Tag: ಕೋಡಿಮಠ ಶ್ರೀ

  • ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ.. ಇಲ್ವಾ? – ಕೋಡಿಮಠ ಶ್ರೀ ಹೇಳಿದ್ದೇನು?

    ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ.. ಇಲ್ವಾ? – ಕೋಡಿಮಠ ಶ್ರೀ ಹೇಳಿದ್ದೇನು?

    ದಾವಣಗೆರೆ: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸಲಿ. ಮೋದಿ (Narendra Modi) ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodimatha Swamiji) ಹೇಳಿದ್ದಾರೆ.

    ದಾವಣಗೆರೆಯ (Davanagere) ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬಳಿಕ ಒಂದು ಪಕ್ಷ ಆಡಳಿತ ನಡೆಸುತ್ತದೆ ಎಂದು ಹೇಳಿದ್ದೆ. ನಾನು ಹೇಳಿದಂತೆಯೇ ಆಗಿದೆ. ಅದರಂತೆ ಅವಘಡಗಳಿದ್ದಾವೆ. ಅ ಅವಘಡಗಳು ಕಳೆಯಬೇಕು. ಅ ಬಳಿಕ ಮುಂದಿನ ಭವಿಷ್ಯ ಹೇಳುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಶಿವಮೊಗ್ಗ ಮೂಲದ ಐಸಿಸ್ ಉಗ್ರನ ಬಂಧನ

    ಗುರುಗಳಲ್ಲಿ ಸಮಾಜಕಾರಕ ಹಾಗೂ ಮೋಕ್ಷಕಾರಕ ಗುರುಗಳಿದ್ದಾರೆ. ಜಾತಿಗಳು ಮನೆಯಲ್ಲಿರಬೇಕು. ಧರ್ಮ ಹೊರಗಡೆ ಇರಬೇಕು. ಆಗ ಶಾಂತಿ ಇರುತ್ತದೆ. ಮನುಷ್ಯನಿಗೆ ಯಾವುದು ಶಾಂತಿ, ನೆಮ್ಮದಿ ನೀಡುತ್ತದೆಯೋ ಅದು ಧರ್ಮವಾಗುತ್ತದೆ. ನೀರಿನ ಮೇಲೆ ದೋಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಸೂಚ್ಯವಾಗಿ ಹೇಳಿದ್ದಾರೆ.

    ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ. ರಾಜ್ಯ-ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದರೆ ಮುಂದಿನ ಭವಿಷ್ಯ ಹೇಳುವೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: MLA ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಪ್ರಕರಣದ 5ನೇ ಆರೋಪಿ ಅರೆಸ್ಟ್‌

    ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರುತ್ತದೆ. ಆತಂಕ ಪಡುವ ಅಗತ್ಯವಿಲ್ಲ. ಅನೇಕ ತಪ್ಪು-ಒಪ್ಪುಗಳು ಪ್ರಾಣಿಗಳಲ್ಲಾಗುತ್ತಿದೆ. ಮನುಷ್ಯನಲ್ಲೂ ಸಾಕಷ್ಟು ತಪ್ಪುಗಳಾಗುತ್ತಿವೆ. ಮನುಷ್ಯ ಎಷ್ಟೇ ತಪ್ಪುಗಳನ್ನು ಮಾಡಿದರೂ, ಆ ಭಗವಂತ ಕ್ಷಮಿಸುತ್ತಾನೆ. ಆದರೆ ಮನುಷ್ಯ ತಾನೇ ಮಾಡಿದ ಪಾಪ ಕರ್ಮಗಳನ್ನು ತಿಳಿದೂ ತಪ್ಪು ಮಾಡಿದರೆ ಕ್ಷಮಿಸಲಾರ. ಮನುಷ್ಯ ಅಜ್ಞಾನದಲ್ಲಿ ಉಳಿದಿದ್ದಾನೆ. ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದೂ ಮನುಷ್ಯ ಪ್ರಕೃತಿ, ನೆಲ, ಜಲವನ್ನು ನಿರಂತರವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಾರಣ ಇಂದು ನಾವು ಅನೇಕ ರೀತಿಯ ಪ್ರಕೃತಿ ವಿಕೋಪಗಳನ್ನು ಕಾಣುತ್ತಿದ್ದೇವೆ. ಅದರೂ ಈ ಬಾರಿ ಮಳೆ ಆಗಲಿದೆ. ಏನೂ ತೊಂದರೆ ಇಲ್ಲ. ಕರ್ನಾಟಕ ಸಂಪದ್ಭರಿತ ರಾಜ್ಯ ಆಗಿದ್ದರಿಂದ ಎಲ್ಲ ಒಳ್ಳೆಯದಾಗಲಿದೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ

    ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ

    – ದೇಶದಲ್ಲಿ ಜಲಪ್ರಳಯವಾಗುತ್ತೆ, ವಿಷಾನೀಲ ಬೀಸುತ್ತೆ, ಭೂಕಂಪ, ಸುನಾಮಿಯಿಂದ ಹೆಚ್ಚಿನ ಸಾವು ನೋವಾಗುತ್ತೆ
    – ಡಾ. ಶಿವಾನಂದ ಸ್ವಾಮೀಜಿ ಆಘಾತಕಾರಿ ಭವಿಷ್ಯ

    ಬೆಳಗಾವಿ: ಈ ಬಾರಿ ಚಂದ್ರಯಾನ-3 (Chandrayaan 3) ಯಶಸ್ವಿಯಾಗಲಿದೆ ಎಂದು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ.

    ಬೆಳಗಾವಿಯಲ್ಲಿಂದು (Belagavi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚಂದ್ರಯಾನ 3 ಯಶಸ್ವಿಯಾಗಲಿದೆ. ಆದ್ರೆ ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ (Rain) ಎರಡು ದೇಶಗಳು ನಾಶವಾಗಲಿವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ.

    ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಆದ್ರೆ ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿ – ಚಂದ್ರನ ಅಂಗಳಕ್ಕೆ ಇನ್ನೊಂದೇ ಹೆಜ್ಜೆ

    ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೆಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು, ಪ್ರಾಕೃತಿಕ ದೋಷದಿಂದಲೇ ಸಾವುನೋವು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

    ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೆ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ರಷ್ಯಾದ ಲೂನಾ-25 ಲ್ಯಾಂಡರ್ ವಿಫಲ

    ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನ ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ ಹೆಚ್ಚಿತ್ತು, ಈಗ ಆಳವಾಗಿ ಬೋರ್‌ವೆಲ್‌ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ, ಹೀಗಾಗಿ ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ, ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ,

    ಇದೇ ವೇಳೆ ಈ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿ, ಮುಂದೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿದೆ, ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ತಿಳಿವಳಿಕೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಹಾಸನ: ಇನ್ನೂ ಮಳೆಯಾಗುವ ಲಕ್ಷಣವಿದ್ದು, ಭೂಮಿ ನಡುಗುವುದು, ಆಪತ್ತುಗಳು ಕಳೆದಿಲ್ಲ. ರಾಜಭಯ ಎಲ್ಲವೂ ಕಾರ್ತಿಕ ಮಾಸದ ವರೆಗೆ ಇರಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಡಾಳು ಗೌರಮ್ಮ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಈ ಹಿಂದೆ ನಾನು ಜಗತ್ತಿನ ಭೂಪಟದಲ್ಲಿ ಒಂದು ದೇಶ ಕಾಣೆಯಾಗಲಿದೆ ಎಂದು ಹೇಳಿದ್ದೆ. ಅದರಂತೆ ಇಂದು ಅಫ್ಘಾನಿಸ್ತಾನ ಭೂಪಟದಿಂದ ಕಾಣೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಈ ಭಯ ಇಡೀ ಜಗತ್ತಿನಾದ್ಯಂತ ಇದೆ. ಅದು ಇನ್ನೂ ಹೆಚ್ಚು ಕಾಡಲಿದೆ ಎಂದು ತಿಳಿಸಿದರು.

