Tag: ಕೊಲೆ ಬೆದರಿಕೆ

  • ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

    ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

    ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅನ್ನು ಕೊಲೆ ಮಾಡುವುದಾಗಿ ಪತ್ನಿ ಅಕ್ಷಿತಾಗೆ ಕೊಲೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ರಜತ್ ಡಿಜಿಐಜಿಪಿಗೆ (DGIGP) ದೂರು ನೀಡಿದ್ದಾರೆ.

    ಧರ್ಮಸ್ಥಳದಲ್ಲಿ (Dharmasthala) ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ಸಾವು

    ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ, ಮಂಡ್ಯ ಅಂತೆಲ್ಲ ಹೇಳುತ್ತಿದ್ದಾರೆ. ನಾವು ಮಂಡ್ಯದವರನ್ನ ಕರ್ಕೊಂಡು ಬರುತ್ತೇವೆ ಎಂದು ಹೇಳಿಲ್ಲ. ಬೆದರಿಕೆಗಳಿಗೆ ನಾವು ಹೆದರಲ್ಲ ಎಂದರು. ಇದನ್ನೂ ಓದಿ: ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬಂದಿದೆ, ಅಲ್ಲೂ ಪರಿಶೀಲನೆ ಮಾಡಲಿ: ಪಿ.ಸಿ ಮೋಹನ್

    ಬಳಿಕ ಮಾತನಾಡಿದ ರಜತ್ ಪತ್ನಿ ಅಕ್ಷಿತಾ, ಸೋಷಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ಮೆಸೇಜ್ ಹಾಕಿದ್ದಾರೆ. ನಿನ್ನ ಗಂಡನನ್ನ ವಾಪಸ್ ಕರೆಸಿಕೋ. ಕರಾವಳಿ ಬೇರೆ ಥರ, ಮಂಡ್ಯ ಅಲ್ಲ ಅಂತೆಲ್ಲ ಹಾಕಿದ್ದಾರೆ. ನಾವು ಹುಟ್ಟಿ ಬೆಳೆದಿದ್ದು ಮಂಡ್ಯ. ನಾವು ದೂರು ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಉದ್ವಿಗ್ನತೆ – 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರತ್ಯೇಕ FIR ದಾಖಲು

  • ಕೊಲೆ ಬೆದರಿಕೆ: ನಟಿ ಶರಣ್ಯ ವಿರುದ್ಧ ದೂರು ದಾಖಲು

    ಕೊಲೆ ಬೆದರಿಕೆ: ನಟಿ ಶರಣ್ಯ ವಿರುದ್ಧ ದೂರು ದಾಖಲು

    ಮಿಳಿನ ಹೆಸರಾಂತ ನಟಿ, ದಕ್ಷಿಣದ ತಾರೆ ಶರಣ್ಯ (Saranya Ponvannan)  ವಿರುದ್ಧ ಚೆನ್ನೈನ ವಿರುಂಭಾಗಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಯಿ ಪಾತ್ರಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಶರಣ್ಯ ಪೊನ್ವನನ್ ವಿರುದ್ಧ ದೂರು (Complaint) ದಾಖಲಾಗಿದ್ದಕ್ಕೆ ಅಭಿಮಾನಿಗಳಿಗೆ ಸಹಜವಾಗಿ ಆತಂಕವಾಗಿದೆ.

