ಬೆಂಗಳೂರು: ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ವೇದಿಕೆಯಲ್ಲಿದ್ದರು.
#WATCH Black ink thrown at Bhartiya Kisan Union leader Rakesh Tikait at an event in Bengaluru, Karnataka pic.twitter.com/HCmXGU7XtT
ಈ ವೇಳೆ ಏಕಾಏಕಿ ನುಗ್ಗಿದ ಯುವಕ ಟಿಕಾಯತ್ ಮುಖಕ್ಕೆ ಮಸಿ ಬಳಿದು ಮೋದಿ ಮೋದಿ, ನಕಲಿ ಹೋರಾಟಗಾರರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾನೆ. ಏಕಾಏಕಿ ವೇದಿಕೆಗೆ ನುಗ್ಗಿದ ಯುವಕ ಟಿವಿ ಚಾನಲ್ ಮೈಕ್ ಕಿತ್ತುಕೊಂಡು ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಎರಚಿದ್ದಾನೆ. ಇದನ್ನೂ ಓದಿ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ
ಈ ಸಂದರ್ಭದಲ್ಲಿ ಅಲ್ಲಿ ಮಾರಾಮಾರಿ ನಡೆದಿದ್ದು ಅಲ್ಲಿದ್ದ ವ್ಯಕ್ತಿಗಳು ಯುವಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಕುರ್ಚಿಗಳನ್ನು ಹಿಡಿದು ತೂರಿದ ವೀಡಿಯೋ ಲಭ್ಯವಾಗಿದೆ.
ಭಾರತ್ ರಕ್ಷಣಾ ವೇದಿಕೆ ಸದಸ್ಯರು ಎನ್ನಲಾದ ಭರತ್ ಶೆಟ್ಟಿ, ದಿಲೀಪ್ ಹಾಗೂ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡರು ನೀಡುವ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ: ಕರ್ನಾಟಕದಲ್ಲಿ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ, ಜಾನುವಾರು ಹತ್ಯೆ ಕಾಯ್ದೆ, ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿಯಾಗಿದ್ದು, ಇವುಗಳನ್ನು ವಾಪಾಸ್ ಪಡೆಯಬೇಕೆಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪಟ್ಟುಹಿಡಿದಿದ್ದಾರೆ.
ಬೆಳಗಾವಿಯ ಸಾಹಿತ್ಯ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 21ರಂದು ಬಸವನಗುಡಿ ನ್ಯಾಷನಲ್‍ಕಾಲೇಜು ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ನಡೆಯಲಿದೆ. ಇದರ ಪ್ರಮುಖ ಉದ್ದೇಶ ಭಾರತ ಸರ್ಕಾರ ತಂದಂತಹ ಕೃಷಿ ಕಾಯ್ದೆಗಳನ್ನು ಶಾಸನ ಬದ್ಧವಾಗಿ ವಾಪಸ್ ಪಡೆದಾಯಿತು. ಕರ್ನಾಟಕದಲ್ಲಿ ಆ ಕಾಯ್ದೆಗಳನ್ನು ತಳಮಟ್ಟದಲ್ಲಿ ಸುಧಾರಣೆ ಮಾಡಲು ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ, ಜಾನುವಾರು ಹತ್ಯೆ ಕಾಯ್ದೆ, ಭೂಸ್ವಾಧೀನ ಕಾಯ್ದೆ ತಿದ್ದುಪಡಿಯಾಗಿದೆ. ಇದನ್ನು ವಾಪಾಸ್ ಪಡೆಯಬೇಕೆಂದು ಸಿಎಂ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ಕೃಷಿ ಕಾಯ್ದೆಯನ್ನು ಆದಷ್ಟು ಬೇಗನೆ ವಾಪಾಸ್ ಪಡೆಯದಿದ್ದರೆ ಸಮಾವೇಶದಲ್ಲಿ ರೈತರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ
ಅಧಿವೇಶನ ಸಂದರ್ಭದಲ್ಲಿ ಇಡೀ ಭಾರತದಲ್ಲಿ ವಿಶೇಷವಾಗಿ ಕರ್ನಾಟಕದಲ್ಲಿ ಕೃಷಿ ಮಾರುಕಟ್ಟೆಯ ಕಾಯ್ದೆಯ ತಿದ್ದುಪಡಿ ಅಪಾಯ ಯಾವ ರೀತಿ ಆಗುತ್ತದೆ ಎಂಬ ವಿಷಯ ಈಗಾಗಲೇ ತಿಳಿಸಲಾಗಿದೆ. ಕೃಷಿ ಮಾರುಕಟ್ಟೆಯು ಸುಮಾರು 90ರಷ್ಟು ಕಳೆದುಹೋಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಳ್ಳಲಾಗಿದೆ. ಆದರೂ ಕೂಡ ಸರ್ಕಾರದ ಚಟುವಟಿಕೆಗಳು ಇದರ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಿದ್ದು, ನಾಗರಿಕರಾದ ನಾವು ಹೇಗೆ ಸುಮ್ಮನೆ ಇರಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ 9 ಶಾಲೆಗಳಿಗೆ ಬಾಂಬ್ ಬೆದರಿಕೆ
ಹಾವೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದಿರುವ ಪಕ್ಷಗಳಿವೆ ಎಂದು ರಾಜ್ಯ ರೈತಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹಾವೇರಿಯಲ್ಲಿ ಮಾತನಾಡಿದ ಚಂದ್ರಶೇಖರ್, ಇದೇ ತಿಂಗಳು 21ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಪರ್ಯಾಯ ರಾಜಕಾರಣದ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಮಮತಾ ಬ್ಯಾನರ್ಜಿ, ದೆಹಲಿಯಿಂದ ಎಎಪಿ ಪಕ್ಷದ ಮುಖಂಡರು ಸಂಪರ್ಕ ಮಾಡಿದ್ದಾರೆ. ನಾವು ಯಾರ ಜೊತೆಗೂ ಕೈ ಜೋಡಿಸಬೇಕು ಎಂದೇನಿಲ್ಲ. ಏಪ್ರಿಲ್ 11 ರಂದು ರಾಜ್ಯ ಕೋರ ಕಮಿಟಿ ಸಭೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲವ್ ಜಿಹಾದ್ ಕೇಸ್‍ಗೆ ಟ್ವಿಸ್ಟ್ – ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ ಅಂದ ಯುವತಿ
ನಾವು ಈಗ ಸ್ವತಂತ್ರ್ಯರಾಗಿದ್ದು, ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿದ್ದೇವೆ. ಸಿದ್ಧಾಂತಕ್ಕೆ ದಕ್ಕೆ ಬಾರದಂತೆ ಭ್ರಷ್ಟಾಚಾರ ಮುಕ್ತವಾಗಿ ಚುನಾವಣೆ ಮಾಡುತ್ತೇವೆ ಹಾಗೂ ಗೆಲ್ಲುತ್ತೇವೆ ಕೂಡ. ಬೇರೆಯವರಂತೆ ಇಪ್ಪತ್ತು-ಮೂವತ್ತು ಕೋಟಿ ಹೆಂಡ ಇಟ್ಟುಕೊಂಡು ಚುನಾವಣೆ ಮಾಡುವುದಾದರೆ ನಾವು ಕಳ್ಳರೆ ಆಗಬೇಕಾಗುತ್ತದೆ. ಬೊಮ್ಮಾಯಿಯವರ ಶೇ.40 ರಷ್ಟು ಸರ್ಕಾರಕ್ಕೆ ನಾವು ಪರ್ಯಾಯ ಆಗುತ್ತೇವೆ ಎಂದು ತಿಳಿಸಿದರು.
ಮಾವು ಮಾರಾಟದಲ್ಲಿ ಹಿಂದೂ ಮುಸ್ಲಿಂ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಾವು ಉತ್ಪಾದನೆ ಮಾಡಲಾಗುತ್ತದೆ. ಅಲ್ಲಿ ಮಾರುಕಟ್ಟೆ ನಡೆಯುವುದೇ ಮುಸ್ಲಿಮರ ಕೈಯಲ್ಲಿ. ಅವರು ಬೆಲೆ ಸರಿಯಾಗಿ ಕೊಡುವುದಿಲ್ಲ ಅಥವಾ ಮುಸ್ಲಿಮರು ಎನ್ನುವುದು ಒಂದೇ ಟಾರ್ಗೆಟಾ? ಸಿಎಂ ಬೊಮ್ಮಾಯಿಯವರೇ, ಮಾವು ವಾರ್ಷಿಕ ಬೆಳೆ ಈ ಬಾರಿ ಫಸಲು ಕಡಿಮೆ ಇದೆ. ಮಾವಿಗೆ ವೈಜ್ಞಾನಿಕ ದರ ನೀಡಿ. ಮಾವಿನ ದರ ಕಡಿಮೆಯಾದರೆ ಸರ್ಕಾರದವರು ಖರೀದಿ ಮಾಡುತ್ತೀವಿ ಎಂದು ಘೋಷಣೆ ಮಾಡಿ. ಅದು ಬಿಟ್ಟು ಇಂತಹ ಕನಿಷ್ಠವಾದ ಕಾರ್ಯಕ್ರಮಗಳನ್ನು ಮಾಡಬೇಡಿ. ಸರ್ಕಾರ ಜನರ ಸಂಕಷ್ಟಕ್ಕೆ ಪರಿಹಾರ ಸೂಚಿಸಬೇಕೆ ಹೊರತು ನೀವೇ ಸಮಸ್ಯೆ ಸೃಷ್ಟಿ ಮಾಡಿ ಅಲ್ಲೋಲ ಕಲ್ಲೋಲ ಮಾಡಬೇಡಿ ಎಂದು ಗುಡುಗಿದರು. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್
ಮನುಷ್ಯ ದ್ವೇಷವನ್ನು ಹುಟ್ಟು ಹಾಕುವುದಾದರೆ ಸರ್ಕಾರವನ್ನು ನೀವೇ ಮಾಡ್ತಾ ಇದ್ದೀರಾ? ಅಥವಾ ವಿರೋಧ ಪಕ್ಷದವರು ಸರ್ಕಾರ ನಡೆಸುತ್ತಿದ್ದರಾ? ಸರ್ಕಾರದ ವಿರುದ್ಧ ಜನರನ್ನು ಸಂಘಟಿಸುವುದು ವಿರೋಧ ಪಕ್ಷದವರ ಕೆಲಸ. ಆದರೆ ಸರ್ಕಾರದವರೇ ಈ ಕೆಲಸಕ್ಕೆ ಇಳಿದುಬಿಟ್ಟಿದ್ದೀರಿ. ವೋಟ್ ಪರ್ಸಂಟೇಜ್ ಹೆಚ್ಚಾಗುತ್ತದೆ ಎಂದೋ? ಇದರಿಂದ ವೋಟ್ ಪರ್ಸಂಟೇಜ್ ಜಾಸ್ತಿ ಆಗುವುದಿಲ್ಲ. ನಿಮ್ಮ ಬಳಿ ಇಂತಹ ಅಜೆಂಡಾಗಳು ಬಹಳ ಇವೆ ಎಂದು ಕೇಳಿದ್ದೇನೆ. ಚುನಾವಣೆ ಬರುವವರೆಗೂ ಇದನ್ನು ಟ್ರಯಲ್ ಮಾಡುತ್ತಾ ಇರುತ್ತೀರಿ ಎಂದು ಕೇಳಿದ್ದೇನೆ ಎಂದು ಟೀಕಿಸಿದರು.
ನಿಮ್ಮ ಪಕ್ಷದ ಮಾನ ಮರ್ಯಾದೆ ಕಡಿಮೆ ಮಾಡಿಕೊಳ್ಳುವುದಕ್ಕೆ ಇಂತಹ ಕಾರ್ಯಕ್ರಮಗಳನ್ನು ಮುಂದುವರೆಸಿ. ಜನರು ಒಂದು-ಎರಡು ಸುಳ್ಳುಗಳನ್ನು ನಂಬುತ್ತಾರೆ. ಸುಳ್ಳು ಹೇಳುವುದೇ ನಿಮ್ಮ ಜಾಯಮಾನ ಆಗಿಬಿಟ್ರೆ ನಿಮ್ಮನ್ನು ಡಸ್ಟ್ ಬಿನ್‌ಗೆ ಎಸೆದುಬಿಡುತ್ತಾರೆ. ಇದರ ಬಗ್ಗೆ ಬಿಜೆಪಿಯವರಿಗೆ ಎಚ್ಚರಿಕೆ ಇರಲಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.
ಬೀದರ್: ಪಂಚರಾಜ್ಯಗಳಲ್ಲಿ ಬಂದಿರುವ ಫಲಿತಾಂಶವನ್ನು ನಾವು ಗೌರವಿಸುತ್ತೇವೆ. ಆದರೆ ಕೇಂದ್ರ ಸರ್ಕಾರ ಮಾಡಿದ ತಪ್ಪಿಗೆ ಪಂಜಾಬ್ ರೈತರು ತಿರುಗೇಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಟಾಂಗ್ ನೀಡಿದರು.
ಬೀದರ್‍ನ ಗಾಂಧಿಗಂಜ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಯಾಗಿದೆ. ಆದರೂ ಬಿದ್ದೋರಿಗೆ ಮೂಗು ಮಣ್ಣಾಗಿಲ್ಲಾ ಅನ್ನೋದೆ ಉದಾಹರಣೆಯಾಗಬಾರದು ಎಂದು ವ್ಯಂಗ್ಯವಾಡಿದರು.
ಪಂಜಾಬ್ ಅನ್ನು ನಾವು ಮಾಡೆಲ್ ಆಗಿ ತೆಗೆದುಕೊಳ್ಳಲ್ಲಾ, 2023ಕ್ಕೆ ಕರ್ನಾಟಕವೇ ಒಂದು ಮಾಡೆಲ್ ಆಗುತ್ತದೆ. ಕರ್ನಾಟಕದ ಜನ ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಇರತ್ತಾರೆ ಅಂದರೆ ಅದು ತಪ್ಪು. ಯಾಕೆಂದರೆ ಪಂಜಾಬ್ ಜನ ಒಂದು ಫಲಿತಾಂಶ ಕೊಟ್ಟಿದ್ದಾರೆ. ಅದಕ್ಕಿಂತಲೂ ಒಳ್ಳೆಯ ಫಲಿತಾಂಶ ಕೊಡಲು ಕರ್ನಾಟಕದ ರೈತರು ತೀರ್ಮಾನ ಮಾಡಿದ್ದೇವೆ ಎಂದರು. ಇದನ್ನೂ ಓದಿ:ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆ: ಜಗದೀಶ್ ಶೆಟ್ಟರ್
ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಿರಿ, ಇಲ್ಲದಿದ್ದರೆ ನಮ್ಮಗೂ ರಾಜಕೀಯ ಮಾಡೋಕೆ ಬರುತ್ತದೆ. ನಾವು ನಿಮಗೆ ರಾಜಕೀಯ ತೋರಿಸುತ್ತೇವೆ. ಭೂಸ್ವಾಧೀನ ಕಾಯ್ದೆ ಸೇರಿದಂತೆ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ 28ರಂದು ಬೆಂಗಳೂರಿನಲ್ಲಿ ಬೃಹತ್ ರೈತರ ಸಮಾವೇಶ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:ಗೋವಾದಲ್ಲಿ ಅತಂತ್ರ ಫಲಿತಾಂಶ – ಕುದುರೆ ವ್ಯಾಪಾರಕ್ಕೆ ವೇದಿಕೆ ಸಜ್ಜು
ಕೋಲಾರ: ಮೇಕೆದಾಟು ವಿಚಾರದಲ್ಲಿ ಎರಡು ಪಕ್ಷಗಳು ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್‍ಗೆ ನೈತಿಕತೆ ಇದ್ದಿದ್ದರೆ ಅವರ ಸರ್ಕಾರ ಇದ್ದಾಗ ಮಾಡಬಹುದಿತ್ತು. ಇಚ್ಚಾ ಶಕ್ತಿ ಇಲ್ಲದೇ ಮಾಡುವ ಕೆಲಸ ಇದಾಗಿದೆ.
ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಸದ್ಯ ರಾಜಕೀಯ ನಡೆಯುತ್ತಿದೆ. ಎರಡು ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆ ಅದೊಂದು ರಾಜಕೀಯ ಕಾರ್ಯಕ್ರಮ. ಅವರಿಗೆ ನೈತಿಕತೆ ಇದ್ದಿದ್ದರೆ ಅವರದೇ ಸರ್ಕಾರ ಇದ್ದಾಗ ಮಾಡಬಹುದಿತ್ತು. ಇಚ್ಚಾ ಶಕ್ತಿ ಇಲ್ಲದೇ ಮಾಡುವ ಕೆಲಸ ಇದಾಗಿದೆ. ಸಿದ್ದರಾಮಯ್ಯ ಆಗಲಿ ಡಿಕೆಶಿ ಆಗಲಿ ಪಾದಯಾತ್ರೆ ಮಾಡಲಿ ಕೋವಿಡ್ ನೀತಿ ನಿಯಮಗಳನ್ನು ಪಾಲನೆ ಮಾಡಬೇಕು. ಮೇಕೆದಾಟು ಪಾದಯಾತ್ರೆಗೆ ನನ್ನನ್ನು ಆಹ್ವಾನ ಮಾಡಿದ್ದರು. ಆದರೆ ಅದೊಂದು ರಾಜಕೀಯ ಪಕ್ಷದ ಅಜೆಂಡಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ
ನಿನ್ನೆ ಪಂಜಾಬ್‍ನಲ್ಲಿ ಪ್ರಧಾನಿ ಮೋದಿ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ. ಆದರೆ ಬಿಜೆಪಿ ಅವರು ಒಂದು ರಾಜ್ಯದ ಮೇಲೆ ಗುರುತರವಾದ ಆರೋಪ ಮಾಡಲಾಗುತ್ತಿದೆ. ಅವರನ್ನು ಖಾಲಿ ಸ್ಥಾನಿಗಳು, ಉಗ್ರ ಗಾಮಿಗಳ ಬೆಂಬಲ ಇದೆ ಎನ್ನುವುದು ಸರಿಯಲ್ಲ. ನಾವ್ಯಾರು ಮಾಡದ ತಪ್ಪನ್ನು ನಮ್ಮ ಮೇಲೆ ಹೊರೆಸಿದ್ದಾರೆ. ದೆಹಲಿಯಲ್ಲಿ ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜ ಕಿತ್ತಾಕಿ ನಿಂದನೆ ಹೊರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಪದೇ, ಪದೇ ಬಿಜೆಪಿ ಅವರು ಆರೋಪ ಮಾಡುತ್ತಲೇ ಇದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ
ಪ್ರಧಾನಿ ಮೋದಿ ಅವರು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದಿರುವುದು ಸಂತೋಷ. ಆದರೆ ರಾಜ್ಯ ಸರ್ಕಾರ ಅದನ್ನು ವಾಪಸ್ ಪಡೆದಿಲ್ಲ. ಮುಖ್ಯಮಂತ್ರಿಗಳು ಅಧಿವೇಶನ ಮಾಡಿ ಚರ್ಚೆ ಮಾಡಿ ವಾಪಸ್ ಪಡೆಯುತ್ತೇವೆ. ವಿಧಾನ ಸಭೆ, ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡದೇ ದೇಶದ ಉದ್ದಗಲಕ್ಕೂ ಇರುವ ರೈತರ ಮೇಲೆ ಕಾನೂನು ರೂಪಿಸಲು ಮುಂದಾಗಿದ್ದರು. 1961ರಿಂದಲೂ ಇರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳನ್ನು ಜಾರಿ ಮಾಡಿ ಕೃಷಿಯನ್ನು ಅತಂತ್ರ ಪರಿಸ್ಥಿತಿಗೆ ತಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ. ಈಗಾಗಲೇ ಸರ್ಕಾರ ಕೋವಿಡ್ ಹೊಸ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ರೈತರಿಗೆ ವಿನಾಯಿತಿ ನೀಡಬೇಕು. ಹಣ್ಣು, ತರಕಾರಿ, ಹೂ ಸರಬರಾಜು ಮಾಡುವ ರೈತರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರೈತರ ಬೆಳೆಗಳಿಗೆ ಮುಕ್ತವಾಗಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಿ. ಈ ಹಿಂದೆ ಯಡಿಯೂರಪ್ಪ ಅವರಿಗೂ ಮನವಿ ಮಾಡಿದ್ವಿ. ಅದರಂತೆ ಸದ್ಯದ ಸರ್ಕಾರಕ್ಕೂ ರೈತರಿಗೆ ವಿಶೇಷ ವಿನಾಯಿತಿ ನೀಡುವಂತೆ ಮನವಿ ಮಾಡುತ್ತೇವೆ. ರೈತರಿಗೆ ಹಾಲಿನ ಬೆಲೆ ಕಡಿಮೆ ನೀಡಲಾಗುತ್ತಿದೆ. ಸಬ್ಸಿಡಿ ಕೊಡುವುದನ್ನು ಬಿಟ್ಟು ಮಾನದಂಡದ ಆಧಾರದ ಮೇಲೆ ಬೆಲೆ ನಿಗದಿ ಮಾಡಿ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕಡಿಮೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ರೈತ ಸಂಬಂಧಿಸಿದ ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿರುವುದಾಗಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಳಗಾವಿ ಅಧಿವೆಶನದ ವೇಳೆ ಕೃಷಿ ಕಾಯ್ದೆ ಹಿಂಪಡೆಯುವಂತೆ ರಾಜ್ಯದ ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದ್ದರು. ಸದ್ಯ ಈ ಸಂಬಂಧಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಮುಖ್ಯಮಂತ್ರಿ ಅವರು ರೈತರ ಜೊತೆ ಚರ್ಚೆ ಮಾಡಿದ್ದಾರೆ. ಬೆಳಗಾವಿ ಅಧಿವೇಶನ ಅವಧಿ ಕಡಿಮೆ ಸಮಯ ಇದೆ. ಇನ್ನು 20-25 ದಿನದಲ್ಲಿ ಮತ್ತೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸುತ್ತೇವೆ. ಆ ಸಂದರ್ಭದಲ್ಲಿ ರೈತ ಸಂಬಂಧಿಸಿದ ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆದಿದೆ. ಹೀಗಾಗಿ ನಾವು ಕೂಡಾ ವಾಪಸ್ ಪಡೆಯುತ್ತೇವೆ ಎಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸುವರ್ಣಸೌಧ ಮುತ್ತಿಗೆ ಯತ್ನ ವಿಫಲ – ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರು ಪೊಲೀಸರ ವಶಕ್ಕೆ
ದೆಹಲಿಯ ಹೋರಾಟಕ್ಕೂ ಮೀರಿದ ಹೋರಾಟ ನಡೆಸಲು ರಾಜ್ಯದ ರೈತರು ಸಿದ್ದರಿದ್ದಾರೆ. ಸರ್ಕಾರದ ನಡೆಯನ್ನು ನೋಡಿ ತೀರ್ಮಾನ ಕೈಗೊಳ್ಳುತ್ತೇವೆ. ಬೆಳೆಹಾನಿ ಪರಿಹಾರ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇವೆ. ಆದರೆ ಮುಖ್ಯಮಂತ್ರಿ ಅವರು ಖುರ್ಚಿಯ ಸುತ್ತಾ ಬ್ಯುಸಿ ಆಗಿದ್ದಾರೆ. ಪ್ರಾಕೃತಿಕವಾಗಿ ಬಹಳ ದೊಡ್ಡ ನಷ್ಟ ಆಗಿದೆ. ಸರ್ಕಾರ ಘೋಷಣೆ ಮಾಡಿದ ಪರಿಹಾರ ಇನ್ನೂ ತಲುಪಿಲ್ಲ. ಸರ್ಕಾರಕ್ಕೆ ಇಚ್ಚಾಶಕ್ತಿ ಇಲ್ಲದ ಕಾರಣ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ರೈತರಿಗೆ ಓಬಿರಾಯನ ಕಾಲದ ಪರಿಹಾರ ನೀಡುತ್ತಿದ್ದಾರೆ. ಎಂಎಲ್‍ಎ ವೇತನ, ಎಂಪಿ ವೇತನ, ಅಧಿಕಾರಿಗಳ ವೇತನ ಎಷ್ಟು ಬಾರಿ ಹೆಚ್ಚಳ ಆಯಿತು. ರೈತರಿಗೆ ಪರಿಹಾರ ಕೊಡಲು ಚೌಕಾಸಿ ಮಾಡುತ್ತಿದ್ದಾರೆ. ಓಬಿರಾಯನ ಕಾಲದ ಪರಿಹಾರ ನಿಲ್ಲಿಸಿ, ಬದಲಾವಣೆ ಮಾಡಿ. ವೈಜ್ಞಾನಿಕವಾದ ರೀತಿಯಲ್ಲಿ ಪರಿಹಾರ ಕೊಡಿ ಎಂದು ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಎಂಇಎಸ್ ಪುಂಡಾಟಿಕೆಯನ್ನು ಇಡೀ ರಾಜ್ಯದ ತುಂಬಾ ಚರ್ಚೆ ಮಾಡಬೇಕಿತ್ತಾ. ಯಾರೂ ಪುಂಡರು ಇದ್ದಾರೆ ಅವರನ್ನು ಒದ್ದು ಒಳಗೆ ಹಾಕಬೇಕು. ರೌಡಿಶೀಟ್ ಓಪನ್ ಮಾಡಬೇಕು, ಗಡಿಪಾರು ಮಾಡಬೇಕು. ಅದೇ ದೊಡ್ಡ ಸುದ್ದಿ ಏನು. ಕನ್ನಡ ಬಾವುಟ ಸುಟ್ಟು ಹಾಕುವುದಿರಲಿ, ಮಹಾತ್ಮರ ಪುತ್ಥಳಿ ಧ್ವಂಸ ಮಾಡಿದರೇ ನೋಡಿಕೊಂಡು ಸುಮ್ಮನಿರಬೇಕಾ. ಯಾರೇ ಇದ್ದರೂ ಅಂತಹವರ ವಿರುದ್ಧ ಕ್ರಮ ಕೈಗೊಂಡು, ರಾಜ್ಯದಿಂದ ಕುತ್ತಿಗೆ ಹಿಡಿದು ಹೊರಗೆ ತಳ್ಳಿ. ಗಡಿ ಭಾಗದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಓಟ್ ಇದ್ದಾವೆ. ಕೆಲವರು ಮಾತನಾಡುತ್ತಾರೆ, ಇನ್ನೂ ಕೆಲವರು ಹಾಗೆ ಸುಮ್ಮನಿರುತ್ತಾರೆ. ರಾಜಕೀಯ ಲಾಭದ ನಿರೀಕ್ಷೆ ಇಟ್ಟುಕೊಂಡು ಮಾತನಾಡುತ್ತಾರೆ. ರಾಜ್ಯದ ಹಿತಾಸಕ್ತಿ ಬಂದಾಗ, ನಮ್ಮ ಎಲ್ಲಾ ಧ್ವನಿ, ತೀರ್ಮಾನ ಒಂದೇ ಆಗಿರಬೇಕು. ಎಂಇಎಸ್ ಕೈವಾಡ ಇದೆ, ಇಲ್ಲ ಎಂಬ ಪ್ರಶ್ನೆಯೇ ಬೇಡ. ಯಾರು ಕಿಡಿಗೇಡಿಗಳು ಇದ್ದಾರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ
ಬೆಳಗಾವಿ: ಕೇಂದ್ರದಂತೆ ರಾಜ್ಯ ಸರ್ಕಾರವೂ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಅಧ್ಯಕ್ಷ ಕೂಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವನೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ನಿರ್ಧರಿಸಿದ್ದರು. ಪಾದಯಾತ್ರೆಗೂ ಮುನ್ನ ಹಿರೇಬಾಗೇವಾಡಿಯ ಬಸವೇಶ್ವರ ಪುತ್ಥಳಿಗೆ ಕೋಡಿಹಳ್ಳಿ ಚಂದ್ರಶೇಖರ ಮಾಲಾರ್ಪಣೆಗೆ ಮುಂದಾದರು. ಆಗ ರೈತರನ್ನು ವಶಕ್ಕೆ ಪಡೆದ ಪೊಲೀಸರು ಒತ್ತಾಯಪೂರ್ವಕವಾಗಿ ಬಸ್ಸಿನಲ್ಲಿ ಹತ್ತಿಸಿದರು. ಬಳಿಕ ಸುವರ್ಣಸೌಧ ಎದುರಿನ ಕೊಂಡುಸಕೊಪ್ಪ ಪ್ರತಿಭಟನಾ ಸ್ಥಳಕ್ಕೆ ಕರೆತರಲಾಯಿತು. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದವೂ ನಡೆಯಿತು. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ:
ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ರೈತರ ವಿರೋಧಿ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ರೈತ ಹೋರಾಟಗಾರ್ತಿ ಮಂಜುಳಾ ಅಸಮಾಧಾನ ವ್ಯಕ್ತಪಡಿಸಿದರು. ಕೊಂಡುಸಕೊಪ್ಪದ ಪ್ರತಿಭಟನಾ ಸ್ಥಳದಲ್ಲಿ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರೆದಿದೆ. ಹೋರಾಟದ ರೂಪರೇಷೆಗಳ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!
