Tag: ಕೊರೊನಾ ಸೋಂಕು

  • ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ

    ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ

    ಬೆಂಗಳೂರು: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರಿಗೆ ಕೊರೊನಾ ಸೋಂಕು (Corona Infection) ದೃಢವಾಗಿದೆ.

    ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಆದರೆ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಆದ್ದರಿಂದ ಅಕ್ಟೋಬರ್‌ 2ರಂದು ಗಾಂಧಿ ಜಯಂತಿಯಂದು ನಡೆಯುವ ಯಾವುದೇ ಕಾರ್ಯಕ್ರಮಗಳಲ್ಲೂ ಅವರು ಭಾಗವಹಿಸುವುದಿಲ್ಲ. ಇದನ್ನೂ ಓದಿ: PFI ಬ್ಯಾನ್ ಮಾಡಿದ್ದಕ್ಕೆ ಕಾಂಗ್ರೆಸ್‍ನ ಕೆಲವರು ಒಂದೇ ಕಣ್ಣಿನಲ್ಲಿ ಅಳುತ್ತಿದ್ದಾರೆ: ತೇಜಸ್ವಿ ಸೂರ್ಯ

    ರಾಜ್ಯಪಾಲರು ಇತ್ತೀಚೆಗೆ ಬೆಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಿನ್ನೆಯೂ ರಾಜ್ಯದ ಹೈಕೋರ್ಟ್ (HighCourt) ಹೆಚ್ಚುವರಿ ನ್ಯಾಯಮೂರ್ತಿ ಆಗಿ ಮೊಹಮ್ಮದ್ ಗೌಸ್ ಶಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಸಚಿವ ಗೋವಿಂದ ಕಾರಜೋಳ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಉಲ್ಬಣ – ಐಐಟಿಯಲ್ಲೂ ಹೆಚ್ಚಿದ ಸೋಂಕು

    ಕೋವಿಡ್ ಉಲ್ಬಣ – ಐಐಟಿಯಲ್ಲೂ ಹೆಚ್ಚಿದ ಸೋಂಕು

    ನವದೆಹಲಿ: ದೆಹಲಿ, ಉತ್ತರಪ್ರದೇಶ, ಕೇರಳ, ಮಹಾರಾಷ್ಟçಗಳಲ್ಲಿ ಈಗಾಗಲೇ ಕೋವಿಡ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಐಐಟಿ ಯಲ್ಲೂ 11 ಕೊರೊನಾ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ. ನಿನ್ನೆ 171 ಇದ್ದ ಪ್ರಕರಣಗಳ ಸಂಖ್ಯೆ ಇಂದು 182ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    COVID HIKE 2

    ಭಾರತದಾದ್ಯಂತ ಕಳೆದ 24 ಗಂಟೆಯಲ್ಲಿ ಹೊಸದಾಗಿ 3,377 ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,801ಕ್ಕೆ ಏರಿಕೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,72,176ಕ್ಕೆ ಏರಿಕೆಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,23,753ಕ್ಕೆ ಏರಿಕೆಯಾಗಿದೆ. 17,801 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 24 ಗಂಟೆಯಲ್ಲಿ 2,496 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಒಟ್ಟು 4,25,30,622 ಮಂದಿ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ಭಾಷಣದ ವೇಳೆ ಕಣ್ಣೀರು ಹಾಕಿದ ಓವೈಸಿ

    COVID HIKE

    ಒಂದೇ ದಿನದಲ್ಲಿ 821 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಾಗಿದ್ದು, ಪ್ರತಿ ದಿನದ ಪಾಸಿಟಿವಿಟಿ ದರ ಶೇ.0.91ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.63ರಷ್ಟಿರುವುದಾಗಿ ಅಂಕಿ-ಅಂಶ ವಿವರಿಸಿದೆ. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

  • ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು

    ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು

    ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ  ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.

    ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

    ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.

    ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಲತಾ ಮಂಗೇಶ್ಕರ್‌ಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2019ರಲ್ಲಿ ಉಸಿರಾಟದ ತೊಂದರೆ ಅಥವಾ  ಶ್ವಾಸಕೋಶದ ಸಮಸ್ಯೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ.

  • ಅಮ್ಮನ ಜನ್ಮದಿನ – ಕ್ವಾರಂಟೈನ್‍ನಲ್ಲಿರುವ ಚಿರು ಭಾವುಕ

    ಅಮ್ಮನ ಜನ್ಮದಿನ – ಕ್ವಾರಂಟೈನ್‍ನಲ್ಲಿರುವ ಚಿರು ಭಾವುಕ

    ಹೈದರಾಬಾದ್: ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಕ್ವಾರಂಟೈನ್‍ನಲ್ಲಿರುವ ಚಿರಂಜೀವಿ ಅವರು ತಮ್ಮ ತಾಯಿಯ ಹುಟ್ಟುಹಬ್ಬದಂದು ಅವರ ಆಶೀರ್ವಾದ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ಭಾವಾನಾತ್ಮಕ ಸಾಲುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಜನವರಿ 29ರಂದು ಚಿರಂಜೀವಿ ಅವರ ತಾಯಿಯ ಹುಟ್ಟುಹಬ್ಬವಿದ್ದು, ಕೋವಿಡ್ ಇರುವುದರಿಂದ ಕ್ವಾರಂಟೈನ್‍ನಲ್ಲಿರುವ ಚಿರಂಜೀವಿ ಅವರು ಈ ವಿಶೇಷವಾದ ದಿನ ತಮ್ಮ ತಾಯಿಯಿಂದ ಆಶೀರ್ವಾದ ಪಡೆಯಲು ಸಾಧ್ಯವಾಗುತ್ತಿಲ್ಲ ಟ್ವಿಟ್ಟರ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್‌ – ಎಫ್‌ಐಆರ್‌ ಕಾಪಿ ಲಭ್ಯ

    ಕೋವಿಡ್ ಸೋಂಕಿಗೆ ಒಳಗಾಗಿರುವ ಚಿರಂಜೀವಿ ಅವರು ತಮ್ಮ ತಾಯಿ ಹಾಗೂ ಪತ್ನಿ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದು, ಜೊತೆಗೆ ತೆಲುಗಿನಲ್ಲಿ ಜನ್ಮ ದಿನದ ಶುಭಾಶಯಗಳು ಅಮ್ಮ. ನಾನು ಕ್ವಾರಂಟೈನ್‍ನಲ್ಲಿರುವುದರಿಂದ ನಿಮ್ಮ ಆಶೀರ್ವಾದವನ್ನು ನೇರವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲಿ ನಿಮಗೆ ಶುಭಾಶಯ ಕೋರುತ್ತಿದ್ದೇನೆ. ಈ ಜನ್ಮದಲ್ಲಿ ಮಾತ್ರವಲ್ಲ, ಮುಂದಿನ ಜನ್ಮದಲ್ಲಿಯೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಸಾಲುಗಳಲ್ಲಿಯೇ ಚಿರು ತಮ್ಮ ತಾಯಿಯನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಸಂಗೀತ್ ಕಾರ್ಯಕ್ರಮದಲ್ಲಿ ಸೂರಜ್‍ ಜೊತೆ ಮೌನಿ ರಾಯ್ ಲಿಪ್‍ಲಾಕ್

    ಇತ್ತೀಚೆಗಷ್ಟೇ ಕೋವಿಡ್-19 ಪಾಸಿಟಿವ್ ಬಂದಿದ್ದ ಚಿರಂಜೀವಿ ಅವರು, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ನಿನ್ನೆ ರಾತ್ರಿ ನನಗೆ ಸೌಮ್ಯ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದೆ. ನನಗೆ ಕೊರೊನಾ ಸೋಂಕು ದೃಢವಾಗಿದ್ದು, ಇದೀಗ ಮನೆಯಲ್ಲಿ ಕ್ವಾರಂಟೈನ್‍ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕ ಹೊಂದಿದ್ದ ಎಲ್ಲರಿಗೂ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

  • ಮೇಕೆದಾಟು ಪಾದಯಾತ್ರೆ ಬಿಸಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೂ ಕೊರೊನಾ ದೃಢ

    ಮೇಕೆದಾಟು ಪಾದಯಾತ್ರೆ ಬಿಸಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೂ ಕೊರೊನಾ ದೃಢ

    ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ

    ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರಿಗೆ ಒಬ್ಬಬ್ಬರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು, ಮಾಜಿ, ಹಾಲಿ ಶಾಸಕಕರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಪಾದಯಾತ್ರೆ ವೇಳೆ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ 90 ಪೊಲೀಸರಿಗೂ ಸೋಂಕು ದೃಢಪಟ್ಟಿದೆ.

    ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಲ್ಲಿ ಮೂರು ದಿನಗಳ ಕಾಲ ಸಕ್ರಿಯವಾಗಿ ಭಾಗವಹಿಸಿದ್ದ ರಮೇಶ್ ಕುಮಾರ್, ಪ್ರಿಯಾಂಕ್ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ಅವರೊಟ್ಟಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವರಲ್ಲಿ ಆತಂಕ ಮನೆಮಾಡಿದೆ. ಸದ್ಯ ಸೋಂಕು ದೃಢಪಟ್ಟ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಂ ಐಸೋಲೇಷನ್‍ಲ್ಲಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

    priyank kharge

    ಈಗಾಗಲೇ ಅವರ ತಂದೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿತ್ತು. ಇನ್ನೊಂದೆಡೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್‍ಗೂ ಸಹ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಪಾಯಾತ್ರೆಯಲ್ಲಿ ಭಾಗವಹಸಿದ್ದ ಹಲವರಿಗೆ ಸೋಂಕು ತಗುಲಿರುವ ಶಂಖೆ ವ್ಯಕ್ತವಾಗಿದೆ. ಇದನ್ನೂ ಓದಿ: ಪಾದಯಾತ್ರೆಯಲ್ಲಿ ಒಬ್ಬರಾದರೂ ಪೊಲೀಸರು ಕೆಲಸ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

  • ಒಂಟಿಯಾಗಿರುವುದನ್ನು ನಿಜಕ್ಕೂ ನಾನು ದ್ವೇಷಿಸುತ್ತೇನೆ: ಖುಷ್ಬೂ

    ಒಂಟಿಯಾಗಿರುವುದನ್ನು ನಿಜಕ್ಕೂ ನಾನು ದ್ವೇಷಿಸುತ್ತೇನೆ: ಖುಷ್ಬೂ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವಾಗಿ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಒಂಟಿಯಾಗಿದ್ದೇನೆ ಎಂದು ಬೇಸರ ಹೊರಹಾಕಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಕೋವಿಡ್ ಎರಡು ಅಲೆಯನ್ನು ತಪ್ಪಿಸಿಕೊಂಡೆ. ಆದರೆ ಈಗ ಕೋವಿಡ್ ಪಾಸಿಟಿವ್ ಆಗಿದೆ. ನಿನ್ನೆ ಸಂಜೆಯವರೆಗೂ ನನಗೆ ಕೋವಿಡ್ ನೆಗೆಟಿವ್ ಆಗಿತ್ತು. ನಾನು ಐಸೋಲೇಷನ್‍ನಲ್ಲಿದ್ದೇನೆ. ಒಂಟಿಯಾಗಿರುವುದನ್ನು ನಿಜಕ್ಕೂ ದ್ವೇಷಿಸುತ್ತೇನೆ. ಮುಂದಿನ ಐದು ದಿನಗಳಕಾಲ ನನಗೆ ಮನರಂಜನೆ ನೀಡಿ. ಕೊರೊನಾ ಲಕ್ಷಣ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ನಿಮ್ಮನ್ನು ಮದುವೆಯಾಗುತ್ತೇನೆ ಎಂದ ಅಭಿಮಾನಿಗೆ ಖುಷ್ಬೂ ಉತ್ತರ

    ಖುಷ್ಬೂ ಸುಂದರ್ ಅವರು 10 ಕೆಜಿ ತೂಕವನ್ನು ಕಡಿಮೆ ಮಾಡಿಕೊಂಡಿರುವ ವಿಚಾರವನ್ನು ಅಭಿಮಾನಿಗಳ ಜೊತೆಗೆ ಶೇರ್ ಮಾಡಿಕೊಂಡಿದ್ದರು. ಹೊಸ ಲುಕ್ ಮೂಲಕವಾಗಿ ಅಭಿಮಾನಿಗಳ ಗಮನ ಸೆಳೆಯುತ್ತಿರುವ ಖುಷ್ಬೂ ಅವರಿಗೆ ಅಭಿಮಾನಿ ಮದುವೆಯೆ ಪ್ರಪೋಸಲ್‍ಅನ್ನು ಸೋಶಿಯಲ್ ಮೀಡಿಯಾದಲ್ಲಿ ಇಟ್ಟಿದ್ದರು. ಈ ವಿಚಾರ ಕೆಲವು ದಿನಗಳ ಹಿಂದೆ ಸೊಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿತ್ತು.