    ಶರಣ್ಯ ವಿರುದ್ಧ ದೂರು ದಾಖಲಿಸಿದವರು, ಅವರ ಪಕ್ಕದ ಮನೆಯ ಮಹಿಳೆ ಎನ್ನುವುದು ಅಚ್ಚರಿಯ ಸಂಗತಿ. ಪಾರ್ಕಿಂಗ್ ವಿಷಯವಾಗಿ ಪಕ್ಕದ ಮನೆಯವರೊಂದಿಗೆ ಶರಣ್ಯ ಗಲಾಟೆ ಮಾಡಿದ್ದಾರಂತೆ ಜೊತೆಗೆ ಮಹಿಳೆಗೆ ಕೊಲೆ ಬೆದರಿಕೆ (Death threat) ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

     

    ಶ್ರೀದೇವಿ ಅನ್ನುವವರ ಜೊತೆ ಪದೇ ಪದೇ ಶರಣ್ಯ ಪಾರ್ಕಿಂಗ್ ವಿಚಾರವಾಗಿ ಗಲಾಟೆ ಮಾಡುತ್ತಿದ್ದರಂತೆ. ಈಗ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸಿಸಿಟಿವಿ ದೃಶ್ಯಾವಳಿಗಳನ್ನೂ ನೀಡಿದ್ದಾರಂತೆ. ಸದ್ಯ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ.

  • ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

    ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

    – ವಿಧಾನಸೌಧಕ್ಕೆ ಹೋಗುವಾಗ ಕೊಂದೇ ಕೊಲ್ತೀನಿ ಎಂದು ಬೆದರಿಕೆ

    ಬೆಂಗಳೂರು: ವಿಧಾನಸೌಧಕ್ಕೆ ಹೋಗುವಾಗ ಕೊಂದೇ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಮಾಜಿ ಸಚಿವ ಗೋಪಾಲಯ್ಯಗೆ (K. Gopalaiah) ಮಾಜಿ ಕಾರ್ಪೊರೇಟರ್ ಪದ್ಮರಾಜ್ (Padmaraj) ಕೊಲೆ ಬೆದರಿಕೆ (Life Threat) ಹಾಕಿದ್ದಾರೆ.

    ಮಂಗಳವಾರ ರಾತ್ರಿ ಗೋಪಾಲಯ್ಯ ಮನೆ ಬಳಿ ಬಂದು ಪದ್ಮರಾಜ್ ಗಲಾಟೆ ಮಾಡಿದ್ದು, ಹಳೆ ವೈಷಮ್ಯದಿಂದ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ (Kamakshipalya) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ರಾತ್ರಿ ಮಾಜಿ ಸಚಿವ ಗೋಪಾಲಯ್ಯ ಹಾಗೂ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನಡುವೆ ಗಲಾಟೆ ನಡೆದಿದೆ. ಇದೀಗ ಕಾಮಾಕ್ಷಿಪಾಳ್ಯ ಸ್ಟೇಶನ್‌ನಲ್ಲಿ ಗೋಪಾಲಯ್ಯ ಕುಳಿತಿದ್ದು, ಪದ್ಮರಾಜ್ ಮನೆ ಮುಂದೆ 4 ಹೊಯ್ಸಳ ಪೊಲೀಸರು ಜಮಾವಣೆಗೊಂಡಿದ್ದಾರೆ. ಇದನ್ನೂ ಓದಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ ಯವುದೇ ಮಾಸಿಕ ಖಿನ್ನತೆ ಇಲ್ಲ

    ಪದ್ಮರಾಜ್ ಮಂಗಳವಾರ ತಡರಾತ್ರಿ ಗೋಪಾಲಯ್ಯಗೆ ಕರೆ ಮಾಡಿ ಹಣ ಬೇಕೆಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹಣ ಕೊಡದಿದ್ರೆ ಏನು ಮಾಡ್ತೀನಿ ಗೊತ್ತಾ ಎಂದು ಬೆದರಿಕೆಯೊಡ್ಡಿದ್ದು, ಇದರಿಂದ ನೊಂದ ಗೋಪಾಲಯ್ಯ ಇಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಜೊತೆಗೆ ಸ್ಪೀಕರ್ ಮತ್ತು ಸಿಎಂಗೂ ದೂರು ಕೊಡಲು ಗೋಪಾಲಯ್ಯ ಮುಂದಾಗಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

