Tag: ಕೊರೊನಾ ಲಸಿಕೆ

  • ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 580 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 355 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 5 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,359ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,54,393ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,594 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 109 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 3, ಹಾಸನ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.70 ಮತ್ತು ಮರಣ ಪ್ರಮಾಣ ಶೇ.0.86ರಷ್ಟು ದಾಖಲಾಗಿದೆ. ಇಂದು 82,229 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 28,725 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 367, ಬೀದರ್ 20, ಚಾಮರಾಜನಗರ 3, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 5, ಚಿತ್ರದುರ್ಗ 7, ದಕ್ಷಿಣ ಕನ್ನಡ 27, ದಾವಣಗೆರೆ 7, ಧಾರವಾಡ 7, ಗದಗ 4, ಹಾಸನ 8, ಹಾವೇರಿ 1, ಕಲಬುರಗಿ 18, ಕೊಡಗು 9, ಕೋಲಾರ 5, ಕೊಪ್ಪಳ 0, ಮಂಡ್ಯ 2, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 13, ಉಡುಪಿ 14, ಉತ್ತರ ಕನ್ನಡ 16, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    – 427 ಜನ ಡಿಸ್ಚಾರ್ಜ್, 4 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 677 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 427 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 4 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,354ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,374 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 112 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 2, ಬೀದರ್ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.85 ಮತ್ತು ಮರಣ ಪ್ರಮಾಣ ಶೇ.0.59ರಷ್ಟು ದಾಖಲಾಗಿದೆ. ಇಂದು 78,807 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 20,945 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 7, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 444, ಬೀದರ್ 13, ಚಾಮರಾಜನಗರ 2, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 20, ದಾವಣಗೆರೆ 3, ಧಾರವಾಡ 10, ಗದಗ 2, ಹಾಸನ 8, ಹಾವೇರಿ 1, ಕಲಬುರಗಿ 37, ಕೊಡಗು 2, ಕೋಲಾರ 2, ಕೊಪ್ಪಳ 1, ಮಂಡ್ಯ 4, ಮೈಸೂರು 23, ರಾಯಚೂರು 3, ರಾಮನಗರ 0, ಶಿವಮೊಗ್ಗ 3, ತುಮಕೂರು 28, ಉಡುಪಿ 22, ಉತ್ತರ ಕನ್ನಡ 3, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • 571 ಪಾಸಿಟಿವ್, 496 ಜನ ಡಿಸ್ಚಾರ್ಜ್- 4 ಸಾವು

    571 ಪಾಸಿಟಿವ್, 496 ಜನ ಡಿಸ್ಚಾರ್ಜ್- 4 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 571 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 496 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 4 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,350ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,53,136ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,128 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 115 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 2, ಧಾರವಾಡ 1 ಹಾಗೂ ಮೈಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.72 ಮತ್ತು ಮರಣ ಪ್ರಮಾಣ ಶೇ.0.70ರಷ್ಟು ದಾಖಲಾಗಿದೆ. ಇಂದು 78,618 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 16,203 ಜನ ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 385, ಬೀದರ್ 8, ಚಾಮರಾಜನಗರ 2, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 0, ಚಿತ್ರದುರ್ಗ 6, ದಕ್ಷಿಣ ಕನ್ನಡ 19, ದಾವಣಗೆರೆ 4, ಧಾರವಾಡ 5, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 23, ಕೊಡಗು 5, ಕೋಲಾರ 3, ಕೊಪ್ಪಳ 1, ಮಂಡ್ಯ 2, ಮೈಸೂರು 20, ರಾಯಚೂರು 3, ರಾಮನಗರ 2, ಶಿವಮೊಗ್ಗ 6, ತುಮಕೂರು 11, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 13 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • 528 ಪಾಸಿಟಿವ್, 413 ಜನ ಡಿಸ್ಚಾರ್ಜ್- 3 ಸಾವು