  • ನನಗೆ ಕೊರೊನಾ ಪಾಸಿಟಿವ್‌,  ಸೋಂಕಿನ ಲಕ್ಷಣಗಳು ತುಸು ಗಂಭೀರ ಸ್ವರೂಪದಲ್ಲಿವೆ: ವರುಣ್ ಗಾಂಧಿ

    ನನಗೆ ಕೊರೊನಾ ಪಾಸಿಟಿವ್‌, ಸೋಂಕಿನ ಲಕ್ಷಣಗಳು ತುಸು ಗಂಭೀರ ಸ್ವರೂಪದಲ್ಲಿವೆ: ವರುಣ್ ಗಾಂಧಿ

    ಲಕ್ನೋ: ಬಿಜೆಪಿ ಸಂಸದ ವರುಣ್ ಗಾಂಧಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಸೋಂಕು  ಗಂಭೀರ ಸ್ವರೂಪ ಕಾಣಿಸಿಕೊಂಡಿದೆ ಎಂದು  ಅವರೆ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ: ನನ್ನ ಕ್ಷೇತ್ರವಾದ ಪಿಲಿಭಿತ್‍ನಲ್ಲಿ ಮೂರು ದಿನಗಳ ಕಾಲ ಇದ್ದು, ಚುನಾವಣಾ ಕಾರ್ಯ ನಡೆಸಿದೆ. ಇದೀಗ ನನಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಲಕ್ಷಣಗಳು ತುಸು ಗಂಭೀರಸ್ವರೂಪದಲ್ಲಿಯೇ ಇವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಸಕ್ರಿಯವಾಗಿ ಪಾಲ್ಗೊಳ್ಳುವ ರಾಜಕೀಯ ನಾಯಕರ ಆರೋಗ್ಯ ಸುರಕ್ಷತೆಗಾಗಿ ಕೂಡ ಕೆಲವು ಕ್ರಮಗಳನ್ನು ಚುನಾವಣಾ ಆಯೋಗ ಘೋಷಿಸಬೇಕು ಎಂದು ವರುಣ್ ಗಾಂಧಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ದೇಶದ 5 ರಾಜ್ಯಗಳಾದ ಗೋವಾ, ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್‍ಗಳಲ್ಲಿ ಮುಂದಿನ ತಿಂಗಳಿಂದ ವಿಧಾನಸಭೆ ಚುನಾವಣೆ ನಡೆಯಲಿದೆ. ಫೆ.10ರಿಂದ ವಿವಿಧ ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಠಿ ನಡೆಸಿದರುವ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಹಲವು ನಿಯಮಗಳನ್ನು ಘೋಷಿಸಿದ್ದಾರೆ.

  • ಕೊರೊನಾ ಸೋಂಕಿಗೆ ಬಳ್ಳಾರಿಯ ವೈದ್ಯ ಬಲಿ

    ಕೊರೊನಾ ಸೋಂಕಿಗೆ ಬಳ್ಳಾರಿಯ ವೈದ್ಯ ಬಲಿ

    ಬಳ್ಳಾರಿ: ಕೊರೊನಾ ಮಹಾ ಮಾರಿ ಸೋಂಕು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿದ್ದು, ಸೋಂಕಿಗೆ ವೈದ್ಯ ಬಲಿಯಾಗಿದ್ದಾರೆ. ಕರೋನಾ ಸೋಂಕಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಸಾವಿಗೀಡಾಗಿದ್ದಾರೆ.

    ವಿಜಯ ಶಂಕರ್ (52) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವೈದ್ಯರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.

    ಫ್ರೆಂಟ್ ಲೈನ್ ವಾರಿಯಾರ ಆದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಎರಡೂ ಡೋಜ್ ವ್ಯಾಕ್ಸಿನ್ ಸಹ ಪಡೆದಿದ್ದರು. ಆದರೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಿಡ್ನಿ ಕಸಿ ಮಾಡಿಸಿಕೊಂಡಿದ್ದು, ವೈದ್ಯರು ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದ ಸಾವಿಗೀಡಾಗಿದ್ದಾರೆ.

  • ಸೋಂಕು ಮಕ್ಕಳಿಗೆ ಹಬ್ಬುತ್ತದೆ ಎಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ

    ಸೋಂಕು ಮಕ್ಕಳಿಗೆ ಹಬ್ಬುತ್ತದೆ ಎಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ

    ಹೈದರಾಬಾದ್: ಕೊರೊನಾ ಸೋಂಕಿನಿಂದ ಬಳಲುತ್ತಿರುವ ದಂಪತಿ ನಮ್ಮಲ್ಲಿರುವ ಸೋಂಕು ಮಕ್ಕಳಿಗೆ ಬಂದು ಬಿಟ್ಟರೆ ಎನ್ನುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡಲ್ಲಿ ನಡೆದಿದೆ.

    ಪ್ರಸಾದ್(40) ಮತ್ತು ಅವರ ಪತ್ನಿ ಭಾರತಿ(37) ಮೃತರಾಗಿದ್ದಾರೆ. ಇವರು ಕೊರೊನಾ ಸೋಂಕಿನ ಪರೀಕ್ಷೆಯನ್ನು ಮಾಡಿಸಿದ್ದರು. ವರದಿ ಕೂಡ ಪಾಸಿಟಿವ್ ಬಂದಿರುವುದರ ಕುರಿತಾಗಿ ದಂಪತಿ ಭಯಭೀತರಾಗಿ ಸಾವನ್ನಪ್ಪಿದ್ದಾರೆ.

    ನಮಗೆ ಸೋಂಕು ಬಂದಿದೆ. ನಮ್ಮಿಂದ ಆ ಸೋಂಕು ಮಕ್ಕಳಿಗೂ ಹರಡಿ ಬಿಡುಬಹುದು ಎಂದು ಭಯ ಶುರುವಾಗಿದೆ. ಹಾಗಾಗದಿರಲಿ ಎನುವ ಕಾರಣಕ್ಕಾಗಿ ದಂಪತಿ ಒಂದು ಕಠಿಣ ನಿರ್ಧಾರ ಮಾಡಿದ್ದಾರೆ. ಇಬ್ಬರೂ ಒಟ್ಟಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

  • ಶಿವಮೊಗ್ಗ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್

    ಶಿವಮೊಗ್ಗ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್

    ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ 4 ದಿನಗಳ ಕಾಲ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

    ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು ಗುರುವಾರ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ದಿನದಂದು ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಉಳಿದ ಮೂರು ದಿನಗಳು ಜನತಾ ಕಪ್ರ್ಯೂ ಮುಂದುವರಿಯಲಿದೆ. ಜೊತೆಗೆ ಈ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ನಿಯಮ ಕೇವಲ ಶಿವಮೊಗ್ಗ ನಗರಕ್ಕಷ್ಟೇ ಸೀಮಿತವಾಗಿದ್ದು, ಇನ್ನುಳಿದಂತೆ ಜಿಲ್ಲೆಯಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್‍ಡೌನ್ ನಿಯಮ ಮುಂದುವರಿಯಲಿದೆ ಎಂದರು.

    ಶಿವಮೊಗ್ಗ ನಗರದಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಅವಧಿಯಲ್ಲಿ ಕೇವಲ ಮೆಡಿಕಲ್ ಶಾಪ್ ಬಿಟ್ಟು, ಇನ್ನುಳಿದಂತೆ ಅಗತ್ಯ ವಸ್ತುಗಳ ಖರೀದಿ ಹಾಗೂ ಮಾರಾಟ ಸಹ ಇರುವುದಿಲ್ಲ. ಈ ವೇಳೆ ಜನರು ಮನೆಯಿಂದ ಹೊರಗೆ ಬರದಂತೆ ಸಚಿವ ಈಶ್ವರಪ್ಪ ತಿಳಿಸಿದರು.