Tag: ಕೊರೊನಾ ಲಸಿಕೆ

  • ಶಿಷ್ಟಾಚಾರಕ್ಕೆ ಗುಡ್‌ಬೈ – ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತ ಕೋರಿದ ಪಪುವಾ ನ್ಯೂ ಗಿನಿಯಾ ಪ್ರಧಾನಿ

    ಶಿಷ್ಟಾಚಾರಕ್ಕೆ ಗುಡ್‌ಬೈ – ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತ ಕೋರಿದ ಪಪುವಾ ನ್ಯೂ ಗಿನಿಯಾ ಪ್ರಧಾನಿ

    ಪೋರ್ಟ್ ಮೊರೆಸ್‌ಬೈ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಪಪುವಾ ನ್ಯೂ ಗಿನಿಯಾ (Papua New Guinea) ಸರ್ಕಾರ ಶಿಷ್ಟಾಚಾರಕ್ಕೆ ಗುಡ್‌ಬೈ ಹೇಳಿ ಅಪರೂಪದ ಗೌರವ ಸಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಮೋದಿ ವಿಮಾನದಿಂದ ಇಳಿದು ಬರುತ್ತಿದ್ದಂತೆ ಪಪುವಾ ನ್ಯೂ ಗಿನಿಯಾ ಪ್ರಧಾನಿ ಜೇಮ್ಸ್ ಮರಪೇ (James Marape) ಸ್ವಾಗತಿಸಿದರು. ಸಂಪ್ರದಾಯ ಮುರಿದು ಸೂರ್ಯಾಸ್ತದ ವೇಳೆ ಸ್ವಾಗತಿಸಿದ ಬಳಿಕ ಅವರು ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಮೋದಿ ಅವರನ್ನು ಮೇಲೆತ್ತಿ ಬೆನ್ನು ತಟ್ಟಿದರು.

    ಭಾನುವಾರ ರಾಜಧಾನಿ ಫೋರ್ಟ್ ಮೊರೆಸ್‌ಬೈಗೆ ಮೋದಿ ಬಂದಿಳಿದಾಗ ಸೂರ್ಯಾಸ್ತವಾಗಿತ್ತು. ಪಪುವಾ ನ್ಯೂ ಗಿನಿಯಾ ಸರ್ಕಾರ ಸಾಮಾನ್ಯವಾಗಿ ಯಾವುದೇ ವಿದೇಶಿ ಗಣ್ಯರಿಗೆ ಸೂರ್ಯಾಸ್ತದ ಬಳಿಕ ಸಾಂಪ್ರದಾಯಿಕ ಸ್ವಾಗತ ನೀಡುವುದಿಲ್ಲ. ಇದನ್ನೂ ಓದಿ: 2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

    ಮೋದಿ ಆಗಮಿಸಿದಾಗ ಶಿಷ್ಟಾಚಾರವನ್ನೇ ಬದಲಿಸಿಕೊಂಡ ಸರ್ಕಾರ ಅವರಿಗೆ ಸಾಂಪ್ರದಾಯಿಕ ಗೌರವದೊಂದಿಗೆ ಸ್ವಾಗತ ಕೋರಿತು. ಅಲ್ಲಿನ ಪ್ರಧಾನಿ ಜೇಮ್ಸ್ ಮರಪೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿ ಅವರನ್ನು ಖುದ್ದಾಗಿ ಬರ ಮಾಡಿಕೊಂಡಿದ್ದು ವಿಶೇಷವಾಗಿತ್ತು.