    528 ಪಾಸಿಟಿವ್, 413 ಜನ ಡಿಸ್ಚಾರ್ಜ್- 3 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 528 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 413 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 3 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,346ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,52,565ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,057 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 116 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.77 ಮತ್ತು ಮರಣ ಪ್ರಮಾಣ ಶೇ.0.56ರಷ್ಟು ದಾಖಲಾಗಿದೆ. ಇಂದು 68,339 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 15,294 ಜನ ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 311, ಬೀದರ್ 20, ಚಾಮರಾಜನಗರ 9, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 1, ಚಿತ್ರದುರ್ಗ 7, ದಕ್ಷಿಣ ಕನ್ನಡ 19, ದಾವಣಗೆರೆ 3, ಧಾರವಾಡ 16, ಗದಗ 1, ಹಾಸನ 11, ಹಾವೇರಿ 1, ಕಲಬುರಗಿ 20, ಕೊಡಗು 8, ಕೋಲಾರ 4, ಕೊಪ್ಪಳ 0, ಮಂಡ್ಯ 4, ಮೈಸೂರು 13, ರಾಯಚೂರು 6, ರಾಮನಗರ 2, ಶಿವಮೊಗ್ಗ 2, ತುಮಕೂರು 7, ಉಡುಪಿ 23, ಉತ್ತರ ಕನ್ನಡ 2, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಬಿಸಿ ಪಾಟೀಲ್‌ ಲಸಿಕೆ ಪ್ರಕರಣ – ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ರವಾನೆ

    ಬಿಸಿ ಪಾಟೀಲ್‌ ಲಸಿಕೆ ಪ್ರಕರಣ – ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ರವಾನೆ

    ಬೆಂಗಳೂರು: ಕೃಷಿ ಸಚಿವ ಬಿಸಿ ಪಾಟೀಲ್‌ ಮನೆಯಲ್ಲೇ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ.

    ಮನೆಯಲ್ಲೇ ಲಸಿಕೆ ಹಾಕಿಸಲು ಕಾರಣರಾದ ಅಧಿಕಾರಿಗೆ ಕಾರಣ ಕೇಳಿ ನೋಟಿಸ್‌ ಕೊಟ್ಟಿದ್ದೇವೆ. ಇನ್ಮುಂದೆ ಇಂಥ ಘಟನೆ ಮರುಕಳಿಸಿದಂತೆ ನೋಡಿಕೊಳ್ಳುತ್ತೇವೆ. ಪ್ರಕರಣ ನಮ್ಮ ಅರಿವಿಗೆ ಬಾರದೇ ನಡೆದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ವರದಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬಿಸಿ ಪಾಟೀಲ್‌ ಪ್ರಕರಣದ ಬಗ್ಗೆ ವರದಿಯನ್ನು ನೀಡುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದರು.

    ಬಿಸಿ ಪಾಟೀಲ್ ಮತ್ತು ಅವರ ಪತ್ನಿ ವನಜಾ ಹಿರೆಕೆರೂರಿನ ತಮ್ಮ ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಲಸಿಕೆ ಪಡೆದಿದ್ದರು. ಮನೆಯಲ್ಲೇ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಈ ಕಾರಣಕ್ಕೆ ಬಿಸಿ ಪಾಟೀಲ್‌ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಕೇಂದ್ರ ಆರೋಗ್ಯ ಇಲಾಖೆ ಕಾರಣ ಕೇಳಿ ವರದಿ ನೀಡುವಂತೆ ಸೂಚಿಸಿತ್ತು.

