Tag: ಕೊರೊನಾ ಲಸಿಕೆ

  • ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿದ್ದ ವರ್ಕ್ ಆರ್ಡರ್ ನ್ನು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ರದ್ದುಗೊಳಿಸಿದೆ. ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಸಂತಸ ವ್ಯಕ್ತಪಡಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಇತ್ತೀಚೆಗೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರವನ್ನು ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿ, ಕಟ್ಟಡ ಕಾರ್ಮಿಕ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಆಗ್ರಹಿಸಿದ್ದವು. ಇದನ್ನೂ ಓದಿ: ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿತ್ತು. ಆದರೆ ಆಗಲೇ ಬೆಂಗಳೂರಿನ ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆ ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿತ್ತು. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿತ್ತು.

    ಇದೀಗ ಮಂಡಳಿ ಖಾಸಗಿ ಆಸ್ಪತ್ರೆಗಳ ಒಕ್ಕೂಟವಾದ ಫನಾಗೆ ಕಳುಹಿಸಲಾದ ಆದೇಶದಲ್ಲಿ ರಾಜ್ಯ ಸರ್ಕಾರ ಎಲ್ಲ ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ಜಾರಿಗೊಳಿಸಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಮೂಲಕ ಲಸಿಕೆ ಹಾಕುವ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಇದು ಅತ್ಯಂತ ಮಹತ್ವದ ಮತ್ತು ಸ್ವಾಗತಾರ್ಹ ನಿರ್ಧಾರವಾಗಿದೆ. ಈ ಕ್ರಮಕ್ಕಾಗಿ ಮಂಡಳಿ ಕಾರ್ಯದರ್ಶಿಗಳು ಮತ್ತು ಸರ್ಕಾರಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (CWFI) ಅಭಿನಂದನೆ ಸಲ್ಲಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿರುವ ವರ್ಕ್ ಆರ್ಡರ್ ನ್ನು ಕೂಡಲೇ ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಆಗ್ರಹಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರ ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಅಲ್ಲದೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಮಿಕ ಸಚಿವರು ಹಾಗೂ ಹಿರಿಯ ಕಾರ್ಮಿಕ ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 851 ಹೊಸ ಕೊರೊನಾ ಕೇಸ್- 790 ಡಿಸ್ಚಾರ್ಜ್, 15 ಸಾವು

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಮಾಧ್ಯಮದಲ್ಲಿ ಪ್ರಕಟವಾಗಿದೆ, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈಗಾಗಲೇ ಬೆಂಗಳೂರು ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆಗಳನ್ನು ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿದೆ. ಮಂಡಳಿಯಿಂದ ನೀಡಲಾದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿದೆ.

    ಈಗಾಗಲೇ ಕೊರೊನಾ ಸಂಕಷ್ಟಕ್ಕೀಡಾದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವ ನೆಪದಲ್ಲಿ ಸಾವಿರಾರು ಕೋಟಿ ರೂ. ಹಣವನ್ನು ವ್ಯಯ ಮಾಡುವ ಮೂಲಕ ಕಾರ್ಮಿಕ ಸಚಿವರು, ಮಂಡಳಿ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿರುದ್ಧ ಮತ್ತು ಮಂಡಳಿಯ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 20ರಂದು ಮುಖ್ಯಮಂತ್ರಿ ಮನೆ ಚಲೋ ಹೋರಾಟವನ್ನು ಇತರೆ ಕಾರ್ಮಿಕ ಸಂಘಗಳ ಜೊತೆ ಸೇರಿ ಫೆಡರೇಶನ್ ಸಂಘಟಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ವ್ಯಾಕ್ಸಿನ್ ನೀಡಲು ಬಂದ ಆರೋಗ್ಯ ಸಿಬ್ಬಂದಿಗೆ ಕುಡುಕನ ಕಿರಿಕ್

    ವ್ಯಾಕ್ಸಿನ್ ನೀಡಲು ಬಂದ ಆರೋಗ್ಯ ಸಿಬ್ಬಂದಿಗೆ ಕುಡುಕನ ಕಿರಿಕ್

    – ಲಸಿಕೆ ಬೇಡ ಎಂದು ಮರವೇರಿದ ಭೂಪ

    ಯಾದಗಿರಿ/ಬಳ್ಳಾರಿ: ಯಾದಗಿರಿಯಲ್ಲಿ ಲಸಿಕೆ ನೀಡಲು ತೆರಳಿದ್ದ ಆರೋಗ್ಯ ಸಿಬ್ಬಂದಿಗೆ ಕುಡುಕನೋರ್ವ ಕಿರಿಕಿರಿ ಉಂಟು ಮಾಡಿದ್ರೆ, ಬಳ್ಳಾರಿಯಲ್ಲೊಬ್ಬ ವ್ಯಾಕ್ಸಿನ್ ಬೇಡೆವೆಂದು ಮರವೇರಿದ್ದಾನೆ.

    ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡಬೆಂಬಳಿ ಗ್ರಾಮದಲ್ಲಿ ಕುಡುಕನೋರ್ವ ಆರೋಗ್ಯ ಸಿಬ್ಬಂದಿ ಮುಂದೆ ರಾದ್ಧಾಂತ ನಡೆಸಿದ್ದಾನೆ. ಅಲ್ಲದೆ ಕೋವಿಡ್ ಲಸಿಕೆ ನೀಡಲು ಹೋದವರಿಗೆ ಜೀವ ಬೇದರಿಕೆ ಸಹ ಹಾಕಿದ್ದಾನೆ. ನಮ್ಮ ಹತ್ತಿರ ಬರಬೇಡಿ ನಮ್ಮ ಏರಿಯಾಕ್ಕೆ ಬಂದ್ರೆ ಕೋಲಿನಿಂದ ಹೊಡೆಯುತ್ತೇನೆ. ಯಾರನ್ನು ಬೇಕಾದರೂ ಕರೆಯಿಸು, ಬೇಕಿದ್ರೆ ಡಿಸಿಗೆ ಹೇಳು ಅಂತ ಅವಾಜ್ ಹಾಕಿದ್ದಾನೆ. ಕುಡುಕನ ಕಿರಿಕ್ ನಿಂದ ಬೇಸತ್ತ ಸಿಬ್ಬಂದಿ ವ್ಯಾಕ್ಸಿನ್ ಹಾಕುವುದನ್ನು ಅರ್ಧಕ್ಕೆ ನಿಲ್ಲಿಸಿ ವಾಪಸ್ ಮರಳಿದ್ದಾರೆ

    ಮರ ಏರಿದ ಭೂಪ:
    ಗ್ರಾಮೀಣ ಭಾಗದ ಜನರಲ್ಲಿ ಕೊರೊನಾ ಲಸಿಕೆಯ ಬಗ್ಗೆ ಭಯ ಇನ್ನೂ ಹೋಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಲಸಿಕೆ ಹಾಕುವುದು ಬೇಡ ಎಂದು ಭಯದಿಂದ ಮರವೇರಿ ಕುಳಿತಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂರಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ. ಬೈಲೂರು ಗ್ರಾಮದ ಹುಲೆಪ್ಪಾ ಎಂಬ ವ್ಯಕ್ತಿ ಲಸಿಕೆಗೆ ಹೆದರಿ ಮರ ಏರಿ ಕುಳಿತಿದ್ದಾನೆ. ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನೂ ಓದಿ: 2023ರವರೆಗೆ ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆಗಲಿ: ಹೆಚ್.ಡಿ.ರೇವಣ್ಣ

    ಕೊನೆಗೆ ಬೈಲೂರು ಗ್ರಾಮದ ಹುಲೆಪ್ಪಾ ಲಸಿಕೆಗೆ ಹೆದರಿ ಮರ ಹತ್ತಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಹುಲೆಪ್ಪಾ ಅವರನ್ನು ಅವರನ್ನು ಮರದಿಂದ ಕೆಳಗಿಳಿಸಿ ಲಸಿಕೆ ನೀಡಲಾಯಿತು.

  • ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಡಾ.ಕೆ.ಸುಧಾಕರ್

    ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಡಾ.ಕೆ.ಸುಧಾಕರ್

    ಬೆಂಗಳೂರು: ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಗಸ್ಟ್ ತಿಂಗಳಲ್ಲೇ 1.10 ಕೋಟಿ ಲಸಿಕೆ ಕೇಂದ್ರ ಸರ್ಕಾರದಿಂದ ಬಂದಿದೆ. ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 5 ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ನಗರ ಬೆಂಗಳೂರು ಆಗಬೇಕು ಎಂಬ ಗುರಿ ಇದೆ ಎಂದರು.

    ಇಡೀ ರಾಜ್ಯದಲ್ಲಿ 4 ಕೋಟಿ ಲಸಿಕೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೊಳೆಗೇರಿ ನಿವಾಸಿಗಳಿಗೆ ಪ್ರತಿ ದಿನ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅವರು ವಾಸ ಮಾಡುವ ಸ್ಥಳದಲ್ಲೇ ಸಿಬ್ಬಂದಿ ನಿಯೋಜಿಸಿ ಅಲ್ಲೇ ಲಸಿಕೆ ನೀಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಆದ್ಯತೆ ನೀಡಲಾಗಿದೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಡಿಸೆಂಬರ್ ಅಂತ್ಯಕ್ಕೆ ಎರಡೂ ಡೋಸ್ ಲಸಿಕೆ ನೀಡುವ ಗುರಿ ಇದೆ ಎಂದರು.

    ರಾಜ್ಯದಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸಲಾಗಿದೆ. ಪ್ರಾಥಮಿಕ ಶಾಲೆ ಆರಂಭಿಸಲು ಚರ್ಚೆಯಾಗಿದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವುದು ಸರ್ಕಾರ ಕರ್ತವ್ಯ. ಪೋಷಕರ ಕಡೆಯಿಂದಲೂ ಒತ್ತಡ ಬರುತ್ತಿದೆ. ಶಿಕ್ಷಣ ಸಂಸ್ಥೆಗಳು ಆರಂಭವಾದ ಬಳಿಕ ದುಷ್ಪರಿಣಾಮ ಉಂಟಾಗಿಲ್ಲ. ಆದ್ದರಿಂದ ವಿಶ್ವಾಸ ಬಂದಿದೆ ಎಂದರು.

    ಎಲ್ಲ ಹಬ್ಬಗಳ ಆಚರಣೆಗೆ ಒಂದೇ ಕೋವಿಡ್ ಮಾರ್ಗಸೂಚಿ ನೀಡಲಾಗಿದೆ. ಸರ್ಕಾರಕ್ಕೆ ಯಾವುದೇ ಚಟುವಟಿಕೆ ನಿರ್ಬಂಧಿಸುವುದರಲ್ಲಿ ಸಂತೋಷವಿಲ್ಲ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಲ್ಲ ಹಿತ ಕಾಯುವುದು ಸರ್ಕಾರ ಕೆಲಸ. ಕೋವಿಡ್ ಮಾರ್ಗಸೂಚಿಗೆ ನಮ್ಮನ್ನೂ ಒಳಗೊಂಡಂತೆ ಎಲ್ಲರೂ ಬೆಲೆ ಕೊಡಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಚುನಾವಣೆ ಮುಂದೂಡಬೇಕು ಎಂದು ಕೋರಲಾಗಿತ್ತು. ಈ ಎಲ್ಲ ಸಂದಿಗ್ಧ ಪರಿಸ್ಥಿತಿ ಹೊರತಾಗಿಯೂ ಕೋವಿಡ್ ನಿಯಂತ್ರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

    ನಂಬರ್ ಸಮಸ್ಯೆ
    ಮೊದಲ ಡೋಸ್ ಪಡೆದಾಗ ನೀಡಿದ ಫೋನ್ ಸಂಖ್ಯೆಯನ್ನೇ ಎರಡನೇ ಡೋಸ್ ಪಡೆದಾಗಲೂ ನೀಡಬೇಕು. ಇಲ್ಲದಿದ್ದರೆ ಲಸಿಕೆ ಪಡೆದವರ ಪ್ರಮಾಣದ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗುವುದಿಲ್ಲ. ಕೋವಿಡ್ ಮೂರನೇ ಅಲೆ ತಡೆಯಲು ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಕೋರಿದರು. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

    ಫಾನಾ ಸಂಘಟನೆ ಮೂರನೇ ಅಲೆ ವಿರುದ್ಧ ಹೋರಾಡುವ ಕುರಿತು ವರದಿ ನೀಡಿದೆ. ಇದರ ಸಲಹೆಯನ್ನೂ ನೋಡಲಾಗುವುದು. ಇದರ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯ ಜೊತೆಗೂ ಚರ್ಚಿಸಲಾಗುವುದು. ಈವರೆಗೆ ಜಾರಿಯಲ್ಲಿ ಇಲ್ಲದ ಶಿಫಾರಸುಗಳನ್ನೂ ಜಾರಿ ಮಾಡಲಾಗುವುದು. ಮೂರನೇ ಅಲೆ ತಡೆಗಟ್ಟಲು ಸರ್ಕಾರ ಸಿದ್ಧವಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

  • ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ರೇಷನ್ ಕಾರ್ಡ್ ಕಟ್- ಯಾದಗಿರಿ ಜಿಲ್ಲಾಡಳಿತ ಎಚ್ಚರಿಕೆ

    ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ರೇಷನ್ ಕಾರ್ಡ್ ಕಟ್- ಯಾದಗಿರಿ ಜಿಲ್ಲಾಡಳಿತ ಎಚ್ಚರಿಕೆ

    ಯಾದಗಿರಿ: ಒಂದು ಕಡೆ ಕೋವಿಡ್ ಲಸಿಕೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದು, ಮತ್ತೊಂದೆಡೆ ಕೋವಿಡ್ ಲಸಿಕೆ ಪಡೆಯದಿದ್ದರೆ ರೇಷನ್ ಕಾರ್ಡ್ ಕಟ್ ಮಾಡಲಾಗುವುದು ಎಂದು ಜಿಲ್ಲಾಡಳಿತ ಖಡಕ್ ಎಚ್ಚರಿಕೆ ನೀಡಿದೆ.

    ಮೂರನೇ ಅಲೆ ಆತಂಕ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೋವಿಡ್ ಲಸಿಕೆ ನೀಡುವ ಪ್ರಮಾಣವನ್ನು ಹೆಚ್ಚಳ ಮಾಡಲು ಹರಸಾಹಸ ಪಡುತ್ತಿವೆ. ಹೀಗಾಗಿ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ, ಲಸಿಕೆ ಕೊಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಬಹುತೇಕರು ಲಸಿಕೆ ಪಡೆಯಲು ಇಚ್ಛಿಸಿದ್ದು, ಇನ್ನೂ ಕೆಲವರು ಲಸಿಕೆ ಎಂದರೆ ಭಯಪಡುತ್ತಿದ್ದಾರೆ. ನಾನು ಸತ್ತರೂ ಲಸಿಕೆ ಪಡೆಯಲ್ಲ ಎಂದು ವೃದ್ಧೆಯೊಬ್ಬರು ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ. ಇದನ್ನೂ ಓದಿ: 1,262 ಹೊಸ ಪ್ರಕರಣಗಳು – ಪಾಸಿಟಿವಿಟಿ ರೇಟ್ ಶೇ.0.70

    ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಲಸಿಕೆ ಪ್ರಮಾಣ ಹೆಚ್ಚಳ ಮಾಡಲು ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಲಸಿಕೆ ಪಡೆಯದಿದ್ದರೆ ರೇಷನ್ ಕಟ್ ಮಾಡಲು ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಮುಂಡರಗಿ ಸೇರಿ ಬಹುತೇಕ ಹಳ್ಳಿಗಳಲ್ಲಿ ಲಸಿಕೆ ಪಡೆಯದಿದ್ದರೆ ರೇಷನ್ ಕಾರ್ಡ್ ಕಟ್ ಮಾಡಲಾಗುತ್ತದೆ ಎಂದು ಪಂಚಾಯಿತಿ ಅಧಿಕಾರಿಗಳು ವಾಹನಗಳ ಮೂಲಕ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದ್ದಾರೆ.

  • ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ನವದೆಹಲಿ: ಶುಕ್ರವಾರ ಒಂದೇ ದಿನ 1 ಕೋಟಿ ಲಸಿಕೆಯನ್ನು ಭಾರತ ವಿತರಣೆ ಮಾಡಿ ದಾಖಲೆ ಬರೆದಿದೆ.

    ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ನಿರ್ಮಾಣವಾಗಿದೆ. ಕೊರೊನಾ ಮೂರನೇ ಭೀತಿ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಾಗುತ್ತಿದೆ.

    ಒಂದು ದಿನದಲ್ಲಿ 1 ಕೋಟಿ ಲಸಿಕೆ ವಿತರಿಸುವ ಮೂಲಕ ಭಾರತ ಇತಿಹಾಸ ಸೃಷ್ಟಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಖಾತೆಯ ಸಚಿವ ಮನ್‍ಸುಖ್ ಮಾಂಡವ್ಯ ಹೇಳಿದ್ದಾರೆ. ಇದನ್ನೂ ಓದಿ: ಕಾಲೇಜ್ ಸೆಕ್ಯೂರಿಟಿಯಾಗಿ ಸೇರಿ 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನಗೈದ ಟೆಕ್ಕಿ ಅರೆಸ್ಟ್

    ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, 1 ಕೋಟಿ ದಾಟುವುದು ಒಂದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವಲ್ಲಿ ಯಶಸ್ವಿಯಾದವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಗೃಹ ಸಚಿವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ: ಬೆಲ್ಲದ್

  • ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

    ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

    ಬೆಂಗಳೂರು: ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು.

    ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಕಡ್ಡಾಯ. ವ್ಯಾಕ್ಸಿನ್ ಗೆ ಪರ್ಯಾಯ ಯಾವುದೂ ಇಲ್ಲ. ಸಾಧ್ಯವಾದಷ್ಟು ಜಂಕ್ ಫುಡ್ ಸೇವಿಸದೆ, ಭಾರತೀಯ ಸಾಂಪ್ರದಾಯಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,, ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ ಎಂದು ತಿಳಿಸಿದರು. ದಾನಿಗಳು ಹಾಗೂ ಖಾಸಗಿ ಸಂಸ್ಥೆಗಳು ಸಿಎಸ್‍ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು ಎಂದ ಅವರು ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು.

    ಸೆಪ್ಟೆಂಬರ್ ಮಾಹೆಯಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಉದ್ದೇಶವಿದ್ದು, ಪ್ರಸ್ತುತ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ, ಸಂಸದ ಪಿ.ಸಿ ಮೋಹನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್ ಮನವಿ

  • ಕೋವಿಡ್ ಲಸಿಕೆ ಬಗ್ಗೆ ಯಾದಗಿರಿ ಜನರಲ್ಲಿ ಮೂಢನಂಬಿಕೆ

    ಕೋವಿಡ್ ಲಸಿಕೆ ಬಗ್ಗೆ ಯಾದಗಿರಿ ಜನರಲ್ಲಿ ಮೂಢನಂಬಿಕೆ

    ಯಾದಗಿರಿ: ರಾಜ್ಯದ ವಿವಿಧ ಕಡೆಗಳಲ್ಲಿ ಕೋವಿಡ್ ಲಸಿಕೆಗಾಗಿ ಜನ ಮುಗಿಬೀಳುತ್ತಿದ್ದಾರೆ. ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತು ಲಸಿಕೆ ಪಡೆದುಕೊಂಡಿದ್ದಾರೆ. ಆದರೆ ಯಾದಗಿರಿ ಜನ ಮಾತ್ರ ಫುಲ್ ಡಿಫೆರೆಂಟ್ ಆಗಿದ್ದಾರೆ. ಕೋವಿಡ್ ಲಸಿಕೆ ಬಗ್ಗೆ ಯಾದಗಿರಿಯ ಜನರಲ್ಲಿ ಮೂಢನಂಬಿಕೆ ಮೂಡಿದೆ.

    ಕೋವಿಡ್ ಲಸಿಕೆ ಅಂದ್ರೆ ಯಾದಗಿರಿ ಮಂದಿಗೆ ಇನ್ನಿಲ್ಲದ ಕೋಪ ಬರುತ್ತೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಲೋಗೋ ತಳ್ಳುತ್ತಾರೆ. ಮುಖದ ಮೇಲೆ ಬಟ್ಟೆ ಹಾಕಿಕೊಂಡು ಮನೆಯೊಳಗೆ ಓಡಿಹೋಗಿ ಬಾಗಿಲು ಹಾಕಿಕೊಳ್ಳತ್ತಾರೆ. ಅಧಿಕಾರಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಬಾಯಿ ಬಂದಂಗೆ ಬೈತ್ತಾರೆ. ನಾವು ಸತ್ರೆ ಇಲ್ಲಿಯೇ ಸಾಯತ್ತೀವಿ ಆದರೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲ್ಲ ಅಂತಾರೆ. ಕೋವಿಡ್ ಲಸಿಕೆ ಬಗ್ಗೆ ಮೂಢನಂಬಿಕೆ ಹೊಂದಿರುವ ಯಾದಗಿರಿ ಜನರಿಂದ ಅನಾಗರಿಕ ವರ್ತನೆ ಪ್ರದರ್ಶನವಾಗುತ್ತಿದೆ. ಇದನ್ನೂ ಓದಿ: ಎಚ್‍ಡಿಡಿ ಫೋಟೋ ತೆಗೆದಿದ್ದು ಯಾಕೆ – ಹಾಸನದಲ್ಲಿ ಜನಪ್ರತಿನಿಧಿಗಳ ಮಧ್ಯೆ ಗಲಾಟೆ

    ಜನರ ಅತಿರೇಕದ ವರ್ತನೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಲ್ಲಿ ಬಟಾಬಯಲಾಗಿದೆ. ಗ್ರಾಮೀಣ ಭಾಗದಲ್ಲಂತೂ ಲಸಿಕೆ ಅಂದ್ರೆ ವಿಷ ಎಂಬಂತೆ ಜನ ವರ್ತನೆ ಮಾಡುತ್ತಿದ್ದಾರೆ. ಕೊರೊನಾ ಮೂರನೇ ಅಲೆಯ ಡೆಂಜರ್ ಝೋನ್ ನಲ್ಲಿರುವ ಯಾದಗಿರಿ ಜಿಲ್ಲಾಡಳಿತಕ್ಕೆ, ಲಸಿಕೆ ಟಾರ್ಗೆಟ್ ಟೆನ್ಸನ್ ಹೆಚ್ಚಾಗಿದೆ. ಲಸಿಕೆ ಹಾಕಲು ಅಧಿಕಾರಿಗಳು ಮನೆ, ಮನೆಗೆ ತೆರಳುತ್ತಿದ್ದಾರೆ. ಆದರೆ ಅಧಿಕಾರಿಗಳ ಮೇಲೆ ಜನ ದಬ್ಬಾಳಿಕೆ ನಡೆಸುತ್ತಿದ್ದು, ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

  • ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ವ್ಯಾಕ್ಸಿನ್ ಸೆಪ್ಟೆಂಬರ್​​​ಗೆ ಲಭ್ಯ – ಬೆಲೆ 750 ರೂ.

    ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ವ್ಯಾಕ್ಸಿನ್ ಸೆಪ್ಟೆಂಬರ್​​​ಗೆ ಲಭ್ಯ – ಬೆಲೆ 750 ರೂ.

    ನವದೆಹಲಿ: ಭಾರತದಲ್ಲಿ ರಷ್ಯಾದ ಕೊರೊನಾ ಲಸಿಕೆ ಸ್ಪುಟ್ನಿಕ್ ಲೈಟ್ ಸೆಪ್ಟೆಂಬರ್ ಗೆ ಲಭ್ಯವಾಗಲಿದೆ. ಈ ಲಸಿಕೆ ಸಿಂಗಲ್ ಡೋಸ್ ಆಗಿದ್ದು, 750 ರೂ. ಬೆಲೆ ನಿಗದಿಪಡಿಸಲಾಗಿದೆ ಸ್ಪುಟ್ನಿಕ್ ವಿ ಮತ್ತು ಸ್ಪುಟ್ನಿಕ್ ಲೈಟ್ ತಯಾರಿಕಾ ರಷ್ಯನ್ ಡೆರೆಕ್ಟ್ ಇನ್‍ವೆಸ್ಟಮೆಂಟ್ ಫಂಡ್ (ಆರ್ ಡಿಎಫ್)ನ ಪಾರ್ಟನರ್ ಕಂಪನಿ ಪೈನಸಿಯಾ ಬಯೋಟೆಕ್ ಭಾರತದಲ್ಲಿ ಬಳಕೆಗೆ ತುರ್ತು ಅನುಮತಿಯನ್ನು ಕೇಳಿದೆ.

    ರಷ್ಯಾದ ಲಸಿಕೆಯಾಗಿರುವ ಸ್ಪುಟ್ನಿಕ್ ವಿಗೆ ಏಪ್ರಿಲ್ 12ರಂದು ಭಾರತ ತುರ್ತು ಅನುಮೋದನೆ ನೀಡಿತ್ತು. ಸದ್ಯ ಈ ಲಸಿಕೆ 65 ದೇಶಗಳಲ್ಲಿ ನೀಡಲಾಗುತ್ತಿದೆ. ಏಪ್ರಿಲ್ ನಲ್ಲಿ ಅನುಮತಿ ದೊರೆತರೂ ಮೇನಲ್ಲಿ ಈ ಲಸಿಕೆಯನ್ನ ದೇಶದ ಜನರಿಗೆ ನೀಡಲು ಆರಂಭಿಸಲಾಯ್ತು. ಜೂನ್, ಜುಲೈನಲ್ಲಿ ವ್ಯಾಕ್ಸಿನ್ ಪೂರೈಕೆಯನ್ನು ಏರುಪೇರಾಗಿದ್ದರಿಂದ ಲಸಿಕಾಕರಣ ಕೊಂಚ ನಿಧಾನಗತಿಯಲ್ಲಿದೆ. ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ಸ್ಪುಟ್ನಿಕ್ ವಿ ಲಸಿಕಾಕರಣ ವೇಗ ಪಡೆದುಕೊಳ್ಳಲಿದೆ ಎಂದು ವರದಿಯಾಗಿದೆ.