    ಯಾಕೆ ಈ ಸ್ವಾಗತ?
    ಪಪುವಾ ನ್ಯೂ ಗಿನಿಯಾಗೆ ಭೇಟಿ ನೀಡಿದ ಮೊದಲ ಭಾರತದ ಪ್ರಧಾನಿ ಮೋದಿಯಾಗಿದ್ದಾರೆ. ಕೋವಿಡ್‌ ಸಮಯದಲ್ಲಿ ಪಪುವಾ ನ್ಯೂ ಗಿನಿಯಾ ಭಾರೀ ಸಂಕಷ್ಟಕ್ಕೆ ಸಿಲುಕಿತ್ತು. ಲಸಿಕೆ ಅಭಿವೃದ್ಧಿ ಪಡಿಸಿದ ದೇಶಗಳು ಪಪುವಾ ನ್ಯೂ ಗಿನಿಯಾಗೆ ಲಸಿಕೆಯನ್ನು ಕಳುಹಿಸಿರಲಿಲ್ಲ. ಯಾರೂ ಸಹಾಯ ಮಾಡದ ಸಂದರ್ಭದಲ್ಲಿ ಭಾರತ 1.32 ಲಕ್ಷ ಕೊರೊನಾ ಲಸಿಕೆಯನ್ನು ತುರ್ತಾಗಿ ಕಳುಹಿಸಿಕೊಟ್ಟಿತ್ತು. ಸಂಕಷ್ಟದಲ್ಲಿದ್ದಾಗ ಸ್ಪಂದಿಸಿದ್ದಕ್ಕೆ ಪಪುವಾ ನ್ಯೂ ಗಿನಿಯಾ ಸರ್ಕಾರ ಮೋದಿ ಅವರಿಗೆ ವಿಶೇಷ ಸ್ವಾಗತ ನೀಡಿದೆ ಎಂದು ವಿಶ್ಲೇಷಿಸಲಾಗುತ್ತದೆ.

  • ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ನವದೆಹಲಿ: ಅಧಿಕೃತ ಎನ್ನುವುದಕ್ಕಿಂತ ಹೆಚ್ಚಿನದ್ದನ್ನು ಅಥವಾ ಅಧಿಕೃತವಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸಬೇಡಿ ಎಂದು ಯೋಗ ಗುರು ಬಾಬಾ ರಾಮದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

    ಈ ಹಿಂದೆ ಅಲೋಪತಿ ವಿರುದ್ಧ ರಾಮದೇವ್‌ ಹೇಳಿಕೆ ನೀಡಿದ್ದರು. ವಿವಿಧ ವೈದ್ಯರ ಸಂಘಗಳು ಅವರ ವಿರುದ್ಧ ಮೊಕದ್ದಮೆ ಸಲ್ಲಿಸಿವೆ. ಇದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಭಂಬಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಲಸಿಕೆ ಹಾಕಿಸಿಕೊಂಡಿದ್ದರೂ ಕೋವಿಡ್-19 ಪಾಸಿಟಿವ್ ಬಂದಿದೆ. ಇದು ವೈದ್ಯಕೀಯ ವಿಜ್ಞಾನದ ವೈಫಲ್ಯವಾಗಿದೆ ಎಂಬ ಯೋಗ ಗುರು ಬಾಬಾ ರಾಮದೇವ್ ಅವರ ಇತ್ತೀಚಿನ ಹೇಳಿಕೆ ನೀಡಿದ್ದರು. ಇದನ್ನು ದೆಹಲಿ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ. ಇದನ್ನೂ ಓದಿ: ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಆಯುರ್ವೇದಕ್ಕಿದ್ದ ಒಳ್ಳೆಯ ಹೆಸರು ಈಗ ಕುಂದುತ್ತಿರುವ ಬಗ್ಗೆ ನನಗೆ ಕಾಳಜಿ ಇದೆ. ನಾನು ಅದರ ಬಗ್ಗೆ ಚಿಂತಿಸುತ್ತಿದ್ದೇನೆ. ಆಯುರ್ವೇದವು ಪ್ರಾಚೀನ ವೈದ್ಯಕೀಯ ಪದ್ಧತಿಯಾಗಿದೆ. ಆಯುರ್ವೇದದ ಒಳ್ಳೆಯ ಹೆಸರಿಗೆ ಧಕ್ಕೆ ತರುವಂತಹ ಕೆಲಸವನ್ನು ನಾವು ಮಾಡಬಾರದು ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಬಾನಿ ಹೇಳಿದ್ದಾರೆ.

    ಕೆಲವೊಮ್ಮೆ ವಿದೇಶಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗುತ್ತಿದೆ. ಇದು ವಿದೇಶಗಳೊಂದಿಗಿನ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ : ಯೂಟರ್ನ್‌ ಹೊಡೆದ ಕೇಂದ್ರ

    Live Tv
    [brid partner=56869869 player=32851 video=960834 autoplay=true]

  • ಒಂದೇ ಸಿರಿಂಜ್‍ನಲ್ಲಿ 39 ಮಕ್ಕಳಿಗೆ ಕೊರೊನಾ ಲಸಿಕೆ- ಆರೋಪಿ ಪರಾರಿ

    ಒಂದೇ ಸಿರಿಂಜ್‍ನಲ್ಲಿ 39 ಮಕ್ಕಳಿಗೆ ಕೊರೊನಾ ಲಸಿಕೆ- ಆರೋಪಿ ಪರಾರಿ

    ಭೋಪಾಲ್: ಒಂದೇ ಸಿರಿಂಜ್‍ನಲ್ಲಿ 39 ಮಕ್ಕಳಿಗೆ ಕೊರೊನಾ ಲಸಿಕೆಯನ್ನು ನೀಡಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.

    ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮೆಗಾ ಲಸಿಕೆ ಅಭಿಯಾನದ ವೇಳೆ ಈ ಘಟನೆ ನಡೆದಿದೆ. ವೈದ್ಯನೊಬ್ಬ ವಿದ್ಯಾರ್ಥಿಗಳಿಗೆಲ್ಲರಿಗೂ ಒಂದೇ ಸಿರಿಂಜ್ ಬಳಸಿ ಲಸಿಕೆ ಹಾಕುತ್ತಿದ್ದನ್ನು ಗಮನಿಸಿದರು. ಈ ರೀತಿಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು.

    ಈ ಹಿನ್ನೆಲೆಯಲ್ಲಿ ಪೋಷಕರು ಪ್ರತಿಭಟನೆಯನ್ನು ನಡೆಸಿದರು. ತೀವ್ರವಾದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಜಿತೇಂದ್ರ ಅಹಿರ್ವಾರ್ ಎಂಬವರ ವಿರುದ್ಧ ಎಫ್‍ಐಆರ್ ದಾಖಲಿಸಲಾಯಿತು. 9 ರಿಂದ 12ನೇ ತರಗತಿ ವರೆಗೆ ಓದುತ್ತಿರುವ 39 ಮಕ್ಕಳಿಗೆ ಈ ಸಿರಿಂಜ್‍ನ್ನು ಬಳಸಲಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್‌ ಪತ್ನಿಗೆ ಟಿಕೆಟ್‌ ಕೊಡಿ – ಬಿಜೆಪಿ ಕಾರ್ಯಕರ್ತರ ಹೊಸ ಬೇಡಿಕೆ

    vaccine

    ಘಟನೆಗೆ ಸಂಬಂಧಿಸಿದಂತೆ ಸಾಗರ್‌ನ ಉಸ್ತುವಾರಿ ಜಿಲ್ಲಾಧಿಕಾರಿ ಕ್ಷಿತಿಜ್ ಸಿಂಘಾಲ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಆರೋಪಿ ಜಿತೇಂದ್ರ ಅಹಿರ್ವಾರ್ ಸ್ಥಳದಿಂದ ಪರಾರಿಯಾಗಿದ್ದು, ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಥ ಚಟರ್ಜಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ

    Live Tv
    [brid partner=56869869 player=32851 video=960834 autoplay=true]

  • 75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಬೂಸ್ಟರ್ ಡೋಸ್: ಸುಧಾಕರ್

    75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಬೂಸ್ಟರ್ ಡೋಸ್: ಸುಧಾಕರ್

    ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಬೆಂಗಳೂರಿನಲ್ಲಿ ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಕೊಡಬೇಕು ಎನ್ನುವ ಗುರಿ ಇದೆ. ಈ ಗುರಿ ತಲುಪಲು ಪೂರಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ. ರಾಜ್ಯದ ವಿವಿಧೆಡೆ ಏಳೂವರೆ ಸಾವಿರ ಸರ್ಕಾರಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.

