾಖೆಗೆ ಮನವಿ ಮಾಡಿದ್ದೇವೆ. ಶಿಘ್ರದಲ್ಲೇ ಆ ಹಣವನ್ನು ತಂದು ಬಾಕಿ ಇರುವ ಬಿಲ್ ಪಾವತಿಸುತ್ತೇವೆ ಎಂದು ತಿಳಿಸಿದ್ದಾರೆ.

  • ನಾಳೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ- ಸೋಂಕಿತರಿಗೆ ಪ್ರತ್ಯೇಕ ಕೇಂದ್ರ

    ನಾಳೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ- ಸೋಂಕಿತರಿಗೆ ಪ್ರತ್ಯೇಕ ಕೇಂದ್ರ

    ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಟಿಇಟಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ನಿಯಮಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

    ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಹುತೇಕ ಪಿಯುಸಿ, ಎಸ್‍ಎಸ್‍ಎಲ್‍ಸಿ ಮಾರ್ಗಸೂಚಿಗಳು ಅನ್ವಯವಾಗಲಿವೆ. ಒಟ್ಟು 2.44 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದ 886 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲ ಕೇಂದ್ರಗಳಲ್ಲಿಯೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೊರೊನಾ ನಿಯಮದಂತೆ ಪರೀಕ್ಷೆ ನಡೆಸಲಾಗುತ್ತಿದೆ.

    ಕೊರೊನಾ ಹಿನ್ನೆಲೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹುತೇಕ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯ ನಿಯಮಗಳನ್ನೇ ಅಳವಡಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿದೆ.