Tag: ಕೋಮು ಗಲಭೆ

  • ಮಂಡ್ಯ | ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ

    ಮಂಡ್ಯ | ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ

    – ಪೊಲೀಸ್‌ ಸರ್ಪಗಾವಲಿನಲ್ಲಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ
    – ಕಳೆದ ವರ್ಷದ ಕೋಮುಗಲಭೆಯಿಂದ ಎಚ್ಚೆತ್ತ ಪೊಲೀಸ್‌ ಇಲಾಖೆ

    ಮಂಡ್ಯ: ಇಂದು ರಾತ್ರಿ (ಸೆ.4) ಮಂಡ್ಯ‌ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಸಮೂಹಿಕ ಗಣೇಶ ವಿಸರ್ಜನೆ (Ganesha Visarjan0 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ಇಲ್ಲಿ ಕೋಮು ಗಲಭೆ ಆದ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್‌ ಇಲಾಖೆ ಇಂದು ಮತ್ತು ನಾಳೆ ನಾಗಮಂಗಲ (Nagamangala) ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.

    ಕಳೆದ ವರ್ಷ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ಹಾಗೂ ಪೆಟ್ರೋಲ್ ಬಾಂಬ್‌ಗಳನ್ನ (Petrol Bomb) ಎಸೆಯಲಾಗಿತ್ತು. ಬಳಿಕ ಕೋಮುಗಲಭೆ ಸೃಷ್ಟಿಯಾಗಿ ಅಪಾರ ಪ್ರಮಾಣ ಆಸ್ತಿಪಾಸ್ತಿ ನಷ್ಟವಾಗಿತ್ತು. ಈ ಬಾರಿ ಆ ರೀತಿಯ ಘಟನೆ ಮರುಕಳಿಸಬಾರದು ಎಂದು ಮಂಡ್ಯ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಇದನ್ನೂ ಓದಿ: ಮಂಡ್ಯ | ಆಸ್ತಿಗಾಗಿ ಅಪ್ಪನನ್ನೇ ಟ್ರ್ಯಾಪ್‌ ಮಾಡಲು ಹೋಗಿ ತಗ್ಲಾಕೊಂಡ ಮಗ

    ಇಂದು ನಾಗಮಂಗಲ ಪಟ್ಟಣದ ಹಲವೆಡೆ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಗಳನ್ನು ಇಂದು ಸಾಮೂಹಿಕವಾಗಿ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಇಂದು ಮತ್ತು ನಾಳೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ನಾಗಮಂಗಲ ಪಟ್ಟಣ ಸೇರಿದಂತೆ ಸುತ್ತಮುತ್ತ ಎರಡು ದಿನಗಳ ಕಾಲ ಮದ್ಯ ಮಾರಟ ನಿಷೇಧ ಮಾಡಲಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ: ಪ್ರಿಯಾಂಕ್ ಖರ್ಗೆ

    ಇನ್ನೂ ಪೊಲೀಸ್ ಇಲಾಖೆಯಿಂದಲೂ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗಿದೆ. ಈಗಾಗಲೇ ಗಣಪತಿ ಮೆರವಣಿಗೆ ಹೋಗುವ ದಾರಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥ ಸಂಚನ ನಡೆಸಿದ್ದಾರೆ. ಇನ್ನೂ‌ ಮೆರವಣಿಗೆಯಲ್ಲಿ ಬಿಗಿ ಭದ್ರತೆ ಇದ್ದು, ಇಡೀ ಮೆರವಣಿಗೆ ಡ್ರೋನ್‌ ಕ್ಯಾಮರಾದ ಕಣ್ಗಾವಲಿನಲ್ಲಿ ಇರುತ್ತದೆ. ಇದಲ್ಲದೇ ದಾರಿಯುದ್ಧಕ್ಕೂ ಸಿಸಿ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಇದನ್ನೂ ಓದಿ: ಮಂಡ್ಯ | ಗಣೇಶ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕಿ ಹೃದಯಾಘಾತಕ್ಕೆ ಬಲಿ

  • ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದ ನಾಗಮಂಗಲ (Nagamangala Violence) ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ (Congress) ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ

    ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದ ಅವರು ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಕಲ್ಲು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ: ಪ್ರತಾಪ್ ಸಿಂಹ

    ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?
    ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ

    ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ:
    ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಹರಿಹಾಯ್ದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆ

  • ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    ಶಿವಮೊಗ್ಗ: ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಕಳೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ನಡೆದ ಕೋಮು ಗಲಭೆಗೆ (Communal Riots) ಸಾಕಷ್ಟು ಟ್ವಿಸ್ಟ್ ಸಿಗುತ್ತಿದೆ.

