ಉಡುಪಿ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
63 ವರ್ಷದ ಪ್ರಭಾಕರ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದ ಕಾರಣ ಜುಲೈ 5 ರಂದು ಉಡುಪಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾಗಿದ್ದರು. ಆದರೆ ಆತ್ಮಹತ್ಯೆ ನಂತರ ಕೊರೊನಾ ಪರೀಕ್ಷಾ ವರದಿ ವೈದ್ಯರ ಕೈ ಸೇರಿದೆ.
ಆತ್ಮಹತ್ಯೆ ಮಾಡಿಕೊಂಡ ಪ್ರಭಾಕರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಆತಂಕದಲ್ಲಿ ಆತ್ಮಹತ್ಯೆ ಸಾಧ್ಯತೆಯಿದೆ. ಜನ ಧೃತಿಗೇಡಬಾರದು, ರೋಗ ಲಕ್ಷಣ ಇದ್ದರೂ ಅದು ಕೋವಿಡ್ ಆಗಬೇಕಾಗಿಲ್ಲ ಎಂದು ಡಿಎಚ್‍ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದರು.
ಐಸೋಲೇಶನ್ ವಾರ್ಡಿನಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆಗೆ ಶರಣಾಗಿರಬಹುದು. ಘಟನೆ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪರ್ಕಿತರ ಪ್ರಾಥಮಿಕ ಸಂಪರ್ಕಿತರಿಂದ ಎಲ್ಲರಿಗೂ ಸೋಂಕು ಹಬ್ಬುತ್ತದೆ ಎಂಬುದು ಸರಿಯಲ್ಲ. ಸೋಂಕಿತ ಕೆಮ್ಮಿದರೆ, ಸೀನಿದರೆ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ ಎಂದು ಡಿಎಚ್‍ಒ ತಿಳಿಸಿದರು.
ಬೆಂಗಳೂರು: ತೆಲಂಗಾಣ ಆರೋಗ್ಯ ಇಲಾಖೆ ಬೆಂಗಳೂರು ಟೆಕ್ಕಿ ಕೊರೋನಾ ವೈರಸ್ ತುತ್ತಾಗಿರೋದನ್ನು ಖಚಿತ ಪಡಿಸಿದೆ. ಟೆಕ್ಕಿಯನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಟೆಕ್ಕಿಗೆ ಕೊರೋನಾ ವೈರಸ್ ಬಂದಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಟೆಕ್ಕಿ ಕಚೇರಿಯ ಕೆಲಸಕ್ಕಾಗಿ ಫೆಬ್ರವರಿ 17ರಂದು ದುಬೈಗೆ ತೆರಳಿದ್ದರು. ದುಬೈನಿಂದ ಫೆಬ್ರವರಿ 20ರಂದು ಬೆಂಗಳೂರಿಗೆ ವಾಪಸ್ ಆಗಿದ್ದರು. ಎರಡು ದಿನ ಕೆಲಸಕ್ಕೆ ಹಾಜರಾಗಿದ್ದ ಟೆಕ್ಕಿ ಹೈದರಾಬಾದ್ ನಲ್ಲಿರುವ ಊರಿಗೆ ತೆರಳಿದ್ದರು. ಮನೆಗೆ ಬರುವಾಗಲೇ ಟೆಕ್ಕಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಕುರಿತು ಕುಟುಂಬಕ್ಕೂ ಮಾಹಿತಿ ನೀಡಿದ್ದರು. ತದನಂತರ ಸಿಕಂದರಾಬಾದ್ ನಲ್ಲಿರು ಅಪೋಲೋ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದರು. ಜ್ವರ ಕಡಿಮೆಯಾಗದಿದ್ದಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು.
ಟೆಕ್ಕಿ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕೆಲಸ ಮಾಡುತ್ತಿದ್ದು, ಪ್ರೊಜೆಕ್ಟ್ ವರ್ಕ್ ಸಂಬಂಧಿಸಿದಂತೆ ದುಬೈಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿರುವ ಟೆಕ್ಕಿ ಬೆಂಗಳೂರಿನ ಪಿಜಿಯಲ್ಲಿ ವಾಸವಾಗಿದ್ದರು ಕುರಿತು ತಿಳಿದು ಬಂದಿದೆ.
ಮಾರ್ಚ್ 1ರಂದು ಜ್ವರ ಹಾಗೂ ಕಫ ಕಡಿಮೆಯಾಗದಿದ್ದಾಗ ಟೆಕ್ಕಿಯ ರಕ್ತದ ಮಾದರಿಯನ್ನು ತಪಾಸಣೆಗಾಗಿ ಗಾಂಧಿ ಆಸ್ಪತ್ರೆಗೆ ಕಳಿಸಿದಾಗ ಮಾರ್ಚ್ 2ರಂದು ಕೊರೋನಾ ಸೋಂಕು ಇರೋದು ಪತ್ತೆಯಾಗಿತ್ತು. ಕೂಡಲೇ ಆಸ್ಪತ್ರೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ರವಾನಿಸಿತ್ತು. ಪುಣೆಯ ಲ್ಯಾಬ್ ನಿಂದಲೂ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ.
ಕೊರೋನಾ ವೈರಸ್ ಗೆ ತುತ್ತಾಗಿರುವ ಟೆಕ್ಕಿಯನ್ನು ತೀವ್ರನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವರು ಖಚಿತಪಡಿಸಿದ್ದಾರೆ. ಕೊರೋನಾ ಸೋಂಕಿತ ಟೆಕ್ಕಿ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದನು. ಹಾಗಾಗಿ ಟೆಕ್ಕಿ ಪ್ರಯಾಣ ಬೆಳೆಸಿದ ಬಸ್ ನಲ್ಲಿಯ ಪ್ರಯಾಣಿಕರ ಮಾಹಿತಿಗೆ ಅಧಿಕಾರಿಗಳು ಮುಂದಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಟೆಕ್ಕಿ ಸುಮಾರು 80 ಜನರೊಂದಿಗೆ ಸಂಪರ್ಕದಲ್ಲಿದ್ದನು. ಬಸ್ ನಲ್ಲಿ ಸಹ ಪ್ರಯಾಣಿಕರು, ಕುಟುಂಬಸ್ಥರು, ವೈದ್ಯರು ಮತ್ತು ಅಪೋಲೋ ಆಸ್ಪತ್ರೆಯ ಸಿಬ್ಬಂದಿ ಜೊತೆ ಸಂಪರ್ಕದಲ್ಲಿದ್ದನು. ಎಲ್ಲರ ಮೇಲೆ ನಿಗಾ ಇರಿಸಲಾಗಿದೆ. ಈ ಸಂಬಂಧ ಟೆಕ್ಕಿ ಕೆಲಸ ಮಾಡುತ್ತಿರುವ ಕಂಪನಿ ಮತ್ತು ಆತ ಪ್ರಯಾಣ ಬೆಳೆಸಿದ ಬಸ್ ಮಾಲೀಕರಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ರಾಜೇಂದ್ರ ಹೇಳಿದ್ದಾರೆ.
ಚಿಕ್ಕಮಗಳೂರು: ಚೀನಾದ ಬಳಿಕ ಕೇರಳದಲ್ಲೂ ಕೊರೋನಾ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲೂ ಆತಂಕ ಹೆಚ್ಚಾಗಿದೆ. ಆದ್ದರಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಅನುಸರಿಸುತ್ತಿದ್ದು ಜಿಲ್ಲೆಯ ವಿವಿಧ ಸಂಘಟನೆಗಳು ಕೇರಳದಿಂದ ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ಪ್ರವಾಸಿ ಜಿಲ್ಲೆಯಾಗಿದ್ದು, ರಾಜ್ಯ ಸೇರಿದಂತೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಮಧ್ಯೆ ಕೇರಳದಲ್ಲೂ ಕೊರೋನಾ ವೈರಸ್ ಅಂಶ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕೆಂದು ಸಂಘಟನೆಗಳು ಮನವಿ ಮಾಡಿವೆ.
ಜಿಲ್ಲಾಧಿಕಾರಿ ಡಾ. ಬಗಾಧಿ ಗೌತಮ್ ಅವರನ್ನು ಭೇಟಿ ಮಾಡಿದ ಶ್ರೀರಾಮ ಸೇನೆಯ ಕಾರ್ಯಕರ್ತರು, ಕೇರಳದಿಂದ ಚಿಕ್ಕಮಗಳೂರಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕು. ಅವರು ಪ್ರವಾಸಕ್ಕೆಂದು ಬಂದರೆ ಮಹಾಮಾರಿ ಕರೋನ ವೈರಸ್ ನಮ್ಮಲ್ಲೂ ಹರಡುವ ಸಾಧ್ಯತೆಗಳಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಕೇರಳ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಗ್ಳೂರು ಪ್ರವೇಶಕ್ಕೆ ಚೀನಾ ಪ್ರವಾಸಿಗರಿಗೆ ನಿಷೇಧ
ಮಾರಣಾಂತಿಕ ಕಾಯಿಲೆ ಕೊರೋನಾ ವೈರಸ್ ತಡೆಗೆ ವಿಶ್ವಾದ್ಯಂತ ಸೂಕ್ತ ಕ್ರಮಗಳನ್ನ ಕೈಗೊಳ್ಳಲಾಗ್ತಿದೆ. ಈ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಕೇರಳದ ಹಲವರಲ್ಲಿ ಈ ವೈರಸ್ ಕಂಡು ಬಂದಿರೋದು ತಪಾಸಣೆ ವೇಳೆ ಧೃಢಪಟ್ಟಿದೆ. ಪ್ರವಾಸಕ್ಕೆಂದು ಬರುವ ಕೇರಳ ಮೂಲದವರಿಂದ ಕಾಯಿಲೆಯು ಹರಡುವ ಸಾಧ್ಯತೆ ಇದ್ದು, ಕೂಡಲೇ ಪ್ರವಾಸಕ್ಕೆಂದು ಬರುವ ಕೇರಳ ಪ್ರವಾಸಿಗರ ಮೇಲೆ ನಿರ್ಬಂಧ ಹೇರಬೇಕೆಂದು ಶ್ರೀರಾಮ ಸೇನೆ ಸಂಘಟನೆಯ ಸಂಚಾಲಕ ರಂಜಿತ್ ಶೆಟ್ಟಿ, ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಮಂಡ್ಯ: ಕರ್ನಾಟಕದಲ್ಲಿ ಯಾರು ಸಹ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಕೊರೊನಾ ವೈರಸ್ ಬಗ್ಗೆ ಎಲ್ಲಾ ಕಡೆ ತಪಾಸಣೆ ಶುರು ಮಾಡಿದ್ದೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ 44 ಜನರ ರಕ್ತ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 29 ಮಂದಿಯ ವೈದ್ಯಕೀಯ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಇಂದು ಸಂಜೆ ಒಳಗೆ ಬರಲಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಅವರ ವೈದ್ಯಕೀಯ ವರದಿ ಕೂಡ ನೆಗೆಟಿವ್ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಲ್ಲದೇ ಬಂದರು, ವಿಮಾನ ನಿಲ್ದಾಣಗಳಲ್ಲಿ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚೀನಾದಿಂದ ಬಂದವರೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲೂ 10 ಹಾಸಿಗೆಗಳನ್ನು ಕೊರೊನಾ ವೈರಸ್ ರೋಗಿಗಗಳಿಗೆ ಮೀಸಲಿಡಲಾಗಿದೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಮದು ಸಚಿವರು ತಿಳಿಸಿದರು.
ಈವರೆಗೆ ಕೊರೊನಾ ವೈರಸ್‍ನಿಂದ ಚೀನಾದಲ್ಲಿ 425 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 20 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರುವುದು ವರದಿಯಾಗಿದೆ. ಕೇರಳದಲ್ಲಿಯೂ 3 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರನ್ನು ವಿಶೇಷ ವಾರ್ಡ್‍ಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಪ್ರಕರಣ ಪತ್ತೆಯಾಗದಿದ್ದರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ 6 ಬೆಡ್‍ಗಳ ವಿಶೇಷ ವಾರ್ಡ್, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂಕು ಆಸ್ಪತ್ರೆಯಲ್ಲೂ ತಲಾ ಎರಡು ಬೆಡ್‍ಗಳ ಒಂದೊಂದು ವಿಶೇಷ ವಾರ್ಡ್ ಸಿದ್ಧಗೊಳಿಸಲಾಗಿದೆ. ಕೇರಳ, ಅಸ್ಸಾಂ ಸೇರಿದಂತೆ ಹೊರರಾಜ್ಯಗಳಿಂದ ಕಾರ್ಮಿಕರು ಕೊಡಗಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಕೊಡಗಿನ ಕಾಫಿ ತೋಟದ ಮಾಲಿಕರಿಗೂ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅಲ್ಲದೆ ಕೇರಳ ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿತ 3 ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಮುಂದಿನ 15 ದಿನಗಳ ಕಾಲ ಕೇರಳದಿಂದ ಯಾವುದೇ ಕಾರ್ಮಿಕರನ್ನು ಕರೆತರುವಂತಿಲ್ಲ ಮತ್ತು ಇಲ್ಲಿರುವ ಕಾರ್ಮಿಕರನ್ನು ಕಳುಹಿಸದಂತೆ ಆರೋಗ್ಯ ಇಲಾಖೆ ಸೂಚಿಸಿ, ನೋಟಿಸ್ ನೀಡಿದೆ.
ಹುಬ್ಬಳ್ಳಿ: ಮಾರಕ ಕೊರೋನಾ ವೈರಸ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಟೆಕ್ಕಿಗೆ ಕೊರೋನಾ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಫ್ಟ್‌ವೇರ್ ಎಂಜಿನಿಯರ್ ಸಂದೀಪ್‍ಗೆ ಕೊರೋನಾ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಲ್ಯಾಬ್ ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ. ಚೀನಾದ ವುಹಾನ್‍ನಿಂದ ಮರಳಿದ ನಂತರ ಸಂದೀಪ್ ಕಿಮ್ಸ್‌ಗೆ ದಾಖಲಾಗಿದ್ದು, ಬೆಂಗಳೂರಿನ ನ್ಯಾಷನಲ್ ಇನ್ಸಿಟ್ಯೂಟ್ ಆಪ್ ವೈರಾಲಜಿಯಿಂದ ವರದಿಗಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?
ಸಾಫ್ಟ್‌ವೇರ್ ಎಂಜಿನಿಯರ್ ಕಿಮ್ಸ್‌ನ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಶ್ವಾಪುರದ ಸಂದೀಪ್ ಚೀನಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜನವರಿ 19ರಂದು ಬೆಂಗಳೂರಿಗೆ ಆಗಮಿಸಿದ್ದು, ಕಳೆದ 15 ದಿನಗಳ ಹಿಂದೆ ಹುಬ್ಬಳ್ಳಿಗೆ ಬಂದಿದ್ದಾರೆ.
ಸೋಮವಾರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚೀನಾದಿಂದ ಆಗಮಿಸಿದ ಹಿನ್ನೆಲೆಯಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ನಂತರ ಅದನ್ನು ಬ್ಲಡ್ ಮತ್ತು ಸ್ಟ್ರಾಬ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಪ್ ವೈರಾಜಲಿ ಬೆಂಗಳೂರಿಗೆ ರವಾನಿಸಲಾಗಿತ್ತು. ಸದ್ಯಕ್ಕೆ ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ.