    ಪದ್ಮರಾಜ್‌ಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದೇನೆ. ಆದರೆ ಈ ಥರ ಕುಡಿದು ನಿಂದಿಸಿದ್ದು, ಬೆದರಿಕೆ ಹಾಕಿದ್ದು ನೋವಾಗಿದೆ ಎಂದು ಗೋಪಾಲಯ್ಯ ಅಳಲು ತೋಡಿಕೊಂಡಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಪದ್ಮರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ವಿಚಾರಣೆಗೆ ನೋಟಿಸ್ ನೀಡಲು ಪೊಲೀಸರು ಪದ್ಮರಾಜ್ ಮನೆ ಬಾಗಿಲಿಗೆ ತೆರಳಿದ್ದಾರೆ. ಈ ವೇಳೆ ಮನೆಯ ಬಾಗಿಲು ತೆರೆಯದೆ ಪದ್ಮರಾಜ್ ಗಲಾಟೆ ಮಾಡುತ್ತಿದ್ದು, ಪೊಲೀಸರು ಪದ್ಮರಾಜ್ ಬಂಧನಕ್ಕೆ ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟಿತು ವಿಶೇಷ ರೈಲು

  • ಖ್ಯಾತ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ

    ಖ್ಯಾತ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ

    ಕ್ಷಿಣ ಭಾರತದ ಖ್ಯಾತನಟಿ, ಮಂಗಳೂರು ಮೂಲದ ಪೂಜಾ ಹೆಗ್ಡೆಗೆ (Pooja Hegde) ಕೊಲೆ ಬೆದರಿಕೆ ಹಾಕಲಾಗಿದೆ ಎ‍ನ್ನುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಕ್ಲಬ್ ವೊಂದರ ಉದ್ಘಾಟನೆಗೆ ಪೂಜಾ ದುಬೈಗೆ (Dubai) ಹಾರಿದ್ದರಂತೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಟಿ ಜಗಳ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಅಲ್ಲಿಂದಲೇ ಕೊಲೆ ಬೆದರಿಕೆ (Death Threats) ಬಂದಿದೆ ಎನ್ನುವುದು ಸಮಾಚಾರದ ಸಾರ.

    ದುಬೈನಲ್ಲಿ ಗಲಾಟೆಯಾದರೂ, ಅಲ್ಲಿದ್ದಾಗ ಯಾವುದೇ ಬೆದರಿಕೆಯೂ ಬಂದಿರಲಿಲ್ಲವಂತೆ. ದುಂಬೈನಿಂದ ವಾಪಸ್ಸು ಭಾರತಕ್ಕೆ ಬಂದಾಗ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಸಾಕಷ್ಟು ವೈರಲ್ ಕೂಡ ಆಗಿದೆ. ಈ ಸುದ್ದಿಗೆ ಸ್ವತಃ ಪೂಜಾ ಅವರೇ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.

     

    ದುಬೈಗೆ ಹೋಗಿದ್ದು ನಿಜ. ಕ್ಲಬ್ ಉದ್ಘಾಟನೆಗಾಗಿ ಅಲ್ಲಿಗೆ ಹೋಗಿದ್ದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಗಲಾಟೆ ಆಗಿಲ್ಲ. ಅಲ್ಲದೇ, ನನಗೆ ಕೊಲೆ ಬೆದರಿಕೆ ಕೂಡ ಬಂದಿಲ್ಲ. ಇದು ಯಾರೋ ಸೃಷ್ಟಿಸಿದ ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ ಪೂಜಾ. ಈ ಮೂಲಕ ಗಾಸಿಪ್ ಗೆ ತೆರೆ ಕೂಡ ಎಳೆದಿದ್ದಾರೆ.

