Tag: ಕೊಲೆ ಸ್ಕೆಚ್

  • ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್

    ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್

    ಮಂಗಳೂರು: ಕೆಲ ವಾರಗಳ ಹಿಂದೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು. ಆದರೆ ಈ ಸ್ಕೆಚ್ ಯಾರು ಹಾಕಿದ್ದಾರೆ ಎಂಬುದು ಸ್ವತಃ ಗುಣರಂಜನ್ ಶೆಟ್ಟಿಗೂ ಗೊತ್ತಿರಲಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗುಣರಂಜನ್ ಶೆಟ್ಟಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆ ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರಿಗೆ ವಹಿಸಿದ್ದು, ಮಂಗಳೂರು ಪೊಲೀಸರು ಈ ದೂರಿನ ಬಗ್ಗೆ ಹೆಚ್ಚಿನ ವಿವರಣೆ ಪಡೆಯಲು ಗುಣರಂಜನ್ ಶೆಟ್ಟಿಗೆ ನೋಟಿಸ್ ನೀಡಿ ಕರೆಸಿಕೊಂಡಿದ್ದಾರೆ.

    ಪ್ರಾರಂಭದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ಬಳಿಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಗುಣರಂಜನ್ ಶೆಟ್ಟಿಯಿಂದ ಹೆಚ್ಚಿನ ಮಾಹಿತಿ ಪಡೆದಿದ್ದಾರೆ. ವಿಚಾರಣೆ ಬಳಿಕ ಗುಣರಂಜನ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಯಾರಾದರೂ ಹತ್ಯೆಗೆ ಸ್ಕೆಚ್ ಹಾಕಿದ್ದರೆ ಅವರು ರಾಂಗ್ ಪರ್ಸನ್ ಅನ್ನು ಚೂಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

    ಪ್ರಾರಂಭದಲ್ಲಿ ಮುತ್ತಪ್ಪ ರೈ ಸಂಬಂಧಿ ಮನ್ವಿತ್ ರೈ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ನಡೆಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಹೀಗಿದ್ದರೂ ಮನ್ವಿತ್ ರೈ ತಾನು ಉದ್ಯಮದ ವಿಚಾರವಾಗಿ ವಿದೇಶದಲ್ಲಿದ್ದು, ಈ ಹತ್ಯೆ ಸಂಚಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದರು. ಇಂದು ಪೊಲೀಸ್ ವಿಚಾರಣೆ ಸಂದರ್ಭದಲ್ಲಿಯೂ ಗುಣರಂಜನ್ ಶೆಟ್ಟಿ ಇಂತಹ ವಿಚಾರಕ್ಕೆ, ಇಂತಹ ನಿರ್ದಿಷ್ಟ ವ್ಯಕ್ತಿಗಳಿಂದ ಸಂಚು ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲವಾದರೂ ಪೊಲೀಸರು ಸಂಕ್ಷಿಪ್ತ ಮಾಹಿತಿ ಕಲೆ ಹಾಕುವ ಕಾರ್ಯ ಮಾಡಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪಿಟಿಷನ್ ತೆಗೆದುಕೊಂಡು ಯಾರನ್ನು ವಿಚಾರಣೆ ಮಾಡಬೇಕು ಅವರನ್ನು ವಿಚಾರಣೆ ನಡೆಸಿ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಅಗಲಿದ ಶ್ವಾನಕ್ಕೆ ಎಸ್‌ಪಿ ಕಚೇರಿ ಆವರಣದಲ್ಲೇ ಆಂತ್ಯಕ್ರಿಯೆ

    Live Tv

  • ತನ್ನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿಗೆ ಅರೆಸ್ಟ್ ಭಾಗ್ಯ ಕರುಣಿಸಿದ ಪತಿ!

    ತನ್ನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿಗೆ ಅರೆಸ್ಟ್ ಭಾಗ್ಯ ಕರುಣಿಸಿದ ಪತಿ!

    ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರ ಈಗ ಪೊಲೀಸರ ಅತಿಥಿಯಾಗಿದ್ದಾರೆ.

    ಪತ್ನಿ ಶೈಲಜಾ ಹಾಗೂ ಪ್ರಿಯಕರ ಆನಂದ್ ಬಂಧಿತ ಆರೋಪಿಗಳು. ಪತಿ ಪ್ರಸನ್ನ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸರು ಈಗ ಇಬ್ಬರನ್ನೂ ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ಶೈಲಜಾ ಪ್ರಸನ್ನಕುಮಾರ್ ಎಂಬುವರನ್ನು ಮದುವೆಯಾಗಿದ್ದರೂ ಕಳೆದ 5 ವರ್ಷಗಳಿಂದ ಆನಂದ್ ಎಂಬಾತನ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದಳು. ಈ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿ ಪ್ರಸನ್ನ ಕುಮಾರ್ ಪ್ರಶ್ನೆ ಮಾಡಿದ್ದರು.

    ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂದು ತಿಳಿದ ಶೈಲಜಾ, ಪ್ರಸನ್ನ ಕುಮಾರ್ ಮುಗಿಸಲು ಪ್ರಿಯಕರನ ಜೊತೆ ಸೇರಿ ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಲ್ಲುವ ಸಂಚು ರೂಪಿಸಿದ್ದಳು. ಆದರೆ ಅವರ ಪ್ಲಾನ್ ಯಶಸ್ವಿ ಆಗದ ಕಾರಣ ಬೇರೆ ರೀತಿಯಲ್ಲಿ ಕೊಲೆ ಮಾಡಲು ಸ್ಕೆಚ್ ಹಾಕಿದ್ದಳು.

    ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡುವ ಸಂಚು ಪತ್ನಿಯ ಫೋನ್ ನಲ್ಲಿ ರೆಕಾರ್ಡ್ ಆಗಿತ್ತು. ಈ ಆಡಿಯೋವನ್ನು ಪತ್ನಿಗೆ ತಿಳಿಯದಂತೆ ಪತಿ ಪಡೆದುಕೊಂಡು ಪೋಲಿಸರಿಗೆ ದೂರು ನೀಡಿದ್ದಾರೆ. ಜ್ಞಾನಭಾರತಿಯ ಪೊಲೀಸರು ಪತಿ ನೀಡಿದ ಮೊಬೈಲ್ ಆಡಿಯೋ ರೆಕಾರ್ಡ್ ಆಧಾರದ ಮೇಲೆ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.