ಕೊರೋನಾ ವೈರಸ್‍ಗೆ ತುತ್ತಾಗಿರುವ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಲು ಚೀನಾ ಸರ್ಕಾರ ಕೇವಲ 10 ದಿನದಲ್ಲಿ ಒಂದು ಮಹಡಿಯ ಆಸ್ಪತ್ರೆಯನ್ನು ತೆರೆದಿದ್ದು, ಸೋಮವಾರವಾದ ಇಂದು ಈ ಆಸ್ಪತ್ರೆಗೆ ರೋಗಿಗಳು ದಾಖಲಾಗುತ್ತಿದ್ದಾರೆ. ನಮ್ಮಲ್ಲಿ ಒಂದು ಆಸ್ಪತ್ರೆ ನಿರ್ಮಿಸಲು ಹಲವು ವರ್ಷಗಳು ಬೇಕಾಗಿರುವಾಗ ಚೀನಾದಲ್ಲಿ 10 ದಿನದಲ್ಲಿ 1 ಸಾವಿರ ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಸಾಧ್ಯ ಹೇಗೆ ಎನ್ನುವ ಪ್ರಶ್ನೆ ಹುಟ್ಟದೇ ಇರಲಾರದು. ಈ ಪ್ರಶ್ನೆಗೆ ಉತ್ತರ ಎನ್ನುವಂತೆ ಈ ಆಸ್ಪತ್ರೆ ವಿಶೇಷತೆ ಏನು? ಏನು ತಂತ್ರಜ್ಞಾನಗಳನ್ನು ಬಳಸಲಾಗಿದೆ ಮತ್ತು ಇದು ಚೀನಾದ ಜೈವಿಕ ಅಸ್ತ್ರವೇ ಇತ್ಯಾದಿ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ
ನಿರ್ಮಾಣವಾಗಿದ್ದು ಎಲ್ಲಿ?
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕೇಂದ್ರ ಸ್ಥಾನ ವುಹಾನ್ ನಗರದ ಹುಶೋಶೆನ್ ನಲ್ಲಿ ಆಸ್ಪತ್ರೆ ನಿರ್ಮಾಣವಾಗಿದೆ. ಇದರ ಜೊತೆ ಚೀನಾ ಸರ್ಕಾರ 1500 ಬೆಡ್ ಸೌಲಭ್ಯ ಇರುವ ಮತ್ತೊಂದು ಆಸ್ಪತ್ರೆಯನ್ನು ನಿರ್ಮಿಸುತ್ತಿದ್ದು ಈ ವಾರದಲ್ಲಿ ಇದು ರೋಗ ಪೀಡಿತರಿಗೆ ತೆರೆಯಲಿದೆ.
ಆಸ್ಪತ್ರೆ ನಿರ್ಮಿಸಿದ್ದು ಹೇಗೆ?
ದಿನದ 24 ಗಂಟೆ 3 ಶಿಫ್ಟ್ ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡಿ 60 ಸಾವಿರ ಚದರ ಮೀಟರ್ ವಿಸ್ತೀರ್ಣದ ಆಸ್ಪತ್ರೆಯನ್ನು ನಿರ್ಮಿಸಿದ್ದಾರೆ. ಮೊದಲೇ ನಿರ್ಮಾಣಗೊಂಡ ಕಾಂಕ್ರೀಟ್ ಗೋಡೆಗಳನ್ನು ಬಳಸಿಕೊಂಡು ವುಹಾನ್ ಸ್ಥಳೀಯ ಆಡಳಿತದ ಚೀನಾದ ಸೇನೆಯ ಸಹಕಾರವನ್ನು ಪಡೆದು ಈ ಆಸ್ಪತ್ರೆ ನಿರ್ಮಿಸಿದೆ. ಈ ಕಾಂಕ್ರೀಟ್ ಗೋಡೆಗಳು ಹಡಗಿನ ಕಂಟೈನರ್ ಮಾದರಿಯಲ್ಲಿದ್ದು ರೈಲು ಮತ್ತು ಲಾರಿಗಳ ಮೂಲಕ ಸ್ಥಳಕ್ಕೆ ತರಲಾಗಿದೆ. ಬಳಿಕ ಕ್ರೇನ್ ಮೂಲಕ ಇವುಗಳನ್ನು ಜೋಡಿಸಲಾಗಿದೆ. ಕಾರ್ಮಿಕರಿಗೆ ಸಾಮಾನ್ಯಕ್ಕಿಂತ 3 ಪಟ್ಟು ಹೆಚ್ಚು ವೇತನ ನೀಡಲಾಗಿದೆ ಎಂದು ವರದಿಯಾಗಿದೆ. ಕೊರೋನಾ ನಿಯಂತ್ರಣ ಕ್ರಮಗಳಿಗಾಗಿ ಚೀನಾ ಅಭಿವೃದ್ಧಿ ಬ್ಯಾಂಕ್ 2061 ಕೋಟಿ ರೂ. ತುರ್ತು ಸಾಲ ನೀಡಿದೆ. ಹೊಸ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರು, ನರ್ಸ್, ಇತರೇ ಸಿಬ್ಬಂದಿ ಸೇರಿದಂತೆ ಒಟ್ಟು 1,500 ಜನರ ತಂಡವನ್ನು ಚೀನಾ ಸರ್ಕಾರ ಕಳುಹಿಸಿಕೊಟ್ಟಿದೆ.