    ಈದ್ ಮಿಲಾದ್ ಮೆರವಣಿಗೆಯ ವೇಳೆ ರಾಗಿಗುಡ್ಡದ ಮುಖ್ಯ ರಸ್ತೆಯಲ್ಲಿರುವ ಶನೇಶ್ವರ ದೇವಾಲಯದ ಹತ್ತಿರ ಗಲಭೆ ಶುರುವಾಗಿತ್ತು. ಕಲ್ಲು ತೂರಾಟ (Stone Pelting) ನಡೆಸಿ ಬರಬ್ಬೋರಿ 7ಕ್ಕೂ ಹೆಚ್ಚು ಮನೆಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಆದರೆ ಈ ಗಲಭೆಗೆ ಮುನ್ನ ಎರಡು ಓಮ್ನಿ ಕಾರಿನಲ್ಲಿ ಬಂದ 15ಕ್ಕೂ ಹೆಚ್ಚು ಯುವಕರ ತಂಡ ಈ ಗಲಭೆ ಮಾಡಿದೆ. ಆ ಕಾರು ಕೆಎ 20 ನೋಂದಣಿಯ ಗಾಡಿಗಳಾಗಿದ್ದು, ಅವುಗಳಲ್ಲಿ ಮಂಗಳೂರು (Mangaluru) ಇಲ್ಲ ಉಡುಪಿ (Udupi) ಜಿಲ್ಲೆಗಳಿಂದ ಕಿಡಿಗೇಡಿಗಳು ಬಂದು ಪ್ರೀ ಪ್ಲಾನ್ ಮಾಡಿಕೊಂಡು ಗಲಭೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ

    ಕಿಡಿಗೇಡಿಗಳ ಚಲನವಲನಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಲ್ಲದೇ ಪೊಲೀಸರು ಕೂಡ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಇರುವ ಕಾರನ್ನು ವಶಕ್ಕೆ ಪಡೆದಿದ್ದು, ಈ ಕಾರು ಕೂಡ ಗಲಭೆಗೆ ಬಳಸಲಾಗಿದೆ ಎನ್ನಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರೀ ಪ್ಲಾನ್ಡ್ ಆಗಿ ನಡೆದಿದ್ದು ಎನ್ನುವ ಸಂಶಯ ಮೂಡಿದ್ದು, ಗಲಭೆ ಸ್ಥಳಕ್ಕೆ ಬಂದ ಓಮ್ನಿಗಳ ಜಾಡು ಹಿಡಿದು ಪೊಲೀಸರು ಹೊರಟಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರೂ ಕೂಡ ಇದೊಂದು ಪ್ರೀ ಪ್ಲಾನ್‌ ಗಲಭೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಬೆಂಗಳೂರು: ಶಿವಮೊಗ್ಗ (Shivamogga) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ (R.Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕರ್ನಾಟಕ (Karnataka) ಮತ್ತೊಂದು ಬಿಹಾರ (Bihar) ಆಗುತ್ತಿದೆ ಎಂದು ಅನಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಗೂಂಡಾಗಿರಿ ಶುರುವಾಗಿದೆ. ಹಿಂದೂಗಳು ಯಾವುದೇ ಗಲಾಟೆಗೆ ಹೋಗದಿದ್ದರೂ ಮನೆಗೆ ನುಗ್ಗಿ ಹೊಡೆದಿದ್ದಾರೆ. ಹಿಂದೆಯೂ ಸಿದ್ದರಾಮಯ್ಯ ಸರ್ಕಾರದಲ್ಲಿ ಟಿಪ್ಪು ಜಯಂತಿ ಮಾಡಿ ಗಲಾಟೆ ಆಗಿತ್ತು. ನಿರಪರಾಧಿಗಳ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಕುಮ್ಮಕ್ಕೇ ಇದಕ್ಕೆ ಕಾರಣ ಎಂದು ಹರಿಹಾಯ್ದರು. ಇದನ್ನೂ ಓದಿ: ಪೊಲೀಸರ ಮೇಲೆ ಕಲ್ಲು ತೂರಾಟ ಹೊಸದೇನಲ್ಲ: ಪರಮೇಶ್ವರ್ ಬೇಜವಾಬ್ದಾರಿ ಮಾತು

    ಸರ್ಕಾರ ಕೇಸ್ ಮಾಡಲ್ಲ ಅನ್ನೋ ಧೈರ್ಯ. ಹಿಂದೆ ಕೇಸ್ ವಾಪಸ್ ತೆಗೆದುಕೊಂಡಿದ್ದಾರೆ ಅನ್ನೋ ಕಾರಣಕ್ಕೆ ಪಿಎಫ್‌ಐ (PFI) ಗ್ಯಾಂಗ್‌ನಿಂದಲೇ ಘಟನೆಯಾಗಿದೆ. ಪಿಎಫ್‌ಐ ಗ್ಯಾಂಗ್ ಗಲಾಟೆ ಮಾಡಿರೋದು. ಕಾಂಗ್ರೆಸ್ ಬಂದರೆ ಪಿಎಫ್‌ಐಗೆ ಹಬ್ಬ. ಪ್ರಚೋದನೆ ಮಾಡದೇ ಕಲ್ಲು ಹೊಡೆಯುತ್ತಾರೆ ಎಂದರೆ ಇವರ ಗೂಂಡಾಗಿರಿ ಎಂತದ್ದು. ಇಂಟೆಲಿಜೆನ್ಸ್ ಕೂಡ ಸತ್ತು ಹೋಗಿದೆ. ನಾವು ಕೇಸ್ ಮಾಡಿದರೂ ಸರ್ಕಾರ ವಾಪಸ್ ತೆಗೆದುಕೊಳ್ಳುತ್ತಾರೆ ಅನ್ನೋ ಕಾರಣಕ್ಕೆ ನಾವ್ಯಾಕೆ ಕೇಸ್ ಮಾಡೋದು ಅಂತಾ ಇಂಟೆಲಿಜೆನ್ಸ್ ಕೂಡ ಸುಮ್ಮನಿದೆ ಎಂದರು. ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಕೇಸ್ ಮಾಡಿದರೆ ನಮ್ಮನ್ನು ಎತ್ತಂಗಡಿ ಮಾಡುತ್ತಾರೆ ಅನ್ನೋ ಭಯ ಅಲ್ಲಿನ ಎಸ್‌ಪಿ ಅವರಿಗೂ ಇದೆ. ಕಾಂಗ್ರೆಸ್ ಬಂದ ಮೇಲೆ ಪೊಲೀಸರಿಗೂ ಭಯ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಶಿವಮೊಗ್ಗ ಕೋಮುಗಲಭೆಗೆ ಸಂಬಂಧಪಟ್ಟಂತೆ ಗೃಹಸಚಿವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಗೃಹ ಸಚಿವರ ಹೇಳಿಕೆ ಸರಿಯಲ್ಲ. ಬೆಂಕಿ ಸಣ್ಣದಿದ್ದರೂ ದೊಡ್ಡದಾಗಬಹುದು. ಸರ್ಕಾರ ಬೇಜವಾಬ್ದಾರಿಯಾಗಿ ನಡೆದುಕೊಂಡಿರೋದು ಸ್ಪಷ್ಟವಾಗಿದೆ. ಹಿಂದೆ ಕೂಡ ಕೇರಳ, ಬಂಗಾಳ, ಬಿಹಾರ, ಬಾಂಗ್ಲಾದಿಂದ ಬಂದು ಗಲಾಟೆ ಮಾಡಿದ್ದು ಕಾಮನ್ ಆಗಿದೆ. ಕಾಂಗ್ರೆಸ್ ಬಂದ ಮೇಲೆ ಹೆಚ್ಚಾಗಿದೆ. ಕಾರಣ ಅವರು ಕೇಸ್ ಹಾಕಲ್ಲ. ಹಾಕಿದ್ರೂ ಕ್ಯಾಬಿನೆಟ್‌ನಲ್ಲಿ ವಿಥ್‌ಡ್ರಾ ಮಾಡ್ತಾರೆ ಅನ್ನೋ ಕಾರಣಕ್ಕೆ ಬಂದು ಗಲಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ

    ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ

    * ಬಿಜೆಪಿಯವ್ರು ಹಿಂದೂಗಳಿಗೆ ಮಾತ್ರ ಪರಿಹಾರ ಕೊಟ್ರು
    * ಸಿಎಂ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ (Communal Riots) ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ಸಿಎಂ ಸಿದ್ದರಾಮಯ್ಯ (Siddaramaiah) ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.

    ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೋಮು ಗಲಭೆಯಲ್ಲಿ ಹತ್ಯೆಯಾದ ಮಸೂದ್, ಫಾಝಿಲ್, ಜಲೀಲ್, ಸಮೀರ್ ಹಾಗೂ ದೀಪಕ್ ರಾವ್ ಕುಟುಂಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಜೊತೆಗೆ ಕುಟುಂಬದ ತಲಾ ಒಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ಭರವಸೆ ನೀಡಿದರು.

    ಬಳಿಕ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ (BJP Government) ಇದ್ದಾಗ ಕೋಮುಗಲಭೆಗಳಲ್ಲಿ ಮೃತಪಟ್ಟವರಿಗೆ 25 ಲಕ್ಷ ಪರಿಹಾರ ಕೊಟ್ಟಿದಾರೆ. ಆದ್ರೆ ಬಿಜೆಪಿಯವರು ಎಲ್ಲರಿಗೂ ಪರಿಹಾರ ಕೊಟ್ಟಿಲ್ಲ, ಹಿಂದೂಗಳಿಗೆ (Hindus) ಮಾತ್ರ ಪರಿಹಾರ ಕೊಟ್ಟಿದ್ದಾರೆ. ಮುಸ್ಲಿಮರೂ ಕೋಮು ಗಲಭೆಗಳಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಎಲ್ಲ ಧರ್ಮದವರನ್ನ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ

    ಕೋಮುಗಲಭೆಯಲ್ಲಿ ಮುಸಲ್ಮಾನರೂ (Muslims) ಸತ್ತಿದ್ದಾರೆ ಪರಿಹಾರ ಕೊಡಿ ಅಂತಾ ನಾನು ಸದನದಲ್ಲಿ ಪ್ರಸ್ತಾಪ ಮಾಡಿದ್ದೆ, ಬಿಜೆಪಿಯವರು ನೋಡ್ತೀವಿ, ಕೊಡ್ತೀವಿ ಅಂತಾ ಹೇಳಿ ಕೊಡಲೇ ಇಲ್ಲ. ಈಗ ನಮ್ಮ ಸರ್ಕಾರ ಪರಿಹಾರ ಕೊಡ್ತಿದೆ ಎಂದು ತಿಳಿಸಿದರು.

    ಬಿಜೆಪಿಯವರು ಹರ್ಷ ಮತ್ತು ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಮಾತ್ರ ತಲಾ 25 ಲಕ್ಷ ಪರಿಹಾರ ಕೊಟ್ಟಿದ್ದಾರೆ. ಕುಟುಂಬದವರಿಗೆ ಒಂದೊಂದು ಕೆಲಸವನ್ನೂ ಕೊಟ್ಟಿದ್ದಾರೆ. ಅದು ಸರಿಯಿದೆ, ಆದ್ರೆ ಬೇರೆಯವರಿಗೂ ಕೊಡಬೇಕಲ್ಲ, ಆ ಕೆಲಸ ಬಿಜೆಪಿ ಮಾಡಲಿಲ್ಲ. ಮಸೂದ್, ಫಾಜೀಲ್, ಅಬ್ದುಲ್ ಜಲೀಲ್, ಇದ್ರಿಸ್ ಪಾಷ, ಸಮೀರ್, ದೀಪಕ್ ರಾವ್ ಈ 6 ಜನರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ಲ. ಇವರ ಕುಟುಂಬಗಳಿಗೆ ಭೇಟಿ ಕೊಟ್ಟು ಸಾಂತ್ವನ ಹೇಳುವ ಕೆಲಸವನ್ನೂ ಬೊಮ್ಮಾಯಿ ಮಾಡಲಿಲ್ಲ. ನಾವು ಈಗ ಈ 6 ಜನರ ಕುಟುಂಬಗಳಿಗೆ ಪರಿಹಾರ ಕೊಟ್ಟಿದ್ದೇವೆ. ಮುಂದೆ ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಸರ್ಕಾರಿ ಕೆಲಸವನ್ನೂ ಕೊಡ್ತೀವಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಪಘಾತಕ್ಕೀಡಾಗಿ ಮೆದಳು ನಿಷ್ಕ್ರಿಯ- ಮಗನ ಶವಕ್ಕೆ ಮುತ್ತಿಟ್ಟು ಅಂಗಾಂಗ ದಾನಕ್ಕೆ ತಾಯಿ ಒಪ್ಪಿಗೆ

    ಬಿಜೆಪಿ ಮಾಡಿರುವ ತಾರತಮ್ಯವನ್ನ ನಾವು ಸರಿಪಡಿಸುವ ಕೆಲಸ ಮಾಡ್ತೇವೆ. ಹತ್ಯೆಯಾದವರ ಕುರಿತು ತನಿಖೆಯನ್ನು ಪಾರದರ್ಶಕವಾಗಿ, ಕಾನೂನಾತ್ಮಕವಾಗಿ ಮಾಡ್ತೀವಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸ್ತೀವಿ. ಇನ್ಮುಂದೆ ಕೋಮು ಗಲಭೆಗಳಿಗೆ, ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುತ್ತೇವೆ. ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡಲ್ಲ. ನಮ್ಮ ಸರ್ಕಾರ ಎಲ್ಲರ ರಕ್ಷಣೆ ಮಾಡಲಿದೆ. ಎಲ್ಲ ಧರ್ಮದವರ ರಕ್ಷಣೆ ಮಾಡ್ತೇವೆ, ಅದು ನಮ್ಮ ಜವಾಬ್ದಾರಿ. ಧರ್ಮಗಳ ನಡುವೆ ನಾವು ತಾರತಮ್ಯ ಮಾಡಲ್ಲ. ನಮಗೆ ಹಿಂದೂ ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತರು ಎಲ್ಲರೂ ಒಂದೇ. ಯಾರದ್ದೇ ಹತ್ಯೆ ಇರಲಿ ಕಾನೂನು ರೀತಿ ತನಿಖೆ ಮಾಡ್ತೀವಿ ಎಂದು ಗುಡುಗಿದರು.