    ಜಗತ್ತಿನಲ್ಲಿ ಕೊರೊನಾ ಇನ್ನೂ ಎರಡು ವರ್ಷ ರೂಪಾಂತರಗೊಳ್ಳತ್ತ ಇರುತ್ತದೆ. ಸೋಂಕಿನಿಂದ ಸಾವಿಗೀಡಾದ ಆತ್ಮ ಅತೃಪ್ತಗೊಂಡು, ಜನರನ್ನು ಕಾಡಲಿದೆ. ಮುಂದಿನ ದಿನಗಳಲ್ಲಿ ಸಾವು-ನೋವುಗಳು ಹೆಚ್ಚಾಗಲಿವೆ ಎಂದು ನುಡಿದರು. ಇದನ್ನೂ ಓದಿ: ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಚಾರವಾಗಿ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀಗಳು, ಬೊಮ್ಮಾಯಿ ಗೊಂಬೆಯಾಗಿದ್ದಾರೆ. ಸೂತ್ರ ನಡೆಸುತ್ತಿರುವಂತೆ ಅವರು ಬೊಂಬೆಯಾಗಿ ಕುಣಿಯುತ್ತಾರೆ. ಇದರ ಸೂತ್ರದಾರಿ ಯಡಿಯೂರಪ್ಪ ಇದ್ದಾರೆ ಸರ್ಕಾರ ನಡೆಸಿಕೊಂಡು ಹೋಗುತ್ತಾರೆ ಎಂದರು.

    ಇದು ಹಿಂದೂ ದೇಶ. ಅಂದರೆ ದೈವ, ಧರ್ಮ, ಸತ್ಯ, ನಂಬಿಕೆ, ಸಾಧುಗಳಿರುವ ದೇಶ. ಅಂತಹ ಸಾಧುಗಳು ಬೀದಿಗೆ ಬಂದಾಗ ಇವರು ಅಗೌರವ ಮಾಡಿದರು. ಸಾಧುಗಳು ಬಂದಿದ್ದು ಯಡಿಯೂರಪ್ಪ ಅವರನ್ನು ಉಳಿಸಲು ಅಲ್ಲ. ಕೊರೊನಾ ಇದೆ, ಪ್ರವಾಹ ಇದೆ, ವಿಪರೀತ ಮಳೆಯಿಂದ ಜನ ಸಾಯುತ್ತಿದ್ದಾರೆ. ಸರ್ಕಾರದವರು ಕಿಟ್ ಕೊಡುತ್ತಿದ್ದಾರೆ. ಹಾಹಾಕಾರ ಇದೆ. ಇಂತಹ ಸಂದರ್ಭದಲ್ಲಿ ರಾಜನನ್ನು ಬದಲಿಸುವುದು ಯೋಗ್ಯವಲ್ಲ ಎಂದು ಸರ್ಕಾರಕ್ಕೆ ಸಲಹೆ ಕೊಟ್ಟರು. ಆಡಳಿತ ಪಕ್ಷದವರು ಅದನ್ನು ಧಿಕ್ಕರಿಸಿದರು. ಆ ಫಲವನ್ನು ಸದ್ಯದಲ್ಲೇ ಉಣ್ಣುತ್ತಾರೆ ಎಂದು ಕೋಡಿಶ್ರೀ ಹೇಳಿದರು.

  • ಸಿಎಂ ಯಾವುದೇ ವಿವಾದ ಸೃಷ್ಟಿಸಿಕೊಳ್ಳದೇ ರಾಜ್ಯ ಮುನ್ನಡೆಸಲಿದ್ದಾರೆ: ಕೋಡಿಮಠ ಶ್ರೀ ಭವಿಷ್ಯ

    ಸಿಎಂ ಯಾವುದೇ ವಿವಾದ ಸೃಷ್ಟಿಸಿಕೊಳ್ಳದೇ ರಾಜ್ಯ ಮುನ್ನಡೆಸಲಿದ್ದಾರೆ: ಕೋಡಿಮಠ ಶ್ರೀ ಭವಿಷ್ಯ

    ಶಿವಮೊಗ್ಗ: ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ, ಯಾವುದೇ ವಿವಾದಕ್ಕೆ ಆಸ್ಪದೇ ನೀಡದೇ ರಾಜ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುನ್ನಡೆಸಲಿದ್ದಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಸೊರಬದ ಜಡೆ ಸಂಸ್ಥಾನ ಮಠದ ಶ್ರೀ ಸಿದ್ದವೃಷಭೇಂದ್ರ ಸ್ವಾಮೀಜಿ ಅವರ ಕರ್ತೃ ಗದ್ದುಗೆಯ ದರ್ಶನ ಪಡೆದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು, ಬೊಮ್ಮಾಯಿ ಅವರು ಸರಳ, ಸಜ್ಜನಿಕೆಯ ಚಾಣಕ್ಷ್ಯ ಬುದ್ದಿಯಿಂದ ಮುಖ್ಯಮಂತ್ರಿ ಆಗಿ ಅವರ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.