ದಿಢೀರ್ ಆಸ್ಪತ್ರೆ ಯಾಕೆ?
ಕೊರೋನಾ ವೈರಾಣು ಮೊದಲು ಪತ್ತೆಯಾದ ವುಹಾನ್ ನಗರ ಈಗ ಸಂಪೂರ್ಣ ಸ್ತಬ್ಧವಾಗಿದ್ದು, ಜೈಲಿನಂತಾಗಿದೆ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದು ಮನೆಯಿಂದ ಹೊರಬರಬೇಡಿ ಎಂಬ ಸೂಚನೆ ನೀಡಲಾಗಿದೆ. ಚೀನಾದಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಕೊರೋನಾಗೆ ತುತ್ತಾಗಿರುವುದು ಅಧಿಕೃತವಾಗಿ ಪ್ರಕಟವಾಗಿದ್ದು ಈಗಾಗಲೇ 361 ಜನ ಮೃತಪಟ್ಟಿದ್ದಾರೆ. ವೇಗವಾಗಿ ಹರಡುತ್ತಿದ್ದು ವಿಶ್ವದ 27 ರಾಷ್ಟ್ರಗಳಲ್ಲಿ ಕೊರೋನಾ ವ್ಯಾಪಿಸಿದೆ. ದಿನೇ ದಿನೇ ರೋಗ ಬಾಧಿತರ ಸಂಖ್ಯೆ ಜಾಸ್ತಿಯಾಗುತ್ತಿರುವ ಜೊತೆಗೆ ಸಾವನ್ನಪ್ಪುತ್ತಿರುವ ಜನರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚೀನಾ ಸರ್ಕಾರ ಈಗ ದಿಢೀರ್ ಆಸ್ಪತ್ರೆಗಳನ್ನು ನಿರ್ಮಿಸುತ್ತಿದೆ.
ಆಸ್ಪತ್ರೆಯ ವಿಶೇಷತೆ ಏನು?
ನಿರ್ಮಾಣಗೊಂಡ ಆಸ್ಪತ್ರೆಯಲ್ಲಿ ಅರ್ಧಕ್ಕೂ ಹೆಚ್ಚು ಪ್ರತ್ಯೇಕ ವಾರ್ಡ್ ಗಳಿದ್ದು 30ಕ್ಕೂ ಹೆಚ್ಚು ತುರ್ತು ಚಿಕಿತ್ಸಾ ಘಟಕ ಹೊಂದಿದೆ. ಇಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಸಲಹೆ ಸೂಚನೆ ನೀಡಲು ತಜ್ಞರ ವೈದ್ಯರ ಜೊತೆ ಸಂವಹನ ಸಾಧಿಸಲು 12 ಗಂಟೆಯ ಅವಧಿಯೊಳಗೆ ವುಹಾನ್ ಟೆಲಿಕಾಂ ಲಿಮಿಟೆಡ್ ನ 20 ಮಂದಿ ಕಮಾಂಡೋ ತಂಡ ವಿಡಿಯೋ ಸಿಸ್ಟಂ ಅಳವಡಿಸಿದೆ. ಈ ಲಿಂಕ್ ಮೂಲಕ ಬೀಜಿಂಗ್ ನಲ್ಲಿರುವ ಪಿಎಲ್‍ಎ ಜನರಲ್ ಆಸ್ಪತ್ರೆಯ ವೈದ್ಯರ ಜೊತೆ ನೇರವಾಗಿ ವಿಡಿಯೋ ಮೂಲಕ ಮಾತನಾಡಬಹುದಾಗಿದೆ.
