Tag: ಕೊಲೆ ಆರೋಪಿ

  • ಕೊಲೆ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ ತಾರಾಗೆ ಭಾರೀ ಮೆಚ್ಚುಗೆ

    ಕೊಲೆ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ ತಾರಾಗೆ ಭಾರೀ ಮೆಚ್ಚುಗೆ

    ದಾವಣಗೆರೆ: ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಅರೋಪಿಯನ್ನು ಬಂಧಿಸಲು ಡಾಗ್ ಸ್ಕ್ವಾಡ್ ಕ್ರೈಂ ವಿಭಾಗದ ಶ್ವಾನ ತಾರಾ (Dog Thara) ಸಹಾಯ ಮಾಡಿದೆ.

    ಕೊಲೆ ನಡೆದ ಸ್ಥಳದಿಂದ 8 ಕಿಲೋಮೀಟರ್ ಕ್ರಮಿಸಿ ಆರೋಪಿಯನ್ನು ತಾರಾ ಪತ್ತೆ ಮಾಡಿದೆ. ಈ ಮೂಲಕ ಇದೀಗ ತಾರಾಗೆ ಪೊಲೀಸ್ ಇಲಾಖೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

    ಕಳೆದ ಭಾನುವಾರ ಸೋಮಶೆಟ್ಟಿಹಳ್ಳಿ ಕ್ರಾಸ್ ಬಳಿ ಹಳೆಯ ದ್ವೇಷದ ಹಿನ್ನೆಲೆ ಕೊಲೆ ನಡೆದಿತ್ತು. ನರಸಿಂಹ ಎಂಬಾತನನ್ನು ಶಿವಯೋಗೀಶ್ ಕೊಲೆ ಮಾಡಿದ್ದ. ಕೊಲೆ ಮಾಡಿ ಆರೋಪಿ ಶ್ರೀರಾಮನಗರದಲ್ಲಿರುವ ಮನೆಯಲ್ಲಿ ಅವಿತು ಕೂತಿದ್ದ. ಇತ್ತ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬಿಸಿದ್ದರು. ಇದನ್ನೂ ಓದಿ: ಗೂಡ್ಸ್ ವಾಹನ ಡಿಕ್ಕಿಯಾಗಿ ಮಕ್ಕಳಿಬ್ಬರ ದುರ್ಮರಣ

    ಅಂತೆಯೇ ಶ್ವಾನ ತಾರಾ ಆರೋಪಿಯು ಕೊಲೆಗೆ ಬಳಸಿದ್ದ ಕಟ್ಟಿಗೆಯನ್ನು ಮೂಸಿ ನೋಡಿ ಕೊಲೆಗಾರನ ಜಾಡು ಹಿಡಿದಿದೆ. ಈ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲ್ಲಿನಿಂದ ಹಲ್ಲೆ ಮಾಡಲು ಯತ್ನಿಸಿದ ಆರೋಪಿ- ಪೊಲೀಸರಿಂದ ಗುಂಡಿನ ದಾಳಿ

    ಕಲ್ಲಿನಿಂದ ಹಲ್ಲೆ ಮಾಡಲು ಯತ್ನಿಸಿದ ಆರೋಪಿ- ಪೊಲೀಸರಿಂದ ಗುಂಡಿನ ದಾಳಿ

    ಬೆಂಗಳೂರು: ಕೊಲೆ ಆರೋಪಿ ಮೇಲೆ ರಾಜಗೋಪಾಲನಗರ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಪುರ ಕೆರೆ ಬಳಿ ನಡೆದಿದೆ.

    ಆರೋಪಿ ಸಚಿನ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇದೇ ತಿಂಗಳು 2ರಂದು ಆರೋಪಿ ಸಚಿನ್, ಚೌಕಿ ನರಸಿಂಹ ಎಂಬಾತನನ್ನು ಕೊಲೆ ಮಾಡಿದ್ದನು. ಸಚಿನ್ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ನಲ್ಲಿ ಮದ್ಯ ಕುಡಿದು ಚೌಕಿ ನರಸಿಂಹನನ್ನು ಕೊಲೆ ಮಾಡಿದ್ದನು. ಹಾಗಾಗಿ ಪೊಲೀಸರು ಆರೋಪಿ ಸಚಿನ್‍ನನ್ನು ಬುಧವಾರ ರಾತ್ರಿ ಮಂಡ್ಯದಲ್ಲಿ ಬಂಧಿಸಿದ್ದಾರೆ.

    ಇಂದು ಮುಂಜಾನೆ ಆರೋಪಿ ಕೊಲೆಗೆ ಬಳಸಿದ್ದ ಆಯುಧವನ್ನು ಪೊಲೀಸರು ರಿಕವರಿ ಮಾಡಲು ತೆರಳಿದ್ದರು. ಈ ವೇಳೆ ಸಚಿನ್ ಇಬ್ಬರು ಪೇದೆಗಳನ್ನು ತಳ್ಳಿ, ಕಲ್ಲಿನಿಂದ ಹೊಡೆದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆಗ ಇನ್ಸ್ ಪೆಕ್ಟರ್ ದಿನೇಶ್ ಗಾಳಿಯಲ್ಲಿ ಗುಂಡು ಹಾರಿಸಿ ಸರೆಂಡರ್ ಆಗುವಂತೆ ಸೂಚಿಸಿದ್ದರು.

    ಪೊಲೀಸ್ ಸಿಬ್ಬಂದಿಯಾದ ಜಯಶಂಕರ ಮತ್ತು ಪ್ರಕಾಶ್ ನಾಯ್ಕ್ ಮೇಲೆ ಆರೋಪಿ ಸಚಿನ್ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ರಾಜಗೋಪಾಲನಗರ ಇನ್ಸ್ ಪೆಕ್ಟರ್ ದಿನೇಶ್ ಪಾಟೀಲ್, ಆರೋಪಿ ಸಚಿನ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

    ಈ ಕೊಲೆ ಪ್ರಕರಣದಲ್ಲಿ ಪೊಲೀಸರು ಒಟ್ಟು ಮೂವರು ಆರೋಪಿಗಳ ಬಂಧಿಸಿದ್ದಾರೆ. ಹಿತೇಶ್, ಕಾರ್ತಿಕ್ ಹಾಗೂ ಸಚಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಚೌಕಿ ನರಸಿಂಹನ ಮೇಲೆ ಈ ಹಿಂದೆ ಹಲವಾರು ಕಳ್ಳತನದ ಪ್ರಕರಣಗಳು ದಾಖಲಾಗಿತ್ತು. ಕೊಲೆ ಆರೋಪಿ ಸಚಿನ್ ನಂದಿನಿ ಲೇಔಟ್ ಪೊಲೀಸ್ ಠಾಣೆಯ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ.

  • ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಚೆನ್ನೈ: ಇಲ್ಲಿನ ವಾಡಿಪಟ್ಟಿ ಬಳಿಯ ತನಿಚಿಯಂನಲ್ಲಿ ದಿಂಡಿಗುಲ್- ಮಧುರೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆಯೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

    ಈ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ನಡೆದಿದೆ. ಮೃತನನ್ನು ಆರ್ ಅಮರ್ ಸೇನ್(22) ಎಂದು ಗರುತಿಸಲಾಗಿದೆ. 6 ವರ್ಷಗಳ ಹಿಂದೆ ನಡೆದ ಕೊಲೆಯೊಂದರ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ ಅಂತ ವಿರುದುವಾಘ್‍ನಗರ್ ಎಸ್‍ಪಿ ಎಂ ರಾಜರಾಜನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಕರಿಮೆದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದ ರಾಮ್ ಪ್ರಸಾದ್ ಕೊಲೆ ಪ್ರಕರಣದಲ್ಲಿ ಅಮರ್ ಮೂರನೇ ಆರೋಪಿಯಾಗಿದ್ದ. ಅಮರ್ ಕೊಲೆಯ ಹಿಂದೆ ರಾಮ್ ಪ್ರಸಾದ್ ಸಂಬಂಧಿಕರು ಹಾಗೂ ಗೆಳೆಯರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

     

    ದಿಂಡಿಗುಲ್ ಜಿಲ್ಲೆಯ ಬಟ್ಲಗುಂಡುವಿನಿಂದ ಅರಪಾಳಯಂ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ನಲ್ಲಿ ಅಮರ್ ಸಂಚರಿಸುತ್ತಿದ್ದ. ಈ ವೇಳೆ ಬಸ್ ತನಿಚಿಯಂ ಬಳಿ ಹೋಗುತ್ತಿದ್ದಾಗ, ಚತುಷ್ಪಥ ಹೆದ್ದಾರಿಯಲ್ಲಿ ಕಾರ್ ಮತ್ತು 2 ಬೈಕ್ ನಲ್ಲಿ ಬಂದ 10 ಜನರ ತಂಡ ಬಸ್ಸನ್ನು ಅಡ್ಡಹಾಕಿತ್ತು. ನೋಡನೋಡುತ್ತಿದ್ದಂತೆಯೇ 10 ಮಂದಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಸ್ಸಿನೊಳಗೆ ನುಗ್ಗಿ ಮುಂಬದಿ ಸೀಟಲ್ಲಿ ಕುಳಿತಿದ್ದ ಅಮರ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅಮರ್ ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಬಸ್ ನಿಂದ ಇಳಿದು ತಮ್ಮ ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.

    ಸದ್ಯ ಘಟನೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ 3 ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ ಎಂದು ಎಸ್‍ಪಿ ಹೇಳಿದ್ದಾರೆ.