ಬೆಳಗಾವಿ: ನಾಳೆ ನಡೆಯುವ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಸುವರ್ಣ ಸೌಧ ಮುತ್ತಿಗೆ ಹಾಕಲಾಗುತ್ತದೆ. ಕೃಷಿ ಕಾಯ್ದೆ ವಾಪಸ್ ಪಡೆಯುವವರೆಗೆ ನಿರಂತರ ಹೋರಾಟ ಮಾಡುತ್ತೇವೆ. ಸುಮ್ಮನೆ ಕೈ ಕಟ್ಟಿ ಕುಳಿತು ಕೊಳ್ಳುವ ಮಾತೇ ಇಲ್ಲ. ಅರೆಸ್ಟ್ ಮಾಡಿದರೂ ಹೆದರಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ವಿರೋಧಿ ಕೃಷಿ ಕಾಯ್ದೆ ಕೇಂದ್ರ ಸರ್ಕಾರವೇ ಹಿಂಪಡೆದಿದೆ. ರಾಜ್ಯ ಸರ್ಕಾರವೂ ಕೂಡಾ ವಾಪಸ್ ಪಡೆಯಬೇಕು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಕಾಯ್ದೆಯನ್ನ ಜಾರಿಗೊಳಿಸಿದ್ದಾರೆ. ಭಾರತ ಸರ್ಕಾರ ರೈತರ ಒಂದು ವರ್ಷ ಹೋರಾಟ ನೋಡಿ ಕೃಷಿ ಕಾಯ್ದೆ ವಾಪಸ್ ಪಡೆದಿದ್ದಾರೆ. ರಾಜ್ಯ ಸರ್ಕಾರವೂ ಕೂಡ ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯುತ್ತಾರೆ ಅಂತಾ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಈ ಅಧಿವೇಶನದಲ್ಲಿ ಈ ವಿಷಯ ಮಂಡನೆ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೇವೆ. ಆದರೆ ಸರ್ಕಾರದ ನಡುವಳಿಕೆ ಬದಲಾಗಿ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು
ಕೇಂದ್ರ ಸರ್ಕಾರ ವಾಪಸ್ ಪಡೆದರೆ ರಾಜ್ಯ ಸರ್ಕಾರ ವಾಪಸ್ ಪಡೆಬೇಕು ಅಂತ ಕಾನೂನು ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಸಚಿವ ಮಾಧುಸ್ವಾಮಿ ರೈತರಿಗೆ ಕಾನೂನು ಪಾಠ ಹೇಳುತ್ತಿದ್ದಾರೆ. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ, ಬಿಜೆಪಿ ಕಾರ್ಯಕ್ರಮ ಎಲ್ಲಿ ಇರುತ್ತದೆ ಅಲ್ಲಲ್ಲಿ ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ಮಾಡುತ್ತೇವೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ದಿಲ್ಲಿ ಮಾದರಿಯ ರೈತ ಹೋರಾಟ ಮಾಡುತ್ತೇವೆ. ಮಹಾಪಂಚಾಯತ ಸಭಾ ಕಾರ್ಯಕ್ರಮ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇದರ ಪರಿಣಾಮ ಎದುರಿಸಲು ತಯಾರಾಗಬೇಕು. ಎಂದು ಈ ಮುಲಕ ಸಂದೇಶ ನೀಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ‘ಬೀಸ್ಟ್’ ಸಿನಿಮಾ ವಿಶೇಷ ಫೋಟೋ ಶೇರ್ ಮಾಡಿದ ಚಿತ್ರತಂಡ
ಕರ್ನಾಟಕದಲ್ಲೂ ರೈತ ನಾಯಕರು ಬಂದ್‍ಗೆ ಬೆಂಬಲ ಸೂಚಿಸಿದ್ದು, ಸೋಮವಾರ ಸಂಪೂರ್ಣ ಬಂದ್ ಮಾಡಲು ಸಜ್ಜಾಗಿದ್ದಾರೆ. ಆದರೇ ರಾಜ್ಯದಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ಬಂದ್‍ಗೆ ನೈತಿಕ ಬೆಂಬಲವನ್ನು ಸೂಚಿಸಿದ್ದಾರೆ. ನೈತಿಕ ಬೆಂಬಲದಿಂದ ಬಂದ್ ಯಶಸ್ವಿಯಾಗುವುದಿಲ್ಲ ಅಂತ ಮನಗಂಡ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನ ನಾನಾ ಕಡೆ ಭೇಟಿ ನೀಡಿ ಬಂದ್‍ಗೆ ಬೆಂಬಲ ನೀಡಿ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: 90 ವರ್ಷದ ಅಜ್ಜಿ ಕಾರ್ ಡ್ರೈವಿಂಗ್ -ಪ್ರಯತ್ನ ಶ್ಲಾಘಿಸಿದ ಸಿಎಂ
ಬೆಳ್ಳಂಬೆಳಗ್ಗೆಯೇ ಕೆಆರ್ ಪುರಂನ ಮಾರುಕಟ್ಟೆಗೆ ಭೇಟಿ ನೀಡಿದ ಕೋಡಿ ಹಳ್ಳಿ ಚಂದ್ರಶೇಖರ್ ಅವರು, ಅಲ್ಲಿನ ವ್ಯಾಪರಿಗಳೊಂದಿಗೆ ಸಭೆ ಮಾಡಿ ಬಂದ್ ಮಾಡುತ್ತಿರುವ ಉದ್ದೇಶವೇನು ಎಂಬುವುದರ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ನೈತಿಕ ಬೆಂಬಲ ಆಗುವುದಿಲ್ಲ. ನೈತಿಕತೆಯ ಬೆಂಬಲ ಬೇಕು. ಎಲ್ಲರೂ ಸೋಮವಾರ ಬಂದ್‍ಗೆ ಸಹಕಾರ ನೀಡಬೇಕು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ನಾಳೆಯಿಂದ ಬಸ್ ಸಂಚಾರ ಆರಂಭವಾಗ್ತಿದೆ. ರಾಜ್ಯದ ನಾಲ್ಕು ನಿಗಮಗಳಾದ ಕೆಎಸ್‍ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆಯ ಬಸ್ ಗಳು ಕಾರ್ಯಾಚರಣೆಗೊಳ್ಳುತ್ತಿವೆ. ಬಸ್ ಸಂಚಾರ ಆರಂಭವಾಯ್ತು ಅಂತಾ ರಿಲಾಕ್ಸ್ ಆಗುವ ಸಮಯದಲ್ಲಿ ಸಾರಿಗೆ ನೌಕರರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಮತ್ತೆ ಮತ್ತೇ ಸಾರಿಗೆ ಪ್ರೋಟೆಸ್ಟ್ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್, ಜುಲೈ 1ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ರೆ ಜುಲೈ 1 ರಿಂದ ಮತ್ತೆ ಸಾರಿಗೆ ಮುಷ್ಕರ ಆರಂಭಿಸುವುದಾಗಿ ಗುಡುಗಿದ್ದಾರೆ.
ಕಳೆದ ಬಾರಿ ಏಪ್ರಿಲ್ 7 ರಿಂದ 22 ರವರೆಗೆ 15 ದಿನ ಸಾರಿಗೆ ಪ್ರೊಟೆಸ್ಟ್ ನಡೆದಿತ್ತು. ನಂತರ ಹೈಕೋರ್ಟ್ ಮಧ್ಯೆ ಪ್ರವೇಶದಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದೀಗ ಮತ್ತೆ ಪ್ರತಿಭಟನೆಯ ಕೂಗು ಕೇಳಿಬಂದಿದೆ. ಸರ್ಕಾರ ಕೊಟ್ಟ ಮಾತಿನಂತೆ ಆರನೇ ವೇತನ ಆಯೋಗ ಜಾರಿಗೆ ತರಬೇಕು. ಇಲ್ಲದಿದ್ದರೇ ಈ ಬಾರಿ ಸಾರಿಗೆ ನೌಕರರು ಅಷ್ಟೇ ಅಲ್ಲದೇ ಹೆಂಡತಿ, ಮಕ್ಕಳ ಜೊತೆಗೂಡಿ ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಇದನ್ನೂ ಓದಿ:ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ – ಕುಮಾರಸ್ವಾಮಿ ಆಕ್ರೋಶ
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವ ಜನ ಅರೆಕೂಲಿಯಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಸರಿಯಾದ ನ್ಯಾಯಯುತ ವೇತನ ನೀಡಿ. ಸರ್ಕಾರ ಆರನೇ ವೇತನ ಆಯೋಗವನ್ನು ಜಾರಿ ಮಾಡುತ್ತೇವೆ ಎಂದಿತ್ತು. ಕಳೆದ ಬಾರಿ 15 ದಿನ ಪ್ರತಿಭಟನೆ ನಡೆಸಿದ್ದೇವೆ. ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈಗಾಗಲೇ ಸಾರಿಗೆ ನೌಕರರನ್ನು ಅಮಾನತು, ವರ್ಗಾವಣೆ ಮಾಡಿದ್ದಾರೆ. ಎರಡು ತಿಂಗಳ ಸಂಬಳ ಕೊಡಬೇಕು. ಸಾವಿರ ರೂಪಾಯಿ ಸಂಬಳ ಕೊಡೋ ಕೆಲಸ ಮಾಡ್ತಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯ ತರುತ್ತಿದ್ದೇವೆ. ಸಾರಿಗೆ ನೌಕರರ ಕುಟುಂಬದವರೊಂದಿಗೆ ಪ್ರತಿಭಟನೆ ಮಾಡ್ತೇವೆ. ಹೆಂಡತಿ, ಮಕ್ಕಳನೊಂದಿಗೆ ಸಾರಿಗೆ ನೌಕರರು ಪ್ರತಿಭಟಿಸುತ್ತಾರೆ. ಜೊತೆಗೆ ಸರ್ಕಾರ ವಿಶೇಷವಾದ ಪ್ಯಾಕೇಜ್ ಕೊಟ್ಟು ಸಾರಿಗೆ ಇಲಾಖೆಯನ್ನು ಉಳಿಸುವ ಕೆಲಸ ಮಾಡಬೇಕು. ಜುಲೈ ಒಂದನೇ ತಾರೀಖಿನ ಒಳಗೆ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