10 ದಿನದಲ್ಲೇ ಹೇಗೆ?
ಚೀನಾದಲ್ಲಿರುವುದು ಕಮ್ಯೂನಿಸ್ಟ್ ಸರ್ಕಾರ. ಕಟ್ಟಡ ನಿರ್ಮಾಣ ಮಾಡುತ್ತಿರುವ ಕಂಪನಿಗಳು ಸರ್ಕಾರದ್ದೇ ಆಗಿದೆ. ಈಗಾಗಲೇ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದು ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ. ಪ್ರಜಾಪ್ರಭುತ್ವ ದೇಶದಲ್ಲಿ ಸರ್ಕಾರಿ ಯೋಜನೆಗಳು ಆರಂಭಗೊಂಡಾಗ ಕೋರ್ಟ್ ಮೊರೆ ಹೋಗಬಹುದಾಗಿದೆ. ಚೀನಾದಲ್ಲಿ ಸರ್ಕಾರ ಯೋಜನೆ ಕೈಗೆತ್ತಿಕೊಂಡರೆ ಅದಕ್ಕೆ ವಿರೋಧಿಸುವಂತಿಲ್ಲ. 2002 ರಲ್ಲಿ ಸಾರ್ಸ್ ರೋಗ ಬಂದ ನಂತರ ಚೀನಾ ಸರ್ಕಾರ ಎಚ್ಚೆತ್ತುಕೊಂಡಿತ್ತು. ವಿಶ್ವದ ಟಾಪ್ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಮೂಲಸೌಕರ್ಯ ವಿಚಾರದಲ್ಲಿ ಚೀನಾವೇ ನಂಬರ್ 1. ಹಲವು ದಶಕಗಳಿಂದ ಚೀನಾದಲ್ಲಿ ದೊಡ್ಡ ದೊಡ್ಡ ಕಾಮಗಾರಿಗಳು ನಡೆಯುತ್ತಲೇ ಇದೆ. ಹೀಗಾಗಿ ಅಲ್ಲಿನ ಕಾರ್ಮಿಕರು ಮತ್ತು ಸೈನಿಕರು ಈ ವಿಚಾರದಲ್ಲಿ ತುಂಬ ಅನುಭವಿಗಳಾಗಿದ್ದಾರೆ. 1.20 ಲಕ್ಷ ಕಿ.ಮೀ ಉದ್ದದ ರೈಲ್ವೇ ಜಾಲವನ್ನು ಹೊಂದಿದೆ. ಹಲವು ನಗರಗಳಲ್ಲಿ ಬುಲೆಟ್ ರೈಲುಗಳು ಸಂಚರಿಸುತ್ತಿವೆ. ಹೀಗಾಗಿ ದೇಶದ ಯಾವುದೇ ಮೂಲೆಯಿಂದ ವಸ್ತುಗಳನ್ನು ಬಹಳ ವೇಗವಾಗಿ ಸಾಗಿಸುವ ಸಾಮರ್ಥ್ಯ ಚೀನಾಕ್ಕಿದೆ.
ಇದೇ ಮೊದಲಲ್ಲ:
2003 ರಲ್ಲಿ ಸಾರ್ಸ್ ಬಂದಾಗ ಚೀನಾ ಸರ್ಕಾರ 7 ದಿನದಲ್ಲಿ ಆಸ್ಪತ್ರೆ ನಿರ್ಮಿಸಿತ್ತು. ಮಿಲಿಟರಿಯಲ್ಲಿ ಪವರ್ ಫುಲ್ ರಾಷ್ಟ್ರವಾಗಿರುವ ಚೀನಾ ಒಂದು ವೇಳೆ ಯುದ್ಧ ಅಥವಾ ಸಾರ್ಸ್, ಕೊರೋನಾದಂತಹ ವೈರಸ್ ಬಂದಾಗ ಜನರನ್ನು ರಕ್ಷಿಸಲು ಮೊದಲೇ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತದೆ.