    ಅಕ್ಕಿ ಕೊಟ್ಟೇ ಕೊಡ್ತೀವಿ:
    ಅಕ್ಕಿ ವಿತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆಂಧ್ರ, ತೆಲಂಗಾಣ, ಪಂಜಾಬ್ ರಾಜ್ಯಗಳಿಂದ ಅಕ್ಕಿ ಸಿಕ್ತಿಲ್ಲ. ಛತ್ತೀಸ್‌ಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾತ್ರ ಸಿಗುತ್ತೆ. ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ಅವರು ಏನೇ ರಾಜಕೀಯ ಮಾಡಿದ್ರು ನಾವು ರಾಜ್ಯದ ಜನರಿಗೆ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಗಿ ಎರಡು ಕೆಜಿ 6 ತಿಂಗಳವರೆಗೆ ಮಾತ್ರ ಕೊಡಬಹುದು. 5 ಕೆಜಿ ರಾಗಿ ಕೊಡಕ್ಕಾಗಲ್ಲ, ಅಷ್ಟು ಸ್ಟಾಕ್ ಇಲ್ಲ. ಹಳೇ ಮೈಸೂರು ಕಡೆ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಕಡೆ ಎರಡು ಕೆಜಿ ಗೋಧಿ ಕೊಡಬಹುದು. ಆದ್ರೆ ಉಳಿದ ಮೂರು ಕೆಜಿ ಅಕ್ಕಿ ಎಲ್ಲಿಂದ ತರೋಣ? ಈಗ ನಾವು ನಾಫೆಡ್, ಎನ್‌ಸಿಸಿಎಫ್ ಮತ್ತು ಕೇಂದ್ರಿಯ ಭಂಡಾರ್ ಗಳಿಂದ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ಈ ಮೂರೂ ಕೇಂದ್ರದ ಸಂಸ್ಥೆಗಳಿಂದ ಕೊಟೇಷನ್ ಕೇಳಿದ್ದೇವೆ. ಅವರು ಎಷ್ಟು ಅಕ್ಕಿ ಕೊಡ್ತಾರೆ ಅನ್ನೋದನ್ನ ನೋಡಿಕೊಂಡು ಮುಂದಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಶಾಸಕ ತನ್ವೀರ್ ಸೇಟ್, ಸಲೀಂ ಅಹಮದ್, ನಜೀರ್ ಅಹಮದ್ ಮತ್ತಿತರರು ಭಾಗಿಯಾಗಿದ್ದರು.

  • ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ ಹಿರಿಯ ಸರ್ಕಾರಿ ಅಧಿಕಾರಿ ಅರೆಸ್ಟ್

    ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ ಹಿರಿಯ ಸರ್ಕಾರಿ ಅಧಿಕಾರಿ ಅರೆಸ್ಟ್

    ಪಾಟ್ನಾ: ಸೋಶಿಯಲ್ ಮೀಡಿಯಾದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದಕ್ಕೆ ಹಿರಿಯ ಸರ್ಕಾರಿ ಅಧಿಕಾರಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಎಡಿಜಿ) ಸಂಜಯ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಪ್ರಕಾರ ಯಾವುದೇ ಧರ್ಮ ನಿಂದನೆ ಮಾಡುವುದು ಅಪರಾಧ. ಈ ಹಿನ್ನೆಲೆ ಬಿಹಾರದ ಆಡಳಿತ ಸೇವೆ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಮಾಹಿತಿ ಕೊಟ್ಟರು. ಇದನ್ನೂ ಓದಿ:  ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು 

    ಘಟನೆಯ ವಿವರ
    ಇಒಯು ಮುಸ್ಲಿಮರನ್ನು ಅವಹೇಳನ ಮಾಡುವ ವಾಟ್ಸಾಪ್ ಸಂದೇಶ ಕಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಇದರ ಮೂಲದ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಚುನಾವಣಾ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಪಾಟ್ನಾದಲ್ಲಿ ನಿಯೋಜನೆಗೊಂಡಿರುವ ಜಾರ್ಖಂಡ್ ನಿವಾಸಿ ಅಲೋಕ್ ಕುಮಾರ್ ಅವರ ಫೋನ್‍ನಲ್ಲಿ ಇದರ ಫಾರ್ವರ್ಡ್ ಸಂದೇಶ ಪತ್ತೆಯಾಗಿದೆ.

    KILLING CRIME

    ಈ ಹಿನ್ನೆಲೆ ಅಲೋಕ್ ಕುಮಾರ್ ಅವರನ್ನು ಅವರ ಮನೆಯಲ್ಲೇ ಬಂಧಿಸಲಾಗಿದೆ. ಜೈಲಿಗೆ ಕಳುಹಿಸುವ ಮೊದಲು ಅವರನ್ನು ವಿಚಾರಣೆಗಾಗಿ ಸಚಿವಾಲಯ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಸಂಜಯ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್ 

    Live Tv

  • ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಹಾವೇರಿ: ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಮು ಸಾಮರಸ್ಯದ ನಾಡಿನಿಂದ ಬಂದಿದ್ದಾರೆ. ಕೂಡಲೇ ಸಿಎಂ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದರು.

    ಹಾವೇರಿಯಲ್ಲಿ ಕೋಮು ಗಲಭೆ ಕುರಿತು ಮಾತನಾಡಿದ ಅವರು, ಸಮಾಜ ಒಡೆಯುವ ಸಂಘಟನೆಗಳನ್ನು ನಿಷೇಧ ಮಾಡಬೇಕು. ಅಂತಹ ಸಂಘಟನೆಗಳ ವ್ಯಕ್ತಿಗಳನ್ನು ಬಂಧಿಸಬೇಕು. ಸರ್ಕಾರ RSS ಹಿಡಿತದಲ್ಲಿದೆ. ಪ್ರತಿದಿನ ಗಲಭೆ ಮಾಡುವ ಕೆಲಸವನ್ನು ಕೆಲವರು ನಿರಂತರವಾಗಿ ಮಾಡುತ್ತಿದ್ದಾರೆ. ಈ ಸರ್ಕಾರ ಜನರ ದಾರಿ ತಪ್ಪಿಸಲು ಇಂತಹ ಕೆಲಸ ಮಾಡುತ್ತಿದೆ. ಅರ್ಕಾವತಿ ಕುರಿತು ಕಾಂಗ್ರೆಸ್ ವಿರುದ್ಧ ಯಾವುದೇ ತನಿಖೆಗೂ ಸಿದ್ಧರಿದ್ದೇವೆ. ಮೊದಲು 40% ಕಮೀಷನ್ ನಿಲ್ಲಿಸಿ. ಈಗ ನಿಮಗೆ ಅರ್ಕಾವತಿ ನೆನಪಿಗೆ ಬಂದಿತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ

    ಪ್ರತಿದಿನ ಭ್ರಷ್ಟಾಚಾರ, ಮಂತ್ರಿಮಂಡಲ ಬಿಟ್ಟರೆ ನಿಮಗೆ ಬೇರೆ ಕೆಲಸವೇ ಇಲ್ಲದಂತೆ ಆಗಿದೆ. ಬಿಜೆಪಿ ಸರ್ಕಾರ ಲೂಟಿಕೋರರ ಸರ್ಕಾರ. ಪ್ರತಿದಿನ ರಾಜಕಾರಣಿಗಳು, ಅಧಿಕಾರಿಗಳ ಭ್ರಷ್ಟಾಚಾರ ಬರ್ತಿದೆ. ದೇಶದಲ್ಲಿ ತಲೆತಗ್ಗಿಸುವ ಕೆಲಸ ಆಗುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿ ಆಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಈ ಸರ್ಕಾರ ಕಳೆದುಕೊಂಡಿದೆ ಎಂದು ಆರೋಪಿಸಿದರು.

    ಸಿಎಂ ಸ್ಥಾನಕ್ಕೆ 2,500 ಕೋಟಿ ಕೊಡಬೇಕು ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳುತ್ತಿದ್ದಾರೆ. ಭ್ರಷ್ಟಾಚಾರದ ಮೂಲಕ ಉದಯಿಸಿದ ಈ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ. ಜನರು ಬಿಜೆಪಿ ಸರ್ಕಾರದ ಬಗ್ಗೆ ನೊಂದಿದ್ದಾರೆ. ಈಗಾಗಲೇ ಬಿಜೆಪಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಯ 40% ಕಮೀಷನ್ ಸರ್ಕಾರದ ವಿರುದ್ಧ ಜನಜಾಗೃತಿ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ:  ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್ 

    ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ತೆಗೆಯುವುದು ನಮ್ಮ ಉದ್ದೇಶವಾಗಿದೆ. ಯಾರು ಸಿಎಂ ಆಗುತ್ತಾರೆ ಎಂಬುದು ಮುಂದಿನ ವಿಚಾರ. ಶಾಸಕರು ಹಾಗೂ ಹೈಕಮಾಂಡ್ ಸೇರಿಕೊಂಡು ಯಾರು ಸಿಎಂ ಆಗಬೇಕು ಎಂಬುದನ್ನು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

  • ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ- ಕಾಲೇಜುಗಳಿಗೆ ರಜೆ: ಸೋಮವಾರ ನಡೆದಿದ್ದು ಏನು?

    ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ- ಕಾಲೇಜುಗಳಿಗೆ ರಜೆ: ಸೋಮವಾರ ನಡೆದಿದ್ದು ಏನು?

