Tag: ಕೊಲ್ಲೂರು ಮೂಕಾಂಬಿಕಾ

  • ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ

    ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ

    ಉಡುಪಿ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿದ್ದಾರೆ.

    ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ದೇವಾಲಯದ ಆಡಳಿತ ಮಂಡಳಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

    ದೇವಾಲಯಕ್ಕೆ ಬಂದಿದ್ದ ಭಕ್ತರು ಅಣ್ಣಾಮಲೈ ನೋಡಲು ಮುಗಿಬಿದ್ದರು. ಅನೇಕರು ಅಣ್ಣಾಮಲೈ ಜೊತೆ ಸೆಲ್ಫಿ ತೆಗೆಸಿಕೊಂಡರು.

  • Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ

    Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ

    ಉಡುಪಿ: ಕಾಂತಾರ ಚಾಪ್ಟರ್‌ 1 (Kantara Chapter 1) ಟ್ರೈಲರ್‌ ಬಿಡುಗಡೆ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಅವರು ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಮಾಡಿದ್ದಾರೆ.

    ಪತ್ನಿ ಪ್ರಗತಿ ಜೊತೆಗೆ ಕೊಲ್ಲೂರು ದೇಗುಲಕ್ಕೆ (Kollur Mookambika Temple) ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ಸಿನಿಮಾ ಯಶಸ್ಸಿಗಾಗಿ ನಟ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: 4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ

    ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಸಿನಿಮಾದ ಟ್ರೈಲರ್‌ ಅನ್ನು ನವರಾತ್ರಿ ದಿನ ಬಿಡುಗಡೆ ಮಾಡಲಾಯಿತು. ಟ್ರೈಲರ್‌ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ರಿಲೀಸ್‌ ಆದ ದಿನವೇ 55 ಮಿಲಿಯನ್‌ಗೆ ಹೆಚ್ಚು ವೀಕ್ಷಣೆಯನ್ನು ಟ್ರೈಲರ್‌ ಪಡೆದುಕೊಂಡಿದೆ.

    ಟ್ರೈಲರ್‌ ರಿಲೀಸ್‌ ಬಳಿಕ ಸಂಜೆ ಕಾಂತಾರ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿ ಸಿನಿಮಾದ ಬಗ್ಗೆ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿತು. ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಸಿನಿಮಾ ನಿರ್ಮಾಣದಲ್ಲಿನ ಶ್ರಮ ಹಾಗೂ ತಂಡದ ಜವಾಬ್ದಾರಿಯುತ ಕೆಲಸದ ಬಗ್ಗೆ ಮಾತನಾಡಿದರು. ನಟಿ ರುಕ್ಮಿಣಿ ವಸಂತ್‌, ನಿರ್ಮಾಪಕ ವಿಜಯ್‌ ಕಿರಗಂದೂರು, ರಿಷಬ್‌ ಪತ್ನಿ ಪ್ರಗತಿ ಶೆಟ್ಟಿ ಕೂಡ ಸುದ್ದಿಗೋಷ್ಠಿಯಲ್ಲಿ ಸಿನಿಮಾ ಕುರಿತು ಮಾತನಾಡಿದರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌-1 ಟ್ರೈಲರ್ ರಿಲೀಸ್ – ದೃಶ್ಯ ವೈಭವಕ್ಕೆ ಮನಸೋತ ಫ್ಯಾನ್ಸ್

    ಕಾಂತಾರ ಚಾಪ್ಟರ್‌ 1 ಇದೇ ಅಕ್ಟೋಬರ್‌ 2 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ದೇಶ-ವಿದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್‌ ಆಗಲಿದೆ.

  • ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ತ.ನಾಡು ಸಿಎಂ ಸ್ಟಾಲಿನ್ ಪತ್ನಿ

    ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ತ.ನಾಡು ಸಿಎಂ ಸ್ಟಾಲಿನ್ ಪತ್ನಿ

    – ಸನಾತನ ಧರ್ಮ ಮಲೇರಿಯಾ ಎಂದಿದ್ದ ಸ್ಟಾಲಿನ್ ಪುತ್ರ ಉದಯನಿಧಿ
    – ಮನೆಯವರ ವಿಚಾರಗಳಿಂದ ಅಂತರ ಕಾಯ್ದುಕೊಂಡಿರುವ ಸ್ಟಾಲಿನ್ ಪತ್ನಿ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ (Kollur Mookambika Temple) ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (M.K.Stalin) ಅವರ ಪತ್ನಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

    ಸ್ನೇಹಿತೆಯರ ಜೊತೆ ದೇಗುಲಕ್ಕೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ ಅವರು, ಮೂಕಾಂಬಿಕೆಯ ದರ್ಶನ ಮಾಡಿದರು. ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿದ್ದಾರೆ.

    ತಮಿಳುನಾಡು ಸಿಎಂ ಪತ್ನಿ ಜೊತೆಗೆ ಬಂದಿದ್ದ ಅವರ ಸ್ನೇಹಿತರೆಯರು ಮೂಕಾಂಬಿಕಾ ದೇವಿಗೆ ಚಿನ್ನದ ಕಿರೀಟ ಅರ್ಪಣೆ ಮಾಡಿದ್ದಾರೆ. ಖಾಸಗಿಯಾಗಿ ದೇವಿಗೆ ಕಿರೀಟ ಅರ್ಪಿಸಿ ದೇವಿ ಕೃಪೆಗೆ ಪಾತ್ರರಾಗಿದ್ದಾರೆ.

    ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನಿರಂತರವಾಗಿ ಟೀಕಾಪ್ರಹಾರ ನಡೆಸಿದ್ದಾರೆ. ‘ಸನಾತನ ಧರ್ಮ ಮಲೇರಿಯಾ ಇದ್ದಂತೆ.. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಡಿಸಿಎಂ ಉದಯನಿಧಿ ಹೇಳಿಕೆ ನೀಡಿದ್ದರು. ವಿವಾದಿತ ಹೇಳಿಕೆಯು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

    ಮನೆಯವರ ಇಂತಹ ಹೇಳಿಕೆಗಳಿಂದ ದುರ್ಗಾ ಸ್ಟಾಲಿನ್ ಅವರು ಅಂತರ ಕಾಯ್ದುಕೊಂಡಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಮನೆಯವರ ವಿಚಾರಧಾರೆ ಜೊತೆ ಅಂತರ ಕಾಯ್ದುಕೊಂಡಿದ್ದಾರೆ. ದಕ್ಷಿಣ ಭಾರತದ ವಿವಿಧ ದೇಗುಲಗಳಿಗೆ ಭೇಟಿ ನೀಡಿ, ಕೊಡುಗೆಗಳಿಂದ ದೈವ ಭಕ್ತೆ ಎನಿಸಿಕೊಂಡಿದ್ದಾರೆ.

  • ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದುಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ಬದಲಾಯಿಸಬೇಕು. ಟಿಪ್ಪುಸುಲ್ತಾನ್ ಹೆಸರಿನಲ್ಲಿ ಆರತಿ ನಡೆಯಬಾರದು ಎಂದು ವಿಶ್ವಹಿಂದೂ ಪರಿಷತ್ತು ಸರ್ಕಾರಕ್ಕೆ ಮನವಿ ಮಾಡಿದೆ. ನಿಜ ಅರ್ಥದಲ್ಲಿ ಸಲಾಂ ಮಂಗಳಾರತಿ ಎಂದರೇನು ಪ್ರದೋಷ ಪೂಜೆ ಎಂದರೇನು ಎಂದು ಕೊಲ್ಲೂರಿನ ಹಿರಿಯ ಅರ್ಚಕ ಕೆ.ವಿ ಶ್ರೀಧರ್ ಅಡಿಗ ಮಾಹಿತಿ ನೀಡಿದ್ದಾರೆ.

    ಕೊಲ್ಲೂರು ದೇಗುಲದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಪ್ರದೋಷ, ಎರಡು ರಾತ್ರಿ ಕಾಲದಲ್ಲಿ ಪೂಜೆ ನಡೆಯುತ್ತದೆ. ಇದೊಂದು ಬಹಳ ಅರ್ಥಗರ್ಭಿತವಾದ ಪೂಜೆ. ಪ್ರದೋಷ ಕಾಲ ಎಂಬುದಕ್ಕೆ ಬಹಳ ಮಹತ್ವವಿದೆ. ಪ್ರದೋಷ ಕಾಲದಲ್ಲಿ ಎಲ್ಲಾ ದೇವಿ ದೇವತೆಗಳ ಸಾನಿಧ್ಯ ಇರುತ್ತದೆ ಎಂಬ ನಂಬಿಕೆಯಿದೆ. ಪ್ರದೋಷ ಕಾಲದಲ್ಲಿ ನಡೆಯುವ ಪೂಜೆಗಳ ವೈಶಿಷ್ಟ ಬೇರೆಯೇ ಇದೆ. ಇದನ್ನು ಓದಿ : ಕೆಲವು ಶಾಲೆಯಲ್ಲಿ ಹಿಜಬ್ ಯೂನಿಫಾರ್ಮ್ ಇದೆ, ಪರೀಕ್ಷೆಯಲ್ಲಿ ಹೇಗೆ ಮಾನಿಟರ್ ಮಾಡ್ತೀರಾ?: ದಿನೇಶ್ ಗುಂಡೂರಾವ್

    ನಾವು ಆ ಕಾಲದಲ್ಲಿ ದೇವಿಗೆ ಪೂಜೆಯನ್ನು ನಡೆಸುತ್ತೇವೆ. ವೈಭವೋಪೇತವಾಗಿ ರಾಗೋಪಚಾರ ದೀಪಾರಾಧನೆಗಳನ್ನು ನಡೆಸುತ್ತೇವೆ. ಕರುಣಾ ಕರುಣಿಕೆಯಲ್ಲಿ ಕೇಳಿಬಂದ ಪ್ರಕಾರ ಅಂದರೆ ವಾಡಿಕೆ ಪ್ರಕಾರ ದೊರೆ ಟಿಪ್ಪು ಪೂಜೆಯಲ್ಲಿ ಭಾಗವಹಿಸಿದ್ದ. ಪ್ರದೋಷ ಪೂಜೆ ಸಂದರ್ಭದಲ್ಲಿ ಸಲಾಮ್ ಮಾಡಿದ್ದ ಅಂತ ಕರುಣಾಕರುಣಿಕ ಅರ್ಥಾತ್ ವಾಡಿಕೆಯಾಗಿ ಬಂದಿದೆ. ಇದಕ್ಕೆ ಯಾವುದೇ ತರಹದ ದಾಖಲೆಗಳು ಇಲ್ಲ. ಇದೊಂದು ಹೇಳಿಕೊಂಡು ಬಂದಿರುವಂತಹ ಮಾತು. ಪ್ರದೋಷ ಪೂಜೆ ಪ್ರದೋಷ ಮಂಗಳಾರತಿ ಎಂದೇ ದಾಖಲೆಯಲ್ಲಿರುವ ಧಾರ್ಮಿಕ ಪ್ರಾಧಾನ್ಯತೆ ಪೂಜೆಗೆ ಇದೆ.

    ಇದು ಹಿಂದಿನಿಂದಲೂ ಇವತ್ತಿಗೂ ನಡೆದುಕೊಂಡು ಬಂದಿರುವಂತಹ ಆಚರಣೆ. ರಾಷ್ಟ್ರದ ಯೋಗಕ್ಷೇಮಕ್ಕೋಸ್ಕರ ಪೂಜೆ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತದೆ. ಪೂಜೆ ಸಂದರ್ಭ ಟಿಪ್ಪು ಭಾಗವಹಿಸಿದ್ದ ಎಂದು ಹೇಳಿಕೊಂಡು ಬಂದಿದ್ದಾರೆ. ಹಾಗಾಗಿ ಈ ಹೆಸರು ಬಂದಿರಬಹುದು ಎಂದು ತಿಳಿಸಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

  • ಡಿಕೆಶಿ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ – ಹೆಬ್ಬಾಳ್ಕರ್ ಹರಕೆ

    ಡಿಕೆಶಿ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ – ಹೆಬ್ಬಾಳ್ಕರ್ ಹರಕೆ

    ಉಡುಪಿ: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯ್ತು.

    ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇವತ್ತು ಬೆಳಗ್ಗಿನಿಂದಲೇ ಚಂಡಿಕಾಹೋಮ ನೆರವೇರಿತು. ಮುಂಜಾನೆಯೇ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಚಂಡಿಕಾಹೋಮ ಬುಕ್ಕಿಂಗ್ ಮಾಡಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಯ್ತು. ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.