  • 7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ  ಬೆದರಿಕೆ ಕರೆ

    7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ ಬೆದರಿಕೆ ಕರೆ

    ತಿರುವನಂತಪುರ: ಅಪ್ರಾಪ್ತ ಬಾಲಕನೋರ್ವ (Minor) ಕೇರಳ (Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ (Pinarayi Vijayan) ಬೆದರಿಕೆ (Threat) ಹಾಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

    ಬುಧವಾರ ರಾತ್ರಿ ಕೇರಳ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ಗುರುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

    ಈ ಕುರಿತು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು, ಕರೆ ಮಾಡಿದಾತ 12 ವರ್ಷದ ಬಾಲಕ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಲಕನ ಪೋಷಕರು, 7 ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗ ಮೊಬೈಲ್‌ನಲ್ಲಿ ಆಟವಾಡುವ ವೇಳೆ ಅಚಾತುರ್ಯವಾಗಿ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಯಿಂದ ಬಾಯಿಗೆ ಎಂಜಲು ನೀರು ಉಗಿದುಕೊಂಡು ಚೆಲ್ಲಾಟ – ಪ್ರೇಮಿಗಳಿಗೆ ಶುರುವಾಯ್ತು ಪೀಕಲಾಟ

    ಪೋಷಕರ ಹೇಳಿಕೆ ಪೊಲೀಸರಿಗೆ ಸಮಂಜಸವೆನಿಸಲಿಲ್ಲ. ಆದ್ದರಿಂದ ತನಿಖೆ ಮುಂದುವರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಪಿಣರಾಯಿ ವಿಜಯನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ) (ಪೊಲೀಸ್, ಅಗ್ನಿಶಾಮಕ ದಳ ಅಥವಾ ಇತರ ಯಾವುದೇ ಅಗತ್ಯ ಸೇವೆಯನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡುವುದು ಅಥವಾ ಸುಳ್ಳು ಎಚ್ಚರಿಕೆಗಳನ್ನು ನೀಡುವುದರೊಂದಿಗೆ ವ್ಯವಹರಿಸುತ್ತದೆ) ಮತ್ತು 120 (ಒ) (ಯಾವುದೇ ಸಂವಹನ ವಿಧಾನದ ಮೂಲಕ ಯಾವುದೇ ವ್ಯಕ್ತಿಗೆ ತೊಂದರೆ ಉಂಟುಮಾಡುವ ಬಗ್ಗೆ ವ್ಯವಹರಿಸುತ್ತದೆ) ಅಡಿಯಲ್ಲಿ ಬೆದರಿಕೆ ಹಾಕಲು ಬಳಸಿದ ಮೊಬೈಲ್ ಸಂಖ್ಯೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

    ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

    ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ (Mukesh Ambani) ಅವರಿಗೆ 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಮತ್ತೊಂದು ಬೆದರಿಕೆ ಪತ್ರ ಬಂದಿದ್ದು, ಬೇಡಿಕೆ ಮೊತ್ತವನ್ನು 200 ಕೋಟಿ ರೂ.ನಿಂದ 400 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಇದೇ ಅಕ್ಟೋಬರ್‌ 27 ರಂದು 200 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್‌ ಪತ್ರ (Email Death Threat Letter) ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಈ ಬಾರಿ ಬೇಡಿಕೆ ಮೊತ್ತವನ್ನು 400 ಕೋಟಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

    ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್‌ ನಿಮ್ಮನ್ನು ಕೊಲ್ಲುತ್ತಾನೆ. ಈ ಬಾರಿ ನಮ್ಮಮ್ಮ ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ. 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು (Mumbai Police) ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ

    ಇದೇ ತಿಂಗಳ ಅಕ್ಟೋಬರ್‌ 27 ರಂದು ಮೊದಲ ಇಮೇಲ್‌ ಬೆದರಿಕೆ ಪತ್ರ ಬಂದಿತ್ತು. ಅದರಲ್ಲಿ 20 ಕೋಟಿ ರೂ.ಗಳನ್ನು ತಪ್ಪದೇ ಕೊಡಬೇಕು. ನಮ್ಮ ಬಳಿ ಶಾರ್ಪ್ ಶೂಟರ್‌ಗಳಿದ್ದು, ಹಣ ನೀಡುವಲ್ಲಿ ವಿಫಲರಾದರೆ ಗುಂಡು ಹಾರಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು. ಅಕ್ಟೋಬರ್‌ 28 ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು 200 ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ.

    ಕೊಲೆ ಬೆದರಿಕೆ ಸಂಬಂಧ ಮುಕೇಶ್‌ ಅಂಬಾನಿ ಅವರ ಅವರ ಭದ್ರತಾ ಸಿಬ್ಬಂದಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ 3ನೇ ಇಮೇಲ್‌ ಬೆದರಿಕೆ ಪತ್ರ ಕಳುಹಿಸಿದ್ದು, ಮುಂಬೈ ಪೊಲೀಸರಿಗೆ ತಲೆನೋವು ತಂದಿದೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಮುಕೇಶ್‌ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ದರ್ಭಾಂಗ್‌ನ ವ್ಯಕ್ತಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದರು. ಮುಂಬಯಿಲ್ಲಿನ ಸರ್‌ ಎಚ್‌.ಎನ್‌. ರಿಲಯನ್ಸ್ ಫೌಂಡೇಶನ್‌ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಬಿಗ್ ಬಾಸ್ ಮಾಜಿ ಸ್ಪರ್ಧಿ, ಮಾಡೆಲ್ ಉರ್ಫಿ ಜಾವೇದ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ನಿನ್ನ ಕಾಸ್ಟ್ಯೂಮ್ ಅನ್ನು ಸರಿ ಪಡಿಸಿಕೊಳ್ಳದೇ ಇದ್ದರೆ ಹೊಡೆದುರುಳಿಸುತ್ತೇವೆ ಎಂದು ಪ್ರಮೋದ್ ಸಿಂಗ್ ಎನ್ನುವವರು ಕೊಲೆ ಬೆದರಿಕೆ (Death threats) ಹಾಕಿದ್ದಾನೆ ಎಂದು ಉರ್ಫಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ‘ನನ್ನ ಜೀವನದಲ್ಲಿ ಇದು ನಿರಂತರವಾಗಿ ನಡೆಯುತ್ತದೆ, ಹೆದರುವುದಿಲ್ಲ ಎಂದು ಉರ್ಫಿ ಹೇಳಿದ್ದಾರೆ.

    ಇಂಟರ್‌ನೆಟ್‌ನಲ್ಲಿ ಸೆನ್ಸೇಷನ್ ಮೂಡಿಸಿದ ನಟಿ ಉರ್ಫಿ ಜಾವೇದ್ (Urfi Javed) ಅವರು ತಾವು ಧರಿಸುವ ಚಿತ್ರ-ವಿಚಿತ್ರ ಬಟ್ಟೆಯಿಂದಲೇ ಗುರುತಿಸಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ಕೆಟ್ಟ ಕಾಮೆಂಟ್ಸ್‌ಗೆ ಡೊಂಟ್ ಕೇರ್ ಎನುತ್ತಾ ಸದಾ ಮೈ ಕಾಣುವ ಬಟ್ಟೆಗಳನ್ನೇ ಸದಾ ಧರಿಸುವ ಉರ್ಫಿ, ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದುಯಿದೆ. ಇದನ್ನೂ ಓದಿ:ಸಮಂತಾ ಬ್ಯಾಕ್ ಟು ಶೂಟ್- ಹೊಸ ಲುಕ್‌ನಲ್ಲಿ ಕಂಗೊಳಿಸಿದ ನಟಿ

    ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುವ ನಟಿ ಉರ್ಫಿ ಸಿನಿಮಾ ಮಾಡೋದ್ದಕ್ಕಿಂತ, ಟ್ರೋಲ್ ಮತ್ತು ಬಟ್ಟೆಯಿಂದಲೇ ಸಖತ್ ಸೌಂಡ್ ಮಾಡಿದ್ದಾರೆ. ಕೆಲದಿನಗಳ ಹಿಂದೆ ಮುಂಬೈ ಮನೆ ಬಾಡಿಗೆ ಕೊಡ್ತಿಲ್ಲ ನನಗೆ ಎಂದು ಉರ್ಫಿ ಗೋಗರೆದಿದ್ದರು. ಬಳಿಕ ತನಗೆ ಸಿನಿಮಾ ಆಫರ್ಸ್ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಸದಾ ಭಿನ್ನವಾಗಿರುವ ಧರಿಸಿನೊಂದಿಗೆ ಅಭಿಮಾನಿಗಳ ಮುಂದೆ ಬರುವ ಉರ್ಫಿ ಜಾವೇದ್ ಇಷ್ಟೊಂದು ಬೋಲ್ಡ್ ಆಗಿರೋದೇಕೆ ಎಂದು ಸಂದರ್ಶನವೊಂದರಲ್ಲಿ ನಟಿ ಮುಕ್ತವಾಗಿ ಮಾತನಾಡಿದ್ದಾರೆ.

    ಉರ್ಫಿ, ಕೆಲವು ಜನರು ನನ್ನನ್ನು ಗೌರವಿಸುವುದಿಲ್ಲ. ನನ್ನೊಂದಿಗೆ ಕೆಲಸ ಮಾಡಲು ಯಾರೂ ಬಯಸುವುದಿಲ್ಲ. ನಾನು ಎಲ್ಲರ ಗಮನ ಸೆಳೆಯುವ ಸಲುವಾಗಿಯೇ ಈ ರೀತಿಯ ಬಟ್ಟೆಗಳನ್ನು ಧರಿಸುವುದು ಎಂದು ಉರ್ಫಿ ಒಪ್ಪಿಕೊಂಡಿದ್ದಾರೆ. ಆದರೆ ಈ ಕುರಿತು ಕಾಮೆಂಟ್ ಮಾಡಿದರೆ ನನಗೆ ಇಷ್ಟ ಆಗುವುದಿಲ್ಲ ಎಂದು ನಟಿ ಮಾತನಾಡಿದ್ದಾರೆ.

     

    ಬಿಗ್ ಬಾಸ್ ಒಟಿಟಿಯಿಂದ (Bigg Boss Ott) ಉರ್ಫಿ ಜಾವೇದ್ ಜನಪ್ರಿಯತೆ ಗಳಿಸಿದರು. ‘ಹೌಸ್ ಅರೆಸ್ಟ್’ (House Arrest) ಗೇಮ್ ರಿಯಾಲಿಟಿ ಶೋನ ಮೊದಲ ಸೀಸನ್ ನಲ್ಲಿಯೂ ಅವರು ಭಾಗವಹಿಸಿದ್ದರು. ಈ ಹಿಂದೆ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ ಉರ್ಫಿ, ಬಿಗ್ ಬಾಸ್ ಒಟಿಟಿ ಸೀಸನ್ 1 ರಲ್ಲಿ ಟಾಸ್ಕ್ ಗೆಲ್ಲಲು ಕಸದ ಚೀಲಗಳಿಂದ ಮಾಡಿದ ಉಡುಪನ್ನು ಧರಿಸಿ ಖ್ಯಾತಿ ಗಳಿಸಿದರು. ತಮ್ಮ ಸೃಜನಶೀಲತೆಗೆ ಮೆಚ್ಚುಗೆ ಪಡೆದರು. ಅಂದಿನಿದ ಉರ್ಫಿ ಸಾಮಾನ್ಯ ಉಡುಗೆಯನ್ನು ಧರಿಸಲೇ ಇಲ್ಲ. ಹಾಗಾಗಿ ನಟಿ ನಿರಂತರವಾಗಿ ಟ್ರೋಲ್ ಆಗ್ತಿರೋದರ ಬಗ್ಗೆ ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೈಡನ್‌ಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಎಫ್‌ಬಿಐ

    ಬೈಡನ್‌ಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಎಫ್‌ಬಿಐ

    ವಾಷಿಂಗ್ಟನ್: ಅಮೆರಿಕ (America) ಅಧ್ಯಕ್ಷ ಜೋ ಬೈಡನ್ (Joe Biden), ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಇತರ ಕೆಲವು ಅಧಿಕಾರಿಗಳಿಗೆ ಆನ್‌ಲೈನ್ ಮೂಲಕ ಕೊಲೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿರುವುದಾಗಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ತಿಳಿಸಿದೆ.

    ಬೈಡನ್ ಬುಧವಾರ ಉತಾಹ್‌ಗೆ ಭೇಟಿ ನಿಗದಿಯಾಗಿತ್ತು. ಈ ಭೇಟಿ ಹಿನ್ನೆಲೆ ಕ್ರೇಗ್ ರಾಬರ್ಟ್ಸನ್ ಎಂಬ ವ್ಯಕ್ತಿ ಆನ್‌ಲೈನ್‌ನಲ್ಲಿ ಬೈಡನ್ ಹಾಗೂ ಇತರ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ. ಆತನ ಪೋಸ್ಟ್‌ನಲ್ಲಿ ಬೈಡನ್ ಆಗಮಿಸುತ್ತಿರುವ ವಿಚಾರ ತಿಳಿದಿದೆ. ಎಂ24 ಸ್ನೈಪರ್ ರೈಫಲ್ ಅನ್ನು ಸಿದ್ಧಪಡಿಸಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ದೂರನ್ನು ದಾಖಲಿಸಲಾಗಿತ್ತು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಭಾರೀ ಮಳೆ – ಮನೆಯೊಳಗೆ ಸಿಲುಕ್ಕಿದ್ದ 50 ಜನರ ರಕ್ಷಣೆ

    ತಕ್ಷಣ ಎಚ್ಚೆತ್ತುಕೊಂಡ ಎಫ್‌ಬಿಐ ತಂಡ ಬುಧವಾರ ಮುಂಜಾನೆ ಸ್ಟಾಲ್ ಲೇಕ್ ಸಿಟಿಯ ದಕ್ಷಿಣದ ಪ್ರೊವೊದಲ್ಲಿನ ರಾಬರ್ಟ್ಸನ್ ಮನೆಗೆ ಬಂಧನದ ವಾರೆಂಟ್ ಜೊತೆ ಬಂದಿದ್ದಾರೆ. ಬಳಿಕ ಆತನ ಮನೆ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಈ ವೇಳೆ ರಾಬರ್ಟ್ಸನ್ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: BJP ಸಂಸದರಿಗೆ ರಾಗಾ ಫ್ಲೈಯಿಂಗ್ ಕಿಸ್ – ಅದು ಪ್ರೀತಿಯ ಸನ್ನೆ ಎಂದು ಶಿವಸೇನೆ ಸಂಸದೆ ಸಮರ್ಥನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿ: ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದ ನಟಿಗೆ ಕೊಲೆ ಬೆದರಿಕೆ

    ದಿ ಕೇರಳ ಸ್ಟೋರಿ: ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದ ನಟಿಗೆ ಕೊಲೆ ಬೆದರಿಕೆ

    ಳೆದ ಎರಡು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ  (Death Threat) ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ ನಾಯಕಿ ಅದಾ ಶರ್ಮಾಗೂ (Adah Sharma) ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆಯನ್ನೂ ನೀಡಲಾಗಿತ್ತು.

    ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಸೋನಿಯಾ (Sonia Balani) ಮುಸ್ಲಿಂ ಹುಡುಗಿಯಾಗಿ, ಹಿಂದೂ ಹುಡುಗಿಯರನ್ನು ಮತಾಂತರ ಮಾಡುವ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತಾರೆ. ನಟಿಯಾಗಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರ ಹಲವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕೊಲೆ ಬೆದರಿಕೆಯ ಸಂದೇಶಗಳು ಸೋನಿಯಾಗೆ ಬಂದಿವೆಯಂತೆ. ಹಾಗಾಗಿ ಆ ನಟಿಗೂ ಭದ್ರತೆಯನ್ನು ಒದಗಿಸಬೇಕು ಎಂದು ಚಿತ್ರತಂಡ ಮನವಿ ಮಾಡಿಕೊಂಡಿದೆ.  ಇದನ್ನೂ ಓದಿ:‘ಪುಷ್ಪʼ ಪಾರ್ಟ್‌ 2ನಲ್ಲಿ ಶ್ರೀವಲ್ಲಿ ಸಾವು- ರಶ್ಮಿಕಾ ಫೋಟೋ ವೈರಲ್

    ನಟಿಯರಿಗೆ ಒಂದು ಕಡೆ ಜೀವ ಬೆದರಿಕೆ ಮಸೇಜ್ ಗಳು ಬರುತ್ತಿದ್ದರೆ, ಮತ್ತೊಂದು ಕಡೆ ಬಾಕ್ಸ್ ಆಫೀಸಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ ಈ ಸಿನಿಮಾ. ವಿವಾದ, ನಿಷೇಧದ ನಡುವೆಯೂ ಇಂದು ಅದು 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಶನಿವಾರಕ್ಕೆ 183 ಕೋಟಿ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಬಾಚಿದೆ. ಇನ್ನೂ ಸಾಕಷ್ಟು ಕಡೆ ತುಂಬಿದ ಪ್ರದರ್ಶನವನ್ನು ಚಿತ್ರ ಕಾಣುತ್ತಿದೆ.

  • ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

    ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

    ಟಿ ರಾಖಿ ಸಾವಂತ್ ಮುಂಬೈ ಬೀದಿಯಲ್ಲಿ ಹೆಲ್ಮೆಟ್ (Helmet) ಧರಿಸಿ ಓಡಾಡುತ್ತಿದ್ದಾರೆ. ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ರಾಖಿ ಹೆಲ್ಮೆಟ್ ಹಾಕಿಕೊಳ್ಳುತ್ತಾರೆ. ಕಾರಣ ಅವರಿಗೆ ಕೊಲೆ ಬೆದರಿಕೆ ಇದೆಯಂತೆ. ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್ ಕುರಿತಾಗಿ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡುವ ರಾಖಿ ಸಾವಂತ್ (Rakhi Sawant) ಗೆ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ ಬಂದಿದೆಯಂತೆ. ಸಲ್ಮಾನ್ ವಿಚಾರವಾಗಿ ಮೂಗು ತೂರಿದಂತೆ ರಾಖಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಚ್ಚರಿಕೆ ನೀಡಿದೆಯಂತೆ. ಹಾಗಾಗಿ ಅವರನ್ನು ಯಾರೂ ಗುರುತು ಹಿಡಿಯಬಾರದು ಎನ್ನುವ ಕಾರಣಕ್ಕಾಗಿ ಹೆಲ್ಮೆಟ್ ಧರಿಸಿಕೊಂಡು ಓಡಾಡುತ್ತಿದ್ದಾರೆ.

    ಈ ಹಿಂದೆ ಇದೇ ಗ್ಯಾಂಗ್ ನಿರಂತರವಾಗಿ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕುತ್ತಲೇ ಇದೆ. ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ  ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ (Mumbai) ಪೊಲೀಸರು (Police) ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಅಲ್ಲದೇ, ಸುಖಾಸುಮ್ಮನೆ ಅವರ ಮನೆ ಸುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ಈಗಾಗಲೇ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.