  • 437 ಪಾಸಿಟಿವ್, 309 ಜನ ಡಿಸ್ಚಾರ್ಜ್- 7 ಸಾವು

    437 ಪಾಸಿಟಿವ್, 309 ಜನ ಡಿಸ್ಚಾರ್ಜ್- 7 ಸಾವು

    ಬೆಂಗಳೂರು: ಇಂದು ರಾಜ್ಯದಲ್ಲಿ 437 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 309 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 7 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,343ಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿತರ ಸಂಖ್ಯೆ 9,52,037ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 5,945 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 116 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 4, ಮೈಸೂರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.68 ಮತ್ತು ಮರಣ ಪ್ರಮಾಣ ಶೇ.1.60ರಷ್ಟು ದಾಖಲಾಗಿದೆ. ಇಂದು 64,247 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 10,046 ಜನ ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 282, ಬೀದರ್ 16, ಚಾಮರಾಜನಗರ 2, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 1, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 3, ಧಾರವಾಡ 1, ಗದಗ 0, ಹಾಸನ 6, ಹಾವೇರಿ 1, ಕಲಬುರಗಿ 8, ಕೊಡಗು 1, ಕೋಲಾರ 1, ಕೊಪ್ಪಳ 1, ಮಂಡ್ಯ 5, ಮೈಸೂರು 15, ರಾಯಚೂರು 2, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 2, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮನೆಯಲ್ಲಿ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ: ಸುಧಾಕರ್

    ಮನೆಯಲ್ಲಿ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ: ಸುಧಾಕರ್

    – ಈ ತಪ್ಪು ಮುಂದೆ ಆಗಲ್ಲ, ಶೀಘ್ರದಲ್ಲೇ ಸುತ್ತೋಲೆ

    ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಕೋವಿಡ್ ಮಾರ್ಗಸೂಚಿ ಪ್ರಕಾರ ಮನೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯಲು ಯಾರಿಗೂ ಅವಕಾಶವಿಲ್ಲ ಎಂದು ಸಚಿವ ಬಿ.ಸಿ.ಪಾಟೀಲ್ ಅವರ ನಡೆಗೆ ಆರೋಗ್ಯ ಸಚಿವ ಸುಧಾಕರ್ ಬೇಸರ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಆರೋಗ್ಯ ಸಚಿವರು, ನಾನು ವೈಯಕ್ತಿಕವಾಗಿ ಪಾಟೀಲರ ಜೊತೆ ಮಾತನಾಡುತ್ತೇನೆ. ಅದೇ ರೀತಿ ಕೊರೊನಾ ವ್ಯಾಕ್ಸಿನ್ ಪಡೆಯುವುದರ ಕುರಿತಾಗಿ ಸುತ್ತೋಲೆ ಹೊರಡಿಸಲಾಗುತ್ತದೆ. ಸಚಿವರು ಸೂಚನೆ ನೀಡಿದ್ದರಿಂದ ನಮ್ಮ ಅಧಿಕಾರಿಗಳು ಪ್ರಶ್ನಿಸಿಲ್ಲ. ಹಾಗಾಗಿ ಮನೆಗೆ ತೆರಳಿ ಕೊರೊನಾ ಲಸಿಕೆ ನೀಡಿದ್ದಾರೆ ಎಂದು ಹೇಳಿದರು.

    ಮನೆಯಲ್ಲಿ ಲಸಿಕೆ ಪಡೆದ್ರೆ ತಪ್ಪಿಲ್ಲ ಅನ್ನೋ ತಪ್ಪುಗ್ರಹಿಕೆಯಿಂದಾಗಿ ಈ ಘಟನೆ ನಡೆದಿದೆ. ಬಿ.ಸಿ.ಪಾಟೀಲರು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಸ್ವಲ್ಪ ತಪ್ಪಾಗಿದ್ದು, ಮತ್ತೇ ಈ ರೀತಿ ಆಗದಂತೆ ಎಚ್ಚರವಹಿಸುತ್ತೇವೆ. ಅಧಿಕಾರಿಗಳು ಮಾರ್ಗಸೂಚಿಗಳ ಬಗ್ಗೆ ಹೇಳಬಹುದಾಗಿತ್ತು ಎಂದು ಸ್ಪಷ್ಟಪಡಿಸಿದರು.

    ಬಿ.ಸಿ.ಪಾಟೀಲ್ ಮೊಂಡುವಾದ: ಇವತ್ತು ನನ್ನನ್ನು ಭೇಟಿಯಾಗಲು ಹಲವು ಜನರು ಬಂದಿದ್ದರು. ಆಸ್ಪತ್ರೆಗೆ ಹೋದ್ರೆ ಅರ್ಧ ಗಂಟೆ ಕಾಯಬೇಕಾಗಿತ್ತು. ಸ್ವಾಮಿ ಕಾರ್ಯದ ಜೊತೆಗೆ ಸ್ವ ಕಾರ್ಯ ಸಹ ಅಗಬೇಕು. ಆದ್ರೆ ಇದನ್ನು ವಿವಾದ ಅಂತ ಹೇಳಿದ್ರೆ ಏನು ಮಾಡಲು ಸಾಧ್ಯ. ವಿವಾದ ಅಂತ ಮಾಧ್ಯಮದವರು ಹೇಳಿದ್ರೆ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಳ್ಳುತ್ತಿದ್ದೆ ಎಂದು ತಮ್ಮ ನಡೆಯನ್ನ ಸಮರ್ಥಿಸಿಕೊಂಡು ಹಾರಿಕೆಯ ಉತ್ತರ ನೀಡಿದರು.

    ನಮಗೆ ಕೆಲವೊಂದು ವಿಶೇಷ ಸೌಲಭ್ಯಗಳಿರುತ್ತೇವೆ. ಆ ಸೌಲಭ್ಯ ಬಳಸಿ ವಿಶೇಷ ಅಧಿಕಾರದಿಂದ ವೈದ್ಯಕೀಯ ಸಿಬ್ಬಂದಿಯನ್ನ ಕರೆಸಿ ಲಸಿಕೆ ಪಡೆದುಕೊಂಡಿದ್ದೇನೆ. 15 ದಿನ ಪ್ರವಾಸದಲ್ಲಿದ್ದರಿಂದ ಇವತ್ತು ಕ್ಷೇತ್ರಕ್ಕೆ ಬಂದಿದ್ದರಿಂದು ಬಹಳ ಕೆಲಸ ಇತ್ತು. ನಾಳೆ ಮತ್ತೆ ಅಧಿವೇಶನಕ್ಕೆ ಹೋಗಬೇಕಿತ್ತು ಎಂದು ಹೇಳಿದರು.

  • ಕೊರೊನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ ವೃದ್ಧ

    ಕೊರೊನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ ವೃದ್ಧ

    ನೆಲಮಂಗಲ: ಎರಡನೇ ದಿನವೂ ಉತ್ಸಾಹದಿಂದ ಆಸ್ಪತ್ರೆ ಕಡೆ ಮುಖಮಾಡಿದ ವಯೋವೃದ್ಧರು, ಯುವಕರು ನಾಚುವಂತೆ ಕೊವೀಡ್ ಲಸಿಕೆ ಹಾಕಿಸಿಕೊಂಡು ಲವಲವಿಕೆಯಿಂದ ತಮ್ಮ ಉತ್ಸಾಹವನ್ನು ತೋರಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ದಂಪತಿ ಅತ್ಯಂತ ಉತ್ಸಾಹದಿಂದ ಕೋವಿಡ್ 19 ಲಸಿಕೆ ಪಡೆದುಕೊಂಡಿದ್ದು ಕಂಡು ಬಂತು. ವ್ಯಾಕ್ಸಿನ್ ಪಡೆದುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ವೃದ್ಧರು ಆಸ್ಪತ್ರೆಯಲ್ಲಿ ಜಮಾಯಿಸಿದ್ದರು.

    90 ವರ್ಷದ ವೃದ್ಧೆ ಕೂಡ ಕೊವೀಡ್-19 ಲಸಿಕೆ ಪಡೆದುಕೊಂಡರು. ಯುವಕರನ್ನು ಕೂಡ ನಾಚಿಸುವಂತೆ ವೃದ್ಧರು ನಗುನಗುತ್ತಲೇ ಆಸ್ಪತ್ರೆಗೆ ಬಂದು ಲಸಿಕೆ ಪಡೆದುಕೊಂಡರು. ಎಲ್ಲಾ ರೀತಿಯಲ್ಲಿ ತಪಾಸಣೆ ಮಾಡಿದ ಬಳಿಕ ಲಸಿಕೆ ನೀಡುತ್ತಿರುವ ವೈದ್ಯರು ಹೆಚ್ಚು ಎಚ್ಚರಿಕೆ ತೆಗೆದುಕೊಂಡಿದ್ದಾರೆ.

  • ಮನೆಯಲ್ಲಿ ವ್ಯಾಕ್ಸಿನ್ ಪಡೆದ್ರೆ ಏನು ತಪ್ಪು?: ಕೌರವ ಮೊಂಡುವಾದ

    ಮನೆಯಲ್ಲಿ ವ್ಯಾಕ್ಸಿನ್ ಪಡೆದ್ರೆ ಏನು ತಪ್ಪು?: ಕೌರವ ಮೊಂಡುವಾದ

    – ಆಸ್ಪತ್ರೆಗೆ ಹೋದ್ರೆ ಅರ್ಧ ಗಂಟೆ ಆಗ್ತಿತ್ತು
    – ಸ್ವಾಮಿ ಕಾರ್ಯದ ಜೊತೆ ಸ್ವಕಾರ್ಯನೂ ಆಗ್ಬೇಕು ಅಲ್ವಾ?

    ಹಾವೇರಿ: ಆಸ್ಪತ್ರೆಗೆ ಹೋಗಿದ್ದರೆ ಅರ್ಧ ಗಂಟೆ ಆಗ್ತಿತ್ತು. ಹಾಗಾಗಿ ಮನೆಗೆ ಆಸ್ಪತ್ರೆಯ ಸಿಬ್ಬಂದಿಯನ್ನ ಕರೆಸಿ ಪತ್ನಿ ಜೊತೆ ಲಸಿಕೆ ಪಡೆದಿದ್ದೇನೆ. ಮನೆಯಲ್ಲಿ ವ್ಯಾಕ್ಸಿನ್ ಪಡೆದ್ರೆ ತಪ್ಪೇನು ಎಂದು ಸಚಿವ ಬಿ.ಸಿ.ಪಾಟೀಲ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಮನೆಯಲ್ಲಿ ಲಸಿಕೆ ಪಡೆದ ವಿವಿಐಪಿ ಸಂಸ್ಕೃತಿಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವರು, ಇವತ್ತು ನನ್ನನ್ನು ಭೇಟಿಯಾಗಲು ಹಲವು ಜನರು ಬಂದಿದ್ದರು. ಆಸ್ಪತ್ರೆಗೆ ಹೋದ್ರೆ ಅರ್ಧ ಗಂಟೆ ಕಾಯಬೇಕಾಗಿತ್ತು. ಸ್ವಾಮಿ ಕಾರ್ಯದ ಜೊತೆಗೆ ಸ್ವ ಕಾರ್ಯ ಸಹ ಅಗಬೇಕು. ಆದ್ರೆ ಇದನ್ನು ವಿವಾದ ಅಂತ ಹೇಳಿದ್ರೆ ಏನು ಮಾಡಲು ಸಾಧ್ಯ. ವಿವಾದ ಅಂತ ಮಾಧ್ಯಮದವರು ಹೇಳಿದ್ರೆ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಳ್ಳುತ್ತಿದ್ದೆ ಎಂದು ತಮ್ಮ ನಡೆಯನ್ನ ಸಮರ್ಥಿಸಿಕೊಂಡು ಹಾರಿಕೆಯ ಉತ್ತರ ನೀಡಿದರು.

    ನಮಗೆ ಕೆಲವೊಂದು ವಿಶೇಷ ಸೌಲಭ್ಯಗಳಿರುತ್ತೇವೆ. ಆ ಸೌಲಭ್ಯ ಬಳಸಿ ವಿಶೇಷ ಅಧಿಕಾರದಿಂದ ವೈದ್ಯಕೀಯ ಸಿಬ್ಬಂದಿಯನ್ನ ಕರೆಸಿ ಲಸಿಕೆ ಪಡೆದುಕೊಂಡಿದ್ದೇನೆ. 15 ದಿನ ಪ್ರವಾಸದಲ್ಲಿದ್ದರಿಂದ ಇವತ್ತು ಕ್ಷೇತ್ರಕ್ಕೆ ಬಂದಿದ್ದರಿಂದು ಬಹಳ ಕೆಲಸ ಇತ್ತು. ನಾಳೆ ಮತ್ತೆ ಅಧಿವೇಶನಕ್ಕೆ ಹೋಗಬೇಕಿತ್ತು ಎಂದು ಹೇಳಿದರು.