    ಏನಿದು ಸ್ಪುಟ್ನಿಕ್ ಲೈಟ್?
    ಸ್ಪುಟ್ನಿಕ್ ಲೈಟ್ ಹೊಸ ಲಸಿಕೆ ಅಲ್ಲ. ರಷ್ಯಾ ನೀಡುತ್ತಿರುವ ಸ್ಪುಟ್ನಿಕ್ ವಿ ಯ ಎರಡು ಡೋಸ್ ಗಳ ಮೊದಲನೇ ಡೋಸ್. ಸ್ಪುಟ್ನಿಕ್ ವಿಯ ಎರಡು ಡೋಸ್ ಗಳು ಬೇರೆ ಬೇರೆ ವೈರಲ್ ಫ್ಯಾಕ್ಟರ್ ಗಳಲ್ಲಿದೆ. ಸ್ಪುಟ್ನಿಕ್ ವಿ ಮೊದಲ ಡೋಸ್ ಶೇ.79.4ರಷ್ಟು ಪರಿಣಾಮಾಕಾರಿಯಾಗಿದ್ದರಿಂದ ಇದಕ್ಕೆ ಸ್ಪುಟ್ನಿಕ್ ಲೈಟ್ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದವರೆಲ್ಲ ಬಾಹುಬಲಿ: ಪ್ರಧಾನಿ ಮೋದಿ

    ಭಾರತದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಷಿನ್ ಲಸಿಕೆಯ ಎರಡು ಡೋಸ್ ಪಡೆಯಬೇಕು. ಎರಡೂ ಡೋಸ್ ಪಡೆದ್ರೂ ಇದರ ಪರಿಣಾಮ ಶೇ.80. ಹಾಗಾಗಿ ಸ್ಪುಟ್ನಿಕ್ ವಿಯ ಮೊದಲನೇ ಡೋಸ್ ಲೈಟ್ ಇವರೆಡಕ್ಕಿಂತೂ ಹೆಚ್ಚು ಪರಿಣಾಮಕಾರಿ ಎಂದು ಪ್ರಯೋಗಲಾಯದಲ್ಲಿ ಸಾಬೀತಾಗಿದೆ. ಕಳೆದ ವಾರ ಭಾರತದಲ್ಲಿ ಜಾನ್‍ಸನ್ ಆ್ಯಂಡ್ ಜಾನ್‍ಸನ್ ಸಿಂಗಲ್ ಡೋಸ್ ಲಸಿಕೆ ಬಳಕೆಗೆ ಭಾರತ ಅನುಮತಿ ನೀಡಿದೆ. ಇದನ್ನೂ ಓದಿ: ಮುಂದಿನ ತಿಂಗಳೇ ಮಕ್ಕಳಿಗೆ ಕೊರೊನಾ ಲಸಿಕೆ ಸಾಧ್ಯತೆ: ಐಸಿಎಂಆರ್

    ಸ್ಪುಟ್ನಿಕ್ ಲೈಟ್ ಲಾಭಗಳೇನು?
    * ಈ ಲಸಿಕೆ ಶೇ.79.4 ಪರಿಣಾಮಕಾರಿಯಾಗಿದ್ದು, ಎರಡದಿಂದ ಎಂಟು ಡಿಗ್ರಿ ತಾಪಮಾನದಲ್ಲಿ ಶೇಖರಿಸಡಬಹುದಾಗಿ ದೆ.
    * ಶೇ.100ರಷ್ಟು ಜನರಲ್ಲಿ 10 ದಿನಗಳಲ್ಲಿಯೇ 40 ಪಟ್ಟು ಆಂಟಿಬಾಡಿಗಳ ಉತ್ಪಾದನೆ ಆಗಲಿದೆ.
    * ಕೊರೊನಾ ವೈರಸ್ ನ ಎಲ್ಲ ರೂಪಾಂತರಿಗಳ ವಿರುದ್ಧ ಸ್ಪುಟ್ನಿಕ್ ಲೈಟ್ ಕೆಲಸ ಮಾಡಲಿದೆ.
    * ವೈರಸ್ ಎಸ್-ಪ್ರೋಟಿನ್ ವಿರುದ್ಧ ಇಮ್ಯೂನ್ ರೆಸ್ಪಾನ್ಸ್ ಡೆವಲಪ್ ಆಗಲಿದೆ.

