Tag: ಕೋಡಿಮಠದ ಶ್ರೀ

  • ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

    ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

    ಚಿಕ್ಕಬಳ್ಳಾಪುರ: ಸದ್ಯ ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುತ್ತಾರೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ಚಿಕ್ಕಬಳ್ಳಾಪುರ ನಗರಕ್ಕೆ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಶ್ರೀಗಳು, ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ ವೆಂಕಟರಮಣ ಎನ್ನುವ ಜನರಿಗೆ ಬುದ್ಧಿ ಕಲಿಸಬೇಕೆನ್ನುವ ಕಾರಣಕ್ಕಾಗಿಯೇ ಕೊರೊನಾ ದೇವರನ್ನು ಹಿಡಿದುಕೊಂಡು ಭೂಮಿಗೆ ಬಂತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಅಬ್ಬರ ಎಷ್ಟಿತ್ತು ಎನ್ನುವುದಕ್ಕೆ ದೇವಾಲಯಗಳು ಬಾಗಿಲು ಮುಚ್ಚಿದ್ದೇ ಸಾಕ್ಷಿಯಾಗಿದೆ. ತಿರುಪತಿ, ಧರ್ಮಸ್ಥಳ, ಚಾಮುಂಡೇಶ್ವರಿ ದೇವಾಲಯಗಳ ಬಾಗಿಲು ಹಾಕಿಸಿತು. ಮಠ, ಮಾನ್ಯಗಳು ಬಾಗಿಲು ಹಾಕುವಂತಾಯಿತು ಎಂದರು. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ

    ಕೊರೊನಾ ಅಬ್ಬರ ತಗ್ಗಿತು ಎನ್ನುವಾಗ ನೆಲ ಗಂಡಾಂತರ ಪ್ರಾರಂಭವಾಗಿ ಏಕಶಿಲಾ ಪರ್ವತವಾದ ನಂದಿಗಿರಿಧಾಮದ ನೆಲವೇ ಕುಸಿದಂತೆ ಮಲೆಮಹದೇಶ್ವರ ಬೆಟ್ಟ, ಮಡಿಕೇರಿ ಮೊದಲಾದೆಡೆ ಸಮಸ್ಯೆ ಎದುರಾಯಿತು. ಇದರ ಜತೆಗೆ ಜಲಗಂಡಾಂತರವೂ ಸಹ ಎದುರಾಗಿ ಜನಜಾನುವಾರು ಸಹಿತ ಸಕಲ ಜೀವರಾಶಿಯನ್ನು ಹಿಂಡಿ ಹಿಪ್ಪೆ ಮಾಡಿತು. ಮುಂದೆ ಗಾಳಿ ಗಂಡಾಂತರ ಬಂದು ಜನರನ್ನು ಬಾಧಿಸಲಿದೆದೆ. ಗಾಳಿ ಗಂಡಾಂತರವೂ ಕೂಡ ಮನುಷ್ಯನಿಗೆ ಅಪಾಯಕಾರಿ ನೆಲೆಯಲ್ಲಿಯೇ ಬಂದು ಕಷ್ಟವನ್ನು ತಂದರೂ ಮುಂದೆ ಹೋಗಲಿದೆ. ಆದರೆ ಇದು ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿಯನ್ನು ತಂದೊಡ್ಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.  ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ

  • ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ದೊಡ್ಡ ದುರಂತ: ಕೋಡಿ ಮಠ ಶ್ರೀ ಭವಿಷ್ಯ

    ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ದೊಡ್ಡ ದುರಂತ: ಕೋಡಿ ಮಠ ಶ್ರೀ ಭವಿಷ್ಯ

    ಹಾವೇರಿ: ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಕೋಡಿ ಮಠದ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ರಾಣೇಬೆನ್ನೂರು ನಗರದ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಇದೀಗ ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಮತ್ತಷ್ಟು ಅಪಸ್ವರ – ಚಿತ್ರೋದ್ಯಮದ ನಡೆಗೆ ಸಾ.ರಾ.ಗೋವಿಂದು ಕಿಡಿ

    ಕೊರೊನಾ ರೂಪಾಂತರಿ ಹೆಚ್ಚಾಗುವ ಎಲ್ಲಾ ಲಕ್ಷಣಗಳಿವೆ. ದೇಶದಲ್ಲಿ ಸಂಶಯ, ಅಸಹನೆ, ದ್ವೇಷ ಹಾಗೂ ರಾಜಕೀಯ ಕಲಹಗಳು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಮಳೆ ಕೂಡ ಅಧಿಕವಾಗಿ ಸುರಿಯುವ ಲಕ್ಷಣವಿದೆ ಎಂದು ಕೋಡಿ ಮಠದ ಶ್ರೀಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಸ್ಲೋ ಪಾಯಿಸನ್: ಬಾಲಕೃಷ್ಣ ಕಿಡಿ

  • ಮೈತ್ರಿ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ: ಕೋಡಿಮಠದ ಶ್ರೀ

    ಮೈತ್ರಿ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ: ಕೋಡಿಮಠದ ಶ್ರೀ

    ದಾವಣಗೆರೆ: ಈ ಮೈತ್ರಿ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಗಳು ಹೇಳಿಕೆ ನೀಡಿದ್ದಾರೆ.

    ಚುನಾವಣೆ ಪೂರ್ವದಲ್ಲಿಯೂ ನಾನು ಮೈತ್ರಿ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ಹೇಳಿದ್ದೆ. ಇಂದು ಸಹ ನಾನು ಅದೇ ಮಾತುಗಳನ್ನು ಹೇಳುತ್ತೇನೆ. ಬಿತ್ತಿದ ಬೆಳೆಸು ಪರರು ಕೊಯ್ದಾರು, ಬಿತ್ತಿದ ಬೀಜ ಒಂದು, ಫಸಲು ಇನ್ನೊಂದು ಎಂದು ಮಾರ್ಮಿಕವಾಗಿ ಮೈತ್ರಿ ಸರ್ಕಾರದ ಆಯುಷ್ಯದ ಬಗ್ಗೆ ಭವಿಷ್ಯ ನುಡಿದರು. ಇದನ್ನೂ ಓದಿ: ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಈ ಸರ್ಕಾರಕ್ಕೆ ಕೇವಲ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ ಅಂತಾ ಹೇಳಿದ್ದೆ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮತ ಯಾಚನೆ ಮಾಡಲು ಹೋಗಲಿದ್ದಾರೆ ಎನ್ನುವ ಮೂಲಕ ಮಧ್ಯಂತರ ಚುನಾವಣೆಯ ಸುಳಿವನ್ನು ನೀಡಿದರು. ಸ್ವಲ್ಪ ಗಾಳಿ-ಗುಡುಗು ಜೊತೆ ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆಗಲಿದೆ. ರಾಜ್ಯಕ್ಕೆ ನೀರು ಬರುತ್ತದೆ. ಹಾಗಾಗಿ ಯಾರು ಆತಂಕಕ್ಕೆ ಒಳಗಾಗಬಾರದು ಎಂದು ಜನತೆಗೆ ತಿಳಿಸಿದರು. ಇದನ್ನೂ ಓದಿ: ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

  • ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

    ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

    ಯಾದಗಿರಿ: ತಾಲೂಕಿನ ಅಬ್ಬೆತುಮಕೂರನ ಜಾತ್ರೆಯಲ್ಲಿ ಭಾಗವಹಿಸಿ ಲೋಕಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

    ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಎಂದು ಶ್ರೀಗಳಿಗೆ ಸಹಾಯಕ ಚುನಾವಣಾಧಿಕಾರಿಗಳದ ಶಂಕರಗೌಡ ಸೋಮನಾಳ ಅವರು ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‍ಐ ಮೂಲಕ ನೋಟಿಸ್ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮಾರ್ಚ್ 10 ರಿಂದಲೇ ಜಾರಿಯಾಗಿದೆ. ನೀವು ಹೇಳಿಕೆ ನೀಡಿರುವುದು ನಿಜವಾದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಅದ್ದರಿಂದ 48 ಗಂಟೆಗಳ ಒಳಗೆ ನಿಲಿತ ರೂಪದಲ್ಲಿ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

    ಮಾರ್ಚ್ 11 ರಂದು ನಡೆದ ಜಾತ್ರೆಯಲ್ಲಿ ಸತ್ಯ ವಿಷದಂತೆ ಇರುತ್ತೆ ಕುರುವಂಶ ದೊರೆಗಳು ಬಡಿದಾಡ್ಯಾರು ಪಾಂಡವರು ಕೌರವರು ಬಡಿದಾಡ್ಯಾರು, ರತ್ನ ಖಚಿತ ಸುವರ್ಣ ಕಿರೀಟ ಸ್ಥಿರವಾದಿತು ಎಂದು ಭವಿಷ್ಯ ನುಡಿದಿದ್ದರು. ಶ್ರೀಗಳ ಭವಿಷ್ಯ ನುಡಿಯನ್ನು ಕೇಂದ್ರದಲ್ಲಿ ಅಧಿಕಾರ ರಚನೆ ಮಾಡಲು ಶತ್ರುಗಳಂತೆಯಿದ್ದ ಪಕ್ಷಗಳು ಅಂದರೆ ಸಮಾಜವಾದಿ ಬಿಎಸ್‍ಪಿ ಒಂದಾಗಿವೆ. ಘಟಬಂಧನ ರಚನೆ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಹವಣಿಸುತ್ತಿವೆ. ಅದರೆ ಮೋದಿಗೆ ಈಗ ಸ್ಥಿರವಾದ ರತ್ನ ಖಚಿತ ಕೀರಿಟ ಈಗಿನ ಚುನಾವಣೆ ನಂತರವೂ ಖಚಿತವಾಗಲಿದೆ. ಬೇವು ಬೆಲ್ಲವಾದಿತು ಅಂದರೆ ಸೈನಿಕರ ಮೇಲಿನ ದಾಳಿ ಪ್ರಧಾನಿ ಮೋದಿ ಪಾಲಿಗೆ ಕಹಿಯ ಬದಲು ಸಿಹಿಯಾಗಲಿದೆ ಎಂದು ಮಠದವರು ವಿಶ್ಲೇಷಿಸಿದ್ದರು. ಈ ಕುರಿತ ವರದಿಯನ್ನ ಪಬ್ಲಿಕ್ ಟಿವಿ ವರದಿ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಾಸ್ತ್ರಿಯಂತೆ ರಾಷ್ಟ್ರದ ಮಹಾನ್ ನಾಯಕನಿಗೆ ವಿಷಪ್ರಾಶನ: ಕೋಡಿ ಶ್ರೀ ಭವಿಷ್ಯ

    ಶಾಸ್ತ್ರಿಯಂತೆ ರಾಷ್ಟ್ರದ ಮಹಾನ್ ನಾಯಕನಿಗೆ ವಿಷಪ್ರಾಶನ: ಕೋಡಿ ಶ್ರೀ ಭವಿಷ್ಯ

    ಧಾರವಾಡ: ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾವಿನ ರೀತಿಯಲ್ಲಿಯೇ, ಈ ದೇಶದಲ್ಲಿ ಮತ್ತೊಬ್ಬ ಮಹಾನ್ ನಾಯಕನ ಅವನತಿಯಾಗುತ್ತದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ದಸರಾ ಜಂಬೂ ಸವಾರಿ ಉತ್ಸವಕ್ಕೆ ಆಗಮಿಸಿದ್ದ ಶ್ರೀಗಳು, ರಾಷ್ಟ್ರ ರಾಜಕಾರಣದ ಬಗ್ಗೆ ಈಗಲೇ ಮಾತನಾಡಲ್ಲ ಆದರೆ ಹಿಂದೆ, ಚೋಟು ಗೇಣಿನ ವೀರ. ಭಾರತದ ಕುವರ ತಕ್ಕಡಿಯ ಊರಿನಲ್ಲಿ ವಿಷಪಾನ ಮಾಡುತ್ತಾನೆ’ ಎಂದು ಹೇಳಿದ್ದೆ. ಈ ಹೇಳಿಕೆಯ ಬಳಿಕ ಆಗ ತಾಷ್ಕೆಂಟ್ ನಲ್ಲಿ ಲಾಲಬಹದ್ದೂರ್ ಶಾಸ್ತ್ರಿ ಅವರ ಸಾವು ಸಂಭವಿಸಿತ್ತು. ಈಗ ಅಂಥದ್ದೇ ಘಟನೆ ಈ ದೇಶದಲ್ಲಿ ಮರುಕಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹೇಳಿದರು.

    ರಾಜ್ಯ ಸರ್ಕಾರ ಮೌಢ್ಯ ನಿಷೇಧ ಪ್ರತಿಬಂಧಕ ಕಾಯ್ದೆ ತರುತ್ತಿರುವದು ಸ್ವಾಗತಾರ್ಹ. ಜನರು ಮೊದಲಿನಿಂದಲೂ ಸತ್ಯಕ್ಕಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಕೆಲವರು ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಜನರ ಸುಲಿಗೆ ಮಾಡುತ್ತಿದ್ದಾರೆ. ಹಾಗಾಗಿ ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡುತ್ತಿರುವುದು ಒಳ್ಳೆಯ ಕಾರ್ಯ ಎಂದರು. ಈ ಕಾಯ್ದೆ ಬಂದರೆ ಸತ್ಯ ಉಳಿಯುತ್ತದೆ. ಇನ್ನೂ ಜನವರಿವರೆಗೆ ಇದೇ ರೀತಿ ಅಕಾಲಿಕ ಮಳೆಯಾಗಲಿದೆ ಎಂದು ಹೇಳಿದರು.

    ಶಾಸ್ತ್ರಿ ಮೃತಪಟ್ಟಿದ್ದು ಹೇಗೆ?
    ಪಾಕಿಸ್ತಾನ ವಿರುದ್ಧದ ಎರಡನೇ ಯುದ್ಧದಲ್ಲಿ ಭಾರತ ಜಯಗಳಿಸಿತ್ತು. ಈ ವೇಳೆ ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ 1966 ಜನವರಿ 10 ರಂದು ರಷ್ಯಾದ ತಾಷ್ಕೆಂಟ್‍ನಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಪಾಕಿಸ್ತಾನದ ಅಂದಿನ ಅಧ್ಯಕ್ಷರಾದ ಆಯೂಬ್ ಖಾನ್ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಈ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದರು. ಉಭಯ ದೇಶಗಳ ನಾಯಕರು ರಷ್ಯಾದ ಮಧ್ಯಸ್ಥಿಕೆಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು.

    ಶಾಸ್ತ್ರಿ ಅವರು ಸಹಿ ಹಾಕಿದ ಗಂಟೆಯಲ್ಲೇ ಹೃದಯಾಘಾತದಿಂದ ಸಾವನ್ನಪಿದ್ದರು. ರಷ್ಯಾ ವೈದ್ಯರು ಕೂಡ ಶಾಸ್ತ್ರಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದರು. ಆದರೆ ಶಾಸ್ತ್ರಿಯವರ ಕುಟುಂಬದ ನಿಕಟವರ್ತಿಯಾಗಿದ್ದ ಪತ್ರಕರ್ತ ಕುಲದೀಪ್ ನಯ್ಯರ್ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರನ್ನು ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿದೆ ಎನ್ನುವ ಅನುಮಾನ ವ್ಯಕ್ತಪಡಿಸಿದ್ದರು. ಶಾಸ್ತ್ರಿ ಕುಟುಂಬದ ಸದಸ್ಯರು ರಷ್ಯಾದಲ್ಲಿ ಮರಣೋತ್ತರ ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ಆರೋಪಿಸಿದ್ದರು. ಒಟ್ಟಿನಲ್ಲಿ ಇಲ್ಲಿಯವರೆಗೂ ಶಾಸ್ತ್ರಿ ಮೃತಪಟ್ಟ ವಿಚಾರ ಚಿದಂಬರ ರಹಸ್ಯವಾಗಿಯೇ ಉಳಿದಿದೆ.