    ಆರೋಗ್ಯಾಧಿಕಾರಿಗಳ ಸಮರ್ಥನೆ: ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಹೆಚ್‍ಓ ರಾಜೇಂದ್ರ ದೊಡ್ಡಮನಿ, ಮನೆಯಲ್ಲಿ ಲಸಿಕೆ ಪಡೆಯಲು ಅವಕಾಶವಿಲ್ಲ. ಸಚಿವರು ಮನೆಯಲ್ಲಿ ಲಸಿಕೆ ಪಡೆದುಕೊಂಡಿರುವ ಮಾಹಿತಿ ನನಗಿಲ್ಲ. ಈ ಬಗ್ಗೆ ವಿಚಾರಿಸುತ್ತೇನೆ ಎಂದು ಹೇಳಿದರು. ಇನ್ನು ಮನೆಗೆ ಸಿಬ್ಬಂದಿ ಕರೆಸಿ ಲಸಿಕೆ ಪಡೆದುಕೊಂಡ ನಡೆಯನ್ನ ಟಿಎಚ್‍ಓ ಡಾ. ಮಕಂದಾರ್ ಸಮರ್ಥಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಹೆಚ್ಚಿನ ಜನರು ಇರೋದರಿಂದ ಮನೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

    ಸೋಮವಾರ ಎಷ್ಟೋ ಜನ ಊರುಗೋಲು ಹಿಡಿದು, ವ್ಹೀಲ್ ಚೇರ್ ಮೇಲೆ ಕುಳಿತು ಗಂಟೆಗಟ್ಟಲೇ ಕಾದು ಲಸಿಕೆ ಪಡೆದಿದ್ದರು. ಸಚಿವರು ಲಸಿಕೆ ಪಡೆಯಲು ಆಸ್ಪತ್ರೆಗೆ ಬರದಷ್ಟು ದಣಿದಿದ್ದರಾ? ಲಸಿಕೆ ಏನು ಫುಡ್ ಡೆಲಿವರಿ ಅಂದುಕೊಂಡಿದ್ದೀರಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

  • ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿಗೆ ಕೊರೊನಾ ಲಸಿಕೆ

    ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿಗೆ ಕೊರೊನಾ ಲಸಿಕೆ

    ಬೆಂಗಳೂರು: ದೇಶಾದ್ಯಂತ ಇಂದಿನಿಂದ ಹಿರಿಯ ನಗರಿಗೆ ಕೋವಿಡ್ 19 ಲಸಿಕೆ ನೀಡಲಾಗುತ್ತಿದ್ದು, ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿ ಲಸಿಕೆಯನ್ನು ಪಡೆದಿದ್ದಾರೆ.

    ಮಣಿಪಾಲ್ ಆಸ್ಪತ್ರೆಯಲ್ಲಿ 97 ವರ್ಷದ ರಾಮಸ್ವಾಮಿ ಪಾರ್ಥಸಾರಥಿ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಈ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುತ್ತಿರುವ ಮೊದಲ ವ್ಯಕ್ತಿ ರಾಮಸ್ವಾಮಿ ಪಾರ್ಥಸಾರಥಿ ಆಗಿದ್ದಾರೆ.

    ಕೊರೊನಾ ಸೋಂಕನ್ನು ಹೊಗಲಾಡಿಸಲು ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ಜನವರಿಯಿಂದ ನೀಡಲಾಗುತ್ತಿದೆ.

    ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿ ಏಮ್ಸ್‍ನಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಪಡೆದರು. ಹೀಗೆ ಇಂದು ದೇಶಾದ್ಯಂತ ಹಲವಾರು ಗಣ್ಯಾತಿಗಣ್ಯರು ಕೊರೊನಾ ಲಸಿಕೆ ಪಡೆದಿದ್ದಾರೆ.