    ಮೋದಿ ಸರ್ಕಾರವು ಇಡೀ ದೇಶಕ್ಕೆ ಕೊರೊನಾ ಲಸಿಕೆಯ 2 ಡೋಸ್‍ಗಳನ್ನು ಉಚಿತವಾಗಿ ನೀಡಿದೆ. ಶುಕ್ರವಾರದಿಂದ ಬೂಸ್ಟರ್ ಡೋಸ್ ಅನ್ನು ಕೂಡ ಉಚಿತವಾಗಿ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಈ ರೀತಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದ 75 ವಿವಿಧ ಕ್ಷೇತ್ರಗಳಲ್ಲಿ ಲಸಿಕಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಅಮೃತಹಸ್ತದಿಂದ ಏಕಕಾಲಕ್ಕೆ ಆರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಇತ್ತೀಚೆಗೆ ಅನೇಕರಿಗೆ ಕೋವಿಡ್ ಬಂದರೆ ಏನಾಗುತ್ತದೆ ಅನ್ನುವ ಉದಾಸೀನತೆ ಇದೆ. 2 ಡೋಸ್ ಲಸಿಕೆ ತೆಗೆದುಕೊಂಡು 6 ತಿಂಗಳುಗಳ ಮೇಲಾಗಿದೆ. ಇನ್ನೂ ಕೆಲವರು 2ನೇ ಡೋಸ್ ತೆಗೆದುಕೊಂಡು 1 ವರ್ಷದ ಮೇಲಾಗಿದೆ. ಇಂತಹವರಿಗೆ ಅಪಾಯ ಇರುತ್ತದೆ. ಹೀಗಾಗಿ ಲಸಿಕಾಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಇಲ್ಲಿಯ ತನಕ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಲು ಲಸಿಕಾಕರಣದ ವೇಗವೇ ಕಾರಣವಾಗಿದೆ. ಹೀಗಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂದರು.

    ಮುಖ್ಯಮಂತ್ರಿ ಬೊಮ್ಮಾಯಿ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ. ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್‍ಗಳು ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಜು. 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮೊದಲ ಕ್ಲಿನಿಕ್ ಆರಂಭಿಸಲು ಹಗಲಿರುಳು ಶ್ರಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ

    ಯಾವ ದೇಶದಲ್ಲೂ ಕೊರೊನಾ ಲಸಿಕೆಯನ್ನು ಉಚಿತ ನೀಡಿಲ್ಲ. ವಿದೇಶದಲ್ಲಿ ಕೊರೊನಾ ಪರೀಕ್ಷೆ ಮಾಡಲು ಕೂಡ 10,000 ರೂ. ಕೊಡಬೇಕು. ಆದರೆ 133 ಕೋಟಿ ಜನರಿರುವ ದೇಶದಲ್ಲಿ ಕೊರೊನಾ ಟೆಸ್ಟ್, ಲಸಿಕೆ ಎಲ್ಲವೂ ಉಚಿತ. ಕೊರೊನಾ ನಿಯಂತ್ರಣ ಮಾಡುವಲ್ಲಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಕೊಡುಗೆ ದೊಡ್ಡದು. ಇಂತಹ ಸಮರ್ಥ ನಾಯಕತ್ವವನ್ನು ಜನರು ಮರೆಯುವ ಹಾಗಿಲ್ಲ ಎಂದರು. ಇದನ್ನೂ ಓದಿ: ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

    Live Tv
    [brid partner=56869869 player=32851 video=960834 autoplay=true]

  • ಆರೋಗ್ಯ ಇಲಾಖೆಯಿಂದ ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆ ಸರ್ಟಿಫಿಕೆಟ್!

    ಆರೋಗ್ಯ ಇಲಾಖೆಯಿಂದ ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆ ಸರ್ಟಿಫಿಕೆಟ್!

    ತುಮಕೂರು: 6 ತಿಂಗಳ ಹಿಂದೆ ಮರಣ ಹೊಂದಿದ್ದ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಸರ್ಟಿಫಿಕೆಟ್ ನೀಡಿ ಆರೋಗ್ಯ ಮಹಾ ಎಡವಟ್ಟು ಮಾಡಿದೆ.

    ತುಮಕೂರು ನಗರದ ಮೆಳೆಕೋಟೆ ನಿವಾಸಿ ಬಸಪ್ಪ(80) 2021ರ ಏಪ್ರಿಲ್ 9ರಂದು ಮೊದಲ ಡೋಸ್ ತೆಗೆದುಕೊಂಡಿದ್ದರು. ಈ ನಡುವೆ ಜು.16 ರಂದು ಅವರು ಮೃತಪಟ್ಟಿದ್ದಾರೆ. ಆದರೆ ನಿನ್ನೆ 29ರಂದು ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೆಜ್ ಬಂದಿದೆ. ಸಂಬಂಧಿಕರು ಸೈಟ್ ಓಪನ್ ಮಾಡಿದಾಗ ಸರ್ಟಿಫಿಕೆಟ್ ಅಪ್‍ಡೇಟ್ ಆಗಿತ್ತು.

    ವ್ಯಕ್ತಿ ಮರಣ ಹೊಂದಿ 6 ತಿಂಗಳಾದರೂ ಸತ್ತ ವ್ಯಕ್ತಿಗೆ ಹೇಗೆ ಲಸಿಕೆ ಕೊಟ್ರು ಎಂದು ಮೃತ ಬಸವಪ್ಪನ ಕುಟುಂಬ ಆಶ್ಚರ್ಯ ವ್ಯಕ್ತಪಡಿಸಿದೆ. ಜೊತೆಗೆ ಆರೋಗ್ಯ ಇಲಾಖೆಯ ಈ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ. ಇದನ್ನೂ ಓದಿ: ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

  • ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

    ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್‍ನಲ್ಲಿ 100% ಹಾಗೂ ಎರಡನೇ ಡೋಸ್‍ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್‍ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿಯಲ್ಲಿದೆ ಎಂದು ಹೇಳಿದರು.

    ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ ಎಂದ ಅವರು, ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡು ಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

    ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

    ಭ್ರೂಣ ಪತ್ತೆ ಮಾಡುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

    ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001ರಲ್ಲಿ 946 ಇದ್ದ ಲಿಂಗಾನುಪಾತ, 2018ರಲ್ಲಿ 957ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ

    ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರವಾನಗಿಯನ್ನು ರದ್ದು ಮಾಡಲಾಗುವುದು. ಭ್ರೂಣ ಪತ್ತೆಗೆ ಅವಕಾಶ ನೀಡುವುದಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

  • ಲಸಿಕೆ ಬೇಡವೆಂದು ಮನೆ ಏರಿದ್ದ ಯುವಕನ ಮನವೊಲಿಸಿದ ತಹಶೀಲ್ದಾರ್

    ಲಸಿಕೆ ಬೇಡವೆಂದು ಮನೆ ಏರಿದ್ದ ಯುವಕನ ಮನವೊಲಿಸಿದ ತಹಶೀಲ್ದಾರ್

    ಚಿತ್ರದುರ್ಗ: ಕೊರೊನಾ ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕನ ಮನವೊಲಿಸಿ ಕೊರೊನಾ ಲಸಿಕೆ ನೀಡುವಲ್ಲಿ ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಯಶಸ್ವಿಯಾಗಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಈ ವೇಳೆ ಒಂದು ಹಾಗೂ ಎರಡನೇ ಹಂತದ ಲಸಿಕೆ ಪಡೆಯದ ವ್ಯಕ್ತಿಗಳನ್ನು ಗುರುತಿಸಿ ಅಂತಹವರಿಗೆ ವ್ಯಾಕ್ಸಿನ್ ನೀಡಲಾಗುತ್ತಿತ್ತು. ಆಗ ಮಂಜುನಾಥ್ ಎಂಬ ಯುವಕ ಮೊದಲನೆ ಲಸಿಕೆ ಪಡೆದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು ಲಸಿಕೆ ಹಾಕಲು ಹೋದಾಗ, ಮಂಜುನಾಥ್ ನನಗೆ ಲಸಿಕೆ ಬೇಡ ಎಂದು ಹಠ ಹಿಡಿದು ಮನೆ ಏರಿ ಕುಳಿತಿದ್ದನು. ಇದನ್ನೂ ಓದಿ: ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ

    ಆಗ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ ಹಾಗೂ ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು, ಕುಟುಂಬಸ್ಥರ ನೇತೃತ್ವದಲ್ಲಿ ಯುವಕನನ್ನು ಮನವೊಲಿಸಿ ಮನೆ ಮೇಲಿನಿಂದ ಕೆಳಗೆ ಇಳಿಸಿಕೊಂಡು ಲಸಿಕೆಯನ್ನು ನೀಡಿದ್ದಾರೆ. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಇದ್ದರು. ಇದನ್ನೂ ಓದಿ: ಸಕಲೇಶಪುರದಲ್ಲಿ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಹತ್ಯೆ

  • ಬೂಸ್ಟರ್ ಡೋಸ್ ಪಡೆದ ಬಳಿಕ ಅಜ್ಜನ ಭರ್ಜರಿ ಬ್ಯಾಟಿಂಗ್ – ವೀಡಿಯೋ ವೈರಲ್

    ಬೂಸ್ಟರ್ ಡೋಸ್ ಪಡೆದ ಬಳಿಕ ಅಜ್ಜನ ಭರ್ಜರಿ ಬ್ಯಾಟಿಂಗ್ – ವೀಡಿಯೋ ವೈರಲ್

    ಯಸ್ಸಾದ ಅಜ್ಜರೊಬ್ಬರು ಬ್ಯಾಟ್‍ಹಿಡಿದು ರನ್ ಕದಿಯಲು ಚಿರಯುವಕನಂತೆ ಓಡುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋದಲ್ಲಿ ಕೊರೊನಾ ಬೂಸ್ಟರ್ ಡೋಸ್ ತೆಗೆದುಕೊಂಡ ಬಳಿಕ ಅಜ್ಜ ಈ ರೀತಿ ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ ಎಂದು ಶೀರ್ಷಿಕೆ ಕೊಡಲಾಗಿದೆ. ಅಲ್ಲದೆ ಹಿರಿಯ ವ್ಯಕ್ತಿ ಧೋತಿ ಮತ್ತು ಜುಬ್ಬಾ ತೊಟ್ಟು ಬ್ಯಾಟಿಂಗ್ ಮಾಡುತ್ತಿರುವುದನ್ನು ಹತ್ತಿದಲ್ಲಿರುವ ಜನ ಎಂಜಾಯ್ ಮಾಡುತ್ತಿರುವಂತೆ ಈ ದೃಶ್ಯಗಳನ್ನು ಗಮನಿಸಿದಾಗ ತಿಳಿಯುತ್ತಿದೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20, ಏಕದಿನ ತಂಡದಲ್ಲಿಲ್ಲ ಭಾರತೀಯರು – ಪಾಕ್‌ ಆಟಗಾರರ ಮೇಲುಗೈ

    ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಈ ವೀಡಿಯೋಗೆ ವಿವಿಧ ಕಾಮೆಂಟ್‍ಗಳನ್ನು ಹಾಕುತ್ತಿದ್ದಾರೆ. ಆದರೆ ಈ ವಯಸ್ಸಿನಲ್ಲೂ ಅಜ್ಜನ ಕ್ರಿಕೆಟ್ ಆಟದ ಹುರುಪನ್ನು ಗಮನಿಸಿ ಮೆಚ್ಚುಗೆಯ ಸಂದೇಶ ಕೂಡ ಹರಿದು ಬರುತ್ತಿದೆ. ಯಾವುದೇ ಕೆಲಸಕ್ಕೂ ವಯಸ್ಸು ಮುಖ್ಯವಾಗುವುದಿಲ್ಲ ಅವರ ಆಸಕ್ತಿ ಮುಖ್ಯವಾಗುತ್ತದೆ ಎಂದು ನೆಟ್ಟಿಗರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಟೆಸ್ಟ್ ನಾಯಕತ್ವಕ್ಕೆ ಗುಡ್‌ಬೈ – ಕೊಹ್ಲಿ ಬ್ರ್ಯಾಂಡ್ ಮೌಲ್ಯ ಇಳಿಕೆ?

  • ಕಾಂಗ್ರೆಸ್ ಅಪಪ್ರಚಾರ ಮಾಡದೇ ಇದ್ದಿದ್ದರೆ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು: ಬಿಜೆಪಿ ತಿರುಗೇಟು

    ಕಾಂಗ್ರೆಸ್ ಅಪಪ್ರಚಾರ ಮಾಡದೇ ಇದ್ದಿದ್ದರೆ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು: ಬಿಜೆಪಿ ತಿರುಗೇಟು

    ಬೆಂಗಳೂರು: ಕೊರೊನಾ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡದಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು ಎಂದು ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ದಾಳಿ ಮಾಡಿದೆ.

    ಟ್ವೀಟ್‍ನಲ್ಲಿ ಏನಿದೆ?: ಆರಂಭದಲ್ಲಿ ಕಾಂಗ್ರೆಸ್ ನಾಯಕರಿಂದ ಲಸಿಕೆಯ ವಿರುದ್ಧ ಅಪಪ್ರಚಾರವಾಗಿತ್ತು. ದೇಶದ ಜನರಲ್ಲಿ ಲಸಿಕೆಯ ಕುರಿತು ಕಾಂಗ್ರೆಸ್ ಸುಳ್ಳಿನ ಸರಮಾಲೆ ಹಬ್ಬಿಸಿತ್ತು. ಲಸಿಕೆಯನ್ನು ಮೋದಿ ವ್ಯಾಕ್ಸಿನ್ ಎಂದು ಕರೆದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದರು. ಇದು ರಾಷ್ಟ್ರ ವಿರೋಧಿ ಸಂಚಲ್ಲವೇ ಎಂದು ಕಿಡಿಕಾರಿದೆ. ಇದನ್ನೂ ಓದಿ: ಪಾರಿವಾಳ ವಿಚಾರ ಕೊಲೆಯಲ್ಲಿ ಅಂತ್ಯ

    ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ, ರಾಹುಲ್ ಗಾಂಧಿ ಅವರ ಹಾದಿಯಲ್ಲೇ ಸಿದ್ದರಾಮಯ್ಯ ಲಸಿಕೆಯ ವಿರುದ್ಧ ಮಾತನಾಡಿದ್ದರು. ಮೋದಿ ಲಸಿಕೆ ಹಾಕಿಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದರು. ಪೌರ ಕಾರ್ಮಿಕರ ಮೇಲೆ ಪ್ರಯೋಗಕ್ಕೆ ಹೊರಟಿದ್ದಾರೆ ಎಂದೆಲ್ಲ ಅಪಪ್ರಚಾರ ನಡೆಸಿದ್ದರು. ಕೊನೆಗೆ ಕಾಂಗ್ರೆಸ್ ನಾಯಕರು ತಾವೇ ಲಸಿಕೆ ಹಾಕಿಸಿಕೊಂಡರು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ನವೋದಯದಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಬೇಡಿ – ಕೊಡಗಿನ ಪೋಷಕರಿಂದ ವಿರೋಧ

    ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರದ ಅಭಿಯಾನ ನಡೆಸದೆ ಹೋಗಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು. ಎಲ್ಲದರಲ್ಲೂ ಕಾಂಗ್ರೆಸ್ ರಾಜಕೀಯ ಅರಸಲು ಹೊರಟಿದೆ. ಕಾಂಗ್ರೆಸ್ ಪಕ್ಷ ಜನರ ದೃಷ್ಟಿಯಲ್ಲಿ ಅಪ್ರಸ್ತುತವಾಗುತ್ತಿದೆ. ಲಸಿಕೆ ಅಭಿಯಾನದ ಯಶಸ್ಸೆ ಇದಕ್ಕೆ ಸಾಕ್ಷಿ. ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದ ಸಿದ್ದರಾಮಯ್ಯನವರೇ, ರಾಹುಲ್ ಗಾಂಧಿ ಎರಡು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂಬ ದೇಶದ ಜನತೆಯ ಪ್ರಶ್ನೆಗೆ ಉತ್ತರಿಸುವಿರಾ. ಜನತೆಯ ಸಂಶಯ ಬಗೆಹರಿಸಿ, ಗುಟ್ಟು ಕಾಪಾಡಿಕೊಳ್ಳಲು ಇದೇನು ರಾಷ್ಟ್ರೀಯ ಭದ್ರತೆಯ ವಿಚಾರವಲ್ಲ ಎಂದು ವಾಗ್ದಾಳಿ ನಡಿಸಿದೆ.