  • ಮುಂದಿನ ತಿಂಗಳೇ ಮಕ್ಕಳಿಗೆ ಕೊರೊನಾ ಲಸಿಕೆ ಸಾಧ್ಯತೆ: ಐಸಿಎಂಆರ್

    ಮುಂದಿನ ತಿಂಗಳೇ ಮಕ್ಕಳಿಗೆ ಕೊರೊನಾ ಲಸಿಕೆ ಸಾಧ್ಯತೆ: ಐಸಿಎಂಆರ್

    ನವದೆಹಲಿ: ಮುಂದಿನ ತಿಂಗಳೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆ ಇದೆ ಅಂತ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

    ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.0.76ಕ್ಕೆ ಕುಸಿದಿದೆ. ಇವತ್ತು 1365 ಕೇಸ್, 23 ಸಾವಾಗಿದೆ. ಬೆಂಗಳೂರಿನಲ್ಲಿ 327 ಕೇಸ್, 2 ಸಾವಾಗಿದೆ.ದಕ್ಷಿಣ ಕನ್ನಡ 268 ಸೋಂಕು-3 ಸಾವು, ಮೈಸೂರು 127 ಸೋಂಕು-3 ಸಾವು, ಹಾಸನ-107 ಮಂದಿಯಲ್ಲಿ ಸೋಮಕು ಕಾಣಿಸಿಕೊಂಡಿದೆ.

    ಕೇರಳದಲ್ಲಿ ಇಂದು ಕೂಡ 21 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು, ಪಾಸಿಟಿವಿಟಿ ರೇಟ್ ಶೇ.15ಕ್ಕೆ ಏರಿದೆ. ಇತ್ತ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬದ ಮುನ್ನೆಲೆಯಲ್ಲಿ ಇಂದೇ ಬಹುತೇಕ ಮಾರ್ಕೆಟ್‍ಗಳು ತುಂಬಿ ತುಳುಕಿದವು. ಬೆಂಗಳೂರಿನ ಕೆಆರ್ ಮಾರ್ಕೆಟ್, ಚಿಕ್ಕಪೇಟೆ, ಅವೆನ್ಯೂ ರೋಡ್, ಮಲ್ಲೇಶ್ವರ, ಬಸವನಗುಡಿಯ ಗಾಂಧಿಬಜಾರ್‍ನಲ್ಲಿ ಜನಜಾತ್ರೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

    ಕೊರೊನಾ ರೂಲ್ಸ್ ಅನ್ನೋದು ಮರೀಚಿಕೆ ಆಗಿತ್ತು. ಯಾರಿಗೂ ಕೊರೊನಾ 3ನೇ ಅಲೆಯ ಭಯವೇ ಇದ್ದಂತೆ ಕಂಡು ಬರಲಿಲ್ಲ. ಬಿಬಿಎಂಪಿ ಮಾತ್ರ ಮತ್ತೊಮ್ಮೆ ನಾಮಕಾವಸ್ಥೆಗೆ ಮಾರ್ಗಸೂಚಿ ಪ್ರಕಟಿಸಿದೆ. ಮೈಸೂರು ಮಾರುಕಟ್ಟೆಯಲ್ಲೂ ಇದೇ ಚಿತ್ರಣ. ಹಾಗಾಗಿ, ಕೋವಿಡ್ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಮಾರುಕಟ್ಟೆ ತಾತ್ಕಾಲಿಕವಾಗಿ 3 ದಿನ ರೈಲ್ವೆ ನಿಲ್ದಾಣದ ಮುಂಭಾಗದ ಜೆ.ಕೆ.ಮೈದಾನಕ್ಕೆ ಸ್ಥಳಾಂತರಗೊಂಡಿದೆ.