ವುಹಾನ್ ವಿಶೇಷತೆ ಏನು?
ಮಧ್ಯ ಚೀನಾದ ದೊಡ್ಡ ನಗರ ವುಹಾನ್ ಆಗಿದ್ದು ಇಲ್ಲಿ ಬಂದರು, ವಿಮಾನ ನಿಲ್ದಾಣಗಳಿವೆ. 35 ಶಿಕ್ಷಣ ಸಂಸ್ಥೆಗಳಿದ್ದು ಚೀನಾದ ಶೈಕ್ಷಣಿಕ ಹಬ್ ಎಂದು ವುಹಾನ್ ನಗರವನ್ನು ಕರೆಯಲಾಗುತ್ತದೆ. ಈ ಕಾರಣಕ್ಕೆ ಹಲವು ರಾಷ್ಟ್ರಗಳ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಚೀನಾ ಸರ್ಕಾರವೇ ಇಲ್ಲಿ ಹಲವು ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ಒಟ್ಟು ಇಲ್ಲಿ 350 ಸಂಶೋಧನಾ ಕೇಂದ್ರಗಳಿವೆ.
ಚೀನಾವೇ ಸೃಷ್ಟಿಸಿದ ವೈರಸ್?
ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಗಮನಿಸಿ ಈಗ ಚೀನಾವೇ ಈ ವೈರಸ್ ಸೃಷ್ಟಿ ಮಾಡಿತೇ ಎನ್ನುವ ಶಂಕೆ ಎದ್ದಿದೆ. ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಾಜಿ ಎಂಬ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈಗ ಕೊರೋನಾ ವೈರಸ್ ಸೃಷ್ಟಿಯಾದ ಕೇಂದ್ರ ಸ್ಥಳ ವುಹಾನ್ ಆಗಿದೆ. ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪೀಡಿತರಾಗಿದ್ದಾರೆ.
ವೈರಾಲಾಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಸಾರ್ಸ್ ಆರಂಭದಲ್ಲಿ ಕಂಡು ಬಂದಿದ್ದು ಇದೇ ವುಹಾನ್ ನಲ್ಲಿ. 2002ರಲ್ಲಿ ಕಾಣಿಸಿಕೊಂಡಾಗ ಚೀನಾ ಈ ವಿಚಾರವನ್ನು ಮುಚ್ಚಿಟ್ಟಿತ್ತು. ಆದರೆ ವಿದೇಶಗಳಿಗೆ ಹರಡಿದಾಗ ಕೊನೆಗೆ ಸತ್ಯವನ್ನು ಒಪ್ಪಿಕೊಂಡಿತ್ತು. ಈಗಲೂ ಕೆಲ ವಿಜ್ಞಾನಿಗಳು ಇದು ಯಾವುದೋ ಪ್ರಾಣಿಯಿಂದ, ಪಕ್ಷಿಯಿಂದ ಕೊರೋನಾ ವೈರಸ್ ಸೃಷ್ಟಿಯಾಗಿಲ್ಲ. ಜೈವಿಕ ಅಸ್ತ್ರವನ್ನು ಪರೀಕ್ಷೆ ಮಾಡುತ್ತಿದ್ದಾಗ ಹೇಗೋ ಸೋರಿಕೆಯಾಗಿ ಈಗ ಜಗತ್ತಿಗೆ ಹರಡುತ್ತಿದೆ ಎಂದು ವಾದವನ್ನು ಮುಂದಿಡುತ್ತಿದ್ದಾರೆ. ಭಾರತದಲ್ಲಿ ಕೇರಳದ ಮೂರು ಮಂದಿ ವಿದ್ಯಾರ್ಥಿ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿರುವುದು ವಿಶೇಷ.