Tag: ಕೊಳವೆ ಬಾವಿ ದುರಂತ

  • ತೆರೆದ ಕೊಳವಿ ಬಾವಿ ಮುಚ್ಚಿಸಿ ಫೋಟೋ ಕಳಿಸಿದ್ರೆ ಖಾತೆಗೆ ಹಣ

    ತೆರೆದ ಕೊಳವಿ ಬಾವಿ ಮುಚ್ಚಿಸಿ ಫೋಟೋ ಕಳಿಸಿದ್ರೆ ಖಾತೆಗೆ ಹಣ

    ಕೊಪ್ಪಳ: ನೀವು ಕೊಪ್ಪಳ ಜಿಲ್ಲೆಯಲ್ಲಿ ವಾಸವಾಗಿದ್ದೀರಾ? ನಿಮ್ಮ ಸುತ್ತಮುತ್ತಲು ತೆರೆದ ಕೊಳವೆ ಬಾವಿ ಇದೆಯೇ? ಹಾಗಾದ್ರೆ ತಡಮಾಡದೇ ಸ್ಥಳದ ಮಾಹಿತಿಯ ಜೊತೆಗೆ ಫೋಟೋವನ್ನು ವಾಟ್ಸಪ್ ಮಾಡಿದ್ರೆ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ.

    ಆರಂಭದ ಪೀಠಿಕೆ ಓದಿ ಖಾತೆಗೆ ಹಣ ನೀಡುವ ಯೋಜನೆಯನ್ನು ಸರ್ಕಾರ ಪ್ರಕಟಿಸಿದೆ ಎಂದು ನೀವು ಭಾವಿಸಿದರೆ ತಪ್ಪಾದಿತು. ತೆರೆದ ಕೊಳವೆ ಬಾವಿ ದುರಂತಕ್ಕೆ ಮನಮಿಡಿದ ಪ್ರಗತಿಪರ ರೈತರೊಬ್ಬರು ಬಹುಮಾನವನ್ನು ಘೋಷಣೆ ಮಾಡಿದ್ದಾರೆ.

    ಜಿಲ್ಲೆಯ ಗಂಗಾವತಿ ಪಟ್ಟಣದ ಪ್ರಗತಿಪರ ರೈತ ಶಿವಪ್ಪ ಚಳ್ಳಕೇರಿ ಅವರು 500 ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಇಂದು ತೆರೆದ ಕೊಳವೆ ಬಾವಿ ಮುಚ್ಚಿಸೋದಕ್ಕಾಗಿ ಒಂದು ಲಕ್ಷ ರೂಪಾಯಿ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡಿದ್ದಾರೆ.

    ಕೊಪ್ಪಳ ಜಿಲ್ಲೆಯಲ್ಲಿ ಈಗಾಗ್ಲೇ 338 ವಿಫಲ ಕೊಳವೆ ಬಾವಿಗಳಿವೆ ಅಲ್ದೆ ಕೊಪ್ಪಳ ನಗರದಲ್ಲಿ 21 ವಿಫಲ ಕೊಳವೆ ಬಾವಿಗಳಿವೆ. ತೆರೆದ ಕೊಳವೆ ಬಾವಿ ಮುಚ್ಚಬೇಕಂತ ಮಾತನಾಡೋವ್ರೆ ಹೆಚ್ಚು ಆದ್ರೆ ಯಾರು ಮುಚ್ಚೋಕೆ ಮುಂದಾಗೊಲ್ಲ. ಆದ್ರೆ ಇಂತಹ ಬಹುಮಾನ ಘೋಷಣೆ ಮಾಡೋದ್ರಿಂದ ಮುಚ್ಚುತ್ತಾರೆ ಅನ್ನೋ ನಿರೀಕ್ಷೆಯಿದೆ ಎಂದು ಶಿವಪ್ಪ ಅವರು ತಿಳಿಸಿದ್ದಾರೆ.

    ಬಹುಮಾನ ಪಡೆಯಲು ಹೀಗೆ ಮಾಡ್ಬೇಕು: ಕೊಪ್ಪಳ ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿ ಇರೋ ಫೋಟೋ ಹಾಗೂ ಮುಚ್ಚಿದ ಬಳಿಕ ಫೋಟೋ ಮತ್ತು ಗ್ರಾಮ ಪಂಚಾಯತ್‍ನಿಂದ ದೃಢೀಕರಣ ಪತ್ರದ ಜೊತೆಗೆ ಬ್ಯಾಂಕ್ ಖಾತೆಯ ಮಾಹಿತಿಯನ್ನು 8861318934 ನಂಬರ್ ಗೆ ವಾಟ್ಸಾಪ್ ಮಾಡಿದ್ರೆ 500 ರೂ. ಬಹುಮಾನ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಈ ಬಹುಮಾನದ ನೀಡುವ ಅವಧಿ 6 ತಿಂಗಳು ಆಗಿದ್ದು, ಜನರು ಫೋಟೋಗಳನ್ನು ಕಳುಹಿಸಬಹುದು.