    ಜಗತ್ತಿನ ಭೂಪಟದಲ್ಲಿ ಒಂದು ದೇಶ ಅಸ್ತಿತ್ವದಲ್ಲೇ ಇರುವುದಿಲ್ಲ ಎಂದು ತಾನು ಮೊದಲೇ ಭವಿಷ್ಯ ನುಡಿದಿದ್ದೆ. ಈಗ ನೋಡಿ ಅಫ್ಘಾನಿಸ್ತಾನದ ಸ್ಥಿತಿ, ತಾಲಿಬಾನಿಗಳ ಕೈಯಲ್ಲಿ ಸಿಲುಕಿ ನಲುಗುತ್ತಿದೆ ಎಂದು ತಿಳಿಸಿದರು.

    ರಾಜಾಡಳಿತದ ಕಾಲದಿಂದಲೂ ಮಠಾಧೀಶರು ಹಾಗೂ ಗುರುಗಳು ರಾಜರಿಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ. ಕೊರೊನಾ ಮತ್ತು ನೆರೆ ಪರಿಸ್ಥಿತಿಯಂತಹ ಸಂಕಷ್ಟದ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಮರ್ಥವಾಗಿ ಆಡಳಿತ ನಡೆಸಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಲ್ಲದು ಎಂದು ಮಠಾಧೀಶರು ಒಗ್ಗೂಡಿ ಅವರ ಬೆಂಬಲಕ್ಕೆ ನಿಂತಿದ್ದರು ಹೊರತು ಇದರಲ್ಲಿ ಸ್ವಾಮೀಜಿಗಳ ಯಾವುದೇ ಸ್ವಾರ್ಥ ಇರಲಿಲ್ಲ ಎಂದರು. ಇದನ್ನೂ ಓದಿ: ಮತ್ತೆ ಏರಿಕೆಯಾದ ಕೊರೊನಾ – ಇಂದು 1,217 ಹೊಸ ಪ್ರಕರಣ

    ರಾಜ್ಯದ ಆಡಳಿತ ಸಮರ್ಥವಾಗಿ ನಡೆಯಲು ಗುರುಗಳಾದವರು ಮಾರ್ಗದರ್ಶನ ನೀಡುವುದು ಕರ್ತವ್ಯ. ಆದರೆ ಇಂತಹ ಸಂದರ್ಭದಲ್ಲಿ ಸಾಧು – ಸಂತರು ಧ್ವನಿ ಎತ್ತಿದರೂ ಸಹ ಮನ್ನಣೆ ಸಿಗಲಿಲ್ಲ ಎಂಬುದು ಬೇಸರ ತರಿಸಿದೆ ಎಂದರು. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

    ಮುಂದಿನ ಐದು ವರ್ಷದವರೆಗೆ ಕೊರೋನಾ ಸೋಂಕು ಸಂಪೂರ್ಣ ನಾಶವಾಗುವುದಿಲ್ಲ. ಆದರೆ ಜನತೆ ಕೊರೊನಾ ಬಗ್ಗೆ ಭಯಪಡುವ ಅಗತ್ಯವಿಲ್ಲ. ಮಕ್ಕಳ ಬಗ್ಗೆಯೂ ಆತಂಕಪಡುವ ಅಗತ್ಯವಿಲ್ಲ. ಸ್ವಚ್ಛತೆ ಬಗ್ಗೆ ಗಮನಹರಿಸಿ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತವಾದುದು ಎಂದು ಕೋಡಿಮಠದ ಶ್ರೀಗಳು ಹೇಳಿದರು. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು