Tag: ಕೋಮಲ್ ಕುಮಾರ್

  • ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ (Komal Kumar) ನಾಯಕರಾಗಿ ನಟಿಸಿರುವ “ಯಲಾಕುನ್ನಿ” (Yelakunni) ಚಿತ್ರದ ಟೀಸರ್ ಬಿಡುಡಗೆ ಆಗಿದೆ.

    ಗಿಚ್ಚಿ ಗಿಲಿಗಿಲಿ ಫೈನಲ್ ಕಾರ್ಯಕ್ರಮದಲ್ಲಿ ಚಿತ್ರತಂಡ ಟೀಸರ್ ರಿಲೀಸ್ ಮಾಡಿದೆ. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     

    ಚಿತ್ರ ತೆರೆಗೆ ತರೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ  ಯಲಾಕುನ್ನಿ ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

  • ‘ಕುಟೀರ’ ಚಿತ್ರೀಕರಣದಲ್ಲಿ ಪಾಲ್ಗೊಂಡ ನಟ ಕೋಮಲ್

    ‘ಕುಟೀರ’ ಚಿತ್ರೀಕರಣದಲ್ಲಿ ಪಾಲ್ಗೊಂಡ ನಟ ಕೋಮಲ್

    ಧು ಮರಿಸ್ವಾಮಿ ನಿರ್ಮಿಸುತ್ತಿರುವ, ಅನೂಪ್ ಅಂಟೋನಿ (Anoop Antony) ನಿರ್ದೇಶನದ ಕುಟೀರ (Kuteera) ಸಿನಿಮಾದ ಚಿತ್ರೀಕರಣ (Shooting) ಆರಂಭವಾಗಿದ್ದು, ನಟ ಕೋಮಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆ ವಿಡಿಯೋವನ್ನು ನಿರ್ದೇಶಕ ಅನೂಪ್ ಅಂಟೋನಿ ಶೇರ್ ಮಾಡಿದ್ದಾರೆ.

    ಕೋಮಲ್ ಕುಮಾರ್ (Komal) ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರವಿದು. ಇತ್ತೀಚಿಗೆ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು. ನಂತರ “ಕುಟೀರ”ದ ಬಗ್ಗೆ ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದರು.

    ನಾನು ಈವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನಾಯಕನಾಗಿ ನಟಿಸುತ್ತಿರುವ 25 ನೇ ಚಿತ್ರವಿದು ಎಂದು ಮಾತನಾಡಿದ ನಾಯಕ ಕೋಮಲ್ ಕುಮಾರ್, ಇದು ನಾನು ಬಹಳ ಇಷ್ಟಪಡುವ ಹಾರಾರ್ ಕಾಮಿಡಿ ಫ್ಯಾಂಟಸಿ ಜಾನರ್ ನ ಚಿತ್ರ. ಈ ಹಿಂದೆ ನಾನು ಕೆಲವು ಹಾರಾರ್ ಕಾಮಿಡಿ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದ ಕಥೆ ಸ್ವಲ್ಪ ವಿಭಿನ್ನ. ಚಿತ್ರದ ಹೆಸರೆ ಹೇಳುವಂತೆ ಕುಟೀರ ಎಂದರೆ ಮನೆ. ಈ ಚಿತ್ರದಲ್ಲೂ ಒಂದು ದೊಡ್ಡ ಮನೆ ಇರುತ್ತದೆ. ಅಲ್ಲಿಗೆ ಬಂದು ಸಿಕ್ಕಿ ಹಾಕಿಕೊಳ್ಳುವ ನನಗೆ ದೆವ್ವಗಳು ಏನು ಮಾಡುತ್ತದೆ? ಎಂಬುದನ್ನು ನಿರ್ದೇಶಕರು ಕಾಮಿಡಿ ಮೂಲಕ ತೋರಿಸಲಿದ್ದಾರೆ. ಈ ಚಿತ್ರದಲ್ಲಿ ಸಿಜಿ ವರ್ಕ್ ಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಮಧು ಮರಿಸ್ವಾಮಿ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಆಂಟೋನಿ ನಿರ್ದೇಶಿಸುತ್ತಿದ್ದಾರೆ. ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ನುರಿತ ತಂತ್ರಜ್ಞರು ಹಾಗೂ ಅನುಭವಿ ಕಲಾವಿದರ ತಾರಾಬಳಗ “ಕುಟೀರ” ಚಿತ್ರದಲ್ಲಿದೆ. ನನ್ನ ಮೂವತ್ತು ವರ್ಷಗಳ ಸಿನಿಜರ್ನಿಯಲ್ಲಿ ನೀವು ನೀಡುತ್ತಾ ಬಂದಿರುವ ಪ್ರೋತ್ಸಾಹ ಹಾಗೆ ಮುಂದುವರೆಯಲಿ ಎಂದರು.

    ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗೇಶ್ ಅವರಿಗೆ ಧನ್ಯವಾದ. ಈ ಕಥೆ ಬರೆದಾಗಲೇ ಕೋಮಲ್ ಅವರೆ ನಾಯಕ ಅಂದುಕೊಂಡಿದ್ದೆ. ನಿರ್ಮಾಪಕರ ಬಳಿಯೂ ಹೇಳಿದ್ದೆ‌. ಕೋಮಲ್ ಅವರು ಕಥೆ ಕೇಳಿ ಇಷ್ಟಪಟ್ಟರು. ಮಾರ್ಚ್ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. “ಗಣಪ” ಚಿತ್ರದ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ಬಿ.ಜಿ.ಭರತ್ ಸಂಗೀತ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆಯುತ್ತಿದ್ದಾರೆ ಎಂದು ನಿರ್ದೇಶಕ ಅನೂಪ್ ಆಂಟೋನಿ ತಿಳಿಸಿದರು.

     

    ಈ ಚಿತ್ರ ಆರಂಭವಾಗಲೂ ಪ್ರಮುಖ ಕಾರಣರಾದ ಸಾಜಿದ್ ಖುರೇಶಿ ಅವರಿಗೆ ಹಾಗೂ ನನ್ನ ಮಾವ ಯೋಗೇಶ್ ಅವರಿಗೆ ವಿಶೇಷ ಧನ್ಯವಾದ. ಕೋಮಲ್ ಸರ್ ನಾಯಕರಾಗಿ ನಟಿಸುತ್ತಿರುವುದು ಖುಷಿಯಾಗಿದೆ. ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ಮಧು ಮರಿಸ್ವಾಮಿ. ನನ್ನದು ಈ ಚಿತ್ರದಲ್ಲಿ ಆಂಗ್ಲೋ ಇಂಡಿಯನ್ ಪಾತ್ರ ಎಂದು ನಾಯಕಿ ಪ್ರಿಯಾಂಕ ತಿಮ್ಮೇಶ್ ತಿಳಿಸಿದರು. ಯೋಗೇಶ್,  ಸಂಗೀತ ನಿರ್ದೇಶಕ ಭರತ್ ಬಿ.ಜೆ, ಛಾಯಾಗ್ರಾಹಕ ಅರುಣ್ ಸುರೇಶ್,  ಸಂಭಾಷಣೆಕಾರ ಶಂಕರ್ ರಾಮನ್  ಹಾಗೂ ಕಲಾವಿದರಾದ ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

  • ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ (Komal Kumar) ಅಭಿನಯದ ನೂತನ ಚಿತ್ರ “ಯಲಾ ಕುನ್ನಿ” (Yelakunni) ಮೇರಾ ನಾಮ್ ವಜ್ರಮುನಿ  (Vajramuni) ಎಂಬ ಅಡಿಬರಹ ಇರುವ ಶೀರ್ಷಿಕೆ ಇತ್ತೀಚೆಗೆ ಅನಾವರಣವಾಯಿತು. ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ  ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಈ ಚಿತ್ರವನ್ನು ಎನ್. ಆರ್ ಪ್ರದೀಪ (Pradeep) ನಿರ್ದೇಶಿಸುತ್ತಿದ್ದಾರೆ.

    ಓಂಪ್ರಕಾಶ್ ರಾವ್, ಮುಸ್ಸಂಜೆ ಮಹೇಶ್ ಗರಡಿಯಲ್ಲಿ ಪಳಗಿರುವ ಪ್ರದೀಪ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು ಶ್ರೀರಂಗಪಟ್ಟಣ ಹಾಗೂ ಮೈಸೂರು ಸುತ್ತಮುತ್ತಲಿನಲ್ಲಿ ಹಳ್ಳಿ ಮತ್ತು ದೇವಸ್ಥಾನದ ಸೆಟ್ ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುವುದಂತೆ.‌ ಇದನ್ನೂ ಓದಿ: ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಕನ್ನಡದ ಖ್ಯಾತ ನಟ ವಜ್ರಮುನಿ ತಮ್ಮ ಚಿತ್ರಗಳಲ್ಲಿ ಹೆಚ್ಚು ಬಯ್ಯಲು ಬಳಸುತ್ತಿದ್ಡ ಸಂಭಾಷಣೆ “ಯಲಾ ಕುನ್ನಿ”. ಈ ಪದವನ್ನೆ ಚಿತ್ರದ ಶೀರ್ಷಿಕೆಯಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ.  ಚಿತ್ರದಲ್ಲಿ “ವಜ್ರಮುನಿ”ಯಾಗಿ ಕೋಮಲ್  ರೆಟ್ರೂ ಲುಕ್ ನಲ್ಲಿ ಕಮಾಲ್ ಮಾಡಲಿದ್ದಾರೆ.  ಹಿರಿಯ ಕಲಾವಿದ ಮುಸುರಿ ಕೃಷ್ಣ ಮೂರ್ತಿ ಅವರ ಮಗ ಜಯಸಿಂಹ ಮುಸುರಿ, ನವರಸ ನಾಯಕ ಜಗ್ಗೇಶ್ ಅವರ ಕಿರಿಯ ಮಗ ಯತಿರಾಜ್ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಕುಟುಂಬ ಸಮೇತ ನೋಡಬಹುದಾದ ಪರಿಶುದ್ಧ ಹಾಸ್ಯ ಕಥಾಹಂದರದ ಜೊತೆಗೆ ಎಮೋಶನ್ ಸನ್ನಿವೇಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ನಿರ್ದೇಶಕ ಪ್ರದೀಪ ಅವರೆ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ,ಗೀತ ರಚನೆ ಸಹ ಮಾಡಿದ್ದಾರೆ  ಧರ್ಮ ವಿಶ್ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ.