Tag: ಕೊರೊನಾ ಲಸಿಕೆ

  • ರಾಜ್ಯದಲ್ಲಿ 1,587 ಕೊರೊನಾ ಕೇಸ್- ಬೆಂಗಳೂರಲ್ಲಿ 1,037 ಪ್ರಕರಣ

    ರಾಜ್ಯದಲ್ಲಿ 1,587 ಕೊರೊನಾ ಕೇಸ್- ಬೆಂಗಳೂರಲ್ಲಿ 1,037 ಪ್ರಕರಣ

    – ಮಹಾಮಾರಿಗೆ ಇಂದು 10 ಜನ ಬಲಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ವೇಗವಾಗಿ ಏರುತ್ತಿದ್ದು, ಇಂದು 1,587 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಲ್ಲೇ 1,037 ಪ್ರಕರಣ ಪತ್ತೆಯಾಗಿವೆ. ಸಾವಿನ ಸಂಖ್ಯೆ ಸಹ ಡಬಲ್ ಅಂಕಿ ತಲುಪಿದ್ದು, 10 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

    ಇಂದು 869 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 10 ಜನ ಅಸುನೀಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,425ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,66,689ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 12,067 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 131 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.72 ಮತ್ತು ಮರಣ ಪ್ರಮಾಣ ಶೇ.0.63ರಷ್ಟು ದಾಖಲಾಗಿದೆ. ಇಂದು 91,884 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 1,19.319 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 20, ಬೆಂಗಳೂರು ನಗರ 1,037, ಬೀದರ್ 40, ಚಾಮರಾಜನಗರ 8, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 11, ಚಿತ್ರದುರ್ಗ 16, ದಕ್ಷಿಣ ಕನ್ನಡ 47, ದಾವಣಗೆರೆ 11, ಧಾರವಾಡ 26, ಗದಗ 5, ಹಾಸನ 35, ಹಾವೇರಿ 1, ಕಲಬುರಗಿ 61, ಕೊಡಗು 4, ಕೋಲಾರ 14, ಕೊಪ್ಪಳ 1, ಮಂಡ್ಯ 25, ಮೈಸೂರು 49, ರಾಯಚೂರು 1, ರಾಮನಗರ 4, ಶಿವಮೊಗ್ಗ 12, ತುಮಕೂರು 50, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 30 ಮತ್ತು ಯಾದಗಿರಿಯಲ್ಲಿ 7 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮೈಕ್ರೋ ಕಂಟೈನ್ಮೆಂಟ್ ಝೋನ್ ನಿರ್ಮಾಣ, ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ: ಸಿಎಂ

    ಮೈಕ್ರೋ ಕಂಟೈನ್ಮೆಂಟ್ ಝೋನ್ ನಿರ್ಮಾಣ, ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ: ಸಿಎಂ

    – ಪ್ರಧಾನಿ ಮೋದಿ ಜೊತೆ ವೀಡಿಯೋ ಸಂವಾದ
    – ಬೆಂಗಳೂರಿನಲ್ಲಿ ಮೂರು ಕೇರ್ ಸೆಂಟರ್

    ಬೆಂಗಳೂರು: ಕೆಲ ದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯದಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಹಾಗೂ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

    ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿಯವರು ವೀಡಿಯೋ ಕಾನ್ಫರೆನ್ಸ್ ನಡೆಸಿದ್ದು, ಜನರಲ್ಲಿ ಭಯ ಸೃಷ್ಟಿಸುವ ಅಗತ್ಯವಿಲ್ಲ. ಲಸಿಕೆ ತಯಾರಿಕೆಗೆ ಎಲ್ಲ ಅವಕಾಶಗಳ ಬಳಕೆಗೆ ರಾಜ್ಯಗಳು ಸಹಕಾರ ಕೊಡುವಂತೆ ಕೇಳಿಕೊಂಡರು. ಅಲ್ಲದೆ ಕೊರೊನಾ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ತಿಳಿಸಿದರು ಎಂದರು.

    ಟೆಸ್ಟ್, ಟ್ರ್ಯಾಕ್, ಟ್ರೀಟ್ ಈ ಮೂರು ಟಿಗಳ ಬಗ್ಗೆ ಪ್ರಧಾನಿಗಳು ಒತ್ತಿ ಹೇಳಿದ್ದು, ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದರು. ಹೀಗಾಗಿ ಮಾಸ್ಕ್ ಧರಸುವುದನ್ನು ಕಡ್ಡಾಯಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಅಗತ್ಯವಿದ್ದರೆ ಮೈಕ್ರೋ ಕಂಟೈನ್ಮೆಂಟ್ ಝೋನ್‍ಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ಸಿಎಂ ವಿವರಿಸಿದರು.

    ಕಳೆದ ಹತ್ತು ದಿನಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಿಸುವ ಅಗತ್ಯವಿದೆ. ಹೆಚ್ಚು ಜನ ಸೇರುವ ಕಡೆ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ತಡೆಯಲು ಕ್ರಮ ವಹಿಸಲು ಪ್ರಧಾನಿ ಸೂಚಿಸಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಜನ ಸೇರುವ ಕಾರ್ಯಕ್ರಮಗಳಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯ. ಬಹಿರಂಗ ಕಾರ್ಯಕ್ರಮಗಳಿಗೆ ಜನಮಿತಿ ಹೊರತುಪಡಿಸಿ, ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.

    ಬೆಂಗ್ಳೂರಲ್ಲಿ 3 ಕೇರ್ ಸೆಂಟರ್
    ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರಿಸಲಾಗಿದೆ. ಅಪಾರ್ಟ್‍ಮೆಂಟ್ ಸೇರಿ ಕೆಲ ನಿರ್ಧಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕಿಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದೇವೆ. ಮೂರನೇ ಹಂತದ ಪಟ್ಟಣಗಳಲ್ಲಿ ಸಹ ಟೆಸ್ಟಿಂಗ್ ಹೆಚ್ಚಳಕ್ಕೆ ಪ್ರಧಾನಿ ಸೂಚನೆ ನೀಡಿದ್ದಾರೆ. ಮೈಕ್ರೋ ಕಂಟೈನ್ಮೆಂಟ್ ನಿರ್ಮಿಸುವಂತೆ ತಿಳಿಸಿದ್ದಾರೆ.

    ಸಿಎಂಗೆ ಪ್ರಧಾನಿ ಮೋದಿ ಸಲಹೆ
    ರಾಜ್ಯದಲ್ಲಿ ಲಸಿಕೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದು, ನಿತ್ಯ 3 ಲಕ್ಷ ಜನಕ್ಕೆ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದೆ. ಮಾಸ್ಕ್ ದಂಡದಲ್ಲಿ ಯಾವುದೇ ರೀತಿಯ ಹೆಚ್ಚಳ ಇಲ್ಲ. ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೇರೆ ರಾಜ್ಯಗಳಿಂದ ಬರುವವರಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಕೊರೊನಾ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಪ್ರಧಾನಿ ಮೋದಿ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿಳಿಸಿದರು.

    ಎಲ್ಲ ರಾಜ್ಯಗಳಿಗೂ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಒದಗಿಸಲಾಗಿದ್ದು, ಕೊರತೆಯಾಗದಂತೆ ಎಚ್ಚರ ವಹಿಸಲಾಗುವುದು. ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದೇ ಹೊರತು ವಾತಾವರಣದಲ್ಲಿನ ವೈರಸ್ ನಿರ್ನಾಮ ಆಗುವುದಿಲ್ಲ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಬೆಂಗಳೂರು ನಗರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್- 19 ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.

    ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದ್ದು, ಈ ಕುರಿತು ಸಹ ಕ್ರಮ ವಹಿಸಲಾಗುತ್ತಿದೆ. ಎರಡು ಮತ್ತು 3ನೇ ಹಂತದ ನಗರಗಳು ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಹಳ್ಳಿಗಳಿಗೆ ಹಬ್ಬದಂತೆ ಎಚ್ಚರ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಅಂಬುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಸೂಚಿಸಿದರು. ಲಸಿಕೆ ವ್ಯರ್ಥವಾಗುವ ಪ್ರಮಾಣ ಕಡಿಮೆಗೊಳಿಸುವಂತೆ ಪ್ರಧಾನಿ ಮೋದಿ ರಾಜ್ಯಗಳಿಗೆ ಸಲಹೆ ನೀಡಿದರು.

    ಸಭೆಯಲ್ಲಿ ಕೋವಿನ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡ ರಾಜ್ಯದ 2,042 ಆಸ್ಪತ್ರೆಗಳಲ್ಲಿ 1,439 ಆಸ್ಪತ್ರೆಗಳು ಇನ್ನೂ ಲಸಿಕೆ ಅಭಿಯಾನ ಪ್ರಾರಂಭಿಸಿಲ್ಲ. ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

    ಇದಲ್ಲದೆ ಚಿಕಿತ್ಸಾ ನಿರ್ವಹಣೆಯ ಮಾರ್ಗಸೂಚಿಗಳ ಪಾಲನೆ, ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, (ಟೆಸ್ಟ್, ಟ್ರ್ಯಾಕ್, ಟ್ರೀಟ್) ಮಾದರಿಯನ್ನು ತೀವ್ರಗೊಳಿಸುವಂತೆ ತಿಳಿಸಿದರು. ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸುವಂತೆ ಸೂಚನೆ ನೀಡಲಾಯಿತು.

    ರಾಜ್ಯದಲ್ಲಿ ಈ ವರೆಗೆ 9.61 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 12 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2020ರ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಕೋವಿಡ್ 19 ಸೋಂಕು ತೀವ್ರಗೊಂಡಿತ್ತು. ನವೆಂಬರ್ ನಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗತೊಡಗಿತು. ಡಿಸೆಂಬರ್ ನಲ್ಲಿ ಇನ್ನೂ ಹೆಚ್ಚಿನ ಇಳಿಕೆಯಾಯಿತು. ಆದರೆ ಕಳೆದ 10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿಯಲ್ಲಿವೆ. ಪಾಸಿಟಿವಿಟಿ ರೇಟ್ ಮಾರ್ಚ್ 15ರಂದು ಶೇ.1.65ರಷ್ಟು ವರದಿಯಾಗಿದೆ.

    ಪ್ರಕರಣಗಳ ಸಂಖ್ಯೆಯು ಬೆಂಗಳೂರು, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ. ಮಾರ್ಚ್ 15ರಂದು ತಜ್ಞರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕ್ರಮ ಕೈಗೊಳ್ಳಲಾಗಿದೆ.

    ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಜಾಗೃತಿ ಅಭಿಯಾನ, ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು.

    ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ ಹಾಸಿಗೆಗಳು, ಐಸಿಯುಗಳನ್ನು ಮೀಸಲಿಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿರುವ 3,500ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು. ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ನೀತಿಯಂತೆ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಬೇಕಾಗಿದೆ. ವೃದ್ಧಾಶ್ರಮಗಳಲ್ಲಿ, ಅಪಾರ್ಟ್ ಮೆಂಟ್ ಗಳಲ್ಲಿ ಹಾಗೂ ದುರ್ಗಮ ಪ್ರದೇಶಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲು ಅನುಮತಿ ಕೋರಲಾಯಿತು. ಇಂತಹ ಸ್ಥಳಗಳಲ್ಲಿ ಲಸಿಕೆ ಕೇಂದ್ರದಲ್ಲಿ ಒದಗಿಸುವ ಎಲ್ಲ ಸೌಲಭ್ಯಗಳು, ಅಂಬುಲೆನ್ಸ್ ಹಾಗೂ ಸಾಕಷ್ಟು ಸಂಖ್ಯೆಯ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಪ್ರಧಾನಿ ಗಮನಕ್ಕೆ ತರಲಾಗಿದೆ ಎಂದು ಸಿಎಂ ತಿಳಿಸಿದರು.

  • ಸಾವಿರದ ಗಡಿ ದಾಟಿದ ದಿನದ ಕೊರೊನಾ ಕೇಸ್- 1,135 ಪ್ರಕರಣ ಪತ್ತೆ

    ಸಾವಿರದ ಗಡಿ ದಾಟಿದ ದಿನದ ಕೊರೊನಾ ಕೇಸ್- 1,135 ಪ್ರಕರಣ ಪತ್ತೆ

    – ಬೆಂಗಳೂರಲ್ಲೇ 710 ಕೇಸ್, ರಾಜ್ಯದಲ್ಲಿ 6 ಬಲಿ
    – ನಾಲ್ಕೈದು ತಿಂಗಳ ಬಳಿಕ ಮತ್ತೆ ಸಾವಿರ ದಾಟಿದ ದಿನದ ಸೋಂಕಿತರ ಸಂಖ್ಯೆ

    ಬೆಂಗಳೂರು: ಇಂದು ರಾಜ್ಯದಲ್ಲಿ 1,135 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 561 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 6 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 9,428 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 129 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ನಾಲ್ಕೈದು ತಿಂಗಳ ಬಳಿಕ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.65 ಮತ್ತು ಮರಣ ಪ್ರಮಾಣ ಶೇ.0.52ರಷ್ಟು ದಾಖಲಾಗಿದೆ. ಇಂದು 68,469 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 82,038 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 9, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 38, ಬೆಂಗಳೂರು ನಗರ 710, ಬೀದರ್ 32, ಚಾಮರಾಜನಗರ 0, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 2, ಚಿತ್ರದುರ್ಗ 11, ದಕ್ಷಿಣ ಕನ್ನಡ 50, ದಾವಣಗೆರೆ 7, ಧಾರವಾಡ 7, ಗದಗ 4, ಹಾಸನ 15, ಹಾವೇರಿ 0, ಕಲಬುರಗಿ 46, ಕೊಡಗು 2, ಕೋಲಾರ 6, ಕೊಪ್ಪಳ 2, ಮಂಡ್ಯ 6, ಮೈಸೂರು 58, ರಾಯಚೂರು 7, ರಾಮನಗರ 1, ಶಿವಮೊಗ್ಗ 5, ತುಮಕೂರು 32, ಉಡುಪಿ 32, ಉತ್ತರ ಕನ್ನಡ 5, ವಿಜಯಪುರ 13 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಸಾವಿರದ ಗಡಿಯತ್ತ ಕೊರೊನಾ ಕೇಸ್- ಇಂದು 921 ಪ್ರಕರಣ ಪತ್ತೆ

    ಸಾವಿರದ ಗಡಿಯತ್ತ ಕೊರೊನಾ ಕೇಸ್- ಇಂದು 921 ಪ್ರಕರಣ ಪತ್ತೆ

    – 992 ಜನ ಡಿಸ್ಚಾರ್ಜ್, ಒಬ್ಬರು ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 921 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 992 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು ಕೇವಲ ಒಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,387ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,59,338ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 8,042 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 123 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.26 ಮತ್ತು ಮರಣ ಪ್ರಮಾಣ ಶೇ.0.10ರಷ್ಟು ದಾಖಲಾಗಿದೆ. ಇಂದು 72,650 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 39,253 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 630, ಬೀದರ್ 15, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 43, ದಾವಣಗೆರೆ 5, ಧಾರವಾಡ 10, ಗದಗ 4, ಹಾಸನ 11, ಹಾವೇರಿ 0, ಕಲಬುರಗಿ 35, ಕೊಡಗು 5, ಕೋಲಾರ 3, ಕೊಪ್ಪಳ 0, ಮಂಡ್ಯ 3, ಮೈಸೂರು 47, ರಾಯಚೂರು 1, ರಾಮನಗರ 0, ಶಿವಮೊಗ್ಗ 7, ತುಮಕೂರು 38, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಇಂದು 800 ಗಡಿ ದಾಟಿದ ಸೋಂಕಿತರ ಸಂಖ್ಯೆ- 833 ಕೇಸ್

    ಇಂದು 800 ಗಡಿ ದಾಟಿದ ಸೋಂಕಿತರ ಸಂಖ್ಯೆ- 833 ಕೇಸ್

    – 545 ಜನ ಡಿಸ್ಚಾರ್ಜ್, 5 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 833 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 545 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 5 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,386ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,58,417ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 8,114 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 125 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.13 ಮತ್ತು ಮರಣ ಪ್ರಮಾಣ ಶೇ.0.60ರಷ್ಟು ದಾಖಲಾಗಿದೆ. ಇಂದು 73,632 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 85,765 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 8, ಬಳ್ಳಾರಿ 17, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 526, ಬೀದರ್ 19, ಚಾಮರಾಜನಗರ 1, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 0, ಧಾರವಾಡ 6, ಗದಗ 1, ಹಾಸನ 13, ಹಾವೇರಿ 0, ಕಲಬುರಗಿ 38, ಕೊಡಗು 3, ಕೋಲಾರ 30, ಕೊಪ್ಪಳ 0, ಮಂಡ್ಯ 2, ಮೈಸೂರು 30, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 36, ಉಡುಪಿ 11, ಉತ್ತರ ಕನ್ನಡ 15, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮತ್ತೆ ಹೆಚ್ಚುತ್ತಿದೆ ಕೊರೊನಾ ಪ್ರಕರಣಗಳ ಸಂಖ್ಯೆ ಇಂದೂ 783 ಕೇಸ್

    ಮತ್ತೆ ಹೆಚ್ಚುತ್ತಿದೆ ಕೊರೊನಾ ಪ್ರಕರಣಗಳ ಸಂಖ್ಯೆ ಇಂದೂ 783 ಕೇಸ್

    – 406 ಜನ ಡಿಸ್ಚಾರ್ಜ್, 2 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 783 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 406 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು ಇಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,381ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,57,584ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 7,831 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 110 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ಇಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.07 ಮತ್ತು ಮರಣ ಪ್ರಮಾಣ ಶೇ.0.25ರಷ್ಟು ದಾಖಲಾಗಿದೆ. ಇಂದು 73,101 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 9,344 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 5, ಬಳ್ಳಾರಿ 20, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 492, ಬೀದರ್ 20, ಚಾಮರಾಜನಗರ 3, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 8, ದಕ್ಷಿಣ ಕನ್ನಡ 11, ದಾವಣಗೆರೆ 7, ಧಾರವಾಡ 15, ಗದಗ 4, ಹಾಸನ 9, ಹಾವೇರಿ 0, ಕಲಬುರಗಿ 20, ಕೊಡಗು 5, ಕೋಲಾರ 1, ಕೊಪ್ಪಳ 1, ಮಂಡ್ಯ 2, ಮೈಸೂರು 50, ರಾಯಚೂರು 3, ರಾಮನಗರ 1, ಶಿವಮೊಗ್ಗ 2, ತುಮಕೂರು 36, ಉಡುಪಿ 14, ಉತ್ತರ ಕನ್ನಡ 3, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮೂಗಿನ ಮೂಲಕ ಲಸಿಕೆ – 10 ಮಂದಿಯ ಮೇಲೆ ಪ್ರಯೋಗ

    ಮೂಗಿನ ಮೂಲಕ ಲಸಿಕೆ – 10 ಮಂದಿಯ ಮೇಲೆ ಪ್ರಯೋಗ

    ಹೈದರಾಬಾದ್‌: ಮೂಗಿನ ಮೂಲಕ ಲಸಿಕೆಯ (ಇಂಟ್ರಾನಾಸಲ್ ವ್ಯಾಕ್ಸಿನ್‌) ಮೊದಲ ಕ್ಲಿನಿಕಲ್‌ ಪ್ರಯೋಗ ಆರಂಭಗೊಂಡಿದ್ದು 10 ಮಂದಿ ಭಾರತ್‌ ಬಯೋಟೆಕ್‌ ಕಂಪನಿಯ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ.

    ಬುಧವಾರ 10 ಮಂದಿ ಲಸಿಕೆ ತೆಗೆದುಕೊಂಡಿದ್ದು, ಶೀಘ್ರವೇ ಪಾಟ್ನಾ, ಚೆನ್ನೈ ಮತ್ತು ನಾಗ್ಪುರದಲ್ಲಿ ಲಸಿಕೆಯ ಪ್ರಯೋಗ ನಡೆಯಲಿದೆ. ಮೊದಲ ಹಂತದಲ್ಲಿ ದೇಶದಲ್ಲಿ 175 ಮಂದಿ ಈ ಲಸಿಕೆಯನ್ನು ಪಡೆದುಕೊಳ್ಳಲಿದ್ದಾರೆ.

    ಕಳೆದ ಶುಕ್ರವಾರ ಹೈದರಾಬಾದ್‌ನಲ್ಲಿ ಕ್ಲಿನಿಕಲ್‌ ಪ್ರಯೋಗ ಆರಂಭಗೊಂಡಿದ್ದು ಮೊದಲ ದಿನ ಇಬ್ಬರು ಲಸಿಕೆಯನ್ನು ಪಡೆದುಕೊಂಡಿದ್ದರು.

    ಇಂಟ್ರಾನಾಸಲ್ ವ್ಯಾಕ್ಸಿನ್‌ ಪ್ರಯೋಗ ಯಶಸ್ವಿಯಾದರೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಇದು ಗೇಮ್‌ ಚೇಂಜರ್‌ ಆಗಲಿದೆ. ಬಹುತೇಕ ಲಸಿಕೆಗಳನ್ನು ಸ್ನಾಯುಗಳ ಮೂಲಕ ನೀಡಲಾಗುತ್ತದೆ. ಈಗ ನೀಡಲಾಗುತ್ತಿರುವ ಕೊರೊನಾ ಲಸಿಕೆಯನ್ನು ಸೂಜಿಯ ಮೂಲಕ ದೇಹಕ್ಕೆ ಕಳುಹಿಸಲಾಗುತ್ತದೆ. ಆದರೆ ಈ ಲಸಿಕೆಯನ್ನು ಮೂಗಿನ ಹೊಳ್ಳೆಗಳ ಒಳಗಡೆ ಸಿಂಪಡಿಸಲಾಗುತ್ತದೆ. ಹೀಗಾಗಿ ಇದರಲ್ಲಿ ಸೂಜಿಯ ಬಳಕೆಯ ಅಗತ್ಯವೇ ಇರುವುದಿಲ್ಲ.

    ಭಾರತ್‌ ಬಯೋಟೆಕ್‌ ಕಂಪನಿಯ ಮುಖ್ಯಸ್ಥ ಡಾ. ಕೃಷ್ಣ ಎಲ್ಲಾ ಪ್ರತಿಕ್ರಿಯಿಸಿ, ಕಂಪನಿ ಅಮೆರಿಕದ ವೈದ್ಯಕೀಯ ವಿಶ್ವವಿದ್ಯಾಲಯದ ಜೊತೆ ಸೇರಿ ನಾಸಲ್ ವ್ಯಾಕ್ಸಿನ್‌ ಬಗ್ಗೆ ಕೆಲಸ ಮಾಡುತ್ತಿದೆ. ನಾಸಲ್‌ ವ್ಯಾಕ್ಸಿನ್‌ಗಳು ಉತ್ತಮ ಆಯ್ಕೆ ಎಂದು ಈಗಾಗಲೇ ಸಂಶೋಧನೆಗಳು ತಿಳಿಸಿವೆ ಎಂದು ಹೇಳಿದ್ದಾರೆ.

    ಕೊರೊನಾ ವೈರಸ್‌ ಮೂಗಿನ ಮೂಲಕ ದೇಹಕ್ಕೆ ಪ್ರವೇಶಿಸುತ್ತದೆ. ಮೂಗಿನ ಮೂಲಕ ಲಸಿಕೆ ನೀಡಿದರೆ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಬರುವುದರ ಜೊತೆಗೆ ಸೋಂಕು ಹರಡವುದನ್ನು ತಪ್ಪಿಸಬಹುದಾಗಿದೆ.

    ಭಾರತ್‌ ಬಯೋಟೆಕ್‌ ಕಂಪನಿ ಅಭಿವೃದ್ಧಿ ಪಡಿಸಿದರುವ ಕೊವಾಕ್ಸಿನ್‌ ಲಸಿಕೆಯನ್ನು ದೇಶದಲ್ಲಿ ತರ್ತು ಬಳಕೆಗೆ ಅನುಮತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಲಸಿಕೆಯನ್ನು ಪಡೆದುಕೊಂಡಿದ್ದರು.

  • ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ ತಾಯಿ

    ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ ತಾಯಿ

    ನವದೆಹಲಿ: ತಮ್ಮ ತಾಯಿ ಹೀರಾಬೆನ್ ಅವರು ಲಸಿಕೆ ಪಡೆದಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮ್ಮ ತಾಯಿ ಲಸಿಕೆ ಪಡೆದಿರುವ ವಿಚಾರವನ್ನು ಹಂಚಿಕೊಂಡು ಅರ್ಹರು ಕೊರೊನಾ ಲಸಿಕೆ ಪಡೆದು ಅಭಿಯಾನದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಬರೆದಿರುವ ಅವರು, ನನ್ನ ತಾಯಿ ಇಂದು ಕೊರೊನಾ ಮೊದಲ ಡೋಸ್ ಲಸಿಕೆ ಪಡೆದಿರುವ ವಿಚಾರವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ಅರ್ಹರು ಲಸಿಕೆ ಪಡೆಯುವಂತೆ ಸಹಾಯ ಮಾಡಿ, ಪ್ರೇರಣೆ ನೀಡಿ ಎಂದು ಈ ಮೂಲಕ ನಾನು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಮಾರ್ಚ್ 1ರಿಂದ 3ನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, ಹಿರಿಯ ನಾಗರಿಕರು ಹಾಗೂ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

    3ನೇ ಹಂತದ ಅಭಿಯಾನ ಆರಂಭವಾದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಏಮ್ಸ್‍ಗೆ ತೆರಳಿ ಲಸಿಕೆ ಪಡೆದಿದ್ದಾರೆ. ಈ ಮೂಲಕ ಇತರರಿಗೆ ಪ್ರೇರಣೆ ನೀಡಿದ್ದಾರೆ. ದೇಸಿಯ ಕಂಪನಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್ ಲಸಿಕೆ ಪಡೆದು ಮಾದರಿಯಾಗಿದ್ದಾರೆ.

    ಜನವರಿ 16ರಂದು ಭಾರತದಲ್ಲಿ ಎರಡು ಲಸಿಕೆಗಳಿಗೆ ಅನುಮತಿ ನೀಡಲಾಗಿದ್ದು, ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ಅನುಮತಿ ಸಿಕ್ಕಿದೆ. ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಭಾರತದ ಸೇರಂ ಇನ್‍ಸ್ಟಿಟ್ಯೂಟ್‍ನಲ್ಲಿ ಲಸಿಕೆಯನ್ನು ಉತ್ಪಾದಿಸಲಾಗುತ್ತಿದೆ.

  • ಮತ್ತೆ ಹೆಚ್ಚುತ್ತಿದೆ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು 760 ಕೇಸ್

    ಮತ್ತೆ ಹೆಚ್ಚುತ್ತಿದೆ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು 760 ಕೇಸ್

    – 478 ಜನ ಡಿಸ್ಚಾರ್ಜ್, 5 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 760 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 331 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 6 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,379ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,56,801ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 7,456 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 115 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 5, ದಕ್ಷಿಣ ಕನ್ನಡದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.08 ಮತ್ತು ಮರಣ ಪ್ರಮಾಣ ಶೇ.0.78ರಷ್ಟು ದಾಖಲಾಗಿದೆ. ಇಂದು 70,133 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 62,198 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 488, ಬೀದರ್ 15, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 0, ಚಿತ್ರದುರ್ಗ 6, ದಕ್ಷಿಣ ಕನ್ನಡ 25, ದಾವಣಗೆರೆ 3, ಧಾರವಾಡ 25, ಗದಗ 1, ಹಾಸನ 4, ಹಾವೇರಿ 1, ಕಲಬುರಗಿ 37, ಕೊಡಗು 6, ಕೋಲಾರ 3, ಕೊಪ್ಪಳ 1, ಮಂಡ್ಯ 4, ಮೈಸೂರು 22, ರಾಯಚೂರು 1, ರಾಮನಗರ 1, ಶಿವಮೊಗ್ಗ 5, ತುಮಕೂರು 36, ಉಡುಪಿ 33, ಉತ್ತರ ಕನ್ನಡ 7, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 478 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 478 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 5 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,367ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,55,451ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,815 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 116 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 4, ಮೈಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.77 ಮತ್ತು ಮರಣ ಪ್ರಮಾಣ ಶೇ.1.14ರಷ್ಟು ದಾಖಲಾಗಿದೆ. ಇಂದು 56,445 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 55,612 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 287, ಬೀದರ್ 7, ಚಾಮರಾಜನಗರ 1, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 6, ದಕ್ಷಿಣ ಕನ್ನಡ 14, ದಾವಣಗೆರೆ 1, ಧಾರವಾಡ 9, ಗದಗ 5, ಹಾಸನ 5, ಹಾವೇರಿ 0, ಕಲಬುರಗಿ 22, ಕೊಡಗು 2, ಕೋಲಾರ 9, ಕೊಪ್ಪಳ 1, ಮಂಡ್ಯ 3, ಮೈಸೂರು 7, ರಾಯಚೂರು 1, ರಾಮನಗರ 0, ಶಿವಮೊಗ್ಗ 3, ತುಮಕೂರು 12, ಉಡುಪಿ 18, ಉತ್ತರ ಕನ್ನಡ 4, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.