  • ಲಸಿಕೆ ಜಾಗೃತಿ ಮೂಡಿಸಿದ ಗೂಗಲ್ ಡೂಡಲ್

    ಲಸಿಕೆ ಜಾಗೃತಿ ಮೂಡಿಸಿದ ಗೂಗಲ್ ಡೂಡಲ್

    ನವದೆಹಲಿ: ವಿಶ್ವದಲ್ಲೇ ಓಮಿಕ್ರಾನ್ ಹಾಗೂ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದೆ. ಇದಕ್ಕಾಗಿ ಗೂಗಲ್ ಡೂಡಲ್ ಕೊರೊನಾ, ಓಮಿಕ್ರಾನ್‍ನನ್ನು ತಡೆಯಲು ಮಾಸ್ಕ್ ಹಾಗೂ ಇನ್ನಿತರೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದೆ.

    ಈ ಅನಿಮೇಟೆಡ್ ಡೂಡಲ್‍ನಲ್ಲಿ, ಕೊರೊನಾ ಲಸಿಕೆ ತೆಗೆದುಕೊಂಡ ನಂತರ ಗೂಗಲ್ ಸರ್ಚ್ ಎಂಜಿನ್‍ನ ಎಲ್ಲಾ ಅಕ್ಷರಗಳು ಮಾಸ್ಕ್ ಹಾಕಿಕೊಂಡು ಸಂಭ್ರಮಿಸುತ್ತಿರುವುದನ್ನು ಗೂಗಲ್‍ನಲ್ಲಿ ಕಾಣಬಹುದು.

    ಮಾಸ್ಕ್ ಹಾಗೂ ಲಸಿಕೆಯನ್ನು ಹಾಕಿಕೊಂಡು ಎಲ್ಲರೂ ತಮ್ಮ ಜೀವವನ್ನು ಉಳಿಸಿಕೊಳ್ಳಿ ಎಂದು ಗೂಗಲ್ ಡೂಡಲ್ ಸಂದೇಶವನ್ನು ಸಾರಿದೆ. ಕೊರೊನಾ ಕುರಿತು ಮಾಹಿತಿ ಪಡೆಯಲು ಹಾಗೂ ಲಸಿಕೆಯನ್ನು ಪಡೆದುಕೊಳ್ಳಲು ಹತ್ತಿರದ ಮಾಹಿತಿ ಕೇಂದ್ರಗಳು ಎಲ್ಲಿವೆ ಎನ್ನುವುದರ ಕುರಿತು ಇದರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

    ಕೊರೊನಾ ಲಸಿಕೆ ಪಡೆಯದವರಿಗೆ ತಮ್ಮ ಹತ್ತಿರದ ಲಸಿಕಾ ಕೇಂದ್ರ ಎಲ್ಲಿದೆ ಹಾಗೂ ಅಲ್ಲಿ ಲಸಿಕೆಯನ್ನು ಪಡೆದುಕೊಳ್ಳಲು ನೋಂದಾಯಿಸಿಕೊಳ್ಳುವುದು ಹೇಗೆ ಎನ್ನುವುದರ ಕುರಿತು ವಿವರವಾಗಿ ಮಾಹಿತಿ ದೊರೆಯುತ್ತದೆ.  ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

    ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,58,089 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯವರೆಗೆ 8,209 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಲಸಿಕಾಭಿಯಾನದಲ್ಲಿ ದೇಶದಲ್ಲಿ ಇದುವರೆಗೆ ಒಂದನೇ ಹಾಗೂ ಎರಡನೇ ಲಸಿಕೆಯನ್ನು ಸೇರಿ 157.20 ಕೋಟಿ ಲಸಿಕೆ ನೀಡಲಾಗಿದೆ. ಆದರೂ ಕೊರೊನಾ ವೇಗವಾಗಿ ಹರಡುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?