    ರಾಜ್ಯದಲ್ಲಿ ತೆರೆದ ಕೊಳವೆ ಬಾವಿ ಮುಚ್ಚೋ ಅಭಿಯಾನವಾಗ್ತಿದೆ. ಆದ್ರೆ ಕೊಪ್ಪಳದ ಪ್ರಗತಿಪರ ರೈತ ಬಹುಮಾನ ಘೋಷಣೆ ಮಾಡೋ ಮೂಲಕ ಗಮನಸೆಳೆದಿದ್ದಾರೆ. ಇನ್ಮೇಲಾದ್ರೂ ತೆರೆದ ಕೊಳವೆ ಬಾವಿ ಮುಚ್ಚಿ ಮುಂದೆ ಇಂಥ ದುರಂತ ಆಗದಿರಲಿ ಅನ್ನೋದೆ ಎಲ್ಲರ ಆಶಯ.

  • ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಬೆಳಗಾವಿ: ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಿದ್ದು 27 ಅಡಿಯಲ್ಲಿ ಸಿಲುಕಿರುವ ಕಾವೇರಿಯನ್ನು ಮೇಲೆತ್ತಲು ರಕ್ಷಣಾ ಪಡೆಗಳು ಈಗಾಗಲೇ 24 ಅಡಿ ಆಳ ತೆಗೆದಿದ್ದಾರೆ. 2 ಹಿಟಾಚಿ, 2 ಜೆಸಿಬಿ ಬಳಸಿ ಅಡ್ಡಲಾಗಿ ಸುರಂಗ ಕೊರೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. 4 ಎನ್‍ಡಿಆರ್‍ಎಫ್, ರಾಯಚೂರಿನ 6 ಹಟ್ಟಿ ಚಿನ್ನದ ಗಣಿ ಟೀಂಗಳಿಂದ ಅಹೋರಾತ್ರಿ ಆಪರೇಷನ್ ನಡೆಯುತ್ತಿದೆ.

    ಶನಿವಾರ ಸಂಜೆ ಕಾವೇರಿ ತನ್ನ ತಾಯಿಯ ಜೊತೆ ಕಟ್ಟಿಗೆ ಆರಿಸುವಾಗ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿದೆ. ಕೊಳವೆ ಬಾವಿ ಸುತ್ತ 20 ಬೋರ್‍ವೆಲ್ ಕೊರೆದು ಸಕ್ಕಿಂಗ್ ಮಷಿನ್ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ. ಆದರೆ ಈವರೆಗೂ ಇದ್ಯಾವುದೂ ಫಲ ನೀಡಿಲ್ಲ. ಸ್ಥಳದಲ್ಲಿ ಇಡೀ ಜಿಲ್ಲಾಡಳಿತ ಬೀಡುಬಿಟ್ಟು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

    ಕಾವೇರಿಯ ಹೆತ್ತವರಾದ ಅಜಿತ್ ಮತ್ತು ಸವಿತಾ ಸ್ಥಿತಿ ಯಾರಿಗೂ ಬೇಡವಾಗಿದೆ. ಮಗಳು ಸಿಗೋವರೆಗೂ ಆಹಾರ ಸೇವಿಸುವುದಿಲ್ಲ ಎಂದು ಸವಿತಾ ಪಟ್ಟು ಹಿಡಿದಿದ್ದಾರೆ. ಇನ್ನು ಅವಘಡಕ್ಕೆ ಕಾರಣರಾದ ಜಮೀನು ಮಾಲೀಕ ಶಂಕರಪ್ಪ ಹಿಪ್ಪರಗಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಜಮೀನು ಮಾಲೀಕ ಶಂಕರಪ್ಪ ವಿರುದ್ಧ ಐಪಿಸಿ ಸೆಕ್ಷನ್ 371ರಡಿ ನಿರ್ಲಕ್ಷ್ಯದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

    ಕಾವೇರಿ ರಕ್ಷಣೆಗೆ ಇನ್ನೂ 15 ಗಂಟೆ ಬೇಕು. ಬಾಲಕಿಯ ಕೈಕಾಲುಗಳ ಚಲನವಲನ ಆಗ್ತಿಲ್ಲ. ನಮ್ಮ ಪ್ರಯತ್ನ ನಡೆಯುತ್ತಿದೆ. ನಾವು ನಿರಂತರವಾಗಿ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ ಅಂತಾ ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಝಂಜರವಾಡದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಇರೋದ್ರಿಂದ ರಕ್ಷಣಾ ತಂಡದ ಸದಸ್ಯರು ಬಳಲಿದ್ದಾರೆ.