    ಶಿವಮೊಗ್ಗ: ಹಿಜಬ್ ವಿಚಾರದಲ್ಲಿ ರಾಜ್ಯದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿರುವ ಸಂದರ್ಭದಲ್ಲೇ ಉರಿವ ಬೆಂಕಿಗೆ ಪೆಟ್ರೋಲ್ ಸುರಿಯುವಂತಹ ಘಟನೆ ಕೋಮು ಸೂಕ್ಷ್ಮ ಶಿವಮೊಗ್ಗದಲ್ಲಿ ನಡೆದಿದೆ. ಭಾನುವಾರ ರಾತ್ರಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆಯಿಂದ ಶಿವಮೊಗ್ಗ ನಗರ ಇವತ್ತು ಇಡೀ ಕೋಮು ದಳ್ಳುರಿಯಲ್ಲಿ ಬೆಂದಿದೆ.

    ಜಿಲ್ಲಾಡಳಿತ ವಿಧಿಸಿದ್ದ ನಿಷೇಧಾಜ್ಞೆ ಲೆಕ್ಕಿಸದೇ ಮೃತನ ಮೆರವಣಿಗೆ ನಡೆಸಿದ ಉದ್ರಿಕ್ತರು, ಮಾರ್ಗಮಧ್ಯೆ ಪ್ರಚೋದನೆಗೆ ಒಳಗಾಗಿ ವಿಧ್ವಂಸಕ ಕೃತ್ಯಗಳನ್ನು ಎಸಗಿದ್ದಾರೆ. ಕೆಲವರು ಪೊಲೀಸರ ಮುಂದೆಯೇ ಮಾರಕಾಸ್ತ್ರ ಝಳಪಿಸಿದ್ದಾರೆ. ದೊಣ್ಣೆ ಎತ್ತಿ ಶೋ ತೋರಿಸಿದ್ದಾರೆ.

    ಮಚ್ಚು, ಲಾಂಗ್ ಝಳಪಿಸಿ ಪ್ರಚೋದನೆ ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಉದ್ರ್ರಿಕ್ತರು ಸಿಕ್ಕ ಸಿಕ್ಕ ಮನೆ, ಅಂಗಡಿಗಳಲ್ಲಿ ದಾಂಧಲೆ ನಡೆಸಿದ್ದಾರೆ. ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್ ಬಗ್ಗೆ ಕೊನೆಗೂ ಮೌನ ಮುರಿದ ಅಮಿತ್ ಶಾ

    ಸಚಿವ ಈಶ್ವರಪ್ಪ ನೇತೃತ್ವ ವಹಿಸಿದ್ದ ಶವದ ಮೆರವಣಿಗೆ ವೇಳೆಯೂ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಹರ್ಷ ಅಂತ್ಯಕ್ರಿಯೆ ವೇಳೆಯೂ ಕಲ್ಲು ತೂರಾಟವಾಗಿದೆ. ಮೆರವಣಿಗೆಯುದ್ದಕ್ಕೂ ನಡೆದ ಹಿಂಸಾಚಾರಕ್ಕೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದು ವಿಪರ್ಯಾಸ.

    ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತದಲ್ಲಿ ಒಮ್ಮೆ ಆಶ್ರುವಾಯು ಕೂಡ ಪ್ರಯೋಗ ಮಾಡಿದರು. ಭಾನುವಾರ ರಾತ್ರಿಯಿಂದ ಶುರುವಾದ ಗಲಭೆ, ಈವರೆಗೂ ಪೂರ್ಣ ಪ್ರಮಾಣದಲ್ಲಿ ತಹಬದಿಗೆ ಬಂದಿಲ್ಲ. ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತೆ ಇದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

    ನಡೆದಿದ್ದು ಏನು?
    ಮೃತ ಯುವಕನ ಅಂತಿಮ ಮೆರವಣಿಗೆ ಸಾಗುತ್ತಿದ್ದ ಉದ್ರಿಕ್ತರಿಂದ ಕಟ್ಟಡ, ಅಂಗಡಿಗಳಿಗೆ ಕಲ್ಲುತೂರಾಟ ನಡೆದಿದೆ. ಮೆರವಣಿಗೆ ವೇಳೆ ಮುಸ್ಲಿಮ್ ಪತಾಕೆ ಹಾರಿಸಿದ್ದರಿಂದ ಯುವಕರು ಪ್ರಚೋದನೆ ಒಳಗಾಗಿ ಮೆರವಣಿಗೆ ವೇಳೆಯೇ ಹಿಂಸೆ, ಕಲ್ಲು ತೂರಾಟ ನಡೆದಿದೆ. ಇದನ್ನೂ ಓದಿ: ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

    ಸಿದ್ದಯ್ಯ ರಸ್ತೆ, ಗಾಂಧಿ ಬಜಾರ್ ರಸ್ತೆಯಲ್ಲಿ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಆಶ್ರುವಾಯು ಪ್ರಯೋಗ ನಡೆಯಿತು.

    ಆಜಾದ್ ನಗರದಲ್ಲಿ ಬೈಕ್, ಕಾರುಗಳು ಧ್ವಂಸಗೊಂಡಿದ್ದು, ಮನೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಅಂಗಡಿಯತ್ತ ಉದ್ರಿಕ್ತರು ಕಲ್ಲು ತೂರಿದ್ದರಿಂದ ಗಾಜುಗಳು ಪುಡಿ ಪುಡಿಯಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಬೈಕ್ ಹೊತ್ತಿ ಉರಿದಿದೆ.

    ಜಲ್ಲಿಕಲ್ಲು ತುಂಬಿದ ಲಾರಿಯಿಂದ ಉದ್ರಿಕ್ತರು ಕಲ್ಲುಗಳನ್ನು ಎಸೆದಿದ್ದಾರೆ. ಮನೆಗೆ ನುಗ್ಗಿ ಅಟ್ಟಹಾಸ, ಫ್ರಿಡ್ಜ್, ಬೀರು ಜಖಂಗೊಂಡಿದ್ದು ಕಾರುಗಳ ಗಾಜುಗಳು ಪುಡಿಪುಡಿಯಾಗಿದೆ. ಪೊಲೀಸರ ಮುಂದೆಯೇ ದೊಣ್ಣೆ ಪ್ರದರ್ಶನ ನೀಡಿದ್ದು ಮಚ್ಚು, ಲಾಂಗ್ ಹಿಡಿದು ಕೊಟ್ಟಿದ್ದಾರೆ.

    ಹಣ್ಣಿನ ತಳ್ಳುಗಾಡಿ ಧ್ವಂಸವಾಗಿದ್ದು ಕಲ್ಲುತೂರಾಟದ ವೇಳೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

  • ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಲಕ್ನೋ: ಅನ್ಯ ಕೋಮಿನ ಯುವಕರು ಕೋತಿಯನ್ನು ಗುಂಡಿಕ್ಕಿ ಕೊಂದಿದ್ದಕ್ಕೆ ಉತ್ತರ ಪ್ರದೇಶದ ಶಾಮ್ಲಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಕೋತಿಯನ್ನ ಹತ್ಯೆಗೈದಿರುವುದೇ ಕೋಮು ಗಲಭೆಗೆ ಕಾರಣವಾಗಿದೆ.

    ಶಾಮ್ಲಿ ಗ್ರಾಮದ ನಿವಾಸಿಗಳಾದ ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಸಹೋದರರು ಕೋತಿಯೊಂದನ್ನ ಗುಂಡಿಕ್ಕಿ ಕೊಂದಿದ್ದರು. ಯುವಕರ ಈ ಕೃತ್ಯ ಭಜರಂಗದಳ ಹಾಗೂ ಸ್ಥಳೀಯರ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಧರ್ಮದಲ್ಲಿ ಕೋತಿಯನ್ನು ಆಂಜನೇಯ ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ಕೋತಿಗಳನ್ನು ಹಿಂಸಿಸಲು ಹಾಗೂ ಕೊಲ್ಲಲು ನಮ್ಮ ಅವಕಾಶವಿಲ್ಲ. ಹೀಗಿರುವಾಗ ಈ ಮೂವರು ಅನ್ಯ ಕೋಮಿನ ಯುವಕರು ಬೇಕು ಬೇಕಂತಲೇ ಕೋತಿಯನ್ನು ಕೊಂದು ಕ್ರೌರ್ಯ ಮೆರೆದಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಕೋತಿಯೊಂದನ್ನು ಸುತ್ತುವರಿದು ನಿಂತಿದ್ದರು. ಅವರಲ್ಲಿ ಓರ್ವ ಯುವಕ ಬಂದೂಕಿನಿಂದ ಕೋತಿಗೆ ಗುಂಡು ಹೊಡೆದಿದ್ದು, ಕೋತಿಯ ಸೊಂಟದ ಭಾಗದಲ್ಲಿ ಗುಂಡು ತಗುಲಿ ಗಾಯಗೊಂಡು ಮೂಕ ಪ್ರಾಣಿ ಪ್ರಾಣ ಬಿಟ್ಟಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಸಿಬ್ಬಂದಿ ಕೋತಿಯ ಮರಣೋತ್ತರ ಪರೀಕ್ಷೆ ಮಾಡಿಸಿ, ಅದರ ಅಂತ್ಯಸಂಸ್ಕಾರ ಮಾಡಿದ್ದಾರೆ. ಅಲ್ಲದೆ ಮೂವರು ಆರೋಪಿಗಳ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

    ಇದರ ಜೊತೆಗೆ ಭಜರಂಗದಳದ ಕಾರ್ಯಕರ್ತರು ಸಹ ಯುವಕರ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡಿ. ಇಲ್ಲವಾದರೆ ಕೋತಿ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ಹರಿಹಾಯ್ದಿದ್ದಾರೆ.