Tag: ಕೊಲ್ಲೂರು ಮೂಕಾಂಬಿಕಾ ದೇವಾಲಯ

  • ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಬರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kolluru Mookambika Temple) ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಪ್ರಶ್ನಿಸಿ ಹೈಕೋರ್ಟ್‍ಗೆ (Highcourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

    ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬವರು ಪಿಐಎಲ್ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಇದನ್ನೂ ಓದಿ: 4 ದಿನದ ಕೂಸನ್ನು ಬಿಸಿ ನೀರಿನಲ್ಲಿ ಕೂರಿಸಿ ಸ್ನಾನ ಪ್ರಕರಣ- ಧಾರವಾಡದ ಆಸ್ಪತ್ರೆಗೆ 10 ಲಕ್ಷ ದಂಡ

    ಯೋಜನೆಯ ಪ್ರಕಾರ, ಕಾಮಗಾರಿ ನಡೆದರೆ ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು 15 ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.

    ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜೊತೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.

  • ಕೊಲ್ಲೂರು ದೇವಿಗೆ ಮಗನ ಮುಡಿ ಕೊಟ್ಟು ಹರಕೆ ತೀರಿಸಿದ ರಿಷಬ್ ಶೆಟ್ಟಿ

    ಕೊಲ್ಲೂರು ದೇವಿಗೆ ಮಗನ ಮುಡಿ ಕೊಟ್ಟು ಹರಕೆ ತೀರಿಸಿದ ರಿಷಬ್ ಶೆಟ್ಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ಮುಡಿ ತೆಗೆಸಿ ಹರಕೆಯನ್ನು ತೀರಿಸಿದ್ದಾರೆ.

    ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು ಇಂದು ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ.

    ಅನ್‍ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್ ಎಂಬ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಿಷಬ್ ಪಂಚೆ ಹಾಗೂ ಶಲ್ಯ ಹಾಗೂ ಅವರ ಪತ್ನಿ ನೀಲಿ ಬಣ್ಣದ ಸೀರೆಯುಟ್ಟಿದ್ದಾರೆ. ಮಗ ರನ್ವಿತ್ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.

    ಏಪ್ರಿಲ್ ತಿಂಗಳಿನಲ್ಲಿ ರಿಷಬ್ ಶೆಟ್ಟಿಯವರು, ತಮ್ಮ ಮಗನ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ ಮಾಡಿಸುವ ಮೂಲಕ ಆಚರಿಸಿದ್ದರು.